Jeremiah · chapter 51 · verse 14
Jeremiah 51:14 in Kannada
ಸೈನ್ಯಗಳ ಕರ್ತನು--ನಿಶ್ಚಯ ವಾಗಿ ನಾನು ಹುಳಗಳಿಂದಾದ ಹಾಗೆ ಮನುಷ್ಯರಿಂದ ನಿನ್ನನ್ನು ತುಂಬಿಸುತ್ತೇನೆಂದು ಅವರು ನಿನಗೆ ವಿರೋಧ ವಾಗಿ ಆರ್ಭಟವನ್ನು ಎತ್ತುವರೆಂದು ತನ್ನ ಮೇಲೆ ಆಣೆ ಇಟ್ಟುಕೊಂಡಿದ್ದಾನೆ.
Sainyagala kartanu--nishchaya vaagi naanu hulagalindaada haage manushyarinda ninnannu tumbisuttenendu avaru ninage virodha vaagi aarbhatavannu ettuvarendu tanna mele aane ittukondiddaane.
Jeremiah 51:14 in English
- King James Version (KJV)
- The LORD of hosts hath sworn by himself, [saying], Surely I will fill thee with men, as with caterpillers; and they shall lift up a shout against thee.
- World English Bible (WEB)
- The LORD of Armies has sworn by himself, saying, ‘Surely I will fill you with men, as with locusts, and they will lift up a shout against you.’
- American Standard Version (ASV)
- Jehovah of hosts hath sworn by himself, [saying], Surely I will fill thee with men, as with the canker-worm; and they shall lift up a shout against thee.
- Bible in Basic English (BBE)
- The Lord of armies has taken an oath by himself, saying, Truly, I will make you full with men as with locusts, and their voices will be loud against you.
- Darby Translation (DBY)
- Jehovah of hosts hath sworn by himself, I will assuredly fill thee with men, as with caterpillars; and they shall raise a shout against thee.
- Webster's Bible (WBS)
- The LORD of hosts hath sworn by himself, [saying] , Surely I will fill thee with men, as with caterpillars; and they shall raise a shout against thee.
- Young's Literal Translation (YLT)
- Sworn hath Jehovah of Hosts by Himself, That, Surely I have filled thee [with] men as the cankerworm, And they have cried against thee — shouting.
Read in context
- 12ಬಾಬೆಲಿನ ಗೋಡೆಯ ಮೇಲೆ ಧ್ವಜವನ್ನೆತ್ತಿರಿ, ಪಹರೆ ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ; ಹೊಂಚಿ ಕೊಳ್ಳುವವರನ್ನು ಸಿದ್ಧಮಾಡಿರಿ; ಕರ್ತನು ಬಾಬೆಲಿನ ನಿವಾಸಿಗಳಿಗೆ ವಿರೋಧವಾಗಿ ತಾನು ಹೇಳಿದ್ದನ್ನು ಯೋಚಿಸಿ ಮಾಡಿದ್ದಾನೆ.
- 13ಅನೇಕ ನೀರುಗಳ ಬಳಿಯಲ್ಲಿ ವಾಸವಾಗಿರುವವಳೇ, ಬಹಳ ದ್ರವ್ಯಗಳುಳ್ಳ ವಳೇ, ನಿನ್ನ ಅಂತ್ಯವೂ ನಿನ್ನ ದುರ್ಲಾಭದ ಅಳತೆಯೂ ಬಂತು.
- 14ಸೈನ್ಯಗಳ ಕರ್ತನು--ನಿಶ್ಚಯ ವಾಗಿ ನಾನು ಹುಳಗಳಿಂದಾದ ಹಾಗೆ ಮನುಷ್ಯರಿಂದ ನಿನ್ನನ್ನು ತುಂಬಿಸುತ್ತೇನೆಂದು ಅವರು ನಿನಗೆ ವಿರೋಧ ವಾಗಿ ಆರ್ಭಟವನ್ನು ಎತ್ತುವರೆಂದು ತನ್ನ ಮೇಲೆ ಆಣೆ ಇಟ್ಟುಕೊಂಡಿದ್ದಾನೆ.
- 15ಆತನು ತನ್ನ ಶಕ್ತಿಯಿಂದ ಭೂಮಿಯನ್ನು ಉಂಟುಮಾಡಿ ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ ತನ್ನ ವಿವೇಕದಿಂದ ಆಕಾಶವನ್ನು ವಿಸ್ತರಿಸಿದ್ದಾನೆ.
- 16ಆತನು ತನ್ನ ಶಬ್ದವನ್ನು ಎತ್ತುವಾಗ ಆಕಾಶದಲ್ಲಿ ನೀರಿನ ಘೋಷವದೆ; ಆತನು ಭೂಮಿಯ ಅಂತ್ಯದಿಂದ ಹಬೆಯನ್ನು ಏರ ಮಾಡುತ್ತಾನೆ; ಮಳೆಯ ಸಂಗಡ ಮಿಂಚುಗಳನ್ನು ಮಾಡಿ ತನ್ನ ಭಂಡಾರಗಳೊ ಳಗಿಂದ ಗಾಳಿಯನ್ನು ಹೊರಗೆ ತರುತ್ತಾನೆ.
Cross references
- Jeremiah 50:15 ಯೆರೆಮೀಯ 50:15ಸುತ್ತಲೂ ಅದಕ್ಕೆ ವಿರೋಧವಾಗಿ ಆರ್ಭಟಿಸಿರಿ; ಒಳಪಟ್ಟಿತು; ಅದರ ಅಸ್ತಿವಾರಗಳು ಬಿದ್ದು ಹೋದವು; ಅದರ ಗೋಡೆಗಳು ಕೆಡವಲ್ಪಟ್ಟವು; ಅದು ಕರ್ತನ ಪ್ರತಿದಂಡನೆಯೇ, ಅದರಿಂದ ಪ್ರತಿ ದಂಡನೆ ತಕ್ಕೊಳ್ಳಿರಿ. ಅದು ಮಾಡಿದ ಹಾಗೆಯೇ ಅದಕ್ಕೆ ಮಾಡಿರಿ.
- Amos 6:8 ಆಮೋಸ 6:8ಸೈನ್ಯಗಳ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ದೇವರಾದ ಕರ್ತನು ತನ್ನ ಮೇಲೆ ಆಣೆಯಿಟ್ಟುಕೊಂಡಿ ದ್ದಾನೆ; ಅದೇನಂದರೆ--ನಾನು ಯಾಕೋಬಿನ ಹೆಚ್ಚಳ ವನ್ನು ಅಸಹ್ಯಿಸಿಕೊಂಡು ಅವನ ಅರಮನೆಗಳನ್ನು ಹಗೆ ಮಾಡುತ್ತೇನೆ; ಅದಕಾರಣ ಪಟ್ಟಣವನ್ನೂ ಅದರಲ್ಲಿ ರುವ ಸಮಸ್ತವನ್ನೂ ನಾನು ಒಪ್ಪಿಸಿಬಿಡುತ್ತೇನೆ.
- Joel 2:25 ಯೋವೇಲ 2:25ನಾನು ನಿಮ್ಮಲ್ಲಿ ಕಳುಹಿಸದಂಥ, ನನ್ನ ದೊಡ್ಡ ಸೈನ್ಯವಾದ ಹುಳವೂ ಕಂಬಳಿ ಹುಳವೂ ಒಳಗೆ ನಾಶಮಾಡುವ ಹುಳವೂ ಮಿಡತೆಗಳೂ ತಿಂದ ವರುಷಗಳಿಗೆ ಬದಲಾಗಿ ನಿಮಗೆ ಕೊಡುವೆನು.
- Jeremiah 49:13 ಯೆರೆಮೀಯ 49:13ಬೊಚ್ರವು ಹಾಳೂ ನಿಂದೆಯೂ ಅಡವಿಯೂ ಶಾಪವೂ ಆಗುವದೆಂದು ಅದರ ಪಟ್ಟಣಗಳೆಲ್ಲಾ ಎಂದೆಂದಿಗೂ ಅಡವಿ ಸ್ಥಳಗಳಾ ಗುವವೆಂದೂ ನನ್ನ ಮೇಲೆ ಪ್ರಮಾಣ ಮಾಡಿಕೊಂಡಿದ್ದೇನೆಂದು ಕರ್ತನು ಅನ್ನುತ್ತಾನೆ.
- Joel 1:4–7 ಯೋವೇಲ 1:4–7ಹುಳವು ಉಳಿಸಿದ್ದನ್ನು ಮಿಡತೆ ತಿಂದುಬಿಟ್ಟಿದೆ; ಮಿಡತೆ ಉಳಿಸಿದ್ದನ್ನು ಒಳಗೆ ನಾಶ ಮಾಡುವ ಹುಳವು ತಿಂದುಬಿಟ್ಟಿದೆ; ಅದು ಉಳಿಸಿದ್ದನ್ನು ಕಂಬಳಿ ಹುಳವು ತಿಂದುಬಿಟ್ಟಿದೆ. ಅಮಲೇರಿದವರೇ, ನೀವು ಎಚ್ಚತ್ತು ಅಳಿರಿ; ದ್ರಾಕ್ಷಾರಸ ಕುಡಿಯುವವರೆಲ್ಲರೇ, ಹೊಸ ದ್ರಾಕ್ಷಾ ರಸದ ನಿಮಿತ್ತ ಗೋಳಾಡಿರಿ; ಅದು ನಿಮ್ಮ ಬಾಯಿ ಯೊಳಗಿಂದ ತೆಗೆಯಲ್ಪಟ್ಟಿದೆ. ನನ್ನ ದೇಶದ ಮೇಲೆ ಒಂದು ಜನಾಂಗವು ಏರಿ ಬಂತು; ಅದು ಬಲವಾದದ್ದೂ ಲೆಕ್ಕವಿಲ್ಲದ್ದೂ; ಅದರ ಹಲ್ಲುಗಳು ಸಿಂಹದ ಹಲ್ಲುಗಳು, ದೊಡ್ಡ ಸಿಂಹದ ದವಡೆ ಹಲ್ಲುಗಳು ಅದಕ್ಕೆ ಉಂಟು. ಅದು ನನ್ನ ದ್ರಾಕ್ಷೇ ಬಳ್ಳಿಯನ್ನು ಹಾಳುಮಾಡಿ ನನ್ನ ಅಂಜೂರದ ಗಿಡವನ್ನು ಮುರಿದು ಹಾಕಿದೆ; ಅದನ್ನು ಸಂಪೂರ್ಣ ಸುಲಿದು ಬಿಸಾಡಿಬಿಟ್ಟಿದೆ; ಅದರ ಕೊಂಬೆ ಗಳು ಬಿಳುಪಾದವು.
- Joel 2:3–4 ಯೋವೇಲ 2:3–4ಅವರ ಮುಂದೆ ಬೆಂಕಿ ದಹಿಸುತ್ತದೆ; ಅವರ ಹಿಂದೆ ಜ್ವಾಲೆ ಸುಡುತ್ತದೆ; ಅವರ ಮುಂದೆ ದೇಶವು ಏದೆನ್ ತೋಟದ ಹಾಗಿದೆ; ಅವರ ಹಿಂದೆ ಹಾಳಾದ ಕಾಡು; ಹೌದು, ಅವುಗಳಿಗೆ ಯಾವದೂ ತಪ್ಪಿಸಿಕೊಳ್ಳಲಾರದು. ಅವರ ಆಕಾರವು ಕುದುರೆಗಳ ಆಕಾರದ ಹಾಗಿದೆ; ಸವಾರರ ಹಾಗೆಯೇ ಓಡುತ್ತಾರೆ.
- Nahum 3:15–17 ನಹೂಮ 3:15–17ಅಲ್ಲೇ ಬೆಂಕಿ ನಿನ್ನನ್ನು ನುಂಗುವದು; ಕತ್ತಿಯು ನಿನ್ನನ್ನು ಕಡಿದುಬಿಡುವದು; ನಾಶಕ ಹುಳದಂತೆ ಅದು ನಿನ್ನನ್ನು ತಿಂದುಬಿಡುವದು; ನಾಶಕ ಹುಳದಂತೆ ಬಹು ಮಂದಿಯಾಗು; ಮಿಡತೆಗಳಂತೆ ಬಹು ಮಂದಿಯಾಗು. ನಿನ್ನ ವರ್ತಕರನ್ನು ಆಕಾಶದ ನಕ್ಷತ್ರಗಳಿಗಿಂತ ಹೆಚ್ಚಿ ಸಿದ್ದೀ; ನಾಶಕ ಹುಳವು ನಾಶಮಾಡಿ ಹಾರಿಹೋಗು ತ್ತದೆ. ನಿನ್ನ ಕಿರೀಟಧಾರಿಗಳು ಮಿಡತೆಗಳ ಹಾಗೆಯೂ ನಿನ್ನ ಅಧಿಪತಿಗಳು ತಂಪಾದ ದಿನದಲ್ಲಿ ಬೇಲಿಗಳೊಳಗೆ ಇಳುಕೊಳ್ಳುವ ದೊಡ್ಡ ಮಿಡತೆಗಳ ಹಾಗೆಯೂ ಇದ್ದಾರೆ; ಸೂರ್ಯನು ಹುಟ್ಟುವಾಗ ಹಾರಿಹೋಗು ತ್ತವೆ; ಆಗ ಅವು ಎಲ್ಲಿರುವವೆಂದು ಅವುಗಳ ಸ್ಥಳವು ತಿಳಿಯುವದಿಲ್ಲ;
- Hebrews 6:13 ಇಬ್ರಿಯರಿಗೆ 6:13ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದಾಗ ತನಗಿಂತ ಹೆಚ್ಚಿನವನ ಆಣೆಯಿಡುವದಕ್ಕಾಗದೆ ಇದ್ದದ್ದರಿಂದ ತನ್ನಾ ಣೆಯಿಟ್ಟು--
- Judges 6:5 ನ್ಯಾಯಸ್ಥಾಪಕರು 6:5ಅವರು ತಮ್ಮ ಕುರಿದನಗಳೂ ಡೇರೆ ಗಳೂ ಸಹಿತವಾಗಿ ಮಿಡಿತೆಗಳ ಹಾಗೆ ಗುಂಪಾಗಿ ಬಂದರು. ಅವರಿಗೂ ಅವರ ಒಂಟೆಗಳಿಗೂ ಎಣಿಕೆ ಇರಲಿಲ್ಲ. ಹೀಗೆ ಅವರು ಅದನ್ನು ಕೆಡಿಸಿಬಿಡುವದಕ್ಕೆ ದೇಶದಲ್ಲಿ ಬಂದರು.
- Jeremiah 46:23 ಯೆರೆಮೀಯ 46:23ಆದರೆ ಅಡವಿ ಯನ್ನು ಅದು ಶೋಧಿಸ ಕೂಡದ್ದಾಗಿದ್ದರೂ ಕಡಿದು ಹಾಕುವರೆಂದು ಕರ್ತನು ಅನ್ನುತ್ತಾನೆ; ಅವರು ಮಿಡಿತೆ ಗಳಿಗಿಂತ ಹೆಚ್ಚಾಗಿ ಲೆಕ್ಕವಿಲ್ಲದೆ ಇದ್ದಾರೆ.
- Jeremiah 51:27 ಯೆರೆಮೀಯ 51:27ದೇಶದಲ್ಲಿ ಧ್ವಜವನ್ನೆತ್ತಿರಿ; ಜನಾಂಗಗಳಲ್ಲಿ ತುತೂರಿಯನ್ನೂದಿರಿ; ಅದಕ್ಕೆ ವಿರೋಧವಾಗಿ ಜನಾಂಗಗಳನ್ನು ಸಿದ್ಧಮಾಡಿರಿ; ಅರರಾಟ್, ಮಿನ್ನಿ, ಅಷ್ಕೆನಜ್ ರಾಜ್ಯಗಳನ್ನು ಅದಕ್ಕೆ ವಿರೋಧವಾಗಿ ಕರೆಯಿರಿ; ಅದಕ್ಕೆ ವಿರೋಧವಾಗಿ ಸೈನ್ಯಾಧಿಪತಿಯನ್ನು ನೇಮಿಸಿರಿ; ಬಿರುಸಾದ ಮಿಡತೆ ದಂಡಿನಂತೆ ಕುದುರೆ ಗಳನ್ನು ಬರಮಾಡಿರಿ.