Jeremiah · chapter 7 · verse 10
Jeremiah 7:10 in Kannada
ಆಮೇಲೆ ಬಂದು ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯದಲ್ಲಿ ನನ್ನ ಮುಂದೆ ನಿಂತು ಕೊಂಡು--ನಾವು ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲ್ಪಟ್ಟಿದ್ದೇವೆಂದು ಹೇಳು ವಿರೋ?
Aamele bandu nanna hesarinalli kareyalpatta ee aalayadalli nanna munde nintu kondu--naavu ee asahyavaadavugalannellaa maaduva haage oppisalpattiddevendu helu viro?
Jeremiah 7:10 in English
- King James Version (KJV)
- And come and stand before me in this house, which is called by my name, and say, We are delivered to do all these abominations?
- World English Bible (WEB)
- then come and stand before me in this house, which is called by my name, and say, ‘We are delivered,’ that you may do all these abominations?
- American Standard Version (ASV)
- and come and stand before me in this house, which is called by my name, and say, We are delivered; that ye may do all these abominations?
- Bible in Basic English (BBE)
- And come and take your place before me in this house, which is named by my name, and say, We have been made safe; so that you may do all these disgusting things?
- Darby Translation (DBY)
- then ye come and stand before me, in this house which is called by my name, and say, We are delivered, — in order to do all these abominations!
- Webster's Bible (WBS)
- And come and stand before me in this house, which is called by my name, and say, We are delivered to do all these abominations?
- Young's Literal Translation (YLT)
- And ye have come in and stood before Me, In this house on which My name is called, And have said, 'We have been delivered,' In order to do all these abominations.
Read in context
- 8ಇಗೋ, ನೀವು ಪ್ರಯೋಜನವಿಲ್ಲದ ಸುಳ್ಳಾದ ಮಾತುಗಳಲ್ಲಿ ನಂಬಿಕೆ ಇಡುತ್ತೀರಿ.
- 9ಕಳ್ಳತನ ಹತ್ಯಹಾದರ ಇವುಗಳನ್ನು ನೀವು ನಡಿಸುವಿರೋ? ಸುಳ್ಳುಪ್ರಮಾಣವನ್ನು ಮಾಡಿ ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರು ಗಳನ್ನು ಹಿಂಬಾಲಿಸಿ
- 10ಆಮೇಲೆ ಬಂದು ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯದಲ್ಲಿ ನನ್ನ ಮುಂದೆ ನಿಂತು ಕೊಂಡು--ನಾವು ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲ್ಪಟ್ಟಿದ್ದೇವೆಂದು ಹೇಳು ವಿರೋ?
- 11ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯವು ನಿಮ್ಮ ಕಣ್ಣುಗಳಲ್ಲಿ ಕಳ್ಳರ ಗವಿಯಾಯಿತೋ? ಇಗೋ, ನಾನೇ ಅದನ್ನು ನೋಡಿದ್ದೇನೆಂದು ಕರ್ತನು ಅನ್ನುತ್ತಾನೆ.
- 12ಆದರೆ ಈಗ ಶಿಲೋವಿನಲ್ಲಿದ್ದ ನನ್ನ ಸ್ಥಳಕ್ಕೆ ಅಂದರೆ ನಾನು ಮೊದಲು ನನ್ನ ಹೆಸರನ್ನು ಇಟ್ಟಲ್ಲಿಗೆ ಹೋಗಿರಿ; ಅದಕ್ಕೆ ನಾನು ನನ್ನ ಜನರಾದ ಇಸ್ರಾಯೇಲಿನ ಕೆಟ್ಟತನದ ನಿಮಿತ್ತ ಏನು ಮಾಡಿದೆನೆಂದು ನೋಡಿರಿ.
Cross references
- Jeremiah 32:34 ಯೆರೆಮೀಯ 32:34ಆದರೆ ನನ್ನ ಹೆಸರಿನಿಂದ ಕರೆಯ ಲ್ಪಟ್ಟಿರುವ ಮನೆಯಲ್ಲಿ ಅದನ್ನು ಅಪವಿತ್ರ ಮಾಡುವ ಹಾಗೆ ತಮ್ಮ ಅಸಹ್ಯಗಳನ್ನು ಇಟ್ಟಿದ್ದಾರೆ.
- Ezekiel 23:39 ಯೆಹೆಜ್ಕೇಲನು 23:39ತಮ್ಮ ಮಕ್ಕಳನ್ನು ವಿಗ್ರಹಗಳಿಗೋಸ್ಕರ ಕೊಂದು ಹಾಕಿದ ಮೇಲೆ ಅದೇ ದಿನದಲ್ಲಿ ನನ್ನ ಪರಿಶುದ್ಧ ಸ್ಥಳವನ್ನು ಕೆಡಿಸುವದಕ್ಕೆ ಬಂದರು. ಇಗೋ, ಅವರು ನನ್ನ ಆಲಯದ ಮಧ್ಯದಲ್ಲಿಯೇ ಹೀಗೆ ಮಾಡಿದ್ದಾರೆ;
- Ezekiel 23:37 ಯೆಹೆಜ್ಕೇಲನು 23:37ಹೇಗಂದರೆ, ಅವರು ವ್ಯಭಿಚಾರ ಮಾಡಿದ್ದಾರೆ, ರಕ್ತವು ಅವರ ಕೈಗಳಲ್ಲಿ ಅದೆ; ತಮ್ಮ ವಿಗ್ರಹಗಳಿಂದ ವ್ಯಭಿಚಾರ ಮಾಡಿದ್ದಾರೆ, ನನಗೆ ಹೆತ್ತ ತಮ್ಮ ಗಂಡು ಮಕ್ಕಳನ್ನು ಆ ವಿಗ್ರಹಗಳಿಗೆ ಬಲಿಯಾಗಿ ಕೊಟ್ಟಿದ್ದಾರೆ.
- Jeremiah 7:11 ಯೆರೆಮೀಯ 7:11ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯವು ನಿಮ್ಮ ಕಣ್ಣುಗಳಲ್ಲಿ ಕಳ್ಳರ ಗವಿಯಾಯಿತೋ? ಇಗೋ, ನಾನೇ ಅದನ್ನು ನೋಡಿದ್ದೇನೆಂದು ಕರ್ತನು ಅನ್ನುತ್ತಾನೆ.
- Jeremiah 7:14 ಯೆರೆಮೀಯ 7:14ಆದಕಾರಣ ನನ್ನ ಹೆಸರಿನಿಂದ ಕರೆ ಯಲ್ಪಟ್ಟಂಥ ನೀವು ನಂಬಿಕೊಂಡಿರುವಂಥ ಈ ಆಲಯಕ್ಕೂ ನಾನು ನಿಮಗೂ ನಿಮ್ಮ ಪಿತೃಗಳಿಗೂ ಕೊಟ್ಟ ಸ್ಥಳಕ್ಕೂ ಶಿಲೋವಿಗೆ ಮಾಡಿದ ಹಾಗೆ ಮಾಡುವೆನು.
- Jeremiah 7:30 ಯೆರೆಮೀಯ 7:30ಯೆಹೂದನ ಮಕ್ಕಳು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದಾರೆಂದು ಕರ್ತನು ಅನ್ನುತ್ತಾನೆ; ನನ್ನ ಹೆಸರಿನಿಂದ ಕರೆಯಲ್ಪಟ್ಟ ಆಲಯದಲ್ಲಿ ಅದನ್ನು ಅಪವಿತ್ರ ಮಾಡುವದಕ್ಕೆ ತಮ್ಮ ಅಸಹ್ಯವಾದ ವುಗಳನ್ನು ಇಟ್ಟಿದ್ದಾರೆ.
- Jeremiah 34:15 ಯೆರೆಮೀಯ 34:15ಈಗ ನೀವು ತಿರುಗಿ ಕೊಂಡು ನನ್ನ ದೃಷ್ಟಿಯಲ್ಲಿ ಸರಿಯಾದದ್ದನ್ನು ಮಾಡಿ ಒಬ್ಬೊಬ್ಬನು ತನ್ನ ತನ್ನ ನೆರೆಯವನಿಗೆ ಬಿಡುಗಡೆಯನ್ನು ಸಾರಿದಿರಿ; ನನ್ನ ಹೆಸರಿನಿಂದ ಕರೆಯಲ್ಪಟ್ಟಿರುವ ಮನೆ ಯಲ್ಲಿ ನನ್ನ ಮುಂದೆ ಒಡಂಬಡಿಕೆಯನ್ನು ಮಾಡಿದಿರಿ.
- Ezekiel 20:39 ಯೆಹೆಜ್ಕೇಲನು 20:39ನಿಮ್ಮ ವಿಷಯ ವಾಗಿ ಓ ಇಸ್ರಾಯೇಲಿನ ಮನೆತನದವರೇ, ದೇವ ರಾದ ಕರ್ತನು ಹೀಗೆ ಹೇಳುತ್ತಾನೆ--ನೀವು ನನಗೆ ಕಿವಿಗೊಡದಿದ್ದರೆ ಹೋಗಿ ಇನ್ನು ಮೇಲೆಯೂ ನಿಮ್ಮ ನಿಮ್ಮ ವಿಗ್ರಹಗಳನ್ನು ಸೇವಿಸಿರಿ; ಆದರೆ ನಿಮ್ಮ ದಾನಗ ಳಿಂದಲೂ ವಿಗ್ರಹಗಳಿಂದಲೂ ಇನ್ನು ಮೇಲೆ ನನ್ನ ಪರಿಶುದ್ಧ ಹೆಸರನ್ನು ಅಪವಿತ್ರಪಡಿಸಬೇಡಿರಿ.
- John 13:18 ಯೋಹಾನನು 13:18ನಾನು ನಿಮ್ಮೆಲ್ಲರ ವಿಷಯದಲ್ಲಿ ಮಾತ ನಾಡುವದಿಲ್ಲ; ನಾನು ಆರಿಸಿಕೊಂಡವರನ್ನು ಬಲ್ಲೆನು; ಆದರೆ--ನನ್ನೊಂದಿಗೆ ರೊಟ್ಟಿಯನ್ನು ತಿನ್ನುವವನು ನನಗೆ ವಿರೋಧವಾಗಿ ತನ್ನ ಹಿಮ್ಮಡಿಯನ್ನು ಎತ್ತಿದ್ದಾನೆ ಎಂಬ ಬರಹವು ನೆರವೇರಬೇಕಾಗಿದೆ.
- Isaiah 1:10–15 ಯೆಶಾಯ 1:10–15ಸೊದೋಮಿನ ಅಧಿಪತಿಗಳೇ, ನೀವು ಕರ್ತನ ಮಾತನ್ನು ಕೇಳಿರಿ; ಗೊಮೋರದ ಪ್ರಜೆಗಳೇ, ನಮ್ಮ ದೇವರ ನ್ಯಾಯಪ್ರಮಾಣಕ್ಕೆ ಕಿವಿಗೊಡಿರಿ. ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ. ನೀವು ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳ ಬೇಕೆಂದು ಬರುತ್ತೀರಲ್ಲಾ; ನನ್ನ ಪ್ರಾಕಾರಗಳನ್ನು ತುಳಿ ಯಲು ಯಾರು ನಿಮ್ಮನ್ನು ಕೇಳಿಕೊಂಡರು? ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತಾರದಿರಿ, ಧೂಪವು ನನಗೆ ಅಸಹ್ಯ, ಹುಣ್ಣಿಮೆಗಳೂ ಸಬ್ಬತ್ತುಗಳೂ ಸಭೆಗಳು ಕೂಡುವದೂ ಇವು ಬೇಡ; ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ನಾನು ಸಹಿಸಲಾರೆನು. ನಿಮ್ಮ ಹುಣ್ಣಿಮೆಗಳನ್ನೂ ನೇಮಕವಾದ ಹಬ್ಬಗಳನ್ನೂ ನನ್ನ ಆತ್ಮವು ಹಗೆಮಾಡುತ್ತದೆ. ಅವು ನನಗೆ ಭಾರ, ಸಹಿಸಲು ಬೇಸರ. ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.
- Isaiah 48:2 ಯೆಶಾಯ 48:2ಅವರು ತಾವು ಪರಿಶುದ್ಧ ಪಟ್ಟಣದವರು ಎಂದು ಇಸ್ರಾಯೇಲಿನ ದೇವರ ಮೇಲೆ ಆತುಕೊಳ್ಳುತ್ತಾರೆ. ಸೈನ್ಯಗಳ ಕರ್ತನು ಎಂಬದು ಆತನ ಹೆಸರು.
- John 18:28 ಯೋಹಾನನು 18:28ಆಮೇಲೆ ಅವರು ಯೇಸುವನ್ನು ಕಾಯಫನ ಬಳಿಯಿಂದ ನ್ಯಾಯಾಲಯಕ್ಕೆ ಸಾಗಿಸಿಕೊಂಡು ಹೋದರು. ಆಗ ಮುಂಜಾನೆಯಾಗಿತ್ತು. ತಾವು ಮೈಲಿಗೆಯಾಗಿ ಪಸ್ಕದ ಊಟ ಮಾಡುವದಕ್ಕೆ ಅಡ್ಡಿಯಾದೀತೆಂದು ಅವರು ನ್ಯಾಯಾಲಯದ ಒಳಗೆ ಹೋಗಲಿಲ್ಲ.