Jeremiah · chapter 6 · verse 7
Jeremiah 6:7 in Kannada
ಬುಗ್ಗೆಯು ತನ್ನ ನೀರನ್ನು ಹರಿಯ ಮಾಡುವ ಹಾಗೆ ಅವಳು ತನ್ನ ಕೆಟ್ಟತನವನ್ನು ಹರಿಯ ಮಾಡುತ್ತಾಳೆ; ಬಲಾತ್ಕಾರವೂ ಸುಲಿಗೆಯೂ ಅವಳಲ್ಲಿ ಕೇಳಬರುತ್ತವೆ. ದುಃಖವೂ ಗಾಯಗಳೂ ಯಾವಾ ಗಲೂ ನನ್ನ ಮುಂದೆ ಅವೆ.
Buggeyu tanna neerannu hariya maaduva haage avalu tanna kettatanavannu hariya maaduttaale; balaatkaaravoo suligeyoo avalalli kelabaruttave. Duhkhavoo gaayagaloo yaavaa galoo nanna munde ave.
Jeremiah 6:7 in English
- King James Version (KJV)
- As a fountain casteth out her waters, so she casteth out her wickedness: violence and spoil is heard in her; before me continually [is] grief and wounds.
- World English Bible (WEB)
- As a well produces its waters, so she produces her wickedness. Violence and destruction is heard in her. Sickness and wounds are continually before me.
- American Standard Version (ASV)
- As a well casteth forth its waters, so she casteth forth her wickedness: violence and destruction is heard in her; before me continually is sickness and wounds.
- Bible in Basic English (BBE)
- As the spring keeps its waters cold, so she keeps her evil in her: the sound of cruel and violent behaviour is in her; before me at all times are disease and wounds.
- Darby Translation (DBY)
- As a well poureth forth her waters, so she poureth forth her wickedness: violence and destruction are heard in her; before me continually are grief and wounds.
- Webster's Bible (WBS)
- As a fountain casteth out her waters, so she casteth out her wickedness: violence and devastation is heard in her; before me continually [are] grief and wounds.
- Young's Literal Translation (YLT)
- As the digging of a well, is [for] its waters, So she hath digged [for] her wickedness, Violence and spoil is heard in her, Before My face continually [are] sickness and smiting.
Read in context
- 5ಏಳಿರಿ, ರಾತ್ರಿಯಲ್ಲಿ ಏರಿಹೋಗಿ ಅವಳ ಅರಮನೆಗಳನ್ನು ನಾಶಮಾಡೋಣ;
- 6ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಮರಗಳನ್ನು ಕಡಿಯಿರಿ; ಯೆರೂಸಲೇಮಿಗೆ ವಿರೋಧವಾಗಿ ದಿಬ್ಬ ಹಾಕಿರಿ; ವಿಚಾರಿಸಲ್ಪಡತಕ್ಕ ಪಟ್ಟಣವು ಇದೇ; ಅವಳಲ್ಲಿ ತುಂಬ ಬಲಾತ್ಕಾರ ಅದೆ.
- 7ಬುಗ್ಗೆಯು ತನ್ನ ನೀರನ್ನು ಹರಿಯ ಮಾಡುವ ಹಾಗೆ ಅವಳು ತನ್ನ ಕೆಟ್ಟತನವನ್ನು ಹರಿಯ ಮಾಡುತ್ತಾಳೆ; ಬಲಾತ್ಕಾರವೂ ಸುಲಿಗೆಯೂ ಅವಳಲ್ಲಿ ಕೇಳಬರುತ್ತವೆ. ದುಃಖವೂ ಗಾಯಗಳೂ ಯಾವಾ ಗಲೂ ನನ್ನ ಮುಂದೆ ಅವೆ.
- 8ಯೆರೂಸಲೇಮೇ, ನನ್ನ ಪ್ರಾಣವು ನಿನ್ನ ಕಡೆಯಿಂದ ಹೊರಟು ಹೋಗದ ಹಾಗೆ ನಾನು ನಿಮ್ಮನ್ನು ಹಾಳಾಗಿಯೂ ನಿವಾಸಿಗಳಿಲ್ಲದ ದೇಶವಾಗಿಯೂ ಮಾಡದ ಹಾಗೆ ಶಿಕ್ಷಣವನ್ನು ತಕ್ಕೋ.
- 9ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾ ಯೇಲಿನ ಶೇಷವನ್ನು ದ್ರಾಕ್ಷೇಗಿಡದ ಹಾಗೆ ಪೂರ್ಣ ವಾಗಿ ಹಕ್ಕಲಾಯುವರು, ದ್ರಾಕ್ಷೇ ಕೂಡಿಸುವವನ ಹಾಗೆ ನಿನ್ನ ಕೈಯನ್ನು ಪುಟ್ಟಿಗಳಲ್ಲಿ ಹಿಂದಕ್ಕೆ ತಿರುಗಿಸು.
Cross references
- Jeremiah 20:8 ಯೆರೆಮೀಯ 20:8ನಾನು ಮಾತನಾಡುವನಾದದ್ದರಿಂದ ಗಟ್ಟಿಯಾಗಿ ಕೂಗುತ್ತೇನೆ; ಬಲಾತ್ಕಾರವೂ ಕೊಳ್ಳೆಯೂ ಎಂದು ಕೂಗುತ್ತೇನೆ ಕರ್ತನ ವಾಕ್ಯವು ನನಗೆ ಪ್ರತಿದಿನ ಪರಿಹಾಸ್ಯಕ್ಕೂ ಗೇಲಿಗೂ ಆಯಿತು.
- Ezekiel 7:23 ಯೆಹೆಜ್ಕೇಲನು 7:23ಒಂದು ಸರಪಳಿಯನ್ನು ಮಾಡು; ಯಾಕಂದರೆ ದೇಶವು ರಕ್ತಾಪರಾಧದಿಂದ ತುಂಬಿದೆ ಮತ್ತು ನಗರವು ಹಿಂಸೆಯಿಂದ ತುಂಬಿದೆ.
- Ezekiel 7:11 ಯೆಹೆಜ್ಕೇಲನು 7:11ಬಲಾತ್ಕಾರವು ದುಷ್ಟತ್ವದ ಕೋಲಾಗಿ ಎದ್ದಿತು; ಅವರಲ್ಲಿಯೂ ಅವರ ಜನ ಸಮೂಹದಲ್ಲಿಯೂ ಅವರ ಸಂಪತ್ತಿನಲ್ಲಿಯೂ ಏನೂ ಉಳಿಯುವದಿಲ್ಲ; ಅವರಿಗೋಸ್ಕರ ಗೋಳಾಟವೂ ಇರುವದಿಲ್ಲ.
- James 3:10–12 ಯಾಕೋಬನು 3:10–12ಅದೇ ಬಾಯಿಂದ ಆಶೀರ್ವಾದ ಮತ್ತು ಶಾಪ ಬರುತ್ತವೆ; ನನ್ನ ಸಹೋದರರೇ, ಇವುಗಳು ಹೀಗಿರಬಾರದು. ಒಂದೇ ಊಟೆಯು ಸಿಹಿನೀರನ್ನೂ ಕಹಿನೀರನ್ನೂ ಒಂದೇ ಸ್ಥಳದಿಂದ ಹೊರಡುವದುಂಟೇ? ನನ್ನ ಸಹೋದರರೇ, ಅಂಜೂರದ ಮರವು ಎಣ್ಣೇಮರದ ಕಾಯಿ ಬಿಡುವದೋ? ದ್ರಾಕ್ಷೇ ಬಳ್ಳಿಯಲ್ಲಿ ಅಂಜೂರದ ಹಣ್ಣಾಗುವದೋ? ಹಾಗೆಯೇ ಯಾವ ಊಟೆಯೂ ಉಪ್ಪು ನೀರನ್ನೂ ಸಿಹಿ ನೀರನ್ನೂ ಕೊಡಲಾರದು.
- Isaiah 57:20 ಯೆಶಾಯ 57:20ಆದರೆ ದುಷ್ಟರು ಸುಮ್ಮನಿರಲಾರದಂಥ, ಅದರ ನೀರುಗಳು ಕೆಸರನ್ನೂ ಮೈಲಿಗೆಯನ್ನೂ ಕಾರು ವಂಥ, ಅಲ್ಲಕಲ್ಲೋಲವಾಗಿರುವ ಸಮುದ್ರದ ಹಾಗಿ ದ್ದಾರೆ.ದುಷ್ಟರಿಗೆ ಸಮಾಧಾನವೇ ಇಲ್ಲವೆಂದು ನನ್ನ ದೇವರು ಹೇಳುತ್ತಾನೆ.
- Micah 7:2–3 ಮೀಕ 7:2–3ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ. ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ.
- Micah 2:1–2 ಮೀಕ 2:1–2ಅಪರಾಧವನ್ನು ಯೋಚಿಸಿ, ತಮ್ಮ ಹಾಸಿಗೆಗಳ ಮೇಲೆ ಕೆಟ್ಟದ್ದನ್ನು ನಡಿಸುವವರಿಗೆ ಅಯ್ಯೋ! ಹೊತ್ತಾರೆ ಬೆಳಕಾಗುವಾಗ ಅದನ್ನು ಮಾಡುತ್ತಾರೆ; ಅದು ಅವರ ಕೈವಶದಲ್ಲಿದೆ. ಅವರು ಹೊಲಗಳನ್ನು ಆಶಿಸಿ ಬಲಾತ್ಕಾರದಿಂದ ತಕ್ಕೊಳ್ಳುತ್ತಾರೆ; ಮನೆಗಳನ್ನು ಸಹ ತೆಗೆದುಕೊಳ್ಳುತ್ತಾರೆ; ಮನುಷ್ಯನಿಗೂ ಅವನ ಮನೆಗೂ ಹೌದು, ಮನುಷ್ಯನಿಗೂ ಅವನ ಸ್ವಾಸ್ತ್ಯಕ್ಕೂ ಬಲಾತ್ಕಾರ ಮಾಡುತ್ತಾರೆ.
- Micah 2:8–10 ಮೀಕ 2:8–10ಇತ್ತೀಚೆಗೆ ನನ್ನ ಜನರು ವೈರಿಯ ಹಾಗೆ ಎದ್ದಿದ್ದಾರೆ; ಯುದ್ಧದಿಂದ ತಿರುಗಿಕೊಂಡು ಭದ್ರವಾಗಿ ಹಾದುಹೋಗುವವರ ವಸ್ತ್ರದ ಸಂಗಡ ನಿಲುವಂಗಿಯನ್ನು ನೀವು ಕಿತ್ತುಕೊ ಳ್ಳುತ್ತೀರಿ. ನನ್ನ ಜನರ ಸ್ತ್ರೀಯರನ್ನು ಅವರ ರಮ್ಯ ವಾದ ಮನೆಗಳೊಳಗಿಂದ ಹೊರಡಿಸಿದ್ದೀರಿ; ಅವರ ಮಕ್ಕಳಿಂದ ನನ್ನ ಮಹಿಮೆಯನ್ನು ಎಂದೆಂದಿಗೂ ತೆಗೆದಿ ದ್ದೀರಿ. ನೀವು ಎದ್ದು ಹೋಗಿರಿ; ಇದು ನಿಮ್ಮ ವಿಶ್ರಾಂತಿ ಅಲ್ಲ; ಇದು ಅಶುದ್ಧವಾಗಿದ್ದ ಕಾರಣ, ನಿಮ್ಮನ್ನು ಕಠಿಣವಾದ ನಾಶನದಿಂದ ನಾಶಮಾಡು ವದು.
- Micah 3:9–12 ಮೀಕ 3:9–12ಯಾಕೋಬನ ಮನೆತನದವರ ಪ್ರಧಾನರೇ, ಇಸ್ರಾಯೇಲಿನ ಮನೆತನದವರ ನ್ಯಾಯಾ ಧಿಪತಿಗಳೇ, ನ್ಯಾಯವನ್ನು ಅಸಹ್ಯಿಸಿ ಎಲ್ಲಾ ಯಥಾರ್ಥ ತ್ವವನ್ನು ಡೊಂಕು ಮಾಡುವವರೇ, ಚೀಯೋನನ್ನು ರಕ್ತದಿಂದಲೂ ಯೆರೂಸಲೇಮನ್ನು ಅಕ್ರಮದಿಂದಲೂ ಕಟ್ಟುವವರೇ, ಈಗ ಇದನ್ನು ಕೇಳಿರಿ. ಅದರ ಮುಖ್ಯಸ್ಥರು ಲಂಚಕ್ಕೆ ನ್ಯಾಯತೀರಿಸುತ್ತಾರೆ; ಅದರ ಯಾಜಕರು ಸಂಬಳಕ್ಕೆ ಬೋಧಿಸುತ್ತಾರೆ; ಅದರ ಪ್ರವಾ ದಿಗಳು ಹಣಕ್ಕೆ ಶಕುನ ಹೇಳುತ್ತಾರೆ; ಆದರೂ ಕರ್ತನ ಮೇಲೆ ಆತುಕೊಂಡು--ಕರ್ತನು ನಮ್ಮ ಮಧ್ಯದಲ್ಲಿ ಇಲ್ಲವೋ? ನಮ್ಮ ಮೇಲೆ ಕೇಡು ಬರುವದಿಲ್ಲ ಅನ್ನು ತ್ತಾರೆ.ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು. ಆದಕಾರಣ ನಿಮ್ಮ ನಿಮಿತ್ತವೇ, ಚೀಯೋನು ಹೊಲದ ಹಾಗೆ ಉಳಲ್ಪಡುವದು; ಯೆರೂಸಲೇಮು ದಿಬ್ಬೆಗಳಾಗುವದು, ಆಲಯದ ಪರ್ವತವು ಅಡವಿಯ ಉನ್ನತ ಸ್ಥಳಗಳ ಹಾಗಾಗುವದು.
- Psalm 55:9–11 ಕೀರ್ತನೆಗಳು 55:9–11ಓ ಕರ್ತನೇ, (ಅವರನ್ನು) ನಾಶಮಾಡು. ಅವರ ನಾಲಿಗೆಗಳನ್ನು ಭೇದಿಸು; ಯಾಕಂದರೆ ಬಲಾತ್ಕಾರ ವನ್ನೂ ವಿವಾದವನ್ನೂ ಪಟ್ಟಣದಲ್ಲಿ ನಾನು ನೋಡಿ ದ್ದೇನೆ; ಹಗಲು ಇರುಳು ಅದರ ಗೋಡೆಗಳ ಮೇಲೆ ಅವರು ಸುತ್ತುತ್ತಾರೆ; ಕೇಡೂ ದುಃಖವೂ ಅವರ ಮಧ್ಯದಲ್ಲಿದೆ; ದುಷ್ಟತನವು ಅದರ ಮಧ್ಯ ದಲ್ಲಿದೆ; ಅದರ ಬೀದಿಗಳೊಳಗಿಂದ ಮೋಸವೂ ವಂಚನೆಯೂ ತೊಲಗುವದಿಲ್ಲ.
- Ezekiel 22:3–12 ಯೆಹೆಜ್ಕೇಲನು 22:3–12ನೀನು ಹೇಳಬೇಕಾದದ್ದೇನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಪಟ್ಟಣವು ಅದರ ಮಧ್ಯದಲ್ಲಿ ಅದರ ಕಾಲ ಬರುವ ಹಾಗೆ ರಕ್ತವನ್ನು ಚೆಲ್ಲುತ್ತದೆ. ತನ್ನನ್ನು ಅಶುದ್ಧ ಮಾಡುವ ಹಾಗೆ ತನ್ನಲ್ಲಿ ವಿಗ್ರಹಗಳನ್ನು ಮಾಡಿಕೊಂಡಿದೆ. ನೀನು ಚೆಲ್ಲಿದ ನಿನ್ನ ರಕ್ತದಿಂದ ನಿನಗೆ ಅಪರಾಧ ಬಂದಿತು; ನೀನು ಮಾಡಿದ ನಿನ್ನ ವಿಗ್ರಹಗಳಿಂದ ನೀನು ಅಶುದ್ಧವಾದೆ; ನಿನ್ನ ದಿನಗಳನ್ನು ಸವಿಾಪಿಸಿರುವೆ; ನಿನ್ನ ವರುಷಗಳನ್ನು ಮುಟ್ಟಿರುವೆ. ಆದದರಿಂದ ನಿನ್ನನ್ನು ಅನ್ಯಜನಾಂಗಗಳಿಗೆ ನಾಚಿಕೆ ಯಾಗಿಯೂ ಎಲ್ಲಾ ದೇಶಗಳಿಗೆ ನಿಂದೆಯಾಗಿಯೂ ಮಾಡಿದ್ದೇನೆ. ಅಶುದ್ಧ ಹೆಸರುಳ್ಳವಳೇ, ಬಹಳ ತೊಂದರೆಗೊಳಗಾದವಳೇ, ನಿನಗೆ ಹತ್ತಿರದವರೂ ದೂರದವರೂ ನಿಂದಿಸುವರು. ಇಗೋ ಇಸ್ರಾ ಯೇಲಿನ ಪ್ರಭುಗಳಲ್ಲಿ ಪ್ರತಿಯೊಬ್ಬನು ತನ್ನ ತನ್ನ ಶಕ್ತ್ಯಾನುಸಾರವಾಗಿ ರಕ್ತವನ್ನು ನಿನ್ನ ಮೇಲೆ ಚೆಲ್ಲುತ್ತಲೇ ಇದ್ದಾನೆ. ನಿನ್ನಲ್ಲಿ ತಂದೆಯನ್ನೂ ತಾಯಿಯನ್ನೂ ಅಲಕ್ಷ್ಯ ಮಾಡಿದ್ದಾರೆ; ನಿನ್ನಲ್ಲಿ ಅಪರಿಚಿತರಿಗೆ ಬಲಾತ್ಕಾರ ಮಾಡಿದ್ದಾರೆ; ನಿನ್ನಲ್ಲಿ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಪೀಡಿಸಿದ್ದಾರೆ. ನೀನು ನನ್ನ ಪರಿಶುದ್ಧ ಸಂಗತಿಗಳನು ತಿರಸ್ಕರಿಸಿ ನನ್ನ ಸಬ್ಬತ್ತುಗಳನ್ನು ಅಪವಿತ್ರಪಡಿಸಿದ್ದೀ. ನಿನ್ನಲ್ಲಿ ರಕ್ತಚೆಲ್ಲುವ ಹಾಗೆ ಚಾಡಿ ಹೇಳುವ ಜನ ಇದ್ದಾರೆ; ಬೆಟ್ಟಗಳ ಮೇಲೆ ತಿನ್ನುವವರಿದ್ದಾರೆ; ದುರಾ ಚಾರಿಗಳು ನಿನ್ನ ಮಧ್ಯದಲ್ಲಿದ್ದಾರೆ. ನಿನ್ನಲ್ಲಿ ತಂದೆಯ ಬೆತ್ತಲೆತನವನ್ನು ಹೊರಗೆಡವಿದ್ದಾರೆ; ನಿನ್ನಲ್ಲಿ ಮುಟ್ಟಾಗಿ ಪ್ರತ್ಯೇಕವಾಗಿರುವವರನ್ನು ಕೂಡಿದ್ದಾರೆ; ಒಬ್ಬನು ತನ್ನ ನೆರೆಯವನ ಹೆಂಡತಿಯ ಸಂಗಡ ದುರಾಚಾರವನ್ನು ಮಾಡಿದ್ದಾನೆ; ಮತ್ತೊಬ್ಬನು ಅಕೃತ್ಯದಿಂದ ಸೊಸೆಯನ್ನು ಕೆಡಿಸಿದ್ದಾನೆ; ಇನ್ನೊಬ್ಬನು ತನ್ನ ತಂದೆಯ ಮಗಳಾದ ತನ್ನ ಸಹೋದರಿಯನ್ನೇ ಭಂಗಪಡಿಸಿದ್ದಾನೆ. ನಿನ್ನಲ್ಲಿ ರಕ್ತ ಚೆಲ್ಲುವ ಹಾಗೆ ಲಂಚತಿಂದಿದ್ದಾರೆ; ಬಡ್ಡಿಯನ್ನೂ ಲಾಭವನ್ನೂ ತೆಗೆದುಕೊಂಡಿದ್ದಾರೆ; ಬಲಾತ್ಕಾರದಿಂದ ನಿನ್ನ ನೆರೆಯವರಲ್ಲಿ ದುರ್ಲಾಭಮಾಡಿಕೊಂಡಿದ್ದಾರೆ; ನನ್ನನ್ನು ಮರೆತುಬಿಟ್ಟಿ ದ್ದಾರೆಂದು ದೇವರಾದ ಕರ್ತನು ಹೇಳುತ್ತಾನೆ.
- Micah 3:1–3 ಮೀಕ 3:1–3ಆಗ ನಾನು ಹೇಳಿದ್ದೇನಂದರೆ--ಯಾಕೋಬಿನ ಮುಖ್ಯಸ್ಥರೇ, ಇಸ್ರಾಯೇ ಲಿನ ಮನೆತನದ ಪ್ರಧಾನರೇ, ಈಗ ಕೇಳಿರಿ; ನ್ಯಾಯ ವನ್ನು ತಿಳಿಯುವದು ನಿಮ್ಮದಲ್ಲವೋ? ಒಳ್ಳೇದನ್ನು ಹಗೆಮಾಡಿ ಕೆಟ್ಟದ್ದನ್ನು ಪ್ರೀತಿಮಾಡುವವರೇ, ಅವರ ಮೇಲಿನಿಂದ ಅವರ ಚರ್ಮವನ್ನೂ ಅವರ ಎಲುಬುಗಳ ಮೇಲಿನಿಂದ ಅವರ ಮಾಂಸವನ್ನೂ ಕಿತ್ತುಕೊಳ್ಳು ವವರೇ, ನನ್ನ ಜನರ ಮಾಂಸವನ್ನು ತಿಂದು ಅವರ ಚರ್ಮವನ್ನು ಸುಲಿದು ಅವರ ಎಲುಬುಗಳನ್ನು ಮುರಿದು ಮಡಿಕೆಯಂತೆ ಅವರ ಮಾಂಸವನ್ನು ತುಂಡು ಮಾಡಿ ಕೊಪ್ಪರಿಗೆಯಲ್ಲಿ ಹಾಕುತ್ತೀರಿ.
Original words (Hebrew)
- fountain · H953בּוֹר bôwr
- out · H6979קוּר qûwr
- waters · H4325מַיִם mayim
- out · H6979קוּר qûwr
- wickedness · H7451רַע raʻ
- violence · H2555חָמָס châmâç
- spoil · H7701שֹׁד shôd
- heard · H8085שָׁמַע shâmaʻ
- me · H6440פָּנִים pânîym
- continually · H8548תָּמִיד tâmîyd
- grief · H2483חֳלִי chŏlîy
- wounds · H4347מַכָּה makkâh