Job · chapter 1 · verse 7
Job 1:7 in Kannada
ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದಿ ಅಂದನು. ಸೈತಾನನು ಕರ್ತನಿಗೆ ಪ್ರತ್ಯುತ್ತರವಾಗಿ--ಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ ತಿರುಗಾಡಿ ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆದಾಡಿ ಬಂದೆನು ಅಂದನು.
Kartanu saitaananige--neenu ellinda bandi andanu. Saitaananu kartanige pratyuttaravaagi--bhoomiyalli attinda itta ittinda atta tirugaadi meleyoo kelagoo hoguttaa adaralli nadedaadi bandenu andanu.
Job 1:7 in English
- King James Version (KJV)
- And the LORD said unto Satan, Whence comest thou? Then Satan answered the LORD, and said, From going to and fro in the earth, and from walking up and down in it.
- World English Bible (WEB)
- The LORD said to Satan, “Where have you come from?” Then Satan answered the LORD, and said, “From going back and forth on the earth, and from walking up and down in it.”
- American Standard Version (ASV)
- And Jehovah said unto Satan, Whence comest thou? Then Satan answered Jehovah, and said, From going to and fro in the earth, and from walking up and down in it.
- Bible in Basic English (BBE)
- And the Lord said to the Satan, Where do you come from? And the Satan said in answer, From wandering this way and that on the earth, and walking about on it.
- Darby Translation (DBY)
- And Jehovah said to Satan, Whence comest thou? And Satan answered Jehovah and said, From going to and fro in the earth, and from walking up and down in it.
- Webster's Bible (WBS)
- And the LORD said to Satan, Whence comest thou? Then Satan answered the LORD, and said, From going to and fro on the earth, and from walking up and down upon it.
- Young's Literal Translation (YLT)
- And Jehovah saith unto the Adversary, 'Whence comest thou?' And the Adversary answereth Jehovah and saith, 'From going to and fro in the land, and from walking up and down on it.'
Read in context
- 5ಔತಣದ ದಿನಗಳು ಮುಗಿದ ಬಳಿಕ ಯೋಬನು ಅವರನ್ನು ಕರೆಕಳುಹಿಸಿ ಅವರನ್ನು ಶುದ್ಧಿ ಮಾಡಿ ಬೆಳಿಗ್ಗೆ ಎದ್ದು ಅವರೆಲ್ಲರ ಲೆಕ್ಕದ ಪ್ರಕಾರ ದಹನಬಲಿಗಳನ್ನು ಅರ್ಪಿಸುತ್ತಿದ್ದನು; ಯೋಬನುಒಂದುವೇಳೆ ನನ್ನ ಕುಮಾರರು ಪಾಪ ಮಾಡಿ ತಮ್ಮ ಹೃದಯಗಳಲ್ಲಿ ದೇವರನ್ನು ಶಪಿಸಿರಬಹುದು ಅಂದು ಕೊಂಡನು. ಹೀಗೆಯೇ ಯೋಬನು ಕ್ರಮವಾಗಿ ಮಾಡುತ್ತಿದ್ದನು.
- 6ಒಂದು ದಿನ ದೇವರ ಪುತ್ರರು ಕರ್ತನ ಮುಂದೆ ನಿಂತುಕೊಳ್ಳುವದಕ್ಕೆ ಬಂದಾಗ ಸೈತಾನನು ಸಹ ಅವ ರೊಂದಿಗೆ ಬಂದನು.
- 7ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದಿ ಅಂದನು. ಸೈತಾನನು ಕರ್ತನಿಗೆ ಪ್ರತ್ಯುತ್ತರವಾಗಿ--ಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ ತಿರುಗಾಡಿ ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆದಾಡಿ ಬಂದೆನು ಅಂದನು.
- 8ಕರ್ತನು ಸೈತಾನನಿಗೆ--ನನ್ನ ಸೇವಕನಾದ ಯೋಬನ ಮೇಲೆ ನೀನು ಗಮನವಿಟ್ಟೆಯಾ? ಅವನು ಸಂಪೂರ್ಣನೂ ಯಥಾರ್ಥನೂ ದೇವರಿಗೆ ಭಯಪಡುವವನೂ ಕೇಡನ್ನು ಬಿಟ್ಟು ತೊಲಗುವವನೂ ಆಗಿದ್ದಾನೆ ಅವನ ಹಾಗೆ ಭೂಮಿಯಲ್ಲಿ ಒಬ್ಬನೂ ಇಲ್ಲ ಅಂದನು.
- 9ಆಗ ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆ--ಯೋಬನು ಸುಮ್ಮನೆ ದೇವರಿಗೆ ಭಯಪಡುತ್ತಾನೋ?
Cross references
- 1 Peter 5:8 1 ಪೇತ್ರನು 5:8ಸ್ವಸ್ಥಚಿತ್ತರಾಗಿರ್ರಿ. ಎಚ್ಚರವಾಗಿರ್ರಿ; ನಿಮ್ಮ ವಿರೋಧಿ ಯಾಗಿರುವ ಸೈತಾನನು ಗರ್ಜಿಸುವ ಸಿಂಹದಂತೆ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗುತ್ತಾನೆ.
- Matthew 12:43 ಮತ್ತಾಯನು 12:43ಅಶುದ್ಧಾತ್ಮವು ಒಬ್ಬ ಮನುಷ್ಯನಿಂದ ಹೊರಗೆ ಹೋದ ಮೇಲೆ ನೀರಿಲ್ಲದ ಸ್ಥಳಗಳಲ್ಲಿ ವಿಶ್ರಾಂತಿಗಾಗಿ ತಿರುಗಾಡಿದರೂ ಅದನ್ನು ಕಂಡುಕೊಳ್ಳಲಿಲ್ಲ.
- Job 2:2 ಯೋಬನು 2:2ಆಗ ಕರ್ತನು ಸೈತಾನನಿಗೆ--ನೀನು ಎಲ್ಲಿಂದ ಬಂದೆ ಅಂದನು. ಸೈತಾನನು ಪ್ರತ್ಯುತ್ತರವಾಗಿ ಕರ್ತನಿಗೆಭೂಮಿಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ, ಮೇಲೆಯೂ ಕೆಳಗೂ ಹೋಗುತ್ತಾ ಅದರಲ್ಲಿ ನಡೆ ದಾಡಿ ಬಂದೆನು ಅಂದನು.
- Revelation 12:12–17 ಪ್ರಕಟನೆ 12:12–17ಆದದರಿಂದ ಪರಲೋಕಗಳೇ, ಅದರಲ್ಲಿ ವಾಸಮಾಡುವವರೇ, ಹರ್ಷಗೊಳ್ಳಿರಿ. ಭೂಮಿಯ ಮೇಲೆ ಮತ್ತು ಸಮುದ್ರದಲ್ಲಿ ಇರುವವರಿಗೆ ಅಯ್ಯೊ! ಯಾಕಂದರೆ ಸೈತಾನನು ತನಗಿರುವ ಕಾಲವು ಸ್ವಲ್ಪವೆಂದು ತಿಳಿದು ಮಹಾರೌದ್ರವುಳ್ಳವನಾಗಿ ನಿಮ್ಮ ಕಡೆಗೆ ಇಳಿದು ಬಂದಿದ್ದಾನೆ ಎಂಬದಾಗಿ ಹೇಳಿತು. ಘಟಸರ್ಪವು ತಾನು ದೊಬ್ಬಲ್ಪಟ್ಟು ಭೂಮಿಗೆ ಬಿದ್ದಿರುವದನ್ನು ಕಂಡು ಗಂಡುಮಗುವನ್ನು ಹೆತ್ತಸ್ತ್ರೀ ಯನ್ನು ಹಿಂಸಿಸಿತು. ಆ ಸ್ತ್ರೀಯು ಅರಣ್ಯದಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವದಕ್ಕಾಗಿ ಆಕೆಗೆ ದೊಡ್ಡ ಹದ್ದಿನ ಎರಡು ರೆಕ್ಕೆಗಳು ಕೊಡಲ್ಪಟ್ಟವು; ಅಲ್ಲಿ ಒಂದು ಕಾಲ, ಕಾಲಗಳು, ಅರ್ಧ ಕಾಲ ಸರ್ಪನ ಮುಖಕ್ಕೆ ಮರೆಯಾಗಿ ಪೋಷಣೆ ಹೊಂದುತ್ತಾಳೆ. ಆ ಸ್ತ್ರೀಯನ್ನು ಪ್ರವಾಹವು ಬಡಕೊಂಡು ಹೋಗ ಬೇಕೆಂದು ಆಕೆಯ ಹಿಂದೆ ಸರ್ಪವು ತನ್ನ ಬಾಯೊಳಗಿಂದ ನೀರನ್ನು ಪ್ರವಾಹದಂತೆ ಬಿಟ್ಟಿತು. ಆದರೆ ಭೂಮಿಯು ಆ ಸ್ತ್ರೀಯ ಸಹಾಯಕ್ಕೆ ಬಂದು ತನ್ನ ಬಾಯಿ ತೆರೆದು ಘಟಸರ್ಪನು ತನ್ನ ಬಾಯೊಳಗಿಂದ ಬಿಟ್ಟ ಪ್ರವಾಹವನ್ನು ಕುಡಿದುಬಿಟ್ಟಿತು.ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸು ಕ್ರಿಸ್ತನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟನು. ಆಗ ಘಟಸರ್ಪನು ಸ್ತ್ರೀಯ ಮೇಲೆ ಕೋಪಿಸಿಕೊಂಡು ಆಕೆಯ ಸಂತಾನದವರಲ್ಲಿ ಉಳಿದವರ ಮೇಲೆ ಅಂದರೆ ದೇವರ ಆಜ್ಞೆಗಳನ್ನು ಕೈಕೊಂಡು ನಡೆದು ಯೇಸು ಕ್ರಿಸ್ತನ ವಿಷಯವಾದ ಸಾಕ್ಷಿಯನ್ನು ಹೇಳಿರುವವರ ಮೇಲೆ ಯುದ್ಧ ಮಾಡುವದಕ್ಕೆ ಹೊರಟನು.
- Revelation 12:9 ಪ್ರಕಟನೆ 12:9ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.
- Revelation 20:8 ಪ್ರಕಟನೆ 20:8ಅವನು ಹೊರಗೆ ಬಂದು ಭೂಮಿಯ ನಾಲ್ಕು ದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು; ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವದು.
- 2 Kings 5:25 2 ಅರಸುಗಳು 5:25ಆಗ ಇವನು ಒಳಗೆ ಪ್ರವೇಶಿಸಿ ತನ್ನ ಯಜಮಾನನ ಮುಂದೆ ನಿಂತನು. ಎಲೀಷನು ಅವನಿಗೆ--ಗೇಹಜಿಯೇ, ಎಲ್ಲಿಂದ ಬಂದಿ ಅಂದನು. ಅದಕ್ಕವನು--ನಿನ್ನ ಸೇವಕನು ಎಲ್ಲಿಗೂ ಹೋಗಲಿಲ್ಲ ಅಂದನು.
- Zechariah 6:7 ಜೆಕರ್ಯ 6:7ಕಪಿಲ ವರ್ಣದವುಗಳು ಹೊರಟು ದೇಶದಲ್ಲಿ ಸಂಚಾರ ಮಾಡಹೋಗುವದಕ್ಕೆ ನೋಡಿದವು ಅಂದನು. ಆಗ ಅವನು--ಹೋಗಿ ದೇಶದಲ್ಲಿ ಅತ್ತಿತ್ತ ನಡೆದಾಡುವದಕ್ಕೆ ಇಲ್ಲಿಂದ ಹೋಗಿರಿ ಅಂದನು; ಹಾಗೆ ಅವು ದೇಶದಲ್ಲಿ ಅತ್ತಿತ್ತ ತಿರುಗಾಡಿದವು.
- Zechariah 1:10–11 ಜೆಕರ್ಯ 1:10–11ಆಗ ಗಂಧದ ಗಿಡಗಳ ನಡುವೆ ನಿಂತ ಮನುಷ್ಯನು ಉತ್ತರಕೊಟ್ಟು ಹೇಳಿದ್ದೇನಂದರೆ--ಇವರು ಭೂಮಿ ಯಲ್ಲಿ ಅತ್ತಿಂದ ಇತ್ತ ಇತ್ತಿಂದ ಅತ್ತ ನಡೆದಾಡುವದಕ್ಕೆ ಕರ್ತನು ಕಳುಹಿಸಿದವರು ಅಂದನು. ಆಗ ಅವರು ಗಂಧದ ಗಿಡಗಳ ನಡುವೆ ನಿಂತ ಕರ್ತನ ದೂತನಿಗೆ ಉತ್ತರಕೊಟ್ಟು ಹೇಳಿದ್ದೇನಂದರೆ -- ಭೂಮಿಯಲ್ಲಿ ಇತ್ತಿಂದ ಅತ್ತ ಅತ್ತಿಂದ ಇತ್ತ ನಡೆದಾಡಿದ್ದೇವೆ; ಇಗೋ, ಭೂಮಿಯೆಲ್ಲಾ ಸುಮ್ಮನಿದ್ದು ಶಾಂತಿಯಾಗಿದೆ ಅಂದರು.