Jeremiah · chapter 52 · verse 8
Jeremiah 52:8 in Kannada
ಆಗ ಕಸ್ದೀಯರ ದಂಡು ಅರಸನನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಹಿಡಿದರು. ಅವನ ದಂಡೆಲ್ಲಾ ಅವನನ್ನು ಬಿಟ್ಟು ಚದರಿಹೋಯಿತು.
Aaga kasdeeyara dandu arasanannu hindatti chidkeeyanannu yerikovina bailinalli hididaru. Avana dandellaa avanannu bittu chadarihoyitu.
Jeremiah 52:8 in English
- King James Version (KJV)
- But the army of the Chaldeans pursued after the king, and overtook Zedekiah in the plains of Jericho; and all his army was scattered from him.
- World English Bible (WEB)
- but the army of the Chaldeans pursued the king, and overtook Zedekiah in the plains of Jericho; and all his army was scattered from him.
- American Standard Version (ASV)
- But the army of the Chaldeans pursued after the king, and overtook Zedekiah in the plains of Jericho; and all his army was scattered from him.
- Bible in Basic English (BBE)
- And the Chaldaean army went after King Zedekiah and overtook him on the other side of Jericho, and all his army went in flight from him in every direction.
- Darby Translation (DBY)
- And the army of the Chaldeans pursued after the king, and overtook Zedekiah in the plains of Jericho; and all his army was scattered from him.
- Webster's Bible (WBS)
- But the army of the Chaldeans pursued the king, and overtook Zedekiah in the plains of Jericho; and all his army was scattered from him.
- Young's Literal Translation (YLT)
- And the forces of the Chaldeans pursue after the king, and overtake Zedekiah in the plains of Jericho, and all his forces have been scattered from him,
Read in context
- 6ನಾಲ್ಕನೇ ತಿಂಗಳಲ್ಲಿ, ತಿಂಗಳಿನ ಒಂಭತ್ತನೇ ದಿವಸದಲ್ಲಿ ದೇಶಸ್ಥರಿ ಗೋಸ್ಕರ ರೊಟ್ಟಿ ಇಲ್ಲದೆ ಪಟ್ಟಣದಲ್ಲಿ ಕ್ಷಾಮವು ಕಠಿಣವಾಗಿತ್ತು.
- 7ಆಗ ಪಟ್ಟಣವು ವಿಭಾಗವಾಯಿತು; ಯುದ್ಧಸ್ಥರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದ ಬಾಗಲಿನ ಮಾರ್ಗವಾಗಿ ರಾತ್ರಿಯಲ್ಲಿ ಪಟ್ಟಣವನ್ನು ಬಿಟ್ಟು ಹೊರಟು, ಬೈಲು ಸೀಮೆಯ ಮಾರ್ಗವಾಗಿ ಹೋದರು. ಆದರೆ ಕಸ್ದೀಯರು ಪಟ್ಟಣದ ಸುತ್ತಲೂ ಇದ್ದರು.
- 8ಆಗ ಕಸ್ದೀಯರ ದಂಡು ಅರಸನನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಹಿಡಿದರು. ಅವನ ದಂಡೆಲ್ಲಾ ಅವನನ್ನು ಬಿಟ್ಟು ಚದರಿಹೋಯಿತು.
- 9ಆಗ ಅವರು ಅರಸನನ್ನು ಹಿಡಿದು, ಬಾಬೆಲಿನ ಅರಸನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು; ಅಲ್ಲಿ ಅವನು ಅವನ ವಿಷಯ ನ್ಯಾಯತೀರ್ಪು ಮಾಡಿದನು.
- 10ಬಾಬೇಲಿನ ಅರಸನು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣುಗಳ ಮುಂದೆ ಕೊಂದು ಹಾಕಿಸಿದನು. ಯೆಹೂದದ ಪ್ರಧಾನರೆಲ್ಲ ರನ್ನೂ ಸಹ ರಿಬ್ಲದಲ್ಲಿ ಕೊಂದು ಹಾಕಿಸಿದನು.
Cross references
- Jeremiah 34:21 ಯೆರೆಮೀಯ 34:21ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಪ್ರಧಾನರನ್ನೂ ಅವರ ಶತ್ರುಗಳ ಕೈಯಲ್ಲಿಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಲ್ಲಿಯೂ ನಿಮ್ಮನ್ನು ಬಿಟ್ಟು ಹೋಗಿರುವ ಬಾಬೆಲಿನ ಅರಸನ ಸೈನ್ಯದ ಕೈಯಲ್ಲಿಯೂ ಒಪ್ಪಿಸುವೆನು.ಕರ್ತನು ಹೇಳುವದೇನಂದರೆ--ಇಗೋ, ನಾನು ಆಜ್ಞಾಪಿಸಿ ಅವರನ್ನು ಈ ಪಟ್ಟಣದ ಬಳಿಗೆ ತಿರಿಗಿ ಬರಮಾಡುವೆನು; ಅವರು ಅದಕ್ಕೆ ವಿರೋಧವಾಗಿ ಯುದ್ಧಮಾಡಿ ಅದನ್ನು ಹಿಡಿದು ಬೆಂಕಿಯಿಂದ ಸುಡು ವರು; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳಾಗ ಮಾಡುವೆನು.
- Jeremiah 21:7 ಯೆರೆಮೀಯ 21:7ಇದಲ್ಲದೆ ಕರ್ತನು ಅನ್ನುವದೇನಂದರೆ--ತರುವಾಯ ನಾನು ಯೆಹೂದದ ಅರಸನಾದ ಚಿದ್ಕೀಯನನ್ನೂ ಅವನ ಸೇವಕರನ್ನೂ ಜನರನ್ನೂ ಈ ಪಟ್ಟಣದಲ್ಲಿ ಜಾಡ್ಯದಿಂದಲೂ ಕತ್ತಿಯಿಂದಲೂ ಕ್ಷಾಮದಿಂದಲೂ ಉಳಿದವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೂ ಅವರ ಶತ್ರುಗಳ ಕೈಗೂ ಅವರ ಪ್ರಾಣವನ್ನು ಹುಡುಕುವವರಕೈಗೂ ಒಪ್ಪಿಸುವೆನು; ಅವನು ಅವರನ್ನು ಕತ್ತಿಯಿಂದ ಹೊಡೆಯುವನು. ಅವರ ಮೇಲೆ ಕರುಣೆ ಇಡುವದಿಲ್ಲ, ಕನಿಕರಿಸುವದಿಲ್ಲ ಅಂತಃಕರುಣೆ ಪಡುವದಿಲ್ಲ.
- Jeremiah 32:4 ಯೆರೆಮೀಯ 32:4ಅವನು ಅದನ್ನು ವಶಪಡಿಸಿಕೊಳ್ಳುವನು; ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಗೆ ತಪ್ಪಿಸಿಕೊಳ್ಳದೆ ನಿಶ್ಚಯ ವಾಗಿ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವನು, ಸಾಕ್ಷಾತ್ತಾಗಿ ಅವನ ಸಂಗಡ ಮಾತನಾಡುವನು; ಅವನ ಕಣ್ಣುಗಳು ಅವನ ಕಣ್ಣುಗಳನ್ನು ನೋಡುವವು.
- Jeremiah 38:23 ಯೆರೆಮೀಯ 38:23ಹಾಗೆ ನಿನ್ನ ಹೆಂಡತಿಯರೆಲ್ಲರನ್ನೂ ನಿನ್ನ ಮಕ್ಕಳನ್ನೂ ಕಸ್ದೀಯರ ಬಳಿಗೆ ತರುವರು; ನೀನು ಅವರ ಕೈಗೆ ತಪ್ಪಿಸಿಕೊಳ್ಳು ವದಿಲ್ಲ; ಬಾಬೆಲಿನ ಅರಸನ ಕೈಯಿಂದ ಹಿಡಿಯಲ್ಪ ಡುವಿ; ಈ ಪಟ್ಟಣವನ್ನು ನೀನೇ ಬೆಂಕಿಯಿಂದ ಸುಡುವಿ ಅಂದನು.
- Lamentations 4:19–20 ಪ್ರಲಾಪಗಳು 4:19–20ನಮ್ಮನ್ನು ಹಿಂಸಿಸುವವರು ಆಕಾಶದಲ್ಲಿ ಹಾರುವ ಹದ್ದುಗಳಿಗಿಂತ ತೀವ್ರ ವಾಗಿದ್ದಾರೆ; ಅವರು ಪರ್ವತಗಳ ಮೇಲೆ ನಮ್ಮನ್ನು ಹಿಂದಟ್ಟಿ ಅರಣ್ಯದಲ್ಲಿ ಹೊಂಚುಹಾಕಿದರು. ಯಾರ ವಿಷಯವಾಗಿ ನಾವು--ಅವನ ನೆರಳಿನ ಕೆಳಗೆ ಅನ್ಯ ಜನಾಂಗಗಳೊಳಗೆ ಬದುಕುವೆವು ಎಂದು ಹೇಳಿ ಕೊಂಡೆವೋ ನಮ್ಮ ಮೂಗಿನ ಉಸಿರಾದ ಆ ಕರ್ತನ ಅಭಿಷಿಕ್ತನು ಅವರ ಕುಣಿಗಳಲ್ಲಿ ಸಿಕ್ಕಿಕೊಂಡನು.
- Isaiah 30:16–17 ಯೆಶಾಯ 30:16–17ಆದರೆ ನೀವು ಬೇಡವೇ ಬೇಡ, ನಾವು ಕುದುರೆಗಳ ಮೇಲೆ ಓಡುವೆವು ಅಂದುಕೊಂಡಿದ್ದರಿಂದ ನೀವು ಓಡೇ ಹೋಗುವಿರಿ, ಮತ್ತು--ನಾವು ವೇಗವಾಗಿ ಸವಾರಿ ಮಾಡುವೆವು ಅಂದುಕೊಂಡದ್ದರಿಂದ ಆ ವೇಗ ಗಳೇ ನಿಮ್ಮನ್ನು ಅಟ್ಟಿಬಿಡುವವು. ಒಬ್ಬನ ಬೆದರಿ ಕೆಗೆ ಸಾವಿರ ಜನರು ಓಡುವರು; ಐವರು ಹೆದರಿಸು ವದರಿಂದ ನೀವು ಓಡಿಹೋಗುವಿರಿ; ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಲಣ ಕಂಬದಂತೆಯೂ ಒಂಟಿಯಾಗಿ ಉಳಿಯುವಿರಿ.
- Ezekiel 12:12–14 ಯೆಹೆಜ್ಕೇಲನು 12:12–14ಅವರ ಮಧ್ಯದಲ್ಲಿರುವ ಪ್ರಭುವು ಹೆಗಲ ಮೇಲೆ ಹೊರೆಯನ್ನು ಹೊತ್ತು ಕೊಂಡು ಕತ್ತಲಲ್ಲಿ ಹೊರಟು ಹೋಗುವನು; ಅವರು ಗೋಡೆಯನ್ನು ಕೊರೆದು ಆ ಕಿಂಡಿಯ ಮೂಲಕ ತಮ್ಮ ಸಾಮಗ್ರಿಗಳನ್ನು ಹೊರಗೆ ಸಾಗಿಸುವರು. ಅವನು ತನ್ನ ಕಣ್ಣುಗಳಿಂದ ನೆಲವನ್ನು ನೋಡದ ಹಾಗೆ ಮುಖ ವನ್ನು ಮುಚ್ಚಿಕೊಳ್ಳುವನು. ನನ್ನ ಬಲೆಯನ್ನು ಸಹ ನಾನು ಅವನ ಮೇಲೆ ಹರಡುವೆನು. ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು. ನಾನು ಅವನನ್ನು ಕಸ್ದೀಯ ದೇಶದ ಬಾಬೆಲಿಗೆ ಒಯ್ಯುವೆನು. ಆದರೆ ಅವನು ಅದನ್ನು ನೋಡದೆ ಅಲ್ಲಿಯೇ ಸಾಯುವನು. ಅವನ ಸುತ್ತಲೂ ಅವನಿಗೆ ಸಹಾಯ ಮಾಡುವವರೆಲ್ಲರನ್ನೂ ಅವನ ಎಲ್ಲಾ ಸೈನ್ಯಗಳನ್ನೂ ಎಲ್ಲಾ ದಿಕ್ಕುಗಳಿಗೆ ಚದರಿಸಿ ಅವರ ಹಿಂದೆ ಕತ್ತಿಯನ್ನು ಬೀಸುವೆನು.
- Amos 9:1–4 ಆಮೋಸ 9:1–4ಕರ್ತನು ಯಜ್ಞವೇದಿಯ ಮೇಲೆ ನಿಂತಿರು ವದನ್ನು ನಾನು ಕಂಡೆನು. ಆತನು ಹೇಳಿದ್ದೇ ನಂದರೆ--ಹೊಸ್ತಿಲುಗಳು ಕದಲುವಂತೆ ಆಧಾರ ಬೋದಿಗೆಗಳನ್ನು ಬಲವಾಗಿ ಹೊಡೆದು ಅವು ಎಲ್ಲರ ತಲೆಗಳ ಮೇಲೆ ಬೀಳುವ ಹಾಗೆ ಅವುಗಳನ್ನು ಕಡಿದು ಬಿಡು; ಅವರಲ್ಲಿ ಉಳಿದವರನ್ನು ನಾನು ಕೊಲ್ಲುವೆನು; ಅವರಲ್ಲಿ ಓಡಿ ಹೋಗುವವನು ಓಡಿಹೋಗಲಾಗು ವದಿಲ್ಲ; ಅವರಲ್ಲಿ ತಪ್ಪಿಸಿಕೊಳ್ಳುವವನು ತಪ್ಪಿಸಿಕೊಳ್ಳ ಲಾಗುವದಿಲ್ಲ. ಅವರು ನರಕದ ವರೆಗೂ ತೋಡಿ ಕೊಂಡು ಹೋದರೂ ನನ್ನ ಕೈ ಅವರನ್ನು ಅಲ್ಲಿಂದ ಹಿಡಿದೆಳೆಯುವದು. ಅವರು ಆಕಾಶಕ್ಕೆ ಏರಿ ಹೋದರೂ ನಾನು ಅವರನ್ನು ಅಲ್ಲಿಂದ ಕೆಳಗೆ ಇಳಿಸುವೆನು. ಅವರು ಕರ್ಮೆಲಿನ ಬೆಟ್ಟದ ಕೊನೆಯಲ್ಲಿ ಅಡಗಿಕೊಂಡರೂ ನಾನು ಅವರನ್ನು ಹುಡುಕಿ ಅಲ್ಲಿಂದ ತೆಗೆಯುವೆನು; ಅವರು ನನ್ನ ಕಣ್ಣುಗಳಿಗೆ ಮರೆಯಾಗಿ ಸಮುದ್ರದ ತಳದಲ್ಲಿ ಅಡಗಿಕೊಂಡರೂ ಸರ್ಪಕ್ಕೆ ಅಪ್ಪಣೆಕೊಟ್ಟು ಅದು ಅವರನ್ನು ಅಲ್ಲೇ ಕಚ್ಚುವಂತೆ ಮಾಡುವೆನು. ಅವರು ತಮ್ಮ ಶತ್ರುಗಳ ಮುಂದೆ ಸೆರೆಗೆ ಹೋದರೂ ಅಲ್ಲಿಯೂ ನಾನು ಕತ್ತಿಗೆ ಅಪ್ಪಣೆ ಕೊಡುವೆನು; ಅದು ಅವರನ್ನು ಕೊಲ್ಲುವದು. ಮೇಲಿಗಾಗಿ ಅಲ್ಲ, ಕೇಡಿಗಾಗಿ ಅವರ ಮೇಲೆ ನನ್ನ ದೃಷ್ಟಿಯಿಡುವೆನು.
- Jeremiah 39:5 ಯೆರೆಮೀಯ 39:5ಅವನು ಬೈಲುಸೀಮೆಯ ಮಾರ್ಗ ವಾಗಿ ಹೊರಟನು. ಆದರೆ ಕಸ್ದೀಯರ ದಂಡು ಅವರನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಅವರು ಅವನನ್ನು ಹಿಡಿದು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು. ಅಲ್ಲಿ ಅವನು ಅವನಿಗೆ ನ್ಯಾಯತೀರಿಸಿದನು.
- Jeremiah 37:18 ಯೆರೆಮೀಯ 37:18ಇದಲ್ಲದೆ ಯೆರೆವಿಾಯನು ಅರಸನಾದ ಚಿದ್ಕೀಯನಿಗೆ ಹೇಳಿದ್ದೇ ನಂದರೆ--ನೀವು ನನ್ನನ್ನು ಸೆರೆಮನೆಯಲ್ಲಿ ಹಾಕುವ ಹಾಗೆ ನಾನು ನಿನಗೂ ನಿನ್ನ ಸೇವಕರಿಗೂ ಈ ಜನರಿಗೂ ವಿರೋಧವಾಗಿ ಏನು ಅಡ್ಡಿ ಮಾಡಿದ್ದೇನೆ? ಇದಲ್ಲದೆ
- Amos 2:14–15 ಆಮೋಸ 2:14–15ಆದ ದರಿಂದ ತ್ವರೆಯಾಗಿ ಓಡುವವನು ನಾಶವಾಗುವನು. ಬಲಿಷ್ಠನು ತನ್ನ ತ್ರಾಣವನ್ನು ಬಲಪಡಿಸಿಕೊಳ್ಳಲಾರನು; ಪರಾಕ್ರಮಿಯು ತನ್ನ ಪ್ರಾಣವನ್ನು ಉಳಿಸಿಕೊಳ್ಳನು. ಬಿಲ್ಲು ಹಿಡಿಯುವವನು ನಿಲ್ಲನು; ಪಾದ ತ್ವರಿತನು ತಪ್ಪಿಸಿಕೊಳ್ಳನು, ಅಶ್ವಾರೂಢನು ತನ್ನ ಪ್ರಾಣವನ್ನು ತಪ್ಪಿಸಿಕೊಳ್ಳನು.ಶೂರರಲ್ಲಿ ಧೈರ್ಯ ಹೃದಯ ವುಳ್ಳವನು ಆ ದಿನದಲ್ಲಿ ಬೆತ್ತಲೆಯಾಗಿ ಓಡಿ ಹೋಗುವನು ಎಂದು ಕರ್ತನು ಹೇಳುತ್ತಾನೆ.
- Ezekiel 17:20–21 ಯೆಹೆಜ್ಕೇಲನು 17:20–21ನಾನು ಅವನ ಮೇಲೆ ನನ್ನ ಬಲೆಯನ್ನು ಬೀಸುತ್ತೇನೆ; ಆಗ ಅವನು ನನ್ನ ಉರ್ಲಿನಲ್ಲಿ ಸಿಕ್ಕಿಬೀಳುವನು; ನಾನು ಅವನನ್ನು ಬಾಬೆಲಿಗೆ ಒಯ್ದು ಅವನು ನನಗೆ ವಿರೋಧವಾಗಿ ಮಾಡಿರುವ ಅಪರಾಧದ ವಿಷಯದಲ್ಲಿ ನಾನು ಅವರೊಂದಿಗೆ ವಾದಿಸುವೆನು. ಅವನ ಸೈನ್ಯಗಳೆಲ್ಲಾ ಚದರಿಸಲ್ಪಟ್ಟು ಓಡಿಹೋಗಿ ಅವನ ಸಂಗಡ ಕತ್ತಿಯಿಂದ ಬೀಳುವರು; ಉಳಿದವರು ಎಲ್ಲಾ ದಿಕ್ಕುಗಳಿಗೆ ಚದರಿಸ ಲ್ಪಡುವರು; ಆಗ ಕರ್ತನಾದ ನಾನೇ ಅದನ್ನು ಹೇಳಿ ದೆನೆಂದು ನಿಮಗೆ ತಿಳಿಯುವದು.
Original words (Hebrew)
- army · H2428חַיִל chayil
- Chaldeans · H3778כַּשְׂדִּי Kasdîy
- pursued · H7291רָדַף râdaph
- after · H310אַחַר ʼachar
- king · H4428מֶלֶךְ melek
- overtook · H5381נָשַׂג nâsag
- Zedekiah · H6667צִדְקִיָּה Tsidqîyâh
- plains · H6160עֲרָבָה ʻărâbâh
- Jericho · H3405יְרִיחוֹ Yᵉrîychôw
- army · H2428חַיִל chayil
- scattered · H6327פּוּץ pûwts