Jeremiah · chapter 9 · verse 26
Jeremiah 9:26 in Kannada
ಐಗುಪ್ತವನ್ನೂ ಯೆಹೂದ ವನ್ನೂ ಎದೋಮನ್ನೂ ಅಮ್ಮೋನನ ಮಕ್ಕಳನ್ನೂ ಮೋವಾಬನ್ನೂ ಅರಣ್ಯ ನಿವಾಸಿಗಳಾಗಿರುವ ಕಟ್ಟ ಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿನಗಳು ಬರುತ್ತವೆ. ಈ ಜನಾಂಗಗಳವರು ಸುನ್ನತಿ ಯಿಲ್ಲದವರು; ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿಯಿಲ್ಲದವರಾಗಿದ್ದಾರೆ.
Aiguptavannoo yehooda vannoo edomannoo ammonana makkalannoo movaabannoo aranya nivaasigalaagiruva katta kadeya mooleyalli iruvavarannoo naanu shikshisuva dinagalu baruttave. Ee janaangagalavaru sunnati yilladavaru; israayelina manetanadavarellaroo hrudayadalli sunnatiyilladavaraagiddaare.
Jeremiah 9:26 in English
- King James Version (KJV)
- Egypt, and Judah, and Edom, and the children of Ammon, and Moab, and all [that are] in the utmost corners, that dwell in the wilderness: for all [these] nations [are] uncircumcised, and all the house of Israel [are] uncircumcised in the heart.
- World English Bible (WEB)
- Egypt, Judah, Edom, the children of Ammon, Moab, and all who have the corners of their hair cut off, who dwell in the wilderness, for all the nations are uncircumcised, and all the house of Israel are uncircumcised in heart.”
- American Standard Version (ASV)
- Egypt, and Judah, and Edom, and the children of Ammon, and Moab, and all that have the corners [of their hair] cut off, that dwell in the wilderness; for all the nations are uncircumcised, and all the house of Israel are uncircumcised in heart.
- Bible in Basic English (BBE)
- On Egypt and on Judah and on Edom and on the children of Ammon and on Moab and on all who have the ends of their hair cut, who are living in the waste land: for all these nations and all the people of Israel are without circumcision in their hearts.
- Darby Translation (DBY)
- Egypt, and Judah, and Edom, and the children of Ammon, and Moab, and all that have the corners [of their beard] cut off, that dwell in the wilderness: for all the nations are uncircumcised, and all the house of Israel are uncircumcised in heart.
- Webster's Bible (WBS)
- Egypt, and Judah, and Edom, and the children of Ammon, and Moab, and all [that are] in the utmost corners, that dwell in the wilderness: for all [these] nations [are] uncircumcised, and all the house of Israel [are] uncircumcised in the heart.
- Young's Literal Translation (YLT)
- On Egypt, and on Judah, and on Edom, And on the sons of Ammon, and on Moab, And on all cutting the corner [of the beard], Who are dwelling in the wilderness, For all the nations [are] uncircumcised, And all the house of Israel [are] uncircumcised in heart!
Read in context
- 24ಆದರೆ ಹೆಚ್ಚಳ ಪಡುವವನು ಇದರಲ್ಲಿ ಹೆಚ್ಚಳಪಡಲಿ; ಯಾವದರಲ್ಲಿ ಅಂದರೆ ಕರ್ತನಾದ ನಾನು ಭೂಮಿಯಲ್ಲಿ ಕೃಪೆಯನ್ನೂ ನ್ಯಾಯವನ್ನೂ ನೀತಿಯನ್ನೂ ನಡಿಸುವವನಾಗಿದ್ದೇ ನೆಂದು ನನ್ನನ್ನು ಗ್ರಹಿಸಿ ತಿಳುಕೊಳ್ಳುವದರಲ್ಲಿಯೇ; ಇವುಗಳಲ್ಲಿ ನಾನು ಸಂತೋಷ ಪಡುತ್ತೇನೆಂದು ಕರ್ತನು ಅನ್ನುತ್ತಾನೆ.
- 25ಕರ್ತನು ಹೇಳುವದೇನಂದರೆ --ಇಗೋ, ನಾನು ಸುನ್ನತಿಯಿಲ್ಲದವರ ಸಂಗಡ ಸುನ್ನತಿ ಯುಳ್ಳವರೆಲ್ಲರನ್ನೂಐಗುಪ್ತವನ್ನೂ ಯೆಹೂದ ವನ್ನೂ ಎದೋಮನ್ನೂ ಅಮ್ಮೋನನ ಮಕ್ಕಳನ್ನೂ ಮೋವಾಬನ್ನೂ ಅರಣ್ಯ ನಿವಾಸಿಗಳಾಗಿರುವ ಕಟ್ಟ ಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿನಗಳು ಬರುತ್ತವೆ. ಈ ಜನಾಂಗಗಳವರು ಸುನ್ನತಿ ಯಿಲ್ಲದವರು; ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿಯಿಲ್ಲದವರಾಗಿದ್ದಾರೆ.
- 26ಐಗುಪ್ತವನ್ನೂ ಯೆಹೂದ ವನ್ನೂ ಎದೋಮನ್ನೂ ಅಮ್ಮೋನನ ಮಕ್ಕಳನ್ನೂ ಮೋವಾಬನ್ನೂ ಅರಣ್ಯ ನಿವಾಸಿಗಳಾಗಿರುವ ಕಟ್ಟ ಕಡೆಯ ಮೂಲೆಯಲ್ಲಿ ಇರುವವರನ್ನೂ ನಾನು ಶಿಕ್ಷಿಸುವ ದಿನಗಳು ಬರುತ್ತವೆ. ಈ ಜನಾಂಗಗಳವರು ಸುನ್ನತಿ ಯಿಲ್ಲದವರು; ಇಸ್ರಾಯೇಲಿನ ಮನೆತನದವರೆಲ್ಲರೂ ಹೃದಯದಲ್ಲಿ ಸುನ್ನತಿಯಿಲ್ಲದವರಾಗಿದ್ದಾರೆ.
Cross references
- Leviticus 26:41 ಯಾಜಕಕಾಂಡ 26:41ನಾನೂ ಅವರಿಗೆ ವಿರೋಧವಾಗಿ ನಡೆದುಕೊಂಡು ತಮ್ಮ ಶತ್ರುಗಳ ದೇಶಕ್ಕೆ ಬರಮಾಡಿದ್ದನ್ನು ಅರಿಕೆಮಾಡಿ ಪರಿಛೇದನೆ ಇಲ್ಲದ ಅವರ ಹೃದಯವು ತಗ್ಗಿಸಲ್ಪಟ್ಟು ತಮ್ಮ ಅಕ್ರಮದಿಂದ ಉಂಟಾದ ಶಿಕ್ಷೆಗೆ ಅವರು ಒಪ್ಪಿಕೊಳ್ಳುವದಾದರೆ
- Jeremiah 4:4 ಯೆರೆಮೀಯ 4:4ಕರ್ತನಿಗೋಸ್ಕರ ಸುನ್ನತಿ ಮಾಡಿಕೊಳ್ಳಿರಿ, ನಿಮ್ಮ ಹೃದಯಗಳ ಮುಂದೊಗಲನ್ನು ತೆಗೆದುಹಾಕಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸ ಕೂಡದ ಹಾಗೆ ಉರಿಯುವದು.
- Romans 2:28–29 ರೋಮಾಪುರದವರಿಗೆ 2:28–29ಹೊರಗೆ ಯೆಹೂದ್ಯನಾಗಿರುವವನು ಯೆಹೂದ್ಯನಲ್ಲ; ಹೊರಗೆ ಶರೀರದಲ್ಲಿ ಮಾಡಿರುವ ಸುನ್ನತಿಯು ಸುನ್ನತಿಯಲ್ಲ.ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು. ಆದರೆ ಒಳಗೆ ಯೆಹೂದ್ಯ ನಾಗಿರುವವನೇ ಯೆಹೂದ್ಯನು; ಸುನ್ನತಿಯು ಹೃದಯಕ್ಕೆ ಸಂಬಂಧಪಟ್ಟದ್ದಾಗಿ ಅಕ್ಷರೀಕವಾಗಿರದೆ ಆತ್ಮೀಕವಾದದ್ದೇ ಆಗಿದೆ. ಹೀಗೆ ಅವನ ಹೊಗಳಿಕೆಯು ಮನುಷ್ಯರಿಂದಾ ಗಿರದೆ ದೇವರಿಂದಲೇ ಆಗಿರುವದು.
- Isaiah 19:24–25 ಯೆಶಾಯ 19:24–25ಆ ದಿನದಲ್ಲಿ ಇಸ್ರಾಯೇಲು ಐಗುಪ್ತ್ಯರ ಸಂಗ ಡಲೂ ಅಶ್ಶೂರ್ಯರ ಸಂಗಡಲೂ ಮೂರನೆಯ ದಾಗಿ ದೇಶದ ಮಧ್ಯದಲ್ಲಿ ಆಶೀರ್ವಾದವಾಗಿರುವದು.ನನ್ನ ಪ್ರಜೆಯಾದ ಐಗುಪ್ತಕ್ಕೂ ನನ್ನ ಕೈಗಳ ಕೆಲಸ ವಾದ ಅಶ್ಶೂರ್ಯಕ್ಕೂ ನನ್ನ ಸ್ವಾಸ್ತ್ಯವಾದ ಇಸ್ರಾಯೇ ಲಿಗೂ ನಿಮಗೆ ಆಶೀರ್ವಾದ ಎಂದು ಹೇಳಿ ಅವರಿಗೆ ಆಶೀರ್ವಾದ ಕೊಡುವನು. ನನ್ನ ಪ್ರಜೆಯಾದ ಐಗುಪ್ತಕ್ಕೂ ನನ್ನ ಕೈಗಳ ಕೆಲಸ ವಾದ ಅಶ್ಶೂರ್ಯಕ್ಕೂ ನನ್ನ ಸ್ವಾಸ್ತ್ಯವಾದ ಇಸ್ರಾಯೇ ಲಿಗೂ ನಿಮಗೆ ಆಶೀರ್ವಾದ ಎಂದು ಹೇಳಿ ಅವರಿಗೆ ಆಶೀರ್ವಾದ ಕೊಡುವನು.
- Ezekiel 44:7 ಯೆಹೆಜ್ಕೇಲನು 44:7ಅವು ಗಳಲ್ಲಿ ನೀವು ನನ್ನ ರೊಟ್ಟಿಯನ್ನೂ ಕೊಬ್ಬನ್ನೂ ರಕ್ತವನ್ನೂ ಅರ್ಪಿಸುವಾಗ ನಿಮ್ಮ ಎಲ್ಲಾ ಅಸಹ್ಯಗಳಿ ಗೋಸ್ಕರ ನನ್ನ ಒಡಂಬಡಿಕೆಯನ್ನು ವಿಾರುವಂಥ ಹೃದಯದಲ್ಲಿಯೂ ಶರೀರದಲ್ಲಿಯೂ ಸುನ್ನತಿ ಯಿಲ್ಲದಂಥ ಪರಕೀಯರನ್ನು ನನ್ನ ಪರಿಶುದ್ಧಸ್ಥಳಕ್ಕೆ ಕರೆತಂದು ನನ್ನ ಆಲಯವನ್ನು ಅಪವಿತ್ರಪಡಿಸಿದಿರಿ;
- Jeremiah 49:32 ಯೆರೆಮೀಯ 49:32ಅವರ ಒಂಟೆಗಳು ಕೊಳ್ಳೆಯಾಗುವವು, ದನಗಳ ಸಮೂಹವು ಸುಲಿಗೆಯಾಗುವವು; ದನಗಳ ಸಮೂಹವು ಸುಲಿಗೆ ಯಾಗುವದು; ಕಟ್ಟ ಕಡೆಯ ಮೂಲೆಗಳಲ್ಲಿ ಇರುವ ವರನ್ನು ಎಲ್ಲಾ ದಿಕ್ಕುಗಳಿಗೂ ಚದರಿಸುತ್ತೇನೆ; ಎಲ್ಲಾ ಕಡೆಯಿಂದ ಅವರನ್ನು ಸಂಹರಿಸುತ್ತೇನೆಂದು ಕರ್ತನು ಅನ್ನುತ್ತಾನೆ.
- Isaiah 13:1–22 ಯೆಶಾಯ 13:1–22ಆಮೋಚನ ಮಗನಾದ ಯೆಶಾಯನಿಗೆ ಬಾಬೆಲಿನ ವಿಷಯವಾಗಿ ಕಂಡುಬಂದ ದೈವೋಕ್ತಿ. ಅವರು(ಶತ್ರುಗಳು) ಬಂದು ಘನವಂತ ದ್ವಾರಗಳೊಳಗೆ ಹೋಗುವಂತೆ ಎತ್ತರವಾದ ಪರ್ವತದ ಮೇಲೆ ನೀವು ಧ್ವಜವನ್ನೆತ್ತಿ ಅವರಿಗೆ ನಿಮ್ಮ ಶಬ್ದವನ್ನು ಕೇಳಿಸುವಂತೆ ಜೋರಾಗಿ ಕೂಗಿ ಕರೆಯಿರಿ. ನಾನು ನನ್ನ ಪರಿಶುದ್ಧರಿಗೆ ಆಜ್ಞಾಪಿಸಿ ನನ್ನ ಮಹಿಮೆಯಲ್ಲಿ ಉಲ್ಲಾಸಿಸುವವರನ್ನೂ ಶೂರರನ್ನೂ ನನ್ನ ಕೋಪಕ್ಕೆ ಕರೆದಿದ್ದೇನೆ. ಬಹು ಸಮೂಹವು ಇದ್ದಂತೆ ಗದ್ದಲವು ಬೆಟ್ಟಗಳಲ್ಲಿ ಕೇಳಿಬರುತ್ತದೆ; ಒಟ್ಟಿಗೆ ಕೂಡಿಕೊಂಡ ರಾಜ್ಯ ಜನಾಂಗ ಗಳ ಆರ್ಭಟ; ಸೈನ್ಯಗಳ ಕರ್ತನು ಯುದ್ಧಕ್ಕೆ ಸೈನ್ಯವನ್ನು ಸಿದ್ಧಮಾಡುತ್ತಾನೆ. ಕರ್ತನೂ ಆತನ ರೋಷಕ್ಕೆ ಆಯುಧಗಳಾದವರೂ ದೂರ ದೇಶದಿಂದ, ಅಂದರೆ ಆಕಾಶಮಂಡಲದ ಕಟ್ಟಕಡೆಯಿಂದ ದೇಶವನ್ನೆಲ್ಲಾ ಹಾಳುಮಾಡುವದಕ್ಕಾಗಿ ಬರುತ್ತಾರೆ. ನೀವು ಗೋಳಾ ಡಿರಿ, ಕರ್ತನ ದಿನವು ಸವಿಾಪವಾಯಿತು; ಅದು ಸರ್ವಶಕ್ತನಿಂದ ನಾಶನದಂತೆ ಬರುವದು. ಆದ ಕಾರಣ ಎಲ್ಲಾ ಕೈಗಳು ಜೋಲು ಬೀಳುವವು ಪ್ರತಿ ಯೊಬ್ಬನ ಹೃದಯವು ಕರಗುವದು. ಅವರು ಭಯ ಪಡುವರು; ನೋವು ಮತ್ತು ಬೇನೆಗಳು ಅವರನ್ನು ಆವರಿಸಿಕೊಳ್ಳುವವು; ಹೆರುವ ಹೆಂಗಸಿನಂತೆ ಸಂಕಟ ಪಡುವರು; ಅವರು ಒಬ್ಬರಿಗೊಬ್ಬರು ಭ್ರಮೆಪಡು ವರು; ಅವರ ಮುಖಗಳು ಜ್ವಾಲೆಯಂತಿರುವವು. ಇಗೋ, ಕರ್ತನ ದಿನವು ಬರುತ್ತದೆ, ಭೂಮಿಯನ್ನು ಹಾಳುಮಾಡುವದಕ್ಕೂ ಅಲ್ಲಿಂದ ಪಾಪಿಗಳನ್ನು ನಿರ್ಮೂಲಮಾಡುವದಕ್ಕೂ ಅದು ಕೋಪೋದ್ರೇಕ ದಿಂದಲೂ ತೀಕ್ಷ್ಣ ರೋಷದಿಂದಲೂ ಕ್ರೂರವಾಗಿರು ವದು. ಆಕಾಶದ ನಕ್ಷತ್ರಗಳು ಅದರ ರಾಶಿಗಳು ತಮ್ಮ ಬೆಳಕನ್ನು ಕೊಡುವುದಿಲ್ಲ; ಸೂರ್ಯನು ಮೂಡಿ ಹೋಗುತ್ತಿರುವಾಗಲೇ ಕತ್ತಲಾಗುವನು. ಚಂದ್ರನು ತನ್ನ ಬೆಳಕನ್ನು ಕೊಡುವದಿಲ್ಲ. ಅವರ ಕೆಟ್ಟವುಗಳಿಗೋಸ್ಕರವೂ ದುಷ್ಟರ ಅಪ ರಾಧಗಳಿಗೋಸ್ಕರವೂ ನಾನು ಲೋಕವನ್ನು ಶಿಕ್ಷಿಸು ವೆನು; ಗರ್ವಿಷ್ಟರ ಅಹಂಕಾರವನ್ನು ನಿಲ್ಲಿಸಿಬಿಡುವೆನು, ಭಯಂಕರವಾದ ಹೆಮ್ಮೆಯನ್ನು ತಗ್ಗಿಸುವೆನು. ನಾನು ಮನುಷ್ಯನನ್ನು ಚೊಕ್ಕ ಬಂಗಾರಕ್ಕಿಂತಲೂ ಇಲ್ಲವೆ ಒಫೀರಿನ ಬಂಗಾರಕ್ಕಿಂತಲೂ ಅಮೂಲ್ಯನನ್ನಾಗಿ ಮಾಡುವೆನು. ಆದದರಿಂದ ಸೈನ್ಯಗಳ ಕರ್ತನ ಉಗ್ರದಲ್ಲಿಯೂ ಆತನ ಕೋಪೋದ್ರೇಕದ ದಿನ ದಲ್ಲಿಯೂ ನಾನು ಆಕಾಶಗಳನ್ನು ನಡುಗಿಸುವೆನು, ಭೂಮಿಯನ್ನು ಅದರ ಸ್ಥಳದಿಂದ ತೆಗೆದುಬಿಡುವೆನು. ಅದು ಅಟ್ಟಿದ ಜಿಂಕೆಯಂತೆಯೂ ಯಾರೂ ಕೂಡಿ ಸದ ಕುರಿಗಳಂತೆಯೂ ಇರುವದು. ಅವರಲ್ಲಿ ಪ್ರತಿಯೊ ಬ್ಬನೂ ತನ್ನ ಜನರ ಕಡೆಗೆ ತಿರುಗಿಕೊಳ್ಳುವನು ಪ್ರತಿಯೊ ಬ್ಬನೂ ತನ್ನ ಸ್ವದೇಶಕ್ಕೆ ಓಡಿಹೋಗುವನು. ಸಿಕ್ಕಿದ ಪ್ರತಿಯೊಬ್ಬನೂ ಇರಿಯಲ್ಪಡುವನು; ಅವರೊಂದಿಗೆ ಸೇರಿಕೊಂಡ ಪ್ರತಿಯೊಬ್ಬನೂ ಕತ್ತಿಯಿಂದ ಬೀಳು ವನು. ಅವರ ಮಕ್ಕಳೂ ಅವರ ಕಣ್ಣೆದುರಿಗೆ ತುಂಡು ತುಂಡಾಗುವಂತೆ ಅಪ್ಪಳಿಸಲ್ಪಡುವರು; ಅವರ ಮನೆ ಗಳು ಸೂರೆಯಾಗುವವು; ಅವರ ಪತ್ನಿಯರು ಕೆಡಿ ಸಲ್ಪಡುವರು. ಇಗೋ, ಬೆಳ್ಳಿಯನ್ನು ಲಕ್ಷಿಸದೆ ಬಂಗಾರದಲ್ಲಿ ಆನಂದಿಸದೆ ಇರುವ ಮೇದ್ಯರನ್ನು ಅವರಿಗೆ ವಿರೋಧ ವಾಗಿ ನಾನು ಎಬ್ಬಿಸುವೆನು. ಅವರ ಬಿಲ್ಲುಗಳು ಸಹ ಯುವಕರನ್ನು ಹೊಡೆದು ತುಂಡುತುಂಡು ಮಾಡುವವು; ಇವರು ಗರ್ಭಫಲವನ್ನು ಕರುಣಿಸರು, ಇವರ ಕಣ್ಣುಗಳು ಮಕ್ಕಳನ್ನೂ ಉಳಿಸುವದಿಲ್ಲ. ರಾಜ್ಯಗಳ ಘನತೆಯೂ ಕಸ್ದೀಯರ ಶ್ರೇಷ್ಠವಾದ ಸೌಂದರ್ಯವೂ ಆದ ಬಾಬೆಲಿಗೆ ದೇವರು ಸೊದೋ ಮ್ ಗೊಮೋರಗಳನ್ನು ಕೆಡವಿಬಿಟ್ಟಂತೆ ಇದನ್ನು ಸಹ ಕೆಡವಿಬಿಡುವನು. ಅದು ಎಂದಿಗೂ ನಿವಾಸ ಸ್ಥಳ ವಾಗದು, ಇಲ್ಲವೆ ತಲತಲಾಂತರಕ್ಕೂ ಅಲ್ಲಿ ಯಾರೂ ವಾಸಿಸರು; ಇಲ್ಲವೆ ಯಾವ ಅರಬಿಯನೂ ಗುಡಾರ ಹಾಕನು; ಅಥವಾ ಕುರುಬರು ಮಂದೆಯನ್ನು ತಂಗಿಸರು. ಆದರೆ ಮರುಭೂಮಿಯ ಕಾಡುಮೃಗಗಳು ಅಲ್ಲಿ ಮಲಗುವವು; ಅವರ ಮನೆಗಳು ವ್ಯೆಥೆಯಿಂದ ತುಂಬಿರುವವು; ಅಲ್ಲಿ ಗೂಬೆಗಳು ವಾಸಿಸುವವು, ದೆವ್ವಗಳು ಕುಣಿದಾಡುವವು.ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು. ಅವರ ಹಾಳಾದ ಮನೆಗಳಲ್ಲಿ ದ್ವೀಪಗಳ ಕಾಡುಮೃಗಗಳು ಕೂಗುವವು; ಅವರ ಮೆಚ್ಚಿಕೆಯಾದ ಅರಮನೆಗಳಲ್ಲಿ ಸರ್ಪಗಳು ವಾಸಿಸುವವು; ಅವಳ ಕಾಲವು ಸವಿಾಪಿಸಿತು, ಇನ್ನು ಅವಳ ದಿನಗಳು ಮುಂದುವರಿಯವು.
- Jeremiah 25:9–26 ಯೆರೆಮೀಯ 25:9–26ನೀವು ನನ್ನ ಮಾತುಗಳನ್ನು ಕೇಳದ ಕಾರಣ ಇಗೋ, ಕರ್ತನು ಹೇಳುವದೇನಂದರೆ--ನಾನು ಕಳು ಹಿಸಿ ಉತ್ತರ ದಿಕ್ಕಿನ ಗೋತ್ರಗಳೆಲ್ಲವನ್ನೂ ನನ್ನ ಸೇವಕ ನಾದ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನೂ ತಕ್ಕೊಂಡು, ಈ ದೇಶಕ್ಕೆ ವಿರೋಧವಾಗಿಯೂ ಅದರ ನಿವಾಸಿಗಳಿಗೆ ವಿರೋಧವಾಗಿಯೂ ಸುತ್ತಲಿರುವ ಈ ಎಲ್ಲಾ ಜನಾಂಗಗಳಿಗೆ ವಿರೋಧವಾಗಿಯೂ ಕರೆಯಿಸಿ ಅವರನ್ನು ಸಂಪೂರ್ಣ ನಾಶಮಾಡಿ ಅವರನ್ನು ವಿಸ್ಮ ಯಕ್ಕೂ ಸಿಳ್ಳಿಡುವಿಕೆಗೂ ಗುರಿಯಾಗಿಯೂ ನಿತ್ಯ ಹಾಳಾಗಿಯೂ ಮಾಡುತ್ತೇನೆ. ಇದಲ್ಲದೆ ಉಲ್ಲಾಸದ ಶಬ್ದವನ್ನೂ ಸಂತೋಷದ ಸ್ವರವನ್ನೂ ಮದಲಿಂಗನ ಸ್ವರವನ್ನೂ ಮದಲಗಿತ್ತಿಯ ಸ್ವರವನ್ನೂ ಬೀಸುವ ಕಲ್ಲಿನ ಶಬ್ದವನ್ನೂ ದೀಪದ ಬೆಳಕನ್ನೂ ಅವರೊಳಗಿಂದ ತೆಗೆದುಹಾಕುತ್ತೇನೆ. ಈ ದೇಶವೆಲ್ಲಾ ಹಾಳಾಗಿ ವಿಸ್ಮಯಕ್ಕೆ ಗುರಿಯಾಗುವದು; ಈ ಜನಾಂಗಗಳು ಬಾಬೆಲಿನ ಅರಸನನ್ನು ಎಪ್ಪತ್ತು ವರುಷ ಸೇವಿಸುವರು. ಎಪ್ಪತ್ತು ವರುಷ ತುಂಬಿದ ಮೇಲೆ ನಾನು ಬಾಬೆಲಿನ ಅರಸನನ್ನೂ ಆ ಜನಾಂಗವನ್ನೂ ಕಸ್ದೀಯರ ದೇಶವನ್ನೂ ಅವರ ಅಕ್ರಮಕ್ಕಾಗಿ ವಿಚಾರಿಸಿ ದಂಡಿಸುವೆನು. ಅದನ್ನು ನಿತ್ಯವಾಗಿ ಹಾಳುಮಾಡುವೆನು. ನಿಶ್ಚಯವಾಗಿ ಆ ದೇಶದ ಮೇಲೆ ನಾನು ಅದಕ್ಕೆ ವಿರೋಧವಾಗಿ ಹೇಳಿದ ನನ್ನ ಎಲ್ಲಾ ವಾಕ್ಯಗಳನ್ನೂ ಯೆರವಿಾಯನು ಜನಾಂಗ ಗಳಿಗೆ ವಿರೋಧವಾಗಿ ಪ್ರವಾದಿಸಿ ಈ ಪುಸ್ತಕದಲ್ಲಿ ಬರೆದಿರುವ ಎಲ್ಲವನ್ನೂ ಅವರ ಮೇಲೆ ಬರಮಾಡು ವೆನು. ಅನೇಕ ಜನಾಂಗಗಳೂ ದೊಡ್ಡ ಅರಸರೂ ಅವರಿಂದ ಸೇವೆ ಮಾಡಿಸಿಕೊಳ್ಳುವರು. ಅವರ ಕ್ರಿಯೆ ಗಳ ಪ್ರಕಾರವೂ ಅವರ ಕೈ ಕೆಲಸದ ಪ್ರಕಾರವೂ ನಾನು ಅವರಿಗೆ ಪ್ರತಿಫಲ ಕೊಡುವೆನು ಎಂದು ಕರ್ತನು ಅನ್ನುತ್ತಾನೆ. ಇಸ್ರಾಯೇಲಿನ ದೇವರಾದ ಕರ್ತನು ನನಗೆ ಹೀಗೆ ಹೇಳುತ್ತಾನೆ--ಈ ರೌದ್ರದ ದ್ರಾಕ್ಷಾರಸ ಪಾತ್ರೆ ಯನ್ನು, ನಾನು ನಿನ್ನನ್ನು ಕಳುಹಿಸುವ ಎಲ್ಲಾ ಜನಾಂಗಗಳು ಅದನ್ನು ಕುಡಿಯುವಂತೆ ನನ್ನ ಕೈಯಿಂದ ತಕ್ಕೋ. ಆಗ ಅವರು ಕುಡಿದು ನಾನು ಅವರ ಮಧ್ಯದಲ್ಲಿ ಕಳುಹಿಸುವ ಕತ್ತಿಯ ನಿಮಿತ್ತ ಕದಲಿ ಹುಚ್ಚರಾಗುವರು ಅಂದನು. ಆಗ ನಾನು ಪಾತ್ರೆಯನ್ನು ಕರ್ತನ ಕೈಯಿಂದ ತಕ್ಕೊಂಡು ಕರ್ತನು ನನ್ನನ್ನು ಕಳುಹಿಸಿದ ಎಲ್ಲಾ ಜನಾಂಗಗಳಿಗೆ ಕುಡಿಸಿದೆನು. ಯೆರೂಸ ಲೇಮಿಗೂ ಯೆಹೂದದ ಪಟ್ಟಣಗಳಿಗೂ ಅದರ ಅರಸುಗಳಿಗೂ ಪ್ರಭುಗಳಿಗೂ ಅವರನ್ನು ಇಂದಿನ ಪ್ರಕಾರ ಹಾಳುಮಾಡಿ ವಿಸ್ಮಯಕ್ಕೂ ಸಿಳ್ಳಿಡುವಿಕೆಗೂ ಶಾಪಕ್ಕೂ ಗುರಿಮಾಡುವ ಹಾಗೆ ಕುಡಿಸಿದೆನು. ಐಗುಪ್ತದ ಅರಸನಾದ ಫರೋಹನಿಗೂ ಅವನ ಸೇವಕರಿಗೂ ಅವನ ಪ್ರಭುಗಳಿಗೂ ಅವನ ಎಲ್ಲಾ ಜನರಿಗೂ ಮಿಶ್ರವಾದ ಜನರೆಲ್ಲರಿಗೂ ಊಚ್ ದೇಶದ ಅರಸರೆಲ್ಲರಿಗೂ ಫಿಲಿಷ್ಟಿಯ ದೇಶದ ಅರಸರೆಲ್ಲರಿಗೂ ಅಷ್ಕೆಲೋನಿಗೂ ಗಾಜಾಕ್ಕೂ ಎಕ್ರೋನಿಗೂ ಅಷ್ಡೋ ದಿನ ಉಳಿದವರಿಗೂ ಎದೋಮಿಗೂ ಮೋವಾ ಬಿಗೂ ಅಮ್ಮೋನನ ಮಕ್ಕಳಿಗೂ ತೂರಿನ ಅರಸರೆ ಲ್ಲರಿಗೂ ಚೀದೋನಿನ ಅರಸರೆಲ್ಲರಿಗೂ ಸಮುದ್ರದ ಆಚೆಯಲ್ಲಿರುವ ದ್ವೀಪದ ಅರಸರಿಗೂ ದೆದಾನಿಗೂ ತೇಮಾಗೂ ಬೂಜಿಗೂ ಕಟ್ಟಕಡೆಯ ಮೂಲೆಯ ವರೆಗೂ ಅರಬಿಯದ ಅರಸರೆಲ್ಲರಿಗೂ ಅರಣ್ಯದಲ್ಲಿ ವಾಸಿಸುವ ಮಿಶ್ರವಾದ ಜನರ ಅರಸರೆಲ್ಲರಿಗೂ ಜಿಮ್ರಿಯ ಅರಸರೆಲ್ಲರಿಗೂ ಏಲಾಮಿನ ಅರಸರೆ ಲ್ಲರಿಗೂ ಮೇದ್ಯದ ಅರಸರೆಲ್ಲರಿಗೂ ಹತ್ತಿರದ ಲ್ಲಿಯೂ ದೂರದಲ್ಲಿಯೂ ಒಬ್ಬರ ಬಳಿಯಲ್ಲಿ ಒಬ್ಬರಿ ರುವ ಉತ್ತರದಿಕ್ಕಿನ ಅರಸರೆಲ್ಲರಿಗೂ ಭೂಮಿಯ ಮೇಲ್ಭಾಗದಲ್ಲಿರುವಂಥ ಲೋಕದ ಎಲ್ಲಾ ರಾಜ್ಯ ಗಳಿಗೂ ಕುಡಿಸಿದೆನು; ಶೇಷಕಿನ ಅರಸನು ಅವರ ತರುವಾಯ ಕುಡಿಯುವನು.
- Ezekiel 24:1–27 ಯೆಹೆಜ್ಕೇಲನು 24:1–27ಒಂಭತ್ತನೇ ವರುಷದ ಹತ್ತನೇ ತಿಂಗಳಿನ ಹತ್ತನೇ ದಿನದಲ್ಲಿ ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ ಮನುಷ್ಯಪುತ್ರನೇ, ಈ ದಿನದ, ಇದೇ ದಿನದ ಹೆಸರನ್ನು ಬರೆದುಕೋ; ಅದೇ ದಿನದಲ್ಲಿ ಬಾಬೆಲಿನ ಅರಸನು ಯೆರೂಸಲೇಮಿಗೆ ಮುತ್ತಿಗೆ ಹಾಕುತ್ತಾನೆ. ತಿರುಗಿ ಬೀಳುವ ಮನೆತನ ದವರಿಗೆ ಸಾಮ್ಯವನ್ನು ತಿಳಿಸಿ ಅವರಿಗೆ ಹೇಳಬೇಕಾದದ್ದೇ ನಂದರೆ, ದೇವರಾದ ಕರ್ತನು ಹೀಗೆ ಹೇಳುತ್ತಾನೆ-- ಹಂಡೆಯನ್ನು ಒಲೆಯ ಮೇಲಿಡು, ಅದರಲ್ಲಿ ನೀರನ್ನು ಸುರಿ. ತೊಡೆಯನ್ನೂ ಹೆಗಲನ್ನೂ ಎಲ್ಲಾ ಒಳ್ಳೇ ತುಂಡುಗಳನ್ನೂ ಒಟ್ಟಿಗೆ ಸೇರಿಸಿ ಒಳ್ಳೆ ಎಲುಬುಗಳ ಜೊತೆ ಅದನ್ನು ತುಂಬಿಸಿ; ಹಿಂಡಿನಲ್ಲಿ ಶ್ರೇಷ್ಠವಾದ ದ್ದನ್ನು ತೆಗೆದುಕೊಂಡು ಎಲುಬಿನ ರಾಶಿಯನ್ನೂ ಅದರ ಕೆಳಗೆ ಇಟ್ಟು ಅದನ್ನು ಚೆನ್ನಾಗಿ ಕುದಿಸು; ಆ ಎಲುಬುಗಳೂ ಅದರಲ್ಲಿ ಚೆನ್ನಾಗಿ ಬೇಯಲಿ. ಆದಕಾರಣ ದೇವರಾದ ಕರ್ತನು ಹೀಗೆ ಹೇಳು ತ್ತಾನೆ; ರಕ್ತಮಯವಾದ ಆ ಪಟ್ಟಣಕ್ಕೆ ಅಯ್ಯೋ! ಯಾವದರ ಕಲ್ಮಶವು ಹೊರಗೆ ಬಾರದೆ ಅದರಲ್ಲಿ ಉಳಿದಿರುವದೋ ಆ ಹಂಡೆಗೆ ಅಯ್ಯೋ, ಅದರಿಂದ ತುಂಡು ತುಂಡಾಗಿ ಹೊರಗೆ ತೆಗೆ; ಆಯ್ಕೆಯ ಚೀಟಿಯು ಅದರ ಮೇಲೆ ಬೀಳದಿರಲಿ. ಅದರ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದೆ; ದೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ; ಮುಯ್ಯಿಗೆಮುಯ್ಯಿ ತೀರಿಸುವದಕ್ಕೆ ರೋಷ ವನ್ನೆಬ್ಬಿಸುವ ಹಾಗೆ ನಾನು ಅದರ ರಕ್ತಾಪರಾಧವನ್ನು ಮುಚ್ಚಿಬಿಡದಂತೆ ಬಂಡೆಯ ತುದಿಯ ಮೇಲೆ ಇಟ್ಟಿ ದ್ದೇನೆ; ಆದದರಿಂದ ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಆ ರಕ್ತಾಪರಾಧವುಳ್ಳ ಪಟ್ಟಣವು ಹಾಳಾ ಗಲಿ, ನಾನೇ ಬೆಂಕಿಯನ್ನು ರಾಶಿಯಾಗಿ ಹೆಚ್ಚಿಸುವೆನು. ಬಹಳ ಸೌದೆ ಹಾಕಿ, ಬೆಂಕಿಯನ್ನು ಹೆಚ್ಚಿಸಿ, ಮಾಂಸ ವನ್ನು ಬೇಯಿಸು; ಮಸಾಲೆ ಚೆನ್ನಾಗಿ ಇರಲಿ, ಮತ್ತು ಎಲುಬುಗಳು ಸುಡಲಿ. ಆಮೇಲೆ ಅದರ ಹಿತ್ತಾಳೆ ಬಿಸಿಯಾಗಿ ಮೈಲಿಗೆ ಕರಗಿ ಕಲ್ಮಶವು ಹೋಗುವ ಹಾಗೆ ಅದನ್ನು ಬರಿದು ಮಾಡಿ ಕೆಂಡಗಳ ಮೇಲೆ ಇಡು. ಅದರ ಕಲ್ಮಶವು ಆಯಾಸವನ್ನುಂಟು ಮಾಡಿತೇ ಹೊರತು ಅದಕ್ಕೆ ಹತ್ತಿದ್ದ ಆ ಬಹಳವಾದ ಕಿಲುಬು ಹೋಗಲಿಲ್ಲ, ಅದು ಬೆಂಕಿಯಲ್ಲಿರಲಿ; ನಿನ್ನ ಅಶುದ್ಧ ತ್ವವು ದುಷ್ಕರ್ಮವುಳ್ಳದ್ದು; ನಾನು ನಿನ್ನನ್ನು ಪರಿಶುದ್ಧ ಮಾಡಿದರೂ ನೀನು ಶುದ್ಧವಾಗದ ಕಾರಣ ನಾನು ನನ್ನ ರೋಷವನ್ನು ನಿನ್ನ ಮೇಲೆ ಕಳುಹಿಸುವಷ್ಟು ಕಾಲದ ವರೆಗೂ ಇನ್ನು ಮೇಲೆ ನೀನು ನಿನ್ನ ಅಪವಿತ್ರತ್ವದಿಂದ ಇನ್ನು ಶುದ್ಧವಾಗುವದಿಲ್ಲ. ಕರ್ತನಾದ ನಾನೇ ಅದನ್ನು ಹೇಳಿದ್ದೇನೆ, ಅದು ನಡೆಯುವದು; ನಾನು ಅದನ್ನು ಮಾಡದೆ ಬಿಡುವದಿಲ್ಲ; ಕಟಾಕ್ಷ ತೋರಿಸು ವದಿಲ್ಲ; ಪಶ್ಚಾತ್ತಾಪಪಡುವದಿಲ್ಲ. ನಿನ್ನ ಮಾರ್ಗಗಳ ಪ್ರಕಾರವೂ ನಿನ್ನ ಕ್ರಿಯೆಗಳ ಪ್ರಕಾರವೂ ನಿನಗೆ ನ್ಯಾಯ ತೀರಿಸುವೆನೆಂದು ದೇವರಾದ ಕರ್ತನು ಹೇಳುತ್ತಾನೆ. ಇದಲ್ಲದೆ, ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ-- ಮನುಷ್ಯಪುತ್ರನೇ, ಇಗೋ, ಒಂದೇ ಏಟಿನಿಂದ ನೇತ್ರಾನಂದವಾಗಿರುವದನ್ನು ನಿನ್ನಿಂದ ತೆಗೆಯುತ್ತೇನೆ; ಆದರೆ ನೀನು ದುಃಖಪಡಬೇಡ, ಅಳಬೇಡ, ನಿನ್ನ ಕಣ್ಣೀರು ಹರಿದು ಹೋಗದಿರಲಿ. ವ್ಯಸನದಿಂದ ಸತ್ತವರಿಗಾಗಿ ಅರಚಬೇಡ, ಗೋಳಾಡ ಬೇಡ ನೀನು ರುಮಾಲನ್ನು ಕಟ್ಟಿಕೊಂಡು ಕಾಲುಗಳಿಗೆ ಜೋಡುಗಳನ್ನು ಮೆಟ್ಟಿಕೋ; ತುಟಿಗಳನ್ನು ಮುಚ್ಚಿಕೊಳ್ಳ ಬೇಡ; ಮನುಷ್ಯರ ರೊಟ್ಟಿಯನ್ನು ತಿನ್ನಬೇಡ. ಹಾಗೆಯೇ ನಾನು ಬೆಳಗಿನ ಜಾವದಲ್ಲಿ ಜನ ರೊಂದಿಗೆ ಮಾತನಾಡಿದೆನು; ಸಂಜೆ ನನ್ನ ಹೆಂಡತಿ ಸತ್ತಳು; ಆಗ ಮುಂಜಾನೆ ಅಪ್ಪಣೆಯಾದ ಪ್ರಕಾರವೇ ನಾನು ಮಾಡಿದೆನು. ಆಗ ಜನರು--ನೀನು ಮಾಡುವ ಆ ಸಂಗತಿಗಳಿಂದ ನಮಗೆ ಪ್ರಯೋಜನವೇ ನೆಂದು ತಿಳಿಸುವದಿಲ್ಲವೇ ಎಂದರು. ಆಮೇಲೆ ನಾನು ಅವರಿಗೆ ಉತ್ತರಿಸಿದೆನು; ಕರ್ತನ ವಾಕ್ಯವು ನನಗೆ ಬಂದು ಹೇಳಿದ್ದೇನಂದರೆ-- ಇಸ್ರಾಯೇಲ್ಯರ ಮನೆ ತನದವರೊಂದಿಗೆ ಮಾತನಾಡಿ ದೇವರಾದ ಕರ್ತನು ಹೀಗೆ ಹೇಳುತ್ತಾನೆಂದು ಹೇಳು--ಇಗೋ, ನಾನು ನನ್ನ ಪರಿಶುದ್ಧ ಸ್ಥಳವನ್ನೂ ನಿಮ್ಮ ಬಲದ ಶ್ರೇಷ್ಠತ್ವವನ್ನೂ ನಿಮ್ಮ ನೇತ್ರಾನಂದಕರವಾದದ್ದನ್ನೂ ನಿಮ್ಮ ಮನಸ್ಸು ಅಭಿಲಾಷಿಸುವದನ್ನೂ ನಾನು ಅಪವಿತ್ರಪಡಿಸುವೆನು; ನೀವು ಬಿಟ್ಟಿರುವ ನಿಮ್ಮ ಕುಮಾರರೂ ಕುಮಾರ್ತೆಯರೂ ಕತ್ತಿಯಿಂದ ಬೀಳುವರು. ನಾನು ಮಾಡಿದ ಹಾಗೆ ನೀವು ಮಾಡುವಿರಿ; ನಿಮ್ಮ ತುಟಿಗಳನ್ನು ಮುಚ್ಚಿಕೊಳ್ಳ ಬಾರದು ಅವರ ರೊಟ್ಟಿಯನ್ನೂ ತಿನ್ನಬಾರದು. ನಿಮ್ಮ ರುಮಾಲುಗಳು ತಲೆಯ ಮೇಲೆಯೂ ನಿಮ್ಮ ಜೋಡು ಗಳು ನಿಮ್ಮ ಪಾದಗಳ ಅಡಿಯಲ್ಲಿಯೂ ಇರುವವು; ನೀವು ಗೋಳಾಡದೆ ಅಳದೆ ನಿಮ್ಮ ಅಕ್ರಮಗಳಿಂದ ಕುಂದಿಹೋಗಿ ಒಬ್ಬರ ಸಂಗಡಲೊಬ್ಬರು ನರುಳುವಿರಿ. ಹೀಗೆ ಯೆಹೆಜ್ಕೇಲನು ನಿಮಗೆ ಮುಂಗುರುತಾ ರುವನು; ಅವನು ಮಾಡಿದ ಎಲ್ಲವುಗಳ ಹಾಗೆ ನೀವೂ ಮಾಡುವಿರಿ; ಆ ರೀತಿ ಆದಾಗ ನಾನೇ ಕರ್ತನೆಂದು ತಿಳಿಯುವಿರಿ. ಇದಲ್ಲದೆ ಮನುಷ್ಯಪುತ್ರನೇ, ಅವರ ಮಹತ್ತಾದ ಸಂತೋಷವನ್ನೂ ನೇತ್ರಾನಂದಕರವಾದದ್ದನ್ನೂ ಅವರು ಆಶಿಸುವದನ್ನೂ ಕುಮಾರ ಕುಮಾರ್ತೆಯರನ್ನೂ ಅವರ ಬಲದಿಂದ ನಾನು ತೆಗೆದುಹಾಕುವ ಆ ದಿನದಲ್ಲಿ ತಪ್ಪಿಸಿಕೊಂಡವನು ನಿನ್ನ ಕಿವಿಗಳಿಗೆ ಸುದ್ದಿಯನ್ನು ತರುವ ಹಾಗೆ ನಿನ್ನ ಬಳಿಗೆ ಬರುವನಲ್ಲವೆ?ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿತೆರೆದಿರುವದು ನೀನು ಇನ್ನು ಮೂಕನಾಗಿರದೆ ಮಾತನಾಡುವಿ ಮತ್ತು ಅವರಿಗೆ ಮುಂಗುರುತಾಗಿರುವಿ, ಆಗ ನಾನೇ ಕರ್ತನೆಂದು ತಿಳಿಯುವರು. ಆ ದಿನದಲ್ಲಿ ತಪ್ಪಿಸಿಕೊಂಡವನ ಕಡೆಗೆ ನಿನ್ನ ಬಾಯಿತೆರೆದಿರುವದು ನೀನು ಇನ್ನು ಮೂಕನಾಗಿರದೆ ಮಾತನಾಡುವಿ ಮತ್ತು ಅವರಿಗೆ ಮುಂಗುರುತಾಗಿರುವಿ, ಆಗ ನಾನೇ ಕರ್ತನೆಂದು ತಿಳಿಯುವರು.
- Acts 7:51 ಅಪೊಸ್ತಲರ ಕೃತ್ಯಗಳು 7:51ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.
- Deuteronomy 30:6 ಧರ್ಮೋಪದೇಶಕಾಂಡ 30:6ಆಗ ನೀನು ನಿನ್ನ ದೇವರಾದ ಕರ್ತನನ್ನು ನಿನ್ನ ಪೂರ್ಣಹೃದಯದಿಂದಲೂ ನಿನ್ನ ಪೂರ್ಣಪ್ರಾಣದಿಂದಲೂ ಪ್ರೀತಿಮಾಡಿ ನೀನು ಬದು ಕುವ ಹಾಗೆ ಆತನು ನಿನ್ನ ಹೃದಯವನ್ನೂ ನಿನ್ನ ಸಂತತಿಯ ಹೃದಯವನ್ನೂ ಪರಿಛೇದಿಸುವನು.
- Jeremiah 46:1–28 ಯೆರೆಮೀಯ 46:1–28ಜನಾಂಗಗಳಿಗೆ ವಿರೋಧವಾಗಿಯೂ ಐಗುಪ್ತಕ್ಕೆ ವಿರೋಧವಾಗಿಯೂ ಯೂಫ್ರೇ ಟೀಸ್ ನದಿಯ ಬಳಿಯಲ್ಲಿ ಕರ್ಕೆವಿಾಷಿನಲ್ಲಿ ಇದ್ದಂಥ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಯೆಹೂ ದದ ಅರಸನಾದ ಯೋಷೀಯನ ಮಗನಾದ ಯೆಹೋ ಯಾಕೀಮನ ನಾಲ್ಕನೇ ವರುಷದಲ್ಲಿ ಹೊಡೆದಂಥ ಐಗುಪ್ತದ ಅರಸನಾದ ಫರೋಹನೆಕೋವಿನ ದಂಡಿಗೆ ವಿರೋಧವಾಗಿ ಪ್ರವಾದಿಯಾದ ಯೆರೆವಿಾಯನಿಗೆ ಉಂಟಾದ ಕರ್ತನ ವಾಕ್ಯವು. ಗುರಾಣಿಯನ್ನೂ ಖೇಡ್ಯವನ್ನೂ ಸಿದ್ಧಮಾಡಿರಿ; ಯುದ್ಧಕ್ಕೆ ಸವಿಾಪಿಸಿರಿ; ಕುದುರೆಗಳನ್ನು ಕಟ್ಟಿರಿ; ರಾಹುತರೇ, ಎದ್ದು ಶಿರಸ್ತ್ರಾಣಗಳನ್ನಿಟ್ಟು ನಿಂತುಕೊಳ್ಳಿರಿ, ಈಟಿಗಳನ್ನು ಮೆರುಗು ಮಾಡಿರಿ, ಕವಚಗಳನ್ನು ತೊಟ್ಟು ಕೊಳ್ಳಿರಿ; ಅವರು ದಿಗಿಲುಪಟ್ಟು ಹಿಂತಿರುಗಿದ್ದನ್ನು ನಾನು ಕಂಡದ್ದೇನು? ಅವರ ಪರಾಕ್ರಮಶಾಲಿಗಳು ಬಡಿಯಲ್ಪಟ್ಟಿದ್ದಾರೆ; ಹಿಂದೆ ನೋಡದೆ ಓಡಿಹೋಗು ತ್ತಾರೆ; ಸುತ್ತಲು ಅಂಜಿಕೆ ಇದೆ ಎಂದು ಕರ್ತನು ಅನ್ನುತ್ತಾನೆ. ವೇಗಶಾಲಿಗಳು ಓಡಿಹೋಗದಿರಲಿ; ಪರಾಕ್ರಮಶಾಲಿಗಳು ತಪ್ಪಿಸಿಕೊಳ್ಳದಿರಲಿ; ಉತ್ತರದಲ್ಲಿ ಯೂಫ್ರೇಟೀಸ್ ನದಿಯ ತೀರದಲ್ಲಿ ಅವರು ಎಡವಿ ಬೀಳುವರು. ಹೊಳೆಗಳ ಹಾಗೆ ಕದಲುವ ನೀರುಗಳಂತಿದ್ದು ಪ್ರಳಯದ ಹಾಗೆ ಬರುವವನು ಯಾರು? ಐಗುಪ್ತವು ಪ್ರಳಯದ ಹಾಗೆ ಏರುತ್ತದೆ; ಅದರ ನೀರುಗಳು ಹೊಳೆಗಳ ಹಾಗೆ ಕದಲುತ್ತವೆ; ನಾನು ಏರುತ್ತೇನೆ, ಭೂಮಿಯನ್ನು ಮುಚ್ಚುತ್ತೇನೆ, ಪಟ್ಟಣವನ್ನೂ ಅದರ ನಿವಾಸಿಗಳನ್ನೂ ನಾಶಮಾಡುತ್ತೇನೆ ಎಂದು ಆತನು ಹೇಳುತ್ತಾನೆ. ಕುದುರೆಗಳೇ, ಬನ್ನಿರಿ; ರಥಗಳೇ, ಓಡಾಡಿರಿ; ಪರಾಕ್ರಮಶಾಲಿಗಳು ಹೊರಗೆ ಬರಲಿ; ಗುರಾಣಿಯನ್ನು ಹಿಡಿಯುವ ಕೂಷ್ಯರೂ ಫೊಟ್ಯರು ಬಿಲ್ಲನ್ನು ಹಿಡಿದು ಬೊಗ್ಗಿಸುವ ಲೂದ್ಯರೂ ಹೊರಗೆ ಬರಲಿ. ಇದು ಸೈನ್ಯಗಳ ಕರ್ತನಾದ ದೇವರ ದಿನವೇ; ಆತನು ತನ್ನ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ತೀರಿಸುವ ದಿನವು ಕತ್ತಿಯು ಸಂಹರಿಸಿ ಅವರ ರಕ್ತದಿಂದ ತೃಪ್ತಿಯಾಗಿ ಮತ್ತವಾಗುವದು; ಉತ್ತರ ದೇಶದಲ್ಲಿ ಯೂಫ್ರೇಟೀಸ್ ನದಿಯ ಬಳಿಯಲ್ಲಿ ಸೈನ್ಯಗಳ ಕರ್ತನಾದ ದೇವರಿಗೆ ಬಲಿ ಆಗುತ್ತದೆ. ಐಗುಪ್ತದ ಮಗಳಾದ ಕನ್ಯಾಸ್ತ್ರೀಯೇ, ಗಿಲ್ಯಾದಿಗೆ ಹೋಗಿ ತೈಲವನ್ನು ತಕ್ಕೋ! ನೀನು ಬಹಳ ಮದ್ದು ತಕ್ಕೊಳ್ಳುವದು ವ್ಯರ್ಥವಾಗಿದೆ; ನಿನಗೆ ಗುಣವಾಗು ವದಿಲ್ಲ. ಜನಾಂಗಗಳು ನಿನ್ನ ಮಾನಭಂಗವನ್ನು ಕುರಿತು ಕೇಳಿಯವೆ, ನಿನ್ನ ಕೂಗು ದೇಶವನ್ನು ತುಂಬಿಸಿ ಯದೆ; ಪರಾಕ್ರಮಶಾಲಿಯು ಪರಾಕ್ರಮಶಾಲಿಯ ಮೇಲೆ ವಿರೋಧವಾಗಿ ಎಡವಿದ್ದಾರೆ; ಏಕವಾಗಿ ಬಿದ್ದುಹೋಗಿದ್ದಾರೆ. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಂದು ಐಗುಪ್ತದೇಶವನ್ನು ಹೇಗೆ ಹೊಡೆಯುವನೆಂಬದರ ವಿಷಯ ಕರ್ತನು ಪ್ರವಾದಿಯಾದ ಯೆರೆವಿಾಯನಿಗೆ ಹೇಳಿದ ವಾಕ್ಯವು. ಐಗುಪ್ತದಲ್ಲಿ ತಿಳಿಸಿರಿ, ಮಿಗ್ದೋಲಿನಲ್ಲಿ ಪ್ರಕಟಿ ಸಿರಿ. ನೋಫ್ನಲ್ಲಿಯೂ ತಹಪನೇಸ್ನಲ್ಲಿಯೂ ಪ್ರಕ ಟಿಸಿ, ಸ್ಥಿರವಾಗಿ ನಿಂತುಕೋ; ಸಿದ್ದಮಾಡಿಕೋ; ಕತ್ತಿಯು ನಿನ್ನ ಸುತ್ತಲೂ ಸಂಹರಿಸುವದೆಂದು ಹೇಳಿರಿ. ನಿನ್ನ ಬಲಿಷ್ಠರು ಯಾಕೆ ಬಡಕೊಂಡು ಹೋಗಿದ್ದಾರೆ? ಕರ್ತನು ಅವರನ್ನು ಓಡಿಸಿದ್ದದರಿಂದ ಅವರು ನಿಲ್ಲಲಿಲ್ಲ. ಅನೇಕರನ್ನು ಎಡವುವಂತೆ ಮಾಡಿದನು. ಹೌದು, ಒಬ್ಬರ ಮೇಲೊ ಬ್ಬರು ಬಿದ್ದರು; ಅವರು--ಏಳು ಉಪದ್ರಪಡಿಸುವ ಕತ್ತಿಯನ್ನು ಬಿಟ್ಟು, ಸ್ವಂತ ಜನರ ಬಳಿಗೂ ನಾವು ಹುಟ್ಟಿದ ದೇಶದ ಬಳಿಗೂ ತಿರುಗಿ ಹೋಗೋಣ ಎಂದು ಹೇಳಿದರು. ಐಗುಪ್ತದ ಅರಸ ನಾದ ಫರೋಹನು ನಾಶವಾದನು; ಸಮಯವನ್ನು ತಪ್ಪಿಸಿದ್ದಾನೆಂದು ಅಲ್ಲಿ ಕೂಗುತ್ತಾರೆ. ಸೈನ್ಯಗಳ ಕರ್ತ ನೆಂದು ಹೆಸರುಳ್ಳ ಅರಸನು ಅನ್ನುವದೇನಂದರೆ--ನನ್ನ ಜೀವದಾಣೆ, ಬೆಟ್ಟಗಳಲ್ಲಿ ತಾಬೋರಿನಂತೆಯೂ ಸಮುದ್ರದ ಬಳಿಯಲ್ಲಿ ಕರ್ಮೆಲಿನಂತೆಯೂ ನಿಶ್ಚಯ ವಾಗಿ ಬರುವನು. ಓ ಐಗುಪ್ತದ ಯುವತಿಯಾದ ನಿವಾಸಿಯೇ, ಸೆರೆಯ ಸಾಮಾನುಗಳನ್ನು ಸಜ್ಜು ಗೊಳಿಸಿಕೋ; ನೋಫ್ಹಾಳಾಗುವದು; ನಿವಾಸಿ ಗಳಿಲ್ಲದ ಬೀಡಾಗುವದು. ಐಗುಪ್ತವು ಬಹಳ ಚೆಲುವಾದ ಕಡಸಾಗಿದೆ; ಆದರೆ ಉತ್ತರದಿಂದ ನಾಶ ನವು ಬಂದೇ ಬರುತ್ತದೆ. ಅದರೊಳಗಿರುವ ಅದರ ಸಂಬಳದವರು ಕೊಬ್ಬಿದ ಹೋರಿಗಳ ಹಾಗಿದ್ದಾರೆ; ಅವರು ಸಹ ಹಿಂದಕ್ಕೆ ತಿರುಗಿಕೊಂಡು ಏಕವಾಗಿ ಓಡಿಹೋಗುತ್ತಾರೆ; ಅವರು ನಿಲ್ಲಲಿಲ್ಲ; ಅವರ ಆಪತ್ತಿನ ದಿವಸವೂ ಅವರ ವಿಚಾರಣೆಯ ಕಾಲವೂ ಅವರ ಮೇಲೆ ಬಂತು. ಅದರ ಶಬ್ದವು ಸರ್ಪದಂತೆ ಹೊರಡುವದು; ಅವರು ದಂಡಿನ ಸಂಗಡ ಸಂಚರಿಸಿ ಕಟ್ಟಿಗೆ ಕಡಿಯುವವರ ಹಾಗೆ ಕೊಡಲಿಗಳ ಸಂಗಡ ಅದಕ್ಕೆ ವಿರೋಧವಾಗಿ ಬರುವರು. ಆದರೆ ಅಡವಿ ಯನ್ನು ಅದು ಶೋಧಿಸ ಕೂಡದ್ದಾಗಿದ್ದರೂ ಕಡಿದು ಹಾಕುವರೆಂದು ಕರ್ತನು ಅನ್ನುತ್ತಾನೆ; ಅವರು ಮಿಡಿತೆ ಗಳಿಗಿಂತ ಹೆಚ್ಚಾಗಿ ಲೆಕ್ಕವಿಲ್ಲದೆ ಇದ್ದಾರೆ. ಐಗುಪ್ತದ ಮಗಳು ನಾಚಿಕೆಪಡುವಳು, ಉತ್ತರದ ಜನರ ಕೈಯಲ್ಲಿ ಒಪ್ಪಿಸಲ್ಪಡುವಳು. ಇಸ್ರಾಯೇಲಿನ ದೇವರಾದ ಸೈನ್ಯ ಗಳ ಕರ್ತನು ಹೇಳುವದೇನಂದರೆ--ಇಗೋ, ನಾನು ನೋಡುವ ಸಮೂಹವನ್ನೂ ಫರೋಹನನ್ನೂ ಐಗುಪ್ತ ವನ್ನೂ ಅದರ ದೇವರುಗಳನ್ನೂ ಅದರ ಅರಸರನ್ನೂ ಅಂತೂ ಫರೋಹನನ್ನೂ ಅವನಲ್ಲಿ ನಂಬಿಕೆಯಿಡುವ ಎಲ್ಲರನ್ನೂ ದಂಡಿಸುತ್ತೇನೆ; ಅವರ ಪ್ರಾಣವನ್ನು ಹುಡುಕುವವರ ಕೈಯಲ್ಲಿಯೂ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಯಲ್ಲಿಯೂ ಅವನ ಸೇವಕರ ಕೈಯಲ್ಲಿಯೂ ಅವರನ್ನು ನಾನು ಒಪ್ಪಿಸುತ್ತೇನೆ. ಅದರ ತರುವಾಯ ಅದು ಪೂರ್ವದ ಕಾಲಗಳಂತೆ ನಿವಾಸ ವಾಗುವದೆಂದು ಕರ್ತನು ಅನ್ನುತ್ತಾನೆ. ಆದರೆ ನೀನು, ಓ ನನ್ನ ಸೇವಕನಾದ ಯಾಕೋಬನೇ, ನೀನು ಭಯ ಪಡಬೇಡ; ಇಸ್ರಾಯೇಲೇ, ದಿಗ್ಭ್ರಮೆಗೊಳ್ಳಬೇಡ; ಇಗೋ, ನಾನು ನಿನ್ನನ್ನು ದೂರದಿಂದಲೂ ನಿನ್ನ ಸಂತಾನವನ್ನು ಅವರು ಸೆರೆಯಾಗಿ ಹೋದ ದೇಶ ದಿಂದಲೂ ರಕ್ಷಿಸುವೆನು; ಯಾಕೋಬನು ತಿರುಗಿ ಬಂದು ವಿಶ್ರಾಂತಿಯಾಗಿಯೂ ಸುಖವಾಗಿಯೂ ಇರುವನು; ಅವನನ್ನು ಭಯಪಡಿಸುವದಕ್ಕೆ ಯಾರೂ ಇರುವದಿಲ್ಲ.ನನ್ನ ಸೇವಕನಾದ ಯಾಕೋಬನೇ, ನೀನು ಭಯಪಡ ಬೇಡವೆಂದು ಕರ್ತನು ಅನ್ನುತ್ತಾನೆ; ನಾನೇ ನಿನ್ನ ಸಂಗಡ ಇದ್ದೇನೆ; ನಾನು ನಿನ್ನನ್ನು ಎಲ್ಲಿಗೆ ಓಡಿಸಿ ದೆನೋ ಆ ಜನಾಂಗಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡು ತ್ತೇನೆ; ಆದರೆ ನಿನ್ನನ್ನು ನಾಶಮಾಡುವದಿಲ್ಲ; ನ್ಯಾಯದಿಂದಲೇ ನಿನ್ನನ್ನು ಶಿಕ್ಷಿಸುತ್ತೇನೆ; ಆದಾಗ್ಯೂ ನಿನ್ನನ್ನು ಶಿಕ್ಷಿಸದೇ ಬಿಡುವದಿಲ್ಲ. ನನ್ನ ಸೇವಕನಾದ ಯಾಕೋಬನೇ, ನೀನು ಭಯಪಡ ಬೇಡವೆಂದು ಕರ್ತನು ಅನ್ನುತ್ತಾನೆ; ನಾನೇ ನಿನ್ನ ಸಂಗಡ ಇದ್ದೇನೆ; ನಾನು ನಿನ್ನನ್ನು ಎಲ್ಲಿಗೆ ಓಡಿಸಿ ದೆನೋ ಆ ಜನಾಂಗಗಳನ್ನೆಲ್ಲಾ ಸಂಪೂರ್ಣವಾಗಿ ನಾಶಮಾಡು ತ್ತೇನೆ; ಆದರೆ ನಿನ್ನನ್ನು ನಾಶಮಾಡುವದಿಲ್ಲ; ನ್ಯಾಯದಿಂದಲೇ ನಿನ್ನನ್ನು ಶಿಕ್ಷಿಸುತ್ತೇನೆ; ಆದಾಗ್ಯೂ ನಿನ್ನನ್ನು ಶಿಕ್ಷಿಸದೇ ಬಿಡುವದಿಲ್ಲ.
Original words (Hebrew)
- Egypt · H4714מִצְרַיִם Mitsrayim
- Judah · H3063יְהוּדָה Yᵉhûwdâh
- Edom · H123אֱדֹם ʼĔdôm
- children · H1121בֵּן bên
- Ammon · H5983עַמּוֹן ʻAmmôwn
- Moab · H4124מוֹאָב Môwʼâb
- utmost · H7112קָצַץ qâtsats
- corners · H6285פֵּאָה pêʼâh
- dwell · H3427יָשַׁב yâshab
- wilderness · H4057מִדְבָּר midbâr
- nations · H1471גּוֹי gôwy
- uncircumcised · H6189עָרֵל ʻârêl
- house · H1004בַּיִת bayith
- Israel · H3478יִשְׂרָאֵל Yisrâʼêl
- uncircumcised · H6189עָרֵל ʻârêl
- heart · H3820לֵב lêb