Jeremiah · chapter 9 · verse 12
Jeremiah 9:12 in Kannada
ಇದನ್ನು ಗ್ರಹಿಸುವ ಜ್ಞಾನಿ ಯಾದ ಮನುಷ್ಯನು ಯಾರು? ಇದನ್ನು ತಿಳಿಸುವ ಹಾಗೆ ಕರ್ತನ ಬಾಯಿ ಯಾರ ಸಂಗಡ ಮಾತನಾಡಿತ್ತು? ದೇಶವು ಯಾವದಕ್ಕಾಗಿ ನಾಶವಾಗಿ ಹಾದು ಹೋಗುವ ವನಿಲ್ಲದೆ ಅರಣ್ಯದ ಹಾಗೆ ಹಾಳಾಯಿತು?
Idannu grahisuva jnyaani yaada manushyanu yaaru? Idannu tilisuva haage kartana baayi yaara sangada maatanaadittu? Deshavu yaavadakkaagi naashavaagi haadu hoguva vanillade aranyada haage haalaayitu?
Jeremiah 9:12 in English
- King James Version (KJV)
- Who [is] the wise man, that may understand this? and [who is he] to whom the mouth of the LORD hath spoken, that he may declare it, for what the land perisheth [and] is burned up like a wilderness, that none passeth through?
- World English Bible (WEB)
- Who is wise enough to understand this? Who is he to whom the mouth of the LORD has spoken, that he may declare it? Why has the land perished and burned up like a wilderness, so that no one passes through?
- American Standard Version (ASV)
- Who is the wise man, that may understand this? and [who is] he to whom the mouth of Jehovah hath spoken, that he may declare it? wherefore is the land perished and burned up like a wilderness, so that none passeth through?
- Bible in Basic English (BBE)
- Who is the wise man able to see this? who is he to whom the word of the Lord has come, so that he may make it clear? why is the land given to destruction and burned up like a waste place, so that no one goes through?
- Darby Translation (DBY)
- Who is a wise man, that he may understand this? and he to whom the mouth of Jehovah hath spoken, that he may declare it? Why is the land perished, burnt up like a wilderness, so that none passeth through?
- Webster's Bible (WBS)
- Who [is] the wise man that may understand this? and [who is he] to whom the mouth of the LORD hath spoken, that he may declare it, for what the land perisheth [and] is burned up like a wilderness, that none passeth through?
- Young's Literal Translation (YLT)
- Who [is] the wise man? and he understandeth this, And he to whom the mouth of Jehovah spake? And he doth declare it, For what hath the land perished? It hath been burnt up as a wilderness, Without any passing through.
Read in context
- 10ಬೆಟ್ಟಗಳಿಗೋಸ್ಕರ ನಾನು ಅಳುವಿಕೆಯನ್ನೂ ದುಃಖವನ್ನೂ ಅರಣ್ಯದ ಸ್ಥಳಗಳಿಗೋಸ್ಕರ ಗೋಳಾಟ ವನ್ನೂ ಎತ್ತುವೆನು; ಅವುಗಳ ಮೂಲಕ ಹಾದು ಹೋಗದ ಹಾಗೆ ಅದು ಸುಡಲ್ಪಟ್ಟಿದೆ; ದನಗಳ ಶಬ್ದವು ಕೇಳಲ್ಪಡುವದಿಲ್ಲ; ಆಕಾಶದ ಪಕ್ಷಿಗಳೂ ಮೃಗಗಳೂ ಸಹ ಓಡಿಹೋಗಿವೆ.
- 11ಇದಲ್ಲದೆ ಯೆರೂಸಲೇಮನ್ನು ದಿಬ್ಬೆಗಳಾಗಿಯೂ ನರಿಗಳ ಸ್ಥಾನವಾಗಿಯೂ ಮಾಡು ತ್ತೇನೆ; ಯೆಹೂದದ ಪಟ್ಟಣಗಳನ್ನು ನಿವಾಸಿಗಳಿಲ್ಲದೆ ಹಾಳುಮಾಡುತ್ತೇನೆ.
- 12ಇದನ್ನು ಗ್ರಹಿಸುವ ಜ್ಞಾನಿ ಯಾದ ಮನುಷ್ಯನು ಯಾರು? ಇದನ್ನು ತಿಳಿಸುವ ಹಾಗೆ ಕರ್ತನ ಬಾಯಿ ಯಾರ ಸಂಗಡ ಮಾತನಾಡಿತ್ತು? ದೇಶವು ಯಾವದಕ್ಕಾಗಿ ನಾಶವಾಗಿ ಹಾದು ಹೋಗುವ ವನಿಲ್ಲದೆ ಅರಣ್ಯದ ಹಾಗೆ ಹಾಳಾಯಿತು?
- 13ಕರ್ತನು ಹೇಳುವದೇನಂದರೆ--ನಾನು ಅವರ ಮುಂದೆ ಇಟ್ಟ ನನ್ನ ನ್ಯಾಯಪ್ರಮಾಣವನ್ನು ಅವರು ಬಿಟ್ಟು ನನ್ನ ಶಬ್ದಕ್ಕೆ ಕಿವಿಗೊಡದೆ ಅದರಲ್ಲಿ ನಡೆಯದೆ
- 14ತಮ್ಮ ಹೃದಯದ ಕಾಠಿಣ್ಯದ ಪ್ರಕಾರವಾಗಿಯೂ ತಮ್ಮ ತಂದೆಗಳು ಅವರಿಗೆ ಬೋಧಿಸಿದ ಬಾಳ್ ದೇವತೆ ಗಳ ಹಿಂದೆಯೂ ನಡೆದರು.
Cross references
- Hosea 14:9 ಹೋಶೇಯ 14:9ಈ ಸಂಗತಿಗಳನ್ನು ಗ್ರಹಿಸುವ ಜ್ಞಾನಿಯು ಯಾರು? ವಿವೇಕವುಳ್ಳವನು ಅವುಗಳನ್ನು ತಿಳಿದುಕೊಳ್ಳುವನೋ? ಕರ್ತನ ಮಾರ್ಗ ಗಳು ನ್ಯಾಯವಾಗಿದೆ; ಮತ್ತು ನೀತಿವಂತರು ಅದರಲ್ಲಿ ನಡೆಯುವರು; ಆದರೆ ಅಕ್ರಮಗಾರರು ಅವುಗಳಲ್ಲಿ ಬೀಳುವರು.
- Psalm 107:43 ಕೀರ್ತನೆಗಳು 107:43ಜ್ಞಾನಿಯು ಯಾವನೋ, ಅವನು ಇವುಗಳನ್ನು ಗಮನಿಸುವನು; ಅವರು ಕರ್ತನ ಪ್ರೀತಿ ಕರುಣೆಯನ್ನು ಗ್ರಹಿಸಿಕೊಳ್ಳುವರು.
- Psalm 107:34 ಕೀರ್ತನೆಗಳು 107:34ಫಲ ವುಳ್ಳ ಭೂಮಿಯನ್ನು ಬಂಜರಾಗಿಯೂ ಅದರ ನಿವಾಸಿ ಗಳ ಕೆಟ್ಟತನಕ್ಕೋಸ್ಕರ ಮಾರ್ಪಡಿಸುತ್ತಾನೆ.
- Deuteronomy 32:29 ಧರ್ಮೋಪದೇಶಕಾಂಡ 32:29ಅವರು ಜ್ಞಾನವಂತರಾಗಿ ಇದರ ವಿಷಯ ಬುದ್ಧಿ ತಂದುಕೊಂಡು ತಮ್ಮ ಕಡೇಕಾಲಕ್ಕಾಗಿ ಗ್ರಹಿಕೆಯುಳ್ಳ ವರಾದರೆ ಎಷ್ಟೋ ಒಳ್ಳೇದು!
- Jeremiah 16:10–13 ಯೆರೆಮೀಯ 16:10–13ಇದಲ್ಲದೆ ನೀನು ಈ ಜನರಿಗೆ ಈ ಮಾತುಗಳನ್ನೆಲ್ಲಾ ತಿಳಿಸಿದ ಮೇಲೆ ಅವರು ನಿನಗೆ--ಕರ್ತನು ನಮ್ಮ ಮೇಲೆ ಈ ದೊಡ್ಡ ಕೇಡನ್ನು ಏಕೆ ವಿಧಿಸಿದ್ದಾನೆ? ನಮ್ಮ ಅಕ್ರಮ ಏನು? ನಾವು ನಮ್ಮ ದೇವರಾದ ಕರ್ತನಿಗೆ ವಿರೋಧವಾಗಿ ಮಾಡಿರುವ ಪಾಪವೇನು ಎಂದು ಹೇಳಿದರೆ ನೀನು ಅವರಿಗೆ ಹೇಳಬೇಕಾದದ್ದೇನಂದರೆ--ಕರ್ತನು ಹೀಗನ್ನುತ್ತಾನೆ. ನಿಮ್ಮ ತಂದೆಗಳು ನನ್ನನ್ನು ಬಿಟ್ಟು ಬೇರೆ ದೇವರುಗಳನ್ನು ಹಿಂಬಾಲಿಸಿ ಸೇವಿಸಿ ಆರಾಧಿಸಿ ನನ್ನನ್ನು ತೊರೆದುಬಿಟ್ಟು, ನನ್ನ ನ್ಯಾಯ ಪ್ರಮಾಣವನ್ನು ಕೈಕೊಳ್ಳಲಿಲ್ಲ. ನೀವು ನಿಮ್ಮ ತಂದೆಗಳಿಗಿಂತ ಇನ್ನೂ ಕೆಟ್ಟ ಕೆಲಸ ಮಾಡಿದ್ದೀರಿ; ಇಗೋ, ನನ್ನನ್ನು ಕೇಳದ ಹಾಗೆ ನಿಮ್ಮ ನಿಮ್ಮ ಕೆಟ್ಟ ಹೃದಯದ ಕಲ್ಪನೆಯ ಪ್ರಕಾರ ನಡೆದುಕೊಂಡಿದ್ದೀರಿ. ಆದದರಿಂದ ನಾನು ನಿಮ್ಮನ್ನು ಈ ದೇಶದೊಳಗಿಂದ ಬಿಸಾಡಿ ನಿಮಗೂ ನಿಮ್ಮ ತಂದೆಗಳಿಗೂ ತಿಳಿಯದ ದೇಶಕ್ಕೆ ಎಸೆಯುವೆನು; ಅಲ್ಲಿ ನೀವು ರಾತ್ರಿ ಹಗಲು ಬೇರೆ ದೇವರುಗಳಿಗೆ ಸೇವೆಮಾಡುವಿರಿ ನಾನು ನಿಮಗೆ ಕನಿಕರ ತೋರಿಸುವದಿಲ್ಲ.
- Deuteronomy 29:22–28 ಧರ್ಮೋಪದೇಶಕಾಂಡ 29:22–28ಹೀಗೆ ನಿಮ್ಮ ತರುವಾಯ ಹುಟ್ಟುವ ನಿಮ್ಮ ಮಕ್ಕಳ ಮುಂದಿನ ಸಂತತಿಯೂ ದೂರ ದೇಶದಿಂದ ಬರುವ ಅನ್ಯನೂ ಆ ದೇಶದ ಬಾಧೆಗಳನ್ನೂ ಕರ್ತನು ಅದರಲ್ಲಿ ಬರಮಾಡಿದ ರೋಗಗಳನ್ನೂ ನೋಡಿ ಕರ್ತನು ತನ್ನ ಕೋಪದಲ್ಲಿಯೂ ರೌದ್ರದಲ್ಲಿಯೂ ಕೆಡವಿ ಹಾಕಿದ ಸೊದೋಮ್ ಗೊಮೋರ ಅದ್ಮಾಚೆಬೋ ಯಾಮ್ ಇವುಗಳ ಹಾಗೆ ಆ ದೇಶವೆಲ್ಲಾ ಗಂಧಕವೂ ಉಪ್ಪೂ ಉರಿಯುತ್ತಾ ಬಿತ್ತಲ್ಪಡದೆ ಮೊಳೆಯದೆ ಯಾವ ಹುಲ್ಲನ್ನಾದರೂ ಬೆಳೆಸದೆ ಇರುವದನ್ನು ನೋಡಿ-- ಯಾಕೆ ಕರ್ತನು ಈ ದೇಶಕ್ಕೆ ಹೀಗೆ ಮಾಡಿದ್ದಾನೆ. ಈ ದೊಡ್ಡ ಕೊಪಾಗ್ನಿ ಏನು ಎಂದು ಜನಾಂಗಗಳೆಲ್ಲಾ ಕೇಳುವರು. ಆಗ ಜನರು--ಅವರು ತಮ್ಮನ್ನು ಐಗುಪ್ತ ದೇಶದೊಳಗಿಂದ ಹೊರಗೆ ತರುವಾಗ ತಮ್ಮ ಪಿತೃಗಳ ದೇವರಾದ ಕರ್ತನು ತಮ್ಮ ಸಂಗಡ ಮಾಡಿದ ಒಡಂಬಡಿಕೆಯನ್ನು ಮರೆತುಬಿಟ್ಟು, ಹೋಗಿ ಬೇರೆ ದೇವರುಗಳನ್ನೂ ತಮಗೆ ತಿಳಿಯದಂಥ, ಆತನು ತಮಗೆ ನೇಮಿಸದಂಥ ದೇವರುಗಳನ್ನೂ ಸೇವಿಸಿ ಅಡ್ಡಬಿದ್ದ ದರಿಂದ ಕರ್ತನ ಕೋಪವು ಈ ದೇಶದ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಶಾಪವನ್ನೆಲ್ಲಾ ಅವರ ಮೇಲೆ ತರುವ ಹಾಗೆ ಉರಿಯಿತು. ಕರ್ತನು ಅವ ರನ್ನು ಕೋಪದಲ್ಲಿಯೂ ಸಿಟ್ಟಿನಲ್ಲಿಯೂ ಮಹಾರೌದ್ರ ದಲ್ಲಿಯೂ ದೇಶದಲ್ಲಿಂದ ಕಿತ್ತುಹಾಕಿ ಇಂದು ಇರುವ ಪ್ರಕಾರ ಬೇರೆ ದೇಶಕ್ಕೆ ಕಳುಹಿಸಿದ್ದಾನೆ.ರಹಸ್ಯಗಳು ನಮ್ಮ ದೇವರಾದ ಕರ್ತನಿಗೆ ಸೇರಿದ್ದು; ಆದರೆ ಪ್ರಕಟವಾದ ಈ ನ್ಯಾಯಪ್ರಮಾಣದ ಮಾತು ಗಳನ್ನೆಲ್ಲಾ ನಾವು ಮಾಡುವಹಾಗೆ ನಮಗೂ ನಮ್ಮ ಮಕ್ಕಳಿಗೂ ನಿತ್ಯವಾಗಿ ಇರುತ್ತವೆ.
- 1 Kings 9:8–9 1 ಅರಸುಗಳು 9:8–9ಇಸ್ರಾಯೇಲು ಸಮಸ್ತ ಜನಗಳಲ್ಲಿ ಗಾದೆ ಯಾಗಿಯೂ ಅಪಹಾಸ್ಯವಾಗಿಯೂ ಇರುವದು. ಇದ ಲ್ಲದೆ ಈ ಎತ್ತರವಾಗಿರುವ ಮನೆಯನ್ನು ಹಾದುಹೋಗು ವವರೆಲ್ಲರೂ ಅದಕ್ಕೆ ಆಶ್ಚರ್ಯಪಟ್ಟು--ಛೀ ಅಂದುಕರ್ತನು ಈ ದೇಶಕ್ಕೂ ಈ ಮಂದಿರಕ್ಕೂ ಹೀಗೆ ಯಾಕೆ ಮಾಡಿದನು ಎಂದು ಅನ್ನುವರು. ಅವರು ಪ್ರತ್ಯುತ್ತರವಾಗಿ--ತಮ್ಮ ತಂದೆಗಳನ್ನು ಐಗುಪ್ತದೇಶ ದೊಳಗಿಂದ ಬರಮಾಡಿದ ತಮ್ಮ ದೇವರಾದ ಕರ್ತ ನನ್ನು ಬಿಟ್ಟು ಅನ್ಯದೇವರುಗಳನ್ನು ಹೊಂದಿಕೊಂಡು ಅವುಗಳಿಗೆ ಅಡ್ಬಬಿದ್ದು ಸೇವಿಸಿದ್ದರಿಂದ ಕರ್ತನು ಈ ಕೇಡನ್ನೆಲ್ಲಾ ನಮ್ಮ ಮೇಲೆ ಬರಮಾಡಿದನೆಂದು ಹೇಳು ವರು ಅಂದನು.
- Ezekiel 22:25–31 ಯೆಹೆಜ್ಕೇಲನು 22:25–31ಕೊಳ್ಳೆಯನ್ನು ಸುಲಿದುಕೊಳ್ಳುವ ಘರ್ಜಿಸುವ ಸಿಂಹದ ಹಾಗೆ ಅದರ ಮಧ್ಯದಲ್ಲಿ ಪ್ರವಾದಿಗಳ ಒಳಸಂಚು ಉಂಟು; ಪ್ರಾಣಗಳನ್ನು ತಿಂದುಬಿಟ್ಟಿದ್ದಾರೆ. ಸಂಪತ್ತನ್ನೂ ಅಮೂಲ್ಯವಾದ ವಸ್ತುವನ್ನೂ ದೋಚಿ ಕೊಂಡಿದ್ದಾರೆ, ಅವರು ಅದರ ಮಧ್ಯದಲ್ಲಿ ಬಹಳ ಜನರನ್ನು ವಿಧವೆಯರನ್ನಾಗಿ ಮಾಡಿದ್ದಾರೆ. ಅದರ ಯಾಜಕರು ನನ್ನ ವಿಧಿಗಳನ್ನು ಭಂಗಪಡಿಸಿದ್ದಾರೆ; ನನ್ನ ಪರಿಶುದ್ಧ ವಸ್ತುಗಳನ್ನು ಅಪವಿತ್ರಪಡಿಸಿದ್ದಾರೆ; ಪರಿಶುದ್ಧ ವಾದದ್ದಕ್ಕೂ ಅಪವಿತ್ರವಾದದ್ದಕ್ಕೂ ಭೇದವೆಣಿಸಲಿಲ್ಲ; ಶುದ್ಧಾಶುದ್ಧ ವಿವೇಚನೆಯನ್ನು ಬೋಧಿಸಲಿಲ್ಲ, ನನ್ನ ಸಬ್ಬತ್ತುಗಳಿಗೆ ತಮ್ಮ ಕಣ್ಣುಗಳನ್ನು ಮರೆಮಾಡಿದ್ದಾರೆ. ಆದದರಿಂದ ನಾನು ಅವರಲ್ಲಿ ಅಪವಿತ್ರನಾದೆನು. ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ ಪ್ರಾಣ ಗಳನ್ನು ನುಂಗುವ ಹಾಗೆ ಬೇಟೆಯ ತೋಳಗಳಂತಿ ದ್ದಾರೆ. ಅವರ ಪ್ರವಾದಿಗಳು ಅವರಿಗೆ ಸುಣ್ಣ ಹಚ್ಚುತ್ತಾರೆ, ಮೋಸವನ್ನು ದರ್ಶಿಸಿ ಸುಳ್ಳು ಶಕುನ ಹೇಳುತ್ತಾರೆ; ಕರ್ತನು ಮಾತನಾಡದಿರುವದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು ತ್ತಾರೆ. ದೇಶದ ಜನರು ಬಲಾತ್ಕಾರ ಮಾಡಿದ್ದಾರೆ, ಕೊಳ್ಳೆಯನ್ನು ಹೊಡೆದಿದ್ದಾರೆ. ಬಡವನನ್ನೂ ದರಿದ್ರ ರನ್ನೂ ಪೀಡಿಸಿದ್ದಾರೆ; ಹೌದು, ಅವರು ನ್ಯಾಯವಿಲ್ಲದೆ ಒಬ್ಬ ಅಪರಿಚಿತನನ್ನು ಬಲಾತ್ಕಾರಪಡಿಸಿದ್ದಾರೆ. ಬೇಲಿ ಕಟ್ಟುವ ಮನುಷ್ಯನನ್ನು ದೇಶಕ್ಕೋಸ್ಕರ ನಾನು ಅದನು ನಾಶಮಾಡದ ಹಾಗೆ ಪೌಳಿಯ ಒಡಕಿನಲ್ಲಿ ನಿಲ್ಲತಕ್ಕ ವನನ್ನು ಹುಡುಕಿದೆನು, ಆದರೆ ಸಿಕ್ಕಲಿಲ್ಲ.ಆದದ ರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ; ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ; ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ. ಆದದ ರಿಂದ ನನ್ನ ರೋಷವನ್ನು ಅವರ ಮೇಲೆ ಸುರಿಸಿದ್ದೇನೆ; ನನ್ನ ಸಿಟ್ಟಿನ ಬೆಂಕಿಯಿಂದ ಅವರನ್ನು ಸಂಹರಿಸಿದ್ದೇನೆ; ಅವರ ಮಾರ್ಗವನ್ನು ಅವರ ತಲೆಗಳ ಮೇಲೆ ಮುಯ್ಯಿ ತೀರಿಸಿದ್ದೇನೆಂದು ದೇವರಾದ ಕರ್ತನು ಹೇಳುತ್ತಾನೆ.
- Jeremiah 22:8–9 ಯೆರೆಮೀಯ 22:8–9ಅನೇಕ ಜನಾಂಗಗಳು ಈ ಪಟ್ಟಣವನ್ನು ಹಾದುಹೋಗುವರು, ಕರ್ತನು ಈ ದೊಡ್ಡ ಪಟ್ಟಣಕ್ಕೆ ಯಾಕೆ ಈ ಪ್ರಕಾರ ಮಾಡಿ ದ್ದಾನೆಂದು ನೆರೆಯವರು ಒಬ್ಬರಿಗೊಬ್ಬರು ಹೇಳಿಕೊಳ್ಳು ವರು. ಆಗ ಅವರು--ತಮ್ಮ ದೇವರಾದ ಕರ್ತನ ಒಡಂಬಡಿಕೆಯನ್ನು ಬಿಟ್ಟು, ಬೇರೆ ದೇವರುಗಳಿಗೆ ನಮ ಸ್ಕರಿಸಿ ಸೇವಿಸಿದ್ದರಿಂದಲೇ ಎಂದು ಅವರು ಉತ್ತರ ಕೊಡುವರು.
- Matthew 24:15 ಮತ್ತಾಯನು 24:15ಆದದರಿಂದ ಪ್ರವಾದಿಯಾದ ದಾನಿಯೇಲನಿಂದ ಹೇಳಲ್ಪಟ್ಟ ಹಾಳುಮಾಡುವ ಅಸಹ್ಯವು ಪರಿಶುದ್ಧ ಸ್ಥಳದಲ್ಲಿ ನಿಂತಿರುವದನ್ನು ನೀವು ನೋಡುವಾಗ (ಓದುವವನು ಗ್ರಹಿಸಲಿ)
- Ezekiel 14:23 ಯೆಹೆಜ್ಕೇಲನು 14:23ನೀವು ಅದರ ದುರ್ಮಾರ್ಗಗಳನ್ನೂ ದುಷ್ಕೃತ್ಯ ಗಳನ್ನೂ ನೋಡುವಾಗ ಅದರಿಂದಲೇ ನಿಮಗೆ ಸಮಾಧಾನವಾಗುವದು; ನಾನು ಅದರೊಳಗೆ ಮಾಡಿದ್ದೆಲ್ಲವು ಕಾರಣವಿಲ್ಲದೆ ಮಾಡಲಿಲ್ಲವೆಂದು ತಿಳಿದುಕೊಳ್ಳುವಿರಿ ಎಂದು ದೇವರಾದ ಕರ್ತನು ಹೇಳುತ್ತಾನೆ.
- Jeremiah 5:19–20 ಯೆರೆಮೀಯ 5:19–20ನಮ್ಮ ದೇವರಾದ ಕರ್ತನು ಯಾಕೆ ನಮಗೆ ಇವುಗಳನ್ನೆಲ್ಲಾ ಮಾಡುತ್ತಾನೆಂದು ಅವರು ಹೇಳು ವಾಗ--ನೀನು ಅವರಿಗೆ--ನೀವು ನನ್ನನ್ನು ಬಿಟ್ಟು, ನಿಮ್ಮ ದೇಶದಲ್ಲಿ ಬೇರೆ ದೇವರುಗಳನ್ನು ಸೇವಿಸಿದ ಹಾಗೆ ನಿಮ್ಮದಲ್ಲದ ದೇಶದಲ್ಲಿ ಅನ್ಯರನ್ನು ಸೇವಿಸುವಿರಿ ಎಂದು ಹೇಳಬೇಕು. ಯಾಕೋಬನ ಮನೆತನದಲ್ಲಿ ಇದನ್ನು ತಿಳಿಸಿರಿ. ಯೆಹೂದದಲ್ಲಿ ಪ್ರಕಟಿಸಿರಿ, ಏನಂದರೆ