Job · chapter 10 · verse 21
Job 10:21 in Kannada
ಆಗ ನಾನು ತಿರುಗಿಕೊಳ್ಳದವನಾಗಿ ಕತ್ತಲೆಯ ದೇಶಕ್ಕೆ, ಮರಣದ ನೆರಳಿಗೆಮರಣದ ನೆರಳಿನ ಅಂಧಕಾರದ ಹಾಗೆ ಮೊಬ್ಬಿರುವ ಕ್ರಮವಿಲ್ಲದ ಪ್ರಕಾಶವೇ ಅಂಧ ಕಾರದ ಹಾಗಿರುವ ದೇಶಕ್ಕೆ ಹೋಗುವದಕ್ಕಿಂತ ಮುಂಚೆ ಸ್ವಲ್ಪ ವಿಶ್ರಮಿಸಿಕೊಳ್ಳುವೆನು.
Aaga naanu tirugikolladavanaagi kattaleya deshakke, maranada neraligemaranada neralina andhakaarada haage mobbiruva kramavillada prakaashave andha kaarada haagiruva deshakke hoguvadakkinta munche svalpa vishramisikolluvenu.
Job 10:21 in English
- King James Version (KJV)
- Before I go [whence] I shall not return, [even] to the land of darkness and the shadow of death;
- World English Bible (WEB)
- before I go where I will not return from, to the land of darkness and of the shadow of death;
- American Standard Version (ASV)
- Before I go whence I shall not return, [Even] to the land of darkness and of the shadow of death;
- Bible in Basic English (BBE)
- Before I go to the place from which I will not come back, to the land where all is dark and black,
- Darby Translation (DBY)
- Before I go, and never to return, — to the land of darkness and the shadow of death;
- Webster's Bible (WBS)
- Before I go [whence] I shall not return, [even] to the land of darkness, and the shades of death;
- Young's Literal Translation (YLT)
- Before I go, and return not, Unto a land of darkness and death-shade,
Read in context
- 19ನಾನು ಇರದವನಂತಿದ್ದು ಗರ್ಭದೊಳಗಿಂದಲೇ ಸಮಾಧಿ ಸೇರುತ್ತಿದ್ದೆನು.
- 20ನನ್ನ ದಿವಸಗಳು ಸ್ವಲ್ಪವಲ್ಲವೋ? ಅವುಗಳನ್ನು ತೀರಿಸಿ ನನ್ನನ್ನು ಬಿಟ್ಟುಬಿಡು.
- 21ಆಗ ನಾನು ತಿರುಗಿಕೊಳ್ಳದವನಾಗಿ ಕತ್ತಲೆಯ ದೇಶಕ್ಕೆ, ಮರಣದ ನೆರಳಿಗೆಮರಣದ ನೆರಳಿನ ಅಂಧಕಾರದ ಹಾಗೆ ಮೊಬ್ಬಿರುವ ಕ್ರಮವಿಲ್ಲದ ಪ್ರಕಾಶವೇ ಅಂಧ ಕಾರದ ಹಾಗಿರುವ ದೇಶಕ್ಕೆ ಹೋಗುವದಕ್ಕಿಂತ ಮುಂಚೆ ಸ್ವಲ್ಪ ವಿಶ್ರಮಿಸಿಕೊಳ್ಳುವೆನು.
- 22ಮರಣದ ನೆರಳಿನ ಅಂಧಕಾರದ ಹಾಗೆ ಮೊಬ್ಬಿರುವ ಕ್ರಮವಿಲ್ಲದ ಪ್ರಕಾಶವೇ ಅಂಧ ಕಾರದ ಹಾಗಿರುವ ದೇಶಕ್ಕೆ ಹೋಗುವದಕ್ಕಿಂತ ಮುಂಚೆ ಸ್ವಲ್ಪ ವಿಶ್ರಮಿಸಿಕೊಳ್ಳುವೆನು.
Cross references
- 2 Samuel 12:23 2 ಸಮುವೇಲನು 12:23ಆದರೆ ಈಗ ಸತ್ತಿದೆ ಯಲ್ಲಾ; ನಾನು ಉಪವಾಸ ಮಾಡುವದು ಯಾಕೆ? ನಾನು ಅದನ್ನು ತಿರಿಗಿ ಬರಮಾಡಬಲ್ಲೆನೋ? ನಾನು ಅದರ ಬಳಿಗೆ ಹೋಗುವೆನು; ಆದರೆ ಅದು ನನ್ನ ಬಳಿಗೆ ತಿರಿಗಿ ಬರುವದಿಲ್ಲ ಅಂದನು.
- Job 16:22 ಯೋಬನು 16:22ಕೆಲವು ವರುಷಗಳು ಮುಗಿದಾಗ ನಾನು ತಿರುಗಿ ಬಾರದ ದಾರಿಹಿಡಿದು ಹೋಗುತ್ತೇನೆ.
- Job 3:5 ಯೋಬನು 3:5ಕತ್ತಲೂ ಮರಣದ ನೆರಳೂ ಅದನ್ನು ಅಶುದ್ಧಮಾಡಲಿ; ಮೋಡವು ಅದರ ಮೇಲೆ ವಾಸಮಾಡಲಿ; ಹಗಲಿನ ಮೊಬ್ಬುಗಳು ಅದನ್ನು ಹೆದ ರಿಸಲಿ.
- Job 7:8–10 ಯೋಬನು 7:8–10ನನ್ನನ್ನು ನೋಡು ವವನ ಕಣ್ಣು ನನ್ನನ್ನು ಇನ್ನು ಮೇಲೆ ನೋಡದು; ನಿನ್ನ ಕಣ್ಣುಗಳು ನನ್ನ ಮೇಲಿವೆ ನಾನು ಮಾತ್ರ ಇರು ವದಿಲ್ಲ. ಮೋಡವು ಕರಗಿಹೋಗುವ ಹಾಗೆಯೇ, ಪಾತಾಳಕ್ಕೆ ಇಳಿದವನು ಹಿಂತಿರುಗಿ ಬರಲಾರನು. ಇನ್ನು ಅವನು ತನ್ನ ಮನೆಗೆ ತಿರುಗಿಕೊಳ್ಳುವದಿಲ್ಲ; ಅವನ ಸ್ಥಳವು ಇನ್ನು ಅವನ ಗುರುತನ್ನು ಅರಿಯದು.
- Psalm 23:4 ಕೀರ್ತನೆಗಳು 23:4ಹೌದು, ನಾನು ಮರಣದ ನೆರಳಿನ ಕಣಿವೆಯಲ್ಲಿ ನಡೆದರೂ ಕೇಡಿಗೆ ಭಯಪಡೆನು; ಯಾಕಂದರೆ ನೀನು ನನ್ನ ಸಂಗಡ ಇದ್ದೀ; ನಿನ್ನ ಕೋಲೂ ದೊಣ್ಣೆಯೂ ನನ್ನನ್ನು ಆದರಿಸುತ್ತವೆ.
- Job 14:10–14 ಯೋಬನು 14:10–14ಆದರೆ ಮನುಷ್ಯನು ಸತ್ತು ಕ್ಷಯಿಸಿ ಹೋಗುತ್ತಾನೆ; ಮನುಷ್ಯನು ಪ್ರಾಣ ಬಿಟ್ಟ ಬಳಿಕ ಅವನೆಲ್ಲಿರುವನು? ಹೇಗೆ ನೀರು ಸಮುದ್ರ ದಿಂದ ಮುಗಿದು ಹೋಗುತ್ತದೋ ಪ್ರವಾಹವು ಆರಿ ಬತ್ತಿಹೋಗುತ್ತದೆ ಹಾಗೆ ಮನುಷ್ಯನು ಮಲಗುತ್ತಾನೆ, ಏಳುವದೇ ಇಲ್ಲ; ಆಕಾಶಗಳು ಇಲ್ಲದೆ ಹೋಗುವ ವರೆಗೆ ಅವರು ಎಚ್ಚರಗೊಳ್ಳುವದಿಲ್ಲ. ನಿದ್ರೆಯಿಂದ ಎಬ್ಬಿಸಲ್ಪಡುವದೂ ಇಲ್ಲ. ನೀನು ನನ್ನನ್ನು ಸಮಾಧಿಯಲ್ಲಿ ಮರೆಮಾಡಿ, ನಿನ್ನ ಕೋಪವು ತಿರುಗುವ ವರೆಗೂ ನನ್ನನ್ನು ಅಡಗಿಸಿ ನನಗೆ ನೇಮಕವಾದ ಸಮಯವನ್ನು ನೇಮಿಸಿ ನನ್ನನ್ನು ಜ್ಞಾಪಕಮಾಡಿಕೊಂಡರೆ ಲೇಸು. ಮನುಷ್ಯನು ಸತ್ತರೆ ಅವನು ತಿರುಗಿ ಬದುಕುವನೋ? ನನಗೆ ನೇಮಕ ಮಾಡಿದ ಸಮಯದ ದಿನಗಳೆಲ್ಲಾ ನನಗೆ ಬದಲು ಬರುವ ವರೆಗೆ ನಾನು ಕಾದುಕೊಂಡಿರುವೆನು.
- 2 Samuel 14:14 2 ಸಮುವೇಲನು 14:14ನಾವು ಸಾಯುವದು ಅವಶ್ಯವೇ. ನೆಲದ ಮೇಲೆ ಚೆಲ್ಲಲ್ಪಟ್ಟು ತಿರಿಗಿ ಕೂಡಿಸಲ್ಪಡದ ನೀರಿನ ಹಾಗೆ ಇದ್ದೇವೆ. ಆದರೆ ದೇವರು ಯಾರನ್ನೂ ಲಕ್ಷ್ಯಮಾಡುವಾತನಲ್ಲ. ಆದರೂ ಹೊರಡಿಸಲ್ಪಟ್ಟವನು ಹೊರಡಿಸಲ್ಪಟ್ಟಿರದ ಹಾಗೆ ಆಲೋಚನೆಗಳನ್ನು ಮಾಡುವಾತನಾಗಿದ್ದಾನೆ.
- Psalm 88:11–12 ಕೀರ್ತನೆಗಳು 88:11–12ಸಮಾಧಿಯಲ್ಲಿ ನಿನ್ನ ಪ್ರೀತಿ ಕರುಣೆಯು ಇಲ್ಲವೆ ನಾಶನ ಸ್ಥಳದಲ್ಲಿ ನಿನ್ನ ನಂಬಿಗಸ್ತಿಕೆಯು ಸಾರಲ್ಪಡುವವೋ? ಕತ್ತಲೆಯಲ್ಲಿ ನಿನ್ನ ಅದ್ಭುತಗಳೂ ಮರೆ ಯುವ ದೇಶದಲ್ಲಿ ನಿನ್ನ ನೀತಿಯೂ ತಿಳಿಯಲ್ಪಡು ವದೋ?
- Job 3:13 ಯೋಬನು 3:13ಹಾಗಾಗಿದ್ದರೆ ಈಗ ಮೌನವಾಗಿ ಮಲಗಿ ಕೊಳ್ಳುತ್ತಿದ್ದೆನು; ವಿಶ್ರಾಂತಿಯಲ್ಲಿರುತ್ತಿದ್ದೆನು.
- Psalm 88:6 ಕೀರ್ತನೆಗಳು 88:6ಕೆಳಗಿನ ಆಳವಾದ ಕುಣಿಯಲ್ಲಿಯೂ ಕತ್ತಲೆಯಲ್ಲಿಯೂ ಅಗಾಧಗಳಲ್ಲಿಯೂ ನನ್ನನ್ನು ಇಟ್ಟಿದ್ದಿ.
- Jeremiah 2:6 ಯೆರೆಮೀಯ 2:6ನಮ್ಮನ್ನು ಐಗುಪ್ತ ದೇಶದೊಳಗಿಂದ ಬರಮಾಡಿ ನಮ್ಮನ್ನು ಅರಣ್ಯದಲ್ಲಿ ಕಾಡೂ ಕುಣಿಗಳೂ ಉಳ್ಳ ದೇಶದಲ್ಲಿ, ಕ್ಷಾಮದ ಮತ್ತು ಮರಣದ ನೆರಳಾದಂಥ ದೇಶದಲ್ಲಿ, ಒಬ್ಬರೂ ಹಾದು ಹೋಗದೆ ಯಾರೂ ವಾಸಮಾಡದೆ ಇರುವಲ್ಲಿ ನಡಿಸಿದ ಕರ್ತನು ಎಲ್ಲಿ ಎಂದು ಅವರು ಅಂದುಕೊಳ್ಳಲಿಲ್ಲ.
- Isaiah 38:11 ಯೆಶಾಯ 38:11ಕರ್ತನನ್ನು, ಜೀವಿತರ ದೇಶದಲ್ಲಿಯೂ ಸಹ ಕರ್ತನನ್ನು ನೋಡೆನೆಂದೂ ಇನ್ನೂ ಭೂಲೋಕ ನಿವಾಸಿಗಳಲ್ಲೊಬ್ಬನಾಗಿ ಮನುಷ್ಯರನ್ನು ನೋಡಲಾರೆ ನಲ್ಲಾ ಎಂದು ಅಂದುಕೊಂಡೆನು.