Jeremiah · chapter 7 · verse 21
Jeremiah 7:21 in Kannada
ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ದಹನಬಲಿಗಳನ್ನು ನಿಮ್ಮ ಬಲಿಗಳ ಸಂಗಡ ಕೂಡಿಸಿ ಮಾಂಸವನ್ನು ತಿನ್ನಿರಿ.
Israayelina devaraada sainyagala kartanu heege heluttaane--nimma dahanabaligalannu nimma baligala sangada koodisi maansavannu tinniri.
Jeremiah 7:21 in English
- King James Version (KJV)
- Thus saith the LORD of hosts, the God of Israel; Put your burnt offerings unto your sacrifices, and eat flesh.
- World English Bible (WEB)
- The LORD of Armies, the God of Israel says: “Add your burnt offerings to your sacrifices and eat meat.
- American Standard Version (ASV)
- Thus saith Jehovah of hosts, the God of Israel: Add your burnt-offerings unto your sacrifices, and eat ye flesh.
- Bible in Basic English (BBE)
- These are the words of the Lord of armies, the God of Israel: Put your burned offerings with your offerings of beasts, and take flesh for your food.
- Darby Translation (DBY)
- Thus saith Jehovah of hosts, the God of Israel: Add your burnt-offerings to your sacrifices, and eat the flesh.
- Webster's Bible (WBS)
- Thus saith the LORD of hosts, the God of Israel; Put your burnt-offerings to your sacrifices, and eat flesh.
- Young's Literal Translation (YLT)
- Thus said Jehovah of Hosts, God of Israel, Your burnt-offerings add to your sacrifices, And eat ye flesh.
Read in context
- 19ಕರ್ತನು ಅನ್ನುತ್ತಾನೆ--ಅವರು ನಿನಗೆ ಕೋಪವನ್ನೆಬ್ಬಿಸುತ್ತಾರೋ? ಅವರ ಸ್ವಂತ ಮುಖ ಗಳು ಗಲಿಬಿಲಿಗೊಳ್ಳುವ ಹಾಗೆ ತಮಗೆ ತಾವೇ ರೇಗಿಸಿಕೊಳ್ಳುತ್ತಾರಲ್ಲವೋ?
- 20ಆದದರಿಂದ ಕರ್ತ ನಾದ ದೇವರು ಹೀಗೆ ಹೇಳುತ್ತಾನೆ--ಇಗೋ, ಈ ಸ್ಥಳದ ಮೇಲೆಯೂ ಮನುಷ್ಯರ ಮೇಲೆಯೂ ಮೃಗಗಳ ಮೇಲೆಯೂ ಹೊಲದ ಮರಗಳ ಮೇಲೆಯೂ ಭೂಮಿಯ ಫಲದ ಮೇಲೆಯೂ ನನ್ನ ಕೋಪವೂ ಮತ್ತು ಉಗ್ರತೆಯೂ ಹೊಯ್ಯಲ್ಪಡುವದು; ಅದು ಉರಿಯುವದು ಆರಿಹೋಗುವದಿಲ್ಲ.
- 21ಇಸ್ರಾಯೇಲಿನ ದೇವರಾದ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ನಿಮ್ಮ ದಹನಬಲಿಗಳನ್ನು ನಿಮ್ಮ ಬಲಿಗಳ ಸಂಗಡ ಕೂಡಿಸಿ ಮಾಂಸವನ್ನು ತಿನ್ನಿರಿ.
- 22ನಾನು ನಿಮ್ಮ ಪಿತೃಗಳನ್ನು ಐಗುಪ್ತ ದೇಶದೊಳಗಿಂದ ಹೊರಗೆ ಬರಮಾಡಿದ ದಿನದಲ್ಲಿ ದಹನ ಬಲಿಗಳ ಮತ್ತು ಬಲಿಗಳ ಕುರಿತು ಅವರ ಸಂಗಡ ಮಾತಾಡಲಿಲ್ಲ, ಇಲ್ಲವೆ ಅವರಿಗೆ ಆಜ್ಞಾಪಿಸಲಿಲ್ಲ.
- 23ಆದರೆ ನಾನು ಅವರಿಗೆ--ನನ್ನ ಶಬ್ದಕ್ಕೆ ವಿಧೇಯರಾಗಿರಿ. ಆಗ ನಾನು ನಿಮ್ಮ ದೇವರಾಗಿರುವೆನು, ನೀವು ನನ್ನ ಜನರಾಗಿರುವಿರಿ; ನಿಮಗೆ ಒಳ್ಳೇದಾಗುವ ಹಾಗೆ ನಾನು ನಿಮಗೆ ಆಜ್ಞಾ ಪಿಸಿದ ಎಲ್ಲಾ ಮಾರ್ಗಗಳಲ್ಲಿ ನಡೆಯಿರಿ ಎಂದು ಆಜ್ಞಾ ಪಿಸಿ ಹೇಳಿದೆನು.
Cross references
- Hosea 8:13 ಹೋಶೇಯ 8:13ಅವರು ಯಜ್ಞದ ಮಾಂಸವನ್ನು ಬಲಿಯಾಗಿ ಅರ್ಪಿಸಿ ನನ್ನ ಕಾಣಿಕೆಗಳಿಂದ ಬಲಿಗಳನ್ನು ತಿನ್ನುತ್ತಾರೆ; ಆದರೆ ಕರ್ತನು ಅವುಗಳಿಗೆ ಮೆಚ್ಚುವದಿಲ್ಲ. ಈಗ ಅವರ ಅಕ್ರಮಗಳನ್ನು ಜ್ಞಾಪಕ ಮಾಡಿಕೊಂಡು ಅವರ ಪಾಪಗಳನ್ನು ವಿಚಾ ರಿಸುವನು; ಅವರು ಐಗುಪ್ತಕ್ಕೆ ಹಿಂದಿರುಗುವರು.ಇಸ್ರಾಯೇಲು ತನ್ನ ನಿರ್ಮಾಣಿಕ ನನ್ನು ಮರೆತುಬಿಟ್ಟು ಆಲಯಗಳನ್ನು ಕಟ್ಟಿಕೊಂಡಿದೆ; ಯೆಹೂದವು ಸಹ ಕೋಟೆಯುಳ್ಳ ಪಟ್ಟಣಗಳನ್ನು ಹೆಚ್ಚು ಮಾಡಿಕೊಂಡಿದೆ; ಆದರೆ ನಾನು ಅದರ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು. ಅದು ಅವುಗಳ ಅರಮನೆಗಳನ್ನು ನುಂಗಿಬಿಡುವದು.
- Jeremiah 6:20 ಯೆರೆಮೀಯ 6:20ಶೇಬದಿಂದ ಸಾಂಬ್ರಾಣಿಯೂ ದೂರ ದೇಶದಿಂದ ಒಳ್ಳೇ ಸುಗಂಧವೂ ನನಗೆ ಬರುವದು ಯಾತಕ್ಕೆ? ನಿಮ್ಮ ದಹನಬಲಿಗಳು ಮೆಚ್ಚಿಕೆಯಾಗಲಿಲ್ಲ; ನಿಮ್ಮ ಬಲಿಗಳು ನನಗೆ ರುಚಿ ಇಲ್ಲ.
- Amos 5:21–23 ಆಮೋಸ 5:21–23ನಿಮ್ಮ ನಿಮ್ಮ ಪರಿಶುದ್ಧ ಸಭೆಗಳನ್ನು ನಾನು ಮೂಸುವದಿಲ್ಲ. ನೀವು ನನಗೆ ದಹನಬಲಿಗಳನ್ನೂ ಆಹಾರ ಅರ್ಪಣೆಗಳನ್ನೂ ಅರ್ಪಿಸಿದರೂ ನಾನು ಅವುಗಳನ್ನು ಅಂಗೀ ಕರಿಸುವದಿಲ್ಲ, ಇಲ್ಲವೆ ನಿಮ್ಮ ಕೊಬ್ಬಿದ ಪ್ರಾಣಿಗಳ ಸಮಾಧಾನದ ಬಲಿಗಳನ್ನು ಲಕ್ಷಿಸುವದಿಲ್ಲ. ನಿಮ್ಮ ಹಾಡುಗಳ ಬೊಬ್ಬೆಗಳನ್ನು ನನ್ನಿಂದ ತೊಲಗಿಸಿರಿ; ನಿಮ್ಮ ವೀಣೆಗಳ ಮಧುರ ಸ್ವರವನ್ನು ನಾನು ಕೇಳುವದಿಲ್ಲ.
- Isaiah 1:11–15 ಯೆಶಾಯ 1:11–15ನೀವು ಲೆಕ್ಕವಿಲ್ಲದಷ್ಟು ಯಜ್ಞಗಳನ್ನು ನನಗೆ ಅರ್ಪಿಸುವ ಉದ್ದೇಶವೇನು? ಎಂದು ಕರ್ತನು ನುಡಿಯುತ್ತಾನೆ. ಟಗರುಗಳ ದಹನಬಲಿಗಳು, ಪುಷ್ಟಿ ಪ್ರಾಣಿಗಳ ಕೊಬ್ಬು, ಇದೆಲ್ಲಾ ನನಗೆ ಸಾಕಾಯಿತು; ಹೋರಿ, ಕುರಿ, ಹೋತಗಳ ರಕ್ತಕ್ಕೆ ನಾನು ಸಂತೋಷಪಡುವ ದಿಲ್ಲ. ನೀವು ನನ್ನ ಸನ್ನಿಧಿಯಲ್ಲಿ ಕಾಣಿಸಿಕೊಳ್ಳ ಬೇಕೆಂದು ಬರುತ್ತೀರಲ್ಲಾ; ನನ್ನ ಪ್ರಾಕಾರಗಳನ್ನು ತುಳಿ ಯಲು ಯಾರು ನಿಮ್ಮನ್ನು ಕೇಳಿಕೊಂಡರು? ಇನ್ನು ವ್ಯರ್ಥವಾದ ಕಾಣಿಕೆಗಳನ್ನು ತಾರದಿರಿ, ಧೂಪವು ನನಗೆ ಅಸಹ್ಯ, ಹುಣ್ಣಿಮೆಗಳೂ ಸಬ್ಬತ್ತುಗಳೂ ಸಭೆಗಳು ಕೂಡುವದೂ ಇವು ಬೇಡ; ದುಷ್ಟತನದಿಂದ ಕೂಡಿದ ವಿಶೇಷ ಕೂಟವನ್ನು ಸಹ ನಾನು ಸಹಿಸಲಾರೆನು. ನಿಮ್ಮ ಹುಣ್ಣಿಮೆಗಳನ್ನೂ ನೇಮಕವಾದ ಹಬ್ಬಗಳನ್ನೂ ನನ್ನ ಆತ್ಮವು ಹಗೆಮಾಡುತ್ತದೆ. ಅವು ನನಗೆ ಭಾರ, ಸಹಿಸಲು ಬೇಸರ. ನೀವು ನಿಮ್ಮ ಕೈಗಳನ್ನು ಚಾಚಲು ನಾನು ನನ್ನ ಕಣ್ಣುಗಳನ್ನು ನಿಮಗೆ ಮರೆಮಾಡುವೆನು; ಹೌದು, ನೀವು ಬಹು ಪ್ರಾರ್ಥನೆಗಳನ್ನು ಮಾಡಿ ದರೂ ನಾನು ಕೇಳೆನು, ನಿಮ್ಮ ಕೈಗಳು ರಕ್ತದಿಂದ ತುಂಬಿಯವೆ.