Jeremiah · chapter 51 · verse 41
Jeremiah 51:41 in Kannada
ಶೇಷಕ್ ಹೇಗೆ ಹಿಡಿಯಲ್ಪಟ್ಟಿದೆ, ಸಮಸ್ತ ಭೂಮಿಯ ಹೊಗಳಿಕೆಯು ಆಶ್ಚರ್ಯಗೊಂಡಿದೆ; ಬಾಬೆಲ್ ಜನಾಂಗಗಳೊಳಗೆ ಹೀಗೆ ವಿಸ್ಮಯಗೊಳಗಾಯಿತು!
Sheshak hege hidiyalpattide, samasta bhoomiya hogalikeyu aashcharyagondide; baabel janaangagalolage heege vismayagolagaayitu!
Jeremiah 51:41 in English
- King James Version (KJV)
- How is Sheshach taken! and how is the praise of the whole earth surprised! how is Babylon become an astonishment among the nations!
- World English Bible (WEB)
- “How Sheshach is taken! How the praise of the whole earth is seized! How Babylon has become a desolation among the nations!
- American Standard Version (ASV)
- How is Sheshach taken! and the praise of the whole earth seized! how is Babylon become a desolation among the nations!
- Bible in Basic English (BBE)
- How is Babylon taken! and the praise of all the earth surprised! how has Babylon become a cause of wonder among the nations!
- Darby Translation (DBY)
- How is Sheshach taken! and how is the praise of the whole earth seized! How is Babylon become an astonishment among the nations!
- Webster's Bible (WBS)
- How is Sheshach taken! and how is the praise of the whole earth surprised! how is Babylon become an astonishment among the nations!
- Young's Literal Translation (YLT)
- How hath Sheshach been captured, Yea, caught is the praise of the whole earth, How hath Babylon been for an astonishment among nations.
Read in context
- 39ಅವರ ಉರಿಯಲ್ಲಿ ನಾನು ಅವರ ಔತಣವನ್ನು ಸಿದ್ಧಮಾಡುವೆನು; ಅವರು ಉಲ್ಲಾಸಿಸಿ ನಿತ್ಯವಾದ ನಿದ್ರೆಯನ್ನು ಮಾಡಿ ಎಚ್ಚರವಾಗದ ಹಾಗೆ ಅವರಿಗೆ ಅಮಲೇರಿಸುವೆನೆಂದು ಕರ್ತನು ಅನ್ನುತ್ತಾನೆ.
- 40ಕುರಿಮರಿಗಳ ಹಾಗೆ ಟಗರು ಗಳ ಹೋತಗಳ ಹಾಗೆ ಅವರನ್ನು ಕೊಲೆಗೆ ಇಳಿಸುವೆನು.
- 41ಶೇಷಕ್ ಹೇಗೆ ಹಿಡಿಯಲ್ಪಟ್ಟಿದೆ, ಸಮಸ್ತ ಭೂಮಿಯ ಹೊಗಳಿಕೆಯು ಆಶ್ಚರ್ಯಗೊಂಡಿದೆ; ಬಾಬೆಲ್ ಜನಾಂಗಗಳೊಳಗೆ ಹೀಗೆ ವಿಸ್ಮಯಗೊಳಗಾಯಿತು!
- 42ಬಾಬೆಲಿನ ಮೇಲೆ ಸಮುದ್ರವು ಬಂತು; ಅದರ ತೆರೆಗಳ ಸಮೂಹದಿಂದ ಮುಚ್ಚಲ್ಪಟ್ಟಿದೆ.
- 43ಅದರ ಪಟ್ಟಣಗಳು ಹಾಳಾದವು; ಅವು ಒಣನೆಲವೂ ಅಡವಿಯೂ ಯಾರೂ ವಾಸಮಾಡದೆ, ಮನುಷ್ಯನ ಮಗನು ಹಾದುಹೋಗದೆ ಇರುವ ದೇಶವೂ ಆಗಿವೆ.
Cross references
- Jeremiah 25:26 ಯೆರೆಮೀಯ 25:26ಹತ್ತಿರದ ಲ್ಲಿಯೂ ದೂರದಲ್ಲಿಯೂ ಒಬ್ಬರ ಬಳಿಯಲ್ಲಿ ಒಬ್ಬರಿ ರುವ ಉತ್ತರದಿಕ್ಕಿನ ಅರಸರೆಲ್ಲರಿಗೂ ಭೂಮಿಯ ಮೇಲ್ಭಾಗದಲ್ಲಿರುವಂಥ ಲೋಕದ ಎಲ್ಲಾ ರಾಜ್ಯ ಗಳಿಗೂ ಕುಡಿಸಿದೆನು; ಶೇಷಕಿನ ಅರಸನು ಅವರ ತರುವಾಯ ಕುಡಿಯುವನು.
- Isaiah 13:19 ಯೆಶಾಯ 13:19ರಾಜ್ಯಗಳ ಘನತೆಯೂ ಕಸ್ದೀಯರ ಶ್ರೇಷ್ಠವಾದ ಸೌಂದರ್ಯವೂ ಆದ ಬಾಬೆಲಿಗೆ ದೇವರು ಸೊದೋ ಮ್ ಗೊಮೋರಗಳನ್ನು ಕೆಡವಿಬಿಟ್ಟಂತೆ ಇದನ್ನು ಸಹ ಕೆಡವಿಬಿಡುವನು.
- Jeremiah 49:25 ಯೆರೆಮೀಯ 49:25ಹೊಗಳಿಕೆಯ ಪಟ್ಟಣವೂ ನನ್ನ ಸಂತೋಷದ ಪಟ್ಟಣವೂ ಬಿಡಲ್ಪಟ್ಟಿದೆಯಲ್ಲವೋ?
- Daniel 4:22 ದಾನಿಯೇಲನು 4:22ಓ ಅರಸನೇ, ಆ ಮರವು ನೀನೇ ಆಗಿರುವಿ, ನೀನು ಬೆಳೆದು ಬಲವಾಗಿರುವಿ; ಹೌದು, ನಿನ್ನ ಮಹತ್ತು ಬೆಳೆದು ಆಕಾಶಕ್ಕೂ ನಿನ್ನ ಅಧಿಕಾರವು ಭೂಮಿಯ ಅಂತ್ಯದ ವರೆಗೂ ಮುಟ್ಟುವದು.
- Isaiah 14:4 ಯೆಶಾಯ 14:4ಹೀಗೆ ಹಿಂಸಕನು ಕೊನೆ ಗೊಂಡನು, ಬಂಗಾರದ ಪಟ್ಟಣವು ಸುಮ್ಮನೆ ಇದೆ.
- Revelation 18:10–19 ಪ್ರಕಟನೆ 18:10–19ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು. ಇದಲ್ಲದೆ ಭೂಲೋಕದ ವರ್ತಕರು ಅವಳ ನಿಮಿತ್ತವಾಗಿ ಅತ್ತು ಗೋಳಾಡುವರು. ಯಾಕಂದರೆ ಅವರ ಸರಕುಗಳನ್ನು ಅಂದರೆ ಚಿನ್ನ, ಬೆಳ್ಳಿ, ಅಮೂಲ್ಯವಾದ ಕಲ್ಲುಗಳು, ಮುತ್ತುಗಳು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಶ್ಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ಸಕಲ ವಿಧವಾದ ದಂತದ ಪಾತ್ರೆಗಳು, ಬಹು ಅಮೂಲ್ಯವಾದ ಮರ, ಹಿತ್ತಾಳೆ, ಸಕಲ ವಿಧವಾದ ಪಾತ್ರೆಗಳು, ಕಬ್ಬಿಣ, ಚಂದ್ರಕಾಂತ, ಲವಂಗ, ಚೆಕ್ಕೆ, ಧೂಪ, ಸುಗಂಧ ತೈಲ, ಸಾಂಬ್ರಾಣಿ, ದ್ರಾಕ್ಷಾರಸ, ಎಣ್ಣೆ, ನಯವಾದಹಿಟ್ಟು, ಗೋಧಿ, ದನಗಳು, ಕುರಿ ಗಳು, ಕುದುರೆಗಳು, ರಥಗಳು, ಗುಲಾಮರು, ಮನುಷ್ಯರ ಪ್ರಾಣಗಳು ಇವೇ ಮೊದಲಾದವುಗಳನ್ನು ಯಾರೂ ಎಂದೂ ಕೊಂಡುಕೊಳ್ಳುವರಿಲ್ಲ ಎಂದು ದುಃಖಿಸುವರು. ನಿನ್ನ ಜೀವವು ಅಪೇಕ್ಷಿಸಿದ ಹಣ್ಣು ಗಳು ನಿನ್ನನ್ನು ಬಿಟ್ಟು ಹೋದವು; ಸೊಗಸಾಗಿಯೂ ಶೋಭಾಯಮಾನವಾಗಿಯೂ ಇರುವವುಗಳೆಲ್ಲವೂ ನಿನ್ನನ್ನು ಬಿಟ್ಟು ಹೋದವು. ಅವು ಇನ್ನು ಮೇಲೆ ನಿನಗೆ ಸಿಕ್ಕುವದೇ ಇಲ್ಲ. ಅವಳಿಂದ ಐಶ್ವರ್ಯವಂತ ರಾದ ಈ ಸರಕುಗಳ ವರ್ತಕರು ಅವಳ ಯಾತನೆಗೆ ಭಯಪಟ್ಟು ದೂರದಲ್ಲಿ ನಿಂತು ಅಳುತ್ತಾ ಗೋಳಾ ಡುತ್ತಾ-- ಅಯ್ಯೋ, ಅಯ್ಯೋ, ಮಹಾನಗರಿಯೇ, ನಯವಾದ ನಾರುಮಡಿಯನ್ನೂ ಧೂಮ್ರವರ್ಣದ ವಸ್ತ್ರವನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮುತ್ತುಗಳು ಇವುಗಳಿಂದ ಅಲಂಕರಿಸಲ್ಪಟ್ಟವಳೇ, ಅಷ್ಟು ದೊಡ್ಡ ಐಶ್ವರ್ಯವು ಒಂದೇ ಗಳಿಗೆಯಲ್ಲಿ ಇಲ್ಲದೆ ಹೋಯಿತಲ್ಲಾ ಅನ್ನುವರು. ಇದಲ್ಲದೆ ಹಡಗುಗಳ ಯಜಮಾನರೂ ಹಡಗುಗಳಲ್ಲಿ ಜೊತೆಯಾಗಿರುವವರೂ ನಾವಿಕರೂ ಸಮುದ್ರದ ಮೇಲೆ ವ್ಯಾಪಾರ ಮಾಡುವವರೆಲ್ಲರೂ ದೂರದಲ್ಲಿ ನಿಂತು ಅವಳ ದಹನದ ಹೊಗೆಯನ್ನು ನೋಡುತ್ತಾ--ಈ ಮಹಾ ಪಟ್ಟಣಕ್ಕೆ ಸಮಾನವಾದ ಪಟ್ಟಣವು ಯಾವದು ಎಂದು ಕೂಗಿ ಹೇಳಿದರು. ಆಗ ಅವರು ತಮ್ಮ ತಲೆಗಳ ಮೇಲೆ ಧೂಳನು ಹೊಯಿದುಕೊಂಡು ಕೂಗುತ್ತಾ ಅಳುತ್ತಾ, ಗೋಳಾ ಡುತ್ತಾ--ಅಯ್ಯೋ, ಅಯ್ಯೋ ಸಮುದ್ರದ ಮೇಲೆ ಹಡಗುಗಳಿದ್ದವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯ ಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಆ ಮಹಾ ನಗರಿಯು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು
- Jeremiah 50:46 ಯೆರೆಮೀಯ 50:46ಬಾಬೆಲ್ ಹಿಡಿಯಲ್ಪಟ್ಟಿತ್ತೆಂಬ ಶಬ್ದದಿಂದ ಭೂಮಿಯು ಕದಲುತ್ತದೆ; ಅದರ ಕೂಗು ಜನಾಂಗಗಳೊಳಗೆ ಕೇಳಬಂತು.
- Daniel 2:38 ದಾನಿಯೇಲನು 2:38ಮನುಷ್ಯರ ಮಕ್ಕಳು, ಭೂಮಿಯ ಮೃಗಗಳೂ ಆಕಾಶದ ಪಕ್ಷಿಗಳೂ ವಾಸಿಸುವಂತಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು ಅವೆಲ್ಲವುಗಳನ್ನು ಆಳುವಂತೆ ನಿನ್ನನ್ನು ಮಾಡಿದ್ದಾನೆ. ಆ ಬಂಗಾರದ ತಲೆಯು ನೀನೇ.
- Deuteronomy 28:37 ಧರ್ಮೋಪದೇಶಕಾಂಡ 28:37ಇದಲ್ಲದೆ ದೇವರು ನಿನ್ನನ್ನು ನಡಿಸುವ ಎಲ್ಲಾ ಜನಾಂಗಗಳಲ್ಲಿ ವಿಸ್ಮಯಕ್ಕೂ ಗಾದೆಗೂ ಹಾಸ್ಯಕ್ಕೂ ಗುರಿಯಾಗುವಿ.
- Ezekiel 27:35 ಯೆಹೆಜ್ಕೇಲನು 27:35ದ್ವೀಪದ ನಿವಾಸಿಗಳೆಲ್ಲಾ ನಿನ್ನ ಸ್ಥಿತಿಗೆ ಬೆಚ್ಚಿ ವಿಸ್ಮಯರಾಗಿದ್ದಾರೆ. ಅರಸರು ಬಹಳ ವಾಗಿ ಭಯಪಟ್ಟಿದ್ದಾರೆ. ರಾಜರುಗಳು ನಡುಗಿ ಭೀತಿ ಗೊಂಡರು.ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸಿಳ್ಳುಹಾಕುತ್ತಾರೆ. ನೀನು ಸಂಪೂರ್ಣ ಧ್ವಂಸ ವಾಗಿ ಇನ್ನೆಂದಿಗೂ ಇಲ್ಲದಂತಾಗಿರುವೆ.
- Jeremiah 50:23 ಯೆರೆಮೀಯ 50:23ಎಲ್ಲಾ ಭೂಮಿಯ ಸುತ್ತಿಗೆಯೂ ಹೇಗೆ ತುಂಡಾಗಿ ಮುರಿಯಲ್ಪಟ್ಟಿತು; ಬಾಬೆಲ್ ಹೇಗೆ ಜನಾಂಗಗಳೊಳಗೆ ಹಾಳಾಯಿತು!
- 2 Chronicles 7:21 2 ಪೂರ್ವಕಾಲವೃತ್ತಾಂತ 7:21ಎತ್ತರವಾಗಿರುವ ಈ ಮನೆಯು ಹಾದು ಹೋಗುವ ಪ್ರತಿ ಮನುಷ್ಯನಿಗೆ ಆಶ್ಚರ್ಯ ವಾಗಿರುವದು; ಅವನು ಈ ದೇಶಕ್ಕೂ ಈ ಮನೆಗೂ ಕರ್ತನು ಹೀಗೆ ಯಾಕೆ ಮಾಡಿದನು ಅನ್ನುವನು.ಅದಕ್ಕೆ ಅವರು ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ತೊರೆದು ಅನ್ಯದೇವರುಗಳನ್ನು ಹಿಂಬಾಲಿಸಿ ಅವುಗಳಿಗೆ ಅಡ್ಡಬಿದ್ದು ಸೇವಿಸಿದ್ದರಿಂದ ಆತನು ಈ ಕೇಡೆಲ್ಲಾ ಅವರ ಮೇಲೆ ಬರಮಾಡಿದನು ಎಂದು ಹೇಳುವರು.