Jeremiah · chapter 7 · verse 8
Jeremiah 7:8 in Kannada
ಇಗೋ, ನೀವು ಪ್ರಯೋಜನವಿಲ್ಲದ ಸುಳ್ಳಾದ ಮಾತುಗಳಲ್ಲಿ ನಂಬಿಕೆ ಇಡುತ್ತೀರಿ.
Igo, neevu prayojanavillada sullaada maatugalalli nambike idutteeri.
Jeremiah 7:8 in English
- King James Version (KJV)
- Behold, ye trust in lying words, that cannot profit.
- World English Bible (WEB)
- Behold, you trust in lying words that can’t profit.
- American Standard Version (ASV)
- Behold, ye trust in lying words, that cannot profit.
- Bible in Basic English (BBE)
- See, you put your faith in false words which are of no profit.
- Darby Translation (DBY)
- Behold, ye confide in words of falsehood that cannot profit.
- Webster's Bible (WBS)
- Behold, ye trust in lying words, that cannot profit.
- Young's Literal Translation (YLT)
- Lo, ye are trusting for yourselves On the words of falsehood, so as not to profit.
Read in context
- 6ಪರದೇಶಿಯನ್ನೂ ದಿಕ್ಕಿಲ್ಲದವನನ್ನೂ ವಿಧವೆಯನ್ನೂ ಸಂಕಟಪಡಿಸದೆ ಈ ಸ್ಥಳದಲ್ಲಿ ಅಪರಾಧ ವಿಲ್ಲದ ರಕ್ತವನ್ನು ಚೆಲ್ಲದಿದ್ದರೆ ಇಲ್ಲವೆ ನಿಮ್ಮ ಕೇಡಿಗಾಗಿ ಬೇರೆ ದೇವರುಗಳನ್ನು ಹಿಂಬಾಲಿಸದಿದ್ದರೆ
- 7ನಾನು ನಿಮ್ಮನ್ನು ಈ ಸ್ಥಳದಲ್ಲಿ ಅಂದರೆ ನಾನು ನಿಮ್ಮ ಪಿತೃಗಳಿಗೆ ಕೊಟ್ಟ ದೇಶದಲ್ಲಿ ಎಂದೆಂದಿಗೂ ವಾಸಿಸುವಂತೆ ಮಾಡುವೆನು.
- 8ಇಗೋ, ನೀವು ಪ್ರಯೋಜನವಿಲ್ಲದ ಸುಳ್ಳಾದ ಮಾತುಗಳಲ್ಲಿ ನಂಬಿಕೆ ಇಡುತ್ತೀರಿ.
- 9ಕಳ್ಳತನ ಹತ್ಯಹಾದರ ಇವುಗಳನ್ನು ನೀವು ನಡಿಸುವಿರೋ? ಸುಳ್ಳುಪ್ರಮಾಣವನ್ನು ಮಾಡಿ ಬಾಳನಿಗೆ ಧೂಪವನ್ನು ಸುಡುವಿರೋ? ನಿಮಗೆ ತಿಳಿಯದ ಬೇರೆ ದೇವರು ಗಳನ್ನು ಹಿಂಬಾಲಿಸಿ
- 10ಆಮೇಲೆ ಬಂದು ನನ್ನ ಹೆಸರಿನಲ್ಲಿ ಕರೆಯಲ್ಪಟ್ಟ ಈ ಆಲಯದಲ್ಲಿ ನನ್ನ ಮುಂದೆ ನಿಂತು ಕೊಂಡು--ನಾವು ಈ ಅಸಹ್ಯವಾದವುಗಳನ್ನೆಲ್ಲಾ ಮಾಡುವ ಹಾಗೆ ಒಪ್ಪಿಸಲ್ಪಟ್ಟಿದ್ದೇವೆಂದು ಹೇಳು ವಿರೋ?
Cross references
- Isaiah 28:15 ಯೆಶಾಯ 28:15ಮರಣದ ಸಂಗಡ ಒಡಂಬಡಿಕೆಯನ್ನು ಮಾಡಿದ್ದೇವೆ. ಪಾತಾಳದ (ನರಕದ)ಸಂಗಡ ಒಪ್ಪಂದ ಮಾಡಿಕೊಂಡಿದ್ದೇವೆ; ವಿಪರೀತವಾದ ಶಿಕ್ಷೆ ಯು ಹಾದುಹೋಗುವಾಗ ನಮ್ಮ ಮೇಲೆ ಬಾರದು; ಸುಳ್ಳನ್ನು ನಮ್ಮ ಆಶ್ರಯವಾಗಿ ಮಾಡಿಕೊಂಡು ಮೋಸದಲ್ಲಿ ಅಡಗಿಕೊಂಡಿದ್ದೇವೆ ಎಂದು ನೀವು ಅನ್ನುತ್ತೀರಲ್ಲಾ?
- Jeremiah 23:26 ಯೆರೆಮೀಯ 23:26ಸುಳ್ಳು ಪ್ರವಾದಿಸುವ ಪ್ರವಾದಿಗಳ ಹೃದಯದಲ್ಲಿ ಇದು ಎಷ್ಟರ ವರೆಗೆ ಇರುವದು? ಹೌದು, ಅವರು ತಮ್ಮ ಹೃದಯದ ಮೋಸವನ್ನು ಪ್ರವಾದಿಸುವವರೇ;
- Jeremiah 7:4 ಯೆರೆಮೀಯ 7:4ಇವುಗಳೇ ಕರ್ತನ ಆಲಯ, ಕರ್ತನ ಆಲಯ, ಕರ್ತನ ಆಲಯ ಎಂದು ಹೇಳುವ ಸುಳ್ಳು ಮಾತುಗಳಲ್ಲಿ ನಂಬಿಕೆ ಇಡಬೇಡಿರಿ.
- Jeremiah 5:31 ಯೆರೆಮೀಯ 5:31ಏನಂದರೆ ಪ್ರವಾದಿಗಳು ಸುಳ್ಳಾಗಿ ಪ್ರವಾದಿಸು ತ್ತಾರೆ, ಯಾಜಕರು ತಮ್ಮ ಆದಾಯದಿಂದ ದೊರೆತನ ಮಾಡುತ್ತಾರೆ; ನನ್ನ ಜನರು ಅದನ್ನು ಪ್ರೀತಿ ಮಾಡು ತ್ತಾರೆ; ಆದರೆ ಅದರ ಅಂತ್ಯದಲ್ಲಿ ನೀವು ಏನು ಮಾಡುವಿರಿ?
- Jeremiah 23:14–16 ಯೆರೆಮೀಯ 23:14–16ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ; ಅವರು ವ್ಯಭಿಚಾರಮಾಡಿ ಸುಳ್ಳಿನಲ್ಲಿ ನಡಕೊಂಡದ್ದ ಲ್ಲದೆ ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ; ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ. ಆದದರಿಂದ ಸೈನ್ಯಗಳ ಕರ್ತನು ಪ್ರವಾದಿಗಳ ವಿಷಯದಲ್ಲಿ ಹೇಳುವದೇನಂದರೆ--ಇಗೋ, ನಾನು ಅವರಿಗೆ ಮಾಚಿಪತ್ರೆಯನ್ನು ತಿನ್ನುವದಕ್ಕೆ ಕೊಡುತ್ತೇನೆ ವಿಷದ ನೀರನ್ನು ಕುಡಿಯಕೊಡುತ್ತೇನೆ; ಯೆರೂಸಲೇ ಮಿನ ಪ್ರವಾದಿಗಳ ಕಡೆಯಿಂದ ಭ್ರಷ್ಟತ್ವವು ದೇಶಕ್ಕೆಲ್ಲಾ ಹರಡಿದೆ. ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ --ನಿಮಗೆ ಪ್ರವಾದಿಸುವ ಪ್ರವಾದಿಗಳ ವಾಕ್ಯಕ್ಕೆ ಕಿವಿ ಗೊಡಬೇಡಿರಿ; ಅವರು ನಿಮ್ಮನ್ನು ನಿಷ್ಫಲಮಾಡುತ್ತಾರೆ; ಕರ್ತನ ಬಾಯಿಂದಲ್ಲ, ಸ್ವಂತ ಹೃದಯದಿಂದ ದರ್ಶನ ವನ್ನು ಹೇಳುತ್ತಾರೆ.
- Ezekiel 13:6–16 ಯೆಹೆಜ್ಕೇಲನು 13:6–16ಅವರು ವ್ಯರ್ಥವಾದದ್ದನ್ನೂ ಸುಳ್ಳು ಭವಿಷ್ಯ ವಾದದ್ದನ್ನೂ ನೋಡಿದ್ದಾರೆಂದು ಕರ್ತನು ಹೇಳುತ್ತಾನೆ; ಆದರೆ ಕರ್ತನು ಅವರನ್ನು ಕಳುಹಿಸಲಿಲ್ಲ; ತಾವು ನುಡಿದ ಮಾತು ಬೇರೆಯವರು ನಿರೀಕ್ಷಿಸುವಂತೆ ಮಾಡುತ್ತಾರೆ. ವ್ಯರ್ಥ ದರ್ಶನವನ್ನು ನೋಡಿರುವಿ ರಲ್ಲಾ. ಸುಳ್ಳಾದ ಭವಿಷ್ಯವನ್ನು ಹೇಳಿದ್ದೀರಲ್ಲಾ. ನಾನು ಮಾತನಾಡದೆ ಇದ್ದರೂ--ಕರ್ತನೇ ಹೇಳಿದನೆಂದು ಹೇಳಿದ್ದಿರಲ್ಲಾ. ಆದದರಿಂದ ದೇವರಾದ ಕರ್ತನು ಹೀಗೆ ಹೇಳು ತ್ತಾನೆ--ನೀವು ವ್ಯರ್ಥವಾಗಿ ಮಾತನಾಡಿದ್ದರಿಂದಲೂ ಸುಳ್ಳನ್ನು ಕಂಡದ್ದರಿಂದಲೂ ಇಗೋ, ನಾನು ನಿಮಗೆ ವಿರೋಧವಾಗಿರುವೆನೆಂದು ದೇವರಾದ ಕರ್ತನು ಹೇಳುತ್ತಾನೆ. ವ್ಯರ್ಥವಾದದ್ದನ್ನು ದರ್ಶಿಸಿ, ಸುಳ್ಳು ಭವಿಷ್ಯಗಳನ್ನು ಹೇಳುವ ಪ್ರವಾದಿಗಳ ಮೇಲೆ ನನ್ನ ಕೈ ಮಾಡುವೆನು. ಅವರು ನನ್ನ ಜನರ ಸಭೆಯಲ್ಲಿ ಇರುವದೂ ಇಲ್ಲ, ಇಸ್ರಾಯೇಲನ ಮನೆತನದವರ ಪಟ್ಟಿಯಲ್ಲಿ ಬರೆಯಲ್ಪಡುವದೂ ಇಲ್ಲ; ಇಸ್ರಾಯೇಲಿನ ದೇಶದಲ್ಲಿ ಪ್ರವೇಶಿಸುವದೂ ಇಲ್ಲ; ನಾನೇ ದೇವರಾದ ಕರ್ತನೆಂದು ನೀವು ತಿಳಿದುಕೊಳ್ಳುವಿರಿ. ಸಮಾಧಾನ ವಿಲ್ಲದಿರುವಾಗ ಅವರು ಸಮಾಧಾನವೆಂದು ಹೇಳಿದ್ದರಿಂ ದಲೂ ಮತ್ತು ಇಗೋ, ಒಬ್ಬನು ಗೋಡೆಯನ್ನು ಕಟ್ಟಿದರೆ ಮತ್ತೊಬ್ಬನು ಅದಕ್ಕೆ ಸುಣ್ಣ ಹಚ್ಚಿದ್ದರಿಂದಲೂ ಸುಣ್ಣ ಹಚ್ಚುತ್ತಿರುವವನಿಗೆ--ಅದು ಬೀಳುವದೆಂದು ಹೇಳು; ಅಲ್ಲಿ ವಿಪರೀತ ಮಳೆ ಬರುವದು ಮತ್ತು ದೊಡ್ಡ ಕಲ್ಮಳೆಯು ಬೀಳುವದು; ಬಿರುಗಾಳಿಯು ಅದನ್ನು ಸೀಳಿಬಿಡುವದು. ಇಗೋ, ಗೋಡೆ ಬಿದ್ದು ಹೋದಮೇಲೆ--ನೀವು ಹಚ್ಚಿದ ಸುಣ್ಣ ಎಲ್ಲಿ ಎಂದು ನಿಮಗೆ ಹೇಳುವರಲ್ಲಾ? ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅದನ್ನು ನನ್ನ ಉರಿಯಲ್ಲಿ ಬಿರುಗಾಳಿಯಿಂದ ಸೀಳಿಬಿಡುವೆನು. ಅದನ್ನು ನಾಶ ಪಡಿಸುವ ಹಾಗೆ ನನ್ನ ಕೋಪದಿಂದ ವಿಪರೀತ ಮಳೆಯೂ ನನ್ನ ಉರಿಯಿಂದ ಕಲ್ಮಳೆಯ ಕಲ್ಲುಗಳೂ ಸುರಿಯುವವು; ನೀವು ಸುಣ್ಣ ಬಳಿದ ಗೋಡೆಯನ್ನು ನಾನು ಈಗ ಕೆಡವಿ ನೆಲಸಮ ಮಾಡಿ ಅದರ ಅಸ್ತಿವಾರ ವನ್ನು ಕಾಣದ ಹಾಗೆ ಮಾಡುವೆನು. ಅದು ಬಿದ್ದು ಹೋಗುವದು, ನೀವು ಅದರಲ್ಲಿ ನಾಶ ಮಾಡಲ್ಪಡು ವಿರಿ. ಆಗ ನಾನೇ ಕರ್ತನೆಂದು ನಿಮಗೆ ತಿಳಿದು ಬರುವದು. ಹೀಗೆ ನಾನು ಗೋಡೆಯಲ್ಲಿಯೂ ಅದಕ್ಕೆ ಸುಣ್ಣ ಬಳಿದವರಲ್ಲಿಯೂ ರೋಷವನ್ನು ತೀರಿಸಿ ಕೊಂಡು ಇನ್ನು ಗೋಡೆಯಾದರೂ ಅದಕ್ಕೆ ಸುಣ್ಣ ಹಚ್ಚಿದವರಾದರೂ ಇಲ್ಲವೆಂದು ಯೆರೂಸಲೇಮಿನ ವಿಷಯ ಪ್ರವಾದಿಸಿ ಸಮಾಧಾನವಿಲ್ಲದಿರುವಾಗ ಅದಕ್ಕೆ ಸಮಾಧಾನದ ದರ್ಶನವನ್ನು ಕಂಡ ಇಸ್ರಾಯೇಲಿನ ಪ್ರವಾದಿಗಳು ನಿಮಗೆ ಇಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ.
- Jeremiah 8:10 ಯೆರೆಮೀಯ 8:10ಆದದರಿಂದ ಅವರ ಹೆಂಡತಿಯರನ್ನು ಬೇರೊಬ್ಬರಿಗೂ ಅವರ ಹೊಲಗಳನ್ನು ಸ್ವಾಧೀನಮಾಡಿಕೊಳ್ಳುವವರಿಗೂ ನಾನು ಕೊಡುವೆನು; ಚಿಕ್ಕವನು ಮೊದಲುಗೊಂಡು ದೊಡ್ಡವನ ತನಕ ಅವರೆಲ್ಲರು ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕನ ವರೆಗೂ ಪ್ರತಿ ಯೊಬ್ಬನು ಮೋಸದಿಂದ ವರ್ತಿಸುತ್ತಾನೆ.
- Jeremiah 23:32 ಯೆರೆಮೀಯ 23:32ಇಗೋ, ಸುಳ್ಳಿನ ಕನಸುಗಳನ್ನು ಪ್ರವಾದಿಸಿ; ತಮ್ಮ ಸುಳ್ಳುಗಳಿಂದಲೂ ನಿರರ್ಥಕವಾದ ವುಗಳಿಂದಲೂ ನನ್ನ ಜನರು ತಪ್ಪುವಂತೆ ಮಾಡುವವರಿಗೆ ವಿರೋಧವಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಅವರಿಗೆ ಅಪ್ಪಣೆಕೊಡಲಿಲ್ಲ; ಆದದರಿಂದ ಅವರು ಹೇಗೂ ಈ ಜನರಿಗೆ ಪ್ರಯೋಜನವಾಗಿರುವದೇ ಇಲ್ಲವೆಂದು ಕರ್ತನು ಅನ್ನುತ್ತಾನೆ.
- Jeremiah 4:10 ಯೆರೆಮೀಯ 4:10ಆಗ ನಾನು ಹೇಳಿದ್ದೇನಂದರೆ--ಹಾ! ಕರ್ತನೇ, ದೇವರೇ, ನಿಶ್ಚಯ ವಾಗಿ ನೀನು ಈ ಜನರಿಗೂ ಯೆರೂಸಲೇಮಿಗೂ-- ನಿಮಗೆ ಸಮಾಧಾನವಾಗುವದೆಂದು ಹೇಳಿ ಬಹಳ ಮೋಸಮಾಡಿದ್ದೀ; ಕತ್ತಿಯು ಪ್ರಾಣದ ವರೆಗೂ ತಾಕುತ್ತ ದಲ್ಲವೋ?
- Isaiah 30:10 ಯೆಶಾಯ 30:10ಅವರು ನೋಡುವವರಿಗೆ--ನೋಡಬೇಡಿರೆಂದು, ದಿವ್ಯದರ್ಶಿಗಳಿಗೆ ನಿಮಗೆ ದರ್ಶನವಾಗದಿರಲೆನ್ನು ತ್ತಾರೆ. ಪ್ರವಾದಿಗಳಿಗೆ--ನಮಗೆ ನ್ಯಾಯವಾದವು ಗಳನ್ನು ಪ್ರವಾದಿಸಬೇಡಿರಿ ನಯವಾದವುಗಳನ್ನೇ ನುಡಿ ಯಿರಿ, ಮೋಸವಾದವುಗಳನ್ನೆ ಪ್ರವಾದಿಸಿರಿ ಅನ್ನು ತ್ತಾರೆ.
- Jeremiah 14:13–14 ಯೆರೆಮೀಯ 14:13–14ಆಗ ನಾನು--ಹಾ, ದೇವರಾದ ಕರ್ತನೇ, ಇಗೋ, ಪ್ರವಾದಿಗಳು ಅವರಿಗೆ--ನೀವು ಕತ್ತಿಯನ್ನು ನೋಡುವದಿಲ್ಲ, ನಿಮಗೆ ಕ್ಷಾಮವು ಬಾರದು, ಆದರೆ ಕರ್ತನು ನಿಮಗೆ ಈ ಸ್ಥಳದಲ್ಲಿ ಸ್ಥಿರ ಸಮಾಧಾನ ಕೊಡುತ್ತಾನೆಂದು ಹೇಳುತ್ತಾರೆ ಅಂದೆನು. ಆಗ ಕರ್ತನು ನನಗೆ ಹೇಳಿದ್ದೇನಂದರೆ --ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿ ಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವ ರಿಗೆ ಆಜ್ಞೆ ಕೊಡಲಿಲ್ಲ; ಅವರ ಸಂಗಡ ಮಾತಾಡ ಲಿಲ್ಲ; ಸುಳ್ಳಿನ ದರ್ಶನವನ್ನೂ ಶಕುನವನ್ನೂ ಶೂನ್ಯ ವನ್ನೂ ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ.