Jeremiah · chapter 6 · verse 17
Jeremiah 6:17 in Kannada
ಇದಲ್ಲದೆ ನಿಮ್ಮ ಮೇಲೆ ಕಾವಲುಗಾರರನ್ನು ಇರಿಸಿ ತುತೂರಿಯ ಶಬ್ದವನ್ನು ಆಲೈ ಸಿರಿ ಅಂದೆನು; ಆದರೆ ಅವರು--ನಾವು ಆಲೈಸುವ ದಿಲ್ಲ ಅಂದರು.
Idallade nimma mele kaavalugaararannu irisi tutooriya shabdavannu aalai siri andenu; aadare avaru--naavu aalaisuva dilla andaru.
Jeremiah 6:17 in English
- King James Version (KJV)
- Also I set watchmen over you, [saying], Hearken to the sound of the trumpet. But they said, We will not hearken.
- World English Bible (WEB)
- I set watchmen over you, saying, ‘Listen to the sound of the trumpet!’ But they said, ‘We will not listen!’
- American Standard Version (ASV)
- And I set watchmen over you, [saying], Hearken to the sound of the trumpet; but they said, We will not hearken.
- Bible in Basic English (BBE)
- And I put watchmen over you, saying, Give attention to the sound of the horn; but they said, We will not give attention.
- Darby Translation (DBY)
- Also I have set watchmen over you: — Hearken ye to the sound of the trumpet. But they said, We will not hearken.
- Webster's Bible (WBS)
- Also I set watchmen over you, [saying] , Hearken to the sound of the trumpet. But they said, We will not hearken.
- Young's Literal Translation (YLT)
- And I have raised up for you watchmen, Attend ye to the voice of the trumpet. And they say, 'We do not attend.'
Read in context
- 15ಅಸಹ್ಯವನ್ನು ಮಾಡಿದ ಮೇಲೆ ನಾಚಿಕೆಪಟ್ಟರೋ? ಇಲ್ಲ, ಸ್ವಲ್ಪವಾದರೂ ನಾಚಿಕೆಪಡ ಲಿಲ್ಲ; ಇಲ್ಲವೆ ಲಜ್ಜೆಯನ್ನು ಅರಿಯರು; ಆದದರಿಂದ ಅವರು ಬೀಳುವವರೊಳಗೆ ಬೀಳುವರು; ನಾನು ಅವ ರನ್ನು ವಿಚಾರಿಸುವ ಕಾಲದಲ್ಲಿ ಅವರು ಕೆಳಗೆ ಹಾಕ ಲ್ಪಡುವರು ಎಂದು ಕರ್ತನು ಹೇಳುತ್ತಾನೆ.
- 16ಕರ್ತನು ಹೀಗೆ ಹೇಳುತ್ತಾನೆ--ಮಾರ್ಗಗಳಲ್ಲಿ ನಿಂತುಕೊಂಡು ನೋಡಿರಿ; ಮೊದಲಿನ ಹಾದಿಗಳನ್ನು ಕೇಳಿಕೊಳ್ಳಿರಿ; ಒಳ್ಳೇ ಮಾರ್ಗ ಎಲ್ಲಿದೆಯೋ ಅದರಲ್ಲಿ ನಡೆಯಿರಿ; ಆಗ ನಿಮ್ಮ ಪ್ರಾಣಗಳಿಗೆ ವಿಶ್ರಾಂತಿ ಸಿಕ್ಕು ವದು ಅಂದನು. ಆದರೆ ಅವರು--ನಾವು ನಡೆ ಯುವದಿಲ್ಲ ಅಂದರು.
- 17ಇದಲ್ಲದೆ ನಿಮ್ಮ ಮೇಲೆ ಕಾವಲುಗಾರರನ್ನು ಇರಿಸಿ ತುತೂರಿಯ ಶಬ್ದವನ್ನು ಆಲೈ ಸಿರಿ ಅಂದೆನು; ಆದರೆ ಅವರು--ನಾವು ಆಲೈಸುವ ದಿಲ್ಲ ಅಂದರು.
- 18ಆದದರಿಂದ ಜನಾಂಗಗಳೇ, ಕೇಳಿರಿ; ಸಭೆಯೇ, ಅವರಲ್ಲಿ ಇರುವಂಥದ್ದನ್ನು ತಿಳುಕೊಳ್ಳಿರಿ.
- 19ಭೂಮಿಯೇ, ಕೇಳು, ಇಗೋ, ನಾನು ಈ ಜನರ ಮೇಲೆ ಕೇಡನ್ನು ಅಂದರೆ ಅವರ ಕಲ್ಪನೆಗಳ ಫಲವನ್ನೇ ಬರಮಾಡುತ್ತೇನೆ. ಅವರು ನನ್ನ ವಾಕ್ಯಗಳನ್ನು ಆಲೈಸದೆ ಹೋದರು, ನನ್ನ ನ್ಯಾಯಪ್ರಮಾಣವನ್ನು ತಿರಸ್ಕರಿಸಿ ದರು.
Cross references
- Jeremiah 25:4 ಯೆರೆಮೀಯ 25:4ಇದಲ್ಲದೆ ಕರ್ತನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ಕಳುಹಿಸಿದ್ದಾನೆ, ಬೆಳಿಗ್ಗೆ ಎದ್ದು ಕಳುಹಿಸಿದ್ದಾನೆ; ಆದರೆ ನೀವು ಕೇಳಲಿಲ್ಲ, ಕೇಳು ವದಕ್ಕೆ ನಿಮ್ಮ ಕಿವಿಗೊಡಲಿಲ್ಲ.
- Isaiah 58:1 ಯೆಶಾಯ 58:1ಗಟ್ಟಿಯಾಗಿ ಕೂಗು, ಹಿಂತೆಗೆಯಬೇಡ. ತುತೂರಿಯಂತೆ ನಿನ್ನ ಸ್ವರವನ್ನೆತ್ತು, ನನ್ನ ಜನರಿಗೆ ಅವರ ದ್ರೋಹವನ್ನೂ ಯಾಕೋಬನ ಮನೆಯವರಿಗೆ ಅವರ ಪಾಪವನ್ನೂ ತೋರಿಸು.
- Zechariah 7:11 ಜೆಕರ್ಯ 7:11ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು.
- Isaiah 21:11 ಯೆಶಾಯ 21:11ದೂಮದ ವಿಷಯವಾದ ದೈವೋಕ್ತಿ, ಆತನು ಸೇಯಾರಿನಿಂದ ನನಗೆ ಕರೆದನು. ಹೇಗಂದರೆ, ಕಾವ ಲುಗಾರನೇ, ಈಗ ರಾತ್ರಿ ಎಷ್ಟು ಕಳೆಯಿತು? ಕಾವಲು ಗಾರನೇ ರಾತ್ರಿ ಎಷ್ಟು ಕಳೆಯಿತು?
- Habakkuk 2:1 ಹಬಕ್ಕೂಕ 2:1ನನ್ನ ಕಾವಲಲ್ಲಿ ನಿಂತು ಗೋಪುರದ ಮೇಲೆ ನೆಲೆಯಾಗಿದ್ದು ಆತನು ನನಗೆ ಏನು ಹೇಳುವನೋ, ನನ್ನ ತರ್ಕದ ವಿಷಯ ಏನು ಉತ್ತರ ಕೊಡಬೇಕೋ ನೋಡುವದಕ್ಕೆ ಕಾದುಕೊಂಡಿರುವೆನು.
- Isaiah 56:10 ಯೆಶಾಯ 56:10ಅವನ ಕಾವಲುಗಾರರು ಕುರುಡರು, ಅವರೆಲ್ಲರೂ ತಿಳುವಳಿಕೆ ಯಿಲ್ಲದವರು; ಅವರೆಲ್ಲರೂ ಮೂಕ ನಾಯಿಗಳು; ಅವು ಬೊಗಳಲಾರವು, ನಿದ್ರಿಸುತ್ತವೆ, ಬಿದ್ದುಕೊಂಡಿ ರುತ್ತವೆ. ತೂಕಡಿಕೆಯನ್ನು ಪ್ರೀತಿಸುತ್ತವೆ.
- Amos 3:6–8 ಆಮೋಸ 3:6–8ಪಟ್ಟಣದಲ್ಲಿ ಕೊಂಬನ್ನು ಊದಿದರೆ ಜನರು ಹೆದರುವದಿಲ್ಲವೇ? ಪಟ್ಟಣದಲ್ಲಿ ಕೇಡು ಇರು ವದಾದರೆ ಅದು ಕರ್ತನಿಂದ ಅಲ್ಲವೇ? ನಿಶ್ಚಯ ವಾಗಿ ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ಮರ್ಮ ವನ್ನು ತಿಳಿಸದೆ ಕರ್ತನಾದ ದೇವರು ಏನನ್ನೂ ಮಾಡು ವದಿಲ್ಲ. ಸಿಂಹವು ಗರ್ಜಿಸಿದರೆ ಭಯಪಡದೆ ಇರುವ ವರು ಯಾರು? ಕರ್ತನಾದ ದೇವರು ಮಾತನಾಡಿದರೆ ಅದನ್ನು ಪ್ರವಾದಿಸದೆ ಇರುವವರು ಯಾರು?
- Acts 20:27–31 ಅಪೊಸ್ತಲರ ಕೃತ್ಯಗಳು 20:27–31ಯಾಕಂದರೆ ದೇವರ ಸಂಕಲ್ಪ ವನ್ನೆಲ್ಲಾ ನಿಮಗೆ ತಿಳಿಸುವದರಲ್ಲಿ ನಾನು ಹಿಂದೆಗೆಯ ಲಿಲ್ಲ. ದೇವರು ತನ್ನ ಸ್ವರಕ್ತದಿಂದ ಕೊಂಡುಕೊಂಡ ಸಭೆಯನ್ನು ಪೋಷಿಸುವದಕ್ಕಾಗಿ ಪವಿತ್ರಾತ್ಮನು ನಿಮ್ಮನ್ನೇ ಆ ಹಿಂಡಿನಲ್ಲಿ ಅಧ್ಯಕ್ಷರನ್ನಾಗಿ ಇಟ್ಟಿರುವದರಿಂದ ನಿಮ್ಮ ವಿಷಯದಲ್ಲಿಯೂ ಎಲ್ಲಾ ಹಿಂಡಿನ ವಿಷಯದಲ್ಲಿಯೂ ಎಚ್ಚರಿಕೆಯಾಗಿರಿ. ಯಾಕಂದರೆ ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವ ವೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸು ವದಿಲ್ಲ. ಇದಲ್ಲದೆ ನಿಮ್ಮಲ್ಲಿಯೂ ಕೆಲವರು ಎದ್ದು ವಕ್ರ ಮಾತುಗಳನ್ನಾಡಿ ಶಿಷ್ಯರನ್ನು ತಮ್ಮ ಹಿಂದೆ ಎಳಕೊಳ್ಳುವರು. ಆದಕಾರಣ ನಾನು ಕಣ್ಣೀರಿನಿಂದ ಮೂರು ವರುಷ ಹಗಲಿರುಳು ಎಡೆಬಿಡದೆ ಪ್ರತಿಯೊಬ್ಬ ನನ್ನು ಎಚ್ಚರಿಸಿದೆನೆಂದು ನೀವು ಜ್ಞಾಪಕ ಮಾಡಿಕೊಂಡು ಎಚ್ಚರವಾಗಿರಿ.
- Ezekiel 33:2–9 ಯೆಹೆಜ್ಕೇಲನು 33:2–9ಮನುಷ್ಯಪುತ್ರನೇ, ನಿನ್ನ ಜನರ ಮಕ್ಕಳೊಂದಿಗೆ ಮಾತನಾಡು ಮತ್ತು ಅವ ರಿಗೆ--ನಾನು ಒಂದು ದೇಶದ ಮೇಲೆ ಯಾವಾಗ ಕತ್ತಿಯನ್ನು ತರುವೆನೋ ಆಗ ಆ ದೇಶದ ಜನರು ತಮ್ಮ ಪ್ರಾಂತ್ಯದ ಒಬ್ಬ ಮನುಷ್ಯನನ್ನು ಆರಿಸಿ ತಮಗೆ ಕಾವಲುಗಾರನನ್ನಾಗಿ ಇಟ್ಟರೆ, ಅವನ ಕತ್ತಿಯು ದೇಶದ ಮೇಲೆ ಬರುವದನ್ನು ನೋಡಿ, ಕಹಳೆಯನ್ನೂದಿ ಜನರನ್ನು ಎಚ್ಚರಿಸಿದಾಗ, ಯಾವನು ಕಹಳೆಯ ಧ್ವನಿಯನ್ನು ಕೇಳಿ ಎಚ್ಚರವಾಗುವದಿಲ್ಲವೋ? ಆಗ ಕತ್ತಿಯು ಬಂದು ಅವನನ್ನು ತೆಗೆದುಕೊಂಡರೆ ಅವನ ರಕ್ತವು ಅವನ ತಲೆಯ ಮೇಲೆಯೇ ಇರುವದು. ಅವನು ಕಹಳೆಯ ಧ್ವನಿಯನ್ನು ಕೇಳಿ ಎಚ್ಚರಗೊಳ್ಳಲಿಲ್ಲ; ಅವನ ರಕ್ತವು ಅವನ ಮೇಲೆ ಇರುವದು. ಆದರೆ ಎಚ್ಚರಿಕೆಯಾಗುವವನು ತನ್ನ ಪ್ರಾಣವನ್ನು ಉಳಿಸಿಕೊ ಳ್ಳುವನು. ಆದರೆ ಕಾವಲುಗಾರನು ಕತ್ತಿಯನ್ನು ನೋಡಿ, ಒಂದು ವೇಳೆ ಕಹಳೆಯನ್ನು ಊದದೆ ಜನರನ್ನೂ ಎಚ್ಚರಿಸದಿದ್ದರೆ, ಆಗ ಕತ್ತಿಯು ಬಂದು ಅವರೊಳಗಿಂದ ಯಾರೊಬ್ಬನನ್ನಾದರೂ ತೆಗೆದುಕೊಂಡರೆ ಅವನು ತನ್ನ ಅಕ್ರಮದಲ್ಲಿ ತೆಗೆಯಲ್ಪಡುತ್ತಾನೆ. ಆದರೆ ನಾನು ಅವನ ರಕ್ತವನ್ನು ಕಾವಲುಗಾರನ ಕೈಯಿಂದ ವಿಚಾರಿಸುವೆನು. ಓ ಮನುಷ್ಯಪುತ್ರನೇ, ನಿನ್ನನ್ನು ನಾನು ಇಸ್ರಾಯೇಲಿನ ಮನೆತನದವರಿಗೆ ಕಾವಲುಗಾರನನ್ನಾಗಿ ಇಟ್ಟಿದ್ದೇನೆ; ಆದದರಿಂದ ನೀನು ನನ್ನ ಬಾಯಿಯ ವಾಕ್ಯವನ್ನು ಕೇಳು, ನನ್ನಿಂದ ಅವರನ್ನು ಎಚ್ಚರಿಸು. ನಾನು ದುಷ್ಟನಿಗೆ--ಓ ದುಷ್ಟ ಮನುಷ್ಯನೇ, ನೀನು ನಿಶ್ಚಯವಾಗಿ ಸಾಯುವಿ ಎಂದು ಹೇಳುವಾಗ ಒಂದು ವೇಳೆ ನೀನು ಅವನೊಂದಿಗೆ ಮಾತನಾಡದೆ ದುಷ್ಟನನ್ನು ಅವನ ಮಾರ್ಗದಿಂದ ಎಚ್ಚರಿಸದಿದ್ದರೆ ಆ ದುಷ್ಟ ಮನುಷ್ಯನು ಅವನ ಅಕ್ರಮಗಳಲ್ಲಿಯೇ ಸಾಯುವನು; ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು. ಆದಾಗ್ಯೂ ನೀನು ಒಂದು ವೇಳೆ ದುಷ್ಟನನ್ನು ಅವನ ದುಮಾರ್ಗಗಳಿಂದ ತಿರುಗಲು ಎಚ್ಚರಿಸಿದರೂ ಅವನು ತನ್ನ ದುಷ್ಟಮಾರ್ಗದಿಂದ ತಿರುಗದಿದ್ದರೆ ಅವನ ಅಕ್ರಮಗಳಲ್ಲಿಯೇ ಸಾಯುವನು; ಆದರೆ ನೀನು ನಿನ್ನ ಪ್ರಾಣವನ್ನು ತಪ್ಪಿಸಿಕೊಳ್ಳುವಿ.
- Hebrews 13:17 ಇಬ್ರಿಯರಿಗೆ 13:17ನಿಮ್ಮ ನಾಯಕರಿಗೆ ವಿಧೇಯರಾಗಿದ್ದು ಅವರಿಗೆ ಅಧೀನರಾಗಿರ್ರಿ. ಯಾಕಂದರೆ ಅವರು ಲೆಕ್ಕ ಒಪ್ಪಿಸಬೇಕಾ ದವರಾಗಿ ನಿಮ್ಮ ಆತ್ಮಗಳನ್ನು ಕಾಯುವವರಾಗಿದ್ದಾರೆ. ಅವರು ವ್ಯಸನಪಡದೆ ಸಂತೋಷದಿಂದ ಇದನ್ನು ಮಾಡುವವರಾಗಲಿ; ಅವರು ವ್ಯಸನದಿಂದಿರುವದು ನಿಮಗೆ ಪ್ರಯೋಜನಕರವಾದದ್ದಲ್ಲ.
- Ezekiel 3:17–21 ಯೆಹೆಜ್ಕೇಲನು 3:17–21ಮನುಷ್ಯಪುತ್ರನೇ, ನಾನು ನಿನ್ನನ್ನು ಇಸ್ರಾಯೇ ಲಿನ ಮನೆಯನ್ನು ಕಾಯಲು ಕಾವಲುಗಾರನನ್ನಾಗಿ ಮಾಡಿದ್ದೇನೆ. ಆದದರಿಂದ ನನ್ನ ವಾಕ್ಯವನ್ನು ನನ್ನ ಬಾಯಿಂದ ಕೇಳಿ ನನ್ನಿಂದ ಅವರಿಗೆ ಎಚ್ಚರಿಕೆ ಕೊಡು. ನಾನು ದುಷ್ಟನಿಗೆ--ನೀನು ನಿಶ್ಚಯವಾಗಿ ಸಾಯುವಿ ಯೆಂದು ಹೇಳುವಾಗ ನೀನು ಅವನನ್ನು ಎಚ್ಚರಿಸದೆ ಅವನನ್ನು ಬದುಕಿಸುವ ಹಾಗೆ ದುಷ್ಟನನ್ನು ಅವನ ದುಷ್ಟಮಾರ್ಗದ ವಿಷಯದಲ್ಲಿ ಎಚ್ಚರಿಸಿ ಮಾತನಾಡದೆ ಹೋದರೆ ಆ ದುಷ್ಟನು ತನ್ನ ಅಕ್ರಮದಲ್ಲೇ ಸಾಯು ವನು. ಆದರೆ ಅವನ ರಕ್ತವನ್ನು ನಿನ್ನ ಕೈಯಿಂದ ದುಷ್ಟತ್ವ ಕ್ಕಾಗಿ ನಾನು ವಿಚಾರಿಸುವೆನು. ಆದರೆ ನೀನು ದುಷ್ಟ ನನ್ನು ಎಚ್ಚರಿಸಿದ ಮೇಲೆ ಅವನು ತನ್ನ ದುಷ್ಟತ್ವವನ್ನೂ ದುಷ್ಟಮಾರ್ಗವನ್ನೂ ಬಿಟ್ಟು ತಿರುಗದೆ ಹೋದರೆ ಅವನು ತನ್ನ ದುಷ್ಟತ್ವದಲ್ಲಿಯೇ ಸಾಯುವನು. ಆದರೆ ನೀನು ನಿನ್ನ ಪ್ರಾಣವನ್ನು ಉಳಿಸಿಕೊಂಡಿರುವಿ. ಮತ್ತೆ ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡುವನೋ, ಆಗ ನಾನು ಅವನ ಮುಂದೆ ಅಡಚಣೆಯನ್ನು ಇಡುವೆನು, ಅವನು ಸಾಯು ವನು; ನೀನು ಅವನನ್ನು ಎಚ್ಚರಿಸದೆ ಇದ್ದದರಿಂದಲೇ ಅವನು ತನ್ನ ಪಾಪದಲ್ಲಿ ಸಾಯುವನು; ಅವನು ಮಾಡಿರುವ ಅವನ ನೀತಿಯು ಜ್ಞಾಪಕ ಮಾಡಲ್ಪಡು ವದಿಲ್ಲ; ಆದರೆ ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು; ಆದಾಗ್ಯೂ ನೀತಿವಂತನು ಪಾಪ ಮಾಡದ ಹಾಗೆ ನೀನು ನೀತಿವಂತನನ್ನು ಎಚ್ಚರಿಸುವಾಗ ಅವನು ಪಾಪಮಾಡದೆ ಎಚ್ಚರಿಕೆಯಾದದರಿಂದ ನಿಶ್ಚಯವಾಗಿ ಬದುಕುವನು; ನೀನು ನಿನ್ನ ಪ್ರಾಣವನ್ನು ಸಹ ಉಳಿಸಿಕೊಂಡಿರುವಿ.
- Hosea 8:1 ಹೋಶೇಯ 8:1ನಿನ್ನ ಬಾಯಿಗೆ ತುತೂರಿಯನ್ನು ಇಟ್ಟುಕೋ, ಅವರು ನನ್ನ ಒಡಂಬಡಿಕೆಯನ್ನು ವಿಾರಿ ನನ್ನ ನ್ಯಾಯಪ್ರಮಾಣಕ್ಕೆ ವಿರುದ್ಧವಾಗಿ ಅಪರಾಧ ಮಾಡಿದ್ದರಿಂದ ಅವನು ಹದ್ದಿನ ಹಾಗೆ ಕರ್ತನ ಆಲಯಕ್ಕೆ ವಿರುದ್ಧವಾಗಿ ಬರುತ್ತಾನೆ.