Jeremiah · chapter 8 · verse 11
Jeremiah 8:11 in Kannada
ಅವರು ನನ್ನ ಜನರ ಮಗಳ ಗಾಯವನ್ನು ಸ್ವಲ್ಪವಾಗಿ ಸ್ವಸ್ಥಮಾಡಿ ಸಮಾಧಾನವಿಲ್ಲದಿರುವಾಗ--ಸಮಾಧಾನ, ಸಮಾ ಧಾನ ಎಂದನ್ನುತ್ತಾರೆ. ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ?
Avaru nanna janara magala gaayavannu svalpavaagi svasthamaadi samaadhaanavilladiruvaaga--samaadhaana, samaa dhaana endannuttaare. Asahyavaadaddannu maadida mele avaru naachikepattaro?
Jeremiah 8:11 in English
- King James Version (KJV)
- For they have healed the hurt of the daughter of my people slightly, saying, Peace, peace; when [there is] no peace.
- World English Bible (WEB)
- They have healed the hurt of the daughter of my people slightly, saying, “Peace, peace,” when there is no peace.
- American Standard Version (ASV)
- And they have healed the hurt of the daughter of my people slightly, saying, Peace, peace; when there is no peace.
- Bible in Basic English (BBE)
- And they have made little of the wounds of the daughter of Zion, saying, Peace, peace; when there is no peace.
- Darby Translation (DBY)
- And they have healed the breach of the daughter of my people lightly, saying, Peace, peace! when there is no peace.
- Webster's Bible (WBS)
- For they have healed the hurt of the daughter of my people slightly, saying, Peace, peace; when [there is] no peace.
- Young's Literal Translation (YLT)
- And they heal the breach of the daughter of my people slightly, Saying, Peace, peace! and there is no peace.
Read in context
- 9ಜ್ಞಾನಿಗಳು ನಾಚಿಕೊಂಡಿ ದ್ದಾರೆ, ದಿಗಿಲುಪಟ್ಟು ಸಿಕ್ಕಿಕೊಂಡಿದ್ದಾರೆ; ಇಗೋ, ಕರ್ತನ ವಾಕ್ಯವನ್ನು ನಿರಾಕರಿಸಿದ್ದಾರೆ. ಹಾಗಾದರೆ ಅವರಲ್ಲಿ ಎಂಥಾ ಜ್ಞಾನವಿದೆ?
- 10ಆದದರಿಂದ ಅವರ ಹೆಂಡತಿಯರನ್ನು ಬೇರೊಬ್ಬರಿಗೂ ಅವರ ಹೊಲಗಳನ್ನು ಸ್ವಾಧೀನಮಾಡಿಕೊಳ್ಳುವವರಿಗೂ ನಾನು ಕೊಡುವೆನು; ಚಿಕ್ಕವನು ಮೊದಲುಗೊಂಡು ದೊಡ್ಡವನ ತನಕ ಅವರೆಲ್ಲರು ಲೋಭಕ್ಕೆ ಒಪ್ಪಿಸಿಕೊಟ್ಟಿದ್ದಾರೆ. ಪ್ರವಾದಿ ಮೊದಲುಗೊಂಡು ಯಾಜಕನ ವರೆಗೂ ಪ್ರತಿ ಯೊಬ್ಬನು ಮೋಸದಿಂದ ವರ್ತಿಸುತ್ತಾನೆ.
- 11ಅವರು ನನ್ನ ಜನರ ಮಗಳ ಗಾಯವನ್ನು ಸ್ವಲ್ಪವಾಗಿ ಸ್ವಸ್ಥಮಾಡಿ ಸಮಾಧಾನವಿಲ್ಲದಿರುವಾಗ--ಸಮಾಧಾನ, ಸಮಾ ಧಾನ ಎಂದನ್ನುತ್ತಾರೆ. ಅಸಹ್ಯವಾದದ್ದನ್ನು ಮಾಡಿದ ಮೇಲೆ ಅವರು ನಾಚಿಕೆಪಟ್ಟರೋ?
- 12ಇಲ್ಲ, ಸ್ವಲ್ಪ ವಾದರೂ ನಾಚಿಕೆಪಡಲಿಲ್ಲ; ಇಲ್ಲವೆ ಅವರು ಲಜ್ಜೆ ಯನ್ನು ಅರಿಯರು. ಆದದರಿಂದ ಬೀಳುವವರೊಳಗೆ ಅವರು ಬೀಳುವರು; ಅವರು ವಿಚಾರಿಸಲ್ಪಡುವ ಕಾಲದಲ್ಲಿ ಕೆಳಗೆ ಹಾಕಲ್ಪಡು ವರು ಎಂದು ಕರ್ತನು ಹೇಳುತ್ತಾನೆ.
- 13ನಾನು ಅವರನ್ನು ನಿಜವಾಗಿಯೂ ಸಂಹರಿಸುವೆನೆಂದು ಕರ್ತನು ಅನ್ನುತ್ತಾನೆ; ದ್ರಾಕ್ಷೇ ಗಿಡದಲ್ಲಿ ಹಣ್ಣುಗಳು ಇರುವದಿಲ್ಲ; ಇಲ್ಲವೆ ಅಂಜೂರ ಮರದಲ್ಲಿ ಹಣ್ಣುಗಳು ಇರುವದಿಲ್ಲ; ಎಲೆಯು ಬಾಡು ವದು; ನಾನು ಅವರಿಗೆ ಕೊಟ್ಟವುಗಳು ಅವರನ್ನು ಬಿಟ್ಟುಹೋಗುವವು.
Cross references
- Jeremiah 6:14 ಯೆರೆಮೀಯ 6:14ಸಮಾಧಾನ ವಿಲ್ಲದಿರುವಾಗ--ಸಮಾಧಾನ ಎಂದು ಹೇಳಿ ನನ್ನ ಜನರ ಕುಮಾರ್ತೆಯ ಗಾಯವನ್ನು ಹಗುರವಾಗಿ ಸ್ವಸ್ಥಮಾಡಿದ್ದಾರೆ.
- Ezekiel 13:10–16 ಯೆಹೆಜ್ಕೇಲನು 13:10–16ಸಮಾಧಾನ ವಿಲ್ಲದಿರುವಾಗ ಅವರು ಸಮಾಧಾನವೆಂದು ಹೇಳಿದ್ದರಿಂ ದಲೂ ಮತ್ತು ಇಗೋ, ಒಬ್ಬನು ಗೋಡೆಯನ್ನು ಕಟ್ಟಿದರೆ ಮತ್ತೊಬ್ಬನು ಅದಕ್ಕೆ ಸುಣ್ಣ ಹಚ್ಚಿದ್ದರಿಂದಲೂ ಸುಣ್ಣ ಹಚ್ಚುತ್ತಿರುವವನಿಗೆ--ಅದು ಬೀಳುವದೆಂದು ಹೇಳು; ಅಲ್ಲಿ ವಿಪರೀತ ಮಳೆ ಬರುವದು ಮತ್ತು ದೊಡ್ಡ ಕಲ್ಮಳೆಯು ಬೀಳುವದು; ಬಿರುಗಾಳಿಯು ಅದನ್ನು ಸೀಳಿಬಿಡುವದು. ಇಗೋ, ಗೋಡೆ ಬಿದ್ದು ಹೋದಮೇಲೆ--ನೀವು ಹಚ್ಚಿದ ಸುಣ್ಣ ಎಲ್ಲಿ ಎಂದು ನಿಮಗೆ ಹೇಳುವರಲ್ಲಾ? ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಅದನ್ನು ನನ್ನ ಉರಿಯಲ್ಲಿ ಬಿರುಗಾಳಿಯಿಂದ ಸೀಳಿಬಿಡುವೆನು. ಅದನ್ನು ನಾಶ ಪಡಿಸುವ ಹಾಗೆ ನನ್ನ ಕೋಪದಿಂದ ವಿಪರೀತ ಮಳೆಯೂ ನನ್ನ ಉರಿಯಿಂದ ಕಲ್ಮಳೆಯ ಕಲ್ಲುಗಳೂ ಸುರಿಯುವವು; ನೀವು ಸುಣ್ಣ ಬಳಿದ ಗೋಡೆಯನ್ನು ನಾನು ಈಗ ಕೆಡವಿ ನೆಲಸಮ ಮಾಡಿ ಅದರ ಅಸ್ತಿವಾರ ವನ್ನು ಕಾಣದ ಹಾಗೆ ಮಾಡುವೆನು. ಅದು ಬಿದ್ದು ಹೋಗುವದು, ನೀವು ಅದರಲ್ಲಿ ನಾಶ ಮಾಡಲ್ಪಡು ವಿರಿ. ಆಗ ನಾನೇ ಕರ್ತನೆಂದು ನಿಮಗೆ ತಿಳಿದು ಬರುವದು. ಹೀಗೆ ನಾನು ಗೋಡೆಯಲ್ಲಿಯೂ ಅದಕ್ಕೆ ಸುಣ್ಣ ಬಳಿದವರಲ್ಲಿಯೂ ರೋಷವನ್ನು ತೀರಿಸಿ ಕೊಂಡು ಇನ್ನು ಗೋಡೆಯಾದರೂ ಅದಕ್ಕೆ ಸುಣ್ಣ ಹಚ್ಚಿದವರಾದರೂ ಇಲ್ಲವೆಂದು ಯೆರೂಸಲೇಮಿನ ವಿಷಯ ಪ್ರವಾದಿಸಿ ಸಮಾಧಾನವಿಲ್ಲದಿರುವಾಗ ಅದಕ್ಕೆ ಸಮಾಧಾನದ ದರ್ಶನವನ್ನು ಕಂಡ ಇಸ್ರಾಯೇಲಿನ ಪ್ರವಾದಿಗಳು ನಿಮಗೆ ಇಲ್ಲವೆಂದು ದೇವರಾದ ಕರ್ತನು ಹೇಳುತ್ತಾನೆ.
- 1 Kings 22:6 1 ಅರಸುಗಳು 22:6ಆಗ ಇಸ್ರಾಯೇಲಿನ ಅರಸನು ಹೆಚ್ಚು ಕಡಿಮೆ ನಾನೂರು ಮಂದಿ ಪ್ರವಾದಿಗಳನ್ನು ಕೂಡಿಸಿ--ನಾನು ಗಿಲ್ಯಾದಿನಲ್ಲಿರುವ ರಾಮೋತಿನ ಮೇಲೆ ಯುದ್ಧಕ್ಕೆ ಹೋಗಬಹುದೋ ಬೇಡವೋ ಎಂದು ಅವರನ್ನು ಕೇಳಿದನು. ಅದಕ್ಕವರು--ಹೋಗು; ಕರ್ತನು ಅದನ್ನು ಅರಸನ ಕೈಯಲ್ಲಿ ಒಪ್ಪಿಸಿಕೊಡುವನು ಅಂದರು.
- 1 Kings 22:13 1 ಅರಸುಗಳು 22:13ಆದರೆ ವಿಾಕಾಯೆಹುನನ್ನು ಕರೆಯಲು ಹೋದ ದೂತನು ಅವನಿಗೆ--ಇಗೋ, ಪ್ರವಾದಿಗಳ ವಾಕ್ಯಗಳು ಒಂದೇ ಬಾಯಿಂದ ಅರಸನಿಗೆ ಒಳ್ಳೇದನ್ನೇ ಪ್ರಕಟಿಸುತ್ತವೆ; ನಿನ್ನ ವಾಕ್ಯವು ಅವರಲ್ಲಿರುವ ಒಬ್ಬನ ವಾಕ್ಯದ ಹಾಗೆಯೇ ಇರಲಿ; ಒಳ್ಳೇ ಮಾತು ಆಡು ಅಂದನು.
- Lamentations 2:14 ಪ್ರಲಾಪಗಳು 2:14ನಿನ್ನ ಪ್ರವಾದಿಗಳು ನಿನಗಾಗಿ ವ್ಯರ್ಥವಾದ ಮೂರ್ಖತನದ ವಿಷಯಗಳನ್ನು ನೋಡಿದ್ದಾರೆ. ಅವರು ನಿನ್ನ ದುರವಸ್ಥೆಯನ್ನು ನೀಗಿಸುವದಕ್ಕಾಗಿ ನಿನ್ನ ದುಷ್ಟತನ ವನ್ನು ಬಯಲಿಗೆ ತರಲಿಲ್ಲ; ಆದರೆ ನಿನಗಾಗಿ ಸುಳ್ಳಿನ ಭಾರಗಳನ್ನು ಮತ್ತು ಗಡೀಪಾರು ಮಾಡುವ ಕಾರಣ ಗಳನ್ನು ನೋಡಿದ್ದಾರೆ.
- Jeremiah 27:9–10 ಯೆರೆಮೀಯ 27:9–10ಆದ ದರಿಂದ ನೀವು ಬಾಬೆಲಿನ ಅರಸನನ್ನು ಸೇವಿಸಬೇಡಿ ರೆಂದು ನಿಮಗೆ ಹೇಳುವ ನಿಮ್ಮ ಪ್ರವಾದಿಗಳಿಗೂ ಕಣಿಹೇಳುವವರಿಗೂ ಸ್ವಪ್ನಗಾರರಿಗೂ ಮಂತ್ರದ ವರಿಗೂ ನಿಮ್ಮ ಶೂನ್ಯಗಾರರಿಗೂ ಕಿವಿಗೊಡಬೇಡಿರಿ. ನಿಮ್ಮನ್ನು ನಿಮ್ಮ ದೇಶದಿಂದ ದೂರಮಾಡುವ ಹಾಗೆಯೂ ನಾನು ನಿಮ್ಮನ್ನು ಓಡಿಸಿ ಬಿಟ್ಟಮೇಲೆ ನೀವು ನಾಶವಾಗುವ ಹಾಗೆಯೂ ಅವರು ನಿಮಗೆ ಸುಳ್ಳನ್ನು ಪ್ರವಾದಿಸುತ್ತಾರೆ.
- Jeremiah 28:3–9 ಯೆರೆಮೀಯ 28:3–9ಎರಡು ವರುಷದೊಳ ಗಾಗಿ ನಾನು ಬಾಬೆಲಿನ ಅರಸನಾದ ನೆಬೂಕ ದ್ನೆಚ್ಚರನು ಈ ಸ್ಥಳದಿಂದ ತಕ್ಕೊಂಡು ಬಾಬೆಲಿಗೆ ಒಯ್ದ ಕರ್ತನ ಆಲಯದ ಪಾತ್ರೆಗಳನ್ನೆಲ್ಲಾ ತಿರುಗಿಸುವೆನು. ಯೆಹೂ ದದ ಅರಸನಾದ ಯೆಹೋಯಾಕೀಮನ ಮಗನಾದ ಯೆಕೊನ್ಯನನ್ನೂ ಬಾಬೆಲಿಗೆ ಹೋದ ಯೆಹೂದದ ಸೆರೆಯವರೆಲ್ಲರನ್ನೂ ನಾನು ತಿರುಗಿ ಈ ಸ್ಥಳಕ್ಕೆ ಬರ ಮಾಡುವೆನೆಂದು ಕರ್ತನು ಅನ್ನುತ್ತಾನೆ; ಬಾಬೆಲಿನ ಅರಸನ ನೊಗವನ್ನು ಮುರಿದುಬಿಡುವೆನು. ಆಗ ಪ್ರವಾದಿಯಾದ ಯೆರೆವಿಾಯನು ಯಾಜಕರ ಮುಂದೆಯೂ ಕರ್ತನ ಆಲಯದಲ್ಲಿ ನಿಂತಿರುವ ಜನರೆಲ್ಲರ ಮುಂದೆಯೂ ಪ್ರವಾದಿಯಾದ ಹನನ್ಯ ನಿಗೆ ಹೇಳಿದ್ದೇನಂದರೆ-- ಪ್ರವಾದಿಯಾದ ಯೆರೆವಿಾ ಯನು ಹೇಳಿದ್ದೇನಂದರೆ-- ಆಮೆನ್: ಕರ್ತನು ಹಾಗೆಯೇ ಮಾಡಲಿ: ನೀನು ಪ್ರವಾದಿಸಿದ ನಿನ್ನ ವಾಕ್ಯಗಳನ್ನು ಕರ್ತನು ನೆರವೇರಿಸಿ ಕರ್ತನ ಆಲಯದ ಪಾತ್ರೆಗಳನ್ನೂ ಸೆರೆಯವರೆಲ್ಲರನ್ನೂ ಬಾಬೆಲಿನಿಂದ ತಿರುಗಿ ಈ ಸ್ಥಳಕ್ಕೆ ಬರಮಾಡಲಿ. ಆದಾಗ್ಯೂ ನಾನು ನಿನಗೂ ಜನರ ಕಿವಿಗಳಿಗೂ ಬೀಳುವಂತೆ ಹೇಳುವ ಈ ವಾಕ್ಯವನ್ನು ಕೇಳು. ಮುಂಚೆ ಇದ್ದ ಹಿಂದಿನ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ರಾಜ್ಯ ಗಳಿಗೂ ವಿರೋಧವಾಗಿ ಯುದ್ಧವನ್ನೂ ಕೇಡನ್ನೂ ಜಾಡ್ಯವನ್ನೂ ಕುರಿತು ಪ್ರವಾದಿಸಿದರು. ಸಮಾಧಾನ ವನ್ನು ಕುರಿತು ಪ್ರವಾದಿಸುವ ಪ್ರವಾದಿಯಾದರೆ ಆ ಪ್ರವಾದಿಯ ವಾಕ್ಯವು ಉಂಟಾಗುವಾಗ ಅವನು ದೇವ ರಿಂದ ನಿಜವಾಗಿ ಕಳುಹಿಸಲ್ಪಟ್ಟ ಪ್ರವಾದಿ ಎಂದು ತಿಳಿಯತಕ್ಕದ್ದು ಅಂದನು.
- Jeremiah 14:14–15 ಯೆರೆಮೀಯ 14:14–15ಆಗ ಕರ್ತನು ನನಗೆ ಹೇಳಿದ್ದೇನಂದರೆ --ಪ್ರವಾದಿಗಳು ನನ್ನ ಹೆಸರಿನಲ್ಲಿ ಸುಳ್ಳಾಗಿ ಪ್ರವಾದಿ ಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ; ಅವ ರಿಗೆ ಆಜ್ಞೆ ಕೊಡಲಿಲ್ಲ; ಅವರ ಸಂಗಡ ಮಾತಾಡ ಲಿಲ್ಲ; ಸುಳ್ಳಿನ ದರ್ಶನವನ್ನೂ ಶಕುನವನ್ನೂ ಶೂನ್ಯ ವನ್ನೂ ತಮ್ಮ ಹೃದಯದ ಕಪಟವನ್ನೂ ನಿಮಗೆ ಪ್ರವಾದಿಸುತ್ತಾರೆ. ಆದದರಿಂದ ಕರ್ತನು ತಾನು ಕಳುಹಿಸದೆ ತನ್ನ ಹೆಸರಿನಲ್ಲಿ ಪ್ರವಾದಿಸುವಂಥ ಮತ್ತು ಈ ದೇಶದಲ್ಲಿ ಕತ್ತಿಯೂ ಬರವೂ ಇರುವದಿಲ್ಲವೆಂದು ಹೇಳುವಂಥ ಪ್ರವಾದಿಗಳನ್ನು ಕುರಿತು ಹೇಳುವದೇನಂದರೆ--ಕತ್ತಿ ಯಿಂದಲೂ ಕ್ಷಾಮದಿಂದಲೂ ಆ ಪ್ರವಾದಿಗಳು ತಾವೇ ನಿರ್ಮೂಲವಾಗುತ್ತಾರೆ.
- Ezekiel 13:22 ಯೆಹೆಜ್ಕೇಲನು 13:22ನಾನು ಯಾವನನ್ನು ದುಃಖಪಡಿಸಲಿಲ್ಲವೋ ಆ ನೀತಿವಂತನ ಹೃದಯಕ್ಕೆ ನೀವು ಸುಳ್ಳಾಡಿ ದುಃಖಪಡಿಸಿ ದ್ದೀರಿ; ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.ಆದದರಿಂದ ನೀವು ಇನ್ನು ಮೇಲೆ ವ್ಯರ್ಥವಾದದ್ದನ್ನು ಕಾಣುವದಿಲ್ಲ; ಭವಿಷ್ಯವನ್ನೂ ಕಾಣು ವದಿಲ್ಲ; ಯಾಕಂದರೆ ನಾನು ನನ್ನ ಜನರನ್ನು ನಿಮ್ಮ ಕೈಯೊಳಗಿಂದ ತಪ್ಪಿಸುವೆನು; ನಾನೇ ಕರ್ತನೆಂದು ನೀವು ತಿಳಿದುಕೊಳ್ಳುವಿರಿ.
- Micah 2:11 ಮೀಕ 2:11ಒಬ್ಬನು ಆತ್ಮದಲ್ಲಿಯೂ ವಂಚನೆಯಲ್ಲಿಯೂ ನಡೆದು ಸುಳ್ಳು ಹೇಳಿ--ನಿನಗೆ ದ್ರಾಕ್ಷಾರಸವನ್ನೂ ಮತ್ತಾಗುವದನ್ನೂ ಕುರಿತು ಪ್ರವಾದಿಸುವೆನೆಂದು ಹೇಳಿ ದರೆ, ಇವನೇ ಈ ಜನರಿಗೆ ಪ್ರವಾದಿಯಾಗಿರುವನು.