Jeremiah · chapter 9 · verse 2
Jeremiah 9:2 in Kannada
ಹಾ, ಅರಣ್ಯದಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೇದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು; ಅವರೆಲ್ಲರೂ ವ್ಯಭಿಚಾರಿಗಳೇ, ವಂಚಕರ ಕೂಟವೇ.
Haa, aranyadalli nanage prayaanasthara chhatravu iddare olledu, aaga nanna janarannu bittu horatu hoguttiddenu; avarellaroo vyabhichaarigale, vanchakara kootave.
Jeremiah 9:2 in English
- King James Version (KJV)
- Oh that I had in the wilderness a lodging place of wayfaring men; that I might leave my people, and go from them! for they [be] all adulterers, an assembly of treacherous men.
- World English Bible (WEB)
- Oh that I had in the wilderness a lodging place of wayfaring men, that I might leave my people and go from them! For they are all adulterers, an assembly of treacherous men.
- American Standard Version (ASV)
- Oh that I had in the wilderness a lodging-place of wayfaring men; that I might leave my people, and go from them! for they are all adulterers, an assembly of treacherous men.
- Bible in Basic English (BBE)
- If only I had in the waste land a night's resting-place for travellers, so that I might go away, far from my people! for they are all untrue, a band of false men.
- Darby Translation (DBY)
- Oh that I had in the wilderness a traveller's lodging-place, that I might leave my people, and go away from them! For they are all adulterers, an assembly of treacherous men.
- Webster's Bible (WBS)
- Oh that I had in the wilderness a lodging-place of way-faring men; that I might leave my people, and go from them! for they [are] all adulterers, an assembly of treacherous men.
- Young's Literal Translation (YLT)
- Who doth give me in a wilderness A lodging-place of travellers? And I leave my people, and go from them, For all of them [are] adulterers, An assembly of treacherous ones.
Read in context
- 1ಅಯ್ಯೋ, ನನ್ನ ತಲೆ ನೀರಾಗಿಯೂ ನನ್ನ ಕಣ್ಣುಗಳು ಕಣ್ಣೀರಿನ ಬುಗ್ಗೆಯಾಗಿಯೂ ಇದ್ದರೆ ಒಳ್ಳೇದು! ಆಗ ನನ್ನ ಜನರ ಮಗಳ ಹತವಾದ ವರ ನಿಮಿತ್ತ ಹಗಲು ರಾತ್ರಿ ಅಳುವೆನು.
- 2ಹಾ, ಅರಣ್ಯದಲ್ಲಿ ನನಗೆ ಪ್ರಯಾಣಸ್ಥರ ಛತ್ರವು ಇದ್ದರೆ ಒಳ್ಳೇದು, ಆಗ ನನ್ನ ಜನರನ್ನು ಬಿಟ್ಟು ಹೊರಟು ಹೋಗುತ್ತಿದ್ದೆನು; ಅವರೆಲ್ಲರೂ ವ್ಯಭಿಚಾರಿಗಳೇ, ವಂಚಕರ ಕೂಟವೇ.
- 3ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬೊಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವದಿಲ್ಲ; ಅವರು ಕೇಡಿನಿಂದ ಕೇಡಿಗೆ ಹೋಗುತ್ತಾ ನನ್ನನ್ನು ಅರಿಯದೆ ಇದ್ದಾರೆಂದು ಕರ್ತನು ಅನ್ನುತ್ತಾನೆ.
- 4ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ; ಯಾವ ಸಹೋದರ ನಲ್ಲಾದರೂ ನಂಬಿಕೆ ಇಡಬೇಡಿರಿ; ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸಮಾಡುವರು, ನೆರೆಯವ ರೆಲ್ಲರು ಚಾಡಿಹೇಳುತ್ತಾ ತಿರುಗಾಡುವರು.
Cross references
- Jeremiah 5:7–8 ಯೆರೆಮೀಯ 5:7–8ಇದಕ್ಕಾಗಿ ನಾನು ನಿನ್ನನ್ನು ಹೇಗೆ ಮನ್ನಿಸಲಿ? ನಿನ್ನ ಮಕ್ಕಳು ನನ್ನನ್ನು ಬಿಟ್ಟು ದೇವರಲ್ಲದವುಗಳ ಮೇಲೆ ಆಣೆ ಇಟ್ಟುಕೊಂಡಿದ್ದಾರೆ; ನಾನು ಅವರನ್ನು ತೃಪ್ತಿಪಡಿ ಸಿದ ಮೇಲೆ ಅವರು ವ್ಯಭಿಚಾರಮಾಡಿ ಸೂಳೆಯರ ಮನೆಗಳಲ್ಲಿ ಗುಂಪಾಗಿ ಕೂಡಿಕೊಂಡರು. ಬೆಳಗಿ ನಲ್ಲಿ ಕೊಬ್ಬಿದ ಕುದುರೆಗಳ ಹಾಗಿದ್ದಾರೆ; ತಮ್ಮ ತಮ್ಮ ನೆರೆಯವರ ಹೆಂಡತಿಯರಿಗೋಸ್ಕರ ಹೂಂಕರಿ ಸುತ್ತಾರೆ.
- Jeremiah 23:10 ಯೆರೆಮೀಯ 23:10ದೇಶವು ವ್ಯಭಿಚಾರಗಳಿಂದ ತುಂಬಿದೆ; ಶಾಪದಿಂದ ದುಃಖಿಸು ತ್ತದೆ; ಅರಣ್ಯದ ಮನೋಹರವಾದ ಸ್ಥಳಗಳು ಒಣಗಿ ಹೋಗಿವೆ; ಅವರ ಓಟವು ಕೆಟ್ಟದ್ದಾಗಿದೆ; ಅವರ ಶಕ್ತಿಯು ಸರಿ ಇಲ್ಲ.
- Hosea 4:2 ಹೋಶೇಯ 4:2ಆಣೆಯಿಡುವದೂ ಸುಳ್ಳು ಹೇಳು ವದೂ ಕೊಲ್ಲುವದೂ ಕದಿಯುವದೂ ವ್ಯಭಿಚಾರ ಮಾಡುವದೂ ಹೆಚ್ಚಾಗಿಬಿಟ್ಟಿವೆ; ರಕ್ತಕ್ಕೆ ರಕ್ತ ಸೇರುತ್ತದೆ;
- Jeremiah 12:1 ಯೆರೆಮೀಯ 12:1ಕರ್ತನೇ, ನಾನು ನಿನ್ನ ಸಂಗಡ ವಾದಿಸುವಾಗ ನೀನು ನೀತಿವಂತನೇ ಆಗಿದ್ದೀ; ಆದಾಗ್ಯೂ ನಾನು ನಿನ್ನ ಸಂಗಡ ನ್ಯಾಯವಾದವುಗಳನು ಕುರಿತು ಮಾತನಾಡಲು ಬಿಡು; ದುಷ್ಟರ ಮಾರ್ಗವು ಸಫಲವಾಗುವದು ಯಾಕೆ? ಮಹಾವಂಚನೆ ಮಾಡು ವವರೆಲ್ಲರು ಯಾಕೆ ಸುಖವಾಗಿರುವರು.
- Hosea 7:4 ಹೋಶೇಯ 7:4ಅವರೆ ಲ್ಲರೂ ವ್ಯಭಿಚಾರಿಗಳು; ರೊಟ್ಟಿಗಾರನು ಬಿಸಿಮಾಡಿದ ಒಲೆಯ ಹಾಗೆ ಇದ್ದಾರೆ, ಅವನು ಹಿಟ್ಟು ನಾದಿದ ಮೇಲೆ ಅದು ಹುಳಿಯಾಗುವ ತನಕ ಬಿಸಿಮಾಡುವ ದನ್ನು ಬಿಟ್ಟುಬಿಡುತ್ತಾನೆ.
- Jeremiah 12:6 ಯೆರೆಮೀಯ 12:6ನಿನ್ನ ಸಹೋದರರೂ ನಿನ್ನ ತಂದೆಯ ಮನೆತನದವರೂ ಇವರೇ ನಿನಗೆ ವಂಚನೆ ಮಾಡಿದ್ದಾರೆ; ಹೌದು, ಇವರೇ ನಿನ್ನ ಹಿಂದೆ ಸಮೂಹವನ್ನು ಕರೆದಿದ್ದಾರೆ, ಅವರು ನಿನಗೆ ಒಳ್ಳೇ ಮಾತುಗಳನ್ನು ಹೇಳಿದರೂ ಅವರನ್ನು ನಂಬಬೇಡ.
- Zephaniah 3:4 ಚೆಫನ್ಯ 3:4ಅದರ ಪ್ರವಾದಿಗಳು ಹಗುರವಾಗಿಯೂ ವಂಚಕರಾಗಿಯೂ ಇದ್ದಾರೆ; ಅದರ ಯಾಜಕರು ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಿ ದ್ದಾರೆ; ನ್ಯಾಯಪ್ರಮಾಣಕ್ಕೆ ಬಲಾತ್ಕಾರಮಾಡಿದ್ದಾರೆ.
- Psalm 120:5–7 ಕೀರ್ತನೆಗಳು 120:5–7ಕೇದಾರಿನ ಗುಡಾರಗಳ ಬಳಿಯಲ್ಲಿ ವಾಸ ಮಾಡಿ ಮೇಷೆಕಿನಲ್ಲಿ ಪ್ರವಾಸಿಯಾಗಿರುವದರಿಂದ ನನಗೆ ಅಯ್ಯೋ! ನನ್ನ ಪ್ರಾಣವು ಸಮಾಧಾನವನ್ನು ಹಗೆ ಮಾಡುವವರ ಸಂಗಡ ವಾಸಮಾಡಿ ಸಾಕಾಯಿತು.ನಾನು ಸಮಾಧಾನವಾಗಿದ್ದೇನೆ; ಆದರೆ ನಾನು ಮಾತಾಡಲು ಅವರು ಯುದ್ಧಮಾಡು ವದಕ್ಕಿದ್ದಾರೆ. ನಾನು ಸಮಾಧಾನವಾಗಿದ್ದೇನೆ; ಆದರೆ ನಾನು ಮಾತಾಡಲು ಅವರು ಯುದ್ಧಮಾಡು ವದಕ್ಕಿದ್ದಾರೆ.
- Ezekiel 22:10–11 ಯೆಹೆಜ್ಕೇಲನು 22:10–11ನಿನ್ನಲ್ಲಿ ತಂದೆಯ ಬೆತ್ತಲೆತನವನ್ನು ಹೊರಗೆಡವಿದ್ದಾರೆ; ನಿನ್ನಲ್ಲಿ ಮುಟ್ಟಾಗಿ ಪ್ರತ್ಯೇಕವಾಗಿರುವವರನ್ನು ಕೂಡಿದ್ದಾರೆ; ಒಬ್ಬನು ತನ್ನ ನೆರೆಯವನ ಹೆಂಡತಿಯ ಸಂಗಡ ದುರಾಚಾರವನ್ನು ಮಾಡಿದ್ದಾನೆ; ಮತ್ತೊಬ್ಬನು ಅಕೃತ್ಯದಿಂದ ಸೊಸೆಯನ್ನು ಕೆಡಿಸಿದ್ದಾನೆ; ಇನ್ನೊಬ್ಬನು ತನ್ನ ತಂದೆಯ ಮಗಳಾದ ತನ್ನ ಸಹೋದರಿಯನ್ನೇ ಭಂಗಪಡಿಸಿದ್ದಾನೆ.
- Psalm 55:6–8 ಕೀರ್ತನೆಗಳು 55:6–8ನನಗೆ ಪಾರಿವಾಳದಂತೆ ರೆಕ್ಕೆಗಳಿರುತ್ತಿದ್ದರೆ ಹಾರಿ ಹೋಗಿ ವಿಶ್ರಾಂತಿಯನ್ನು ತೆಗೆದುಕೊಳ್ಳುತ್ತಿದ್ದೆನು ಎಂದು ಅಂದುಕೊಂಡೆನು. ಇಗೋ, ದೂರದ ಅರ ಣ್ಯಕ್ಕೆ ಅಲೆದಾಡುತ್ತಾ ಹೋಗಿ ತಂಗುವೆನು. ಸೆಲಾ. ಗಾಳಿಯ ತುಫಾನಿಗೂ ಬಿರುಗಾಳಿಗೂ ತಪ್ಪಿಸಿಕೊಳ್ಳಲು ತ್ವರೆಪಡುವೆನು.
- Micah 7:1–7 ಮೀಕ 7:1–7ನನಗೆ ಅಯ್ಯೋ, ಯಾಕಂದರೆ ನಾನು ಬೇಸಿಗೆ ಕಾಲದ ಹಣ್ಣುಗಳನ್ನು ಕೂಡಿಸುವ ವರ ಹಾಗೆಯೂ ದ್ರಾಕ್ಷೇ ಸುಗ್ಗಿಯಲ್ಲಿ ಹಕ್ಕಲು ಆರಿಸುವವರ ಹಾಗೆಯೂ ಇದ್ದೇನೆ; ತಿನ್ನುವದಕ್ಕೆ ಗೊನೆ ಇಲ್ಲ. ನನ್ನ ಪ್ರಾಣವು ಮೊದಲು ಹಣ್ಣಾದ ಅಂಜೂರ ವನ್ನು ಅಪೇಕ್ಷಿಸಿಯದೆ. ಒಳ್ಳೆಯವನು ಭೂಮಿಯೊಳ ಗಿಂದ ನಾಶವಾಗಿದ್ದಾನೆ; ಮನುಷ್ಯರಲ್ಲಿ ಯಥಾರ್ಥನು ಇಲ್ಲ; ಅವರೆಲ್ಲರು ರಕ್ತಕ್ಕೆ ಹೊಂಚಿ ನೋಡುತ್ತಾರೆ; ತಮ್ಮ ತಮ್ಮ ಸಹೋದರರನ್ನು ಬಲೆಹಾಕಿ ಬೇಟೆ ಆಡುತ್ತಾರೆ. ಕೆಟ್ಟದ್ದನ್ನು ಎರಡು ಕೈಗಳಿಂದ ಚೆನ್ನಾಗಿ ಮಾಡುವ ಹಾಗೆ ಪ್ರಧಾನನೂ ನ್ಯಾಯಾಧಿಪತಿಯೂ ಬಹುಮಾನವನ್ನು ಕೇಳುತ್ತಾರೆ; ದೊಡ್ಡ ಮನುಷ್ಯನು ತನ್ನ ಕೇಡಿನ ಆಸೆಯನ್ನು ತಾನೇ ಹೇಳುತ್ತಾನೆ; ಅವರು ಒಂದೇ ಕಟ್ಟಾಗಿದ್ದಾರೆ. ಅವರಲ್ಲಿ ಉತ್ತಮನು ದತ್ತೂರಿಯ ಹಾಗೆಯೂ ಬಹು ಯಥಾರ್ಥನು ಮುಳ್ಳಿನ ಬೇಲಿಯ ಹಾಗೆಯೂ ಇದ್ದಾನೆ; ನಿನ್ನ ಕಾವಲುಗಾರರ ದಿವಸವೂ ನಿನ್ನ ವಿಚಾರಣೆಯೂ ಬರುತ್ತದೆ, ಈಗಲೇ ಅವರಿಗೆ ಗಾಬರಿಯಾಗುವದು. ಸ್ನೇಹಿತನಲ್ಲಿ ನಂಬಿಕೆ ಇಡಬೇಡಿರಿ; ಆಪ್ತಸ್ನೇಹಿತನಲ್ಲಿ ಭರವಸವಿಡಬೇಡಿರಿ; ನಿನ್ನ ಎದೆಯ ಮೇಲೆ ಮಲಗುವವಳಿಗೆ ನಿನ್ನ ಬಾಯಿಯ ಬಾಗಲುಗಳನ್ನು ಕಾಯಿ. ಮಗನು ತನ್ನ ತಂದೆಯನ್ನು ಅವಮಾನ ಮಾಡುತ್ತಾನೆ; ಮಗಳು ತನ್ನ ತಾಯಿಗೂ ಸೊಸೆಯು ತನ್ನ ಅತ್ತೆಗೂ ವಿರೋಧವಾಗಿ ಏಳುತ್ತಾರೆ; ಒಬ್ಬ ಮನುಷ್ಯನಿಗೆ ಸ್ವಂತ ಮನೆಯವರೇ ಶತ್ರುಗಳು. ಆದರೆ ನಾನು ಕರ್ತನನ್ನು ಎದುರು ನೋಡುವೆನು; ನನ್ನ ರಕ್ಷಣೆಯ ದೇವರಿಗೋಸ್ಕರ ಕಾದುಕೊಳ್ಳುವೆನು; ನನ್ನ ದೇವರು ನನ್ನನ್ನು ಕೇಳುವನು.
- James 4:4 ಯಾಕೋಬನು 4:4ವ್ಯಭಿಚಾರಿಗಳೇ, ವ್ಯಭಿಚಾರಿಣಿ ಯರೇ, ಇಹಲೋಕ ಸ್ನೇಹವು ದೇವವೈರವೆಂದು ನಿಮಗೆ ತಿಳಿಯದೋ? ಲೋಕಕ್ಕೆ ಸ್ನೇಹಿತನಾಗಿರ ಬೇಕೆಂದಿರುವವನು ದೇವರಿಗೆ ವೈರಿಯಾಗಿದ್ದಾನೆ.