Jeremiah · chapter 51 · verse 3
Jeremiah 51:3 in Kannada
ಬಿಲ್ಲು ಬೊಗ್ಗಿಸುವವನಿಗೆ ವಿರೋಧವಾಗಿಯೂ ಕವಚದಲ್ಲಿ ತನ್ನನ್ನು ಹೆಚ್ಚಿಸಿ ಕೊಳ್ಳುವವನಿಗೆ ವಿರೋಧವಾಗಿಯೂ ಬಿಲ್ಲಿನವನು ತನ್ನ ಬಿಲ್ಲನ್ನು ಬೊಗ್ಗಿಸಲಿ; ಅದರ ಯೌವನಸ್ಥರನ್ನು ಕನಿಕರಿಸಬೇಡಿರಿ; ಅದರ ಸೈನ್ಯವನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿರಿ.
Billu boggisuvavanige virodhavaagiyoo kavachadalli tannannu hechchisi kolluvavanige virodhavaagiyoo billinavanu tanna billannu boggisali; adara yauvanastharannu kanikarisabediri; adara sainyavannellaa sampoornavaagi naashamaadiri.
Jeremiah 51:3 in English
- King James Version (KJV)
- Against [him that] bendeth let the archer bend his bow, and against [him that] lifteth himself up in his brigandine: and spare ye not her young men; destroy ye utterly all her host.
- World English Bible (WEB)
- Against him who bends, let the archer bend his bow, also against him who lifts himself up in his coat of mail. Don’t spare her young men! Utterly destroy all her army!
- American Standard Version (ASV)
- Against [him that] bendeth let the archer bend his bow, and against [him that] lifteth himself up in his coat of mail: and spare ye not her young men; destroy ye utterly all her host.
- Bible in Basic English (BBE)
- Against her the bow of the archer is bent, and he puts on his coat of metal: have no mercy on her young men, give all her army up to the curse.
- Darby Translation (DBY)
- Against him that bendeth let the archer bend his bow, and against him that lifteth himself up in his coat of mail; and spare not her young men: destroy utterly all her host.
- Webster's Bible (WBS)
- Against [him that] bendeth let the archer bend his bow, and against [him that] lifteth himself up in his coat of mail: and spare ye not her young men; destroy ye utterly all her host.
- Young's Literal Translation (YLT)
- Let not the treader tread his bow, Nor lift himself up in his coat of mail, Nor have ye pity on her young men, Devote ye to destruction all her host.
Read in context
- 1ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಬಾಬೆಲಿಗೆ ವಿರೋಧವಾಗಿಯೂ ನನಗೆದುರಾಗಿ ಎದ್ದಿರುವವರ ಮಧ್ಯದಲ್ಲಿ ವಾಸಿಸುವ ವರಿಗೆ ವಿರೋಧವಾಗಿಯೂ ನಾಶಮಾಡುವ ಗಾಳಿ ಯನ್ನು ಎಬ್ಬಿಸುತ್ತೇನೆ.
- 2ಬಾಬೆಲಿಗೆ ತೂರುವವರನ್ನು ಕಳುಹಿಸುವೆನು; ಅವರು ಅದನ್ನು ತೂರಿ ಅದರ ದೇಶವನ್ನು ಬರಿದುಮಾಡುವರು; ದುರ್ದಿನದಲ್ಲಿ ಸುತ್ತಲಾಗಿ ಅದಕ್ಕೆ ವಿರೋಧವಾಗಿರುವರು.
- 3ಬಿಲ್ಲು ಬೊಗ್ಗಿಸುವವನಿಗೆ ವಿರೋಧವಾಗಿಯೂ ಕವಚದಲ್ಲಿ ತನ್ನನ್ನು ಹೆಚ್ಚಿಸಿ ಕೊಳ್ಳುವವನಿಗೆ ವಿರೋಧವಾಗಿಯೂ ಬಿಲ್ಲಿನವನು ತನ್ನ ಬಿಲ್ಲನ್ನು ಬೊಗ್ಗಿಸಲಿ; ಅದರ ಯೌವನಸ್ಥರನ್ನು ಕನಿಕರಿಸಬೇಡಿರಿ; ಅದರ ಸೈನ್ಯವನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿರಿ.
- 4ಈ ಪ್ರಕಾರ ಕಸ್ದೀಯರ ದೇಶದಲ್ಲಿ ಕೊಂದುಹಾಕಲ್ಪ ಟ್ಟವರೂ ಅದರ ಬೀದಿಗಳಲ್ಲಿ ತಿವಿಯಲ್ಪಟ್ಟವರೂ ಬೀಳುವರು.
- 5ಅವರ ದೇಶವು ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾದ ಪಾಪದಿಂದ ತುಂಬಿದ್ದಾಗ್ಯೂ ಇಸ್ರಾಯೇಲಾದರೂ ಯೆಹೂದವಾದರೂ ತನ್ನ ದೇವರಾದ ಸೈನ್ಯಗಳ ಕರ್ತನಿಂದ ಬಿಡಲ್ಪಟ್ಟದ್ದಲ್ಲ.
Cross references
- Jeremiah 50:14 ಯೆರೆಮೀಯ 50:14ಬಿಲ್ಲನ್ನು ಬೊಗ್ಗಿಸುವವರೆಲ್ಲರೇ, ಬಾಬೆಲಿಗೆ ವಿರೋಧವಾಗಿ ಸುತ್ತಲೂ ಯುದ್ಧವನ್ನು ಸಿದ್ಧಮಾಡಿರಿ. ಬಾಣಗಳನ್ನು ಅದಕ್ಕೆ ಎಸೆಯಿರಿ; ಕಡಿಮೆ ಮಾಡಬೇಡಿರಿ; ಅದು ಕರ್ತನಿಗೆ ವಿರೋಧವಾಗಿ ಪಾಪಮಾಡಿದೆ.
- Jeremiah 46:4 ಯೆರೆಮೀಯ 46:4ಕುದುರೆಗಳನ್ನು ಕಟ್ಟಿರಿ; ರಾಹುತರೇ, ಎದ್ದು ಶಿರಸ್ತ್ರಾಣಗಳನ್ನಿಟ್ಟು ನಿಂತುಕೊಳ್ಳಿರಿ, ಈಟಿಗಳನ್ನು ಮೆರುಗು ಮಾಡಿರಿ, ಕವಚಗಳನ್ನು ತೊಟ್ಟು ಕೊಳ್ಳಿರಿ;
- Jeremiah 50:21 ಯೆರೆಮೀಯ 50:21ಮೆರಾಥಯಿಮ್ ದೇಶಕ್ಕೂ ಪೆಕೋದಿನ ನಿವಾಸಿ ಗಳಿಗೂ ವಿರೋಧವಾಗಿ ಏರಿಹೋಗು; ಅವರನ್ನು ಹಿಂದಟ್ಟಿ ಕೆಡಿಸಿಬಿಟ್ಟು ಸಂಪೂರ್ಣ ನಾಶಮಾಡು, ನಾನು ನಿನಗೆ ಆಜ್ಞಾಪಿಸಿದ್ದೆಲಾದರ ಪ್ರಕಾರ ಮಾಡು ಎಂದು ಕರ್ತನು ಅನ್ನುತ್ತಾನೆ.
- James 2:13 ಯಾಕೋಬನು 2:13ಕರುಣೆ ತೋರಿಸದೆ ಇರುವವನಿಗೆ ನ್ಯಾಯತೀರ್ಪಿನಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಪಿಗಿಂತ ಮೇಲಾಗಿ ಹಿಗ್ಗುತ್ತದೆ.
- Isaiah 13:10–18 ಯೆಶಾಯ 13:10–18ಆಕಾಶದ ನಕ್ಷತ್ರಗಳು ಅದರ ರಾಶಿಗಳು ತಮ್ಮ ಬೆಳಕನ್ನು ಕೊಡುವುದಿಲ್ಲ; ಸೂರ್ಯನು ಮೂಡಿ ಹೋಗುತ್ತಿರುವಾಗಲೇ ಕತ್ತಲಾಗುವನು. ಚಂದ್ರನು ತನ್ನ ಬೆಳಕನ್ನು ಕೊಡುವದಿಲ್ಲ. ಅವರ ಕೆಟ್ಟವುಗಳಿಗೋಸ್ಕರವೂ ದುಷ್ಟರ ಅಪ ರಾಧಗಳಿಗೋಸ್ಕರವೂ ನಾನು ಲೋಕವನ್ನು ಶಿಕ್ಷಿಸು ವೆನು; ಗರ್ವಿಷ್ಟರ ಅಹಂಕಾರವನ್ನು ನಿಲ್ಲಿಸಿಬಿಡುವೆನು, ಭಯಂಕರವಾದ ಹೆಮ್ಮೆಯನ್ನು ತಗ್ಗಿಸುವೆನು. ನಾನು ಮನುಷ್ಯನನ್ನು ಚೊಕ್ಕ ಬಂಗಾರಕ್ಕಿಂತಲೂ ಇಲ್ಲವೆ ಒಫೀರಿನ ಬಂಗಾರಕ್ಕಿಂತಲೂ ಅಮೂಲ್ಯನನ್ನಾಗಿ ಮಾಡುವೆನು. ಆದದರಿಂದ ಸೈನ್ಯಗಳ ಕರ್ತನ ಉಗ್ರದಲ್ಲಿಯೂ ಆತನ ಕೋಪೋದ್ರೇಕದ ದಿನ ದಲ್ಲಿಯೂ ನಾನು ಆಕಾಶಗಳನ್ನು ನಡುಗಿಸುವೆನು, ಭೂಮಿಯನ್ನು ಅದರ ಸ್ಥಳದಿಂದ ತೆಗೆದುಬಿಡುವೆನು. ಅದು ಅಟ್ಟಿದ ಜಿಂಕೆಯಂತೆಯೂ ಯಾರೂ ಕೂಡಿ ಸದ ಕುರಿಗಳಂತೆಯೂ ಇರುವದು. ಅವರಲ್ಲಿ ಪ್ರತಿಯೊ ಬ್ಬನೂ ತನ್ನ ಜನರ ಕಡೆಗೆ ತಿರುಗಿಕೊಳ್ಳುವನು ಪ್ರತಿಯೊ ಬ್ಬನೂ ತನ್ನ ಸ್ವದೇಶಕ್ಕೆ ಓಡಿಹೋಗುವನು. ಸಿಕ್ಕಿದ ಪ್ರತಿಯೊಬ್ಬನೂ ಇರಿಯಲ್ಪಡುವನು; ಅವರೊಂದಿಗೆ ಸೇರಿಕೊಂಡ ಪ್ರತಿಯೊಬ್ಬನೂ ಕತ್ತಿಯಿಂದ ಬೀಳು ವನು. ಅವರ ಮಕ್ಕಳೂ ಅವರ ಕಣ್ಣೆದುರಿಗೆ ತುಂಡು ತುಂಡಾಗುವಂತೆ ಅಪ್ಪಳಿಸಲ್ಪಡುವರು; ಅವರ ಮನೆ ಗಳು ಸೂರೆಯಾಗುವವು; ಅವರ ಪತ್ನಿಯರು ಕೆಡಿ ಸಲ್ಪಡುವರು. ಇಗೋ, ಬೆಳ್ಳಿಯನ್ನು ಲಕ್ಷಿಸದೆ ಬಂಗಾರದಲ್ಲಿ ಆನಂದಿಸದೆ ಇರುವ ಮೇದ್ಯರನ್ನು ಅವರಿಗೆ ವಿರೋಧ ವಾಗಿ ನಾನು ಎಬ್ಬಿಸುವೆನು. ಅವರ ಬಿಲ್ಲುಗಳು ಸಹ ಯುವಕರನ್ನು ಹೊಡೆದು ತುಂಡುತುಂಡು ಮಾಡುವವು; ಇವರು ಗರ್ಭಫಲವನ್ನು ಕರುಣಿಸರು, ಇವರ ಕಣ್ಣುಗಳು ಮಕ್ಕಳನ್ನೂ ಉಳಿಸುವದಿಲ್ಲ.
- Deuteronomy 32:25 ಧರ್ಮೋಪದೇಶಕಾಂಡ 32:25ಹೊರಗೆ ಕತ್ತಿಯೂ ಒಳಗೆ ಭಯವೂ ಪ್ರಾಯ ಸ್ಥನನ್ನೂ ಕನ್ನಿಕೆಯನ್ನೂ ನರೇಕೂದಲಿನವನ ಸಂಗಡ ಮೊಲೆ ಕೂಸನ್ನೂ ಸಂಹರಿಸುವವು.
- Jeremiah 9:21 ಯೆರೆಮೀಯ 9:21ಮರಣವು ನಮ್ಮ ಕಿಟಕಿಗಳೊಳಗೆ ಏರಿ ಬಂತು, ನಮ್ಮ ಅರಮನೆ ಗಳಲ್ಲಿ ಸೇರಿತು; ಹೊರಗಡೆ ಮಕ್ಕಳನ್ನೂ ಬೀದಿಗಳಲ್ಲಿ ಯೌವ್ವನಸ್ಥರನ್ನೂ ಕಡಿದು ಹಾಕುತ್ತದೆ.
- Jeremiah 50:41–42 ಯೆರೆಮೀಯ 50:41–42ಇಗೋ, ಒಂದು ಜನಾಂಗ ಉತ್ತರದಿಂದ ಬರುತ್ತದೆ; ಅದು ದೊಡ್ಡ ಜನಾಂಗವು. ಭೂಮಿಯ ಮೇರೆಗಳಿಂದ ಅನೇಕ ಅರಸರು ಎಬ್ಬಿಸಲ್ಪಡುವರು. ಅವರು ಬಿಲ್ಲನ್ನೂ ಭಲ್ಲೆಯನ್ನೂ ಹಿಡಿಯುವರು; ಅವರು ಕ್ರೂರರು; ಅಂತಃಕರುಣೆ ತೋರಿಸುವದಿಲ್ಲ; ಅವರ ಶಬ್ದವು ಸಮುದ್ರದ ಹಾಗೆ ಘೋಷಿಸುವದು; ಬಾಬೆಲಿನ ಮಗಳೇ, ನಿನಗೆ ವಿರೋಧವಾಗಿ ಯುದ್ಧಕ್ಕೆ ಸಿದ್ಧವಾಗಿ ರುವ ಪುರುಷರ ಹಾಗೆ ಕುದುರೆಗಳನ್ನು ಹತ್ತಿಕೊಂಡು ಬರುವರು.
- Jeremiah 50:27 ಯೆರೆಮೀಯ 50:27ಅದರ ಹೋರಿಗಳನ್ನೆಲ್ಲಾ ಕೊಂದುಹಾಕಿರಿ; ಅವು ಕೊಲೆಗೆ ಇಳಿಯಲಿ; ಅವರಿಗೆ ಅಯ್ಯೋ! ಅವರ ದಿನವೂ ಅವರ ವಿಚಾರಣೆಯ ಕಾಲವೂ ಬಂತು.
- Jeremiah 50:29–30 ಯೆರೆಮೀಯ 50:29–30ಬಾಬೆಲಿಗೆ ವಿರೋಧವಾಗಿ ಬಿಲ್ಲಿನವರನ್ನು ಒಟ್ಟಾಗಿ ಕರೆಯಿರಿ; ಬಿಲ್ಲು ಬೊಗ್ಗಿಸುವವರೆಲ್ಲರೇ, ಅದಕ್ಕೆ ವಿರೋಧವಾಗಿ ಸುತ್ತಲು ದಂಡು ಕಟ್ಟಿರಿ; ಅದರಲ್ಲಿ ಯಾವದು ತಪ್ಪಿಸಿ ಕೊಳ್ಳಲಾರದೆ ಇರಲಿ. ಅದರ ಕೃತ್ಯಗಳ ಪ್ರಕಾರ ಅದಕ್ಕೆ ಪ್ರತಿಫಲ ಕೊಡಿರಿ; ಅದು ಮಾಡಿದ್ದೆಲ್ಲಾದರ ಹಾಗೆ ಅದಕ್ಕೆ ಮಾಡಿರಿ; ಕರ್ತನಿಗೆ ವಿರೋಧವಾಗಿಯೂ ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೂ ಅದು ಗರ್ವ ತೋರಿಸಿತು. ಆದದರಿಂದ ಅದರ ಯೌವನಸ್ಥರು ಬೀದಿಗಳಲ್ಲಿ ಬೀಳುವರು; ಅದರ ಯುದ್ಧಸ್ಥರೆಲ್ಲರು ಆ ದಿವಸದಲ್ಲಿ ತೆಗೆದುಹಾಕಲ್ಪಡು ವರೆಂದು ಕರ್ತನು ಅನ್ನುತ್ತಾನೆ.
- Psalm 137:9 ಕೀರ್ತನೆಗಳು 137:9ನಿನ್ನ ಚಿಕ್ಕ ಕೂಸುಗಳನ್ನು ಹಿಡಿದು ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು.