Jeremiah · chapter 6 · verse 20
Jeremiah 6:20 in Kannada
ಶೇಬದಿಂದ ಸಾಂಬ್ರಾಣಿಯೂ ದೂರ ದೇಶದಿಂದ ಒಳ್ಳೇ ಸುಗಂಧವೂ ನನಗೆ ಬರುವದು ಯಾತಕ್ಕೆ? ನಿಮ್ಮ ದಹನಬಲಿಗಳು ಮೆಚ್ಚಿಕೆಯಾಗಲಿಲ್ಲ; ನಿಮ್ಮ ಬಲಿಗಳು ನನಗೆ ರುಚಿ ಇಲ್ಲ.
Shebadinda saambraaniyoo doora deshadinda olle sugandhavoo nanage baruvadu yaatakke? Nimma dahanabaligalu mechchikeyaagalilla; nimma baligalu nanage ruchi illa.
Jeremiah 6:20 in English
- King James Version (KJV)
- To what purpose cometh there to me incense from Sheba, and the sweet cane from a far country? your burnt offerings [are] not acceptable, nor your sacrifices sweet unto me.
- World English Bible (WEB)
- To what purpose does frankincense from Sheba come to me, and the sweet cane from a far country? Your burnt offerings are not acceptable, and your sacrifices are not pleasing to me.”
- American Standard Version (ASV)
- To what purpose cometh there to me frankincense from Sheba, and the sweet cane from a far country? your burnt-offerings are not acceptable, nor your sacrifices pleasing unto me.
- Bible in Basic English (BBE)
- To what purpose does sweet perfume come to me from Sheba, and spices from a far country? your burned offerings give me no pleasure, your offerings of beasts are not pleasing to me.
- Darby Translation (DBY)
- To what purpose should there come to me incense from Sheba, and the sweet cane from a far country? Your burnt-offerings are not acceptable, nor are your sacrifices pleasing unto me.
- Webster's Bible (WBS)
- To what purpose cometh there to me incense from Sheba, and the sweet cane from a distant country? your burnt-offerings [are] not acceptable, nor your sacrifices sweet to me.
- Young's Literal Translation (YLT)
- Why [is] this to Me? frankincense from Sheba cometh, And the sweet cane from a land afar off, Your burnt-offerings [are] not for acceptance, And your sacrifices have not been sweet to Me.
Read in context
- 18ಆದದರಿಂದ ಜನಾಂಗಗಳೇ, ಕೇಳಿರಿ; ಸಭೆಯೇ, ಅವರಲ್ಲಿ ಇರುವಂಥದ್ದನ್ನು ತಿಳುಕೊಳ್ಳಿರಿ.
- 19ಭೂಮಿಯೇ, ಕೇಳು, ಇಗೋ, ನಾನು ಈ ಜನರ ಮೇಲೆ ಕೇಡನ್ನು ಅಂದರೆ ಅವರ ಕಲ್ಪನೆಗಳ ಫಲವನ್ನೇ ಬರಮಾಡುತ್ತೇನೆ. ಅವರು ನನ್ನ ವಾಕ್ಯಗಳನ್ನು ಆಲೈಸದೆ ಹೋದರು, ನನ್ನ ನ್ಯಾಯಪ್ರಮಾಣವನ್ನು ತಿರಸ್ಕರಿಸಿ ದರು.
- 20ಶೇಬದಿಂದ ಸಾಂಬ್ರಾಣಿಯೂ ದೂರ ದೇಶದಿಂದ ಒಳ್ಳೇ ಸುಗಂಧವೂ ನನಗೆ ಬರುವದು ಯಾತಕ್ಕೆ? ನಿಮ್ಮ ದಹನಬಲಿಗಳು ಮೆಚ್ಚಿಕೆಯಾಗಲಿಲ್ಲ; ನಿಮ್ಮ ಬಲಿಗಳು ನನಗೆ ರುಚಿ ಇಲ್ಲ.
- 21ಆದದರಿಂದ ಕರ್ತನು ಹೀಗೆ ಹೇಳುತ್ತಾನೆ. ಇಗೋ, ನಾನು ಈ ಜನರ ಮುಂದೆ ಎಡೆತಡೆಗಳನ್ನು ಇಡುತ್ತೇನೆ; ತಂದೆ ಗಳೂ ಮಕ್ಕಳೂ ಕೂಡ ಅವುಗಳ ಮೇಲೆ ಬೀಳುವರು; ನೆರೆಯವನೂ ಅವನ ಸ್ನೇಹಿತನೂ ನಾಶವಾಗುವನು.
- 22ಕರ್ತನು ಹೀಗೆ ಹೇಳುತ್ತಾನೆ--ಇಗೋ, ಒಂದು ಜನವು ಉತ್ತರ ದೇಶದಿಂದ ಬರುತ್ತದೆ; ದೊಡ್ಡ ಜನಾಂಗವು ಭೂಮಿಯ ಮೇರೆಗಳಿಂದ ಎದ್ದು ಬರು ತ್ತದೆ.
Cross references
- Isaiah 1:11 ಯೆಶಾಯ 1:11ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ.
- Amos 5:21–22 ಆಮೋಸ 5:21–22ನಿಮ್ಮ ನಿಮ್ಮ ಪರಿಶುದ್ಧ ಸಭೆಗಳನ್ನು ನಾನು ಮೂಸುವದಿಲ್ಲ. ನೀವು ನನಗೆ ದಹನಬಲಿಗಳನ್ನೂ ಆಹಾರ ಅರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವುಗಳನ್ನು ಅಂಗೀ ಕರಿಸುವದಿಲ್ಲ, ಇಲ್ಲವೆ ನಿಮ್ಮ ಕೊಬ್ಬಿದ ಪ್ರಾಣಿಗಳ ಸಮಾಧಾನದ ಬಲಿಗಳನ್ನು ಲಕ್ಷಿಸುವದಿಲ್ಲ.
- Micah 6:6–8 ಮೀಕ 6:6–8ನಾನು ಯಾವದರೊಂದಿಗೆ ಕರ್ತನ ಮುಂದೆ ಬರಲಿ? ಯಾವದರೊಂದಿಗೆ ಉನ್ನತವಾದ ದೇವರ ಮುಂದೆ ಅಡ್ಡಬೀಳಲಿ? ದಹನಬಲಿಗಳ ಸಂಗಡವೂ ಒಂದು ವರುಷದ ಕರುಗಳ ಸಂಗಡವೂ ಆತನ ಮುಂದೆ ಬರಲೋ? ಸಾವಿರ ಟಗರುಗಳಿಗಾದರೂ ಎಣ್ಣೆಯ ಹತ್ತು ಸಾವಿರ ನದಿಗಳಿಗಾದರೂ ಕರ್ತನು ಮೆಚ್ಚು ವನೋ? ನನ್ನ ದ್ರೋಹಕ್ಕಾಗಿ ನನ್ನ ಚೊಚ್ಚಲ ಮಗ ನನ್ನೂ ನನ್ನ ಆತ್ಮದ ಪಾಪಕ್ಕಾಗಿ ನನ್ನ ಗರ್ಭದ ಫಲ ವನ್ನೂ ಕೊಡಲೋ? ಮನುಷ್ಯನೇ, ಉತ್ತಮವಾದ ದ್ದನ್ನು ನಿನಗೆ ಆತನು ತಿಳಿಸಿದ್ದಾನೆ; ಹೌದು, ನ್ಯಾಯ ವನ್ನು ಮಾಡುವದೂ ಕರುಣೆಯನ್ನು ಪ್ರೀತಿಮಾಡು ವದೂ ನಿನ್ನ ದೇವರ ಸಂಗಡ ವಿನಯವಾಗಿ ನಡ ಕೊಳ್ಳುವದೂ ಇದನ್ನೇ ಹೊರತು ಕರ್ತನು ಇನ್ನೇನು ನಿನ್ನಿಂದ ಕೇಳುತ್ತಾನೆ.
- Psalm 40:6 ಕೀರ್ತನೆಗಳು 40:6ಯಜ್ಞದಲ್ಲಿಯೂ ಅರ್ಪಣೆಯಲ್ಲಿಯೂ ನೀನು ಇಷ್ಟ ಪಡಲಿಲ್ಲ; ದಹನಬಲಿಯನ್ನೂ ಪಾಪದಬಲಿಯನ್ನೂ ನೀನು ಕೇಳಲಿಲ್ಲ. ನನ್ನ ಕಿವಿಗಳನ್ನು ನೀನು ತೆರೆದಿ;
- Isaiah 60:6 ಯೆಶಾಯ 60:6ಒಂಟೆಗಳ ಸಮೂಹವು ನಿನ್ನನ್ನು ಮುಚ್ಚುವದು; ಮಿದ್ಯಾನಿನ, ಏಫದ ವೇಗವುಳ್ಳ ಒಂಟೆಗಳು ಅವೆಲ್ಲಾ ಶೇಬದಿಂದಲೂ ಬರುವವು; ಅವು ಬಂಗಾರವನ್ನೂ ಧೂಪವನ್ನೂ ತರುವವು; ಅವು ಕರ್ತನ ಸ್ತೋತ್ರ ಗಳನ್ನು ಸಾರುವವು.
- Exodus 30:23 ವಿಮೋಚನಕಾಂಡ 30:23ಉತ್ತಮ ವಾದ ತೈಲಗಳನ್ನು ಅಂದರೆ ಐದುನೂರು ಶೆಕೆಲ್ ಸ್ವಚ್ಚವಾದ ರಕ್ತ ಬೋಳವು, ಅದರ ಅರ್ಧದಷ್ಟು ಅಂದರೆ ಇನ್ನೂರೈವತ್ತು ಶೆಕೆಲಿನ ಸುಗಂಧವಾದ ಲವಂಗ ಪಟ್ಟೆ ಯನ್ನು ಮತ್ತು ಇನ್ನೂರೈವತ್ತು ಶೆಕೆಲ್ ಸುಗಂಧವಾದ ಬಜೆಯನ್ನು,
- Jeremiah 7:21–23 ಯೆರೆಮೀಯ 7:21–23ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ದಹನಬಲಿಗಳನ್ನು ನಿಮ್ಮ ಬಲಿಗಳ ಸಂಗಡ ಕೂಡಿಸಿ ಮಾಂಸವನ್ನು ತಿನ್ನಿರಿ. ನಾನು ನಿಮ್ಮ ಪಿತೃಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ ದಿನದಲ್ಲಿ ದಹನ ಬಲಿಗಳ ಮತ್ತು ಬಲಿಗಳ ಕುರಿತು ಅವರ ಸಂಗಡ ಮಾತಾಡಲಿಲ್ಲ, ಇಲ್ಲವೆ ಅವರಿಗೆ ಆಜ್ಞಾಪಿಸಲಿಲ್ಲ. ಆದರೆ ನಾನು ಅವರಿಗೆ--ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೇದಾಗುವ ಹಾಗೆ ನಾನು ನಿಮಗೆ ಆಜ್ಞಾ ಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ ಎಂದು ಆಜ್ಞಾ ಪಿಸಿ ಹೇಳಿದೆನು.
- Isaiah 43:23–24 ಯೆಶಾಯ 43:23–24ನಿನ್ನ ದಹನಬಲಿಯ ಎಳೇ ಕರುಗಳನ್ನು ನನಗೆ ತರಲಿಲ್ಲ ಇಲ್ಲವೆ ನಿನ್ನ ಯಜ್ಞ ಗಳಿಂದ ನನ್ನನ್ನು ಸನ್ಮಾನಿಸಲಿಲ್ಲ; ನೀನು ಕಾಣಿಕೆಯನ್ನು ಅರ್ಪಿಸದೆ ಇದ್ದದ್ದಕ್ಕೆ ನಾನು ಕಾರಣವಲ್ಲ, ಇಲ್ಲವೆ ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ. ನೀನು ನನಗೋಸ್ಕರ ಹಣದಿಂದ ಗಂಧಕಾಷ್ಟವನ್ನು ಕೊಂಡು ಕೊಳ್ಳಲಿಲ್ಲ ಇಲ್ಲವೆ ನಿನ್ನ ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ತೊಂದರೆಗೊಳಿಸಿದ್ದೀ, ಅಕ್ರಮಗಳಿಂದ ನನ್ನನು ಬೇಸರಗೊಳಿಸಿದ್ದೀ.
- Isaiah 66:3 ಯೆಶಾಯ 66:3ಎತ್ತನ್ನು ಕೊಂದುಹಾಕುವವನು ಮನುಷ್ಯನನ್ನು ಹತ್ಯೆ ಮಾಡು ವವನ ಹಾಗಿದ್ದಾನೆ; ಕುರಿಮರಿಯನ್ನು ಬಲಿಯಾಗಿ ಕೊಡುವವನು ನಾಯಿಯ ಕುತ್ತಿಗೆಯನ್ನು ಕಡಿಯು ವವನ ಹಾಗಿದ್ದಾನೆ; ಕಾಣಿಕೆಯನ್ನು ಅರ್ಪಿಸುವವನು ಹಂದಿಯ ರಕ್ತವನ್ನು ಅರ್ಪಿಸುವವನ ಹಾಗಿದ್ದಾನೆ. ಧೂಪವನ್ನು ಸುಡುವವನು ವಿಗ್ರಹವನ್ನು ಆಶೀರ್ವದಿ ಸುವವನ ಹಾಗಿದ್ದಾನೆ. ಹೌದು, ಅವರು ಸ್ವಂತ ಮಾರ್ಗಗಳನ್ನು ಆದುಕೊಂಡಿದ್ದಾರೆ; ಅವರ ಪ್ರಾಣವು ಅವರ ಅಸಹ್ಯವಾದವುಗಳಲ್ಲಿ ಹರ್ಷಿಸುತ್ತವೆ.
- Psalm 50:7–13 ಕೀರ್ತನೆಗಳು 50:7–13ಓ ನನ್ನ ಜನರೇ, ಕೇಳಿರಿ, ನಾನು ನುಡಿಯುವೆನು; ಓ ಇಸ್ರಾಯೇಲೇ, ನಿನಗೆ ವಿರೋಧವಾಗಿ ನಾನು ಸಾಕ್ಷಿಕೊಡುವೆನು; ನಾನು ದೇವರು, ಹೌದು ನಿನ್ನ ದೇವರು ನಾನೇ. ನಿನ್ನ ಬಲಿಗಳಿಗೋಸ್ಕರ ಇಲ್ಲವೆ ನಿನ್ನ ದಹನಬಲಿಗೋಸ್ಕರ ನಾನು ನಿನ್ನನ್ನು ಗದರಿಸುವ ದಿಲ್ಲ; ಅವು ಯಾವಾಗಲೂ ನನ್ನ ಮುಂದೆ ಇವೆ. ನಿನ್ನ ಮನೆಯಿಂದ ಹೋರಿಯನ್ನೂ ಇಲ್ಲವೆ ನಿನ್ನ ದೊಡ್ಡಿಗಳಿಂದ ಹೋತಗಳನ್ನೂ ತೆಗೆದುಕೊಳ್ಳೆನು. ಅಡವಿಯ ಮೃಗಗಳೆಲ್ಲವೂ ಬೆಟ್ಟಗಳಲ್ಲಿರುವ ಸಾವಿರ ಪಶುಗಳೂ ನನ್ನವೇ. ಬೆಟ್ಟಗಳ ಪಕ್ಷಿಗಳನ್ನೆಲ್ಲಾ ನಾನು ಬಲ್ಲೆನು; ಕಾಡುಮೃಗಗಳು ನನ್ನವುಗಳಾಗಿವೆ. ನಾನು ಹಸಿದಿದ್ದರೆ ನಿನಗೆ ಹೇಳೆನು; ಭೂಲೋಕವೂ ಅದರ ಪರಿಪೂರ್ಣತೆಯೂ ನನ್ನವೇ. ಹೋರಿಗಳ ಮಾಂಸವನ್ನು ತಿನ್ನುವೆನೋ ಇಲ್ಲವೆ ಹೋತಗಳ ರಕ್ತವನ್ನು ಕುಡಿಯುವೆನೋ?
- Ezekiel 20:39 ಯೆಹೆಜ್ಕೇಲನು 20:39ನಿಮ್ಮ ವಿಷಯ ವಾಗಿ ಓ ಇಸ್ರಾಯೇಲಿನ ಮನೆತನದವರೇ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ನನಗೆ ಕಿವಿಗೊಡದಿದ್ದರೆ ಹೋಗಿ ಇನ್ನು ಮೇಲೆಯೂ ನಿಮ್ಮ ನಿಮ್ಮ ವಿಗ್ರಹಗಳನ್ನು ಸೇವಿಸಿರಿ; ಆದರೆ ನಿಮ್ಮ ದಾನಗ ಳಿಂದಲೂ ವಿಗ್ರಹಗಳಿಂದಲೂ ಇನ್ನು ಮೇಲೆ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಪಡಿಸಬೇಡಿರಿ.
- Ezekiel 27:22 ಯೆಹೆಜ್ಕೇಲನು 27:22ಶೆಬ ದವರು, ರಗ್ಮದವರು ನಿನ್ನ ಕಡೆಯ ವರ್ತಕರಾಗಿ ಶ್ರೇಷ್ಟವಾದ ಎಲ್ಲಾ ಸುಗಂಧ ದ್ರವ್ಯದಿಂದಲೂ ಬೆಲೆ ಯುಳ್ಳ ಎಲ್ಲಾ ರತ್ನಗಳಿಂದಲೂ ಚಿನ್ನದಿಂದಲೂ ನಿನ್ನ ಸಂತೆಗಳಲ್ಲಿ ವ್ಯಾಪಾರ ನಡೆಸಿದರು.