Jeremiah · chapter 7 · verse 28
Jeremiah 7:28 in Kannada
ಹಾಗಾದರೆ ನೀನು ಅವರಿಗೆ--ತನ್ನ ದೇವರಾದ ಕರ್ತನ ಸ್ವರಕ್ಕೆ ವಿಧೇಯವಾಗದಂಥ ಇಲ್ಲವೆ ಶಿಕ್ಷೆಯನ್ನು ಅಂಗೀಕರಿಸ ದಂಥ ಜನಾಂಗವಾಗಿದೆ; ಸತ್ಯವು ನಾಶವಾಯಿತು, ಅದು ಅವರ ಬಾಯಿಯೊಳಗಿಂದ ಕಡಿದುಹಾಕಲ್ಪಟ್ಟಿದೆ.
Haagaadare neenu avarige--tanna devaraada kartana svarakke vidheyavaagadantha illave shiksheyannu angeekarisa dantha janaangavaagide; satyavu naashavaayitu, adu avara baayiyolaginda kadiduhaakalpattide.
Jeremiah 7:28 in English
- King James Version (KJV)
- But thou shalt say unto them, This [is] a nation that obeyeth not the voice of the LORD their God, nor receiveth correction: truth is perished, and is cut off from their mouth.
- World English Bible (WEB)
- You shall tell them, ‘This is the nation that has not listened to the LORD their God’s voice, nor received instruction. Truth has perished, and is cut off from their mouth.’
- American Standard Version (ASV)
- And thou shalt say unto them, This is the nation that hath not hearkened to the voice of Jehovah their God, nor received instruction: truth is perished, and is cut off from their mouth.
- Bible in Basic English (BBE)
- And you are to say to them, This is the nation which has not given ear to the voice of their God, or taken his teaching to heart: good faith is dead and is cut off from their mouths.
- Darby Translation (DBY)
- And thou shalt say unto them, This is the nation which hath not hearkened unto the voice of Jehovah their God, nor received correction; fidelity is perished, and is cut off from their mouth.
- Webster's Bible (WBS)
- But thou shalt say to them, This [is] a nation that obeyeth not the voice of the LORD their God, nor receiveth correction: truth hath perished, and is cut off from their mouth.
- Young's Literal Translation (YLT)
- And thou hast said unto them: This [is] the nation that hath not hearkened, To the voice of Jehovah its God, Nor have they accepted instruction, Perished hath stedfastness, Yea, it hath been cut off from their mouth.
Read in context
- 26ಆದಾಗ್ಯೂ ಅವರು ನನ್ನ ಮಾತನ್ನು ಕೇಳದೆ ಕಿವಿಗೊಡದೆ ತಮ ಕುತ್ತಿಗೆಯನ್ನು ಕಠಿಣಮಾಡಿಕೊಂಡು ತಮ್ಮ ಪಿತೃಗಳಿಗಿಂತ ಕೆಟ್ಟದ್ದನ್ನು ಮಾಡಿದರು.
- 27ಆದದರಿಂದ ನೀನು ಈ ಮಾತುಗಳನ್ನೆಲ್ಲಾ ಅವ ರಿಗೆ ಹೇಳಬೇಕು, ಆದರೆ ಅವರು ನಿನ್ನ ಮಾತನ್ನು ಕೇಳುವದಿಲ್ಲ; ಅವರನ್ನು ನೀನು ಕರೆಯುವಿ, ಆದರೆ ಅವರು ನಿನಗೆ ಉತ್ತರ ಕೊಡುವದಿಲ್ಲ.
- 28ಹಾಗಾದರೆ ನೀನು ಅವರಿಗೆ--ತನ್ನ ದೇವರಾದ ಕರ್ತನ ಸ್ವರಕ್ಕೆ ವಿಧೇಯವಾಗದಂಥ ಇಲ್ಲವೆ ಶಿಕ್ಷೆಯನ್ನು ಅಂಗೀಕರಿಸ ದಂಥ ಜನಾಂಗವಾಗಿದೆ; ಸತ್ಯವು ನಾಶವಾಯಿತು, ಅದು ಅವರ ಬಾಯಿಯೊಳಗಿಂದ ಕಡಿದುಹಾಕಲ್ಪಟ್ಟಿದೆ.
- 29ಯೆರೂಸಲೇಮೇ, ನಿನ್ನ ಕೂದಲನ್ನು ಕತ್ತರಿಸಿ ಬಿಸಾಡಿಬಿಡು; ಉನ್ನತ ಸ್ಥಳಗಳಲ್ಲಿ ಗೋಳಾಟವನ್ನು ಎತ್ತು; ಕರ್ತನು ತನ್ನ ಉಗ್ರದ ಸಂತತಿಯನ್ನು ನಿರಾಕರಿಸಿ ತಳ್ಳಿ ಬಿಟ್ಟಿದ್ದಾನೆ;
- 30ಯೆಹೂದನ ಮಕ್ಕಳು ನನ್ನ ದೃಷ್ಟಿಯಲ್ಲಿ ಕೆಟ್ಟದ್ದನ್ನು ಮಾಡಿದ್ದಾರೆಂದು ಕರ್ತನು ಅನ್ನುತ್ತಾನೆ; ನನ್ನ ಹೆಸರಿನಿಂದ ಕರೆಯಲ್ಪಟ್ಟ ಆಲಯದಲ್ಲಿ ಅದನ್ನು ಅಪವಿತ್ರ ಮಾಡುವದಕ್ಕೆ ತಮ್ಮ ಅಸಹ್ಯವಾದ ವುಗಳನ್ನು ಇಟ್ಟಿದ್ದಾರೆ.
Cross references
- Isaiah 59:14–15 ಯೆಶಾಯ 59:14–15ನ್ಯಾಯವು ಸಹ ಹಿಂದಕ್ಕೆ ತಿರುಗಿ ಸಲ್ಪಟ್ಟಿದೆ. ನೀತಿಯು ದೂರದಲ್ಲಿ ನಿಲ್ಲುತ್ತದೆ; ಸತ್ಯವು ಬೀದಿಯಲ್ಲಿ ಬಿದ್ದುಹೋಯಿತು. ಯಥಾರ್ಥತೆಯು ಪ್ರವೇಶಿಸುವದೇ ಇಲ್ಲ. ಹೌದು, ಸತ್ಯವು ಇಲ್ಲದೇ ಹೋಯಿತು; ಕೆಟ್ಟದ್ದನ್ನು ಬಿಟ್ಟುಬಿಡುವವನು ಸುಲಿಗೆ ಯಾಗುತ್ತಾನೆ; ಕರ್ತನು ಅದನ್ನು ನೋಡಿದನು, ಅದ ರಲ್ಲಿ ನ್ಯಾಯವಿಲ್ಲದ್ದರಿಂದ ಆತನಿಗೆ ಮೆಚ್ಚಿಕೆಯಾಗಲಿಲ್ಲ.
- Zephaniah 3:2 ಚೆಫನ್ಯ 3:2ಅವಳು ಶಬ್ದಕ್ಕೆ ವಿಧೇಯಳಾಗಲಿಲ್ಲ, ಶಿಕ್ಷೆಗೆ ಒಳಪಡಲಿಲ್ಲ, ಕರ್ತನಲ್ಲಿ ಭರವಸವಿಡ ಲಿಲ್ಲ. ತನ್ನ ದೇವರ ಸವಿಾಪಕ್ಕೆ ಬರಲಿಲ್ಲ.
- Proverbs 1:7 ಜ್ಞಾನೋಕ್ತಿಗಳು 1:7ಕರ್ತನ ಭಯವೇ ಜ್ಞಾನದ ಮೂಲ; ಮೂರ್ಖರು ಜ್ಞಾನವನ್ನೂ ಶಿಕ್ಷೆಯನ್ನೂ ಅಸಡ್ಡೆಮಾಡುತ್ತಾರೆ.
- Isaiah 1:4–5 ಯೆಶಾಯ 1:4–5ಹಾ, ಪಾಪಿಷ್ಠ ಜನಾಂಗವೇ, ದುಷ್ಟತನದ ಭಾರವನ್ನು ಹೊತ್ತಿರುವ ಪ್ರಜೆಯೇ, ದುಷ್ಟಸಂತ ತಿಯೇ, ಭ್ರಷ್ಟರಾದ ಮಕ್ಕಳೇ, ಕರ್ತನನ್ನು ಅವರು ತೊರೆದುಬಿಟ್ಟಿದ್ದಾರೆ. ಇಸ್ರಾಯೇಲಿನ ಪರಿಶುದ್ಧನಾ ದಾತನಿಗೆ ಕೋಪವನ್ನೆಬ್ಬಿಸುವಂತೆ ಅವರು ಹಿಂದಕ್ಕೆ ಹೋಗಿದ್ದಾರೆ. ನೀವು ಹೆಚ್ಚೆಚ್ಚಾಗಿ ತಿರುಗಿಬಿದ್ದು ಯಾಕೆ ನೀವು ಇನ್ನು ಹೊಡೆಯಿಸಿಕೊಳ್ಳುತ್ತೀರಿ. ತಲೆ ಯೆಲ್ಲಾ ರೋಗ, ಹೃದಯವೆಲ್ಲಾ ದುರ್ಬಲ.
- Jeremiah 32:33 ಯೆರೆಮೀಯ 32:33ಅವರು ನನಗೆ ಮುಖವನ್ನಲ್ಲ ಬೆನ್ನನ್ನು ತಿರುಗಿಸಿದ್ದಾರೆ; ಆದರೂ ನಾನು ಅವರಿಗೆ ಬೋಧಿಸಿದೆನು. ಬೆಳಿಗ್ಗೆ ಎದ್ದು ಬೋಧಿಸಿದೆನು, ಆದಾಗ್ಯೂ ಉಪದೇಶ ಹೊಂದುವದಕ್ಕೆ ಅವರು ಕಿವಿ ಗೊಡಲಿಲ್ಲ.
- Micah 7:2–5 ಮೀಕ 7:2–5ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ. ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ. ಅವರಲ್ಲಿ ಉತ್ತಮನು ದತ್ತೂರಿಯ ಹಾಗೆಯೂ ಬಹು ಯಥಾರ್ಥನು ಮುಳ್ಳಿನ ಬೇಲಿಯ ಹಾಗೆಯೂ ಇದ್ದಾನೆ; ನಿನ್ನ ಕಾವಲುಗಾರರ ದಿವಸವೂ ನಿನ್ನ ವಿಚಾರಣೆಯೂ ಬರುತ್ತದೆ, ಈಗಲೇ ಅವರಿಗೆ ಗಾಬರಿಯಾಗುವದು. ಸ್ನೇಹಿತನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸವಿಡಬೇಡಿರಿ; ನಿನ್ನ ಎದೆಯ ಮೇಲೆ ಮಲಗುವವಳಿಗೆ ನಿನ್ನ ಬಾಯಿಯ ಬಾಗಲುಗಳನ್ನು ಕಾಯಿ.
- Jeremiah 6:8 ಯೆರೆಮೀಯ 6:8ಯೆರೂಸಲೇಮೇ, ನನ್ನ ಪ್ರಾಣವು ನಿನ್ನ ಕಡೆಯಿಂದ ಹೊರಟು ಹೋಗದ ಹಾಗೆ ನಾನು ನಿಮ್ಮನ್ನು ಹಾಳಾಗಿಯೂ ನಿವಾಸಿಗಳಿಲ್ಲದ ದೇಶವಾಗಿಯೂ ಮಾಡದ ಹಾಗೆ ಶಿಕ್ಷಣವನ್ನು ತಕ್ಕೋ.
- Jeremiah 5:3 ಯೆರೆಮೀಯ 5:3ಓ ಕರ್ತನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇವೆಯ ಲ್ಲವೋ? ಅವರನ್ನು ಹೊಡೆದಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ಸಂಹರಿಸಿದಿ, ಆದರೆ ಶಿಕ್ಷೆ ಹೊಂದಲೊಲ್ಲದೆ ಇದ್ದರು; ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ; ಅವರು ಹಿಂತಿರುಗುವದಕ್ಕೆ ನಿರಾಕರಿಸಿದ್ದಾರೆ.
- Jeremiah 9:3–8 ಯೆರೆಮೀಯ 9:3–8ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬೊಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವದಿಲ್ಲ; ಅವರು ಕೇಡಿನಿಂದ ಕೇಡಿಗೆ ಹೋಗುತ್ತಾ ನನ್ನನ್ನು ಅರಿಯದೆ ಇದ್ದಾರೆಂದು ಕರ್ತನು ಅನ್ನುತ್ತಾನೆ. ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ; ಯಾವ ಸಹೋದರ ನಲ್ಲಾದರೂ ನಂಬಿಕೆ ಇಡಬೇಡಿರಿ; ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸಮಾಡುವರು, ನೆರೆಯವ ರೆಲ್ಲರು ಚಾಡಿಹೇಳುತ್ತಾ ತಿರುಗಾಡುವರು. ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತಾ ಡರು; ಸುಳ್ಳುಗಳನ್ನು ಹೇಳುವದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಅಕ್ರಮ ಮಾಡುವದಕ್ಕೆ ಪ್ರಯಾಸಪಡುತ್ತಾರೆ. 6 ನಿನ್ನ ನಿವಾಸವು ಮೋಸದ ಮಧ್ಯದಲ್ಲಿ ಅದೆ; ಮೋಸದಿಂದಲೇ ನನ್ನನ್ನು ನಿರಾಕರಿಸು ತ್ತಾರೆಂದು ಕರ್ತನು ಅನ್ನುತ್ತಾನೆ. ಆದದರಿಂದ ಸೈನ್ಯಗಳ ಕರ್ತನು ಹೇಳುವದೇ ನಂದರೆ--ಇಗೋ, ನಾನು ಅವರನ್ನು ಕರಗಿಸಿ ಶೋಧಿ ಸುತ್ತೇನೆ; ನನ್ನ ಜನರ ಮಗಳಿಗೋಸ್ಕರ ನಾನು ಹೇಗೆ ಮಾಡಲಿ? ಅವರ ನಾಲಿಗೆ ಎಸೆದ ಬಾಣದಂತಿದೆ, ಅದು ಮೋಸವನ್ನಾಡುತ್ತದೆ. ತನ್ನ ಬಾಯಿಂದ ತನ್ನ ನೆರೆಯವರ ಸಂಗಡ ಸಮಾಧಾನವಾಗಿ ಮಾತನಾಡಿ ಹೃದಯದಲ್ಲಿ ಅವನಿಗೆ ಹೊಂಚುಹಾಕುತ್ತಾನೆ.
- Jeremiah 5:1 ಯೆರೆಮೀಯ 5:1ಯೆರೂಸಲೇಮಿನ ಬೀದಿಗಳಲ್ಲಿ ಅತ್ತಿತ್ತ ಓಡಾಡಿ ನ್ಯಾಯವನ್ನು ಮಾಡುವವನೂ ಸತ್ಯವನ್ನು ಹುಡುಕುವವನೂ ನಿಮಗೆ ಒಬ್ಬನಾದರೂ ಸಿಕ್ಕುವನೋ? ಅವಳ ವಿಶಾಲ ಸ್ಥಳಗಳಲ್ಲಿ ನೋಡಿ ತಿಳಿದು ಹುಡುಕಿರಿ. ಸಿಕ್ಕಿದರೆ ಅವಳಿಗೆ ಮನ್ನಿಸುವೆನು.
- Zephaniah 3:7 ಚೆಫನ್ಯ 3:7ನಾನು--ನಿಶ್ಚಯವಾಗಿ ನೀನು ನನಗೆ ಭಯಪಟ್ಟು ಶಿಕ್ಷಣವನ್ನು ಹೊಂದುವಿ; ಹೀಗೆ ನಾನು ಅವರಿಗೆ ಶಿಕ್ಷೆ ವಿಧಿಸಿದರೂ ಅವರ ನಿವಾಸವು ಕಡಿದು ಬಿಡಲ್ಪ ಡುವದಿಲ್ಲ; ಆದರೆ ಅವರು ಬೇಗನೆ ಎದ್ದು ತಮ್ಮ ಕ್ರಿಯೆಗಳನ್ನೆಲ್ಲಾ ಕೆಡಿಸಿಬಿಟ್ಟರು ಅಂದೆನು.
- Jeremiah 2:30 ಯೆರೆಮೀಯ 2:30ನಾನು ನಿಮ್ಮ ಮಕ್ಕಳನ್ನು ಹೊಡೆದದ್ದು ವ್ಯರ್ಥವಾಯಿತು. ಅವರು ಶಿಕ್ಷೆಯನ್ನು ತಕ್ಕೊಳ್ಳಲಿಲ್ಲ. ನಿಮ್ಮ ಸ್ವಂತ ಕತ್ತಿಯು ನಾಶಮಾಡುವ ಸಿಂಹದಂತೆ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿವೆ.