Jeremiah · chapter 51 · verse 56
Jeremiah 51:56 in Kannada
ಸೂರೆ ಮಾಡುವವನು ಅದರ ಮೇಲೆ ಅಂದರೆ ಬಾಬೆಲಿನ ಮೇಲೆಯೇ ಬಂದಿದ್ದಾನೆ; ಅದರ ಪರಾಕ್ರಮಶಾಲಿಗಳು ಹಿಡಿಯಲ್ಪಟ್ಟಿದ್ದಾರೆ; ಅವಳ ಬಿಲ್ಲುಗಳು ಮುರಿಯಲ್ಪಟ್ಟಿವೆ; ಪ್ರತಿದಂಡನೆಗಳ ದೇವರಾದ ಕರ್ತನು ನಿಶ್ಚಯವಾಗಿ ಮುಯ್ಯಿಗೆ ಮುಯ್ಯಿ ತೀರಿಸುವನು.
Soore maaduvavanu adara mele andare baabelina meleye bandiddaane; adara paraakramashaaligalu hidiyalpattiddaare; avala billugalu muriyalpattive; pratidandanegala devaraada kartanu nishchayavaagi muyyige muyyi teerisuvanu.
Jeremiah 51:56 in English
- King James Version (KJV)
- Because the spoiler is come upon her, [even] upon Babylon, and her mighty men are taken, every one of their bows is broken: for the LORD God of recompences shall surely requite.
- World English Bible (WEB)
- For the destroyer has come on her, even on Babylon. Her mighty men are taken. Their bows are broken in pieces, for the LORD is a God of retribution. He will surely repay.
- American Standard Version (ASV)
- for the destroyer is come upon her, even upon Babylon, and her mighty men are taken, their bows are broken in pieces; for Jehovah is a God of recompenses, he will surely requite.
- Bible in Basic English (BBE)
- For the waster has come on her, even on Babylon, and her men of war are taken, their bows are broken: for the Lord is a rewarding God, and he will certainly give payment.
- Darby Translation (DBY)
- For the spoiler is come against her, against Babylon, and her mighty men are taken; their bows are broken in pieces; for Jehovah, the God of recompences, will certainly requite.
- Webster's Bible (WBS)
- Because the spoiler is come upon her, [even] upon Babylon, and her mighty men are taken, every one of their bows is broken: for the Lord GOD of recompenses shall surely requite.
- Young's Literal Translation (YLT)
- For come in against it — against Babylon — hath a spoiler, And captured have been its mighty ones, Broken have been their bows, For the God of recompences — Jehovah — doth certainly repay.
Read in context
- 54ಬಾಬೆಲಿನಿಂದ ಕೂಗುವ ಶಬ್ದವು! ಕಸ್ದೀಯರ ದೇಶದಿಂದ ಮಹಾನಾಶನವು ಬರುವದು.
- 55ಕರ್ತನು ಬಾಬೆಲನ್ನು ಸೂರೆಮಾಡಿ ದ್ದಾನೆ; ಅವಳೊಳಗಿಂದ ಮಹಾ ಶಬ್ದವನ್ನು ತೆಗೆದುಹಾಕಿ ದ್ದಾನೆ; ಅವಳ ತೆರೆಗಳು ಬಹಳ ನೀರುಗಳ ಹಾಗೆ ಘೋಷಿಸುವಾಗ ಅವುಗಳ ಶಬ್ದದ ಧ್ವನಿ ಹೊರಟಿತು.
- 56ಸೂರೆ ಮಾಡುವವನು ಅದರ ಮೇಲೆ ಅಂದರೆ ಬಾಬೆಲಿನ ಮೇಲೆಯೇ ಬಂದಿದ್ದಾನೆ; ಅದರ ಪರಾಕ್ರಮಶಾಲಿಗಳು ಹಿಡಿಯಲ್ಪಟ್ಟಿದ್ದಾರೆ; ಅವಳ ಬಿಲ್ಲುಗಳು ಮುರಿಯಲ್ಪಟ್ಟಿವೆ; ಪ್ರತಿದಂಡನೆಗಳ ದೇವರಾದ ಕರ್ತನು ನಿಶ್ಚಯವಾಗಿ ಮುಯ್ಯಿಗೆ ಮುಯ್ಯಿ ತೀರಿಸುವನು.
- 57ಇದಲ್ಲದೆ ನಾನು ಅವಳ ಪ್ರಧಾನಿಗಳನ್ನೂ, ಜ್ಞಾನಿಗಳನ್ನೂ, ಅಧಿಪತಿಗಳನ್ನೂ, ಅಧಿಕಾರಿಗಳನ್ನೂ, ಪರಾಕ್ರಮಶಾಲಿಗಳನ್ನೂ, ಮತ್ತರಾಗಮಾಡುತ್ತೇನೆ; ಅವರು ನಿತ್ಯ ನಿದ್ರೆ ಮಾಡುವರು, ಎಚ್ಚರವಾಗುವದಿಲ್ಲವೆಂದು ಸೈನ್ಯಗಳ ಕರ್ತನೆಂಬ ಹೆಸರುಳ್ಳ ಅರಸನು ಅನ್ನುತ್ತಾನೆ.
- 58ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನ ಅಗಲವಾದ ಗೋಡೆಗಳು ಸಂಪೂರ್ಣವಾಗಿ ಕೆಡವಲ್ಪ ಡುವವು; ಅವಳ ಎತ್ತರವಾದ ಬಾಗಲುಗಳು ಬೆಂಕಿ ಯಿಂದ ಸುಡಲ್ಪಡುವವು; ಜನರು ವ್ಯರ್ಥಕ್ಕಾಗಿಯೂ ಪ್ರಜೆಗಳು ಬೆಂಕಿಗಾಗಿಯೂ ಕಷ್ಟಪಟ್ಟು ಆಯಾಸ ಪಡುವರು.
Cross references
- Jeremiah 51:6 ಯೆರೆಮೀಯ 51:6ಬಾಬೆಲಿನೊಳಗಿಂದ ಓಡಿಹೋಗಿರಿ, ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳಲಿ; ಅದರ ಅಕ್ರಮದಲ್ಲಿ ನಾಶವಾಗ ಬೇಡಿರಿ; ಇದು ಕರ್ತನ ಪ್ರತಿದಂಡನೆಯ ಕಾಲವು; ಆತನೇ ಅದಕ್ಕೆ ಮುಯ್ಯಿಗೆಮುಯ್ಯಿ ಕೊಡುತ್ತಾನೆ.
- Jeremiah 51:48 ಯೆರೆಮೀಯ 51:48ಆಗ ಆಕಾಶವೂ ಭೂಮಿಯೂ ಅವುಗಳಲ್ಲಿರುವ ಸಮಸ್ತವೂ ಬಾಬೆಲಿನ ವಿಷಯವಾಗಿ ಹಾಡುವೆವು. ಸೂರೆ ಮಾಡುವವರು ಉತ್ತರದಿಂದ ಅದಕ್ಕೆ ವಿರೋಧ ವಾಗಿ ಬರುವರೆಂದು ಕರ್ತನು ಅನ್ನುತ್ತಾನೆ.
- Psalm 94:1–2 ಕೀರ್ತನೆಗಳು 94:1–2ಓ ಕರ್ತನೇ, ದೇವರೇ ಮುಯ್ಯಿ ತೀರಿಸುವದು ನಿನ್ನದು; ಓ ದೇವರೇ, ಮುಯ್ಯಿ ತೀರಿಸುವದು ನಿನಗೆ ಸೇರಿದ್ದು. ನಿನ್ನನ್ನು ಪ್ರಕಟಿಸಿಕೋ. ಭೂಮಿಯ ನ್ಯಾಯಾಧಿಪತಿಯೇ, ನೀನು ಎದ್ದೇಳು; ಗರ್ವಿಷ್ಠರಿಗೆ ಪ್ರತೀಕಾರವನ್ನು ಕೊಡು.
- Habakkuk 2:8 ಹಬಕ್ಕೂಕ 2:8ನೀನು ಅನೇಕ ಜನಾಂಗಗಳನ್ನು ಸೂರೆ ಮಾಡಿದ್ದರಿಂದ ಜನರಲ್ಲಿ ಉಳಿದವರೆಲ್ಲಾ ನಿನ್ನನ್ನು ಸೂರೆ ಮಾಡುವರು; ಮನುಷ್ಯರ ರಕ್ತಕ್ಕಾಗಿ ದೇಶ, ಪಟ್ಟಣ, ಅದರ ಎಲ್ಲಾ ನಿವಾಸಿಗಳ ಬಲಾತ್ಕಾರದ ನಿಮಿತ್ತವೇ.
- Revelation 19:2 ಪ್ರಕಟನೆ 19:2ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು.
- Psalm 46:9 ಕೀರ್ತನೆಗಳು 46:9ಯುದ್ಧಗಳನ್ನು ಭೂಮಿಯ ಅಂತ್ಯದ ವರೆಗೆ ನಿಲ್ಲಿಸಿ ಬಿಲ್ಲನ್ನು ಮುರಿದು ಭಲ್ಲೆಯನ್ನು ಕಡಿದು ತುಂಡುಮಾಡಿ ರಥಗಳನ್ನು ಬೆಂಕಿಯಿಂದ ಸುಡುತ್ತಾನೆ.
- Jeremiah 51:24 ಯೆರೆಮೀಯ 51:24ಬಾಬೆಲಿಗೂ ಕಸ್ದೀಯರ ನಿವಾಸಿಗಳೆಲ್ಲ ರಿಗೂ--ಅವರು ಚೀಯೋನಿನಲ್ಲಿ ನಿಮ್ಮ ಸನ್ನಿಧಿಯಲ್ಲಿ ಮಾಡಿದ ಕೇಡನ್ನೆಲ್ಲಾ ಸಲ್ಲಿಸುವೆನೆಂದು ಕರ್ತನು ಅನ್ನುತ್ತಾನೆ.
- Isaiah 59:18 ಯೆಶಾಯ 59:18ಅವರ ಕ್ರಿಯೆಗಳ ಪ್ರಕಾರವೇ ಸರಿಯಾಗಿ ಸಲ್ಲಿಸುವನು; ತನ್ನ ವೈರಿ ಗಳಿಗೆ ಕ್ರೋಧವನ್ನೂ ತನ್ನ ಶತ್ರುಗಳಿಗೂ ದ್ವೀಪಗ ಳಿಗೂ ಪ್ರತಿಫಲವನ್ನು ಸಲ್ಲಿಸುವನು.
- Deuteronomy 32:35 ಧರ್ಮೋಪದೇಶಕಾಂಡ 32:35ಮುಯ್ಯಿಗೆ ಮುಯ್ಯಿ ಕೊಡುವದೂ ಪ್ರತಿಫಲ ಕೊಡುವದೂ ನನ್ನದೇ; ತಕ್ಕ ಕಾಲದಲ್ಲಿ ಅವರ ಕಾಲು ಜಾರುವದು; ಅವರ ಕಳವಳದ ದಿವಸವು ಸವಿಾಪ ವಾಗಿದೆ. ಅವರ ಮೇಲೆ ಬರುವವುಗಳು ಬೇಗ ಬರುತ್ತವೆ.
- Psalm 76:3 ಕೀರ್ತನೆಗಳು 76:3ಅಲ್ಲಿಯೇ ಬಿಲ್ಲಿನ ಬಾಣಗಳನ್ನೂ ಗುರಾಣಿಯನ್ನೂ ಕತ್ತಿಯನ್ನೂ ಯುದ್ಧವನ್ನೂ ಮುರಿದುಬಿಟ್ಟನು. ಸೆಲಾ.
- Revelation 17:16 ಪ್ರಕಟನೆ 17:16ಮೃಗದ ಮೇಲೆ ನೀನು ನೋಡಿದ ಹತ್ತು ಕೊಂಬು ಗಳು ಆ ಜಾರ ಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟ ವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವವು.
- Psalm 137:8 ಕೀರ್ತನೆಗಳು 137:8ಹಾಳಾಗಲಿಕ್ಕಿರುವ ಬಾಬೆಲಿನ ಮಗಳೇ, ನೀನು ನಮಗೆ ಮಾಡಿದ ಕಾರ್ಯಕ್ಕೆ ಪ್ರತೀಕಾರ ವನ್ನು ನಿನಗೆ ಸಲ್ಲಿಸುವವನು ಧನ್ಯನು.ನಿನ್ನ ಚಿಕ್ಕ ಕೂಸುಗಳನ್ನು ಹಿಡಿದು ಬಂಡೆಗಳ ಮೇಲೆ ಅಪ್ಪಳಿಸಿ ಬಿಡುವವನು ಧನ್ಯನು.