Jeremiah · chapter 51 · verse 24
Jeremiah 51:24 in Kannada
ಬಾಬೆಲಿಗೂ ಕಸ್ದೀಯರ ನಿವಾಸಿಗಳೆಲ್ಲ ರಿಗೂ--ಅವರು ಚೀಯೋನಿನಲ್ಲಿ ನಿಮ್ಮ ಸನ್ನಿಧಿಯಲ್ಲಿ ಮಾಡಿದ ಕೇಡನ್ನೆಲ್ಲಾ ಸಲ್ಲಿಸುವೆನೆಂದು ಕರ್ತನು ಅನ್ನುತ್ತಾನೆ.
Baabeligoo kasdeeyara nivaasigalella rigoo--avaru cheeyoninalli nimma sannidhiyalli maadida kedannellaa sallisuvenendu kartanu annuttaane.
Jeremiah 51:24 in English
- King James Version (KJV)
- And I will render unto Babylon and to all the inhabitants of Chaldea all their evil that they have done in Zion in your sight, saith the LORD.
- World English Bible (WEB)
- “I will give to Babylon and to all the inhabitants of Chaldea all their evil that they have done in Zion in your sight,” says the LORD.
- American Standard Version (ASV)
- And I will render unto Babylon and to all the inhabitants of Chaldea all their evil that they have done in Zion in your sight, saith Jehovah.
- Bible in Basic English (BBE)
- And I will give to Babylon, and to all the people of Chaldaea, their reward for all the evil they have done in Zion before your eyes, says the Lord.
- Darby Translation (DBY)
- And I will render unto Babylon and to all the inhabitants of Chaldea, in your sight, all their evil which they have done in Zion, saith Jehovah.
- Webster's Bible (WBS)
- And I will render to Babylon and to all the inhabitants of Chaldea all their evil that they have done in Zion in your sight, saith the LORD.
- Young's Literal Translation (YLT)
- And I have recompensed to Babylon, And to all inhabitants of Chaldea, All the evil that they have done in Zion, Before your eyes — an affirmation of Jehovah.
Read in context
- 22ನಿನ್ನಿಂದ ಗಂಡಸರನ್ನೂ ಹೆಂಗಸರನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ. ನಿನ್ನಿಂದ ಕುರುಬನನ್ನೂ ಅವನ ಮಂದೆಯನ್ನು ಚೂರು ಚೂರಾಗಿ ಒಡೆದು ಬಿಡುತ್ತೇನೆ.
- 23ನಿನ್ನಿಂದ ಹಿರಿಯರನ್ನೂ ಕಿರಿಯರನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಯೌವನಸ್ಥನನ್ನೂ ಕನ್ನಿಕೆಯನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಒಕ್ಕಲಿಗನನ್ನೂ ಅವನ ನೊಗದ ಎತ್ತುಗಳನ್ನೂ ಚೂರು ಚೂರಾಗಿ ಒಡೆದು ಬಿಡುತ್ತೇನೆ, ನಿನ್ನಿಂದ ಅಧಿಪತಿಗಳನ್ನೂ ಅಧಿಕಾರಿಗಳನ್ನೂ ಚೂರು ಚೂರಾಗಿ ಒಡೆದುಬಿಡು ತ್ತೇನೆ.
- 24ಬಾಬೆಲಿಗೂ ಕಸ್ದೀಯರ ನಿವಾಸಿಗಳೆಲ್ಲ ರಿಗೂ--ಅವರು ಚೀಯೋನಿನಲ್ಲಿ ನಿಮ್ಮ ಸನ್ನಿಧಿಯಲ್ಲಿ ಮಾಡಿದ ಕೇಡನ್ನೆಲ್ಲಾ ಸಲ್ಲಿಸುವೆನೆಂದು ಕರ್ತನು ಅನ್ನುತ್ತಾನೆ.
- 25ನಾಶಮಾಡುವ ಬೆಟ್ಟವೇ! ಭೂಮಿಯನ್ನೆಲ್ಲಾ ನಾಶಮಾಡುವಂಥಾದ್ದೇ! ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ. ನಿನ್ನ ಮೇಲೆ ನನ್ನ ಕೈಯನ್ನು ಚಾಚಿ ಬಂಡೆಗಳ ಮೇಲಿನಿಂದ ನಿನ್ನನ್ನು ಹೊರಳಿಸಿ ನಿನ್ನನ್ನು ಸುಟ್ಟ ಬೆಟ್ಟವಾಗಿ ಮಾಡುತ್ತೇನೆ.
- 26ಒಬ್ಬರೂ ನಿನ್ನಿಂದ ಮೂಲೆಯ ಕಲ್ಲನ್ನಾಗಲಿ, ಅಸ್ತಿವಾರದ ಕಲ್ಲನ್ನಾಗಲಿ ತೆಗೆಯರು; ನೀನು ಎಂದೆಂದಿಗೂ ಹಾಳಾಗುವಿ ಎಂದು ಕರ್ತನು ಅನ್ನುತ್ತಾನೆ.
Cross references
- Jeremiah 50:15 ಯೆರೆಮೀಯ 50:15ಸುತ್ತಲೂ ಅದಕ್ಕೆ ವಿರೋಧವಾಗಿ ಆರ್ಭಟಿಸಿರಿ; ಒಳಪಟ್ಟಿತು; ಅದರ ಅಸ್ತಿವಾರಗಳು ಬಿದ್ದು ಹೋದವು; ಅದರ ಗೋಡೆಗಳು ಕೆಡವಲ್ಪಟ್ಟವು; ಅದು ಕರ್ತನ ಪ್ರತಿದಂಡನೆಯೇ, ಅದರಿಂದ ಪ್ರತಿ ದಂಡನೆ ತಕ್ಕೊಳ್ಳಿರಿ. ಅದು ಮಾಡಿದ ಹಾಗೆಯೇ ಅದಕ್ಕೆ ಮಾಡಿರಿ.
- Isaiah 63:1–4 ಯೆಶಾಯ 63:1–4ಎದೋಮಿನಿಂದಲೂ ರಕ್ತಾಂಬರ ಧರಿಸಿಕೊಂಡು ಬೊಚ್ರದಿಂದಲೂ ಬರುವ ಇವನ್ಯಾರು? ಪ್ರಭೆಯುಳ್ಳ ವಸ್ತ್ರಗಳನ್ನು ತೊಟ್ಟುಕೊಂಡ ವನಾಗಿ ತನ್ನ ಮಹಾಪರಾಕ್ರಮದಲ್ಲಿ ಸಂಚಾರ ಮಾಡುವ ಇವನ್ಯಾರು? ನೀತಿಯಲ್ಲಿ ಮಾತನಾಡು ವವನೂ ರಕ್ಷಿಸಲು ಬಲಿಷ್ಠನೂ ಆಗಿರುವ ನಾನೇ. ನಿನ್ನ ವಸ್ತ್ರಗಳು ಯಾಕೆ ಕೆಂಪಾದವು? ನಿನ್ನ ಬಟ್ಟೆಗಳು ಯಾಕೆ ದ್ರಾಕ್ಷೇಯನ್ನು ತುಳಿಯುವವನ ಹಾಗಿವೆ? ದ್ರಾಕ್ಷೇ ತೊಟ್ಟಿಯನ್ನು ನಾನೊಬ್ಬನೇ ತುಳಿದಿದ್ದೇನೆ, ಜನಗಳಲ್ಲಿ ಒಬ್ಬನಾದರೂ ನನ್ನ ಸಂಗಡ ಇರಲಿಲ್ಲ; ನನ್ನ ಕೋಪದಲ್ಲಿ ಅವರನ್ನು ತುಳಿದಿದ್ದೇನೆ, ನನ ಉರಿಯಲ್ಲಿ ಅವರನ್ನು ಜಜ್ಜಿಬಿಟ್ಟಿದ್ದೇನೆ. ಆದದರಿಂದ ಅವರ ರಕ್ತವು ನನ್ನ ಬಟ್ಟೆಗಳ ಮೇಲೆ ಚಿಮುಕಿಸ ಲ್ಪಟ್ಟಿದೆ, ನನ್ನ ವಸ್ತ್ರಗಳೆಲ್ಲಾ ಮೈಲಿಗೆಯಾದವು. ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಇದೆ; ನಾನು ವಿಮೋಚಿಸಿದವರ ವರುಷವು ಬಂತು.
- Revelation 18:24 ಪ್ರಕಟನೆ 18:24ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.
- Jeremiah 51:35 ಯೆರೆಮೀಯ 51:35ನನಗೂ ನನ್ನ ಶರೀರಕ್ಕೂ ಮಾಡಿರುವ ಬಲಾತ್ಕಾರವು ಬಾಬೆಲಿನ ಮೇಲೆ ಇರಲಿ ಎಂದು ಚೀಯೋನಿನ ನಿವಾಸಿ ಹೇಳುವನು; ಕಸ್ದೀಯರ ನಿವಾಸಿಗಳ ಮೇಲೆ ನನ್ನ ರಕ್ತವು ಇರಲಿ ಎಂದು ಯೆರೂಸಲೇಮು ಹೇಳುವದು.
- Isaiah 47:6–9 ಯೆಶಾಯ 47:6–9ನಾನು ನಿನ್ನ ಜನರ ಮೇಲೆ ರೋಷಗೊಂಡು, ನನ್ನ ಸ್ವಾಸ್ಥ್ಯವನ್ನು ಅಪವಿತ್ರ ಮಾಡಿ, ನಿನ್ನ ಕೈಯಲ್ಲಿ ಅವರನ್ನು ಒಪ್ಪಿಸಿಬಿಟ್ಟೆನು; ನೀನು ಅವರಿಗೆ ಕರುಣೆಯನ್ನು ತೋರಿಸದೆ ಮುದುಕರ ಮೇಲೆಯೂ ಬಹು ಭಾರವಾದ ನೊಗವನ್ನು ಹೊರಿ ಸಿದಿ. ನಾನು ಶಾಶ್ವತವಾಗಿ ರಾಣಿಯೆಂದು ನೀನು ಅಂದುಕೊಂಡಿದ್ದರಿಂದ ಈ ಸಂಗತಿಗಳನ್ನು ನಿನ್ನ ಹೃದಯ ದಲ್ಲಿಟ್ಟುಕೊಳ್ಳಲಿಲ್ಲ; ಇಲ್ಲವೆ ಅವರ ಅಂತ್ಯವನ್ನು ನೆನಸ ಲಿಲ್ಲ. ನಾನೇ ಇರುವವಳು ನನ್ನ ಹೊರತು ಇನ್ನು ಯಾರೂ ಇಲ್ಲ. ನಾನು ವಿಧವೆಯಾಗಿ ಕೂತುಕೊಳ್ಳು ವದಿಲ್ಲ; ಪುತ್ರಶೋಕವನ್ನು ಅನುಭವಿಸುವದಿಲ್ಲ ಎಂದು ಅಂದುಕೊಳ್ಳುವವಳೇ, ಭೋಗಾಸಕ್ತಳೇ, ನೆಮ್ಮದಿ ಯಾಗಿ ನೆಲೆಗೊಂಡಿರುವವಳೇ, ಈಗ ಇದನ್ನು ಕೇಳು. ಒಂದೇ ದಿನದೊಳಗೆ ಒಂದು ಕ್ಷಣದಲ್ಲೇ, ಪುತ್ರ ಶೋಕ ಮತ್ತು ವಿಧವಾ ಸ್ಥಿತಿಯು ಇವೆರಡೂ ನಿನಗೆ ಬರುವವು; ನಿನ್ನ ಮಂತ್ರಗಳು ಬಹಳವಾಗಿರುವದ ರಿಂದಲೂ ನಿನ್ನ ಮಾಟಗಳು ಹೆಚ್ಚಾಗಿರುವದರಿಂದಲೂ ಅವು ಸಂಪೂರ್ಣವಾಗಿ ನಿನ್ನ ಮೇಲೆ ಬರುವವು.
- Jeremiah 50:33–34 ಯೆರೆಮೀಯ 50:33–34ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ-- ಇಸ್ರಾಯೇಲಿನ ಮಕ್ಕಳೂ ಯೆಹೂದನ ಮಕ್ಕಳೂ ಕೂಡ ಹಿಂಸಿಸಲ್ಪಟ್ಟರು; ಅವರನ್ನು ಸೆರೆಗೆ ಒಯ್ಯುವವ ರೆಲ್ಲರು ಅವರನ್ನು ಬಲವಾಗಿ ಹಿಡಿದು, ಕಳುಹಿಸಿ ಬಿಡಲೊಲ್ಲದೆ ಇದ್ದರು. ಅವರ ವಿಮೋಚಕನು ಬಲಿಷ್ಠನೇ, ಸೈನ್ಯಗಳ ಕರ್ತನು ಆತನ ಹೆಸರು; ಆತನು ದೇಶಕ್ಕೆ ಶಾಂತಿಯನ್ನು ಕೊಡುವ ಹಾಗೆಯೂ ಬಾಬೆಲಿನ ನಿವಾಸಿಗಳಿಗೆ ನಡುಗುವಿಕೆಯನ್ನು ಕೊಡುವ ಹಾಗೆಯೂ ಅವರ ವ್ಯಾಜ್ಯವನ್ನು ಪೂರ್ಣವಾಗಿ ತೀರಿಸುವನು.
- Isaiah 61:2 ಯೆಶಾಯ 61:2ಕರ್ತನ ಅಂಗೀಕಾರದ ವರುಷವನ್ನು ಸಾರಿ ಹೇಳುವದಕ್ಕೂ ನಮ್ಮ ದೇವರು ಮುಯ್ಯಿಗೆ ಮುಯ್ಯಿ ಕೊಡುವ ದಿವಸವನ್ನು ಪ್ರಸಿದ್ಧಿ ಮಾಡುವದಕ್ಕೂ ದುಃಖವುಳ್ಳವರೆಲ್ಲರನ್ನು ಆದರಿಸುವದಕ್ಕೂ
- Jeremiah 51:49 ಯೆರೆಮೀಯ 51:49ಬಾಬೆಲು ಇಸ್ರಾಯೇಲಿನ ಕೊಲ್ಲಲ್ಪಟ್ಟವರನ್ನು ಬೀಳಿಸಿದ ಹಾಗೆ ಬಾಬೆಲಿನ ಸಮಸ್ತ ದೇಶದಲ್ಲಿ ಕೊಲ್ಲಲ್ಪಟ್ಟವರು ಬೀಳು ವರು.
- Jeremiah 51:11 ಯೆರೆಮೀಯ 51:11ಬಾಣಗಳನ್ನು ಮೆರಗು ಮಾಡಿರಿ, ಡಾಲುಗಳನ್ನು ಕೂಡಿಸಿರಿ; ಕರ್ತನು ಮೇದ್ಯರ ಅರಸರ ಆತ್ಮವನ್ನು ಎಬ್ಬಿಸಿದ್ದಾನೆ; ಆತನ ಆಲೋಚನೆ ಬಾಬೆಲಿಗೆ ವಿರೋಧವಾಗಿ ಅದನ್ನು ನಾಶಮಾಡುವದಕ್ಕೆ ಇದೆ. ಇದು ಕರ್ತನ ಪ್ರತಿದಂಡ ನೆಯೂ ಆತನ ದೇವಾಲಯದ ಪ್ರತಿದಂಡನೆಯೂ ಆಗಿದೆ.
- 1 Thessalonians 2:15–16 1 ಥೆಸಲೊನೀಕದವರಿಗೆ 2:15–16ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ತಮ್ಮ ಸ್ವಂತ ಪ್ರವಾದಿಗಳನ್ನು ಕೊಂದರು; ನಮ್ಮನ್ನು ಹಿಂಸಿಸಿದರು; ಅವರು ದೇವರನ್ನು ಮೆಚ್ಚಿಸುವವರಲ್ಲ, ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ. ಅನ್ಯ ಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೆ ಅವರು ಅಡ್ಡಿ ಮಾಡುತ್ತಾರೆ; ಹೀಗೆ ತಮ್ಮ ಪಾಪಗಳನ್ನು ಯಾವಾಗಲೂ ಪರಿಪೂರ್ಣ ಮಾಡುವದಕ್ಕೆ ಹೋಗುತ್ತಾರೆ; ಆದರೆ ದೇವರ ಕೋಪವು ಅವರ ಮೇಲೆ ಸಂಪೂರ್ಣವಾಗುತ್ತಾ ಬಂತು.
- Revelation 6:10 ಪ್ರಕಟನೆ 6:10ಅವರು--ಓ ಕರ್ತನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂಮಿಯ ಮೇಲೆ ವಾಸಿಸುವವರು ನಮ್ಮ ರಕ್ತವನ್ನು ಸುರಿಸಿದ್ದಕ್ಕಾಗಿ ನೀನು ಎಷ್ಟು ಕಾಲದವರೆಗೆ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ ಎಂದು ಮಹಾಶಬ್ದದಿಂದ ಕೂಗುತ್ತಾ ಹೇಳಿದರು.
- Jeremiah 50:28–29 ಯೆರೆಮೀಯ 50:28–29ಅವರು ಚೀಯೋನಿನಲ್ಲಿ ನಮ್ಮ ದೇವರಾದ ಕರ್ತನ ಪ್ರತಿದಂಡನೆಯನ್ನೂ ಆತನ ಆಲಯದ ಪ್ರತಿ ದಂಡನೆ ಯನ್ನೂ ತಿಳಿಸುತ್ತಾ, ಬಾಬೆಲಿನ ದೇಶದಿಂದ ತಪ್ಪಿಸಿ ಕೊಂಡು ಓಡಿ ಹೋಗುವವರ ಸ್ವರವು! ಬಾಬೆಲಿಗೆ ವಿರೋಧವಾಗಿ ಬಿಲ್ಲಿನವರನ್ನು ಒಟ್ಟಾಗಿ ಕರೆಯಿರಿ; ಬಿಲ್ಲು ಬೊಗ್ಗಿಸುವವರೆಲ್ಲರೇ, ಅದಕ್ಕೆ ವಿರೋಧವಾಗಿ ಸುತ್ತಲು ದಂಡು ಕಟ್ಟಿರಿ; ಅದರಲ್ಲಿ ಯಾವದು ತಪ್ಪಿಸಿ ಕೊಳ್ಳಲಾರದೆ ಇರಲಿ. ಅದರ ಕೃತ್ಯಗಳ ಪ್ರಕಾರ ಅದಕ್ಕೆ ಪ್ರತಿಫಲ ಕೊಡಿರಿ; ಅದು ಮಾಡಿದ್ದೆಲ್ಲಾದರ ಹಾಗೆ ಅದಕ್ಕೆ ಮಾಡಿರಿ; ಕರ್ತನಿಗೆ ವಿರೋಧವಾಗಿಯೂ ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೂ ಅದು ಗರ್ವ ತೋರಿಸಿತು.