Jeremiah · chapter 51 · verse 8
Jeremiah 51:8 in Kannada
ಇದ್ದಕ್ಕಿದ್ದ ಹಾಗೆ ಬಾಬೆಲ್ ಬಿದ್ದು ಮುರಿಯಲ್ಪಟ್ಟಿದೆ; ಅದರ ವಿಷಯ ಗೋಳಾ ಡಿರಿ; ಅದರ ನೋವಿಗೆ ತೈಲ ತಕ್ಕೊಳ್ಳಿರಿ; ಒಂದು ವೇಳೆ ವಾಸಿಯಾದೀತು.
Iddakkidda haage baabel biddu muriyalpattide; adara vishaya golaa diri; adara novige taila takkolliri; ondu vele vaasiyaadeetu.
Jeremiah 51:8 in English
- King James Version (KJV)
- Babylon is suddenly fallen and destroyed: howl for her; take balm for her pain, if so be she may be healed.
- World English Bible (WEB)
- Babylon has suddenly fallen and been destroyed! Wail for her! Take balm for her pain. Perhaps she may be healed.
- American Standard Version (ASV)
- Babylon is suddenly fallen and destroyed: wail for her; take balm for her pain, if so be she may be healed.
- Bible in Basic English (BBE)
- Sudden is the downfall of Babylon and her destruction: make cries of grief for her; take sweet oil for her pain, if it is possible for her to be made well.
- Darby Translation (DBY)
- Babylon is suddenly fallen and ruined. Howl over her; take balm for her pain, if so be she may be healed.
- Webster's Bible (WBS)
- Babylon is suddenly fallen and destroyed: howl for her; take balm for her pain, it may be she may be healed.
- Young's Literal Translation (YLT)
- Suddenly hath Babylon fallen, Yea, it is broken, howl ye for it, Take balm for her pain, if so be it may be healed.
Read in context
- 6ಬಾಬೆಲಿನೊಳಗಿಂದ ಓಡಿಹೋಗಿರಿ, ಒಬ್ಬೊಬ್ಬನು ತನ್ನ ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳಲಿ; ಅದರ ಅಕ್ರಮದಲ್ಲಿ ನಾಶವಾಗ ಬೇಡಿರಿ; ಇದು ಕರ್ತನ ಪ್ರತಿದಂಡನೆಯ ಕಾಲವು; ಆತನೇ ಅದಕ್ಕೆ ಮುಯ್ಯಿಗೆಮುಯ್ಯಿ ಕೊಡುತ್ತಾನೆ.
- 7ಬಾಬೆಲ್ ಕರ್ತನ ಕೈಯಲ್ಲಿ ಭೂಮಿಗೆಲ್ಲಾ ಅಮಲೇರಿ ಸಿದ ಚಿನ್ನದ ಪಾತ್ರೆಯಾಗಿತ್ತು; ಜನಾಂಗಗಳು ಅದರ ದ್ರಾಕ್ಷಾರಸವನ್ನು ಕುಡಿದವು; ಆದದರಿಂದ ಜನಾಂಗ ಗಳು ಹುಚ್ಚರಾದರು.
- 8ಇದ್ದಕ್ಕಿದ್ದ ಹಾಗೆ ಬಾಬೆಲ್ ಬಿದ್ದು ಮುರಿಯಲ್ಪಟ್ಟಿದೆ; ಅದರ ವಿಷಯ ಗೋಳಾ ಡಿರಿ; ಅದರ ನೋವಿಗೆ ತೈಲ ತಕ್ಕೊಳ್ಳಿರಿ; ಒಂದು ವೇಳೆ ವಾಸಿಯಾದೀತು.
- 9ನಾವು ಬಾಬೆಲನ್ನು ವಾಸಿಮಾಡುವದಕ್ಕಿದ್ದೆವು. ಆದರೆ ಅದು ವಾಸಿಯಾಗಲಿಲ್ಲ; ಅದನ್ನು ಬಿಡು, ನಮ್ಮ ಸ್ವಂತ ದೇಶಗಳಿಗೆ ಹೋಗೋಣ; ಅದರ ನ್ಯಾಯ ತೀರ್ವಿಕೆಯು ಆಕಾಶಗಳಿಗೆ ಮುಟ್ಟುತ್ತದೆ; ಆಕಾಶಗಳ ವರೆಗೂ ಏಳುತ್ತದೆ.
- 10ಕರ್ತನು ನಮ್ಮ ನೀತಿಯನ್ನು ಹೊರಗೆ ತಂದಿದ್ದಾನೆ; ಬನ್ನಿ, ನಮ್ಮ ದೇವರಾದ ಕರ್ತನ ಕ್ರಿಯೆಯನ್ನು, ಚೀಯೋನಿನಲ್ಲಿ ಸಾರಿ ಹೇಳೋಣ.
Cross references
- Jeremiah 46:11 ಯೆರೆಮೀಯ 46:11ಐಗುಪ್ತದ ಮಗಳಾದ ಕನ್ಯಾಸ್ತ್ರೀಯೇ, ಗಿಲ್ಯಾದಿಗೆ ಹೋಗಿ ತೈಲವನ್ನು ತಕ್ಕೋ! ನೀನು ಬಹಳ ಮದ್ದು ತಕ್ಕೊಳ್ಳುವದು ವ್ಯರ್ಥವಾಗಿದೆ; ನಿನಗೆ ಗುಣವಾಗು ವದಿಲ್ಲ.
- Isaiah 21:9 ಯೆಶಾಯ 21:9ಇಗೋ, ಸವಾರರು ಜೋಡಿ ಜೋಡಿಯಾಗಿ ಬರುತ್ತಾರೆ ಮತ್ತು ಪ್ರತ್ಯುತ್ತರ ವಾಗಿ--ಬಾಬೆಲ್ ಬಿತ್ತು, ಆದರೆ ಕೆತ್ತಿದ ದೇವತೆಗಳ ವಿಗ್ರಹಗಳನ್ನು ಮುರಿದು ನೆಲಸಮ ಮಾಡಿಬಿಟ್ಟರು ಎಂದು ಹೇಳಿದನು.
- Revelation 14:8 ಪ್ರಕಟನೆ 14:8ಅವನ ಹಿಂದೆ ಇನ್ನೊಬ್ಬ ದೂತನು ಬಂದು--ಬಾಬೆಲೆಂಬ ಆ ಮಹಾನಗರಿಯು ಬಿದ್ದಳು, ಬಿದ್ದಳು; ಯಾಕಂದರೆ ಅವಳು ತನ್ನ ಜಾರತ್ವವೆಂಬ ಕೋಪದ ದ್ರಾಕ್ಷಾರಸವನ್ನು ಸಕಲ ಜನಾಂಗಗಳು ಕುಡಿಯುವಂತೆ ಮಾಡಿದಳು ಎಂದು ಹೇಳಿದನು.
- Revelation 18:2 ಪ್ರಕಟನೆ 18:2ಅವನು ಗಟ್ಟಿ ಯಾದ ಶಬ್ದದಿಂದ ಕೂಗುತ್ತಾ--ಮಹಾಬಾಬೆಲ್ ಬಿದ್ದಳು, ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಪಂಜರವೂ ಆದಳು.
- Jeremiah 48:20 ಯೆರೆಮೀಯ 48:20ಮೋವಾಬು ನಾಚಿಕೆಪಡುತ್ತದೆ; ಮುರಿದು ಹೋಯಿತು; ಗೋಳಾಡಿರಿ, ಕೂಗಿರಿ; ಮೋವಾಬು ಸೂರೆಯಾಯಿತೆಂದು ಅರ್ನೋನಿನಲ್ಲಿ ಅದನ್ನು ತಿಳಿಸಿರಿ.
- Jeremiah 50:2 ಯೆರೆಮೀಯ 50:2ಜನಾಂಗಗಳಿಗೆ ತಿಳಿಸಿರಿ, ಸಾರಿರಿ; ಧ್ವಜವನ್ನೆತ್ತಿರಿ; ಸಾರಿರಿ, ಮರೆಮಾಡಬೇಡಿರಿ, ಬಾಬೆಲು ಹಿಡಿಯ ಲ್ಪಟ್ಟಳು, ಬೇಲ್ನಿಗೆ ನಾಚಿಕೆಯಾಯಿತು, ಮೆರೋದಾ ಕನು ತುಂಡು ತುಂಡಾಗಿ ಮುರಿದು ಹೋದನು, ಅವಳ ವಿಗ್ರಹಗಳಿಗೆ ನಾಚಿಕೆಯಾಯಿತು. ಅವಳ ವಿಗ್ರಹಗಳು ಮುರಿದು ಹೋದವೆಂದು ಹೇಳಿರಿ;
- Jeremiah 51:41 ಯೆರೆಮೀಯ 51:41ಶೇಷಕ್ ಹೇಗೆ ಹಿಡಿಯಲ್ಪಟ್ಟಿದೆ, ಸಮಸ್ತ ಭೂಮಿಯ ಹೊಗಳಿಕೆಯು ಆಶ್ಚರ್ಯಗೊಂಡಿದೆ; ಬಾಬೆಲ್ ಜನಾಂಗಗಳೊಳಗೆ ಹೀಗೆ ವಿಸ್ಮಯಗೊಳಗಾಯಿತು!
- Jeremiah 8:22 ಯೆರೆಮೀಯ 8:22ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಮಗಳಿಗೆ ಯಾಕೆ ಸ್ವಸ್ಥವಾಗಲಿಲ್ಲ?
- Nahum 3:19 ನಹೂಮ 3:19ನಿನ್ನ ಗಾಯವು ಗುಣಹೊಂದದು; ನಿನ್ನ ಗಾಯ ಕಠಿಣ ವಾದದ್ದು; ನಿನ್ನ ಸುದ್ದಿಯನ್ನು ಕೇಳುವವರೆಲ್ಲರು ನಿನಗೆ ಚಪ್ಪಾಳೆ ಹೊಡೆಯುವರು; ನಿನ್ನ ಕೆಟ್ಟತನವು ನಿತ್ಯವಾಗಿ ಯಾರ ಮೇಲೆ ಹಾದುಹೋಗದೆ ಇತ್ತು?
- Jeremiah 30:12–15 ಯೆರೆಮೀಯ 30:12–15ಕರ್ತನು ಹೀಗೆ ಹೇಳುತ್ತಾನೆ--ನಿನ್ನ ಗಾಯವು ಗುಣಹೊಂದದು ನಿನ್ನ ಬಾಸುಂಡೆಯು ಅಘೋರ ವಾದದ್ದು. ಅದನ್ನು ನಿನಗೆ ಕಟ್ಟುವ ಹಾಗೆ ನಿನಗೋ ಸ್ಕರ ವಾದಿಸುವವರು ಯಾರೂ ಇರುವದಿಲ್ಲ. ವಾಸಿ ಮಾಡುವ ಔಷಧಗಳು ನಿನಗೆ ಇಲ್ಲ. ನಿನ್ನನ್ನು ಪ್ರೀತಿ ಮಾಡುವವರೆಲ್ಲರು ನಿನ್ನನ್ನು ಮರೆತುಬಿಟ್ಟಿದ್ದಾರೆ, ನಿನ್ನನ್ನು ಹುಡುಕುವದಿಲ್ಲ; ನಿನ್ನ ಅಕ್ರಮಗಳು ಬಹಳವೂ ನಿನ್ನ ಪಾಪಗಳು ಪ್ರಬಲವೂ ಆಗಿರುವದರಿಂದ ಶತ್ರುವಿನ ಗಾಯದಿಂದಲೂ ಕ್ರೂರನ ಶಿಕ್ಷೆಯಿಂದಲೂ ನಾನು ನಿನ್ನನ್ನು ಗಾಯಪಡಿಸಿದ್ದೇನೆ. ನಿನ್ನ ಗಾಯದ ನೋವಿನ ನಿಮಿತ್ತ ಯಾಕೆ ಕೂಗುತ್ತೀ? ನಿನ್ನ ದುಃಖವು ಗುಣವಾಗ ದಂಥದ್ದೇ; ನಿನ್ನ ಅಕ್ರಮಗಳು ಬಹಳವಾಗಿರುವದ ರಿಂದಲೂ ನಿನ್ನ ಪಾಪಗಳು ಪ್ರಬಲವಾಗಿರುವದ ರಿಂದಲೂ ಇವುಗಳನ್ನು ನಿನಗೆ ಮಾಡಿದ್ದೇನೆ.
- Revelation 18:17–19 ಪ್ರಕಟನೆ 18:17–19ಅಷ್ಟು ದೊಡ್ಡ ಐಶ್ವರ್ಯವು ಒಂದೇ ಗಳಿಗೆಯಲ್ಲಿ ಇಲ್ಲದೆ ಹೋಯಿತಲ್ಲಾ ಅನ್ನುವರು. ಇದಲ್ಲದೆ ಹಡಗುಗಳ ಯಜಮಾನರೂ ಹಡಗುಗಳಲ್ಲಿ ಜೊತೆಯಾಗಿರುವವರೂ ನಾವಿಕರೂ ಸಮುದ್ರದ ಮೇಲೆ ವ್ಯಾಪಾರ ಮಾಡುವವರೆಲ್ಲರೂ ದೂರದಲ್ಲಿ ನಿಂತು ಅವಳ ದಹನದ ಹೊಗೆಯನ್ನು ನೋಡುತ್ತಾ--ಈ ಮಹಾ ಪಟ್ಟಣಕ್ಕೆ ಸಮಾನವಾದ ಪಟ್ಟಣವು ಯಾವದು ಎಂದು ಕೂಗಿ ಹೇಳಿದರು. ಆಗ ಅವರು ತಮ್ಮ ತಲೆಗಳ ಮೇಲೆ ಧೂಳನು ಹೊಯಿದುಕೊಂಡು ಕೂಗುತ್ತಾ ಅಳುತ್ತಾ, ಗೋಳಾ ಡುತ್ತಾ--ಅಯ್ಯೋ, ಅಯ್ಯೋ ಸಮುದ್ರದ ಮೇಲೆ ಹಡಗುಗಳಿದ್ದವರೆಲ್ಲರನ್ನು ತನ್ನ ಅಮೂಲ್ಯ ದ್ರವ್ಯ ಗಳಿಂದ ಐಶ್ವರ್ಯವಂತರನ್ನಾಗಿ ಮಾಡಿದ ಆ ಮಹಾ ನಗರಿಯು ಒಂದೇ ಗಳಿಗೆಯಲ್ಲಿ ಹಾಳಾದಳಲ್ಲಾ ಎಂದು
- Daniel 5:31 ದಾನಿಯೇಲನು 5:31ಮೇದ್ಯಯನಾದ ದಾರ್ಯಾವೆಷನು ಅರವತ್ತೆರಡು ವರುಷದವನಾಗಿ ರಾಜ್ಯವನ್ನು ವಶಪಡಿಸಿಕೊಂಡನು.