Jeremiah · chapter 9 · verse 25
Jeremiah 9:25 in Kannada
ಕರ್ತನು ಹೇಳುವದೇನಂದರೆ --ಇಗೋ, ನಾನು ಸುನ್ನತಿಯಿಲ್ಲದವರ ಸಂಗಡ ಸುನ್ನತಿ ಯುಳ್ಳವರೆಲ್ಲರನ್ನೂಐಗುಪ್ತವನ್ನೂ ಯೆಹೂದ ವನ್ನೂ ಎದೋಮನ್ನೂ ಅಮ್ಮೋನನ ಮಕ್ಕಳನ್ನೂ ಮೋವಾಬನ್ನೂ ಅರಣ್ಯ ನಿವಾಸಿಗಳಾಗಿರುವ ಕಟ್ಟ ಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿನಗಳು ಬರುತ್ತವೆ. ಈ ಜನಾಂಗಗಳವರು ಸುನ್ನತಿ ಯಿಲ್ಲದವರು; ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿಯಿಲ್ಲದವರಾಗಿದ್ದಾರೆ.
Kartanu heluvadenandare --igo, naanu sunnatiyilladavara sangada sunnati yullavarellarannooaiguptavannoo yehooda vannoo edomannoo ammonana makkalannoo movaabannoo aranya nivaasigalaagiruva katta kadeya mooleyalli iruvavarannoo naanu shikshisuva dinagalu baruttave. Ee janaangagalavaru sunnati yilladavaru; israayelina manetanadavarellaroo hrudayadalli sunnatiyilladavaraagiddaare.
Jeremiah 9:25 in English
- King James Version (KJV)
- Behold, the days come, saith the LORD, that I will punish all [them which are] circumcised with the uncircumcised;
- World English Bible (WEB)
- “Behold, the days come,” says the LORD, “that I will punish all those who are circumcised only in their flesh:
- American Standard Version (ASV)
- Behold, the days come, saith Jehovah, that I will punish all them that are circumcised in [their] uncircumcision:
- Bible in Basic English (BBE)
- See, the day is coming, says the Lord, when I will send punishment on all those who have circumcision in the flesh;
- Darby Translation (DBY)
- Behold, days are coming, saith Jehovah, when I will visit all [them that are] circumcised with the uncircumcised;
- Webster's Bible (WBS)
- Behold, the days come, saith the LORD, that I will punish all [them who are] circumcised with the uncircumcised;
- Young's Literal Translation (YLT)
- Lo, days are coming — an affirmation of Jehovah, And I have laid a charge on all circumcised in the foreskin,
Read in context
- 23ಕರ್ತನು ಹೀಗೆ ಹೇಳುತ್ತಾನೆ--ಜ್ಞಾನಿಯು ತನ್ನ ಜ್ಞಾನದಲ್ಲಿ ಹೆಚ್ಚಳಪಡದಿರಲಿ; ಬಲಿಷ್ಟನು ತನ್ನ ಬಲ ದಲ್ಲಿ ಹೆಚ್ಚಳ ಪಡದಿರಲಿ; ಐಶ್ವರ್ಯವಂತನು ತನ್ನ ಐಶ್ವರ್ಯದಲ್ಲಿ ಹೆಚ್ಚಳಪಡದಿರಲಿ.
- 24ಆದರೆ ಹೆಚ್ಚಳ ಪಡುವವನು ಇದರಲ್ಲಿ ಹೆಚ್ಚಳಪಡಲಿ; ಯಾವದರಲ್ಲಿ ಅಂದರೆ ಕರ್ತನಾದ ನಾನು ಭೂಮಿಯಲ್ಲಿ ಕೃಪೆಯನ್ನೂ ನ್ಯಾಯವನ್ನೂ ನೀತಿಯನ್ನೂ ನಡಿಸುವವನಾಗಿದ್ದೇ ನೆಂದು ನನ್ನನ್ನು ಗ್ರಹಿಸಿ ತಿಳುಕೊಳ್ಳುವದರಲ್ಲಿಯೇ; ಇವುಗಳಲ್ಲಿ ನಾನು ಸಂತೋಷ ಪಡುತ್ತೇನೆಂದು ಕರ್ತನು ಅನ್ನುತ್ತಾನೆ.
- 25ಕರ್ತನು ಹೇಳುವದೇನಂದರೆ --ಇಗೋ, ನಾನು ಸುನ್ನತಿಯಿಲ್ಲದವರ ಸಂಗಡ ಸುನ್ನತಿ ಯುಳ್ಳವರೆಲ್ಲರನ್ನೂಐಗುಪ್ತವನ್ನೂ ಯೆಹೂದ ವನ್ನೂ ಎದೋಮನ್ನೂ ಅಮ್ಮೋನನ ಮಕ್ಕಳನ್ನೂ ಮೋವಾಬನ್ನೂ ಅರಣ್ಯ ನಿವಾಸಿಗಳಾಗಿರುವ ಕಟ್ಟ ಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿನಗಳು ಬರುತ್ತವೆ. ಈ ಜನಾಂಗಗಳವರು ಸುನ್ನತಿ ಯಿಲ್ಲದವರು; ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿಯಿಲ್ಲದವರಾಗಿದ್ದಾರೆ.
- 26ಐಗುಪ್ತವನ್ನೂ ಯೆಹೂದ ವನ್ನೂ ಎದೋಮನ್ನೂ ಅಮ್ಮೋನನ ಮಕ್ಕಳನ್ನೂ ಮೋವಾಬನ್ನೂ ಅರಣ್ಯ ನಿವಾಸಿಗಳಾಗಿರುವ ಕಟ್ಟ ಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿನಗಳು ಬರುತ್ತವೆ. ಈ ಜನಾಂಗಗಳವರು ಸುನ್ನತಿ ಯಿಲ್ಲದವರು; ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿಯಿಲ್ಲದವರಾಗಿದ್ದಾರೆ.
Cross references
- Galatians 5:2–6 ಗಲಾತ್ಯದವರಿಗೆ 5:2–6ಇಗೋ, ಪೌಲನೆಂಬ ನಾನು ನಿಮಗೆ ಹೇಳುವದೇನಂದರೆ, ನೀವು ಸುನ್ನತಿ ಮಾಡಿಸಿಕೊಂಡರೆ ಕ್ರಿಸ್ತನಿಂದ ನಿಮಗೆ ಏನು ಪ್ರಯೋಜನವಿಲ್ಲ. ಯಾಕಂದರೆ ಸುನ್ನತಿ ಮಾಡಿಸಿಕೊಳ್ಳುವ ಪ್ರತಿ ಯೊಬ್ಬನು ನ್ಯಾಯಪ್ರಮಾಣವನ್ನೆಲ್ಲಾ ಕೈಕೊಳ್ಳುವ ಹಂಗಿನಲ್ಲಿದ್ದಾನೆ ಎಂದು ತಿರಿಗಿ ಪ್ರಮಾಣವಾಗಿ ಹೇಳುತ್ತೇನೆ. ನಿಮ್ಮಲ್ಲಿ ಯಾರಾದರೂ ನ್ಯಾಯ ಪ್ರಮಾಣದ ಮೂಲಕ ನೀತಿವಂತರಾಗಬೇಕೆಂದಿದ್ದರೆ ಅವರಿಗೆ ಕ್ರಿಸ್ತನಿಂದ ಯಾವ ಪ್ರಯೋಜನವೂ ಆಗುವದಿಲ್ಲ; ನೀವು ಕೃಪೆಯಿಂದ ಬಿದ್ದವರಾಗಿದ್ದೀರಿ. ನಾವಾದರೋ ಆತ್ಮನ ಮೂಲಕ ನಂಬಿಕೆಯಿಂದಾದ ನೀತಿಯ ನಿರೀಕ್ಷೆಗಾಗಿ ಎದುರು ನೋಡುತ್ತೇವೆ. ಯಾಕಂದರೆ ಯೇಸು ಕ್ರಿಸ್ತನಲ್ಲಿರುವವರಿಗೆ ಸುನ್ನತಿ ಯಾದರೂ ಪ್ರಯೋಜನವಿಲ್ಲ, ಆಗದಿದ್ದರೂ ಪ್ರಯೋ ಜನವಿಲ್ಲ. ಪ್ರೀತಿಯಿಂದ ಕೆಲಸನಡಿಸುವ ನಂಬಿಕೆ ಯಿಂದಲೇ ಪ್ರಯೋಜನವಾಗುತ್ತದೆ.
- Romans 2:8–9 ರೋಮಾಪುರದವರಿಗೆ 2:8–9ಕಲಹಪ್ರಿಯ ರಾಗಿದ್ದು ಸತ್ಯಕ್ಕೆ ವಿಧೇಯರಾಗದೆ ಅನೀತಿಗೆ ವಿಧೇಯ ರಾಗಿ ಕೆಟ್ಟದ್ದನ್ನು ಮಾಡುವ ಪ್ರತಿಯೊಬ್ಬನಿಗೆ ಅಂದರೆ ಮೊದಲು ಯೆಹೂದ್ಯರಿಗೆ ಆಮೇಲೆ ಅನ್ಯರಿಗೆ ಸಹ ರೌದ್ರ, ಕೋಪ, ಸಂಕಟ ಮತ್ತು ಯಾತನೆಯನೂ
- Romans 2:25–26 ರೋಮಾಪುರದವರಿಗೆ 2:25–26ನೀನು ನ್ಯಾಯಪ್ರಮಾಣವನ್ನು ಕೈಕೊಂಡರೆ ಸುನ್ನತಿಯು ನಿಜವಾಗಿಯೂ ಪ್ರಯೋಜನವಾದದ್ದೇ. ಆದರೆ ನೀನು ನ್ಯಾಯಪ್ರಮಾಣವನ್ನು ವಿಾರುವದಾದರೆ ನಿನ್ನ ಸುನ್ನತಿಯು ಸುನ್ನತಿ ಅಲ್ಲ. ಆದದರಿಂದ ಸುನ್ನತಿಯಿಲ್ಲದವನು ನ್ಯಾಯ ಪ್ರಮಾಣದ ನೀತಿಯನ್ನು ಕೈಕೊಂಡರೆ ಸುನ್ನತಿಯಿಲ್ಲದವನಾದ ಅವನಿಗೆ ಅದು ಸುನ್ನತಿಯೆಂದು ಎಣಿಸಲ್ಪಡುವದಿಲ್ಲವೋ?
- Ezekiel 28:10 ಯೆಹೆಜ್ಕೇಲನು 28:10ನೀನು ಅನ್ಯರ ಕೈಯಿಂದ ಸುನ್ನತಿ ಹೀನರ ಮರಣಕ್ಕೆ ಗುರಿ ಯಾಗುವಿ ನಾನೇ ಇದನ್ನು ಹೇಳಿದ್ದೇನೆಂದು ದೇವರಾದ ಕರ್ತನು ಹೇಳಿದ್ದಾನೆ.
- Amos 3:2 ಆಮೋಸ 3:2ಭೂಮಿಯ ಎಲ್ಲಾ ಕುಟುಂಬಗಳಲ್ಲಿ ನಿಮ್ಮನ್ನು ಮಾತ್ರವೇ ತಿಳಿದಿದ್ದೇನೆ; ಆದದರಿಂದ ನಾನು ನಿಮ್ಮ ಎಲ್ಲಾ ಅಕ್ರಮಗಳಿಗಾಗಿ ಶಿಕ್ಷಿಸುತ್ತೇನೆ.
- Ezekiel 32:19–32 ಯೆಹೆಜ್ಕೇಲನು 32:19–32ನೀನು ಸೌಂದರ್ಯದಲ್ಲಿ ಯಾರಿಗೆ ಹೋಲುವಿ? ಕೆಳಗೆ ಹೋಗು ಮತ್ತು ಸುನ್ನತಿಯಿಲ್ಲದವರ ಸಂಗಡ ಮಲಗು. ಅವರು ಕತ್ತಿಯಿಂದ ಹತರಾದವರ ಮಧ್ಯದಲ್ಲಿ ಬೀಳುವರು. ಅವಳು ಕತ್ತಿಗೆ ಒಪ್ಪಿಸಲ್ಪಟ್ಟಿದ್ದಾಳೆ; ಅವಳನ್ನೂ ಅವಳ ಎಲ್ಲಾ ಸಮೂಹವನ್ನೂ ಎಳೆಯಿರಿ. ಶೂರರಲ್ಲಿ ಬಲಿಷ್ಠರೂ ಅವನಿಗೆ ಸಹಾಯ ಮಾಡಿದವರ ಸಂಗಡ ಪಾತಾಳದೊಳಗಿಂದ ಅವನ ಸಂಗಡ ಮಾತನಾಡುವರು; ಅವರು ಇಳಿದುಹೋಗಿ ಸುನ್ನತಿ ಯಿಲ್ಲದವರಾಗಿಯೂ ಕತ್ತಿಯಿಂದ ಹತರಾದವರಾ ಗಿಯೂ ಮಲಗಿದ್ದಾರೆ. ಅಲ್ಲಿ ಅಶ್ಶೂರ್ಯ ಮತ್ತು ಅದರ ಎಲ್ಲಾ ಗುಂಪು ಇರುವದು; ಸುತ್ತಲೂ ಅದರ ಸಮಾಧಿಗಳಿರುವವು; ಅವರೆಲ್ಲರೂ ಕತ್ತಿಯಿಂದ ಬಿದ್ದು ಹತರಾದವರೇ. ಅವರ ಸಮಾಧಿಗಳು ಕುಣಿಯ ಕಡೆಗಳಲ್ಲಿ ಇಡಲ್ಪಟ್ಟಿವೆ, ಅದರ ಸಮಾಧಿಯ ಸುತ್ತಲೂ ಅವರ ಗುಂಪುಗಳಿವೆ. ಜೀವಿತರ ದೇಶದಲ್ಲಿ ಭಯಂಕ ರರಾಗಿದ್ದ ಇವರೆಲ್ಲರೂ ಕತ್ತಿಯಿಂದ ಬಿದ್ದು ಹತರಾ ದರು. ಅಲ್ಲಿ ಏಲಾಮು ಮತ್ತು ಅದರ ಎಲ್ಲಾ ಸಮೂಹವು ಆಕೆಯ ಸಮಾಧಿಯ ಸುತ್ತಲೂ ಇದೆ; ಅವರೆಲ್ಲರೂ ಕತ್ತಿಯಿಂದ ಬಿದ್ದು ಹತರಾದವರೇ; ಸುನ್ನತಿಯಿಲ್ಲದವರಾಗಿ ಭೂಮಿಯ ಕೆಳಗಿನ ಭಾಗಗಳಿಗೆ ಇಳಿದುಹೋದವರೇ, ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತುಕೊಂಡಿದ್ದಾರೆ. ಅವರು ಅದರ ಎಲ್ಲಾ ಸಮೂಹಕ್ಕೂ ಹತವಾದವರ ಮಧ್ಯದಲ್ಲಿ ಹಾಸಿಗೆ ಹಾಕಿದ್ದಾರೆ; ಅದರ ಸುತ್ತಲೂ ಅವರ ಸಮಾಧಿಗಳಿವೆ; ಅವರೆಲ್ಲರೂ ಕತ್ತಿಯಿಂದ ಹತರಾಗಿ ಸುನ್ನತಿಯಿಲ್ಲದವರಾಗಿದ್ದಾರೆ; ಅವರು ಜೀವಿತರ ದೇಶದಲ್ಲಿ ಭಯಂಕರರಾಗಿದ್ದಾಗ್ಯೂ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತು ಕೊಂಡು ಹತರಾದವರ ಮಧ್ಯದಲ್ಲಿ ಇಡಲ್ಪಟ್ಟಿದ್ದಾರೆ. ಅಲ್ಲಿ ಮೇಷೆಕೂ ತೂಬಲೂ ಮತ್ತು ಅದರ ಎಲ್ಲಾ ಸಮೂಹವೂ ಅದರ ಸಮಾಧಿಗಳೂ ಅದರ ಸುತ್ತಲಾಗಿ ಇವೆ ಇವರೆಲ್ಲರೂ ಜೀವಿತರ ದೇಶದಲ್ಲಿ ಭಯಂಕರರಾಗಿ ದ್ದಾಗ್ಯೂ ಸುನ್ನತಿಯಿಲ್ಲದೆ ಕತ್ತಿಯಿಂದ ಹತರಾದವರು. ಸುನ್ನತಿಯಿಲ್ಲದವರಲ್ಲಿ ಬಿದ್ದಂತ ತಮ್ಮ ಯುದ್ಧದ ಆಯುಧಗಳ ಸಂಗಡ ಪಾತಾಳಕ್ಕೆ ಇಳಿದಂತ ಶೂರರ ಸಂಗಡ ಇವರು ಮಲಗಬೇಡವೇ? ಅವರು ತಮ್ಮ ಕತ್ತಿಗಳನ್ನು ತಮ್ಮ ತಲೆಗಳ ಕೆಳಗೆ ಇಟ್ಟುಕೊಂಡಿದ್ದಾರೆ; ಅವರು ಜೀವಿತರ ದೇಶದಲ್ಲಿ ಶೂರರಿಗೆ ಭಯಂಕರ ರಾಗಿದ್ದಾಗ್ಯೂ ಅವರ ಅಕ್ರಮಗಳು ಅವರ ಎಲುಬು ಗಳ ಮೇಲೆ ಇರುವವು. ಹೌದು, ನೀನು ಸುನ್ನತಿಯಿಲ್ಲದವರ ಮಧ್ಯದಲ್ಲಿ ಮುರಿಯಲ್ಪಡುವಿ; ಕತ್ತಿಯಿಂದ ಹತರಾದವರ ಸಂಗಡ ಮಲಗುವಿ. ಅಲ್ಲಿ ಎದೋಮೂ ಅದರ ಅರಸರೂ ಮತ್ತು ಎಲ್ಲಾ ಪ್ರಧಾನರೂ ಶೂರರಾಗಿದ್ದಾಗ್ಯೂ ಕತ್ತಿಯಿಂದ ಹತವಾ ದವರ ಸಂಗಡ ಹೂಣಲ್ಪಟ್ಟಿದ್ದಾರೆ; ಅವರು ಸುನ್ನತಿಯಿಲ್ಲದವರ ಸಂಗಡವೂ ಕುಣಿಗೆ ಇಳಿಯುವವರ ಸಂಗಡವೂ ಹತರಾದವರು. ಅಲ್ಲಿ ಉತ್ತರದ ಪ್ರಧಾ ನರೂ ಚೀದೋನಿನವರೆಲ್ಲರೂ ಹತರಾದವರ ಸಂಗಡ ಇಳಿದಿದ್ದಾರೆ; ಅವರು ಭಯಂಕರತ್ವದಿಂದ ತಮ್ಮ ಪರಾ ಕ್ರಮಕ್ಕೆ ನಾಚಿಕೆಪಟ್ಟಿದ್ದಾರೆ; ಹತರಾದವರ ಸಂಗಡ ಇಳಿದಿದ್ದಾರೆ; ಸುನ್ನತಿಯಿಲ್ಲದವರಾಗಿದ್ದು ಕತ್ತಿಯಿಂದ ಹತರಾಗಿ ಕುಣಿಗೆ ಇಳಿಯುವವರ ಸಂಗಡ ತಮ್ಮ ನಿಂದೆಯನ್ನು ಹೊತ್ತವರಾಗಿದ್ದಾರೆ. ಫರೋಹನು ತನ್ನ ಯಾವ ಸಮೂಹವನ್ನು ನೋಡಿ ಆದರಣೆ ಹೊಂದುವನೋ ಹೌದು, ಅವನೂ ಅವನ ಎಲ್ಲಾ ಸೈನ್ಯವು ಹತರಾದವರು ಎಂದು ದೇವರಾದ ಕರ್ತನು ಹೇಳುತ್ತಾನೆ.ನಾನು ನನ್ನ ಭಯವನ್ನು ಜೀವಿತರ ದೇಶದಲ್ಲಿ ಉಂಟು ಮಾಡಿದ್ದೇನೆ. ಆ ಫರೋಹನೂ ಅವನ ಎಲ್ಲಾ ಸಮೂಹದ ಸಹಿತವಾಗಿ ಕತ್ತಿಯಿಂದ ಹತರಾದವರ ಸಂಗಡ, ಸುನ್ನತಿಯಿಲ್ಲದವರ ಮಧ್ಯದಲ್ಲಿ ಮಲಗಿಸಲ್ಪಡುವನೆಂದು ದೇವರಾದ ಕರ್ತನು ಹೇಳುತ್ತಾನೆ. ನಾನು ನನ್ನ ಭಯವನ್ನು ಜೀವಿತರ ದೇಶದಲ್ಲಿ ಉಂಟು ಮಾಡಿದ್ದೇನೆ. ಆ ಫರೋಹನೂ ಅವನ ಎಲ್ಲಾ ಸಮೂಹದ ಸಹಿತವಾಗಿ ಕತ್ತಿಯಿಂದ ಹತರಾದವರ ಸಂಗಡ, ಸುನ್ನತಿಯಿಲ್ಲದವರ ಮಧ್ಯದಲ್ಲಿ ಮಲಗಿಸಲ್ಪಡುವನೆಂದು ದೇವರಾದ ಕರ್ತನು ಹೇಳುತ್ತಾನೆ.