Job · chapter 11 · verse 12
Job 11:12 in Kannada
ಕಾಡುಕತ್ತೆಯ ಮರಿಯ ಹಾಗೆ ಮನುಷ್ಯನು ಹುಟ್ಟಿ ದರೂ ವ್ಯರ್ಥ ಮನುಷ್ಯನು ಜ್ಞಾನಿಯಾಗಿರುವನು.
Kaadukatteya mariya haage manushyanu hutti daroo vyartha manushyanu jnyaaniyaagiruvanu.
Job 11:12 in English
- King James Version (KJV)
- For vain man would be wise, though man be born [like] a wild ass’s colt.
- World English Bible (WEB)
- An empty-headed man becomes wise when a man is born as a wild donkey’s colt.
- American Standard Version (ASV)
- But vain man is void of understanding, Yea, man is born [as] a wild ass’s colt.
- Bible in Basic English (BBE)
- And so a hollow-minded man will get wisdom, when a young ass of the field gets teaching.
- Darby Translation (DBY)
- Yet a senseless man will make bold, though man be born [like] the foal of a wild ass.
- Webster's Bible (WBS)
- For vain man would be wise, though man is born [like] a wild ass's colt.
- Young's Literal Translation (YLT)
- And empty man is bold, And the colt of a wild ass man is born.
Read in context
- 10ಆತನು ಅದನ್ನು ಕಡಿಯುವದಾದರೆ ಇಲ್ಲವೆ ಮುಚ್ಚುವದಾದರೆ ಅಥವಾ ಒಟ್ಟು ಗೂಡಿಸುವದಾದರೆ ಆತನನ್ನು ತಡೆಯುವವರು ಯಾರಿದ್ದಾರೆ?
- 11ಆತನು ವ್ಯರ್ಥ ಜನರನ್ನು ತಿಳಿದಿದ್ದಾನೆ. ದುಷ್ಟತನವನ್ನು ನೋಡಿ ಆತನು ಅದನ್ನು ಗ್ರಹಿಸಿಕೊಳ್ಳದೆ ಇರುತ್ತಾನೋ?
- 12ಕಾಡುಕತ್ತೆಯ ಮರಿಯ ಹಾಗೆ ಮನುಷ್ಯನು ಹುಟ್ಟಿ ದರೂ ವ್ಯರ್ಥ ಮನುಷ್ಯನು ಜ್ಞಾನಿಯಾಗಿರುವನು.
- 13ನೀನು ನಿನ್ನ ಹೃದಯವನ್ನು ಸಿದ್ಧಮಾಡಿ ನಿನ್ನ ಕೈಗಳನ್ನು ಆತನ ಕಡೆಗೆ ಚಾಚಿದರೆ,
- 14ನಿನ್ನ ಕೈಯಲ್ಲಿರುವ ಅಪರಾಧವನ್ನು ದೂರಮಾಡಿ ದುಷ್ಟತನವನ್ನು ನಿನ್ನ ಗುಡಾರಗಳಲ್ಲಿ ವಾಸಮಾಡಗೊಡಿಸದಿದ್ದರೆ
Cross references
- Job 39:5–8 ಯೋಬನು 39:5–8ಕಾಡುಕತ್ತೆಯನ್ನು ಬಿಡುಗಡೆ ಮಾಡಿ ಕಳುಹಿಸಿದ ವನಾರು? ಕಾಡುಕತ್ತೆಯ ಸಂಕೋಲೆಗಳನ್ನು ಬಿಡಿಸಿದ ವನಾರು? ಅರಣ್ಯವನ್ನು ಅದರ ಮನೆಯಾಗಿಯೂ ಉಪ್ಪಿನ ಬೈಲನ್ನು ಅದರ ವಾಸಸ್ಥಳವಾಗಿಯೂ ನೇಮಿಸಿ ದ್ದೇನಲ್ಲಾ. ಪಟ್ಟಣದ ಸಮೂಹಕ್ಕೆ ಗೇಲಿ ಮಾಡುತ್ತದೆ. ಓಡಿಸುವವನ ಕೂಗನ್ನು ಲಕ್ಷಿಸುವದಿಲ್ಲ. ಪರ್ವತ ಗಳಲ್ಲಿ ಕಂಡದ್ದೆಲ್ಲಾ ಅದರ ಮೇವು; ಹಸುರಾದದ್ದನ್ನೆಲ್ಲಾ ಹುಡುಕುತ್ತದೆ.
- James 2:20 ಯಾಕೋಬನು 2:20ಆದರೆ ಓ ವ್ಯರ್ಥವಾದವನೇ, ಕ್ರಿಯೆಗಳಿಲ್ಲದ ನಂಬಿಕೆಯು ಸತ್ತದ್ದೆಂದು ತಿಳಿದುಕೊಳ್ಳಲು ನಿನಗೆ ಇಷ್ಟವಿದೆಯೋ?
- Psalm 73:22 ಕೀರ್ತನೆಗಳು 73:22ಆಗ ನಾನು ಮೂರ್ಖನಾಗಿ ಏನೂ ತಿಳಿಯದೆ ನಿನ್ನ ಮುಂದೆ ಪಶು ವಿನಂತೆ ಇದ್ದೆನು.
- Ecclesiastes 3:18 ಪ್ರಸಂಗಿ 3:18ಮನುಷ್ಯ ಪುತ್ರರ ಸ್ಥಿತಿಯ ವಿಷ ಯವಾಗಿ ದೇವರು ಅವರನ್ನು ಪ್ರತ್ಯಕ್ಷಪಡಿಸುವನೆಂದೂ ಅವರು ತಾವೇ ಮೃಗಗಳೆಂದು ತಾವು ಕಂಡುಕೊಳ್ಳ ಬೇಕೆಂದು ನನ್ನ ಹೃದಯದಲ್ಲಿ ಅಂದುಕೊಂಡೆನು.
- Jeremiah 2:24 ಯೆರೆಮೀಯ 2:24ಅರಣ್ಯದ ಅಭ್ಯಾಸ ವುಳ್ಳ ಕಾಡುಕತ್ತೆಯೇ; ಅವಳ ಅತ್ಯಾಶೆಯಲ್ಲಿ ಗಾಳಿ ಯನ್ನು ಹೀರಿಕೊಳ್ಳುತ್ತಾಳೆ; ಅವಳ ಮದವನ್ನು ಯಾರು ತಡೆಯುವರು? ಅವಳನ್ನು ಹುಡುಕುವವ ರೆಲ್ಲರೂ ಆಯಾಸಪಡುವದಿಲ್ಲ; ಅವಳ ತಿಂಗಳಲ್ಲಿ ಅವಳನ್ನು ಕಾಣುವರು.
- James 3:13–17 ಯಾಕೋಬನು 3:13–17ನಿಮ್ಮಲ್ಲಿ ಜ್ಞಾನಿಯೂ ಬುದ್ಧಿವಂತನೂ ಯಾರು? ಅಂಥವನು ಯೋಗ್ಯವಾಗಿ ನಡೆದುಕೊಂಡು ಜ್ಞಾನದ ಸಾತ್ವಿಕತ್ವದಲ್ಲಿ ತನ್ನ ಕ್ರಿಯೆಗಳನ್ನು ತೋರಿಸಲಿ. ಆದರೆ ಕಹಿಯಾದ ಹಗೆತನ ಮತ್ತು ಜಗಳ ನಿಮ್ಮ ಹೃದಯ ಗಳೊಳಗೆ ಇರುವಲ್ಲಿ ನೀವು ಸತ್ಯಕ್ಕೆ ವಿರೋಧವಾಗಿ ಸುಳ್ಳಾಡಿ ಹೊಗಳಿಕೊಳ್ಳಬೇಡಿರಿ. ಅದು ಮೇಲಣಿಂದ ಬಂದ ಜ್ಞಾನವಲ್ಲ; ಅದು ಭೂಸಂಬಂಧ ವಾದದ್ದು, ಪ್ರಾಕೃತಭಾವವಾದದ್ದು, ದೆವ್ವಗಳಿಗೆ ಸಂಬಂಧಪಟ್ಟದ್ದು. ಹೊಟ್ಟೇಕಿಚ್ಚೂ ಜಗಳವೂ ಇರುವ ಕಡೆ ಗಲಿಬಿಲಿಯೂ ಸಕಲವಿಧವಾದ ಕೆಟ್ಟ ಕೃತ್ಯವೂ ಇರುವವು. ಆದರೆ ಮೇಲಣಿಂದ ಬರುವ ಜ್ಞಾನವು ಮೊದಲು ನಿರ್ಮಲವಾದದ್ದು, ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸುಲಭವಾಗಿ ಒಪ್ಪಿಕೊಳ್ಳುವಂಥದು, ಕರುಣೆಯಿಂದಲೂ ಒಳ್ಳೇ ಫಲಗಳಿಂದಲೂ ತುಂಬಿರುವಂಥದ್ದು ಆಗಿದೆ; ಅದರಲ್ಲಿ ಪಕ್ಷಪಾತವೂ ಕಪಟವೂ ಇಲ್ಲ.ಸಮಾಧಾನ ಪಡಿಸುವವರಿಗೆ ಸಮಾಧಾನದಲ್ಲಿ ನೀತಿಯ ಫಲವು ಬಿತ್ತಲ್ಪಡುತ್ತದೆ.
- Psalm 92:6 ಕೀರ್ತನೆಗಳು 92:6ಇದನ್ನು ಪಶುಪ್ರಾಯದವನಾದ ಮೂರ್ಖನು ಅರಿಯನು. ಇಲ್ಲವೆ ಹುಚ್ಚನು ತಿಳಿಯನು.
- Job 6:5 ಯೋಬನು 6:5ಹುಲ್ಲು ಇದ್ದಲ್ಲಿ ಕಾಡು ಕತ್ತೆಯು ಕೂಗುವದೋ? ಇಲ್ಲವೆ ಮೇವು ಇದ್ದಲ್ಲಿ ಎತ್ತು ಅರಚುತ್ತದೋ?
- Psalm 62:9–10 ಕೀರ್ತನೆಗಳು 62:9–10ನಿಶ್ಚಯವಾಗಿ ಅಲ್ಪರು ವ್ಯರ್ಥರೇ, ಘನವಂತರು ಸುಳ್ಳೇ; ಅವರೆಲ್ಲರನ್ನು ತ್ರಾಸಿನಲ್ಲಿ ತೂಗಿದರೆ ಧೂಳಿ ಗಿಂತಲೂ ಲಘುವಾಗಿದ್ದಾರೆ. ಅನ್ಯಾಯದಲ್ಲಿ ಭರ ವಸವಿಡಬೇಡಿರಿ; ಸುಲಿಗೆಯಲ್ಲಿ ವ್ಯರ್ಥರಾಗಬೇಡಿರಿ; ಆಸ್ತಿಯು ಹೆಚ್ಚಿದರೆ ಅದರ ಮೇಲೆ ಮನಸ್ಸಿಡಬೇಡಿರಿ.
- Proverbs 30:2–4 ಜ್ಞಾನೋಕ್ತಿಗಳು 30:2–4ಖಂಡಿತವಾಗಿಯೂ ಪ್ರತಿಯೊಬ್ಬ ಮನುಷ್ಯನಿಗಿಂತ ನಾನು ಪಶುಪ್ರಾಯನು; ಮನುಷ್ಯನ ವಿವೇಕವು ನನಗೆ ಇಲ್ಲ. ನಾನು ಜ್ಞಾನವನ್ನು ಪಡೆದುಕೊಂಡಿಲ್ಲ; ಅಲ್ಲದೆ ಪರಿಶುದ್ಧನ ವಿಷಯವಾದ ತಿಳುವಳಿಕೆಯು ನನಗಿಲ್ಲ. ಆಕಾಶಕ್ಕೆ ಏರಿದವನು ಇಲ್ಲವೆ ಇಳಿದವನು ಯಾರು? ತನ್ನ ಮುಷ್ಟಿಗಳಲ್ಲಿ ಗಾಳಿಯನ್ನು ಕೂಡಿಸಿದವನಾರು? ವಸ್ತ್ರದಲ್ಲಿ ನೀರನ್ನು ಕಟ್ಟಿದವ ನಾರು? ಭೂಮಿಯ ಕೊನೆಗಳನ್ನೆಲ್ಲಾ ಸ್ಥಾಪಿಸಿದವ ನಾರು? ನೀನು ಹೇಳುವದಾದರೆ ಆತನ ಹೆಸರೇನು? ಆತನ ಮಗನ ಹೆಸರೇನು?
- Ephesians 2:3 ಎಫೆಸದವರಿಗೆ 2:3ನಾವೆಲ್ಲರೂ ಪೂರ್ವದಲ್ಲಿ ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಛೆಗಳನ್ನು ನೆರವೇರಿಸುತ್ತಾ ನಡೆದು ಮಿಕ್ಕಾದವರಂತೆ ಸ್ವಭಾವ ಸಿದ್ಧವಾಗಿ ದೇವರ ಕೋಪದ ಮಕ್ಕಳಾಗಿದ್ದೆವು.
- Job 12:2–3 ಯೋಬನು 12:2–3ನಿಸ್ಸಂದೇಹವಾಗಿ ನೀವೇ ಆ ಜನರು; ನಿಮ್ಮ ಸಂಗಡಲೇ ಜ್ಞಾನವು ಸಾಯುವದು. ನಿಮ್ಮ ಹಾಗೆಯೇ ನನಗೂ ಸಹ ತಿಳುವಳಿಕೆ ಉಂಟು; ನಾನು ನಿಮಗಿಂತ ಕಡಿಮೆ ಇಲ್ಲ. ಹೌದು, ಇಂಥಾ ಮಾತುಗಳನ್ನು ತಿಳಿಯದಿರುವವನು ಯಾರು?