Jeremiah · chapter 6 · verse 8
Jeremiah 6:8 in Kannada
ಯೆರೂಸಲೇಮೇ, ನನ್ನ ಪ್ರಾಣವು ನಿನ್ನ ಕಡೆಯಿಂದ ಹೊರಟು ಹೋಗದ ಹಾಗೆ ನಾನು ನಿಮ್ಮನ್ನು ಹಾಳಾಗಿಯೂ ನಿವಾಸಿಗಳಿಲ್ಲದ ದೇಶವಾಗಿಯೂ ಮಾಡದ ಹಾಗೆ ಶಿಕ್ಷಣವನ್ನು ತಕ್ಕೋ.
Yeroosaleme, nanna praanavu ninna kadeyinda horatu hogada haage naanu nimmannu haalaagiyoo nivaasigalillada deshavaagiyoo maadada haage shikshanavannu takko.
Jeremiah 6:8 in English
- King James Version (KJV)
- Be thou instructed, O Jerusalem, lest my soul depart from thee; lest I make thee desolate, a land not inhabited.
- World English Bible (WEB)
- Be instructed, Jerusalem, lest my soul be alienated from you, lest I make you a desolation, an uninhabited land.”
- American Standard Version (ASV)
- Be thou instructed, O Jerusalem, lest my soul be alienated from thee; lest I make thee a desolation, a land not inhabited.
- Bible in Basic English (BBE)
- Undergo teaching, O Jerusalem, or my soul will be turned away from you, and I will make you a waste, an unpeopled land.
- Darby Translation (DBY)
- Be thou instructed, Jerusalem, lest my soul be alienated from thee; lest I make thee a desolation, a land not inhabited.
- Webster's Bible (WBS)
- Be thou instructed, O Jerusalem, lest my soul depart from thee; lest I make thee desolate, a land not inhabited.
- Young's Literal Translation (YLT)
- Be instructed, O Jerusalem, Lest My soul be alienated from thee, Lest I make thee a desolation, a land not inhabited.
Read in context
- 6ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಮರಗಳನ್ನು ಕಡಿಯಿರಿ; ಯೆರೂಸಲೇಮಿಗೆ ವಿರೋಧವಾಗಿ ದಿಬ್ಬ ಹಾಕಿರಿ; ವಿಚಾರಿಸಲ್ಪಡತಕ್ಕ ಪಟ್ಟಣವು ಇದೇ; ಅವಳಲ್ಲಿ ತುಂಬ ಬಲಾತ್ಕಾರ ಅದೆ.
- 7ಬುಗ್ಗೆಯು ತನ್ನ ನೀರನ್ನು ಹರಿಯ ಮಾಡುವ ಹಾಗೆ ಅವಳು ತನ್ನ ಕೆಟ್ಟತನವನ್ನು ಹರಿಯ ಮಾಡುತ್ತಾಳೆ; ಬಲಾತ್ಕಾರವೂ ಸುಲಿಗೆಯೂ ಅವಳಲ್ಲಿ ಕೇಳಬರುತ್ತವೆ. ದುಃಖವೂ ಗಾಯಗಳೂ ಯಾವಾ ಗಲೂ ನನ್ನ ಮುಂದೆ ಅವೆ.
- 8ಯೆರೂಸಲೇಮೇ, ನನ್ನ ಪ್ರಾಣವು ನಿನ್ನ ಕಡೆಯಿಂದ ಹೊರಟು ಹೋಗದ ಹಾಗೆ ನಾನು ನಿಮ್ಮನ್ನು ಹಾಳಾಗಿಯೂ ನಿವಾಸಿಗಳಿಲ್ಲದ ದೇಶವಾಗಿಯೂ ಮಾಡದ ಹಾಗೆ ಶಿಕ್ಷಣವನ್ನು ತಕ್ಕೋ.
- 9ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಇಸ್ರಾ ಯೇಲಿನ ಶೇಷವನ್ನು ದ್ರಾಕ್ಷೇಗಿಡದ ಹಾಗೆ ಪೂರ್ಣ ವಾಗಿ ಹಕ್ಕಲಾಯುವರು, ದ್ರಾಕ್ಷೇ ಕೂಡಿಸುವವನ ಹಾಗೆ ನಿನ್ನ ಕೈಯನ್ನು ಪುಟ್ಟಿಗಳಲ್ಲಿ ಹಿಂದಕ್ಕೆ ತಿರುಗಿಸು.
- 10ನಾನು ಯಾರ ಸಂಗಡ ಮಾತನಾಡಲಿ? ಅವರು ಕೇಳುವ ಹಾಗೆ ಯಾರನ್ನು ಎಚ್ಚರಿಸಲಿ? ಇಗೋ, ಅವರು ಆಲೈಸಲಾರದ ಹಾಗೆ ಅವರ ಕಿವಿ ಪರಿಛೇದನೆ ಯಿಲ್ಲದಾಗಿದೆ; ಇಗೋ, ಕರ್ತನ ವಾಕ್ಯವು ಅವರಿಗೆ ನಿಂದೆಯಾಗಿದೆ, ಅದರಲ್ಲಿ ಅವರಿಗೆ ಸಂತೋಷವಿಲ್ಲ.
Cross references
- Ezekiel 23:18 ಯೆಹೆಜ್ಕೇಲನು 23:18ಹೀಗೆ ಅವಳು ವ್ಯಭಿಚಾರವನ್ನು ಕಂಡುಹಿಡಿದು ತನ್ನ ಬೆತ್ತಲೆತನವನು ಬಯಲುಪಡಿಸಿ ಕೊಂಡಾಗ, ತನ್ನ ಅನುರಾಗವು ಮೊದಲು ಇವಳ ಸಹೋದರಿಯಿಂದ ಅಗಲಿದ ಹಾಗೆ ಇವಳಿಂದಲೂ ಅಗಲಿತು.
- Hosea 9:12 ಹೋಶೇಯ 9:12ಅವರು ತಮ್ಮ ಮಕ್ಕಳನ್ನು ಬೆಳೆಸಿದಾಗ್ಯೂ ಒಬ್ಬ ಮನುಷ್ಯನು ಉಳಿಯದ ಹಾಗೆ ನಾನು ಅವರನ್ನು ಅನಾಥರನ್ನಾಗಿ ಮಾಡುವೆನು. ಹೌದು, ನಾನು ಅವ ರನ್ನು ಬಿಟ್ಟು ಹೋಗುವಾಗ ಅವರಿಗೆ ಅಯ್ಯೋ!
- Jeremiah 17:23 ಯೆರೆಮೀಯ 17:23ಆದರೆ ಅವರು ವಿಧೇಯರಾಗಲಿಲ್ಲ; ಕಿವಿಗೊಟ್ಟು ಕೇಳಲಿಲ್ಲ; ವಿಧೇಯರಾಗದ ಹಾಗೆಯೂ ಉಪದೇಶ ಹೊಂದದ ಹಾಗೆಯೂ ತಮ್ಮ ಕುತ್ತಿಗೆಯನ್ನು ಬೊಗ್ಗಿಸದ ಹಾಗೆಯೂ ಮಾಡಿಕೊಂಡರು.
- Jeremiah 35:13–15 ಯೆರೆಮೀಯ 35:13–15ನೀನು ಹೋಗಿ ಯೆಹೂದದ ಮನುಷ್ಯರಿಗೂ ಯೆರೂಸಲೇ ಮಿನ ನಿವಾಸಿಗಳಿಗೂ ಹೇಳತಕ್ಕದ್ದೇನಂದರೆ--ನೀವು ನನ್ನ ವಾಕ್ಯಗಳನ್ನು ಕೇಳುವ ಹಾಗೆ ಶಿಕ್ಷಣ ತಕ್ಕೊಳ್ಳು ವದಿಲ್ಲವೋ ಎಂದು ಕರ್ತನು ಅನ್ನುತ್ತಾನೆ. ರೇಕಾಬನ ಮಗನಾದ ಯೋನಾದಾಬನು ತನ್ನ ಕುಮಾರರಿಗೆ ಅವರು ದ್ರಾಕ್ಷಾರಸ ಕುಡಿಯದ ಹಾಗೆ ಆಜ್ಞಾಪಿಸಿದ ಮಾತುಗಳು ನಡಿಸಲ್ಪಟ್ಟಿವೆ; ಅವರು ಇಂದಿನ ವರೆಗೂ ಅದನ್ನು ಕುಡಿಯದೆ ತಮ್ಮ ತಂದೆಯ ಆಜ್ಞೆಗೆ ವಿಧೇಯರಾಗಿದ್ದಾರೆ; ಆದರೆ ನಾನು ಬೆಳಿಗ್ಗೆ ಎದ್ದು ನಿಮ್ಮ ಸಂಗಡ ಮಾತನಾಡಿದಾಗ್ಯೂ ನೀವು ನನಗೆ ಕಿವಿಗೊಡಲಿಲ್ಲ. ಬೆಳಿಗ್ಗೆ ಎದ್ದು ನನ್ನ ಸಕಲ ಸೇವಕರಾದ ಪ್ರವಾದಿಗಳನ್ನು ಸಹ ನಿಮ್ಮ ಬಳಿಗೆ ಕಳುಹಿಸಿ--ಒಬ್ಬೊಬ್ಬನು ತನ್ನ ತನ್ನ ಕೆಟ್ಟ ಮಾರ್ಗವನ್ನು ಬಿಟ್ಟು ತಿರುಗಿ ನಿಮ್ಮ ಕ್ರಿಯೆಗಳನ್ನು ಸರಿಮಾಡಿ ಬೇರೆ ದೇವರುಗಳನ್ನು ಸೇವಿಸದೆ ಅವುಗಳನ್ನು ಹಿಂಬಾಲಿಸದೆ ಇರ್ರಿ; ಆಗ ನಾನು ನಿಮಗೂ ನಿಮ್ಮ ತಂದೆಗಳಿಗೂ ಕೊಟ್ಟ ದೇಶದಲ್ಲಿ ವಾಸವಾಗಿರುವಿರಿ ಎಂದು ನಿಮಗೆ ಹೇಳಿಸಿದರೂ ನೀವು ಕಿವಿಗೊಡಲಿಲ್ಲ ನನ್ನ ಮಾತನ್ನೂ ಕೇಳಲಿಲ್ಲ.
- Psalm 50:17 ಕೀರ್ತನೆಗಳು 50:17ನೀನು ಶಿಕ್ಷಣವನ್ನು ಹಗೆಮಾಡಿ ನನ್ನ ವಾಕ್ಯಗಳನ್ನು ನಿನ್ನ ಹಿಂದೆ ಹಾಕುತ್ತೀಯಲ್ಲಾ.
- Jeremiah 32:33 ಯೆರೆಮೀಯ 32:33ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ನಾನು ಅವರಿಗೆ ಬೋಧಿಸಿದೆನು. ಬೆಳಿಗ್ಗೆ ಎದ್ದು ಬೋಧಿಸಿದೆನು, ಆದಾಗ್ಯೂ ಉಪದೇಶ ಹೊಂದುವದಕ್ಕೆ ಅವರು ಕಿವಿ ಗೊಡಲಿಲ್ಲ.
- Zephaniah 3:7 ಚೆಫನ್ಯ 3:7ನಾನು--ನಿಶ್ಚಯವಾಗಿ ನೀನು ನನಗೆ ಭಯಪಟ್ಟು ಶಿಕ್ಷಣವನ್ನು ಹೊಂದುವಿ; ಹೀಗೆ ನಾನು ಅವರಿಗೆ ಶಿಕ್ಷೆ ವಿಧಿಸಿದರೂ ಅವರ ನಿವಾಸವು ಕಡಿದು ಬಿಡಲ್ಪ ಡುವದಿಲ್ಲ; ಆದರೆ ಅವರು ಬೇಗನೆ ಎದ್ದು ತಮ್ಮ ಕ್ರಿಯೆಗಳನ್ನೆಲ್ಲಾ ಕೆಡಿಸಿಬಿಟ್ಟರು ಅಂದೆನು.
- Psalm 2:10 ಕೀರ್ತನೆಗಳು 2:10ಆದದರಿಂದ ಓ ಅರಸುಗಳೇ, ಈಗ ಜ್ಞಾನವಂತ ರಾಗಿರಿ; ಭೂ ನ್ಯಾಯಾಧಿಪತಿಗಳೇ, ಶಿಕ್ಷಣ ಪಡೆಯಿರಿ.
- Deuteronomy 32:29 ಧರ್ಮೋಪದೇಶಕಾಂಡ 32:29ಅವರು ಜ್ಞಾನವಂತರಾಗಿ ಇದರ ವಿಷಯ ಬುದ್ಧಿ ತಂದುಕೊಂಡು ತಮ್ಮ ಕಡೇಕಾಲಕ್ಕಾಗಿ ಗ್ರಹಿಕೆಯುಳ್ಳ ವರಾದರೆ ಎಷ್ಟೋ ಒಳ್ಳೇದು!
- Jeremiah 31:19 ಯೆರೆಮೀಯ 31:19ನಿಶ್ಚಯವಾಗಿ ನಾನು ತಿರುಗಿಕೊಂಡ ಮೇಲೆ ಪಶ್ಚಾತ್ತಾಪಪಟ್ಟೆನು; ಉಪದೇಶಹೊಂದಿದ ಮೇಲೆ ತೊಡೆಯ ಮೇಲೆ ಬಡಕೊಂಡೆನು; ನಾಚಿಕೆಪಟ್ಟೆನು, ಹೌದು, ಅವಮಾನ ಹೊಂದಿದೆನು; ನನ್ನ ಯೌವನದ ನಿಂದೆಯನ್ನು ತಾಳಿಕೊಂಡೆನು.
- Jeremiah 2:15 ಯೆರೆಮೀಯ 2:15ಪ್ರಾಯದ ಸಿಂಹಗಳು ಅವನಿಗೆ ವಿರೋಧವಾಗಿ ಘರ್ಜಿಸಿ, ಅಬ್ಬ ರಿಸುತ್ತವೆ. ಅವನ ದೇಶವನ್ನು ಹಾಳುಮಾಡುತ್ತವೆ; ಅವನ ಪಟ್ಟಣಗಳು ನಿವಾಸವಿಲ್ಲದೆ ಸುಟ್ಟುಹೋಗಿವೆ.
- Jeremiah 4:14 ಯೆರೆಮೀಯ 4:14ಯೆರೂಸಲೇಮೇ, ನೀನು ರಕ್ಷಿಸಲ್ಪಡುವ ಹಾಗೆ ನಿನ್ನ ಹೃದಯವನ್ನು ಕೆಟ್ಟತನದಿಂದ ತೊಳೆದುಕೋ; ನಿನ್ನ ವ್ಯರ್ಥ ಆಲೋಚನೆಗಳು ಎಷ್ಟರ ವರೆಗೆ ನಿನ್ನಲ್ಲಿ ತಂಗುವವು?