Jeremiah · chapter 8 · verse 4
Jeremiah 8:4 in Kannada
ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ ಕರ್ತನು ಹೀಗೆ ಹೇಳುತ್ತಾನೆ--ಅವರು ಬಿದ್ದು ಮತ್ತೆ ಏಳರೋ? ಹಿಂಜರಿದವನು ಮತ್ತೆ ಬರುವದಿ ಲ್ಲವೋ?
Idallade neenu avarige helabekaadadde nandare kartanu heege heluttaane--avaru biddu matte elaro? Hinjaridavanu matte baruvadi llavo?
Jeremiah 8:4 in English
- King James Version (KJV)
- Moreover thou shalt say unto them, Thus saith the LORD; Shall they fall, and not arise? shall he turn away, and not return?
- World English Bible (WEB)
- “Moreover you shall tell them, ‘The LORD says: “‘Do men fall, and not rise up again? Does one turn away, and not return?
- American Standard Version (ASV)
- Moreover thou shalt say unto them, Thus saith Jehovah: Shall men fall, and not rise up again? Shall one turn away, and not return?
- Bible in Basic English (BBE)
- Further, you are to say to them, This is what the Lord has said: Will those who are falling not be lifted up again? will he who has gone away not come back?
- Darby Translation (DBY)
- And thou shalt say unto them, Thus saith Jehovah: Do [men] fall, and not rise up? Doth one turn away, and not return?
- Webster's Bible (WBS)
- Moreover, thou shalt say to them, Thus saith the LORD; Shall they fall, and not arise? shall he turn away, and not return?
- Young's Literal Translation (YLT)
- And thou hast said unto them: Thus said Jehovah, Do they fall, and not rise? Doth he turn back, and not return?
Read in context
- 2ಅವರು ಪ್ರೀತಿಸಿ ಸೇವಿಸಿ ಹಿಂಬಾಲಿಸಿ ಹುಡುಕಿ ಆರಾಧಿಸಿದ ಸೂರ್ಯ ಚಂದ್ರ ಸಮಸ್ತ ಆಕಾಶ ಸೈನ್ಯದ ಮುಂದೆ ಅವುಗಳನ್ನು ಚೆಲ್ಲುವರು; ಅವು ಕೂಡಿಸಲ್ಪಡವು, ಹೂಣಿಡಲ್ಪಡವು, ಅವು ಭೂಮಿಯ ಮೇಲೆ ಗೊಬ್ಬರವಾಗುವವು.
- 3ನಾನು ಉಳಿದವರನ್ನು ಓಡಿಸಿದ ಎಲ್ಲಾ ಸ್ಥಳಗಳಲ್ಲಿ ಜೀವಕ್ಕಿಂತ ಮರಣವನ್ನೇ ಆಯ್ದುಕೊಳ್ಳುವರೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ.
- 4ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇ ನಂದರೆ ಕರ್ತನು ಹೀಗೆ ಹೇಳುತ್ತಾನೆ--ಅವರು ಬಿದ್ದು ಮತ್ತೆ ಏಳರೋ? ಹಿಂಜರಿದವನು ಮತ್ತೆ ಬರುವದಿ ಲ್ಲವೋ?
- 5ಹಾಗಾದರೆ ಈ ಯೆರೂಸಲೇಮಿನ ಜನರು ನಿತ್ಯವಾದ ಹಿಂಜರಿಯುವಿಕೆಯಿಂದ ಯಾಕೆ ಹಿಂತಿರು ಗಿದ್ದಾರೆ? ಮೋಸವನ್ನು ಬಿಗಿಯಾಗಿ ಹಿಡಿಯುತ್ತಾರೆ, ಹಿಂದಿರುಗುವದಕ್ಕೆ ನಿರಾಕರಿಸುತ್ತಾರೆ.
- 6ನಾನು ಕಿವಿ ಗೊಟ್ಟು ಕೇಳಿದೆನು, ಆದರೆ ಅವರು ಯಥಾರ್ಥವಾಗಿ ಮಾತನಾಡಲಿಲ್ಲ. ಯಾವನಾದರೂ--ನಾನು ಎಂಥಾ ಕೆಲಸ ಮಾಡಿದ್ದೇನೆ ಎಂದು ಅಂದುಕೊಂಡು ತನ್ನ ಕೆಟ್ಟತನದ ನಿಮಿತ್ತ ಪಶ್ಚಾತ್ತಾಪ ಪಡಲಿಲ್ಲ; ಕುದುರೆ ಯುದ್ಧಕ್ಕೆ ರಭಸವಾಗಿ ಓಡುವ ಪ್ರಕಾರ ಪ್ರತಿಯೊ ಬ್ಬನೂ ತನ್ನ ದಾರಿಗೆ ತಿರುಗಿದ್ದಾನೆ.
Cross references
- Proverbs 24:16 ಜ್ಞಾನೋಕ್ತಿಗಳು 24:16ನೀತಿ ವಂತನು ಏಳು ಸಾರಿ ಬಿದ್ದರೂ ಮತ್ತೆ ಏಳುತ್ತಾನೆ; ಆದರೆ ದುಷ್ಟನು ಕೇಡಿಗೆ ಬೀಳುವನು.
- Micah 7:8 ಮೀಕ 7:8ನನ್ನ ಶತ್ರುವೇ, ನನ್ನ ಮೇಲೆ ಸಂತೋಷಪಡಬೇಡ; ನಾನು ಬಿದ್ದಿದ್ದರೂ ತಿರುಗಿ ಏಳುವೆನು; ಕತ್ತಲೆಯಲ್ಲಿ ಕೂತುಕೊಂಡರೂ ನನಗೆ ಬೆಳಕು ಕರ್ತನೇ.
- Hosea 6:1 ಹೋಶೇಯ 6:1ಬನ್ನಿರಿ ನಾವು ಕರ್ತನ ಕಡೆಗೆ ತಿರುಗಿ ಕೊಳ್ಳೋಣ ಯಾಕಂದರೆ ಆತನು ಸೀಳಿ ಬಿಟ್ಟಿದ್ದಾನೆ, ನಮ್ಮನ್ನು ಸ್ವಸ್ಥ ಮಾಡುತ್ತಾನೆ; ಆತನು ಹೊಡೆದಿದ್ದಾನೆ; ಆತನು ನಮ್ಮನ್ನು ಕಟ್ಟುತ್ತಾನೆ.
- Jeremiah 3:1 ಯೆರೆಮೀಯ 3:1ಒಬ್ಬನು ತನ್ನ ಹೆಂಡತಿಯನ್ನು ಬಿಟ್ಟುಬಿಟ್ಟಾಗ ಅವಳು ಅವನನ್ನು ಬಿಟ್ಟು ಹೋಗಿ ಬೇರೆಯವನವಳಾದರೆ ಅವನು ಇನ್ನು ಅವಳ ಹತ್ತಿರ ಹಿಂತಿರುಗುವನೋ? ಆ ದೇಶವು ಬಹಳವಾಗಿ ಅಪವಿತ್ರವಾಗುವದಿಲ್ಲವೋ? ನೀನು ಅನೇಕ ಮಿಂಡರ ಸಂಗಡ ಸೂಳೆತನ ಮಾಡಿದ್ದೀ; ಆದಾಗ್ಯೂ ನನ್ನ ಬಳಿಗೆ ತಿರುಗಿಕೋ ಎಂದು ಕರ್ತನು ಅನ್ನುತ್ತಾನೆ.
- Isaiah 55:7 ಯೆಶಾಯ 55:7ದುಷ್ಟನು ತನ್ನ ಮಾರ್ಗವನ್ನೂ ಅನೀತಿವಂತನು ತನ್ನ ಆಲೋಚನೆಗಳನ್ನೂ ತೊರೆದುಬಿಟ್ಟು ಕರ್ತನ ಕಡೆಗೆ ಹಿಂತಿರುಗಲಿ; ಆತನು ಅವನ ಮೇಲೆ ಕರುಣೆಯಿಡು ವನು; ನಮ್ಮ ದೇವರ ಬಳಿಗೂ ಹಿಂತಿರುಗಲಿ, ಆತನು ಹೇರಳವಾಗಿ ಕ್ಷಮಿಸುವನು.
- Amos 5:2 ಆಮೋಸ 5:2ಇಸ್ರಾಯೇಲಿನ ಕನ್ಯೆಯು ಬಿದ್ದಿದ್ದಾಳೆ, ಇನ್ನು ಮೇಲೆ ಎದ್ದೇಳುವದೇ ಇಲ್ಲ. ಅವಳು ತನ್ನ ಭೂಮಿಯ ಮೇಲೆ ತೊರೆದು ಬಿಡಲ್ಪಟ್ಟವಳಾಗಿದ್ದಾಳೆ. ಅಲ್ಲಿ ಅವಳನ್ನು ಎಬ್ಬಿಸುವವರು ಯಾರೂ ಇಲ್ಲ.
- Hosea 7:10 ಹೋಶೇಯ 7:10ಇಸ್ರಾಯೇಲಿನ ಗರ್ವವು ತನ್ನ ಮುಖದ ಮುಂದೆ ಸಾಕ್ಷಿ ಕೊಡುತ್ತದೆ; ಆದರೆ ಅವರು ತಮ್ಮ ಕರ್ತನಾದ ದೇವರ ಕಡೆಗೆ ತಿರುಗದೆ ಇದ್ದಾರೆ, ಇಲ್ಲವೆ ಆತನನ್ನು ಇದಕ್ಕೆಲ್ಲಾ ಹುಡು ಕುವದಿಲ್ಲ.
- Hosea 14:1 ಹೋಶೇಯ 14:1ಓ ಇಸ್ರಾಯೇಲೇ, ನಿನ್ನ ದೇವರಾದ ಕರ್ತನ ಕಡೆಗೆ ತಿರುಗಿಕೊ, ಯಾಕಂದರೆ ನೀನು ನಿನ್ನ ದುಷ್ಕೃತ್ಯದಿಂದ ಬಿದ್ದಿದ್ದೀ;
- Ezekiel 18:23 ಯೆಹೆಜ್ಕೇಲನು 18:23ದುಷ್ಟನು ಸಾಯುವದರಲ್ಲಿ ನನಗೆ ಸ್ವಲ್ಪವಾದರೂ ಸಂತೋಷವಿ ರುವದೋ ಎಂದು ದೇವರಾದ ಕರ್ತನು ಹೇಳುತ್ತಾನೆ; ಅವನು ತನ್ನ ನಡತೆಗಳಿಂದ ಹಿಂತಿರುಗಿಕೊಂಡು ಬದು ಕಿದರೆ ನನಗೆ ಸಂತೋಷವಲ್ಲವೇ?
- Jeremiah 23:14 ಯೆರೆಮೀಯ 23:14ಯೆರೂಸಲೇಮಿನ ಪ್ರವಾದಿಗಳಲ್ಲಿ ಭಯಂಕರವಾದದ್ದನ್ನು ನೋಡಿದ್ದೇನೆ; ಅವರು ವ್ಯಭಿಚಾರಮಾಡಿ ಸುಳ್ಳಿನಲ್ಲಿ ನಡಕೊಂಡದ್ದ ಲ್ಲದೆ ದುಷ್ಟರು ತಮ್ಮ ದುಷ್ಟತ್ವವನ್ನು ಬಿಟ್ಟು ತಿರುಗದ ಹಾಗೆ ಅವರ ಕೈಗಳನ್ನು ಬಲಪಡಿಸುತ್ತಾರೆ; ಅವರೆಲ್ಲರೂ ನನಗೆ ಸೊದೋಮಿನ ಹಾಗೆಯೂ ಅದರ ನಿವಾಸಿಗಳು ಗೊಮೋರದ ಹಾಗೆಯೂ ಇದ್ದಾರೆ.
- Isaiah 44:22 ಯೆಶಾಯ 44:22ನಾನು ನಿನ್ನ ದ್ರೋಹಗಳನ್ನು ಗಾಢವಾದ ಮೇಘದಂತೆ ಅಳಿಸಿಬಿಟ್ಟಿದ್ದೇನೆ; ನಿನ್ನ ಪಾಪಗಳನ್ನು ಮೋಡದಂತೆ ಹಾರಿಸಿದ್ದೇನೆ; ನನ್ನ ಕಡೆಗೆ ತಿರಿಗಿಕೋ, ನಾನು ನಿನ್ನನ್ನು ವಿಮೋಚಿಸಿದ್ದೇನೆ.
- 1 Kings 8:38 1 ಅರಸುಗಳು 8:38ನಿನ್ನ ಜನರಾದ ಸಮಸ್ತ ಇಸ್ರಾಯೇಲಿನ ಯಾವ ಮನುಷ್ಯ ನಾದರೂ ಯಾವ ಪ್ರಾರ್ಥನೆಯನ್ನಾದರೂ ವಿಜ್ಞಾಪನೆ ಯನ್ನಾದರೂ ಮಾಡಿದರೆ ತನ್ನ ಸ್ವಂತ ಹೃದಯದ ಬಾಧೆಯನ್ನು ತಿಳಿದು