Jeremiah · chapter 52 · verse 9
Jeremiah 52:9 in Kannada
ಆಗ ಅವರು ಅರಸನನ್ನು ಹಿಡಿದು, ಬಾಬೆಲಿನ ಅರಸನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು; ಅಲ್ಲಿ ಅವನು ಅವನ ವಿಷಯ ನ್ಯಾಯತೀರ್ಪು ಮಾಡಿದನು.
Aaga avaru arasanannu hididu, baabelina arasana balige hamaat deshadalliruva riblakke takkondu hodaru; alli avanu avana vishaya nyaayateerpu maadidanu.
Jeremiah 52:9 in English
- King James Version (KJV)
- Then they took the king, and carried him up unto the king of Babylon to Riblah in the land of Hamath; where he gave judgment upon him.
- World English Bible (WEB)
- Then they took the king, and carried him up to the king of Babylon to Riblah in the land of Hamath; and he pronounced judgment on him.
- American Standard Version (ASV)
- Then they took the king, and carried him up unto the king of Babylon to Riblah in the land of Hamath; and he gave judgment upon him.
- Bible in Basic English (BBE)
- Then they made the king a prisoner and took him up to the king of Babylon to Riblah in the land of Hamath to be judged.
- Darby Translation (DBY)
- And they took the king, and brought him up to the king of Babylon, unto Riblah in the land of Hamath, and he pronounced judgment upon him.
- Webster's Bible (WBS)
- Then they took the king, and carried him to the king of Babylon to Riblah in the land of Hamath; where he gave judgment upon him.
- Young's Literal Translation (YLT)
- and they capture the king, and bring him up unto the king of Babylon to Riblah, in the land of Hamath, and he speaketh with him — judgments.
Read in context
- 7ಆಗ ಪಟ್ಟಣವು ವಿಭಾಗವಾಯಿತು; ಯುದ್ಧಸ್ಥರೆಲ್ಲರು ಓಡಿಹೋಗಿ, ಅರಸನ ತೋಟದ ಬಳಿಯಲ್ಲಿದ್ದ ಎರಡು ಗೋಡೆಗಳ ಮಧ್ಯದ ಬಾಗಲಿನ ಮಾರ್ಗವಾಗಿ ರಾತ್ರಿಯಲ್ಲಿ ಪಟ್ಟಣವನ್ನು ಬಿಟ್ಟು ಹೊರಟು, ಬೈಲು ಸೀಮೆಯ ಮಾರ್ಗವಾಗಿ ಹೋದರು. ಆದರೆ ಕಸ್ದೀಯರು ಪಟ್ಟಣದ ಸುತ್ತಲೂ ಇದ್ದರು.
- 8ಆಗ ಕಸ್ದೀಯರ ದಂಡು ಅರಸನನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಹಿಡಿದರು. ಅವನ ದಂಡೆಲ್ಲಾ ಅವನನ್ನು ಬಿಟ್ಟು ಚದರಿಹೋಯಿತು.
- 9ಆಗ ಅವರು ಅರಸನನ್ನು ಹಿಡಿದು, ಬಾಬೆಲಿನ ಅರಸನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು; ಅಲ್ಲಿ ಅವನು ಅವನ ವಿಷಯ ನ್ಯಾಯತೀರ್ಪು ಮಾಡಿದನು.
- 10ಬಾಬೇಲಿನ ಅರಸನು ಚಿದ್ಕೀಯನ ಮಕ್ಕಳನ್ನು ಅವನ ಕಣ್ಣುಗಳ ಮುಂದೆ ಕೊಂದು ಹಾಕಿಸಿದನು. ಯೆಹೂದದ ಪ್ರಧಾನರೆಲ್ಲ ರನ್ನೂ ಸಹ ರಿಬ್ಲದಲ್ಲಿ ಕೊಂದು ಹಾಕಿಸಿದನು.
- 11ಇದಲ್ಲದೆ ಬಾಬೆಲಿನ ಅಸನು ಚಿದ್ಕೀಯನ ಕಣ್ಣುಗಳನ್ನು ಕಿತ್ತುಹಾಕಿಸಿ, ಅವನನ್ನು ಹಿತ್ತಾಳೆಯ ಸಂಕೋಲೆಗಳಿಂದ ಕಟ್ಟಿಸಿ, ಬಾಬೆಲಿಗೆ ಒಯ್ದು ಅವನು ಸಾಯುವ ದಿನದ ವರೆಗೆ ಸೆರೆಮನೆಯಲ್ಲಿ ಇಟ್ಟನು.
Cross references
- Numbers 13:21 ಅರಣ್ಯಕಾಂಡ 13:21ಆಗ ಅವರು ಏರಿಹೋಗಿ ಜಿನ್ ಎಂಬ ಅರಣ್ಯ ದಿಂದ ಹಮಾತಿನ ಕಡೆಯಲ್ಲಿರುವ ರೆಹೋಬಿನ ವರೆಗೂ ದೇಶವನ್ನು ಪಾಳತಿ ನೋಡಿದರು.
- Jeremiah 39:5 ಯೆರೆಮೀಯ 39:5ಅವನು ಬೈಲುಸೀಮೆಯ ಮಾರ್ಗ ವಾಗಿ ಹೊರಟನು. ಆದರೆ ಕಸ್ದೀಯರ ದಂಡು ಅವರನ್ನು ಹಿಂದಟ್ಟಿ ಚಿದ್ಕೀಯನನ್ನು ಯೆರಿಕೋವಿನ ಬೈಲಿನಲ್ಲಿ ಅವರು ಅವನನ್ನು ಹಿಡಿದು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಬಳಿಗೆ ಹಮಾತ್ ದೇಶದಲ್ಲಿರುವ ರಿಬ್ಲಕ್ಕೆ ತಕ್ಕೊಂಡು ಹೋದರು. ಅಲ್ಲಿ ಅವನು ಅವನಿಗೆ ನ್ಯಾಯತೀರಿಸಿದನು.
- 2 Kings 25:6 2 ಅರಸುಗಳು 25:6ಅವನ ದಂಡೆಲ್ಲಾ ಅವನ ಕಡೆಯಿಂದ ಚದರಿ ಹೋಯಿತು. ಅವರು ಅರಸನನ್ನು ಹಿಡಿದು ಕೊಂಡು, ರಿಬ್ಲದಲ್ಲಿರುವ ಬಾಬೆಲಿನ ಅರಸನ ಬಳಿಗೆ ತಕ್ಕೊಂಡು ಬಂದು ಅವನ ಮೇಲೆ ನ್ಯಾಯವನ್ನು ನಿರ್ಣಯಿಸಿದರು.
- Joshua 13:5 ಯೆಹೋಶುವ 13:5ಗೆಬಾಲ್ಯರ ಪ್ರಾಂತ್ಯ; ಸೂರ್ಯನು ಉದಯಿಸುವ ದಿಕ್ಕಿನಲ್ಲಿ ಹೆರ್ಮೋನ್ ಬೆಟ್ಟದ ಕೆಳಗೆ ಇರುವ ಬಾಳ್ಗಾದಿನಿಂದ ಹಾಮಾತಿನಲ್ಲಿ ಪ್ರವೇಶಿಸುವ ಸ್ಥಳದ ವರೆಗೂ ಇರುವ ಲೆಬನೋನೆಲ್ಲಾ ಇವುಗಳೇ.
- Jeremiah 32:4–5 ಯೆರೆಮೀಯ 32:4–5ಅವನು ಅದನ್ನು ವಶಪಡಿಸಿಕೊಳ್ಳುವನು; ಯೆಹೂದದ ಅರಸನಾದ ಚಿದ್ಕೀಯನು ಕಸ್ದೀಯರ ಕೈಗೆ ತಪ್ಪಿಸಿಕೊಳ್ಳದೆ ನಿಶ್ಚಯ ವಾಗಿ ಬಾಬೆಲಿನ ಅರಸನ ಕೈಯಲ್ಲಿ ಒಪ್ಪಿಸಲ್ಪಡುವನು, ಸಾಕ್ಷಾತ್ತಾಗಿ ಅವನ ಸಂಗಡ ಮಾತನಾಡುವನು; ಅವನ ಕಣ್ಣುಗಳು ಅವನ ಕಣ್ಣುಗಳನ್ನು ನೋಡುವವು. ಅವನು ಚಿದ್ಕೀಯನನ್ನು ಬಾಬೆಲಿಗೆ ಒಯ್ಯುವನು, ನಾನು ಅವನನ್ನು ದರ್ಶಿಸುವ ವರೆಗೆ ಅಲ್ಲೇ ಇರುವನೆಂಬದಾಗಿ ಕರ್ತನು ಅನ್ನುತ್ತಾನೆ, ನೀವು ಕಸ್ದೀಯರ ಸಂಗಡ ಯುದ್ಧ ಮಾಡಿದಾಗ್ಯೂ ನಿಮಗೆ ಸಫಲವಾಗುವದಿಲ್ಲವೆಂದು ಯಾಕೆ ಪ್ರವಾದಿಸುತ್ತೀ ಎಂದು ಹೇಳಿ ಅವನನ್ನು ಸೆರೆಯಲ್ಲಿ ಹಾಕಿಸಿದನು.
- Numbers 34:11 ಅರಣ್ಯಕಾಂಡ 34:11ಶೆಫಾಮಿನಿಂದ ಮೇರೆ ಆಯಿನಿನ ಪೂರ್ವದಲ್ಲಿರುವ ರಿಬ್ಲಕ್ಕೆ ಇಳಿದು ಕಿನ್ನೆರೆತ್ ಸಮುದ್ರದ ಪೂರ್ವ ತೀರವನ್ನು ಮುಟ್ಟಲಿ.
- 2 Chronicles 8:3 2 ಪೂರ್ವಕಾಲವೃತ್ತಾಂತ 8:3ಸೊಲೊಮೋನನು ಹಮಾತು ಚೋಬಕ್ಕೆ ಹೋಗಿ ಅದನ್ನು ಜಯಿಸಿದನು.
- Ezekiel 21:25–27 ಯೆಹೆಜ್ಕೇಲನು 21:25–27ದುಷ್ಟನಾದ ಭ್ರಷ್ಟ ಇಸ್ರಾಯೇಲನ ಪ್ರಭುವೇ, ನೀನು ಮಾಡಿದ ಅಕ್ರಮಗಳಿಂದ ನಿನಗೆ ಅಂತ್ಯ ದಿವಸವು ಬಂದಿತು. ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಮುಂಡಾಸವನ್ನು ಎತ್ತಿಡು, ಕಿರೀಟವನ್ನು ತೆಗೆದುಹಾಕು; ಅದು ಹಾಗೆಯೇ ಇರುವದಿಲ್ಲ; ತಗ್ಗಿಸಲ್ಪಟ್ಟವನನ್ನು ಹೆಚ್ಚಿಸಿ ಹೆಚ್ಚಿಸಲ್ಪಟ್ಟವನನ್ನು ತಗ್ಗಿಸು. ನಾನು ತಳ್ಳಿಬಿಡು ವೆನು, ತಳ್ಳಿಬಿಡುವೆನು, ಅದನ್ನು ತಳ್ಳಿಬಿಡುವೆನು; ನ್ಯಾಯ ಯಾರದು? ಅವನು ಬರುವ ವರೆಗೂ ಇದು ಇರುವದಿಲ್ಲ; ನಾನು ಅವನಿಗೆ ಇದನ್ನು ಕೊಟ್ಟು ಬಿಡುತ್ತೇನೆ.
- 2 Chronicles 33:11 2 ಪೂರ್ವಕಾಲವೃತ್ತಾಂತ 33:11ಆದಕಾರಣ ಕರ್ತನು ಅಶ್ಶೂರದ ಅರಸನ ಸೈನ್ಯದ ಅಧಿಪತಿಗಳನ್ನು ಬರಮಾಡಿದನು. ಅವರು ಮನಸ್ಸೆಯನ್ನು ಮುಳ್ಳುಗಿಡಗಳಲ್ಲಿ ಹಿಡಿದು ಅವನಿಗೆ ಸಂಕೋಲೆಗಳನ್ನು ಹಾಕಿ ಅವನನ್ನು ಬಾಬೆಲಿಗೆ ಒಯ್ದರು.
- 2 Kings 23:33 2 ಅರಸುಗಳು 23:33ಆದರೆ ಅವನು ಯೆರೂಸಲೇಮಿನಲ್ಲಿ ಆಳದ ಹಾಗೆ ಫರೋಹನೆಕೋ ಎಂಬವನು ಹಮಾತ್ ದೇಶದ ರಿಬ್ಲಾದಲ್ಲಿ ಅವನನ್ನು ಬಂಧಿಸಿ ದೇಶದ ಮೇಲೆ ನೂರು ತಲಾಂತು ಬೆಳ್ಳಿಯನ್ನೂ ಒಂದು ತಲಾಂತು ಬಂಗಾರವನ್ನೂ ದಂಡ ತೆರಬೇಕಾ ಯಿತು.
- 1 Kings 8:65 1 ಅರಸುಗಳು 8:65ಅದೇ ಕಾಲದಲ್ಲಿ ಸೊಲೊಮೋನನೂ ಅವನ ಸಂಗಡ ಹಮಾತಿನ ಪ್ರದೇಶ ಮೊದಲುಗೊಂಡು ಐಗುಪ್ತದ ನದಿಯ ಮಟ್ಟಿಗೂ ಇರುವ ಮಹಾಸಭೆ ಯಾದ ಸಮಸ್ತ ಇಸ್ರಾಯೇಲ್ಯರೂ ನಮ್ಮ ದೇವರಾದ ಕರ್ತನ ಮುಂದೆ ಏಳೇಳು ಹದಿನಾಲ್ಕು ದಿವಸ ಹಬ್ಬವನ್ನು ಮಾಡಿದರು.ಎಂಟನೇ ದಿನದಲ್ಲಿ ಅವನು ಜನರಿಗೆ ಅಪ್ಪಣೆಯನ್ನು ಕೊಟ್ಟನು. ಆಗ ಅವರು ಅರಸನನ್ನು ಆಶೀರ್ವದಿಸಿ ಕರ್ತನು ತನ್ನ ಸೇವಕನಾದ ದಾವೀದನಿ ಗೋಸ್ಕರವೂ ತನ್ನ ಜನರಾದ ಇಸ್ರಾಯೇಲ್ಯರಿಗೋಸ್ಕ ರವೂ ಮಾಡಿದ ಸಮಸ್ತ ಉಪಕಾರದ ನಿಮಿತ್ತ ಸಂತೋಷಪಟ್ಟು ಹೃದಯದಲ್ಲಿ ಆನಂದವುಳ್ಳವರಾಗಿ ತಮ್ಮ ತಮ್ಮ ಡೇರೆಗಳಿಗೆ ಹೋದರು.