Jeremiah · chapter 52 · verse 4
Jeremiah 52:4 in Kannada
ಅವನ ಆಳಿಕೆಯ ಒಂಭತ್ತನೇ ವರುಷದಲ್ಲಿ, ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ತನ್ನ ಸಮಸ್ತ ಸೈನ್ಯದ ಸಂಗಡ ಯೆರೂಸಲೇಮಿಗೆ ವಿರೋಧವಾಗಿ ಬಂದು ಅದಕ್ಕೆ ವಿರೋಧವಾಗಿ ದಂಡಿಳಿದು ಅದಕ್ಕೆ ವಿರೋಧವಾಗಿ ಸುತ್ತಲೂ ಕೋಟೆಗಳನ್ನು ಕಟ್ಟಿದನು.
Avana aalikeya ombhattane varushadalli, hattane tingalina hattane divasadalli baabelina arasanaada nebookadnechcharanu taanu tanna samasta sainyada sangada yeroosalemige virodhavaagi bandu adakke virodhavaagi dandilidu adakke virodhavaagi suttaloo kotegalannu kattidanu.
Jeremiah 52:4 in English
- King James Version (KJV)
- And it came to pass in the ninth year of his reign, in the tenth month, in the tenth [day] of the month, [that] Nebuchadrezzar king of Babylon came, he and all his army, against Jerusalem, and pitched against it, and built forts against it round about.
- World English Bible (WEB)
- In the ninth year of his reign, in the tenth month, in the tenth day of the month, Nebuchadnezzar king of Babylon came, he and all his army, against Jerusalem, and encamped against it; and they built forts against it round about.
- American Standard Version (ASV)
- And it came to pass in the ninth year of his reign, in the tenth month, in the tenth day of the month, that Nebuchadrezzar king of Babylon came, he and all his army, against Jerusalem, and encamped against it; and they built forts against it round about.
- Bible in Basic English (BBE)
- And in the ninth year of his rule, on the tenth day of the tenth month, Nebuchadrezzar, king of Babylon, came against Jerusalem with all his army and took up his position before it, building earthworks all round it.
- Darby Translation (DBY)
- And it came to pass in the ninth year of his reign, in the tenth month, on the tenth of the month, [that] Nebuchadrezzar king of Babylon came, he and all his army, against Jerusalem; and they encamped against it, and built turrets against it round about.
- Webster's Bible (WBS)
- And it came to pass in the ninth year of his reign, in the tenth month, in the tenth [day] of the month, [that] Nebuchadrezzar king of Babylon came, he and all his army, against Jerusalem, and encamped against it, and built forts against it on every side.
- Young's Literal Translation (YLT)
- And it cometh to pass, in the ninth year of his reign, in the tenth month, in the tenth of the month, come hath Nebuchadrezzar king of Babylon — he and all his force — against Jerusalem, and they encamp against it, and build against it a fortification round about;
Read in context
- 2ಅವನು ಯೆಹೋಯಾಕೀಮನು ಮಾಡಿದ್ದೆಲ್ಲಾದರ ಪ್ರಕಾರ ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದನು.
- 3ಕರ್ತನು ಯೆಹೂದದ ಮೇಲೆಯೂ ಯೆರೂಸಲೇಮಿನ ಮೇಲೆಯೂ ಅವರನ್ನು ತನ್ನ ಸನ್ನಿಧಿಯಿಂದ ತಳ್ಳಿಬಿಡುವ ವರೆಗೆ ಮಾಡಿದ ಕೋಪದಿಂದ ಚಿದ್ಕೀಯನು ಬಾಬೆಲಿನ ಅರಸನಿಗೆ ವಿರೋಧವಾಗಿ ತಿರುಗಿಬಿದ್ದನು.
- 4ಅವನ ಆಳಿಕೆಯ ಒಂಭತ್ತನೇ ವರುಷದಲ್ಲಿ, ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ತನ್ನ ಸಮಸ್ತ ಸೈನ್ಯದ ಸಂಗಡ ಯೆರೂಸಲೇಮಿಗೆ ವಿರೋಧವಾಗಿ ಬಂದು ಅದಕ್ಕೆ ವಿರೋಧವಾಗಿ ದಂಡಿಳಿದು ಅದಕ್ಕೆ ವಿರೋಧವಾಗಿ ಸುತ್ತಲೂ ಕೋಟೆಗಳನ್ನು ಕಟ್ಟಿದನು.
- 5ಈ ಪ್ರಕಾರ ಅರಸನಾದ ಚಿದ್ಕೀಯನ ಹನ್ನೊಂದನೇ ವರುಷದ ವರೆಗೆ ಪಟ್ಟಣಕ್ಕೆ ಮುತ್ತಿಗೆ ಹಾಕಿದನು.
- 6ನಾಲ್ಕನೇ ತಿಂಗಳಲ್ಲಿ, ತಿಂಗಳಿನ ಒಂಭತ್ತನೇ ದಿವಸದಲ್ಲಿ ದೇಶಸ್ಥರಿ ಗೋಸ್ಕರ ರೊಟ್ಟಿ ಇಲ್ಲದೆ ಪಟ್ಟಣದಲ್ಲಿ ಕ್ಷಾಮವು ಕಠಿಣವಾಗಿತ್ತು.
Cross references
- Jeremiah 39:1 ಯೆರೆಮೀಯ 39:1ಯೆಹೂದದ ಅರಸನಾದ ಚಿದ್ಕೀಯನ ಒಂಭತ್ತನೇ ವರುಷದ ಹತ್ತನೇ ತಿಂಗಳಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನೂ ಅವನ ಸೈನ್ಯವೆಲ್ಲವೂ ಯೆರೂಸಲೇಮಿಗೆ ವಿರೋಧವಾಗಿ ಬಂದು ಅದನ್ನು ಮುತ್ತಿಗೆ ಹಾಕಿದರು.
- Ezekiel 24:1–2 ಯೆಹೆಜ್ಕೇಲನು 24:1–2ಒಂಭತ್ತನೇ ವರುಷದ ಹತ್ತನೇ ತಿಂಗಳಿನ ಹತ್ತನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ ಮನುಷ್ಯಪುತ್ರನೇ, ಈ ದಿನದ, ಇದೇ ದಿನದ ಹೆಸರನ್ನು ಬರೆದುಕೋ; ಅದೇ ದಿನದಲ್ಲಿ ಬಾಬೆಲಿನ ಅರಸನು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಾನೆ.
- Zechariah 8:19 ಜೆಕರ್ಯ 8:19ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಾಲ್ಕನೇ ತಿಂಗಳಿನ ಉಪವಾಸವು, ಐದನೆ ಯದು, ಏಳನೆಯದು, ಹತ್ತನೆಯದು, ಯೆಹೂದದ ಮನೆತನದವರಿಗೆ ಸಂತೋಷವೂ ಸಂಭ್ರಮವೂ ಆನಂದವಾದ ಹಬ್ಬಗಳೂ ಆಗುವವು; ಆದರೆ ಸತ್ಯ ವನ್ನೂ ಸಮಾಧಾನವನ್ನೂ ಪ್ರೀತಿಮಾಡಿರಿ.
- Jeremiah 52:7 ಯೆರೆಮೀಯ 52:7ಆಗ ಪಟ್ಟಣವು ವಿಭಾಗವಾಯಿತು; ಯುದ್ಧಸ್ಥರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದ ಬಾಗಲಿನ ಮಾರ್ಗವಾಗಿ ರಾತ್ರಿಯಲ್ಲಿ ಪಟ್ಟಣವನ್ನು ಬಿಟ್ಟು ಹೊರಟು, ಬೈಲು ಸೀಮೆಯ ಮಾರ್ಗವಾಗಿ ಹೋದರು. ಆದರೆ ಕಸ್ದೀಯರು ಪಟ್ಟಣದ ಸುತ್ತಲೂ ಇದ್ದರು.
- Jeremiah 32:24 ಯೆರೆಮೀಯ 32:24ಇಗೋ, ಪರ್ವತಗಳು ಪಟ್ಟಣದ ಬಳಿಗೆ ಅದನ್ನು ಹಿಡಿಯುವ ಹಾಗೆ ಬಂದಿವೆ; ಪಟ್ಟಣವು ಅದಕ್ಕೆ ವಿರೋಧವಾಗಿ ಯುದ್ಧ ಮಾಡುವ ಕಸ್ದೀಯರ ಕೈಯಲ್ಲಿ ಕತ್ತಿ, ಕ್ಷಾಮ, ಜಾಡ್ಯಗಳ ಮೂಲಕವಾಗಿ ಒಪ್ಪಿಸಲ್ಪಟ್ಟಿದೆ; ನೀನು ಹೇಳಿದ್ದು ಉಂಟಾಯಿತು; ಇಗೋ, ನೀನು ಅದನ್ನು ನೋಡುತ್ತೀ.
- Deuteronomy 28:52–57 ಧರ್ಮೋಪದೇಶಕಾಂಡ 28:52–57ನಿನ್ನ ದೇಶದಲ್ಲೆಲ್ಲಾ ನೀನು ನಂಬಿಕೊಂಡಿರುವ ಉದ್ದವಾದ ಮತ್ತು ಭದ್ರವಾದ ನಿನ್ನ ಗೋಡೆಗಳೆಲ್ಲಾ ಬೀಳುವ ವರೆಗೆ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆ ಹಾಕುವದು; ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ನಿನ್ನ ದೇಶದಲ್ಲೆಲ್ಲಾ ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮುತ್ತಿಗೆಹಾಕುವನು. ಆಗ ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ನಿನ್ನ ಗರ್ಭದ ಫಲವನ್ನೂ ನಿನ್ನ ದೇವರಾದ ಕರ್ತನು ನಿನಗೆ ಕೊಟ್ಟ ಕುಮಾರ ಕುಮಾರ್ತೆಯರ ಮಾಂಸವನ್ನೂ ತಿನ್ನುವಿ. ನಿನ್ನಲ್ಲಿ ಮೃದುವಾದವನೂ ಬಹಳ ಸೂಕ್ಷ್ಮ ಗುಣವುಳ್ಳವನೂ ಯಾವನೋ ಅವನ ಕಣ್ಣು ತನ್ನ ಸಹೋದರನ ಕಡೆಗೂ ತನ್ನ ಮಗ್ಗುಲಲ್ಲಿರುವ ತನ್ನ ಹೆಂಡತಿಯ ಕಡೆಗೂ ಅವನು ಉಳಿಸಿಕೊಳ್ಳುವ ಮಕ್ಕಳ ಕಡೆಗೂ ಕಠಿಣವಾಗುವದು. ಮುತ್ತಿಗೆಯಲ್ಲಿಯೂ ನಿನ್ನ ಶತ್ರುಗಳು ನಿನ್ನ ಎಲ್ಲಾ ಬಾಗಲುಗಳಲ್ಲಿ ನಿನಗೆ ಮಾಡುವ ಇಕ್ಕಟ್ಟಿನಲ್ಲಿಯೂ ತನಗೆ ಸಾಕಾಗುವದಿಲ್ಲ ಅಂದುಕೊಂಡು ಅವನು ತಿನ್ನುವ ತನ್ನ ಮಕ್ಕಳ ಮಾಂಸದಲ್ಲಿ ಅವರೊಳಗೆ ಒಬ್ಬನಿಗಾದರೂ ಏನೂ ಕೊಡುವದಿಲ್ಲ. ನಿನ್ನಲ್ಲಿ ಮೃದುವಾದವಳೂ ಬಹಳ ಸೂಕ್ಷ್ಮಗುಣವುಳ್ಳವಳೂ ಯಾವಳೋ ಮೃದುತನ ದಿಂದಲೂ ಸೂಕ್ಷ್ಮಗುಣದಿಂದಲೂ ನೆಲಕ್ಕೆ ಅಂಗಾಲನ್ನು ನಿಲ್ಲಿಸಲಾರದವಳು ಯಾವಳೋ ಅವಳು ತನ್ನ ಮಗ್ಗುಲ ಲ್ಲಿರುವ ಗಂಡನ ಕಡೆಗೂ ತನ್ನ ಮಗನ, ಮಗಳ ಕಡೆಗೂ ತನ್ನ ಕಾಲುಗಳ ನಡುವೆಯಿಂದ ಬರುವ ಶಿಶುವಿನ ಕಡೆಗೂ ತಾನು ಹೆತ್ತಮಕ್ಕಳ ಕಡೆಗೂ ಕಠಿಣ ಕಣ್ಣುಳ್ಳವಳಾಗಿರುವಳು; ಯಾಕಂದರೆ ಎಲ್ಲಾದರ ಕೊರತೆಯಲ್ಲಿಯೂ ಮುತ್ತಿಗೆಯಲ್ಲಿಯೂ ನಿನ್ನ ಶತ್ರು ನಿನಗೆ ನಿನ್ನ ಬಾಗಲುಗಳಲ್ಲಿ ಮಾಡುವ ಇಕ್ಕಟ್ಟಿನಲ್ಲಿಯೂ ಅವರನ್ನು ಗುಪ್ತವಾಗಿ ತಿಂದು ಬಿಡುವಳು.
- Leviticus 26:25 ಯಾಜಕಕಾಂಡ 26:25ಒಡಂಬಡಿ ಕೆಯ ನಿಮಿತ್ತ ಮುಯ್ಯಿಗೆ ಮುಯ್ಯಿ ತೀರಿಸುವ ಕತ್ತಿಯನ್ನು ನಾನು ನಿಮ್ಮ ಮೇಲೆ ಬರಮಾಡುವೆನು. ನೀವು ನಿಮ್ಮ ಪಟ್ಟಣಗಳಲ್ಲಿ ಕೂಡಿಬಂದಾಗ ವ್ಯಾಧಿಯನ್ನು ನಿಮ್ಮೊಳಗೆ ಬರಮಾಡುವೆನು. ನೀವು ಶತ್ರುವಿನ ಕೈಗೆ ಒಪ್ಪಿಸಲ್ಪಡು ವಿರಿ.
- Jeremiah 6:3–6 ಯೆರೆಮೀಯ 6:3–6ಅವಳ ಬಳಿಗೆ ಕುರುಬರು ತಮ್ಮ ಮಂದೆಗಳ ಸಂಗಡ ಬರುವರು; ಅವಳ ಸುತ್ತಲು ತಮ್ಮ ಗುಡಾರಗಳನ್ನು ಹಾಕುವರು; ತಮ್ಮ ತಮ್ಮ ಸ್ಥಳಗಳಲ್ಲಿ ಮೇಯಿಸುವರು. ಅವಳಿಗೆ ವಿರೋಧವಾಗಿ ಯುದ್ಧವನ್ನು ಸಿದ್ಧಮಾಡಿರಿ; ಏಳಿರಿ, ಮಧ್ಯಾಹ್ನದಲ್ಲಿ ಏರಿ ಹೋಗೋಣ, ನಮಗೆ ಅಯ್ಯೋ! ಹೊತ್ತು ಮುಣುಗುತ್ತದಲ್ಲಾ; ಸಂಜೆಯ ನೆರಳುಗಳು ಉದ್ದವಾ ಗುತ್ತವೆ. ಏಳಿರಿ, ರಾತ್ರಿಯಲ್ಲಿ ಏರಿಹೋಗಿ ಅವಳ ಅರಮನೆಗಳನ್ನು ನಾಶಮಾಡೋಣ; ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಮರಗಳನ್ನು ಕಡಿಯಿರಿ; ಯೆರೂಸಲೇಮಿಗೆ ವಿರೋಧವಾಗಿ ದಿಬ್ಬ ಹಾಕಿರಿ; ವಿಚಾರಿಸಲ್ಪಡತಕ್ಕ ಪಟ್ಟಣವು ಇದೇ; ಅವಳಲ್ಲಿ ತುಂಬ ಬಲಾತ್ಕಾರ ಅದೆ.
- Isaiah 29:3 ಯೆಶಾಯ 29:3ಅದು ನನಗೆ ಅರೀಯೇಲಾಗಿಯೇ ಪರಿಣಮಿಸುವದು. ಸುತ್ತಲೂ ದಂಡಿಳಿಸಿ ನಿನಗೆ ವಿರುದ್ಧವಾಗಿ ಕೋಟೆಗಳನ್ನು ಎಬ್ಬಿಸಿ ದಿಬ್ಬಹಾಕಿ ನಿನ್ನ ಮೇಲೆ ಮುತ್ತಿಗೆ ಹಾಕುವೆನು.
- 2 Kings 25:1–27 2 ಅರಸುಗಳು 25:1–27ಅವನ ಆಳಿಕೆಯ ಒಂಭತ್ತನೇ ವರುಷದ ಹತ್ತನೇ ತಿಂಗಳಿನ ಹತ್ತನೇ ದಿವಸದಲ್ಲಿ ಏನಾಯಿತಂದರೆ, ಬಾಬೆಲಿನ ಅರಸನಾದ ನೆಬೂಕ ದ್ನೆಚರನು ತಾನೂ ತನ್ನ ಎಲ್ಲಾ ಸೈನ್ಯವೂ ಯೆರೂಸ ಲೇಮಿನ ಮೇಲೆ ಬಂದು ಅದಕ್ಕೆ ಎದುರಾಗಿ ದಂಡಿಳಿದು ಅದರ ಸುತ್ತಲೂ ದಿಣ್ಣೆಗಳನ್ನು ಹಾಕಿದರು. ಅರಸನಾದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೇ ವರುಷದ ವರೆಗೆ ಪಟ್ಟಣವು ಮುತ್ತಿಗೆ ಹಾಕಲ್ಪಟ್ಟಿತು. ನಾಲ್ಕನೇ ತಿಂಗಳಿನ ಒಂಭತ್ತನೇ ದಿವಸದಲ್ಲಿ ಪಟ್ಟಣದಲ್ಲಿ ಬರವು ಬಲವಾದದರಿಂದ ದೇಶದ ಜನರಿಗೆ ರೊಟ್ಟಿಯಿಲ್ಲದೆ ಹೋಯಿತು. ಪಟ್ಟಣವು ವಿಭಾಗಿಸಲ್ಪಟ್ಟಿದ್ದರಿಂದ ಸೈನ್ಯದ ಜನರೆಲ್ಲರೂ ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದಲ್ಲಿ ಬಾಗಲ ಮಾರ್ಗವಾಗಿ ಓಡಿಹೋದರು; ಆದರೆ ಅರಸನು ಬಯಲು ಮಾರ್ಗ ವಾಗಿ ಹೋದನು. ಕಸ್ದೀಯರು ಪಟ್ಟಣದ ಬಳಿಯಲ್ಲಿ ಇದ್ದದರಿಂದ ಅವರ ದಂಡು ಅರಸನನ್ನು ಹಿಂಬಾಲಿಸಿ ಯೆರಿಕೋವಿನ ಬಯಲು ಸ್ಥಳಗಳಲ್ಲಿ ಅವನನ್ನು ಹಿಡು ಕೊಂಡರು. ಅವನ ದಂಡೆಲ್ಲಾ ಅವನ ಕಡೆಯಿಂದ ಚದರಿ ಹೋಯಿತು. ಅವರು ಅರಸನನ್ನು ಹಿಡಿದು ಕೊಂಡು, ರಿಬ್ಲದಲ್ಲಿರುವ ಬಾಬೆಲಿನ ಅರಸನ ಬಳಿಗೆ ತಕ್ಕೊಂಡು ಬಂದು ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು. ಅವರು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣೆದುರಿನಲ್ಲಿಯೇ ಕೊಂದ ತರುವಾಯ ಅವನ ಕಣ್ಣುಗಳನ್ನು ಕಿತ್ತುಹಾಕಿ ಅವನಿಗೆ ಹಿತ್ತಾಳೆಯ ಬೇಡಿ ಹಾಕಿ ಅವನನ್ನು ಬಾಬೆಲಿಗೆ ತಕ್ಕೊಂಡು ಹೋದರು. ಐದನೇ ತಿಂಗಳಿನ ಏಳನೇ ದಿವಸಕ್ಕೆ ಸರಿಯಾಗಿ ಬಾಬೆಲಿನ ಅರಸನಾದ ನೆಬೂಕದ್ನೆಚರನ ಆಳ್ವಿಕೆಯ ಹತ್ತೊಂಭತ್ತನೇ ವರುಷದಲ್ಲಿ ಬಾಬೆಲಿನ ಅರಸನ ಸೇವಕ ನಾದ ಕಾವಲಿನ ಅಧಿಪತಿಯಾದ ನೆಬೂಜರದಾನನು ಯೆರೂಸಲೇಮಿಗೆ ಬಂದು, ಕರ್ತನ ಮನೆಯನ್ನೂ ಅರಮನೆಯನ್ನೂ ಯೆರೂಸಲೇಮಿನಲ್ಲಿರುವ ಎಲ್ಲಾ ಮನೆಗಳನ್ನೂ ಪ್ರತಿ ದೊಡ್ಡ ಮನುಷ್ಯನ ಮನೆಯನ್ನೂ ಬೆಂಕಿಯಿಂದ ಸುಟ್ಟು ಬಿಟ್ಟನು. ಕಾವಲುಗಾರರ ಅಧಿಪತಿಯ ಸಂಗಡದಲ್ಲಿದ್ದ ಕಸ್ದೀಯರ ಸೈನ್ಯದವರೆ ಲ್ಲರೂ ಯೆರೂಸಲೇಮಿನ ಸುತ್ತಲೂ ಇರುವ ಗೋಡೆ ಗಳನ್ನು ಕೆಡವಿಬಿಟ್ಟರು. ಪಟ್ಟಣದಲ್ಲಿ ಉಳಿದ ಜನ ರನ್ನೂ ಬಾಬೆಲಿನ ಅರಸನ ಕಡೆಗೆ ಬಿದ್ದವರನ್ನೂ ಗುಂಪಿ ನಲ್ಲಿ ಮಿಕ್ಕ ಜನರನ್ನೂ ಕಾವಲಿನ ಅಧಿಪತಿಯಾದ ನೆಬೂಜರದಾನನು ಸೆರೆಯಾಗಿ ಒಯ್ದನು. ಆದರೆ ಕಾವಲಿನ ಅಧಿಪತಿಯು ದ್ರಾಕ್ಷೇತೋಟ ಮಾಡುವ ಹಾಗೆಯೂ ಬೇಸಾಯ ಮಾಡುವ ಹಾಗೆಯೂ ದೇಶದ ಬಡವರನ್ನು ಉಳಿಸಿಬಿಟ್ಟನು. ಇದಲ್ಲದೆ ಕರ್ತನ ಮನೆಯಲ್ಲಿದ್ದ ಹಿತ್ತಾಳೆ ಸ್ತಂಭಗಳನ್ನೂ ಆಧಾರಗಳನ್ನೂ ಕರ್ತನ ಮನೆಯಲ್ಲಿದ್ದ ಹಿತ್ತಾಳೆ ಸಮುದ್ರವೆಂಬ ಪಾತ್ರೆ ಯನ್ನೂ ಕಸ್ದೀಯರು ಒಡೆದು ಹಾಕಿ ಅದರ ಹಿತ್ತಾಳೆ ಯನ್ನು ಬಾಬೆಲಿಗೆ ಒಯ್ದರು. ಮಡಕೆಗಳನ್ನೂ ಸಲಿಕೆ ಗಳನ್ನೂ ಕತ್ತರಿಗಳನ್ನೂ ಸೌಟುಗಳನ್ನೂ ಅವರು ಸೇವಿಸುತ್ತಿದ್ದ ಎಲ್ಲಾ ಹಿತ್ತಾಳೆಯ ಸಾಮಾನುಗಳನ್ನೂ ತಕ್ಕೊಂಡು ಹೋದರು. ಕಾವಲುಗಾರರ ಅಧಿಪತಿಯು ಅಗ್ನಿಪಾತ್ರೆಗಳನ್ನೂ ತಟ್ಟೆಗಳನ್ನೂ ಬಂಗಾರ ದವುಗಳಾದ ಬಂಗಾರವನ್ನೂ ಬೆಳ್ಳಿಯವುಗಳಾದ ಬೆಳ್ಳಿ ಯನ್ನೂ ತಕ್ಕೊಂಡನು. ಸೊಲೊಮೋನನು ಕರ್ತನ ಮನೆಗೋಸ್ಕರ ಮಾಡಿಸಿದ್ದ ಎರಡು ಸ್ತಂಭಗಳೂ ಸಮುದ್ರವೆನಿಸಿಕೊಂಡ ಪಾತ್ರೆಯೂ ಆಧಾರಗಳೂ ಈ ಎಲ್ಲಾ ಸಾಮಾನುಗಳ ತಾಮ್ರವು ತೂಕ ಮಾಡ ಲಾರದಷ್ಟಿತ್ತು. ಒಂದು ಸ್ತಂಭವು ಹದಿನೆಂಟು ಮೊಳ ಎತ್ತರವಾಗಿತ್ತು. ಅದರ ಮೇಲಿದ್ದ ಬೋದಿಗೆ ತಾಮ್ರ ದ್ದಾಗಿ ಮೂರು ಮೊಳ ಉದ್ದವಾಗಿತ್ತು. ಬೋದಿಗೆಯ ಸುತ್ತಲಿದ್ದ ಹೆಣೆತದ ಕೆಲಸವೂ ದಾಳಿಂಬರಗಳೂ ಎಲ್ಲಾ ತಾಮ್ರವಾಗಿತ್ತು. ಎರಡನೇ ಸ್ತಂಭಕ್ಕೆ ಇದರ ಹಾಗೆಯೇ ಹೆಣೆತದ ಕೆಲಸ ಉಂಟಾಗಿತ್ತು. ಕಾವಲುಗಾರರ ಅಧಿಪತಿಯು ಪ್ರಧಾನ ಯಾಜಕನಾದ ಸೆರಾಯನನ್ನೂ ಎರಡನೇ ಯಾಜಕನಾದ ಚೆಫನ್ಯನನ್ನೂ ಮೂರು ಮಂದಿ ದ್ವಾರಪಾಲಕರನ್ನೂ ಹಿಡಿದನು. ಇದಲ್ಲದೆ ಪಟ್ಟಣದೊಳಗಿಂದ ಯುದ್ಧಸ್ಥರ ಮೇಲಿದ್ದ ಒಬ್ಬ ಅಧಿ ಕಾರಿಯನ್ನೂ ಪಟ್ಟಣದಲ್ಲಿ ಸಿಕ್ಕಿದ ಅರಸನ ಸಮ್ಮುಖ ದಲ್ಲಿದ್ದ ಐದು ಮಂದಿಯನ್ನೂ ದೇಶದ ಜನರನ್ನೂ ಸೈನ್ಯದ ತರಬೇತು ಮಾಡಿದ ಪ್ರಧಾನನ ಲೇಖಕನೂ ಪಟ್ಟಣದಲ್ಲಿ ಸಿಕ್ಕಿದ ದೇಶದ ಜನರಾದ ಅರವತ್ತು ಮಂದಿಯನ್ನೂ ಅವನು ಹಿಡಿದನು. ಕಾವಲಿನ ವರ ಅಧಿಪತಿಯಾದ ನೆಬೂಜರದಾನನು ಇವರನ್ನು ತಕ್ಕೊಂಡು ರಿಬ್ಲದಲ್ಲಿದ್ದ ಬಾಬೆಲಿನ ಅರಸನ ಬಳಿಗೆ ಬಂದನು. ಬಾಬೆಲಿನ ಅರಸನು ಹಮಾತ್ ರಿಬ್ಲ ದಲ್ಲಿ ಅವರನ್ನು ಹೊಡೆದು ಕೊಂದುಹಾಕಿದನು. ಈ ಪ್ರಕಾರವೇ ಯೆಹೂದ್ಯರು ತಮ್ಮ ದೇಶದಲ್ಲಿಂದ ಸೆರೆ ಯಾಗಿ ಒಯ್ಯಲ್ಪಟ್ಟರು. ಆದರೆ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ತಾನು ಯೆಹೂದ ದೇಶದಲ್ಲಿ ಉಳಿಸಿದ ಜನರ ಮೇಲೆ ಶಾಫಾನನ ಮೊಮ್ಮಗನೂ ಅಹೀಕಾಮನ ಮಗನೂ ಆದ ಗೆದಲ್ಯನನ್ನು ಅಧಿಪತಿಯಾಗಿ ಮಾಡಿದನು. ಆದರೆ ಬಾಬೆಲಿನ ಅರಸನು ಗೆದಲ್ಯನನ್ನು ಅಧಿಪತಿ ಯಾಗಿ ಮಾಡಿದ್ದಾನೆಂದು ದಂಡುಗಳ ಅಧಿಪತಿಗಳೂ ಅವರ ಜನರೂ ಕೇಳಿದ ಮೇಲೆ ನೆತನ್ಯನ ಮಗನಾದ ಇಷ್ಮಾಯೇಲನೂ ಕಾರೇಹನ ಮಗನಾದ ಯೋಹಾ ನನೂ ನೆಟೋಫದವನಾದ ತನ್ಹುಮೆತನ ಮಗನಾದ ಸೆರಾಯನೂ ಮಾಕಾತ್ಯರಲ್ಲಿ ಒಬ್ಬನ ಮಗನಾದ ಯಾಜನ್ಯನೂ ಅವರ ಜನರೂ ಮಿಚ್ಪದಲ್ಲಿದ್ದ ಗೆದಲ್ಯನ ಬಳಿಗೆ ಬಂದರು. ಆಗ ಗೆದಲ್ಯನು ಅವರಿಗೂ ಅವರ ಜನರಿಗೂ ಆಣೆಯನ್ನಿಟ್ಟು--ನೀವು ಕಸ್ದೀಯರನ್ನು ಸೇವಿಸಲು ಭಯಪಡಬೇಡಿರಿ; ದೇಶದಲ್ಲಿ ವಾಸವಾ ಗಿದ್ದು ಬಾಬೆಲಿನ ಅರಸನನ್ನು ಸೇವಿಸಿರಿ; ಆಗ ನಿಮಗೆ ಒಳ್ಳೇದಾಗಿರುವದು ಅಂದನು. ಆದರೆ ಏಳನೇ ತಿಂಗಳಲ್ಲಿ ರಾಜ ಸಂತಾನದವನಾದ ಎಲೀಷಾಮನ ಮೊಮ್ಮಗನೂ ನೆತನ್ಯನ ಮಗನೂ ಆದ ಇಷ್ಮಾಯೇ ಲನು ಅವನ ಸಂಗಡ ಹತ್ತು ಮಂದಿ ಬಂದು ಗೆದಲ್ಯ ನನ್ನೂ ಅವನ ಸಂಗಡ ಮಿಚ್ಪದಲ್ಲಿದ್ದ ಯೆಹೂದ್ಯರನ್ನೂ ಕಸ್ದೀಯರನ್ನೂ ಹೊಡೆದು ಕೊಂದುಹಾಕಿದರು. ಆಗ ಹಿರಿ ಕಿರಿಯರಾದ ಎಲ್ಲಾ ಜನರೂ ದಂಡುಗಳ ಅಧಿ ಪತಿಗಳೂ ಎದ್ದು ಐಗುಪ್ತಕ್ಕೆ ಹೋದರು; ಯಾಕಂದರೆ ಕಸ್ದೀಯರಿಗೆ ಭಯಪಟ್ಟರು. ಆದರೆ ಯೆಹೂದದ ಅರಸನಾದ ಯೆಹೋ ಯಾಖೀನನ ಸೆರೆಯ ಮೂವತ್ತೇಳನೇ ವರುಷದ ಹನ್ನೆರಡನೇ ತಿಂಗಳಿನ ಇಪ್ಪತ್ತೇಳನೇ ದಿವಸದಲ್ಲಿ ಏನಾಯಿತಂದರೆ, ಬಾಬೆಲಿನ ಅರಸನಾದ ಎವಿಲ್ಮೆ ರೋದಕನು ಆಳಲು ಆರಂಭಿಸಿದ ವರುಷದಲ್ಲಿ ಅವನು ಯೆಹೂದದ ಅರಸನಾದ ಯೆಹೋಯಾ ಖೀನನನ್ನು ಸೆರೆಮನೆಯಿಂದ ಬಿಡಿಸಿ
- Luke 19:43 ಲೂಕನು 19:43ಯಾಕಂದರೆ ನಿನ್ನ ಶತೃಗಳು ನಿನ್ನ ಸುತ್ತಲೂ ಕಂದಕವನ್ನು ತೋಡಿ ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಒಳಗೆ ಇರಿಸುವ ದಿನಗಳು ನಿನ್ನ ಮೇಲೆ ಬರುವವು.
- Isaiah 42:24–25 ಯೆಶಾಯ 42:24–25ಯಾಕೋಬನ್ನು ಸುಲಿಗೆಗೂ ಇಸ್ರಾಯೇಲನ್ನು ಕೊಳ್ಳೆಗೂ ಗುರಿಮಾಡಿ ದವನು ಯಾರು? ನಾವು ಯಾರಿಗೆ ವಿರೋಧವಾಗಿ ಪಾಪವನ್ನು ಮಾಡಿದೆವು, ಅದು ಕರ್ತನಿಗಲ್ಲವೇ? ಅವರು ಆತನ ಮಾರ್ಗದಲ್ಲಿ ನಡೆಯದೆ ಇಲ್ಲವೆ ಆತನ ನ್ಯಾಯಪ್ರಮಾಣಕ್ಕೆ ಅವಿಧೇಯರಾದರಲ್ಲಾ.ಆದದರಿಂದ ಆತನು ತನ್ನ ಯುದ್ದದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ ಅವನಿಗೆ ತಿಳಿಯಲಿಲ್ಲ; ಅದು ಅವನನ್ನು ಸುಟ್ಟರೂ ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ. ಆದದರಿಂದ ಆತನು ತನ್ನ ಯುದ್ದದ ರೌದ್ರವನ್ನು ಮತ್ತು ರೋಷಾಗ್ನಿಯನ್ನು ಅವನ ಮೇಲೆ ಸುರಿಸಿದನು. ಅದು ಅವನ ಸುತ್ತಲೂ ಉರಿಯು ಹತ್ತಿದರೂ ಅವನಿಗೆ ತಿಳಿಯಲಿಲ್ಲ; ಅದು ಅವನನ್ನು ಸುಟ್ಟರೂ ಅವನು ಮನಸ್ಸಿಗೆ ತಂದುಕೊಳ್ಳಲಿಲ್ಲ.
Original words (Hebrew)
- ninth · H8671תְּשִׁיעִי tᵉshîyʻîy
- year · H8141שָׁנֶה shâneh
- reign · H4427מָלַךְ mâlak
- tenth · H6224עֲשִׂירִי ʻăsîyrîy
- month · H2320חֹדֶשׁ chôdesh
- tenth · H6218עָשׂוֹר ʻâsôwr
- month · H2320חֹדֶשׁ chôdesh
- Nebuchadrezzar · H5019נְבוּכַדְנֶאצַּר Nᵉbûwkadneʼtstsar
- king · H4428מֶלֶךְ melek
- Babylon · H894בָּבֶל Bâbel
- came · H935בּוֹא bôwʼ
- army · H2428חַיִל chayil
- Jerusalem · H3389יְרוּשָׁלַ͏ִם Yᵉrûwshâlaim
- pitched · H2583חָנָה chânâh
- built · H1129בָּנָה bânâh
- forts · H1785דָּיֵק dâyêq
- about · H5439סָבִיב çâbîyb