Jeremiah · chapter 51 · verse 44
Jeremiah 51:44 in Kannada
ನಾನು ಬಾಬೆಲಿನಲ್ಲಿರುವ ಬೇಲ್ನನ್ನು ದಂಡಿಸಿ ಅವನು ನುಂಗಿದ್ದನ್ನು ಅವನ ಬಾಯೊಳಗಿಂದ ಹೊರಗೆ ತರಿಸುವೆನು; ಇನ್ನು ಮೇಲೆ ಜನಾಂಗಗಳು ಅವನ ಬಳಿಗೆ ಪ್ರವಾಹವಾಗಿ ಬರುವದಿಲ್ಲ; ಹೌದು, ಬಾಬೆಲಿನ ಗೋಡೆ ಬೀಳುವದು.
Naanu baabelinalliruva belnannu dandisi avanu nungiddannu avana baayolaginda horage tarisuvenu; innu mele janaangagalu avana balige pravaahavaagi baruvadilla; haudu, baabelina gode beeluvadu.
Jeremiah 51:44 in English
- King James Version (KJV)
- And I will punish Bel in Babylon, and I will bring forth out of his mouth that which he hath swallowed up: and the nations shall not flow together any more unto him: yea, the wall of Babylon shall fall.
- World English Bible (WEB)
- I will execute judgment on Bel in Babylon, and I will bring out of his mouth that which he has swallowed up. The nations will not flow any more to him. Yes, the wall of Babylon will fall.
- American Standard Version (ASV)
- And I will execute judgment upon Bel in Babylon, and I will bring forth out of his mouth that which he hath swallowed up; and the nations shall not flow any more unto him: yea, the wall of Babylon shall fall.
- Bible in Basic English (BBE)
- And I will send punishment on Bel in Babylon, and take out of his mouth what went into it; no longer will the nations be flowing together to him: truly, the wall of Babylon will come down.
- Darby Translation (DBY)
- And I will punish Bel in Babylon, and I will bring forth out of his mouth what he hath swallowed up; and the nations shall not flow together any more unto him: yea, the wall of Babylon is fallen.
- Webster's Bible (WBS)
- And I will punish Bel in Babylon, and I will bring forth out of his mouth that which he hath swallowed: and the nations shall not flow together any more to him: even the wall of Babylon shall fall.
- Young's Literal Translation (YLT)
- And I have seen after Bel in Babylon, And I have brought forth that which he swallowed — from his mouth, And flow no more unto him do nations, Also the wall of Babylon hath fallen.
Read in context
- 42ಬಾಬೆಲಿನ ಮೇಲೆ ಸಮುದ್ರವು ಬಂತು; ಅದರ ತೆರೆಗಳ ಸಮೂಹದಿಂದ ಮುಚ್ಚಲ್ಪಟ್ಟಿದೆ.
- 43ಅದರ ಪಟ್ಟಣಗಳು ಹಾಳಾದವು; ಅವು ಒಣನೆಲವೂ ಅಡವಿಯೂ ಯಾರೂ ವಾಸಮಾಡದೆ, ಮನುಷ್ಯನ ಮಗನು ಹಾದುಹೋಗದೆ ಇರುವ ದೇಶವೂ ಆಗಿವೆ.
- 44ನಾನು ಬಾಬೆಲಿನಲ್ಲಿರುವ ಬೇಲ್ನನ್ನು ದಂಡಿಸಿ ಅವನು ನುಂಗಿದ್ದನ್ನು ಅವನ ಬಾಯೊಳಗಿಂದ ಹೊರಗೆ ತರಿಸುವೆನು; ಇನ್ನು ಮೇಲೆ ಜನಾಂಗಗಳು ಅವನ ಬಳಿಗೆ ಪ್ರವಾಹವಾಗಿ ಬರುವದಿಲ್ಲ; ಹೌದು, ಬಾಬೆಲಿನ ಗೋಡೆ ಬೀಳುವದು.
- 45ನನ್ನ ಜನರೇ, ಅದರೊಳಗಿಂದ ಹೊರಡಿರಿ; ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣವನ್ನು ಕರ್ತನ ಕೋಪದ ಉರಿಗೆ ತಪ್ಪಿಸಿರಿ.
- 46ನಿಮ್ಮ ಹೃದಯವು ಕುಂದದ ಹಾಗೆ ದೇಶದಲ್ಲಿ ಕೇಳಲ್ಪಡುವ ಸುದ್ದಿಗೆ ನೀವು ಭಯಪಡದ ಹಾಗೆ ಒಂದು ವರುಷದಲ್ಲಿ ಒಂದು ಸುದ್ದಿಯೂ ಇನ್ನೊಂದು ವರುಷದಲ್ಲಿ ಇನ್ನೊಂದು ಸುದ್ದಿಯೂ ಬರುವದು; ದೇಶದಲ್ಲಿ ಬಲಾತ್ಕಾರವಿರು ವದು, ಆಳುವವನು ಆಳುವವನಿಗೆ ವಿರೋಧವಾಗಿರು ವನು.
Cross references
- Jeremiah 51:58 ಯೆರೆಮೀಯ 51:58ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನ ಅಗಲವಾದ ಗೋಡೆಗಳು ಸಂಪೂರ್ಣವಾಗಿ ಕೆಡವಲ್ಪ ಡುವವು; ಅವಳ ಎತ್ತರವಾದ ಬಾಗಲುಗಳು ಬೆಂಕಿ ಯಿಂದ ಸುಡಲ್ಪಡುವವು; ಜನರು ವ್ಯರ್ಥಕ್ಕಾಗಿಯೂ ಪ್ರಜೆಗಳು ಬೆಂಕಿಗಾಗಿಯೂ ಕಷ್ಟಪಟ್ಟು ಆಯಾಸ ಪಡುವರು.
- Jeremiah 51:34 ಯೆರೆಮೀಯ 51:34ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ನನ್ನನ್ನು ನುಂಗಿಬಿಟ್ಟಿದ್ದಾನೆ; ಜಜ್ಜಿದ್ದಾನೆ; ಬರಿದಾದ ಪಾತ್ರೆಯಾಗಿ ಮಾಡಿದ್ದಾನೆ; ಘಟಸರ್ಪದ ಹಾಗೆ ನುಂಗಿಬಿಟ್ಟಿದ್ದಾನೆ; ನನ್ನ ರಮ್ಯವಾದವುಗಳಿಂದ ತನ್ನ ಹೊಟ್ಟೆ ತುಂಬಿಸಿದ್ದಾನೆ; ನನ್ನನ್ನು ತಳ್ಳಿಬಿಟ್ಟಿದ್ದಾನೆ.
- Isaiah 2:2 ಯೆಶಾಯ 2:2ಆ ಅಂತ್ಯ ದಿನಗಳಲ್ಲಿ ಆಗುವದೇನಂದರೆ--ಕರ್ತನ ಆಲಯದ ಪರ್ವತವು ಗುಡ್ಡಗಳಿಗಿಂತ ಎತ್ತರ ವಾಗಿ ಪರ್ವತಗಳ ತುದಿಯಲ್ಲಿ ನೆಲೆಯಾಗಿರುವದು. ಎಲ್ಲಾ ಜನಾಂಗಗಳು ಅದರ ಕಡೆಗೆ ತಂಡ ತಂಡವಾಗಿ ಬರುವವು.
- Jeremiah 50:2 ಯೆರೆಮೀಯ 50:2ಜನಾಂಗಗಳಿಗೆ ತಿಳಿಸಿರಿ, ಸಾರಿರಿ; ಧ್ವಜವನ್ನೆತ್ತಿರಿ; ಸಾರಿರಿ, ಮರೆಮಾಡಬೇಡಿರಿ, ಬಾಬೆಲು ಹಿಡಿಯ ಲ್ಪಟ್ಟಳು, ಬೇಲ್ನಿಗೆ ನಾಚಿಕೆಯಾಯಿತು, ಮೆರೋದಾ ಕನು ತುಂಡು ತುಂಡಾಗಿ ಮುರಿದು ಹೋದನು, ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಅವಳ ವಿಗ್ರಹಗಳು ಮುರಿದು ಹೋದವೆಂದು ಹೇಳಿರಿ;
- Ezra 1:7–8 ಎಜ್ರನು 1:7–8ಇದಲ್ಲದೆ ನೆಬೂಕದ್ನೆಚ್ಚರನು ಯೆರೂಸಲೇಮಿನಿಂದ ತಂದು ತನ್ನ ದೇವರುಗಳ ಮನೆಯಲ್ಲಿ ಇರಿಸಿದ್ದ ಕರ್ತನ ಆಲಯದ ಸಾಮಾನು ಗಳನ್ನು ಅರಸನಾದ ಕೋರೆಷನು ತರಿಸಿದನು. ಅವು ಗಳನ್ನು ಪಾರಸಿಯ ಅರಸನಾದ ಕೋರೆಷನು ಬೊಕ್ಕಸ ದವನಾದ ಮಿತ್ರದಾತನ ಕೈಯಿಂದ ತರಿಸಿ ಯೆಹೂದದ ಪ್ರಭುವಾದ ಶೆಷ್ಬಚ್ಚರನಿಗೆ ಎಣಿಸಿ ಕೊಟ್ಟನು.
- Revelation 18:9–19 ಪ್ರಕಟನೆ 18:9–19ಅವಳೊಂದಿಗೆ ಜಾರತ್ವ ಮಾಡಿ ವೈಭವದಲ್ಲಿ ಬದುಕಿದ ಭೂರಾಜರು ಅವಳ ದಹನದ ಹೊಗೆಯನ್ನು ನೋಡು ವಾಗ ಅವಳಿಗಾಗಿ ಗೋಳಾಡುತ್ತಾ ಪ್ರಲಾಪಿಸುವರು. ಅವರು ದೂರದಲ್ಲಿ ನಿಂತು ಅವಳಿಗುಂಟಾದ ಯಾತ ನೆಯ ಭಯದಿಂದ--ಅಯ್ಯೋ, ಅಯ್ಯೋ, ಆ ಮಹಾಪಟ್ಟಣವಾದ ಬಾಬೆಲೇ, ಬಲಿಷ್ಠವಾದ ನಗ ರಿಯೇ, ಒಂದೇ ಗಳಿಗೆಯಲ್ಲಿ ನಿನಗೆ ತೀರ್ಪಾಯಿತಲ್ಲಾ ಎಂದು ಹೇಳುವರು. ಇದಲ್ಲದೆ ಭೂಲೋಕದ ವರ್ತಕರು ಅವಳ ನಿಮಿತ್ತವಾಗಿ ಅತ್ತು ಗೋಳಾಡುವರು. ಯಾಕಂದರೆ ಅವರ ಸರಕುಗಳನ್ನು ಅಂದರೆ ಚಿನ್ನ, ಬೆಳ್ಳಿ, ಅಮೂಲ್ಯವಾದ ಕಲ್ಲುಗಳು, ಮುತ್ತುಗಳು, ನಯವಾದ ನಾರುಮಡಿ, ಧೂಮ್ರವರ್ಣದ ವಸ್ತ್ರ, ರೇಶ್ಮೆ, ರಕ್ತಾಂಬರ, ಸಕಲ ವಿಧವಾದ ಅಗಿಲುಮರ, ಸಕಲ ವಿಧವಾದ ದಂತದ ಪಾತ್ರೆಗಳು, ಬಹು ಅಮೂಲ್ಯವಾದ ಮರ, ಹಿತ್ತಾಳೆ, ಸಕಲ ವಿಧವಾದ ಪಾತ್ರೆಗಳು, ಕಬ್ಬಿಣ, ಚಂದ್ರಕಾಂತ, ಲವಂಗ, ಚೆಕ್ಕೆ, ಧೂಪ, ಸುಗಂಧ ತೈಲ, ಸಾಂಬ್ರಾಣಿ, ದ್ರಾಕ್ಷಾರಸ, ಎಣ್ಣೆ, ನಯವಾದಹಿಟ್ಟು, ಗೋಧಿ, ದನಗಳು, ಕುರಿ ಗಳು, ಕುದುರೆಗಳು, ರಥಗಳು, ಗುಲಾಮರು, ಮನುಷ್ಯರ ಪ್ರಾಣಗಳು ಇವೇ ಮೊದಲಾದವುಗಳನ್ನು ಯಾರೂ ಎಂದೂ ಕೊಂಡುಕೊಳ್ಳುವರಿಲ್ಲ ಎಂದು ದುಃಖಿಸುವರು. ನಿನ್ನ ಜೀವವು ಅಪೇಕ್ಷಿಸಿದ ಹಣ್ಣು ಗಳು ನಿನ್ನನ್ನು ಬಿಟ್ಟು ಹೋದವು; ಸೊಗಸಾಗಿಯೂ ಶೋಭಾಯಮಾನವಾಗಿಯೂ ಇರುವವುಗಳೆಲ್ಲವೂ ನಿನ್ನನ್ನು ಬಿಟ್ಟು ಹೋದವು. ಅವು ಇನ್ನು ಮೇಲೆ ನಿನಗೆ ಸಿಕ್ಕುವದೇ ಇಲ್ಲ. ಅವಳಿಂದ ಐಶ್ವರ್ಯವಂತ ರಾದ ಈ ಸರಕುಗಳ ವರ್ತಕರು ಅವಳ ಯಾತನೆಗೆ ಭಯಪಟ್ಟು ದೂರದಲ್ಲಿ ನಿಂತು ಅಳುತ್ತಾ ಗೋಳಾ ಡುತ್ತಾ-- ಅಯ್ಯೋ, ಅಯ್ಯೋ, ಮಹಾನಗರಿಯೇ, ನಯವಾದ ನಾರುಮಡಿಯನ್ನೂ ಧೂಮ್ರವರ್ಣದ ವಸ್ತ್ರವನ್ನೂ ರಕ್ತಾಂಬರವನ್ನೂ ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮುತ್ತುಗಳು ಇವುಗಳಿಂದ ಅಲಂಕರಿಸಲ್ಪಟ್ಟವಳೇ, ಅಷ್ಟು ದೊಡ್ಡ ಐಶ್ವರ್ಯವು ಒಂದೇ ಗಳಿಗೆಯಲ್ಲಿ ಇಲ್ಲದೆ ಹೋಯಿತಲ್ಲಾ ಅನ್ನುವರು. ಇದಲ್ಲದೆ ಹಡಗುಗಳ ಯಜಮಾನರೂ ಹಡಗುಗಳಲ್ಲಿ ಜೊತೆಯಾಗಿರುವವರೂ ನಾವಿಕರೂ ಸಮುದ್ರದ ಮೇಲೆ ವ್ಯಾಪಾರ ಮಾಡುವವರೆಲ್ಲರೂ ದೂರದಲ್ಲಿ ನಿಂತು ಅವಳ ದಹನದ ಹೊಗೆಯನ್ನು ನೋಡುತ್ತಾ--ಈ ಮಹಾ ಪಟ್ಟಣಕ್ಕೆ ಸಮಾನವಾದ ಪಟ್ಟಣವು ಯಾವದು ಎಂದು ಕೂಗಿ ಹೇಳಿದರು. ಆಗ ಅವರು ತಮ್ಮ ತಲೆಗಳ ಮೇಲೆ ಧೂಳನು ಹೊಯಿದುಕೊಂಡು ಕೂಗುತ್ತಾ ಅಳುತ್ತಾ, ಗೋಳಾ ಡುತ್ತಾ--ಅಯ್ಯೋ, ಅಯ್ಯೋ ಸಮುದ್ರದ ಮೇಲೆ ಹಡಗುಗಳಿದ್ದವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯ ಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಆ ಮಹಾ ನಗರಿಯು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು
- Isaiah 46:1–2 ಯೆಶಾಯ 46:1–2ಬೇಲ್(ದೇವತೆಯು)ಬೊಗ್ಗಿದೆ, ನೆಬೋ (ದೇವತೆಯು) ಕುಗ್ಗಿದೆ; ಅವರ ವಿಗ್ರಹಗಳು ಮೃಗಗಳ ಮತ್ತು ಪಶುಗಳ ಮೇಲೆ ಇದ್ದವು, ನೀವು ಹೊರುತ್ತಿದ್ದವುಗಳು ಭಾರವಾದ ಹೊರೆಯಾಗಿದ್ದವು. ಆಯಾಸವುಳ್ಳ ಮೃಗಗಳಿಗೆ ಅವು ಭಾರವಾದವು. ಒಟ್ಟಿಗೆ ಕುಗ್ಗಿ, ಬೊಗ್ಗಿವೆ. ತಮ್ಮ ಮೇಲೆ ಬಿದ್ದ ಭಾರವನ್ನು ಹೊತ್ತು ನಿರ್ವಹಿಸಲಾರದೆ ತಾವೇ ಸೆರೆಗೆ ಹೋದವು.
- Jeremiah 51:47 ಯೆರೆಮೀಯ 51:47ಆದದರಿಂದ ಇಗೋ, ದಿನಗಳು ಬರುವವು; ಆಗ ನಾನು ಬಾಬೆಲಿನ ವಿಗ್ರಹಗಳಿಗೆ ನ್ಯಾಯತೀರಿ ಸುವೆನು. ಅದರ ದೇಶವೆಲ್ಲಾ ನಾಚಿಕೆಪಡುವದು; ಕೊಲ್ಲಲ್ಪಟ್ಟವರು ಅದರ ಮಧ್ಯದಲ್ಲಿ ಬೀಳುವರು.
- Daniel 5:31 ದಾನಿಯೇಲನು 5:31ಮೇದ್ಯಯನಾದ ದಾರ್ಯಾವೆಷನು ಅರವತ್ತೆರಡು ವರುಷದವನಾಗಿ ರಾಜ್ಯವನ್ನು ವಶಪಡಿಸಿಕೊಂಡನು.
- Daniel 3:2–3 ದಾನಿಯೇಲನು 3:2–3ಆ ಮೇಲೆ ಅರಸನಾದ ನೆಬೂಕದ್ನೆಚ್ಚರನು ಪ್ರಭುಗಳನ್ನೂ ರಾಜ್ಯ ಪಾಲರನ್ನೂ ಆಲೋಚನಾಕರ್ತರು ಅಧಿಕಾರಸ್ಥರನ್ನೂ ನ್ಯಾಯಾಧಿಪತಿಗಳನ್ನೂ ಬೊಕ್ಕಸದವರನ್ನೂ ಮತ್ತು ಸಲಹೆಗಾರರನ್ನೂ ಪಂಡಿತರನ್ನೂ ಎಲ್ಲಾ ಪ್ರಾಂತ್ಯಗಳ ಅಧಿಕಾರಿಗಳನ್ನೂ ತಾನು ನಿಲ್ಲಿಸಿದ್ದ ಪ್ರತಿಮೆಯ ಪ್ರತಿ ಷ್ಠೆಗೆ ಕರೆಯಿಸಿದನು. ಆಗ ಪ್ರಧಾನರು (ಆಲೋಚ ನಾಗಾರರು) ರಾಜ್ಯಪಾಲರು ಅಧಿಕಾರಸ್ಥರು, ನ್ಯಾಯಾ ಧಿಪತಿಗಳು, ಬೊಕ್ಕಸದವರು ಸಲಹೆಗಾರರು, ಪಂಡಿ ತರು, ಎಲ್ಲಾ ಪ್ರಾಂತ್ಯಗಳ ಅಧಿಕಾರಿಗಳು, ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೆಗಾಗಿ ಕೂಡಿ ಬಂದು ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಮುಂದೆ ಬಂದು ನಿಂತರು.
- Daniel 5:2–4 ದಾನಿಯೇಲನು 5:2–4ಆ ದ್ರಾಕ್ಷಾರಸವನ್ನು ರುಚಿಸುತ್ತಿರುವಾಗ ಬೆಲ್ಯಚ್ಚರನು ತನ್ನ ತಂದೆಯಾದ ನೆಬೂಕದ್ನೆಚ್ಚರನು ಯೆರೂಸಲೇಮಿನ ದೇವಾಲಯ ದೊಳಗಿಂದ ತಂದ ಬೆಳ್ಳಿಬಂಗಾರಗಳ ಪಾತ್ರೆಗಳಲ್ಲಿ ಅರಸನೂ ಅವನ ಪ್ರಭುಗಳೂ ಅವನ ಪತ್ನಿ ಮತ್ತು ಉಪಪತ್ನಿಯರು ಅವುಗಳಲ್ಲಿ ಕುಡಿಯುವ ಹಾಗೆ ತರಲು ಆಜ್ಞಾಪಿಸಿದನು. ಆಗ ಅವರು ಯೆರೂಸಲೇಮಿನ ದೇವಾಲಯದೊಳಗಿಂದ ತೆಗೆದ ಬಂಗಾರದ ಪಾತ್ರೆ ಗಳನ್ನು ತಂದರು. ಅರಸನೂ ಅವನ ಪ್ರಭುಗಳೂ ಪತ್ನಿ ಮತ್ತು ಉಪಪತ್ನಿಯರೂ ಅವುಗಳಲ್ಲಿ ಕುಡಿದರು. ಅವರು ದ್ರಾಕ್ಷಾರಸವನ್ನು ಕುಡಿದು ಬಂಗಾರ, ಬೆಳ್ಳಿ, ಕಂಚು, ಕಬ್ಬಿಣ, ಮರ ಮತ್ತು ಕಲ್ಲಿನ ದೇವರುಗಳನ್ನು ಹೊಗಳತೊಡಗಿದರು.
- Daniel 4:1 ದಾನಿಯೇಲನು 4:1ಅರಸನಾದ ನೆಬೂಕದ್ನೆಚ್ಚರನು, ಭೂಲೋಕದಲ್ಲೆಲ್ಲಾ ವಾಸಮಾಡುವ ಎಲ್ಲಾ ಪ್ರಜೆಗಳಿಗೂ ಜನಾಂಗಗಳಿಗೂ ಭಾಷೆಯವರಿಗೂ--ನಿಮಗೆ ಶಾಂತಿಯು ಹೆಚ್ಚಾಗಲಿ.