Jeremiah · chapter 51 · verse 19
Jeremiah 51:19 in Kannada
ಯಾಕೋಬನ ಭಾಗವು ಇವುಗಳ ಹಾಗಲ್ಲ; ಆತನು ಎಲ್ಲವನ್ನು ರೂಪಿಸಿದವನೇ, ಆತನ ಸ್ವಾಸ್ತ್ಯದ ಕೋಲು ಇಸ್ರಾಯೇಲೇ; ಆತನ ಹೆಸರು ಸೈನ್ಯಗಳ ಕರ್ತನೇ.
Yaakobana bhaagavu ivugala haagalla; aatanu ellavannu roopisidavane, aatana svaastyada kolu israayele; aatana hesaru sainyagala kartane.
Jeremiah 51:19 in English
- King James Version (KJV)
- The portion of Jacob [is] not like them; for he [is] the former of all things: and [Israel is] the rod of his inheritance: the LORD of hosts [is] his name.
- World English Bible (WEB)
- The portion of Jacob is not like these, for he formed all things, including the tribe of his inheritance. The LORD of Armies is his name.
- American Standard Version (ASV)
- The portion of Jacob is not like these; for he is the former of all things; and [Israel] is the tribe of his inheritance: Jehovah of hosts is his name.
- Bible in Basic English (BBE)
- The heritage of Jacob is not like these; for the maker of all things is his heritage: the Lord of armies is his name.
- Darby Translation (DBY)
- The portion of Jacob is not like them; for it is he that hath formed all things: and [Israel] is the rod of his inheritance: Jehovah of hosts is his name.
- Webster's Bible (WBS)
- The portion of Jacob [is] not like them; for he [is] the former of all things: and [Israel is] the rod of his inheritance: the LORD of hosts [is] his name.
- Young's Literal Translation (YLT)
- Not like these [is] the portion of Jacob, For He [is] former of all things, And [Israel is] the rod of His inheritance, Jehovah of Hosts [is] His name.
Read in context
- 17ಮನುಷ್ಯ ರೆಲ್ಲರೂ ತಮ್ಮ ತಿಳುವಳಿಕೆಯಿಂದ ಮೂಢರಾಗಿದ್ದಾರೆ; ಎರಕ ಹೊಯ್ಯುವವರೆಲ್ಲರೂ ವಿಗ್ರಹದಿಂದ ನಾಚಿಕೆ ಪಡುತ್ತಾರೆ; ಅವರ ಎರಕದ ಬೊಂಬೆಗಳು ಸುಳ್ಳೇ; ಅವುಗಳಲ್ಲಿ ಉಸಿರು ಇಲ್ಲ.
- 18ಅವು ಮಾಯವೇ, ಮೋಸದ ಕೆಲಸವೇ; ಅವುಗಳ ವಿಚಾರಣೆಯ ಕಾಲದಲ್ಲಿ ನಾಶವಾಗುವವು.
- 19ಯಾಕೋಬನ ಭಾಗವು ಇವುಗಳ ಹಾಗಲ್ಲ; ಆತನು ಎಲ್ಲವನ್ನು ರೂಪಿಸಿದವನೇ, ಆತನ ಸ್ವಾಸ್ತ್ಯದ ಕೋಲು ಇಸ್ರಾಯೇಲೇ; ಆತನ ಹೆಸರು ಸೈನ್ಯಗಳ ಕರ್ತನೇ.
- 20ನೀನು ನನ್ನ ಸುತ್ತಿಗೆಯೇ, ನನ್ನ ಯುದ್ಧದ ಆಯುಧಗಳೇ, ನಿನ್ನಿಂದ ಜನಾಂಗಗಳನ್ನು ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಾಜ್ಯಗಳನ್ನು ನಾಶಮಾಡುತ್ತೇನೆ;
- 21ನಿನ್ನಿಂದ ಕುದುರೆಯನ್ನೂ ಅದರ ಮೇಲೆ ಹತ್ತಿದವನನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ರಥವನ್ನೂ ಅದರಲ್ಲಿ ಸವಾರಿ ಮಾಡುವವನನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ.
Cross references
- Jeremiah 10:16 ಯೆರೆಮೀಯ 10:16ಯಾಕೋ ಬ್ಯರ ಪಾಲು ಇವುಗಳ ಹಾಗಲ್ಲ; ಆತನು ಸಮಸ್ತ ವನ್ನು ರೂಪಿಸಿದಾತನೇ; ಇಸ್ರಾಯೇಲ್ ಆತನ ಸ್ವಾಸ್ತ್ಯದ ಕೋಲು; ಸೈನ್ಯಗಳ ಕರ್ತನು ಎಂಬದು ಆತನ ಹೆಸರಾಗಿದೆ.
- Psalm 73:26 ಕೀರ್ತನೆಗಳು 73:26ನನ್ನ ಮಾಂಸವೂ ಹೃದಯವೂ ಕುಂದುತ್ತದೆ; ಆದರೆ ದೇವರು ಯುಗಯುಗಕ್ಕೂ ನನ್ನ ಹೃದಯದ ಬಲವೂ ಪಾಲೂ ಆಗಿದ್ದಾನೆ.
- 1 Peter 2:9 1 ಪೇತ್ರನು 2:9ಕತ್ತಲೆಯೊಳಗಿದ್ದ ನಿಮ್ಮನ್ನು ತನ್ನ ಆಶ್ಚರ್ಯವಾದ ಬೆಳಕಿಗೆ ಸೇರಿಸಿದಾತನ ಸ್ತುತಿಗಳನ್ನು ಪ್ರಕಟಿಸುವವ ರಾಗುವಂತೆ ನೀವು ಆಯಲ್ಪಟ್ಟ ವಂಶದವರೂ ರಾಜರಾದ ಯಾಜಕವರ್ಗದವರೂ ಪರಿಶುದ್ಧ ಜನಾಂಗವೂ ಅಸಮಾನ್ಯರಾದ ಜನರೂ ಆಗಿದ್ದೀರಿ.
- Psalm 33:12 ಕೀರ್ತನೆಗಳು 33:12ಕರ್ತನು ಯಾರ ದೇವರಾಗಿರು ವನೋ ಯಾವ ಜನಾಂಗವನ್ನು ತನ್ನ ಸ್ವಾಸ್ಥ್ಯವನ್ನಾಗಿ ಆದುಕೊಂಡಿದ್ದಾನೋ ಆ ಜನರೇ ಧನ್ಯರು.
- Exodus 19:5–6 ವಿಮೋಚನಕಾಂಡ 19:5–6ಆದದರಿಂದ ಈಗ ನೀವು ನನ್ನ ಮಾತನ್ನು ಕೇಳಿ ನನ್ನ ಒಡಂಬಡಿಕೆಯನ್ನು ಕಾಪಾಡಿ ದರೆ, ಸಮಸ್ತ ಜನರಲ್ಲಿ ನೀವು ನನ್ನ ಅಸಮಾನ್ಯವಾದ ಸಂಪತ್ತಾಗಿರುವಿರಿ; ಭೂಮಿಯೆಲ್ಲಾ ನನ್ನದೇ. ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನಾಂಗವೂ ಆಗಿರುವಿರಿ ಎಂದು ಇಸ್ರಾಯೇಲ್ ಮಕ್ಕಳಿಗೆ ಹೇಳ ಬೇಕಾದ ಮಾತುಗಳು ಇವೇ ಅಂದನು.
- Isaiah 47:4 ಯೆಶಾಯ 47:4ನಮ್ಮ ವಿಮೋಚಕನಿಗಾದರೋ, ಸೈನ್ಯಗಳ ಕರ್ತನು ಎಂಬದೇ ಆತನ ಹೆಸರು, ಆತನೇ ಇಸ್ರಾಯೇಲಿನ ಪರಿಶುದ್ಧನು.
- Psalm 135:4 ಕೀರ್ತನೆಗಳು 135:4ಕರ್ತನು ಯಾಕೋಬನನ್ನು ತನಗೋ ಸ್ಕರವೂ ಇಸ್ರಾಯೇಲನ್ನು ತನ್ನ ಅಸಾಮಾನ್ಯವಾದ ಸಂಪತ್ತಾಗಿಯೂ ಆದುಕೊಂಡಿದ್ದಾನೆ.
- Lamentations 3:24 ಪ್ರಲಾಪಗಳು 3:24ಕರ್ತನೇ ನನ್ನ ಪಾಲೆಂದು ನನ್ನ ಪ್ರಾಣವು ಹೇಳುತ್ತದೆ, ಆದದರಿಂದ ನಾನು ಆತನಲ್ಲಿ ನಿರೀಕ್ಷೆ ಇಡುತ್ತೇನೆ.
- Psalm 74:2 ಕೀರ್ತನೆಗಳು 74:2ಪೂರ್ವದಲ್ಲಿ ನೀನು ಕೊಂಡುಕೊಂಡ ಸಭೆಯನ್ನೂ ವಿಮೋಚಿಸಿದ ಬಾಧ್ಯತೆಯ ಕೋಲನ್ನೂ ನೀನು ವಾಸಮಾಡಿದ ಈ ಚೀಯೋನ್ ಪರ್ವತವನ್ನೂ ಜ್ಞಾಪಕಮಾಡಿಕೋ.
- Jeremiah 50:11 ಯೆರೆಮೀಯ 50:11ನನ್ನ ಸ್ವಾಸ್ತ್ಯವನ್ನು ನಾಶಮಾಡಿದವರೇ, ನೀವು ಸಂತೋಷಿಸಿದ್ದರಿಂದಲೂ ಉಲ್ಲಾಸಿಸಿದ್ದರಿಂದಲೂ ಕೊಬ್ಬಿದ ಕಡಸಿನ ಹಾಗೆ ಗರ್ವಪಟ್ಟದ್ದರಿಂದಲೂ ಹೋರಿಗಳ ಹಾಗೆ ಹೂಂಕರಿಸಿದ್ದರಿಂದಲೂ
- Psalm 115:3 ಕೀರ್ತನೆಗಳು 115:3ನಮ್ಮ ದೇವರು ಪರಲೋಕದಲ್ಲಿದ್ದಾನೆ; ತಾನು ಇಚ್ಚಿಸುವ ದನ್ನೆಲ್ಲಾ ಮಾಡುತ್ತಾನೆ.
- Deuteronomy 32:9 ಧರ್ಮೋಪದೇಶಕಾಂಡ 32:9ಕರ್ತನ ಪಾಲು ಆತನ ಜನವೇ; ಯಾಕೋಬು ಆತನ ಸ್ವಾಸ್ತ್ಯದ ಪಾಲು.