Jeremiah · chapter 51 · verse 62
Jeremiah 51:62 in Kannada
ಈ ವಾಕ್ಯಗಳನ್ನೆಲ್ಲಾ ನೋಡಿ ಓದುತ್ತಿರುವಾಗ ಹೇಳತಕ್ಕದ್ದೇನಂದರೆ--ಓ ಕರ್ತನೇ, ಈ ಸ್ಥಳಕ್ಕೆ ವಿರೋಧವಾಗಿ ಅದರಲ್ಲಿ ಮನುಷ್ಯ ರಾಗಲಿ, ಮೃಗಗಳಾಗಲಿ ನಿವಾಸಿಗಳು ಎಂದಿಗೂ ಇರದ ಹಾಗೆಯೂ ಅದು ನಿತ್ಯವಾಗಿ ಹಾಳಾಗುವ ಹಾಗೆಯೂ ಅದನ್ನು ಕಡಿದುಬಿಡುತ್ತೇನೆಂದು ನೀನೇ ಮಾತನಾ ಡಿದ್ದೀ.
Ee vaakyagalannellaa nodi oduttiruvaaga helatakkaddenandare--o kartane, ee sthalakke virodhavaagi adaralli manushya raagali, mrugagalaagali nivaasigalu endigoo irada haageyoo adu nityavaagi haalaaguva haageyoo adannu kadidubiduttenendu neene maatanaa diddee.
Jeremiah 51:62 in English
- King James Version (KJV)
- Then shalt thou say, O LORD, thou hast spoken against this place, to cut it off, that none shall remain in it, neither man nor beast, but that it shall be desolate for ever.
- World English Bible (WEB)
- and say, ‘LORD, you have spoken concerning this place, to cut it off, that no one will dwell in it, neither man nor animal, but that it will be desolate forever.’
- American Standard Version (ASV)
- and say, O Jehovah, thou hast spoken concerning this place, to cut it off, that none shall dwell therein, neither man nor beast, but that it shall be desolate for ever.
- Bible in Basic English (BBE)
- And after reading them, say, O Lord, you have said about this place that it is to be cut off, so that no one will be living in it, not a man or a beast, but it will be unpeopled for ever.
- Darby Translation (DBY)
- and say, Jehovah, thou hast spoken concerning this place, that thou wilt cut it off, so that none shall dwell in it, neither man nor beast, but that it shall be desolate for ever.
- Webster's Bible (WBS)
- Then shalt thou say, O LORD, thou hast spoken against this place, to cut it off, that none shall remain in it, neither man nor beast, but that it shall be desolate for ever.
- Young's Literal Translation (YLT)
- and hast said: Jehovah, Thou, Thou hast spoken concerning this place, to cut it off, that there is none dwelling in it, from man even unto cattle, for it is a desolation age-during.
Read in context
- 60ಹೀಗೆ ಯೆರೆವಿಾಯನು ಬಾಬೆಲಿನ ಮೇಲೆ ಬರುವ ಕೇಡನ್ನೆಲ್ಲಾ ಬಾಬೆಲಿಗೆ ವಿರೋಧವಾಗಿ ಬರೆದಿರುವ ಈ ವಾಕ್ಯಗಳನ್ನೆಲ್ಲಾ ಒಂದು ಪುಸ್ತಕದಲ್ಲಿ ಬರೆದನು.
- 61ಯೆರೆವಿಾಯನು ಸೆರಾಯನಿಗೆ ಹೇಳಿದ್ದೇನಂದರೆ-- ನೀನು ಬಾಬೆಲಿಗೆ ಬಂದು
- 62ಈ ವಾಕ್ಯಗಳನ್ನೆಲ್ಲಾ ನೋಡಿ ಓದುತ್ತಿರುವಾಗ ಹೇಳತಕ್ಕದ್ದೇನಂದರೆ--ಓ ಕರ್ತನೇ, ಈ ಸ್ಥಳಕ್ಕೆ ವಿರೋಧವಾಗಿ ಅದರಲ್ಲಿ ಮನುಷ್ಯ ರಾಗಲಿ, ಮೃಗಗಳಾಗಲಿ ನಿವಾಸಿಗಳು ಎಂದಿಗೂ ಇರದ ಹಾಗೆಯೂ ಅದು ನಿತ್ಯವಾಗಿ ಹಾಳಾಗುವ ಹಾಗೆಯೂ ಅದನ್ನು ಕಡಿದುಬಿಡುತ್ತೇನೆಂದು ನೀನೇ ಮಾತನಾ ಡಿದ್ದೀ.
- 63ನೀನು ಈ ಪುಸ್ತಕವನ್ನು ಓದಿ ಮುಗಿಸಿದ ಮೇಲೆ ಅದಕ್ಕೆ ಕಲ್ಲುಕಟ್ಟಿ ಅದನ್ನು ಯೂಫ್ರೇಟೀಸಿನ ಮಧ್ಯದಲ್ಲಿ ಬಿಸಾಡಿ ಹೀಗೆ ಹೇಳು--ಈ ಪ್ರಕಾರ ಬಾಬೆಲ್ ಮುಳುಗಿಹೋಗುವದು;ನಾನು ಅವಳ ಮೇಲೆ ತರುವ ಕೇಡಿನೊಳಗಿಂದ ಏಳದು, ಅವರು ಆಯಾಸ ಪಡುವರು. ಇಲ್ಲಿಯ ತನಕ ಯೆರೆವಿಾಯನ ವಾಕ್ಯಗಳು.
- 64ನಾನು ಅವಳ ಮೇಲೆ ತರುವ ಕೇಡಿನೊಳಗಿಂದ ಏಳದು, ಅವರು ಆಯಾಸ ಪಡುವರು. ಇಲ್ಲಿಯ ತನಕ ಯೆರೆವಿಾಯನ ವಾಕ್ಯಗಳು.
Cross references
- Jeremiah 50:13 ಯೆರೆಮೀಯ 50:13ಕರ್ತನ ರೌದ್ರದ ನಿಮಿತ್ತ ಅದರಲ್ಲಿ ಯಾರೂ ವಾಸಮಾಡುವದಿಲ್ಲ; ಸಂಪೂರ್ಣ ಹಾಳಾಗುವದು ಬಾಬೆಲನ್ನು ಹಾದುಹೋಗುವವ ರೆಲ್ಲರು ಅದರ ಎಲ್ಲಾ ಬಾಧೆಗಳ ವಿಷಯ ವಿಸ್ಮಯಪಟ್ಟು ಸಿಳ್ಳಿಡುವರು.
- Jeremiah 50:3 ಯೆರೆಮೀಯ 50:3ಉತ್ತರದಿಂದ ಅವಳ ವಿರೋಧವಾಗಿ ಜನಾಂಗವು ಬರುತ್ತದೆ; ಅದು ಅವಳ ದೇಶವನ್ನು ಹಾಳು ಮಾಡಿ ಬಿಡುವದು; ಅವಳಲ್ಲಿ ಯಾರೂ ವಾಸಿಸುವದಿಲ್ಲ; ಮನುಷ್ಯರೂ ಮೃಗಗಳೂ ಒಟ್ಟಾಗಿ ತೊಲಗಿಬಿಡುತ್ತಾರೆ, ಓಡಿಹೋಗುತ್ತಾರೆ.
- Revelation 18:20–23 ಪ್ರಕಟನೆ 18:20–23ಪರಲೋಕವೇ, ಪರಿಶುದ್ಧರಾದ ಅಪೊಸ್ತಲರೇ, ಪ್ರವಾದಿಗಳೇ, ಅವಳ ವಿಷಯವಾಗಿ ಆನಂದಪಡಿರಿ. ಯಾಕಂದರೆ ನಿಮ್ಮ ನಿಮಿತ್ತವಾಗಿ ದೇವರು ಇವಳಿಗೆ ಪ್ರತಿ ದಂಡನೆಯನ್ನು ಮಾಡಿದನು ಎಂದು ಹೇಳಿತು. ಆಗ ಬಲಿಷ್ಠನಾದ ಒಬ್ಬ ದೂತನು ಬೀಸುವ ದೊಡ್ಡ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರ ದೊಳಗೆ ಹಾಕಿ--ಮಹಾ ಪಟ್ಟಣವಾದ ಆ ಬಾಬೆಲು ಹೀಗೆಯೇ ಬಲಾತ್ಕಾರದಿಂದ ಕೆಡವಲ್ಲಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ. ನಿನ್ನಲ್ಲಿ ವೀಣೆಗಾರರೂ ವಾದ್ಯ ಗಾರರೂ ಕೊಳಲೂದುವವರೂ ತುತೂರಿಯವರು ಮಾಡುವ ಧ್ವನಿಯೂ ಇನ್ನೆಂದಿಗೂ ಕೇಳಿಸುವದಿಲ್ಲ. ಯಾವ ವಿಧವಾದ ಕೈಗಾರಿಕೆಯನ್ನು ಮಾಡುವವರು ನಿಮ್ಮಲ್ಲಿ ಇನ್ನೆಂದಿಗೂ ಸಿಕ್ಕುವದಿಲ್ಲ; ಬೀಸುವ ಕಲ್ಲಿನ ಶಬ್ದವೂ ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ. ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸು ವದಿಲ್ಲ. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ; ನಿನ್ನ ವರ್ತಕರು ಭೂಮಿಯ ಪ್ರಧಾನ ರಾಗಿದ್ದದ್ದಲ್ಲದೆ ನಿನ್ನ ಮಾಟದಿಂದ ಎಲ್ಲಾ ಜನಾಂಗ ದವರು ಮೋಸ ಹೋದರು.ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.
- Ezekiel 35:9 ಯೆಹೆಜ್ಕೇಲನು 35:9ನಾನು ನಿನ್ನನ್ನು ನಿತ್ಯ ನಾಶಕ್ಕೆ ಗುರಿಮಾಡುವೆನು; ನಿನ್ನ ನಗರಗಳು ಹಿಂತಿರುಗುವದಿಲ್ಲ ನಾನೇ ಕರ್ತನೆಂದು ನೀನು ತಿಳಿದುಕೊಳ್ಳುವಿ.
- Isaiah 13:19–22 ಯೆಶಾಯ 13:19–22ರಾಜ್ಯಗಳ ಘನತೆಯೂ ಕಸ್ದೀಯರ ಶ್ರೇಷ್ಠವಾದ ಸೌಂದರ್ಯವೂ ಆದ ಬಾಬೆಲಿಗೆ ದೇವರು ಸೊದೋ ಮ್ ಗೊಮೋರಗಳನ್ನು ಕೆಡವಿಬಿಟ್ಟಂತೆ ಇದನ್ನು ಸಹ ಕೆಡವಿಬಿಡುವನು. ಅದು ಎಂದಿಗೂ ನಿವಾಸ ಸ್ಥಳ ವಾಗದು, ಇಲ್ಲವೆ ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಇಲ್ಲವೆ ಯಾವ ಅರಬಿಯನೂ ಗುಡಾರ ಹಾಕನು; ಅಥವಾ ಕುರುಬರು ಮಂದೆಯನ್ನು ತಂಗಿಸರು. ಆದರೆ ಮರುಭೂಮಿಯ ಕಾಡುಮೃಗಗಳು ಅಲ್ಲಿ ಮಲಗುವವು; ಅವರ ಮನೆಗಳು ವ್ಯೆಥೆಯಿಂದ ತುಂಬಿರುವವು; ಅಲ್ಲಿ ಗೂಬೆಗಳು ವಾಸಿಸುವವು, ದೆವ್ವಗಳು ಕುಣಿದಾಡುವವು.ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು. ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು.
- Isaiah 14:22–23 ಯೆಶಾಯ 14:22–23ಅವರಿಗೆ ವಿರುದ್ಧವಾಗಿ ಏಳುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಬಾಬೆಲಿನಿಂದ ಹೆಸರನ್ನೂ ಉಳಿದ ಜನರನ್ನೂ ಮಗನನ್ನೂ ಸೋದರಳಿಯನನ್ನೂ ನಿರ್ಮೂಲ ಮಾಡುವೆನು ಎಂದು ಸೈನ್ಯಗಳ ಕರ್ತನು ಹೇಳುತ್ತಾನೆ. ಅದನ್ನು ಸಹ ಮುಳ್ಳುಹಂದಿಗೆ ಬಾಧ್ಯ ವಾಗಿಯೂ ನೀರಿನ ಕುಣಿಗಳಾಗಿಯೂ ಮಾಡಿ ನಾಶ ವೆಂಬ ಕಸಬರಿಕೆಯಿಂದ ಗುಡಿಸುತ್ತೇನೆಂದು ಸೈನ್ಯಗಳ ಕರ್ತನು ಹೇಳುತ್ತಾನೆ.
- Jeremiah 50:39–40 ಯೆರೆಮೀಯ 50:39–40ಆದದರಿಂದ ಅರಣ್ಯದ ಕಾಡು ಮೃಗಗಳು, ನರಿಗಳು ಕೂಡ ಅಲ್ಲಿ ವಾಸಮಾಡುವವು. ಗೂಬೆಗಳೂ ಸಹ ಅದರಲ್ಲಿ ವಾಸಮಾಡುವವು; ಅದು ಇನ್ನು ಮೇಲೆ ಎಂದೆಂದಿಗೂ ನಿವಾಸವಾಗುವದಿಲ್ಲ; ತಲತಲಾಂತರಗಳ ವರೆಗೂ ಯಾರೂ ಅದರಲ್ಲಿ ತಂಗುವದಿಲ್ಲ. ದೇವರು ಸೊದೋಮನ್ನೂ ಗೊಮೋರವನ್ನು ಅವುಗಳ ಸವಿಾಪದಲ್ಲಿದ್ದ ಪಟ್ಟಣಗಳನ್ನೂ ಕೆಡವಿಹಾಕಿದಾಗ ಆದ ಹಾಗೆ ಅಲ್ಲಿ ಯಾವ ಮನುಷ್ಯನಾದರೂ ವಾಸಮಾಡುವದಿಲ್ಲ; ಅದರಲ್ಲಿ ಯಾವ ನರಪುತ್ರನಾದರೂ ತಂಗುವದಿ ಲ್ಲವೆಂದು ಕರ್ತನು ಅನ್ನುತ್ತಾನೆ.
- Jeremiah 25:12 ಯೆರೆಮೀಯ 25:12ಎಪ್ಪತ್ತು ವರುಷ ತುಂಬಿದ ಮೇಲೆ ನಾನು ಬಾಬೆಲಿನ ಅರಸನನ್ನೂ ಆ ಜನಾಂಗವನ್ನೂ ಕಸ್ದೀಯರ ದೇಶವನ್ನೂ ಅವರ ಅಕ್ರಮಕ್ಕಾಗಿ ವಿಚಾರಿಸಿ ದಂಡಿಸುವೆನು. ಅದನ್ನು ನಿತ್ಯವಾಗಿ ಹಾಳುಮಾಡುವೆನು.
- Jeremiah 51:25–26 ಯೆರೆಮೀಯ 51:25–26ನಾಶಮಾಡುವ ಬೆಟ್ಟವೇ! ಭೂಮಿಯನ್ನೆಲ್ಲಾ ನಾಶಮಾಡುವಂಥಾದ್ದೇ! ಇಗೋ, ನಾನು ನಿನಗೆ ವಿರೋಧವಾಗಿದ್ದೇನೆಂದು ಕರ್ತನು ಅನ್ನುತ್ತಾನೆ. ನಿನ್ನ ಮೇಲೆ ನನ್ನ ಕೈಯನ್ನು ಚಾಚಿ ಬಂಡೆಗಳ ಮೇಲಿನಿಂದ ನಿನ್ನನ್ನು ಹೊರಳಿಸಿ ನಿನ್ನನ್ನು ಸುಟ್ಟ ಬೆಟ್ಟವಾಗಿ ಮಾಡುತ್ತೇನೆ. ಒಬ್ಬರೂ ನಿನ್ನಿಂದ ಮೂಲೆಯ ಕಲ್ಲನ್ನಾಗಲಿ, ಅಸ್ತಿವಾರದ ಕಲ್ಲನ್ನಾಗಲಿ ತೆಗೆಯರು; ನೀನು ಎಂದೆಂದಿಗೂ ಹಾಳಾಗುವಿ ಎಂದು ಕರ್ತನು ಅನ್ನುತ್ತಾನೆ.
- Jeremiah 25:9 ಯೆರೆಮೀಯ 25:9ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.
- Jeremiah 51:29 ಯೆರೆಮೀಯ 51:29ಆಗ ದೇಶವು ಕದಲಿ ವೇದನೆಪಡುವದು; ಬಾಬೆಲಿನ ದೇಶವನ್ನು ನಿವಾಸಿ ಇಲ್ಲದೆ ಹಾಳುಮಾಡುವ ವಿಷಯವಾಗಿ ಬಾಬೆಲಿಗೆ ವಿರೋಧವಾದ ಕರ್ತನ ಆಲೋಚನೆಗಳು ಮಾಡಲ್ಪಡು ವವು.
- Jeremiah 51:37 ಯೆರೆಮೀಯ 51:37ಬಾಬೆಲ್ ದಿಬ್ಬೆಗಳಾಗುವದು; ನಿವಾಸಿಗಳು ಇಲ್ಲದೆ ನರಿಗಳ ವಾಸಸ್ಥಳವೂ ಆಶ್ಚರ್ಯವೂ ಹಾಳೂ ಸಿಳ್ಳಿಡುವಿಕೆಯೂ ಆಗುವದು.