Jeremiah · chapter 51 · verse 53
Jeremiah 51:53 in Kannada
ಬಾಬೆಲ್ ಆಕಾಶಕ್ಕೆ ಏರಿದರೂ ಅದರ ಬಲದ ಉನ್ನತ ಸ್ಥಾನವನ್ನು ಭದ್ರಮಾಡಿದರೂ ಸೂರೆಮಾಡು ವವರು ನನ್ನಿಂದ ಅವಳಿಗೆ ವಿರೋಧವಾಗಿ ಬರುವರೆಂದು ಕರ್ತನು ಅನ್ನುತ್ತಾನೆ.
Baabel aakaashakke eridaroo adara balada unnata sthaanavannu bhadramaadidaroo sooremaadu vavaru nanninda avalige virodhavaagi baruvarendu kartanu annuttaane.
Jeremiah 51:53 in English
- King James Version (KJV)
- Though Babylon should mount up to heaven, and though she should fortify the height of her strength, [ yet] from me shall spoilers come unto her, saith the LORD.
- World English Bible (WEB)
- Though Babylon should mount up to the sky, and though she should fortify the height of her strength, yet destroyers will come to her from me,” says the LORD.
- American Standard Version (ASV)
- Though Babylon should mount up to heaven, and though she should fortify the height of her strength, yet from me shall destroyers come unto her, saith Jehovah.
- Bible in Basic English (BBE)
- Even if Babylon was lifted up to heaven, even if she had the high places of her strength shut in with walls, still I would send against her those who will make her waste, says the Lord.
- Darby Translation (DBY)
- Though Babylon should mount up to the heavens, and though she should fortify the height of her strength, yet from me shall spoilers come unto her, saith Jehovah.
- Webster's Bible (WBS)
- Though Babylon should mount up to heaven, and though she should fortify the hight of her strength, [yet] from me shall spoilers come to her, saith the LORD.
- Young's Literal Translation (YLT)
- Because Babylon goeth up to the heavens, And because it fenceth the high place of its strength, From Me come into it do spoilers, An affirmation of Jehovah.
Read in context
- 51ನಾಚಿಕೆಪಡುತ್ತೇವೆ, ನಿಂದೆಯನ್ನು ಕೇಳಿದ್ದೇವೆ; ಅವಮಾನ ನಮ್ಮ ಮುಖಗಳನ್ನು ಮುಚ್ಚಿದೆ; ಅನ್ಯರು ಕರ್ತನ ಆಲಯದ ಪರಿಶುದ್ಧ ಸ್ಥಳಗಳಲ್ಲಿ ಬಂದಿದ್ದಾರೆ.
- 52ಆದದರಿಂದ ಇಗೋ, ದಿನಗಳು ಬರುವವೆಂದು ಕರ್ತನು ಅನ್ನುತ್ತಾನೆ; ಆಗ ನಾನು ಅವಳ ಕೆತ್ತಿದ ವಿಗ್ರಹಗಳಿಗೆ ನ್ಯಾಯತೀರಿಸುತ್ತೇನೆ. ಅವಳ ದೇಶದಲ್ಲೆಲ್ಲಾ ಗಾಯಪಟ್ಟವರು ನರಳುವರು.
- 53ಬಾಬೆಲ್ ಆಕಾಶಕ್ಕೆ ಏರಿದರೂ ಅದರ ಬಲದ ಉನ್ನತ ಸ್ಥಾನವನ್ನು ಭದ್ರಮಾಡಿದರೂ ಸೂರೆಮಾಡು ವವರು ನನ್ನಿಂದ ಅವಳಿಗೆ ವಿರೋಧವಾಗಿ ಬರುವರೆಂದು ಕರ್ತನು ಅನ್ನುತ್ತಾನೆ.
- 54ಬಾಬೆಲಿನಿಂದ ಕೂಗುವ ಶಬ್ದವು! ಕಸ್ದೀಯರ ದೇಶದಿಂದ ಮಹಾನಾಶನವು ಬರುವದು.
- 55ಕರ್ತನು ಬಾಬೆಲನ್ನು ಸೂರೆಮಾಡಿ ದ್ದಾನೆ; ಅವಳೊಳಗಿಂದ ಮಹಾ ಶಬ್ದವನ್ನು ತೆಗೆದುಹಾಕಿ ದ್ದಾನೆ; ಅವಳ ತೆರೆಗಳು ಬಹಳ ನೀರುಗಳ ಹಾಗೆ ಘೋಷಿಸುವಾಗ ಅವುಗಳ ಶಬ್ದದ ಧ್ವನಿ ಹೊರಟಿತು.
Cross references
- Genesis 11:4 ಆದಿಕಾಂಡ 11:4ಅವರು--ಬನ್ನಿರಿ, ಭೂಮಿಯ ಮೇಲೆಲ್ಲಾ ನಾವು ಚದರಿಹೋಗದ ಹಾಗೆ ಆಕಾಶವನ್ನು ಮುಟ್ಟುವ ಒಂದು ಪಟ್ಟಣವನ್ನೂ ಗೋಪುರವನ್ನೂ ನಮಗಾಗಿ ಕಟ್ಟಿಕೊಂಡು ನಾವು ಹೆಸರನ್ನು ಪಡೆಯೋಣ ಅಂದರು;
- Jeremiah 49:16 ಯೆರೆಮೀಯ 49:16ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ ಗುಡ್ಡದ ಕೊನೆಯನ್ನು ಹಿಡಿಯುವವನೇ, ನಿನ್ನ ಭಯಂಕರತ್ವವೂ ಹೃದಯದ ಗರ್ವವೂ ನಿನ್ನನ್ನು ಮೋಸಗೊಳಿಸಿದವು; ನೀನು ಹದ್ದಿನಂತೆ ನಿನ್ನ ಗೂಡನ್ನು ಎತ್ತರ ಮಾಡಿದರೂ ಅಲ್ಲಿಂದ ನಿನ್ನನ್ನು ಇಳಿಸುತ್ತೇನೆಂದು ಕರ್ತನು ಅನ್ನುತ್ತಾನೆ.
- Psalm 139:8–10 ಕೀರ್ತನೆಗಳು 139:8–10ನಾನು ಆಕಾಶಕ್ಕೆ ಏರಿಹೋದರೆ ನೀನು ಅಲ್ಲಿ ಇದ್ದೀ; ಪಾತಾಳದಲ್ಲಿ ನನ್ನ ಹಾಸಿಗೆಯನ್ನು ಮಾಡಿಕೊಂಡರೆ ಅಗೋ, ನೀನು ಅಲ್ಲಿ ಇದ್ದೀ. ಉದಯದ ರೆಕ್ಕೆಗಳನ್ನು ಕಟ್ಟಿಕೊಂಡು ಸಮುದ್ರದ ಕಟ್ಟಕಡೆಯಲ್ಲಿ ವಾಸಮಾಡಿದರೆ ಅಲ್ಲಿಯೂ ನಿನ್ನ ಕೈ ನನ್ನನ್ನು ನಡಿಸಿ ನಿನ್ನ ಬಲಗೈ ನನ್ನನ್ನು ಹಿಡಿಯುವದು.
- Jeremiah 51:25 ಯೆರೆಮೀಯ 51:25ನಾಶಮಾಡುವ ಬೆಟ್ಟವೇ! ಭೂಮಿಯನ್ನೆಲ್ಲಾ ನಾಶಮಾಡುವಂಥಾದ್ದೇ! ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ. ನಿನ್ನ ಮೇಲೆ ನನ್ನ ಕೈಯನ್ನು ಚಾಚಿ ಬಂಡೆಗಳ ಮೇಲಿನಿಂದ ನಿನ್ನನ್ನು ಹೊರಳಿಸಿ ನಿನ್ನನ್ನು ಸುಟ್ಟ ಬೆಟ್ಟವಾಗಿ ಮಾಡುತ್ತೇನೆ.
- Obadiah 1:3–4 ಓಬದ್ಯ 1:3–4ನೀನು ಬಹಳವಾಗಿ ತಿರಸ್ಕರಿಸಲ್ಪಟ್ಟಿದ್ದೀ. ಬಂಡೆಯ ಬಿರುಕು ಗಳಲ್ಲಿ ವಾಸಮಾಡುವವನೇ, ಉನ್ನತದಲ್ಲಿ ನಿವಾಸ ಮಾಡಿಕೊಂಡವನೇ--ಯಾರು ನನ್ನನ್ನು ನೆಲಕ್ಕೆ ಇಳಿಸ ಬಲ್ಲರೆಂದು ತನ್ನ ಹೃದಯದಲ್ಲಿ ಅನ್ನುವವನೇ, ನಿನ್ನ ಹೃದಯದ ಗರ್ವವು ನಿನ್ನನ್ನು ಮೋಸಗೊಳಿಸಿದೆ. ನೀನು ಹದ್ದಿನಂತೆ ಏರಿಕೊಂಡು ನಿನ್ನ ಗೂಡನ್ನು ನಕ್ಷತ್ರಗಳಲ್ಲಿ ಇಟ್ಟರೂ ಅಲ್ಲಿಂದ ನಿನ್ನನ್ನು ಇಳಿಸುವೆನೆಂದು ಕರ್ತನು ಅನ್ನುತ್ತಾನೆ.
- Isaiah 47:5 ಯೆಶಾಯ 47:5ಓ ಕಸ್ದೀಯರ ಕುಮಾರಿಯೇ, ಮೌನ ವಾಗಿ ಕುಳಿತುಕೋ, ಕತ್ತಲೊಳಗೆ ಹೋಗು; ಯಾಕಂ ದರೆ ಇನ್ನು ಮೇಲೆ ನೀನು ರಾಜ್ಯಗಳ ರಾಣಿ ಎಂದು ಕರೆಯಲ್ಪಡುವದಿಲ್ಲ.
- Jeremiah 50:21 ಯೆರೆಮೀಯ 50:21ಮೆರಾಥಯಿಮ್ ದೇಶಕ್ಕೂ ಪೆಕೋದಿನ ನಿವಾಸಿ ಗಳಿಗೂ ವಿರೋಧವಾಗಿ ಏರಿಹೋಗು; ಅವರನ್ನು ಹಿಂದಟ್ಟಿ ಕೆಡಿಸಿಬಿಟ್ಟು ಸಂಪೂರ್ಣ ನಾಶಮಾಡು, ನಾನು ನಿನಗೆ ಆಜ್ಞಾಪಿಸಿದ್ದೆಲಾದರ ಪ್ರಕಾರ ಮಾಡು ಎಂದು ಕರ್ತನು ಅನ್ನುತ್ತಾನೆ.
- Jeremiah 50:25 ಯೆರೆಮೀಯ 50:25ಕರ್ತನು ತನ್ನ ಆಯುಧ ಶಾಲೆಯನ್ನು ತೆರೆದು, ರೋಷದ ಆಯುಧಗಳನ್ನು ಹೊರಗೆ ತಂದಿದ್ದಾನೆ; ಕಸ್ದೀಯರ ದೇಶದಲ್ಲಿ ಸೈನ್ಯಗಳ ಕರ್ತನಾದ ದೇವರಿಗೆ ನಿರ್ವಹಿಸ ಬೇಕಾದ ಕಾರ್ಯವುಂಟು.
- Isaiah 13:2–5 ಯೆಶಾಯ 13:2–5ಅವರು(ಶತ್ರುಗಳು) ಬಂದು ಘನವಂತ ದ್ವಾರಗಳೊಳಗೆ ಹೋಗುವಂತೆ ಎತ್ತರವಾದ ಪರ್ವತದ ಮೇಲೆ ನೀವು ಧ್ವಜವನ್ನೆತ್ತಿ ಅವರಿಗೆ ನಿಮ್ಮ ಶಬ್ದವನ್ನು ಕೇಳಿಸುವಂತೆ ಜೋರಾಗಿ ಕೂಗಿ ಕರೆಯಿರಿ. ನಾನು ನನ್ನ ಪರಿಶುದ್ಧರಿಗೆ ಆಜ್ಞಾಪಿಸಿ ನನ್ನ ಮಹಿಮೆಯಲ್ಲಿ ಉಲ್ಲಾಸಿಸುವವರನ್ನೂ ಶೂರರನ್ನೂ ನನ್ನ ಕೋಪಕ್ಕೆ ಕರೆದಿದ್ದೇನೆ. ಬಹು ಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ; ಒಟ್ಟಿಗೆ ಕೂಡಿಕೊಂಡ ರಾಜ್ಯ ಜನಾಂಗ ಗಳ ಆರ್ಭಟ; ಸೈನ್ಯಗಳ ಕರ್ತನು ಯುದ್ಧಕ್ಕೆ ಸೈನ್ಯವನ್ನು ಸಿದ್ಧಮಾಡುತ್ತಾನೆ. ಕರ್ತನೂ ಆತನ ರೋಷಕ್ಕೆ ಆಯುಧಗಳಾದವರೂ ದೂರ ದೇಶದಿಂದ, ಅಂದರೆ ಆಕಾಶಮಂಡಲದ ಕಟ್ಟಕಡೆಯಿಂದ ದೇಶವನ್ನೆಲ್ಲಾ ಹಾಳುಮಾಡುವದಕ್ಕಾಗಿ ಬರುತ್ತಾರೆ.
- Jeremiah 51:1–4 ಯೆರೆಮೀಯ 51:1–4ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ಬಾಬೆಲಿಗೆ ವಿರೋಧವಾಗಿಯೂ ನನಗೆದುರಾಗಿ ಎದ್ದಿರುವವರ ಮಧ್ಯದಲ್ಲಿ ವಾಸಿಸುವ ವರಿಗೆ ವಿರೋಧವಾಗಿಯೂ ನಾಶಮಾಡುವ ಗಾಳಿ ಯನ್ನು ಎಬ್ಬಿಸುತ್ತೇನೆ. ಬಾಬೆಲಿಗೆ ತೂರುವವರನ್ನು ಕಳುಹಿಸುವೆನು; ಅವರು ಅದನ್ನು ತೂರಿ ಅದರ ದೇಶವನ್ನು ಬರಿದುಮಾಡುವರು; ದುರ್ದಿನದಲ್ಲಿ ಸುತ್ತಲಾಗಿ ಅದಕ್ಕೆ ವಿರೋಧವಾಗಿರುವರು. ಬಿಲ್ಲು ಬೊಗ್ಗಿಸುವವನಿಗೆ ವಿರೋಧವಾಗಿಯೂ ಕವಚದಲ್ಲಿ ತನ್ನನ್ನು ಹೆಚ್ಚಿಸಿ ಕೊಳ್ಳುವವನಿಗೆ ವಿರೋಧವಾಗಿಯೂ ಬಿಲ್ಲಿನವನು ತನ್ನ ಬಿಲ್ಲನ್ನು ಬೊಗ್ಗಿಸಲಿ; ಅದರ ಯೌವನಸ್ಥರನ್ನು ಕನಿಕರಿಸಬೇಡಿರಿ; ಅದರ ಸೈನ್ಯವನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡಿರಿ. ಈ ಪ್ರಕಾರ ಕಸ್ದೀಯರ ದೇಶದಲ್ಲಿ ಕೊಂದುಹಾಕಲ್ಪ ಟ್ಟವರೂ ಅದರ ಬೀದಿಗಳಲ್ಲಿ ತಿವಿಯಲ್ಪಟ್ಟವರೂ ಬೀಳುವರು.
- Isaiah 45:1–5 ಯೆಶಾಯ 45:1–5ಕರ್ತನು ತನ್ನ ಅಭಿಷಿಕ್ತನಾದ ಕೋರೆಷನಿಗೆ, ಯಾವನ ಕೈಯನ್ನು ಹಿಡಿದು, ಯಾವನ ಮುಂದೆ ಜನಾಂಗಗಳನ್ನು ಕೆಡವಿಬಿಟ್ಟು, ಅರಸುಗಳ ನಡುವುಗಳನ್ನು ಬಿಚ್ಚಿ ಯಾವನ ಮುಂದೆ ಎರಡು ಕದಗಳುಳ್ಳ ಬಾಗಿಲುಗಳನ್ನು ತೆರೆಯುತ್ತೇನೋ, ಯಾವನ ಮುಂದೆ ದ್ವಾರಗಳು ಮುಚ್ಚಲ್ಪಡುವವೋ ಅವನಿಗೆ ಹೇಳುವದೇನಂದರೆ-- ನಾನು ನಿನ್ನ ಮುಂದೆ ಹೋಗಿ ಡೊಂಕಾದ ಸ್ಥಳಗಳನ್ನು ಸಮಮಾಡಿ, ಹಿತ್ತಾ ಳೆಯ ಕದಗಳನ್ನು ಒಡೆದು ಕಬ್ಬಿಣದ ಅಗುಳಿಗಳನ್ನು ಮುರಿದು ಬಿಡುವೆನು. ನಿನ್ನನ್ನು ಹೆಸರು ಹಿಡಿದು ಕರೆಯುವ ಕರ್ತನು ನಾನೇ, ಇಸ್ರಾಯೇಲಿನ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಬಂಡಾರವನ್ನೂ ಗುಪ್ತ ಸ್ಥಳಗಳಲ್ಲಿ ಮರೆ ಮಾಡಿದ ನಿಧಿ ನಿಕ್ಷೇಪಗಳನ್ನೂ ನಿನಗೆ ಕೊಡುವೆನು. ನನ್ನ ಸೇವಕನಾದ ಯಾಕೋಬನಿಗಾಗಿ, ನಾನು ಆದು ಕೊಂಡ ಇಸ್ರಾಯೇಲಿಗಾಗಿ ಹೆಸರು ಹಿಡಿದು ನಿನ್ನನ್ನು ಕರೆದಿದ್ದೇನೆ; ನೀನು ನನ್ನನ್ನು ಅರಿಯದವನಾಗಿದ್ದರೂ ನಿನಗೆ ಅಡ್ಡ ಹೆಸರನ್ನು ಇಟ್ಟಿದ್ದೇನೆ. ನಾನೇ ಕರ್ತನು, ಮತ್ತೊಬ್ಬನಿಲ್ಲ; ನನ್ನ ಹೊರತು ಯಾವ ದೇವರೂ ಇಲ್ಲ; ನೀನು ನನ್ನನ್ನು ಅರಿಯದನಾಗಿದ್ದರೂ ನಿನಗೆ ನಡುಕಟ್ಟುವೆನು.
- Isaiah 13:17 ಯೆಶಾಯ 13:17ಇಗೋ, ಬೆಳ್ಳಿಯನ್ನು ಲಕ್ಷಿಸದೆ ಬಂಗಾರದಲ್ಲಿ ಆನಂದಿಸದೆ ಇರುವ ಮೇದ್ಯರನ್ನು ಅವರಿಗೆ ವಿರೋಧ ವಾಗಿ ನಾನು ಎಬ್ಬಿಸುವೆನು.