Jeremiah · chapter 51 · verse 45
Jeremiah 51:45 in Kannada
ನನ್ನ ಜನರೇ, ಅದರೊಳಗಿಂದ ಹೊರಡಿರಿ; ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣವನ್ನು ಕರ್ತನ ಕೋಪದ ಉರಿಗೆ ತಪ್ಪಿಸಿರಿ.
Nanna janare, adarolaginda horadiri; pratiyobbanoo tanna tanna praanavannu kartana kopada urige tappisiri.
Jeremiah 51:45 in English
- King James Version (KJV)
- My people, go ye out of the midst of her, and deliver ye every man his soul from the fierce anger of the LORD.
- World English Bible (WEB)
- “My people, go away from the middle of her, and each of you save yourselves from the LORD’s fierce anger.
- American Standard Version (ASV)
- My people, go ye out of the midst of her, and save yourselves every man from the fierce anger of Jehovah.
- Bible in Basic English (BBE)
- My people, go out from her, and let every man get away safe from the burning wrath of the Lord.
- Darby Translation (DBY)
- Go ye out of the midst of her, my people, and deliver every man his soul from the fierce anger of Jehovah!
- Webster's Bible (WBS)
- My people, depart from the midst of her, and deliver ye every man his soul from the fierce anger of the LORD.
- Young's Literal Translation (YLT)
- Go forth from its midst, O My people, And deliver ye, each his soul, Because of the fierceness of the anger of Jehovah,
Read in context
- 43ಅದರ ಪಟ್ಟಣಗಳು ಹಾಳಾದವು; ಅವು ಒಣನೆಲವೂ ಅಡವಿಯೂ ಯಾರೂ ವಾಸಮಾಡದೆ, ಮನುಷ್ಯನ ಮಗನು ಹಾದುಹೋಗದೆ ಇರುವ ದೇಶವೂ ಆಗಿವೆ.
- 44ನಾನು ಬಾಬೆಲಿನಲ್ಲಿರುವ ಬೇಲ್ನನ್ನು ದಂಡಿಸಿ ಅವನು ನುಂಗಿದ್ದನ್ನು ಅವನ ಬಾಯೊಳಗಿಂದ ಹೊರಗೆ ತರಿಸುವೆನು; ಇನ್ನು ಮೇಲೆ ಜನಾಂಗಗಳು ಅವನ ಬಳಿಗೆ ಪ್ರವಾಹವಾಗಿ ಬರುವದಿಲ್ಲ; ಹೌದು, ಬಾಬೆಲಿನ ಗೋಡೆ ಬೀಳುವದು.
- 45ನನ್ನ ಜನರೇ, ಅದರೊಳಗಿಂದ ಹೊರಡಿರಿ; ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣವನ್ನು ಕರ್ತನ ಕೋಪದ ಉರಿಗೆ ತಪ್ಪಿಸಿರಿ.
- 46ನಿಮ್ಮ ಹೃದಯವು ಕುಂದದ ಹಾಗೆ ದೇಶದಲ್ಲಿ ಕೇಳಲ್ಪಡುವ ಸುದ್ದಿಗೆ ನೀವು ಭಯಪಡದ ಹಾಗೆ ಒಂದು ವರುಷದಲ್ಲಿ ಒಂದು ಸುದ್ದಿಯೂ ಇನ್ನೊಂದು ವರುಷದಲ್ಲಿ ಇನ್ನೊಂದು ಸುದ್ದಿಯೂ ಬರುವದು; ದೇಶದಲ್ಲಿ ಬಲಾತ್ಕಾರವಿರು ವದು, ಆಳುವವನು ಆಳುವವನಿಗೆ ವಿರೋಧವಾಗಿರು ವನು.
- 47ಆದದರಿಂದ ಇಗೋ, ದಿನಗಳು ಬರುವವು; ಆಗ ನಾನು ಬಾಬೆಲಿನ ವಿಗ್ರಹಗಳಿಗೆ ನ್ಯಾಯತೀರಿ ಸುವೆನು. ಅದರ ದೇಶವೆಲ್ಲಾ ನಾಚಿಕೆಪಡುವದು; ಕೊಲ್ಲಲ್ಪಟ್ಟವರು ಅದರ ಮಧ್ಯದಲ್ಲಿ ಬೀಳುವರು.
Cross references
- Isaiah 48:20 ಯೆಶಾಯ 48:20ಬಾಬೆಲಿನಿಂದ ಹೊರಡಿರಿ, ಕಸ್ದೀಯರ ಕಡೆ ಯಿಂದ ಓಡಿಹೋಗಿರಿ; ಹರ್ಷ ಧ್ವನಿಯಿಂದ ಇದನ್ನು ಹೇಳಿ ಪ್ರಕಟಿಸಿರಿ, ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ; ಕರ್ತನು ತನ್ನ ಸೇವಕನಾದ ಯಾಕೋಬನನ್ನು ವಿಮೋಚಿಸಿದ್ದಾನೆಂದು ನೀವು ಹೇಳಿರಿ.
- Revelation 18:4 ಪ್ರಕಟನೆ 18:4ಪರಲೋಕದಿಂದ ಮತ್ತೊಂದು ಶಬ್ದವನ್ನು ನಾನು ಕೇಳಿದೆನು; ಅದು--ನನ್ನ ಜನರೇ, ಅವಳಿಂದ ಹೊರಗೆ ಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗ ಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿ ಯಾಗಬಾರದು.
- Jeremiah 51:6 ಯೆರೆಮೀಯ 51:6ಬಾಬೆಲಿನೊಳಗಿಂದ ಓಡಿಹೋಗಿರಿ, ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳಲಿ; ಅದರ ಅಕ್ರಮದಲ್ಲಿ ನಾಶವಾಗ ಬೇಡಿರಿ; ಇದು ಕರ್ತನ ಪ್ರತಿದಂಡನೆಯ ಕಾಲವು; ಆತನೇ ಅದಕ್ಕೆ ಮುಯ್ಯಿಗೆಮುಯ್ಯಿ ಕೊಡುತ್ತಾನೆ.
- Revelation 14:8–11 ಪ್ರಕಟನೆ 14:8–11ಅವನ ಹಿಂದೆ ಇನ್ನೊಬ್ಬ ದೂತನು ಬಂದು--ಬಾಬೆಲೆಂಬ ಆ ಮಹಾನಗರಿಯು ಬಿದ್ದಳು, ಬಿದ್ದಳು; ಯಾಕಂದರೆ ಅವಳು ತನ್ನ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಸಕಲ ಜನಾಂಗಗಳು ಕುಡಿಯುವಂತೆ ಮಾಡಿದಳು ಎಂದು ಹೇಳಿದನು. ತರುವಾಯ ಮೂರನೆಯ ದೂತನು ಅವರನ್ನು ಹಿಂಬಾಲಿಸಿ--ಯಾರಾದರೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸಿ ತನ್ನ ಹಣೆಯ ಮೇಲಾಗಲಿ ತನ್ನ ಕೈಯ ಮೇಲಾಗಲಿ ಅದರ ಗುರುತು ಹಾಕಿಸಿ ಕೊಂಡರೆ ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು. ಅವರ ಯಾತನೆಯ ಹೊಗೆಯು ಯುಗ ಯುಗಾಂತರಗಳಲ್ಲಿ ಏರುತ್ತಿರುವದು. ಆ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡುವವರೂ ಅದರ ಹೆಸರಿನ ಗುರುತನ್ನು ಹಾಕಿಸಿಕೊಂಡಿರುವವರೂ ಹಗಲಿ ರುಳು ವಿಶ್ರಾಂತಿಯಿಲ್ಲದೆ ಇರುವರು ಎಂದು ಮಹಾ ಶಬ್ದದಿಂದ ಹೇಳಿದನು.
- Acts 2:40 ಅಪೊಸ್ತಲರ ಕೃತ್ಯಗಳು 2:40ಅವನು ಇನ್ನೂ ಬೇರೆ ಅನೇಕ ಮಾತುಗಳಿಂದ ಸಾಕ್ಷಿಕೊಟ್ಟು--ಈ ಮೂರ್ಖ ಸಂತತಿಯವರಿಂದ ನಿಮ್ಮನ್ನು ನೀವು ರಕ್ಷಿಸಿಕೊಳ್ಳಿರಿ ಎಂದು ಎಚ್ಚರಿಸಿ ಹೇಳಿದನು.
- 2 Corinthians 6:17 2 ಕೊರಿಂಥದವರಿಗೆ 6:17ಆದದರಿಂದ--ಅವರ ಮಧ್ಯದಲ್ಲಿಂದ ನೀವು ಹೊರಗೆ ಬಂದು ಪ್ರತ್ಯೇಕವಾಗಿರಿ. ಇದಲ್ಲದೆ ಅಶುದ್ಧವಾದ ಯಾವದನ್ನೂ ಮುಟ್ಟದಿರಿ ಎಂದು ಕರ್ತನು ಹೇಳುತ್ತಾನೆ.ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರ್ತೆಯರಾಗಿರುವಿರಿ ಎಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.
- Genesis 19:12–16 ಆದಿಕಾಂಡ 19:12–16ಆ ಮನುಷ್ಯರು ಲೋಟನಿಗೆ--ಇಲ್ಲಿ ನಿನಗೆ ಇನ್ನು ಯಾರಾದರೂ ಇದ್ದಾರೋ? ಅಳಿಯಂದಿರನ್ನೂ ಕುಮಾರರನ್ನೂ ನಿನ್ನ ಕುಮಾರ್ತೆಯರನ್ನೂ ಮತ್ತು ಪಟ್ಟಣದಲ್ಲಿ ನಿನಗಿರುವ ಎಲ್ಲವನ್ನೂ ಈ ಸ್ಥಳದಿಂದ ಹೊರಗೆ ತೆಗೆದುಕೊಂಡು ಬಾ. ಈ ಸ್ಥಳದವರ ಕೂಗು ಕರ್ತನ ಸನ್ನಿಧಿಯಲ್ಲಿ ದೊಡ್ಡದಾಗಿರುವದರಿಂದ ನಾವು ಇದನ್ನು ನಾಶಮಾಡುತ್ತೇವೆ; ಕರ್ತನು ಅದನ್ನು ನಾಶಮಾಡುವದಕ್ಕೆ ನಮ್ಮನ್ನು ಕಳುಹಿಸಿದ್ದಾನೆ ಅಂದರು. ಆಗ ಲೋಟನು ಹೊರಟುಹೋಗಿ ತನ್ನ ಕುಮಾರ್ತೆಯರು ಮದುವೆಯಾದ ಅಳಿಯಂದಿರ ಸಂಗಡ ಮಾತನಾಡಿ--ಎದ್ದು ಈ ಸ್ಥಳದಿಂದ ಹೊರಡಿರಿ; ಯಾಕಂದರೆ ಕರ್ತನು ಈ ಪಟ್ಟಣವನ್ನು ನಾಶ ಮಾಡುವದಕ್ಕಿದ್ದಾನೆ ಅಂದನು. ಆದರೆ ಅವನು ತನ್ನ ಅಳಿಯಂದಿರಿಗೆ ಅಪಹಾಸ್ಯ ಮಾಡುವಂತೆ ಕಾಣಿಸಿಕೊಂಡನು. ಸೂರ್ಯೋದಯವಾದಾಗ ದೂತರು ಲೋಟನನ್ನು ತ್ವರೆಪಡಿಸಿ--ನೀನು ಈ ಪಟ್ಟಣದ ದುಷ್ಟತನದಿಂದ ನಾಶವಾಗದ ಹಾಗೆ ಎದ್ದು ನಿನ್ನ ಹೆಂಡತಿಯನ್ನೂ ಇಲ್ಲಿರುವ ನಿನ್ನ ಇಬ್ಬರು ಕುಮಾರ್ತೆಯರನ್ನೂ ಕರಕೊಂಡು ನಡೆ ಅಂದರು. ಅವರು ತಡಮಾಡಿದಾಗ ಕರ್ತನು ಅವನನ್ನು ಕನಿಕರಿಸಿದ್ದರಿಂದ ಆ ಮನುಷ್ಯರು ಅವನನ್ನೂ ಅವನ ಹೆಂಡತಿ ಅವನ ಇಬ್ಬರು ಕುಮಾರ್ತೆಯರ ಕೈಯನ್ನೂ ಹಿಡಿದು, ಅವನನ್ನು ಪಟ್ಟಣದ ಹೊರಗೆ ತಂದುಬಿಟ್ಟರು;
- Numbers 16:26 ಅರಣ್ಯಕಾಂಡ 16:26ಅವನು ಸಭೆಗೆ--ನೀವು ಈ ದುಷ್ಟ ಮನುಷ್ಯರ ಡೇರೆಗಳ ಬಳಿಯಿಂದ ತೊಲಗಿ ಹೋಗಿರಿ. ನೀವು ಅವರ ಎಲ್ಲಾ ಪಾಪಗಳಲ್ಲಿ ನಾಶವಾಗ ದಂತೆ ಅವರಿಗಿರುವ ಯಾವದನ್ನು ಮುಟ್ಟಬೇಡಿರಿ ಅಂದನು.
- Jeremiah 50:8 ಯೆರೆಮೀಯ 50:8ಬಾಬೆಲಿನೊಳ ಗಿಂದ ಓಡಿಹೋಗಿರಿ; ಕಸ್ದೀಯರ ದೇಶದಿಂದ ಹೊರ ಡಿರಿ, ಮಂದೆಯ ಮುಂದೆ ಹೋತಗಳ ಹಾಗೆ ಇರ್ರಿ.
- Jeremiah 51:9 ಯೆರೆಮೀಯ 51:9ನಾವು ಬಾಬೆಲನ್ನು ವಾಸಿಮಾಡುವದಕ್ಕಿದ್ದೆವು. ಆದರೆ ಅದು ವಾಸಿಯಾಗಲಿಲ್ಲ; ಅದನ್ನು ಬಿಡು, ನಮ್ಮ ಸ್ವಂತ ದೇಶಗಳಿಗೆ ಹೋಗೋಣ; ಅದರ ನ್ಯಾಯ ತೀರ್ವಿಕೆಯು ಆಕಾಶಗಳಿಗೆ ಮುಟ್ಟುತ್ತದೆ; ಆಕಾಶಗಳ ವರೆಗೂ ಏಳುತ್ತದೆ.
- Jeremiah 51:50 ಯೆರೆಮೀಯ 51:50ಕತ್ತಿಗೆ ತಪ್ಪಿಸಿಕೊಂಡವರೇ, ನಡೆಯಿರಿ, ನಿಲ್ಲಬೇಡಿರಿ; ದೂರದಲ್ಲಿ ಕರ್ತನನ್ನು ಜ್ಞಾಪಕಮಾಡಿ ಕೊಳ್ಳಿರಿ, ಯೆರೂಸಲೇಮು ನಿಮ್ಮ ಮನಸ್ಸಿಗೆ ಬರಲಿ.
- Zechariah 2:7 ಜೆಕರ್ಯ 2:7ಓ ಚೀಯೋನೇ, ಬಾಬೆಲಿನ ಮಗಳ ಬಳಿಯಲ್ಲಿ ವಾಸವಾಗಿರುವವಳೇ, ತಪ್ಪಿಸಿಕೋ.