Jeremiah · chapter 51 · verse 50
Jeremiah 51:50 in Kannada
ಕತ್ತಿಗೆ ತಪ್ಪಿಸಿಕೊಂಡವರೇ, ನಡೆಯಿರಿ, ನಿಲ್ಲಬೇಡಿರಿ; ದೂರದಲ್ಲಿ ಕರ್ತನನ್ನು ಜ್ಞಾಪಕಮಾಡಿ ಕೊಳ್ಳಿರಿ, ಯೆರೂಸಲೇಮು ನಿಮ್ಮ ಮನಸ್ಸಿಗೆ ಬರಲಿ.
Kattige tappisikondavare, nadeyiri, nillabediri; dooradalli kartanannu jnyaapakamaadi kolliri, yeroosalemu nimma manassige barali.
Jeremiah 51:50 in English
- King James Version (KJV)
- Ye that have escaped the sword, go away, stand not still: remember the LORD afar off, and let Jerusalem come into your mind.
- World English Bible (WEB)
- You who have escaped the sword, go! Don’t stand still! Remember the LORD from afar, and let Jerusalem come into your mind.”
- American Standard Version (ASV)
- Ye that have escaped the sword, go ye, stand not still; remember Jehovah from afar, and let Jerusalem come into your mind.
- Bible in Basic English (BBE)
- You who have got away safe from the sword, go, waiting for nothing; have the Lord in memory when you are far away, and keep Jerusalem in mind.
- Darby Translation (DBY)
- Ye that have escaped the sword, go, stand not still: remember Jehovah from afar, and let Jerusalem come into your mind.
- Webster's Bible (WBS)
- Ye that have escaped the sword, go away, stand not still: remember the LORD afar off, and let Jerusalem come into your mind.
- Young's Literal Translation (YLT)
- Ye escaped of the sword, go on, stand not, Remember ye from afar Jehovah, And let Jerusalem come up on your heart.
Read in context
- 48ಆಗ ಆಕಾಶವೂ ಭೂಮಿಯೂ ಅವುಗಳಲ್ಲಿರುವ ಸಮಸ್ತವೂ ಬಾಬೆಲಿನ ವಿಷಯವಾಗಿ ಹಾಡುವೆವು. ಸೂರೆ ಮಾಡುವವರು ಉತ್ತರದಿಂದ ಅದಕ್ಕೆ ವಿರೋಧ ವಾಗಿ ಬರುವರೆಂದು ಕರ್ತನು ಅನ್ನುತ್ತಾನೆ.
- 49ಬಾಬೆಲು ಇಸ್ರಾಯೇಲಿನ ಕೊಲ್ಲಲ್ಪಟ್ಟವರನ್ನು ಬೀಳಿಸಿದ ಹಾಗೆ ಬಾಬೆಲಿನ ಸಮಸ್ತ ದೇಶದಲ್ಲಿ ಕೊಲ್ಲಲ್ಪಟ್ಟವರು ಬೀಳು ವರು.
- 50ಕತ್ತಿಗೆ ತಪ್ಪಿಸಿಕೊಂಡವರೇ, ನಡೆಯಿರಿ, ನಿಲ್ಲಬೇಡಿರಿ; ದೂರದಲ್ಲಿ ಕರ್ತನನ್ನು ಜ್ಞಾಪಕಮಾಡಿ ಕೊಳ್ಳಿರಿ, ಯೆರೂಸಲೇಮು ನಿಮ್ಮ ಮನಸ್ಸಿಗೆ ಬರಲಿ.
- 51ನಾಚಿಕೆಪಡುತ್ತೇವೆ, ನಿಂದೆಯನ್ನು ಕೇಳಿದ್ದೇವೆ; ಅವಮಾನ ನಮ್ಮ ಮುಖಗಳನ್ನು ಮುಚ್ಚಿದೆ; ಅನ್ಯರು ಕರ್ತನ ಆಲಯದ ಪರಿಶುದ್ಧ ಸ್ಥಳಗಳಲ್ಲಿ ಬಂದಿದ್ದಾರೆ.
- 52ಆದದರಿಂದ ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಅವಳ ಕೆತ್ತಿದ ವಿಗ್ರಹಗಳಿಗೆ ನ್ಯಾಯತೀರಿಸುತ್ತೇನೆ. ಅವಳ ದೇಶದಲ್ಲೆಲ್ಲಾ ಗಾಯಪಟ್ಟವರು ನರಳುವರು.
Cross references
- Jeremiah 44:28 ಯೆರೆಮೀಯ 44:28ಆದರೆ ಕತ್ತಿಗೆ ತಪ್ಪಿಸಿಕೊಂಡು ಸ್ವಲ್ಪ ಜನರು ಐಗುಪ್ತದೇಶದೊಳಗಿಂದ ಯೆಹೂದ ದೇಶಕ್ಕೆ ಹಿಂತಿರುಗಿ ಹೋಗುವರು; ಆಗ ಐಗುಪ್ತ ದೇಶದಲ್ಲಿ ತಂಗುವದಕ್ಕೆ ಬಂದಿರುವ ಯೆಹೂದದ ಉಳಿದವರೆಲ್ಲಾ ನನ್ನ ಮಾತು ನಿಲ್ಲುವದೋ ಅವರ ಮಾತು ನಿಲ್ಲುವದೋ ಎಂಬದನ್ನು ತಿಳಿದುಕೊಳ್ಳುವರು.
- Psalm 122:6 ಕೀರ್ತನೆಗಳು 122:6ಯೆರೂಸಲೇಮಿನ ಸಮಾಧಾನಕ್ಕಾಗಿ ಪ್ರಾರ್ಥಿಸಿರಿ. ಯೆರೂಸಲೇಮನ್ನು ಪ್ರೀತಿಮಾಡುವವರು ಅಭಿವೃದ್ಧಿ ಯಾಗುವರು.
- Revelation 18:4 ಪ್ರಕಟನೆ 18:4ಪರಲೋಕದಿಂದ ಮತ್ತೊಂದು ಶಬ್ದವನ್ನು ನಾನು ಕೇಳಿದೆನು; ಅದು--ನನ್ನ ಜನರೇ, ಅವಳಿಂದ ಹೊರಗೆ ಬನ್ನಿರಿ; ನೀವು ಅವಳ ಪಾಪಗಳಲ್ಲಿ ಪಾಲುಗಾರರಾಗ ಬಾರದು; ಅವಳಿಗಾಗುವ ಉಪದ್ರವಗಳಿಗೆ ಗುರಿ ಯಾಗಬಾರದು.
- Jeremiah 51:45 ಯೆರೆಮೀಯ 51:45ನನ್ನ ಜನರೇ, ಅದರೊಳಗಿಂದ ಹೊರಡಿರಿ; ಪ್ರತಿಯೊಬ್ಬನೂ ತನ್ನ ತನ್ನ ಪ್ರಾಣವನ್ನು ಕರ್ತನ ಕೋಪದ ಉರಿಗೆ ತಪ್ಪಿಸಿರಿ.
- Ezra 1:3–5 ಎಜ್ರನು 1:3–5ಆತನ ಸಮಸ್ತ ಜನರಾದ ನಿಮ್ಮೊಳಗೆ ಯಾರಿದ್ದೀರಿ? ಅವನ ಸಂಗಡ ಅವನ ದೇವರು ಇರಲಿ. ಅವನು ಯೆಹೂದದಲ್ಲಿ ರುವ ಯೆರೂಸಲೇಮಿಗೆ ಹೋಗಲಿ. ಯೆರೂಸಲೇಮಿನಲ್ಲಿರುವ ಇಸ್ರಾಯೇಲಿನ ದೇವರಾದ ಕರ್ತನ ಆಲಯವನ್ನು ಕಟ್ಟಲಿ (ಆತನೇ ದೇವರು). ಇದಲ್ಲದೆ ಯಾವ ಸ್ಥಳದಲ್ಲಾದರೂ ಯಾವನಾದರೂ ಪರದೇಶಸ್ಥ ನಾಗಿ ಉಳಿದಿದ್ದರೆ ಅವನ ಸ್ಥಳದ ಮನುಷ್ಯರು ಯೆರೂ ಸಲೇಮಿನಲ್ಲಿರುವ ದೇವರ ಆಲಯಕ್ಕೆ ಕೊಡುವ ಉಚಿತವಾದ ಕಾಣಿಕೆ ಅಲ್ಲದೆ ಅವನಿಗೆ ಬೆಳ್ಳಿಯಿಂದ ಲೂ ಬಂಗಾರದಿಂದಲೂ ವಸ್ತುಗಳಿಂದಲೂ ಪಶುಗ ಳಿಂದಲೂ ಸಹಾಯಮಾಡಲಿ ಅಂದನು. ಆಗ ಯೆಹೂದ, ಬೆನ್ಯಾವಿಾನ್ ತಂದೆಗಳ ಮುಖ್ಯ ಸ್ಥರೂ ಯಾಜಕರೂ ಲೇವಿಯರೂ ಯೆರೂಸಲೇಮಿನ ಲ್ಲಿರುವ ಕರ್ತನ ಆಲಯವನ್ನು ಕಟ್ಟುವದಕ್ಕೆ ಹೋಗಲು ಕರ್ತನಿಂದ ಪ್ರೇರೇಪಿಸಲ್ಪಟ್ಟವರೆಲ್ಲರೂ ಎದ್ದರು.
- Daniel 9:2–3 ದಾನಿಯೇಲನು 9:2–3ಅವನ ಆಳಿಕೆಯ ಮೊದಲನೆಯ ವರುಷದಲ್ಲಿ ದಾನಿಯೇಲನಾದ ನಾನು ಕರ್ತನು ತನ್ನ ವಾಕ್ಯವನ್ನು ಪ್ರವಾದಿಯಾದ ಯೆರೆವಿಾಯನಿಗೆ ದಯಪಾಲಿಸಿದ ಹಾಗೆ ತಾನು ಯೆರೂಸಲೇಮಿಗೆ ಹಾಳು ಬೀಳುವಿಕೆಗಳಲ್ಲಿ ಎಪ್ಪತ್ತು ವರುಷಗಳನ್ನು ಸಂಪೂರ್ಣಮಾಡುವ ಹಾಗೆ ವರುಷಗಳ ಲೆಕ್ಕವನ್ನು ಪುಸ್ತಕದಿಂದ ತಿಳಿದುಕೊಂಡೆನು. ಉಪವಾಸದಿಂದ ಗೋಣಿತಟ್ಟನ್ನು ಸುತ್ತಿಕೊಂಡು, ಬೂದಿಯನ್ನು ಬಳಿದು ಕೊಂಡು, ದೇವರಾದ ಕರ್ತನನ್ನು ಹುಡುಕುವದಕ್ಕಾಗಿ ಪ್ರಾರ್ಥನೆಗಳಿಂದಲೂ ವಿಜ್ಞಾಪನೆ ಗಳಿಂದಲೂ ಆತನ ಕಡೆಗೆ ನನ್ನ ಮುಖವನ್ನು ತಿರುಗಿ ಸಿದೆನು.
- Isaiah 51:11 ಯೆಶಾಯ 51:11ಆದಕಾರಣ ಕರ್ತನಿಂದ ವಿಮೋಚಿ ಸಲ್ಪಟ್ಟವರು ತಿರುಗಿಕೊಂಡು ಹಾಡುತ್ತಾ ಚೀಯೋನಿಗೆ ಬರುವರು; ಶಾಶ್ವತವಾದ ಆನಂದವು ಅವರ ತಲೆಯ ಮೇಲಿರುವದು, ಅವರು ಹರ್ಷಾನಂದಗಳನ್ನು ಹೊಂದಿಕೊಳ್ಳುವರು; ದುಃಖವು, ವ್ಯಥೆಯು ಓಡಿ ಹೋಗುವವು.
- Isaiah 52:11–12 ಯೆಶಾಯ 52:11–12ಹೊರಡಿರಿ, ಹೊರಡಿರಿ, ಅಲ್ಲಿಂದ ಹೊರಗೆ ಹೋಗಿರಿ, ಅಶುದ್ಧವಾದದ್ದನ್ನು ಮುಟ್ಟಬೇಡಿರಿ; ಅವಳ ಮಧ್ಯದಿಂದ ಹೊರಗೆ ಹೋಗಿರಿ; ಕರ್ತನ ಪಾತ್ರೆಗ ಳನ್ನು ಹೊರುವವರೇ, ನೀವು ಶುದ್ಧರಾಗಿರ್ರಿ. ನೀವು ತ್ವರೆಯಾಗಿ ಹೋಗುವದಿಲ್ಲ; ಇಲ್ಲವೆ ಹಾರುವದ ರಿಂದಲೂ ಹೋಗುವದಿಲ್ಲ; ಯಾಕಂದರೆ ಕರ್ತನೇ ನಿಮ್ಮ ಮುಂದೆ ಹೋಗುವನು; ಇಸ್ರಾಯೇಲಿನ ದೇವರು ನಿಮ್ಮ ಬಹುಮಾನವಾಗಿರುವನು.
- Zechariah 2:7–9 ಜೆಕರ್ಯ 2:7–9ಓ ಚೀಯೋನೇ, ಬಾಬೆಲಿನ ಮಗಳ ಬಳಿಯಲ್ಲಿ ವಾಸವಾಗಿರುವವಳೇ, ತಪ್ಪಿಸಿಕೋ. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮನ್ನು ಸುಲುಕೊಂಡ ಜನಾಂಗ ಗಳ ಬಳಿಗೆ ಮಹಿಮೆಯ ತರುವಾಯ ನನ್ನನ್ನು ಆತನು ಕಳುಹಿಸಿದ್ದಾನೆ; ನಿಮ್ಮನ್ನು ಮುಟ್ಟುವವನು ಆತನ ಕಣ್ಣುಗುಡ್ಡೆಯನ್ನು ತಾಕುವವನಾಗಿದ್ದಾನೆ. ಇಗೋ, ನಾನು ನನ್ನ ಕೈಯನ್ನು ಅವರ ಮೇಲೆ ಜಾಡಿಸುತ್ತೇನೆ; ಆಗ ಅವರು ತಮ್ಮ ದಾಸರಿಗೆ ಕೊಳ್ಳೆಯಾಗುವರು; ಸೈನ್ಯಗಳ ಕರ್ತನು ನನ್ನನ್ನು ಕಳುಹಿಸಿದನೆಂದು ನೀವು ತಿಳಿಯುವಿರಿ.
- Deuteronomy 30:1–4 ಧರ್ಮೋಪದೇಶಕಾಂಡ 30:1–4ಇದಲ್ಲದೆ ನಾನು ನಿನ್ನ ಮುಂದೆ ಇಟ್ಟ ಈ ಎಲ್ಲಾ ಆಶೀರ್ವಾದವೂ ಶಾಪವೂ ನಿನಗೆ ಸಂಭವಿಸಿದ ಮೇಲೆ ನಾನು ಈಹೊತ್ತು ನಿನಗೆ ಆಜ್ಞಾಪಿಸುವದೆಲ್ಲಾದರಲ್ಲಿ ನಿನ್ನ ದೇವರಾದ ಕರ್ತನು ನಿನ್ನನ್ನು ತಳ್ಳಿಬಿಟ್ಟ ಎಲ್ಲಾ ಜನಾಂಗಗಳ ಮಧ್ಯದಲ್ಲಿ ನೀನು ನೆನಪುಮಾಡಿ ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊಂಡು ನೀನೂ ನಿನ್ನ ಮಕ್ಕಳೂ-- ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣ ಪ್ರಾಣದಿಂದಲೂ ಆತನ ಮಾತಿಗೆ ವಿಧೇಯರಾದರೆ ನಿನ್ನ ದೇವರಾದ ಕರ್ತನು ನಿನ್ನನ್ನು ಸೆರೆಯಿಂದ ಬಿಡಿಸಿ ನಿನ್ನ ಮೇಲೆ ಅಂತಃಕರಣಪಟ್ಟು ತಿರುಗಿಕೊಂಡು ನಿನ್ನನ್ನು ಚದುರಿಸಿದ ಎಲ್ಲಾ ಜನಾಂಗಗಳೊಳಗಿಂದ ನಿನ್ನನ್ನು ಕೂಡಿಸುವನು. ಆಕಾಶದ ಅಂತ್ಯದಲ್ಲಿ ನಿನ್ನವರು ಹೊರ ಡಿಸಲ್ಪಟ್ಟಿದ್ದರೂ ಅಲ್ಲಿಂದ ದೇವರಾದ ಕರ್ತನು ನಿನ್ನನ್ನು ಕೂಡಿಸಿ ಅಲ್ಲಿಂದ ನಿನ್ನನ್ನು ಕರತರುವನು.
- Jeremiah 51:6 ಯೆರೆಮೀಯ 51:6ಬಾಬೆಲಿನೊಳಗಿಂದ ಓಡಿಹೋಗಿರಿ, ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳಲಿ; ಅದರ ಅಕ್ರಮದಲ್ಲಿ ನಾಶವಾಗ ಬೇಡಿರಿ; ಇದು ಕರ್ತನ ಪ್ರತಿದಂಡನೆಯ ಕಾಲವು; ಆತನೇ ಅದಕ್ಕೆ ಮುಯ್ಯಿಗೆಮುಯ್ಯಿ ಕೊಡುತ್ತಾನೆ.
- Jeremiah 50:8 ಯೆರೆಮೀಯ 50:8ಬಾಬೆಲಿನೊಳ ಗಿಂದ ಓಡಿಹೋಗಿರಿ; ಕಸ್ದೀಯರ ದೇಶದಿಂದ ಹೊರ ಡಿರಿ, ಮಂದೆಯ ಮುಂದೆ ಹೋತಗಳ ಹಾಗೆ ಇರ್ರಿ.