Jeremiah · chapter 6 · verse 4
Jeremiah 6:4 in Kannada
ಅವಳಿಗೆ ವಿರೋಧವಾಗಿ ಯುದ್ಧವನ್ನು ಸಿದ್ಧಮಾಡಿರಿ; ಏಳಿರಿ, ಮಧ್ಯಾಹ್ನದಲ್ಲಿ ಏರಿ ಹೋಗೋಣ, ನಮಗೆ ಅಯ್ಯೋ! ಹೊತ್ತು ಮುಣುಗುತ್ತದಲ್ಲಾ; ಸಂಜೆಯ ನೆರಳುಗಳು ಉದ್ದವಾ ಗುತ್ತವೆ.
Avalige virodhavaagi yuddhavannu siddhamaadiri; eliri, madhyaahnadalli eri hogona, namage ayyo! Hottu munuguttadallaa; sanjeya neralugalu uddavaa guttave.
Jeremiah 6:4 in English
- King James Version (KJV)
- Prepare ye war against her; arise, and let us go up at noon. Woe unto us! for the day goeth away, for the shadows of the evening are stretched out.
- World English Bible (WEB)
- “Prepare war against her! Arise! Let’s go up at noon. Woe to us! For the day declines, for the shadows of the evening are stretched out.
- American Standard Version (ASV)
- Prepare ye war against her; arise, and let us go up at noon. Woe unto us! for the day declineth, for the shadows of the evening are stretched out.
- Bible in Basic English (BBE)
- Make war ready against her; up! let us go up when the sun is high. Sorrow is ours! for the day is turned and the shades of evening are stretched out.
- Darby Translation (DBY)
- Prepare war against her. Arise, and let us go up at noon. Woe unto us! for the day hath declined, for the shadows of the evening are lengthening.
- Webster's Bible (WBS)
- Prepare ye war against her; arise, and let us go up at noon. Woe to us! for the day departeth, for the shadows of the evening are lengthened.
- Young's Literal Translation (YLT)
- Sanctify ye against her the battle, Rise, and we go up at noon. Woe to us, for turned hath the day, For stretched out are the shades of evening,
Read in context
- 2ಚೀಯೋನಿನ ಮಗಳನ್ನು ಸೌಂದರ್ಯವಾದ ಮತ್ತು ಕೋಮಲವಾದವಳಿಗೆ ನಾನು ಹೋಲಿಸುತ್ತೇನೆ.
- 3ಅವಳ ಬಳಿಗೆ ಕುರುಬರು ತಮ್ಮ ಮಂದೆಗಳ ಸಂಗಡ ಬರುವರು; ಅವಳ ಸುತ್ತಲು ತಮ್ಮ ಗುಡಾರಗಳನ್ನು ಹಾಕುವರು; ತಮ್ಮ ತಮ್ಮ ಸ್ಥಳಗಳಲ್ಲಿ ಮೇಯಿಸುವರು.
- 4ಅವಳಿಗೆ ವಿರೋಧವಾಗಿ ಯುದ್ಧವನ್ನು ಸಿದ್ಧಮಾಡಿರಿ; ಏಳಿರಿ, ಮಧ್ಯಾಹ್ನದಲ್ಲಿ ಏರಿ ಹೋಗೋಣ, ನಮಗೆ ಅಯ್ಯೋ! ಹೊತ್ತು ಮುಣುಗುತ್ತದಲ್ಲಾ; ಸಂಜೆಯ ನೆರಳುಗಳು ಉದ್ದವಾ ಗುತ್ತವೆ.
- 5ಏಳಿರಿ, ರಾತ್ರಿಯಲ್ಲಿ ಏರಿಹೋಗಿ ಅವಳ ಅರಮನೆಗಳನ್ನು ನಾಶಮಾಡೋಣ;
- 6ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಮರಗಳನ್ನು ಕಡಿಯಿರಿ; ಯೆರೂಸಲೇಮಿಗೆ ವಿರೋಧವಾಗಿ ದಿಬ್ಬ ಹಾಕಿರಿ; ವಿಚಾರಿಸಲ್ಪಡತಕ್ಕ ಪಟ್ಟಣವು ಇದೇ; ಅವಳಲ್ಲಿ ತುಂಬ ಬಲಾತ್ಕಾರ ಅದೆ.
Cross references
- Jeremiah 15:8 ಯೆರೆಮೀಯ 15:8ಅವರ ವಿಧವೆಗಳು ಸಮುದ್ರದ ಮರಳಿಗಿಂತ ನನಗೆ ಹೆಚ್ಚಾದರು. ನಾನು ಅವರ ಬಳಿಗೆ ಪ್ರಾಯದವರ ತಾಯಿಯ ಮೇಲೆ ಮಧ್ಯಾಹ್ನದಲ್ಲಿ ನಾಶನ ಮಾಡು ವವನನ್ನು ತರಿಸಿದ್ದೇನೆ; ಪಕ್ಕನೆ ಅವನು ಅವಳ ಮೇಲೆ ಬೀಳುವಂತೆ ಮಾಡುವೆನು, ಹೆದರಿಕೆಯನ್ನು ಪಟ್ಟಣದ ಮೇಲೆ ಬೀಳಮಾಡಿದ್ದೇನೆ.
- Zephaniah 2:4 ಚೆಫನ್ಯ 2:4ಗಾಜವು ಕೈಬಿಡಲ್ಪಡುವದು, ಅಷ್ಕೆಲೋನ್ ಹಾಳಾ ಗುವದು, ಅಷ್ಡೋದನ್ನು ಮಧ್ಯಾಹ್ನದಲ್ಲಿ ಹೊರಡಿಸು ವರು, ಎಕ್ರೋನ್ ಕೀಳಲ್ಪಡುವದು.
- Joel 3:9 ಯೋವೇಲ 3:9ಜನಾಂಗಗಳಲ್ಲಿ ಇದನ್ನು ಘೋಷಿಸಿರಿ; ಯುದ್ಧವನ್ನು ಸಿದ್ಧಮಾಡಿರಿ, ಶೂರರನ್ನು ಎಬ್ಬಿಸಿರಿ; ಯುದ್ಧಸ್ಥರೆಲ್ಲರು ಸವಿಾಪಕ್ಕೆ ಬರಲಿ.
- Jeremiah 8:20 ಯೆರೆಮೀಯ 8:20ಸುಗ್ಗಿ ಹೋಯಿತು, ಬೇಸಿಗೆಕಾಲ ತೀರಿತು; ಆದರೆ ನಾವು ರಕ್ಷಿಸಲ್ಪಡಲಿಲ್ಲ.
- Jeremiah 51:27–28 ಯೆರೆಮೀಯ 51:27–28ದೇಶದಲ್ಲಿ ಧ್ವಜವನ್ನೆತ್ತಿರಿ; ಜನಾಂಗಗಳಲ್ಲಿ ತುತೂರಿಯನ್ನೂದಿರಿ; ಅದಕ್ಕೆ ವಿರೋಧವಾಗಿ ಜನಾಂಗಗಳನ್ನು ಸಿದ್ಧಮಾಡಿರಿ; ಅರರಾಟ್, ಮಿನ್ನಿ, ಅಷ್ಕೆನಜ್ ರಾಜ್ಯಗಳನ್ನು ಅದಕ್ಕೆ ವಿರೋಧವಾಗಿ ಕರೆಯಿರಿ; ಅದಕ್ಕೆ ವಿರೋಧವಾಗಿ ಸೈನ್ಯಾಧಿಪತಿಯನ್ನು ನೇಮಿಸಿರಿ; ಬಿರುಸಾದ ಮಿಡತೆ ದಂಡಿನಂತೆ ಕುದುರೆ ಗಳನ್ನು ಬರಮಾಡಿರಿ. ಅದಕ್ಕೆ ವಿರೋಧವಾಗಿ ಜನಾಂಗಗಳನ್ನೂ ಮೇದ್ಯರ ಅರಸರನ್ನೂ ಅದರ ಅಧಿಪತಿಗಳನ್ನೂ ಅಧಿಕಾರಿಗಳೆಲ್ಲರನ್ನೂ ಅವನ ರಾಜ್ಯದ ದೇಶವನ್ನೆಲ್ಲಾ ಸಿದ್ಧಮಾಡಿರಿ.
- Isaiah 13:2–5 ಯೆಶಾಯ 13:2–5ಅವರು(ಶತ್ರುಗಳು) ಬಂದು ಘನವಂತ ದ್ವಾರಗಳೊಳಗೆ ಹೋಗುವಂತೆ ಎತ್ತರವಾದ ಪರ್ವತದ ಮೇಲೆ ನೀವು ಧ್ವಜವನ್ನೆತ್ತಿ ಅವರಿಗೆ ನಿಮ್ಮ ಶಬ್ದವನ್ನು ಕೇಳಿಸುವಂತೆ ಜೋರಾಗಿ ಕೂಗಿ ಕರೆಯಿರಿ. ನಾನು ನನ್ನ ಪರಿಶುದ್ಧರಿಗೆ ಆಜ್ಞಾಪಿಸಿ ನನ್ನ ಮಹಿಮೆಯಲ್ಲಿ ಉಲ್ಲಾಸಿಸುವವರನ್ನೂ ಶೂರರನ್ನೂ ನನ್ನ ಕೋಪಕ್ಕೆ ಕರೆದಿದ್ದೇನೆ. ಬಹು ಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ; ಒಟ್ಟಿಗೆ ಕೂಡಿಕೊಂಡ ರಾಜ್ಯ ಜನಾಂಗ ಗಳ ಆರ್ಭಟ; ಸೈನ್ಯಗಳ ಕರ್ತನು ಯುದ್ಧಕ್ಕೆ ಸೈನ್ಯವನ್ನು ಸಿದ್ಧಮಾಡುತ್ತಾನೆ. ಕರ್ತನೂ ಆತನ ರೋಷಕ್ಕೆ ಆಯುಧಗಳಾದವರೂ ದೂರ ದೇಶದಿಂದ, ಅಂದರೆ ಆಕಾಶಮಂಡಲದ ಕಟ್ಟಕಡೆಯಿಂದ ದೇಶವನ್ನೆಲ್ಲಾ ಹಾಳುಮಾಡುವದಕ್ಕಾಗಿ ಬರುತ್ತಾರೆ.
- Isaiah 5:26–30 ಯೆಶಾಯ 5:26–30ಆತನು ದೂರದ ಜನಾಂಗದವರಿಗೆ ಗುರುತಿಗಾಗಿ ಧ್ವಜವನ್ನೆತ್ತಿ, ಭೂಮಿಯ ಅಂಚಿನಿಂದ ಅವರಿಗೆ ಸಿಳ್ಳುಹಾಕುವನು. ಇಗೋ, ಅವರು ತ್ವರೆಯಾಗಿ ಫಕ್ಕನೆ ಬರುವರು; ಅವರಲ್ಲಿ ಯಾರೂ ದಣಿದು ಮುಗ್ಗರಿಸರು; ಅಥವಾ ಅವರು ತೂಕಡಿಸುವದಿಲ್ಲ, ನಿದ್ರಿಸುವದಿಲ್ಲ, ಇಲ್ಲವೆ ಅವರ ನಡುಕಟ್ಟು ಬಿಚ್ಚಿಕೊಳ್ಳುವದಿಲ್ಲ. ಕೆರದ ಬಾರು ಹರಿಯುವದಿಲ್ಲ. ಅವರ ಬಾಣಗಳು ಹದವಾಗಿವೆ, ಅವರ ಬಿಲ್ಲುಗಳು ಬೊಗ್ಗಿವೆ, ಅವರ ಕುದುರೆಗಳ ಗೊರಸುಗಳು ಕಲ್ಲಿನಂತೆಯೂ ಅವರ ಚಕ್ರಗಳು ಬಿರು ಗಾಳಿಯಂತೆಯೂ ರಭಸವಾಗಿವೆ. ಅವರ ಘರ್ಜ ನೆಯು ಸಿಂಹದಂತೆ ಅದೆ. ಪ್ರಾಯದ ಸಿಂಹಗಳಂತೆ ಆರ್ಭಟಿಸುತ್ತಾರೆ; ಹೌದು, ಘರ್ಜಿಸುತ್ತಾ ಬೇಟೆ ಹಿಡಿದು ಭದ್ರವಾಗಿ ಹೊತ್ತುಕೊಂಡು ಹೋಗುತ್ತಾರೆ ಅದನ್ನು ಬಿಡಿಸುವವನು ಒಬ್ಬನೂ ಇಲ್ಲ.ಆ ದಿನದಲ್ಲಿ ಅವರು ಸಮುದ್ರವು ಬೋರ್ಗರೆಯುವಂತೆ ಅವರ ಮೇಲೆ ಘರ್ಜಿಸುವರು; ಭೂಮಿಯನ್ನು ದೃಷ್ಟಿ ಸಿದರೆ ಅಂಧಕಾರವನ್ನೂ ದುಃಖವನ್ನೂ ನೋಡುವಿ. ಆಕಾಶಮಂಡಲದಲ್ಲಿ ಬೆಳಕು ಕತ್ತಲಾಗುವದು. ಆ ದಿನದಲ್ಲಿ ಅವರು ಸಮುದ್ರವು ಬೋರ್ಗರೆಯುವಂತೆ ಅವರ ಮೇಲೆ ಘರ್ಜಿಸುವರು; ಭೂಮಿಯನ್ನು ದೃಷ್ಟಿ ಸಿದರೆ ಅಂಧಕಾರವನ್ನೂ ದುಃಖವನ್ನೂ ನೋಡುವಿ. ಆಕಾಶಮಂಡಲದಲ್ಲಿ ಬೆಳಕು ಕತ್ತಲಾಗುವದು.
- Jeremiah 5:10 ಯೆರೆಮೀಯ 5:10ಅವಳ ಗೋಡೆಗಳನ್ನು ಏರಿರಿ, ಕೆಡಿಸಿರಿ; ಆದರೆ ಪೂರ್ಣವಾಗಿ ನಾಶಮಾಡಬೇಡಿರಿ. ಅವಳ ಕೋಟೆಯ ಉಪ್ಪರಿಗೆಗಳನ್ನು ತೆಗೆದುಬಿಡಿರಿ; ಅವು ಕರ್ತನವುಗಳಲ್ಲ.
- Song of Solomon 2:17 ಪರಮಗೀತೆ 2:17ನನ್ನ ಪ್ರಿಯನೇ, ತಿರುಗಿಕೊಂಡು ಬೆಳಗಾಗು ವವರೆಗೂ ನೆರಳುಗಳು ಓಡಿಹೋಗುವ ವರೆಗೂ, ಬತೇರ್ ಪರ್ವತಗಳ ಮೇಲಿರುವ ಜಿಂಕೆಯ ಹಾಗೆ ಇಲ್ಲವೆ ದುಪ್ಪಿಯ ಮರಿಯ ಹಾಗೆ ಇರು.