Jeremiah · chapter 51 · verse 7
Jeremiah 51:7 in Kannada
ಬಾಬೆಲ್ ಕರ್ತನ ಕೈಯಲ್ಲಿ ಭೂಮಿಗೆಲ್ಲಾ ಅಮಲೇರಿ ಸಿದ ಚಿನ್ನದ ಪಾತ್ರೆಯಾಗಿತ್ತು; ಜನಾಂಗಗಳು ಅದರ ದ್ರಾಕ್ಷಾರಸವನ್ನು ಕುಡಿದವು; ಆದದರಿಂದ ಜನಾಂಗ ಗಳು ಹುಚ್ಚರಾದರು.
Baabel kartana kaiyalli bhoomigellaa amaleri sida chinnada paatreyaagittu; janaangagalu adara draakshaarasavannu kudidavu; aadadarinda janaanga galu huchcharaadaru.
Jeremiah 51:7 in English
- King James Version (KJV)
- Babylon [hath been] a golden cup in the LORD’s hand, that made all the earth drunken: the nations have drunken of her wine; therefore the nations are mad.
- World English Bible (WEB)
- Babylon has been a golden cup in the LORD’s hand, who made all the earth drunk. The nations have drunk of her wine; therefore the nations have gone mad.
- American Standard Version (ASV)
- Babylon hath been a golden cup in Jehovah’s hand, that made all the earth drunken: the nations have drunk of her wine; therefore the nations are mad.
- Bible in Basic English (BBE)
- Babylon has been a gold cup in the hand of the Lord, which has made all the earth overcome with wine: the nations have taken of her wine, and for this cause the nations have gone off their heads.
- Darby Translation (DBY)
- Babylon hath been a golden cup in Jehovah's hand, that made all the earth drunken: the nations have drunk of her wine; therefore have the nations become mad.
- Webster's Bible (WBS)
- Babylon [hath been] a golden cup in the LORD'S hand, that made all the earth drunken: the nations have drank of her wine; therefore the nations are mad.
- Young's Literal Translation (YLT)
- A golden cup [is] Babylon in the hand of Jehovah, Making drunk all the earth, Of its wine drunk have nations, Therefore boast themselves do nations.
Read in context
- 5ಅವರ ದೇಶವು ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾದ ಪಾಪದಿಂದ ತುಂಬಿದ್ದಾಗ್ಯೂ ಇಸ್ರಾಯೇಲಾದರೂ ಯೆಹೂದವಾದರೂ ತನ್ನ ದೇವರಾದ ಸೈನ್ಯಗಳ ಕರ್ತನಿಂದ ಬಿಡಲ್ಪಟ್ಟದ್ದಲ್ಲ.
- 6ಬಾಬೆಲಿನೊಳಗಿಂದ ಓಡಿಹೋಗಿರಿ, ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳಲಿ; ಅದರ ಅಕ್ರಮದಲ್ಲಿ ನಾಶವಾಗ ಬೇಡಿರಿ; ಇದು ಕರ್ತನ ಪ್ರತಿದಂಡನೆಯ ಕಾಲವು; ಆತನೇ ಅದಕ್ಕೆ ಮುಯ್ಯಿಗೆಮುಯ್ಯಿ ಕೊಡುತ್ತಾನೆ.
- 7ಬಾಬೆಲ್ ಕರ್ತನ ಕೈಯಲ್ಲಿ ಭೂಮಿಗೆಲ್ಲಾ ಅಮಲೇರಿ ಸಿದ ಚಿನ್ನದ ಪಾತ್ರೆಯಾಗಿತ್ತು; ಜನಾಂಗಗಳು ಅದರ ದ್ರಾಕ್ಷಾರಸವನ್ನು ಕುಡಿದವು; ಆದದರಿಂದ ಜನಾಂಗ ಗಳು ಹುಚ್ಚರಾದರು.
- 8ಇದ್ದಕ್ಕಿದ್ದ ಹಾಗೆ ಬಾಬೆಲ್ ಬಿದ್ದು ಮುರಿಯಲ್ಪಟ್ಟಿದೆ; ಅದರ ವಿಷಯ ಗೋಳಾ ಡಿರಿ; ಅದರ ನೋವಿಗೆ ತೈಲ ತಕ್ಕೊಳ್ಳಿರಿ; ಒಂದು ವೇಳೆ ವಾಸಿಯಾದೀತು.
- 9ನಾವು ಬಾಬೆಲನ್ನು ವಾಸಿಮಾಡುವದಕ್ಕಿದ್ದೆವು. ಆದರೆ ಅದು ವಾಸಿಯಾಗಲಿಲ್ಲ; ಅದನ್ನು ಬಿಡು, ನಮ್ಮ ಸ್ವಂತ ದೇಶಗಳಿಗೆ ಹೋಗೋಣ; ಅದರ ನ್ಯಾಯ ತೀರ್ವಿಕೆಯು ಆಕಾಶಗಳಿಗೆ ಮುಟ್ಟುತ್ತದೆ; ಆಕಾಶಗಳ ವರೆಗೂ ಏಳುತ್ತದೆ.
Cross references
- Revelation 14:8 ಪ್ರಕಟನೆ 14:8ಅವನ ಹಿಂದೆ ಇನ್ನೊಬ್ಬ ದೂತನು ಬಂದು--ಬಾಬೆಲೆಂಬ ಆ ಮಹಾನಗರಿಯು ಬಿದ್ದಳು, ಬಿದ್ದಳು; ಯಾಕಂದರೆ ಅವಳು ತನ್ನ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಸಕಲ ಜನಾಂಗಗಳು ಕುಡಿಯುವಂತೆ ಮಾಡಿದಳು ಎಂದು ಹೇಳಿದನು.
- Revelation 17:4 ಪ್ರಕಟನೆ 17:4ಆ ಸ್ತ್ರೀಯು ಧೂಮ್ರ ಮತ್ತು ಕೆಂಪುವರ್ಣದ ವಸ್ತ್ರಗಳನ್ನು ಧರಿಸಿಕೊಂಡು ಚಿನ್ನ ಅಮೂಲ್ಯವಾದ ಕಲ್ಲುಗಳು ಮತ್ತು ಮುತ್ತುಗಳು ಇವುಗಳಿಂದ ಅಲಂಕರಿಸಿಕೊಂಡಿದ್ದಳು; ಅವಳ ಕೈಯಲ್ಲಿ ಒಂದು ಚಿನ್ನದ ಬಟ್ಟಲು ಇತ್ತು; ಅದು ಅವಳ ಜಾರತ್ವದ ಅಸಹ್ಯವಾದವುಗಳಿಂದಲೂ ಅಶುದ್ಧತ್ವದಿಂದಲೂ ತುಂಬಿತು
- Revelation 17:2 ಪ್ರಕಟನೆ 17:2ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು. ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು.
- Revelation 18:3 ಪ್ರಕಟನೆ 18:3ಎಲ್ಲಾ ಜನಾಂಗಗಳು ಅವಳ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು; ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು; ಅವಳ ಅತಿಶಯವಾದ ವೈಭವದಿಂದ ಭೂಲೋಕದ ವರ್ತಕರು ಐಶ್ವರ್ಯವಂತರಾದರು ಎಂದು ಹೇಳಿದನು.
- Daniel 2:32 ದಾನಿಯೇಲನು 2:32ಈ ಪ್ರತಿ ಮೆಯ ತಲೆಯು ಚೊಕ್ಕ ಬಂಗಾರದಿಂದಲೂ ಅದರ ಎದೆಯು ಮತ್ತು ತೋಳುಗಳು ಬೆಳ್ಳಿಯಿಂದಲೂ ಅದರ ಹೊಟ್ಟೆಯು ಮತ್ತು ತೊಡೆಗಳು ಹಿತ್ತಾಳೆಯಿಂದಲೂ
- Revelation 18:23 ಪ್ರಕಟನೆ 18:23ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಪ್ರಕಾಶಿಸು ವದಿಲ್ಲ. ವಧೂವರರ ಸ್ವರವು ನಿನ್ನಲ್ಲಿ ಇನ್ನೆಂದಿಗೂ ಕೇಳಿಸುವದಿಲ್ಲ; ನಿನ್ನ ವರ್ತಕರು ಭೂಮಿಯ ಪ್ರಧಾನ ರಾಗಿದ್ದದ್ದಲ್ಲದೆ ನಿನ್ನ ಮಾಟದಿಂದ ಎಲ್ಲಾ ಜನಾಂಗ ದವರು ಮೋಸ ಹೋದರು.ಪ್ರವಾದಿಗಳ, ಪರಿ ಶುದ್ಧರ ಮತ್ತು ಭೂಮಿಯ ಮೇಲೆ ಕೊಲ್ಲಲ್ಪಟ್ಟವರೆಲ್ಲರ ರಕ್ತವು ನಿನ್ನಲ್ಲಿ ಸಿಕ್ಕಿತು ಎಂದು ಹೇಳಿದನು.
- Isaiah 14:4 ಯೆಶಾಯ 14:4ಹೀಗೆ ಹಿಂಸಕನು ಕೊನೆ ಗೊಂಡನು, ಬಂಗಾರದ ಪಟ್ಟಣವು ಸುಮ್ಮನೆ ಇದೆ.
- Daniel 2:38 ದಾನಿಯೇಲನು 2:38ಮನುಷ್ಯರ ಮಕ್ಕಳು, ಭೂಮಿಯ ಮೃಗಗಳೂ ಆಕಾಶದ ಪಕ್ಷಿಗಳೂ ವಾಸಿಸುವಂತಾದ್ದೆಲ್ಲವನ್ನೂ ನಿನ್ನ ಕೈಯಲ್ಲಿ ಕೊಟ್ಟು ಅವೆಲ್ಲವುಗಳನ್ನು ಆಳುವಂತೆ ನಿನ್ನನ್ನು ಮಾಡಿದ್ದಾನೆ. ಆ ಬಂಗಾರದ ತಲೆಯು ನೀನೇ.
- Daniel 3:1–7 ದಾನಿಯೇಲನು 3:1–7ಅರಸನಾದ ನೆಬೂಕದ್ನೆಚ್ಚರನು ಅರವತ್ತು ಮೊಳ ಎತ್ತರವಾಗಿಯೂ ಆರು ಮೊಳ ಅಗಲವಾಗಿಯೂ ಇರುವ ಒಂದು ಬಂಗಾರದ ಪ್ರತಿ ಮೆಯನ್ನು ಮಾಡಿಸಿ, ಬಾಬೆಲ್ ಪ್ರಾಂತ್ಯದಲ್ಲಿರುವ ದೂರಾ ಎಂಬ ಬಯಲಿನಲ್ಲಿ ನಿಲ್ಲಿಸಿದನು. ಆ ಮೇಲೆ ಅರಸನಾದ ನೆಬೂಕದ್ನೆಚ್ಚರನು ಪ್ರಭುಗಳನ್ನೂ ರಾಜ್ಯ ಪಾಲರನ್ನೂ ಆಲೋಚನಾಕರ್ತರು ಅಧಿಕಾರಸ್ಥರನ್ನೂ ನ್ಯಾಯಾಧಿಪತಿಗಳನ್ನೂ ಬೊಕ್ಕಸದವರನ್ನೂ ಮತ್ತು ಸಲಹೆಗಾರರನ್ನೂ ಪಂಡಿತರನ್ನೂ ಎಲ್ಲಾ ಪ್ರಾಂತ್ಯಗಳ ಅಧಿಕಾರಿಗಳನ್ನೂ ತಾನು ನಿಲ್ಲಿಸಿದ್ದ ಪ್ರತಿಮೆಯ ಪ್ರತಿ ಷ್ಠೆಗೆ ಕರೆಯಿಸಿದನು. ಆಗ ಪ್ರಧಾನರು (ಆಲೋಚ ನಾಗಾರರು) ರಾಜ್ಯಪಾಲರು ಅಧಿಕಾರಸ್ಥರು, ನ್ಯಾಯಾ ಧಿಪತಿಗಳು, ಬೊಕ್ಕಸದವರು ಸಲಹೆಗಾರರು, ಪಂಡಿ ತರು, ಎಲ್ಲಾ ಪ್ರಾಂತ್ಯಗಳ ಅಧಿಕಾರಿಗಳು, ಅರಸನಾದ ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಪ್ರತಿಷ್ಠೆಗಾಗಿ ಕೂಡಿ ಬಂದು ನೆಬೂಕದ್ನೆಚ್ಚರನು ನಿಲ್ಲಿಸಿದ ಪ್ರತಿಮೆಯ ಮುಂದೆ ಬಂದು ನಿಂತರು. ಆಗ ಸಾರುವವನು ಗಟ್ಟಿ ಯಾಗಿ ಕೂಗಿ--ಓ ಪ್ರಜೆಗಳೇ, ಜನಾಂಗಗಳೇ ಮತ್ತು ನಾನಾ ಭಾಷೆಯವರೇ, ನಿಮಗೆ ಆಜ್ಞಾಪಿಸುವದೇ ನಂದರೆ-- ನೀವು ಕೊಂಬು, ಪಿಳ್ಳಂಗೋವಿ, ತಂಬೂರಿ, ವೀಣೆ, ಕಿನ್ನರಿ, ನಾದಸ್ವರ ಮೊದಲಾದ ವಾದ್ಯಗಳ ಶಬ್ದವನ್ನು ಕೇಳುವಾಗ ಅರಸನಾದ ನೆಬೂಕ ದ್ನೆಚ್ಚರನು ನಿಲ್ಲಿಸಿದ್ದ ಬಂಗಾರದ ಪ್ರತಿಮೆಯ ಮುಂದೆ ಅಡ್ಡಬಿದ್ದು ಆರಾಧಿಸಬೇಕು. ಯಾವನು ಅಡ್ಡಬೀಳ ದೆಯೂ ನಮಸ್ಕರಿಸದೆಯೂ ಇರುವನೋ ಅವನು ಅದೇ ಗಳಿಗೆಯಲ್ಲಿ ಉರಿಯುವ ಬೆಂಕಿಯ ಆವಿಗೆಯ ಮಧ್ಯದಲ್ಲಿ ಹಾಕಲ್ಪಡುವನು ಅಂದನು. ಆದದರಿಂದ ಆ ಸಮಯದಲ್ಲಿ ಜನರೆಲ್ಲರು ಕೊಂಬು, ಕೊಳಲು, ತಂಬೂರಿ, ವೀಣೆ, ಕಿನ್ನರಿ ನಾದಸ್ವರ ಮೊದಲಾದವುಗಳ ಶಬ್ದವನ್ನು ಕೇಳುವಾಗ ಎಲ್ಲಾ ಪ್ರಜೆಗಳು ಜನಾಂಗಗಳು, ಭಾಷೆಯವರು ಅಡ್ಡಬಿದ್ದು ಅರಸನಾದ ನೆಬೂಕದ್ನೆ ಚ್ಚರನು ನಿಲ್ಲಿಸಿದ ಪ್ರತಿಮೆಯನ್ನು ಆರಾಧಿಸಿದರು.
- Jeremiah 25:14–27 ಯೆರೆಮೀಯ 25:14–27ಅನೇಕ ಜನಾಂಗಗಳೂ ದೊಡ್ಡ ಅರಸರೂ ಅವರಿಂದ ಸೇವೆ ಮಾಡಿಸಿಕೊಳ್ಳುವರು. ಅವರ ಕ್ರಿಯೆ ಗಳ ಪ್ರಕಾರವೂ ಅವರ ಕೈ ಕೆಲಸದ ಪ್ರಕಾರವೂ ನಾನು ಅವರಿಗೆ ಪ್ರತಿಫಲ ಕೊಡುವೆನು ಎಂದು ಕರ್ತನು ಅನ್ನುತ್ತಾನೆ. ಇಸ್ರಾಯೇಲಿನ ದೇವರಾದ ಕರ್ತನು ನನಗೆ ಹೀಗೆ ಹೇಳುತ್ತಾನೆ--ಈ ರೌದ್ರದ ದ್ರಾಕ್ಷಾರಸ ಪಾತ್ರೆ ಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತಕ್ಕೋ. ಆಗ ಅವರು ಕುಡಿದು ನಾನು ಅವರ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತ ಕದಲಿ ಹುಚ್ಚರಾಗುವರು ಅಂದನು. ಆಗ ನಾನು ಪಾತ್ರೆಯನ್ನು ಕರ್ತನ ಕೈಯಿಂದ ತಕ್ಕೊಂಡು ಕರ್ತನು ನನ್ನನ್ನು ಕಳುಹಿಸಿದ ಎಲ್ಲಾ ಜನಾಂಗಗಳಿಗೆ ಕುಡಿಸಿದೆನು. ಯೆರೂಸ ಲೇಮಿಗೂ ಯೆಹೂದದ ಪಟ್ಟಣಗಳಿಗೂ ಅದರ ಅರಸುಗಳಿಗೂ ಪ್ರಭುಗಳಿಗೂ ಅವರನ್ನು ಇಂದಿನ ಪ್ರಕಾರ ಹಾಳುಮಾಡಿ ವಿಸ್ಮಯಕ್ಕೂ ಸಿಳ್ಳಿಡುವಿಕೆಗೂ ಶಾಪಕ್ಕೂ ಗುರಿಮಾಡುವ ಹಾಗೆ ಕುಡಿಸಿದೆನು. ಐಗುಪ್ತದ ಅರಸನಾದ ಫರೋಹನಿಗೂ ಅವನ ಸೇವಕರಿಗೂ ಅವನ ಪ್ರಭುಗಳಿಗೂ ಅವನ ಎಲ್ಲಾ ಜನರಿಗೂ ಮಿಶ್ರವಾದ ಜನರೆಲ್ಲರಿಗೂ ಊಚ್ ದೇಶದ ಅರಸರೆಲ್ಲರಿಗೂ ಫಿಲಿಷ್ಟಿಯ ದೇಶದ ಅರಸರೆಲ್ಲರಿಗೂ ಅಷ್ಕೆಲೋನಿಗೂ ಗಾಜಾಕ್ಕೂ ಎಕ್ರೋನಿಗೂ ಅಷ್ಡೋ ದಿನ ಉಳಿದವರಿಗೂ ಎದೋಮಿಗೂ ಮೋವಾ ಬಿಗೂ ಅಮ್ಮೋನನ ಮಕ್ಕಳಿಗೂ ತೂರಿನ ಅರಸರೆ ಲ್ಲರಿಗೂ ಚೀದೋನಿನ ಅರಸರೆಲ್ಲರಿಗೂ ಸಮುದ್ರದ ಆಚೆಯಲ್ಲಿರುವ ದ್ವೀಪದ ಅರಸರಿಗೂ ದೆದಾನಿಗೂ ತೇಮಾಗೂ ಬೂಜಿಗೂ ಕಟ್ಟಕಡೆಯ ಮೂಲೆಯ ವರೆಗೂ ಅರಬಿಯದ ಅರಸರೆಲ್ಲರಿಗೂ ಅರಣ್ಯದಲ್ಲಿ ವಾಸಿಸುವ ಮಿಶ್ರವಾದ ಜನರ ಅರಸರೆಲ್ಲರಿಗೂ ಜಿಮ್ರಿಯ ಅರಸರೆಲ್ಲರಿಗೂ ಏಲಾಮಿನ ಅರಸರೆ ಲ್ಲರಿಗೂ ಮೇದ್ಯದ ಅರಸರೆಲ್ಲರಿಗೂ ಹತ್ತಿರದ ಲ್ಲಿಯೂ ದೂರದಲ್ಲಿಯೂ ಒಬ್ಬರ ಬಳಿಯಲ್ಲಿ ಒಬ್ಬರಿ ರುವ ಉತ್ತರದಿಕ್ಕಿನ ಅರಸರೆಲ್ಲರಿಗೂ ಭೂಮಿಯ ಮೇಲ್ಭಾಗದಲ್ಲಿರುವಂಥ ಲೋಕದ ಎಲ್ಲಾ ರಾಜ್ಯ ಗಳಿಗೂ ಕುಡಿಸಿದೆನು; ಶೇಷಕಿನ ಅರಸನು ಅವರ ತರುವಾಯ ಕುಡಿಯುವನು. ಆದದರಿಂದ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಾನು ನಿಮ್ಮ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತವೇ ಕುಡಿಯಿರಿ, ಮತ್ತರಾಗಿರಿ, ಕಾರಿರಿ, ಬೀಳಿರಿ, ಇನ್ನು ಮೇಲೆ ತಿರುಗಿ ಏಳದಿರ್ರಿ.
- Habakkuk 2:15–16 ಹಬಕ್ಕೂಕ 2:15–16ತನ್ನ ನೆರೆಯವ ನಿಗೆ ಕುಡಿಯಕೊಟ್ಟು ನಿನ್ನ ಬುಟ್ಟಿಯನ್ನು ಹೊಯಿದು ಅವರ ಬೆತ್ತಲೆತನವನ್ನು ನೋಡುವ ಹಾಗೆ ಅಮಲೇರಿ ಸುವವನಿಗೆ ಅಯ್ಯೋ! ಘನತೆಗೆ ಬದಲಾಗಿ ನಿಂದೆ ಯಿಂದ ತುಂಬಿದ್ದೀ; ನೀನು ಸಹ ಕುಡಿದು ನಿನ್ನ ಮುಂದೊಗಲು ಮುಚ್ಚಲ್ಪಡದಿರಲಿ. ಕರ್ತನ ಬಲಗೈಯ ಪಾತ್ರೆ ನಿನ್ನ ಕಡೆಗೆ ತಿರುಗುವದು. ನಿನ್ನ ಘನತೆಯ ಮೇಲೆ ಕಾರುವಿಕೆಯೂ ಲಜ್ಜೆಯೂ ಇರುವದು.
- Jeremiah 25:9 ಯೆರೆಮೀಯ 25:9ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ.