Jeremiah · chapter 51 · verse 51
Jeremiah 51:51 in Kannada
ನಾಚಿಕೆಪಡುತ್ತೇವೆ, ನಿಂದೆಯನ್ನು ಕೇಳಿದ್ದೇವೆ; ಅವಮಾನ ನಮ್ಮ ಮುಖಗಳನ್ನು ಮುಚ್ಚಿದೆ; ಅನ್ಯರು ಕರ್ತನ ಆಲಯದ ಪರಿಶುದ್ಧ ಸ್ಥಳಗಳಲ್ಲಿ ಬಂದಿದ್ದಾರೆ.
Naachikepadutteve, nindeyannu keliddeve; avamaana namma mukhagalannu muchchide; anyaru kartana aalayada parishuddha sthalagalalli bandiddaare.
Jeremiah 51:51 in English
- King James Version (KJV)
- We are confounded, because we have heard reproach: shame hath covered our faces: for strangers are come into the sanctuaries of the LORD’s house.
- World English Bible (WEB)
- “We are confounded because we have heard reproach. Confusion has covered our faces, for strangers have come into the sanctuaries of the LORD’s house.”
- American Standard Version (ASV)
- We are confounded, because we have heard reproach; confusion hath covered our faces: for strangers are come into the sanctuaries of Jehovah’s house.
- Bible in Basic English (BBE)
- We are shamed because bitter words have come to our ears; our faces are covered with shame: for men from strange lands have come into the holy places of the Lord's house.
- Darby Translation (DBY)
- — We are put to shame, for we have heard reproach; confusion hath covered our face: for strangers are come into the sanctuaries of Jehovah's house.
- Webster's Bible (WBS)
- We are confounded, because we have heard reproach: shame hath covered our faces: for strangers are come into the sanctuaries of the LORD'S house.
- Young's Literal Translation (YLT)
- We have been ashamed, for we heard reproach, Covered hath shame our faces, For come in have strangers, against the sanctuaries of the house of Jehovah.
Read in context
- 49ಬಾಬೆಲು ಇಸ್ರಾಯೇಲಿನ ಕೊಲ್ಲಲ್ಪಟ್ಟವರನ್ನು ಬೀಳಿಸಿದ ಹಾಗೆ ಬಾಬೆಲಿನ ಸಮಸ್ತ ದೇಶದಲ್ಲಿ ಕೊಲ್ಲಲ್ಪಟ್ಟವರು ಬೀಳು ವರು.
- 50ಕತ್ತಿಗೆ ತಪ್ಪಿಸಿಕೊಂಡವರೇ, ನಡೆಯಿರಿ, ನಿಲ್ಲಬೇಡಿರಿ; ದೂರದಲ್ಲಿ ಕರ್ತನನ್ನು ಜ್ಞಾಪಕಮಾಡಿ ಕೊಳ್ಳಿರಿ, ಯೆರೂಸಲೇಮು ನಿಮ್ಮ ಮನಸ್ಸಿಗೆ ಬರಲಿ.
- 51ನಾಚಿಕೆಪಡುತ್ತೇವೆ, ನಿಂದೆಯನ್ನು ಕೇಳಿದ್ದೇವೆ; ಅವಮಾನ ನಮ್ಮ ಮುಖಗಳನ್ನು ಮುಚ್ಚಿದೆ; ಅನ್ಯರು ಕರ್ತನ ಆಲಯದ ಪರಿಶುದ್ಧ ಸ್ಥಳಗಳಲ್ಲಿ ಬಂದಿದ್ದಾರೆ.
- 52ಆದದರಿಂದ ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಅವಳ ಕೆತ್ತಿದ ವಿಗ್ರಹಗಳಿಗೆ ನ್ಯಾಯತೀರಿಸುತ್ತೇನೆ. ಅವಳ ದೇಶದಲ್ಲೆಲ್ಲಾ ಗಾಯಪಟ್ಟವರು ನರಳುವರು.
- 53ಬಾಬೆಲ್ ಆಕಾಶಕ್ಕೆ ಏರಿದರೂ ಅದರ ಬಲದ ಉನ್ನತ ಸ್ಥಾನವನ್ನು ಭದ್ರಮಾಡಿದರೂ ಸೂರೆಮಾಡು ವವರು ನನ್ನಿಂದ ಅವಳಿಗೆ ವಿರೋಧವಾಗಿ ಬರುವರೆಂದು ಕರ್ತನು ಅನ್ನುತ್ತಾನೆ.
Cross references
- Lamentations 1:10 ಪ್ರಲಾಪಗಳು 1:10ವೈರಿಯು ಆಕೆಯ ಎಲ್ಲಾ ರಮ್ಯವಾದ ವಸ್ತುಗಳ ಮೇಲೆ ತನ್ನ ಕೈ ಚಾಚಿದ್ದಾನೆ. ನಿನ್ನ ಸಭೆಯಲ್ಲಿ ಸೇರ ಬಾರದೆಂದು ನೀನು ಆಜ್ಞಾಪಿಸಿದ ಅನ್ಯ ಜನಾಂಗಗಳು ತನ್ನ ಪರಿಶುದ್ಧ ಸ್ಥಳದಲ್ಲಿ ಸೇರಿರುವದನ್ನು ನೋಡಿದ್ದಾಳೆ.
- Psalm 79:4 ಕೀರ್ತನೆಗಳು 79:4ನಮ್ಮ ನೆರೆಯವರಿಗೆ ನಿಂದೆಯೂ ನಮ್ಮ ಸುತ್ತಲಿರುವವರಿಗೆ ಗೇಲಿಯೂ ಹಾಸ್ಯವೂ ಆಗಿದ್ದೇವೆ.
- Psalm 44:13–16 ಕೀರ್ತನೆಗಳು 44:13–16ನಮ್ಮ ನೆರೆಯವರಿಗೆ ನಮ್ಮನ್ನು ನಿಂದೆಗೂ ಸುತ್ತಲಿರುವವರಿಗೆ ಗೇಲಿಯಾಗಿಯೂ ಹಾಸ್ಯವಾಗಿಯೂ ನಮ್ಮನ್ನು ಇಡುತ್ತೀ. ಅನ್ಯಜನಾಂಗಗಳಲ್ಲಿ ಗಾದೆಯಾಗಿಯೂ ಪ್ರಜೆಗಳಲ್ಲಿ ತಲೆಯಾಡಿಸುವಂತೆ ನಮ್ಮನ್ನು ಇಡುತ್ತೀ. ನಿಂದಕನ ಮತ್ತು ದೂಷಕನ ಸ್ವರಕ್ಕೋಸ್ಕರವೂ ಶತ್ರುವಿನ ಮುಯ್ಯಿಗೆಮುಯ್ಯಿ ಕೊಡುವವನ ನಿಮಿ ತ್ತವೂ ದಿನವೆಲ್ಲಾ ನನ್ನ ಗಲಿಬಿಲಿಯು ನನ್ನ ಮುಂದೆ ಇದೆ; ನನ್ನ ಮುಖದ ನಾಚಿಕೆಯು ನನ್ನನ್ನು ಮುಚ್ಚಿಯದೆ.
- Psalm 74:3–7 ಕೀರ್ತನೆಗಳು 74:3–7ನಿನ್ನ ಪಾದಗಳನ್ನು ಸದಾಕಾಲದ ನಾಶನಗಳಿಗೆ, ಅಂದರೆ ಶತ್ರುವು ಪರಿಶುದ್ಧ ಸ್ಥಳದಲ್ಲಿ ಎಲ್ಲವನ್ನು ಕೆಟ್ಟತನದಿಂದ ಮಾಡಿದ್ದಕ್ಕೆ ತಿರುಗಿಸು. ನಿನ್ನ ವೈರಿಗಳು ನಿನ್ನ ಸಭೆಗಳ ಮಧ್ಯದಲ್ಲಿ ಗರ್ಜಿಸುತ್ತಾರೆ; ತಮ್ಮ ಧ್ವಜಗಳನ್ನು ಗುರುತುಗಳಾಗಿ ಇಟ್ಟಿದ್ದಾರೆ. ದಟ್ಟವಾದ ಮರಗಳಲ್ಲಿ ಕೊಡಲಿ ಎತ್ತುವವನ ಹಾಗೆ ಮನುಷ್ಯನು ಪ್ರಸಿದ್ಧನಾಗಿದ್ದಾನೆ; ಆದರೆ ಈಗ ಕೆತ್ತನೆ ಕೆಲಸವನ್ನು ತಕ್ಷಣ ಕೊಡಲಿಯಿಂದಲೂ ಸುತ್ತಿಗೆ ಯಿಂದಲೂ ಅವರು ಹೊಡೆದು ಬಿಡುತ್ತಾರೆ. ನಿನ್ನ ಪರಿಶುದ್ಧ ಆಲಯದಲ್ಲಿ ಬೆಂಕಿ ಹಚ್ಚುತ್ತಾರೆ; ನಿನ್ನ ಹೆಸರಿನ ನಿವಾಸವನ್ನು ಭೂಮಿಗೆ ಕೆಡವಿ ಹೊಲೆ ಮಾಡುತ್ತಾರೆ.
- Daniel 8:11–14 ದಾನಿಯೇಲನು 8:11–14ಹೌದು, ಸೈನ್ಯದ ಅಧಿಪತಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡು ನಿತ್ಯ ಯಜ್ಞವನ್ನು ಆತನಿಗೆ ಸಲ್ಲದಂತೆ ಮಾಡಿ ಆತನ ಪವಿತ್ರ ಸ್ಥಾನವನ್ನು ಕೆಡವಿಹಾಕಿತು; ಪ್ರತಿದಿನ ಯಜ್ಞದ ಸಂಗಡ ಸೈನ್ಯವೂ ಸಹ ಅಪ ರಾಧದ ನಿಮಿತ್ತವಾಗಿ ಅದಕ್ಕೆ ಕೊಡಲ್ಪಟ್ಟಿತು. ಅದು ಸತ್ಯವನ್ನು ನೆಲಕ್ಕೆ ಕೆಡವಿ ತನ್ನ ಇಷ್ಟಾರ್ಥವನ್ನು ಪೂರೈಸಿ ಕೊಂಡು ಅನುಕೂಲ ಪಡೆದು ವೃದ್ಧಿಗೆ ಬಂದಿತು. ಆ ಮೇಲೆ ಒಬ್ಬ ಪರಿಶುದ್ಧನು ಮಾತನಾಡುವದನ್ನು ಕೇಳಿದೆನು; ಮಾತನಾಡಿದಾತನಿಗೆ ಮತ್ತೊಬ್ಬ ಪರಿ ಶುದ್ಧನು ಹೇಳಿದ್ದೇನಂದರೆ--ನಿತ್ಯ ಯಜ್ಞವನ್ನು ನಿಲ್ಲಿಸು ವದೂ ಹಾಳು ಮಾಡುವ ಅಪರಾಧವನ್ನು ತಡೆಯು ವದೂ ಪರಿಶುದ್ಧ ಸ್ಥಳವನ್ನೂ ಸೈನ್ಯವನ್ನೂ ಕಾಲಡಿಯಲ್ಲಿ ತುಳಿಯುವದೂ ಆಗುವಂತೆ ಕನಸು ಎಷ್ಟು ಕಾಲ ನಿಲ್ಲುವದು ಅಂದಾಗ ಅವನು ನನಗೆ--ಎರಡು ಸಾವಿರದ ಮುನ್ನೂರು ದಿನಗಳ ವರೆಗೂ ನಡೆಯುವವು; ಅನಂತರ ಪರಿಶುದ್ಧ ಸ್ಥಳವು ಶುದ್ಧೀಕರಿಸಲ್ಪಡುವದು ಎಂದು ಹೇಳಿದನು.
- Jeremiah 14:3 ಯೆರೆಮೀಯ 14:3ಅವರ ಶ್ರೇಷ್ಠರು ತಮ್ಮ ಚಿಕ್ಕವರನ್ನು ನೀರಿಗೆ ಕಳುಹಿಸುತ್ತಾರೆ; ಇವರು ಬಾವಿಗಳಿಗೆ ಬರುತ್ತಾರೆ; ಆದರೆ ನೀರು ಸಿಕ್ಕಲಿಲ್ಲ; ಬರೀ ಪಾತ್ರೆಗಳುಳ್ಳ ವರಾಗಿ ತಿರುಗಿಕೊಳ್ಳುತ್ತಾರೆ; ಅವರು ನಾಚಿಕೆಪಟ್ಟು ದಿಗ್ಭ್ರಮೆಗೊಂಡವರಾಗಿ ತಮ್ಮ ತಲೆಗಳನ್ನು ಮುಚ್ಚಿ ಕೊಂಡರು.
- Psalm 79:1 ಕೀರ್ತನೆಗಳು 79:1ದೇವರೇ, ಅನ್ಯಜನಾಂಗಗಳು ನಿನ್ನ ಬಾಧ್ಯತೆಯೊಳಗೆ ಬಂದು, ನಿನ್ನ ಪರಿಶುದ್ಧ ಮಂದಿರವನ್ನು ಅಪವಿತ್ರ ಮಾಡಿ, ಯೆರೂಸಲೇಮನ್ನು ಹಾಳು ದಿಬ್ಬಗಳಾಗಿ ಮಾಡಿದ್ದಾರೆ.
- Psalm 74:18–21 ಕೀರ್ತನೆಗಳು 74:18–21ಓ ಕರ್ತನೇ, ವೈರಿಯು ನಿಂದಿಸಿ ಮೂರ್ಖರು ನಿನ್ನ ನಾಮವನ್ನು ದೂಷಿಸಿದ್ದನ್ನು ಜ್ಞಾಪಿಸಿಕೋ. ನಿನ್ನ ಬೆಳವಕ್ಕಿಯ ಪ್ರಾಣವನ್ನು ದುಷ್ಟರ ಸಮೂ ಹಕ್ಕೆ ಒಪ್ಪಿಸ ಬೇಡ; ನಿನ್ನ ದೀನರ ಸಭೆಯನ್ನು ಸದಾ ಕಾಲಕ್ಕೆ ಮರೆತುಬಿಡಬೇಡ. ಒಡಂಬಡಿಕೆಗೆ ಗೌರ ವವನ್ನು ಕೊಡು; ಭೂಮಿಯ ಕತ್ತಲಿನ ಸ್ಥಳಗಳು ಕ್ರೂರತನದ ನಿವಾಸಗಳಿಂದ ತುಂಬಿಯವೆ. ಕುಗ್ಗಿ ದವನು ಅವಮಾನಕ್ಕೆ ತಿರಿಗಿಕೊಳ್ಳದೆ ಇರಲಿ; ದೀನನೂ ಬಡವನೂ ನಿನ್ನ ಹೆಸರನ್ನು ಸ್ತುತಿಸಲಿ.
- Daniel 11:31 ದಾನಿಯೇಲನು 11:31ಅವನು ಕೂಡಿಸುವ ಸೈನ್ಯವು ಆಶ್ರಯ ದುರ್ಗವಾದ ಪವಿತ್ರಾಲಯವನ್ನು ಹೊಲೆಗೆಡಿಸಿ, ನಿತ್ಯ ಯಜ್ಞವನ್ನು ನೀಗಿಸಿ, ಹಾಳು ಮಾಡುವ ಅಸಹ್ಯವಾದವುಗಳನ್ನು ಪ್ರತಿಷ್ಠಿಸುವದು.
- Psalm 109:29 ಕೀರ್ತನೆಗಳು 109:29ನನ್ನ ಎದುರಾಳಿಗಳು ಅವಮಾನವನ್ನು ಹೊದ್ದುಕೊಂಡು ತಮ್ಮ ನಾಚಿಕೆಯನ್ನು ಹೊದಿಕೆಯಂತೆ ತೊಟ್ಟುಕೊಳ್ಳಲಿ.
- Jeremiah 3:22–25 ಯೆರೆಮೀಯ 3:22–25ಹಿಂಜರಿದ ಮಕ್ಕಳೇ, ನೀವು ತಿರುಗಿಕೊಳ್ಳಿರಿ; ನಿಮ್ಮ ಹಿಂಜರಿಯುವಿಕೆಯನ್ನು ನಾನು ಸ್ವಸ್ಥಮಾಡುವೆನು ಎಂದು ಕರ್ತನು ಅನ್ನುತ್ತಾನೆ. ಇಗೋ, ನಿನ್ನ ಬಳಿಗೆ ಬರುತ್ತೇವೆ; ನೀನು ದೇವರಾದ ನಮ್ಮ ಕರ್ತನಾಗಿದ್ದೀ. ನಿಶ್ಚಯವಾಗಿ ಗುಡ್ಡಗಳಿಂದಲೂ ಬೆಟ್ಟಗಳ ಸಮೂ ಹದಿಂದಲೂ ರಕ್ಷಣೆ ವ್ಯರ್ಥವಾಗಿದೆ; ನಿಶ್ಚಯವಾಗಿ ಇಸ್ರಾಯೇಲಿನ ರಕ್ಷಣೆಯು ನಮ್ಮ ದೇವರಾದ ಕರ್ತನಲ್ಲಿಯೇ ಇದೆ. ನಾಚಿಕೆಯಾದದ್ದು ನಮ್ಮ ಯೌವನದಾರಭ್ಯ ನಮ್ಮ ತಂದೆಗಳ ಕಷ್ಟವನ್ನೂ ಅವರ ಕುರಿಗಳನ್ನೂ ದನಗಳನ್ನೂ ಕುಮಾರರನ್ನೂ, ಕುಮಾ ರ್ತೆಯರನ್ನೂ ತಿಂದುಬಿಟ್ಟಿದೆ.ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ; ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ; ನಾವೂ ನಮ್ಮ ತಂದೆಗಳೂ ನಮ್ಮ ಯೌವನದಾರಭ್ಯ ಇಂದಿನವರೆಗೂ ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ನಮ್ಮ ದೇವ ರಾದ ಕರ್ತನ ಸ್ವರಕ್ಕೆ ಕಿವಿಗೊಡಲಿಲ್ಲ. ನಮ್ಮ ನಾಚಿಕೆಯಲ್ಲಿ ಮಲಗಿಕೊಳ್ಳುತ್ತೇವೆ; ನಮ್ಮ ಗಲಭೆ ನಮ್ಮನ್ನು ಮುಚ್ಚಿಕೊಳ್ಳುತ್ತದೆ; ನಾವೂ ನಮ್ಮ ತಂದೆಗಳೂ ನಮ್ಮ ಯೌವನದಾರಭ್ಯ ಇಂದಿನವರೆಗೂ ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಪಾಪಮಾಡಿ ನಮ್ಮ ದೇವ ರಾದ ಕರ್ತನ ಸ್ವರಕ್ಕೆ ಕಿವಿಗೊಡಲಿಲ್ಲ.
- Ezekiel 36:30 ಯೆಹೆಜ್ಕೇಲನು 36:30ಅನ್ಯಜನಾಂಗ ಗಳಲ್ಲಿ ನಿಮಗೆ ಬರಗಾಲದ ನಿಂದೆಯು ಇನ್ನು ಮೇಲೆ ಬಾರದ ಹಾಗೆ ನಾನು ಮರಗಳ ಫಲವನ್ನೂ ಹೊಲದ ಆದಾಯವನ್ನು ಹೆಚ್ಚಿಸುವೆನು.