Jeremiah · chapter 52 · verse 13
Jeremiah 52:13 in Kannada
ಕರ್ತನ ಆಲಯವನ್ನೂ ಅರಸನ ಮನೆಯನ್ನೂ ಯೆರೂಸಲೇಮಿನ ಎಲ್ಲಾ ಮನೆಗಳನ್ನೂ ದೊಡ್ಡವರ ಎಲ್ಲಾ ಮನೆಗಳನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು;
Kartana aalayavannoo arasana maneyannoo yeroosalemina ellaa manegalannoo doddavara ellaa manegalannoo benkiyinda suttu bittanu;
Jeremiah 52:13 in English
- King James Version (KJV)
- And burned the house of the LORD, and the king’s house; and all the houses of Jerusalem, and all the houses of the great [men], burned he with fire:
- World English Bible (WEB)
- He burned the LORD’s house, and the king’s house; and all the houses of Jerusalem, even every great house, he burned with fire.
- American Standard Version (ASV)
- And he burned the house of Jehovah, and the king’s house; and all the houses of Jerusalem, even every great house, burned he with fire.
- Bible in Basic English (BBE)
- And he had the house of the Lord and the king's house and all the houses of Jerusalem, even every great house, burned with fire:
- Darby Translation (DBY)
- and he burned the house of Jehovah, and the king's house, and all the houses of Jerusalem; and every great [man's] house he burned with fire.
- Webster's Bible (WBS)
- And burned the house of the LORD, and the king's house; and all the houses of Jerusalem, and all the houses of the great [men] he burned with fire:
- Young's Literal Translation (YLT)
- and he burneth the house of Jehovah, and the house of the king, and all the houses of Jerusalem, even every great house he hath burned with fire,
Read in context
- 11ಇದಲ್ಲದೆ ಬಾಬೆಲಿನ ಅಸನು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿಸಿ, ಅವನನ್ನು ಹಿತ್ತಾಳೆಯ ಸಂಕೋಲೆಗಳಿಂದ ಕಟ್ಟಿಸಿ, ಬಾಬೆಲಿಗೆ ಒಯ್ದು ಅವನು ಸಾಯುವ ದಿನದ ವರೆಗೆ ಸೆರೆಮನೆಯಲ್ಲಿ ಇಟ್ಟನು.
- 12ಬಾಬೆಲಿನ ಅರಸನಾದ ನೆಬೂಕದೇಚ್ಚರನ ಹತ್ತೊಂಭತ್ತನೇ ವರುಷದ, ಐದನೇ ತಿಂಗಳಿನ, ಹತ್ತನೇ ದಿವಸದಲ್ಲಿ, ಬಾಬೆಲಿನ ಅರಸನ ಸೇವಕನೂ ಕಾವಲಿನ ಅಧಿಪತಿಯೂ ಆಗಿದ್ದ ನೆಬೂಜರದಾನನು ಯೆರೂ ಸಲೇಮಿಗೆ ಬಂದು,
- 13ಕರ್ತನ ಆಲಯವನ್ನೂ ಅರಸನ ಮನೆಯನ್ನೂ ಯೆರೂಸಲೇಮಿನ ಎಲ್ಲಾ ಮನೆಗಳನ್ನೂ ದೊಡ್ಡವರ ಎಲ್ಲಾ ಮನೆಗಳನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು;
- 14ಸುತ್ತಲಿರುವ ಯೆರೂಸಲೇಮಿನ ಗೋಡೆ ಗಳನ್ನೆಲ್ಲಾ ಕಾವಲಿನವರ ಅಧಿಪತಿಯ ಸಂಗಡ ಇದ್ದ ಕಸ್ದೀಯರ ದಂಡೆಲ್ಲಾ ಕೆಡವಿ ಹಾಕಿತು.
- 15ಕಾವಲಿನ ಅಧಿಪತಿಯಾದ ನೆಬೂಜರದಾನನು ಜನರಲ್ಲಿ ಬಡವ ರಾದ ಕೆಲವರನ್ನೂ ಪಟ್ಟಣದಲ್ಲಿ ಉಳಿದ ಜನರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಸಮೂಹದಲ್ಲಿ ಮಿಕ್ಕಾದವರನ್ನೂ ಸೆರೆಯಾಗಿ ಒಯ್ದನು.
Cross references
- 2 Chronicles 36:19 2 ಪೂರ್ವಕಾಲವೃತ್ತಾಂತ 36:19ಅವರು ದೇವರ ಆಲಯವನ್ನು ಸುಟ್ಟು ಬಿಟ್ಟು ಯೆರೂಸಲೇಮಿನ ಗೋಡೆಯನ್ನು ಕೆಡವಿ ಹಾಕಿ ಅದರ ಅರಮನೆಗಳನ್ನು ಸುಟ್ಟು ಬಿಟ್ಟು ಅದರ ಬೆಲೆಯುಳ್ಳ ಸಾಮಾನುಗಳನ್ನೆಲ್ಲಾ ಕೆಡಿಸಿದರು.
- Psalm 79:1 ಕೀರ್ತನೆಗಳು 79:1ದೇವರೇ, ಅನ್ಯಜನಾಂಗಗಳು ನಿನ್ನ ಬಾಧ್ಯತೆಯೊಳಗೆ ಬಂದು, ನಿನ್ನ ಪರಿಶುದ್ಧ ಮಂದಿರವನ್ನು ಅಪವಿತ್ರ ಮಾಡಿ, ಯೆರೂಸಲೇಮನ್ನು ಹಾಳು ದಿಬ್ಬಗಳಾಗಿ ಮಾಡಿದ್ದಾರೆ.
- Micah 3:12 ಮೀಕ 3:12ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
- Psalm 74:6–8 ಕೀರ್ತನೆಗಳು 74:6–8ಆದರೆ ಈಗ ಕೆತ್ತನೆ ಕೆಲಸವನ್ನು ತಕ್ಷಣ ಕೊಡಲಿಯಿಂದಲೂ ಸುತ್ತಿಗೆ ಯಿಂದಲೂ ಅವರು ಹೊಡೆದು ಬಿಡುತ್ತಾರೆ. ನಿನ್ನ ಪರಿಶುದ್ಧ ಆಲಯದಲ್ಲಿ ಬೆಂಕಿ ಹಚ್ಚುತ್ತಾರೆ; ನಿನ್ನ ಹೆಸರಿನ ನಿವಾಸವನ್ನು ಭೂಮಿಗೆ ಕೆಡವಿ ಹೊಲೆ ಮಾಡುತ್ತಾರೆ. ಅವುಗಳನ್ನು ಒಟ್ಟಾಗಿ ಕೆಡವಿ ಬಿಡೋಣ ಎಂದು ತಮ್ಮ ಹೃದಯದಲ್ಲಿ ಹೇಳಿಕೊಳ್ಳುತ್ತಾರೆ; ದೇಶದಲ್ಲಿರುವ ದೇವರ ಸಭಾಸ್ಥಾನಗಳನ್ನೆಲ್ಲಾ ಸುಟ್ಟುಬಿಡು ತ್ತಾರೆ.
- Isaiah 64:10–11 ಯೆಶಾಯ 64:10–11ನಿನ್ನ ಪರಿಶುದ್ಧ ಪಟ್ಟಣಗಳು ಅಡವಿ ಯಾದವು; ಚೀಯೋನು ಅಡವಿಯಾಯಿತು; ಯೆರೂ ಸಲೇಮು ಹಾಳಾಯಿತು. ನಮ್ಮ ತಂದೆಗಳು ನಿನ್ನನ್ನು ಕೊಂಡಾಡಿದ ನಮ್ಮ ಪರಿಶುದ್ಧ ಮತ್ತು ಸುಂದರ ವಾದ ಮನೆ ಬೆಂಕಿಯಿಂದ ಸುಟ್ಟುಹೋಯಿತು; ನಮ್ಮ ಸೊಗಸಾದವುಗಳೆಲ್ಲಾ ನಾಶವಾದವು.ಇವು ಹೀಗಿರಲಾಗಿ ಕರ್ತನೇ, ನಿನ್ನನ್ನು ಬಿಗಿಹಿಡುಕೊಳ್ಳು ತ್ತೀಯೋ? ಮೌನವಾಗಿದ್ದು ನಮ್ಮನ್ನು ಅತ್ಯಧಿಕವಾಗಿ ಕುಗ್ಗಿಸುವಿಯೋ?
- Lamentations 2:7 ಪ್ರಲಾಪಗಳು 2:7ಕರ್ತನು ತನ್ನ ಯಜ್ಞವೇದಿಯನ್ನು ತಳ್ಳಿಬಿಟ್ಟಿ ದ್ದಾನೆ; ತನ್ನ ಪರಿಶುದ್ಧ ಸ್ಥಳವನ್ನು ಅಸಹ್ಯಪಡಿಸಿದ್ದಾನೆ; ಆತನು ಅವಳ ಅರಮನೆಗಳ ಗೋಡೆಗಳನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಪರಿಶುದ್ಧ ಹಬ್ಬದ ದಿನದಲ್ಲಿ ಮಾಡಿದ ಹಾಗೆ ಅವರು ಕರ್ತನ ಆಲಯದಲ್ಲಿ ಶಬ್ದಮಾಡಿದ್ದಾರೆ.
- Amos 2:5 ಆಮೋಸ 2:5ನಾನು ಯೆಹೂದದ ಮೇಲೆ ಬೆಂಕಿಯನ್ನು ಕಳುಹಿಸುವೆನು; ಅದು ಯೆರೂಸಲೇಮಿನ ಅರಮನೆ ಗಳನ್ನು ನುಂಗಿ ಬಿಡುವದು.
- Amos 3:10–11 ಆಮೋಸ 3:10–11ತಮ್ಮ ಅರಮನೆಗಳಲ್ಲಿ ಬಲಾತ್ಕಾರವನ್ನೂ ಕೊಳ್ಳೆಯನ್ನೂ ನಿಕ್ಷೇಪವಾಗಿ ಕೂಡಿಸಿಕೊಂಡಿರುವವರು ನ್ಯಾಯವಾದ ದ್ದನ್ನು ಮಾಡುವದಕ್ಕೆ ಅವರಿಗೆ ತಿಳಿಯುವದಿಲ್ಲ ಎಂದು ಕರ್ತನು ಹೇಳುತ್ತಾನೆ. ಆದದರಿಂದ ಕರ್ತನಾದ ದೇವರು ಹೀಗೆ ಹೇಳುತ್ತಾನೆ--ವಿರೋಧಿಯು ದೇಶದ ಸುತ್ತಲೂ ಇರುವನು; ನಿನ್ನಲ್ಲಿರುವ ನಿನ್ನ ಬಲವನ್ನು ತಗ್ಗಿಸುವನು; ನಿನ್ನ ಅರಮನೆಗಳು ಸೂರೆಯಾಗುವವು.
- 2 Kings 25:9 2 ಅರಸುಗಳು 25:9ಕರ್ತನ ಮನೆಯನ್ನೂ ಅರಮನೆಯನ್ನೂ ಯೆರೂಸಲೇಮಿನಲ್ಲಿರುವ ಎಲ್ಲಾ ಮನೆಗಳನ್ನೂ ಪ್ರತಿ ದೊಡ್ಡ ಮನುಷ್ಯನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು.
- Amos 6:11 ಆಮೋಸ 6:11ಇಗೋ, ಕರ್ತನು ಆಜ್ಞಾಪಿಸುತ್ತಾನೆ; ಆತನು ದೊಡ್ಡ ಮನೆಯನ್ನು ಸೀಳುಗಳಿಂದಲೂ ಚಿಕ್ಕ ಮನೆಯನ್ನು ಬಿರುಕುಗಳಿಂದಲೂ ಹೊಡೆಯುವನು.
- Jeremiah 34:22 ಯೆರೆಮೀಯ 34:22ಕರ್ತನು ಹೇಳುವದೇನಂದರೆ--ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರಿಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡು ವರು; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗ ಮಾಡುವೆನು.
- Jeremiah 22:14 ಯೆರೆಮೀಯ 22:14ಅವನು--ನಾನು ವಿಸ್ತಾರವಾದ ಮನೆಯನ್ನೂ ವಿಶಾಲವಾದ ಕೊಠಡಿಗಳನ್ನೂ ಕಟ್ಟಿಕೊಳ್ಳುವೆನೆಂದು ಹೇಳಿ ಕಿಟಕಿಗಳನ್ನು ಕೊರೆದು ದೇವದಾರಿನ ಹಲಿಗೆ ಗಳನ್ನು ಹಾಕಿ ಕೆಂಪು ಬಣ್ಣವನ್ನು ಹಚ್ಚುವವನಿಗೂ ಅಯ್ಯೋ!