Jeremiah · chapter 6 · verse 21
Jeremiah 6:21 in Kannada
ಆದದರಿಂದ ಕರ್ತನು ಹೀಗೆ ಹೇಳುತ್ತಾನೆ. ಇಗೋ, ನಾನು ಈ ಜನರ ಮುಂದೆ ಎಡೆತಡೆಗಳನ್ನು ಇಡುತ್ತೇನೆ; ತಂದೆ ಗಳೂ ಮಕ್ಕಳೂ ಕೂಡ ಅವುಗಳ ಮೇಲೆ ಬೀಳುವರು; ನೆರೆಯವನೂ ಅವನ ಸ್ನೇಹಿತನೂ ನಾಶವಾಗುವನು.
Aadadarinda kartanu heege heluttaane. Igo, naanu ee janara munde edetadegalannu iduttene; tande galoo makkaloo kooda avugala mele beeluvaru; nereyavanoo avana snehitanoo naashavaaguvanu.
Jeremiah 6:21 in English
- King James Version (KJV)
- Therefore thus saith the LORD, Behold, I will lay stumblingblocks before this people, and the fathers and the sons together shall fall upon them; the neighbour and his friend shall perish.
- World English Bible (WEB)
- Therefore the LORD says, “Behold, I will lay stumbling blocks before this people. The fathers and the sons together will stumble against them. The neighbor and his friend will perish.”
- American Standard Version (ASV)
- Therefore thus saith Jehovah, Behold, I will lay stumbling-blocks before this people; and the fathers and the sons together shall stumble against them; the neighbor and his friend shall perish.
- Bible in Basic English (BBE)
- For this reason the Lord has said, See, I will put stones in the way of this people: and the fathers and the sons together will go falling over them; the neighbour and his friend will come to destruction.
- Darby Translation (DBY)
- Therefore thus saith Jehovah: Behold, I will lay stumbling-blocks before this people, and the fathers and the sons together shall fall over them; the neighbour and his friend shall perish.
- Webster's Bible (WBS)
- Therefore thus saith the LORD, Behold, I will lay stumbling-blocks before this people, and the fathers and the sons together shall fall upon them; the neighbor and his friend shall perish.
- Young's Literal Translation (YLT)
- Therefore thus said Jehovah: Lo, I do give to this people stumbling blocks, And stumbled against them have fathers and sons together, The neighbour and his friend do perish.
Read in context
- 19ಭೂಮಿಯೇ, ಕೇಳು, ಇಗೋ, ನಾನು ಈ ಜನರ ಮೇಲೆ ಕೇಡನ್ನು ಅಂದರೆ ಅವರ ಕಲ್ಪನೆಗಳ ಫಲವನ್ನೇ ಬರಮಾಡುತ್ತೇನೆ. ಅವರು ನನ್ನ ವಾಕ್ಯಗಳನ್ನು ಆಲೈಸದೆ ಹೋದರು, ನನ್ನ ನ್ಯಾಯಪ್ರಮಾಣವನ್ನು ತಿರಸ್ಕರಿಸಿ ದರು.
- 20ಶೇಬದಿಂದ ಸಾಂಬ್ರಾಣಿಯೂ ದೂರ ದೇಶದಿಂದ ಒಳ್ಳೇ ಸುಗಂಧವೂ ನನಗೆ ಬರುವದು ಯಾತಕ್ಕೆ? ನಿಮ್ಮ ದಹನಬಲಿಗಳು ಮೆಚ್ಚಿಕೆಯಾಗಲಿಲ್ಲ; ನಿಮ್ಮ ಬಲಿಗಳು ನನಗೆ ರುಚಿ ಇಲ್ಲ.
- 21ಆದದರಿಂದ ಕರ್ತನು ಹೀಗೆ ಹೇಳುತ್ತಾನೆ. ಇಗೋ, ನಾನು ಈ ಜನರ ಮುಂದೆ ಎಡೆತಡೆಗಳನ್ನು ಇಡುತ್ತೇನೆ; ತಂದೆ ಗಳೂ ಮಕ್ಕಳೂ ಕೂಡ ಅವುಗಳ ಮೇಲೆ ಬೀಳುವರು; ನೆರೆಯವನೂ ಅವನ ಸ್ನೇಹಿತನೂ ನಾಶವಾಗುವನು.
- 22ಕರ್ತನು ಹೀಗೆ ಹೇಳುತ್ತಾನೆ--ಇಗೋ, ಒಂದು ಜನವು ಉತ್ತರ ದೇಶದಿಂದ ಬರುತ್ತದೆ; ದೊಡ್ಡ ಜನಾಂಗವು ಭೂಮಿಯ ಮೇರೆಗಳಿಂದ ಎದ್ದು ಬರು ತ್ತದೆ.
- 23ಅವರು ಬಿಲ್ಲನ್ನೂ ಬಲ್ಲೆಯನ್ನೂ ಹಿಡಿದ ಕ್ರೂರಿಗಳಾಗಿದ್ದಾರೆ, ಕನಿಕರ ತೋರಿಸುವದಿಲ್ಲ; ಅವರ ಶಬ್ದವು ಸಮುದ್ರದ ಹಾಗೆ ಘೋಷಿಸುತ್ತದೆ; ಕುದುರೆ ಗಳ ಮೇಲೆ ಸವಾರಿ ಮಾಡುತ್ತಾರೆ; ಚೀಯೋನಿನ ಕುಮಾರಿಯೇ, ನಿನಗೆ ವಿರೋಧವಾಗಿ ಯುದ್ದ ಮಾಡುವ ಮನುಷ್ಯರಂತೆ ಸಿದ್ಧಮಾಡಿಕೊಂಡಿದ್ದಾರೆ;
Cross references
- Isaiah 8:14 ಯೆಶಾಯ 8:14ಆತನೇ ಪರಿಶುದ್ಧ ಸ್ಥಾನವಾಗಿರುವನು; ಆದರೆ ಇಸ್ರಾಯೇಲಿನ ಎರಡು ಮನೆಗಳಿಗೆ ಎಡವುವ ಕಲ್ಲು, ಮುಗ್ಗರಿಸುವ ಬಂಡೆಯು ಮತ್ತು ಯೆರೂ ಸಲೇಮಿನ ನಿವಾಸಿಗಳಿಗೆ ಬಲೆಯೂ ಬೋನೂ ಆಗಿರುವನು.
- Ezekiel 3:20 ಯೆಹೆಜ್ಕೇಲನು 3:20ಮತ್ತೆ ಯಾವಾಗ ನೀತಿವಂತನು ತನ್ನ ನೀತಿಯನ್ನು ಬಿಟ್ಟು ಅನ್ಯಾಯ ಮಾಡುವನೋ, ಆಗ ನಾನು ಅವನ ಮುಂದೆ ಅಡಚಣೆಯನ್ನು ಇಡುವೆನು, ಅವನು ಸಾಯು ವನು; ನೀನು ಅವನನ್ನು ಎಚ್ಚರಿಸದೆ ಇದ್ದದರಿಂದಲೇ ಅವನು ತನ್ನ ಪಾಪದಲ್ಲಿ ಸಾಯುವನು; ಅವನು ಮಾಡಿರುವ ಅವನ ನೀತಿಯು ಜ್ಞಾಪಕ ಮಾಡಲ್ಪಡು ವದಿಲ್ಲ; ಆದರೆ ಅವನ ರಕ್ತವನ್ನು ನಾನು ನಿನ್ನ ಕೈಯಿಂದ ವಿಚಾರಿಸುವೆನು;
- Jeremiah 13:16 ಯೆರೆಮೀಯ 13:16ಆತನು ಕತ್ತಲೆಯನ್ನು ತರುವದಕ್ಕಿಂತ ಮುಂಚೆಯೂ ನಿಮ್ಮ ಕಾಲುಗಳು ಅಂಧಕಾರದ ಪರ್ವತಗಳ ಮೇಲೆ ಎಡವುವದಕ್ಕಿಂತ ಮುಂಚೆಯೂ ನೀವು ಬೆಳಕಿಗೆ ಕಾದುಕೊಳ್ಳುತ್ತಿರುವಾಗ ಆತನು ಅದನ್ನು ಮರಣದ ನೆರಳಾಗಿ ಮಾಡಿ ಕಾರ್ಗ ತ್ತಲಿಗೆ ಬದಲಾಯಿಸುವದಕ್ಕಿಂತ ಮುಂಚೆಯೇ ನಿಮ್ಮ ದೇವರಾದ ಕರ್ತನನ್ನು ಮಹಿಮೆಪಡಿಸಿರಿ.
- Isaiah 9:14–17 ಯೆಶಾಯ 9:14–17ಆದದರಿಂದ ಕರ್ತನು ಇಸ್ರಾಯೇಲಿನಿಂದ ತಲೆಬಾಲಗಳನ್ನೂ ಕೊಂಬೆ ರೆಂಬೆಗಳನ್ನೂ ಒಂದು ದಿನದಲ್ಲಿ ಕತ್ತರಿಸಿ ಹಾಕುವನು. ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು; ಸುಳ್ಳುಬೋಧಿಸುವ ಪ್ರವಾ ದಿಯು ಬಾಲವಾಗಿರುವನು. ಈ ಜನರನ್ನು ನಡಿಸು ವವರು ದಾರಿತಪ್ಪಿಸುವವರಾಗಿದ್ದಾರೆ; ಅವರಿಂದ ನಡಿ ಸಲ್ಪಟ್ಟವರು ನಾಶವಾಗಿದ್ದಾರೆ. ಹೀಗಿರಲು ಕರ್ತನು ಅವರ ಯೌವನಸ್ಥರಲ್ಲಿ ಆನಂದಿಸುವದಿಲ್ಲ; ಅವರ ಅನಾಥರನ್ನೂ ವಿಧವೆಯರನ್ನೂ ಕರುಣಿಸುವದಿಲ್ಲ; ಪ್ರತಿಯೊಬ್ಬನು ಕಪಟಿಯೂ ಕೇಡು ಮಾಡುವವನೂ ಆಗಿದ್ದಾನೆ. ಎಲ್ಲರ ಬಾಯಿಯೂ ಮೂರ್ಖತನದ ಮಾತುಗಳನ್ನು ಆಡುತ್ತದೆ. ಆದದರಿಂದ ಇಷ್ಟಾದರೂ ಆತನ ಕೋಪವು ತೀರದೆ ಆತನ ಕೈ ಇನ್ನೂ ಚಾಚಿಯೇ ಇದೆ.
- Jeremiah 18:21 ಯೆರೆಮೀಯ 18:21ಆದದರಿಂದ ಅವರ ಮಕ್ಕಳನ್ನು ಕ್ಷಾಮಕ್ಕೆ ಕೊಡು; ಕತ್ತಿಯ ಬಲದಿಂದ ಅವರ ರಕ್ತವನ್ನು ಸುರಿದುಬಿಡು; ಅವರ ಹೆಂಡತಿಯರು ಮಕ್ಕಳಿಲ್ಲದೆ ವಿಧವೆಯರಾಗಲಿ; ಅವರ ಗಂಡಸರು ಕೊಲ್ಲಲ್ಪಟ್ಟು ಸಾಯಲಿ; ಅವರ ಯೌವನಸ್ಥರು ಯುದ್ಧ ದಲ್ಲಿ ಕತ್ತಿಯಿಂದ ವಧಿಸಲ್ಪಡಲಿ.
- 1 Peter 2:8 1 ಪೇತ್ರನು 2:8ಅದು ಎಡವುವ ಕಲ್ಲೂ ಮುಗ್ಗರಿಸುವ ಬಂಡೆಯೂ ಆಗಿದೆ; ಅವರು ವಾಕ್ಯಕ್ಕೆ ಅವಿಧೇಯರಾದದರಿಂದ ಆ ಕಲ್ಲನ್ನು ಎಡವಿ ಬೀಳುತ್ತಾರೆ. ಅದಕ್ಕಾಗಿಯೇ ಅವರು ನೇಮಕವಾದರು.
- Jeremiah 19:7–9 ಯೆರೆಮೀಯ 19:7–9ನಾನು ಈ ಸ್ಥಳದಲ್ಲಿ ಯೆಹೂದದ, ಯೆರೂಸಲೇಮಿನ ಆಲೋಚನೆಯನ್ನು ಶೂನ್ಯ ಮಾಡುವೆನು; ಅವರ ಶತ್ರುಗಳ ಮುಂದೆಯೂ ಅವರ ಪ್ರಾಣವನ್ನು ಹುಡುಕು ವವರ ಕೈಯಿಂದಲೂ ಅವರನ್ನು ಕತ್ತಿಯಿಂದ ಬೀಳು ವಂತೆ ಮಾಡುವೆನು; ಅವರ ಹೆಣಗಳನ್ನು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು. ಈ ಪಟ್ಟಣಗಳನ್ನು ಹಾಳಾಗಿಯೂ ತಿರಸ್ಕರಿಸಲ್ಪಡುವಂತೆಯೂ ಮಾಡುವೆನು; ಅದನ್ನು ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಹೊಂದಿ ಸಿಳ್ಳು ಹಾಕುವರು. ಅವರು ತಮ್ಮ ಕುಮಾರರ ಕುಮಾರ್ತೆಯರ ಮಾಂಸವನ್ನೂ ತಿನ್ನುವಂತೆ ಮಾಡುವೆನು; ಮುತ್ತಿಗೆಯಲ್ಲಿ ಸಹ ಅವರ ಶತ್ರುಗಳೂ ಅವರ ಪ್ರಾಣವನ್ನು ಹುಡುಕುವವರೂ ಅವರಿಗೆ ಮಾಡುವ ಇಕ್ಕಟ್ಟಿನಲ್ಲಿಯೂ ಅವರು ತಮ್ಮ ತಮ್ಮ ಸ್ನೇಹಿತರ ಮಾಂಸವನ್ನು ತಿನ್ನುವರು.
- Jeremiah 9:21–22 ಯೆರೆಮೀಯ 9:21–22ಮರಣವು ನಮ್ಮ ಕಿಟಕಿಗಳೊಳಗೆ ಏರಿ ಬಂತು, ನಮ್ಮ ಅರಮನೆ ಗಳಲ್ಲಿ ಸೇರಿತು; ಹೊರಗಡೆ ಮಕ್ಕಳನ್ನೂ ಬೀದಿಗಳಲ್ಲಿ ಯೌವ್ವನಸ್ಥರನ್ನೂ ಕಡಿದು ಹಾಕುತ್ತದೆ. ಕರ್ತನು ಹೀಗೆ ಅನ್ನುತ್ತಾನೆ--ಮಾತನಾಡು, ಏನಂದರೆ ಮನು ಷ್ಯರ ಹೆಣಗಳು ಗೊಬ್ಬರದಂತೆ ಬಯಲಿನಲ್ಲಿ ಬೀಳು ವವು; ಧಾನ್ಯ ಕೊಯ್ಯುವವನು ಉಳಿಸಿದ ಕೈ ಹಿಡಿಯಂತೆ ಕೂಡಿಸುವವನಿಲ್ಲದೆ ಬೀಳುವವು.
- Isaiah 24:2–3 ಯೆಶಾಯ 24:2–3ಜನಗಳಿಗೆ ಹೇಗೋ ಹಾಗೆಯೇ ಯಾಜಕರಿಗೂ ದಾಸನಿಗೆ ಹೇಗೋ ಹಾಗೆಯೇ ಅವನ ಯಜಮಾನನಿಗೆ, ದಾಸಿಗೆ ಹೇಗೋ ಹಾಗೆಯೇ ಅವಳ ಯಜಮಾನಿಗೆ; ಕೊಳ್ಳುವವನಿಗೆ ಹೇಗೋ ಹಾಗೆಯೇ ಮಾರುವವನಿಗೆ; ಸಾಲಕೊಡುವವನಿಗೆ ಹೇಗೋ ಹಾಗೆಯೇ ತರುವ ವನಿಗೆ; ಬಡ್ಡಿಕೊಡುವವನಿಗೆ ಹೇಗೋ ಹಾಗೆಯೇ ತಕ್ಕೊಳ್ಳುವವನಿಗೆ ಆಗುವದು. ಭೂಮಿಯು ಬರಿದೇ ಬರಿದಾಗುವದು ಮತ್ತು ಸಂಪೂರ್ಣ ಸುಲಿಗೆಯಾಗು ವದು. ಕರ್ತನು ತಾನೇ ಈ ಮಾತನ್ನು ಹೇಳಿದ್ದಾನೆ.
- Romans 9:33 ರೋಮಾಪುರದವರಿಗೆ 9:33ಇಗೋ, ನಾನು ಚೀಯೋನಿನಲ್ಲಿ ಎಡವುವ ಕಲ್ಲನ್ನೂ ಮುಗ್ಗರಿಸುವ ಬಂಡೆಯನ್ನೂ ಇಡುತ್ತೇ ನೆಂತಲೂ ಅದರ ಮೇಲೆ ನಂಬಿಕೆಯಿಡುವವನು ಆಶಾ ಭಂಗಪಡುವದಿಲ್ಲವೆಂತಲೂ ಬರೆದಿರುವ ಪ್ರಕಾರ ಆ ಎಡವುವ ಕಲ್ಲಿಗೆ ಅವರು ಎಡವಿಬಿದ್ದರು ಎಂಬದೇ.
- 2 Chronicles 36:17 2 ಪೂರ್ವಕಾಲವೃತ್ತಾಂತ 36:17ಆದದರಿಂದ ಆತನು ಅವರ ಮೇಲೆ ಕಸ್ದೀಯರ ಅರಸನನ್ನು ಬರಮಾಡಿದನು. ಅವನು ಅವರ ಪರಿಶುದ್ಧ ಸ್ಥಾನವಾದ ಆಲಯದಲ್ಲಿ ಅವರ ಪ್ರಾಯಸ್ಥರನ್ನು ಕತ್ತಿಯಿಂದ ಕೊಂದುಹಾಕಿದನು. ಪ್ರಾಯಸ್ಥನ ಮೇಲಾದರೂ ಕನ್ಯಾ ಸ್ತ್ರೀಯ ಮೇಲಾ ದರೂ ವೃದ್ಧನ ಮೇಲಾದರೂ ಅತೀ ವೃದ್ಧನ ಮೇಲಾ ದರೂ ಕನಿಕರಪಡಲಿಲ್ಲ. ಆತನು ಸಮಸ್ತವನ್ನು ಅವನ ಕೈಯಲ್ಲಿ ಒಪ್ಪಿಸಿದನು.
- Jeremiah 16:3–9 ಯೆರೆಮೀಯ 16:3–9ಈ ಸ್ಥಳದಲ್ಲಿ ಹುಟ್ಟಿರುವ ಕುಮಾರ ಕುಮಾರ್ತೆ ರಯರನ್ನು ಕುರಿತಾಗಿಯೂ ಅವರನ್ನು ಹೆತ್ತ ತಾಯಿಗಳನ್ನು ಈ ದೇಶದಲ್ಲಿ ಅವರನ್ನು ಪಡೆದ ತಂದೆಗಳನ್ನು ಕುರಿ ತಾಗಿಯೂ ಕರ್ತನು ಹೀಗೆ ಹೇಳುತ್ತಾನೆ-- ಅವರು ಬಹು ಕ್ರೂರವಾದ ಮರಣಗಳಿಂದ ಸಾಯುವರು; ಅವರಿಗೋಸ್ಕರ ಗೋಳಾಟ ಆಗುವದಿಲ್ಲ; ಅವರು ಹೂಣಿಡಲ್ಪಡುವದಿಲ್ಲ; ಭೂಮಿಯ ಮೇಲೆ ಅವರು ಗೊಬ್ಬರವಾಗುವರು; ಕತ್ತಿಯಿಂದಲೂ ಕ್ಷಾಮದಿಂದಲೂ ಸಂಹಾರವಾಗುವರು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂಮಿಯ ಮೃಗಗಳಿಗೂ ಆಹಾರ ವಾಗುವವು. ಕರ್ತನು ಹೀಗೆ ಹೇಳುತ್ತಾನೆ--ದುಃಖದ ಮನೆ ಯಲ್ಲಿ ಪ್ರವೇಶಿಸಬೇಡ, ಅವರ ಸಂಗಡ ಗೋಳಾಡು ವದಕ್ಕೂ ದುಃಖಪಡುವದಕ್ಕೂ ಹೋಗಬೇಡ; ನಾನು ನನ್ನ ಸಮಾಧಾನವನ್ನೂ ಕೃಪೆಯನ್ನೂ ಕರುಣೆಯನ್ನೂ ಈ ಜನರಿಂದ ತೆಗೆದುಹಾಕಿದ್ದೇನೆಂದು ಕರ್ತನು ಅನ್ನುತ್ತಾನೆ. ದೊಡ್ಡವರೂ ಚಿಕ್ಕವರೂ ಈ ದೇಶದಲ್ಲಿ ಸಾಯುವರು; ಅವರು ಹೂಣಿಡಲ್ಪಡುವದಿಲ್ಲ, ಅವರಿ ಗೋಸ್ಕರ ಯಾರೂ ಗೋಳಾಡುವದಿಲ್ಲ; ಅವರಿ ಗೋಸ್ಕರ ತಮ್ಮನ್ನು ಕೊಯ್ದು ಕೊಳ್ಳುವದಿಲ್ಲ, ಬೋಳಿಸಿ ಕೊಳ್ಳುವದೂ ಇಲ್ಲ. ಸತ್ತವರ ವಿಷಯದಲ್ಲಿ ಅವರನ್ನು ಆದರಿಸುವ ಹಾಗೆ ಜನರು ಹರಿದುಕೊಳ್ಳುವದಿಲ್ಲ; ಅವರ ತಂದೆ ತಾಯಿಗಳ ವಿಷಯವಾದರೋ ಅವರಿಗೆ ಆದರಣೆಯ ಪಾತ್ರೆಯನ್ನು ಕುಡಿಯಲು ಕೊಡುವದಿಲ್ಲ. ಅವರ ಸಂಗಡ ಕೂತುಕೊಂಡು ಉಣ್ಣುವದಕ್ಕೂ ಕುಡಿಯುವದಕ್ಕೂ ಔತಣದ ಮನೆಯಲ್ಲಿ ಪ್ರವೇಶಿಸ ಬೇಡ. ಇಸ್ರಾಯೇಲಿನ ದೇವರಾಗಿರುವ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿಮ್ಮ ಕಣ್ಣುಗಳ ಮುಂದೆ ನಿಮ್ಮ ದಿನಗಳಲ್ಲಿಯೇ ಉಲ್ಲಾಸ ಸಂತೋಷದ ಧ್ವನಿಯನ್ನೂ ಮದಲಿಂಗನ ಸ್ವರವನ್ನೂ ಮದಲಗಿತ್ತಿಯ ಸ್ವರವನ್ನೂ ಈ ಸ್ಥಳದೊಳಗಿಂದ ನಿಲ್ಲಿಸಿ ಬಿಡುತ್ತೇನೆ.