Job · chapter 11 · verse 17
Job 11:17 in Kannada
ಮಧ್ಯಾಹ್ನಕ್ಕಿಂತ ನಿನ್ನ ಪ್ರಾಯವು ಸ್ಪಷ್ಟವಾಗಿರುವದು; ನೀನು ಪ್ರಕಾಶಿ ಸುವವನಾಗಿ ಪ್ರಾತಃಕಾಲದ ಹಾಗೆಯೇ ಇರುವಿ.
Madhyaahnakkinta ninna praayavu spashtavaagiruvadu; neenu prakaashi suvavanaagi praatahkaalada haageye iruvi.
Job 11:17 in English
- King James Version (KJV)
- And [thine] age shall be clearer than the noonday; thou shalt shine forth, thou shalt be as the morning.
- World English Bible (WEB)
- Life will be clearer than the noonday. Though there is darkness, it will be as the morning.
- American Standard Version (ASV)
- And [thy] life shall be clearer than the noonday; Though there be darkness, it shall be as the morning.
- Bible in Basic English (BBE)
- And your life will be brighter than day; though it is dark, it will become like the morning.
- Darby Translation (DBY)
- And life shall arise brighter than noonday; though thou be enshrouded in darkness, thou shalt be as the morning,
- Webster's Bible (WBS)
- And [thy] age shall be clearer than the noon-day: thou shalt shine forth, thou shalt be as the morning.
- Young's Literal Translation (YLT)
- And above the noon doth age rise, Thou fliest — as the morning thou art.
Read in context
- 15ನಿನ್ನ ಮುಖವನ್ನು ದೋಷವಿಲ್ಲದೆ ಎತ್ತುವಿ; ಹೌದು, ಸ್ಥಿರ ವಾಗಿದ್ದು ಹೆದರದೆ ಇರುವಿ.
- 16ನೀನು ಕಷ್ಟವನ್ನು ಮರೆತುಬಿಡುವಿ. ಹರಿದು ಹೋದ ನೀರಿನ ಹಾಗೆ ಅದನ್ನು ಜ್ಞಾಪಕಮಾಡಿಕೊಳ್ಳುವಿ.
- 17ಮಧ್ಯಾಹ್ನಕ್ಕಿಂತ ನಿನ್ನ ಪ್ರಾಯವು ಸ್ಪಷ್ಟವಾಗಿರುವದು; ನೀನು ಪ್ರಕಾಶಿ ಸುವವನಾಗಿ ಪ್ರಾತಃಕಾಲದ ಹಾಗೆಯೇ ಇರುವಿ.
- 18ನಿರೀಕ್ಷೆ ಇದೆ ಎಂದು ಭರವಸದಿಂದಿರುವಿ; ಹೌದು, ನೀನು ನಿನ್ನ ಸುತ್ತಲೂ ಅಗೆದು ಭರವಸದಿಂದ ವಿಶ್ರಾಂತಿ ತಕ್ಕೊಳ್ಳುವಿ.
- 19ನೀನು ಮಲಗಿಕೊಂಡಾಗ ಯಾರೂ ನಿನ್ನನ್ನು ಹೆದರಿಸರು; ಹೌದು, ಅನೇಕರು ನಿನಗೆ ವ್ಯಾಜ್ಯವನ್ನು ಒಪ್ಪಿಸುವರು.ಆದರೆ ದುಷ್ಟರ ಕಣ್ಣುಗಳು ಕುಂದುವವು; ಅವರು ತಪ್ಪಿಸಿಕೊಳ್ಳುವದಿಲ್ಲ. ಅವರ ಪ್ರಾಣದ ಕೊನೆಯ ಉಸಿರೇ ಅವರ ನಿರೀಕ್ಷೆಯಾಗಿದೆ.
Cross references
- Isaiah 58:8–10 ಯೆಶಾಯ 58:8–10ಹೀಗಾದರೆ ನಿನ್ನ ಬೆಳಕು ಉದಯದಂತೆ ಪ್ರತ್ಯಕ್ಷವಾಗುವದು. ನಿನ್ನ ಕ್ಷೇಮವು ಬೇಗನೆ ಚಿಗುರು ವದು. ನಿನ್ನ ನೀತಿಯು ನಿನಗೆ ಮುಂಬಲವಾಗಿ ಮುಂದ ರಿಯುವದು. ಕರ್ತನ ಮಹಿಮೆಯು ನಿನಗೆ ಹಿಂಬಲ ವಾಗಿರುವದು. ಆಗ ನೀನು ಕರೆದರೆ ಕರ್ತನು ಉತ್ತರ ಕೊಡುವನು; ನೀನು ಕೂಗುವಿ ಆಗ ಆತನು--ನಾನು ಇಲ್ಲಿ ಇದ್ದೇನೆ ಅನ್ನುವನು. ನೀನು ನಿನ್ನ ಮಧ್ಯದೊಳ ಗಿಂದ ನೊಗವನ್ನೂ ಬೆರಳ ಸನ್ನೆಯನ್ನೂ ವ್ಯರ್ಥವಾದ ಸಂಭಾಷಣೆಯನ್ನೂ ತೆಗೆದುಹಾಕಿ, ಹಸಿದವನ ಕಡೆಗೆ ನಿನ್ನ ಮನಸ್ಸು ಹೋಗುವಂತೆ ಮಾಡಿ, ಕುಂದಿ ಹೋದವನ ಪ್ರಾಣವನ್ನು ತೃಪ್ತಿಪಡಿಸಿದರೆ ಆಗ ನಿನ್ನ ಬೆಳಕು ಕತ್ತಲೆಯಲ್ಲಿ ಉದಯಿಸುವದು. ನಿನ್ನ ಅಂಧ ಕಾರವು ಮಧ್ಯಾಹ್ನದ ಹಾಗೆ ಇರುವದು.
- Psalm 37:6 ಕೀರ್ತನೆಗಳು 37:6ನಿನ್ನ ನೀತಿಯನ್ನು ಬೆಳಕಿನ ಹಾಗೆಯೂ ನಿನ್ನ ನ್ಯಾಯಗಳನ್ನು ಮಧ್ಯಾಹ್ನದ ಹಾಗೆಯೂ ಆತನು ಹೊರಗೆ ಬರ ಮಾಡುವನು.
- Proverbs 4:18 ಜ್ಞಾನೋಕ್ತಿಗಳು 4:18ಆದರೆ ಸಂಪೂರ್ಣವಾದ ದಿನಕ್ಕೆ ಹೆಚ್ಚೆಚ್ಚಾಗಿ ಹೊಳೆಯುವ ದೀಪದಂತೆ ನ್ಯಾಯವಂತರ ದಾರಿಯು ಹೊಳೆಯುವದು.
- Zechariah 14:6–7 ಜೆಕರ್ಯ 14:6–7ಆ ದಿನದಲ್ಲಿ ಆಗುವದೇ ನಂದರೆ--ಬೆಳಕು ಇಲ್ಲವೆ ಕತ್ತಲೆಯು ಸ್ಪಷ್ಟವಾಗಿರದು. ಆದರೆ ಕರ್ತನಿಗೆ ತಿಳಿದಿರುವ ಒಂದು ದಿನ ಇರುವದು, ಅದು ಹಗಲೂ ಅಲ್ಲ, ರಾತ್ರಿಯೂ ಅಲ್ಲ; ಆದರೆ ಸಾಯಂಕಾಲದ ಸಮಯದಲ್ಲಿ ಬೆಳಕು ಇರುವದು.
- Hosea 6:3 ಹೋಶೇಯ 6:3ನಾವು ಕರ್ತನನ್ನು ತಿಳಿದುಕೊಳ್ಳಲು ಆತನನ್ನು ಹಿಂಬಾ ಲಿಸಿದರೆ ನಾವು ತಿಳಿದುಕೊಳ್ಳುವೆವು; ಅರುಣೋದ ಯದ ಹಾಗೆ ಆತನ ಹೊರಡೋಣವು ಸಿದ್ಧವಾಗಿದೆ; ಆತನು ಮಳೆಯಂತೆಯೂ ಮುಂಗಾರಿನಂತೆಯೂ ಭೂಮಿಗೆ ತಂಪುಮಾಡುವ ಹಿಂಗಾರಿನಂತೆಯೂ ನಮ್ಮ ಬಳಿಗೆ ಬರುವನು.
- Micah 7:8–9 ಮೀಕ 7:8–9ನನ್ನ ಶತ್ರುವೇ, ನನ್ನ ಮೇಲೆ ಸಂತೋಷಪಡಬೇಡ; ನಾನು ಬಿದ್ದಿದ್ದರೂ ತಿರುಗಿ ಏಳುವೆನು; ಕತ್ತಲೆಯಲ್ಲಿ ಕೂತುಕೊಂಡರೂ ನನಗೆ ಬೆಳಕು ಕರ್ತನೇ. ನಾನು ಕರ್ತನಿಗೆ ವಿರೋಧ ವಾಗಿ ಪಾಪ ಮಾಡಿದ್ದರಿಂದ ಆತನು ತನ್ನ ವ್ಯಾಜ್ಯವಾಡಿ ನನ್ನ ನ್ಯಾಯವನ್ನು ನಡಿಸುವ ತನಕ ಆತನ ಕೋಪವನ್ನು ತಾಳುವೆನು; ಆತನು ನನ್ನನ್ನು ಬೆಳಕಿಗೆ ತರುವನು, ಆತನ ನೀತಿಯನ್ನು ನೋಡುವೆನು.
- Psalm 112:4 ಕೀರ್ತನೆಗಳು 112:4ಯಥಾರ್ಥರಿಗೆ ಕತ್ತಲಲ್ಲಿ ಬೆಳಕು ಹುಟ್ಟುತ್ತದೆ; ಆತನು ಕೃಪೆಯೂ ಅಂತಃಕರಣವೂ ನೀತಿ ಯೂ ಉಳ್ಳಾತನೇ.
- 1 Chronicles 29:10 1 ಪೂರ್ವಕಾಲವೃತ್ತಾಂತ 29:10ಆಗ ದಾವೀದನು ಸಮಸ್ತ ಕೂಟದ ಮುಂದೆ ಕರ್ತನನ್ನು ಕೊಂಡಾಡಿ ಹೇಳಿದ್ದೇನಂದರೆ -- ನಮ್ಮ ತಂದೆ ಯಾದ ಇಸ್ರಾಯೇಲಿನ ದೇವರಾದ ಕರ್ತನೇ, ನೀನು ಯುಗಯುಗಾಂತರಗಳಿಂದ ಯುಗಯುಗಾಂತರ ಗಳಿಗೂ ಸ್ತುತಿಸಲ್ಪಡುವವನಾಗಿದ್ದೀ.
- Job 42:11–17 ಯೋಬನು 42:11–17ಆಗ ಅವನ ಸಹೋದರರೆಲ್ಲರೂ ಅವನ ಸಹೋದರಿಯರೆಲ್ಲರೂ ಮುಂಚಿನ ಅವನ ಪರಿಚಿತಿಯವರೆಲ್ಲರೂ ಅವನ ಬಳಿಗೆ ಬಂದು ಅವನ ಸಂಗಡ ಅವನ ಮನೆಯಲ್ಲಿ ರೊಟ್ಟಿ ತಿಂದು, ಕರ್ತನು ಅವನ ಮೇಲೆ ಬರಮಾಡಿದ ಎಲ್ಲಾ ಕೇಡಿಗೋಸ್ಕರ ಅವನ ಸಂಗಡ ದುಃಖಪಟ್ಟು ಅವನನ್ನು ಸಂತೈಸಿದರು. ಅವರು ಅವನಿಗೆ ಪ್ರತಿ ಮನುಷ್ಯನು ಒಂದು ಹಣವನ್ನೂ ಬಂಗಾರದ ಒಂದು ಉಂಗುರವನ್ನೂ ಕೊಟ್ಟರು. ಇದಲ್ಲದೆ ಕರ್ತನು ಯೋಬನ ಆರಂಭಕ್ಕಿಂತ ಅವನ ಅಂತ್ಯವನ್ನು ಆಶೀರ್ವದಿಸಿದನು. ಅವನಿಗೆ ಹದಿನಾಲ್ಕು ಸಾವಿರ ಕುರಿಗಳೂ ಆರು ಸಾವಿರ ಒಂಟೆಗಳೂ ಸಾವಿರ ಜೋಡಿ ಎತ್ತುಗಳೂ ಸಾವಿರ ಹೆಣ್ಣು ಕತ್ತೆಗಳೂ ಇದ್ದವು. ಅವನಿಗೆ ಏಳು ಕುಮಾರರೂ ಮೂರು ಕುಮಾರ್ತೆ ಯರೂ ಇದ್ದರು. ಅವನು ಮೊದಲನೆಯವಳಿಗೆ ಯೆವಿಾಮಳೆಂದೂ ಎರಡನೆಯವಳಿಗೆ ಕೆಚೀಯ ಳೆಂದೂ ಮೂರನೆಯವಳಿಗೆ ಕರನ್ಹಪ್ಪ್ಪೂಕೆಂದೂ ಹೆಸ ರಿಟ್ಟನು. ಯೋಬನ ಕುಮಾರ್ತೆಯರ ಹಾಗೆ ಸೌಂದರ್ಯವತಿಯರಾದ ಸ್ತ್ರೀಯರು ದೇಶದಲ್ಲೆಲ್ಲಾ ಕಾಣಲಿಲ್ಲ; ಅವರ ತಂದೆ ಅವರ ಸಹೋದರರ ಮಧ್ಯದಲ್ಲಿ ಅವರಿಗೆ ಬಾಧ್ಯತೆಯನ್ನು ಕೊಟ್ಟನು. ತರುವಾಯ ಯೋಬನು ನೂರ ನಾಲ್ವತ್ತು ವರುಷ ಬದುಕಿ ಮಕ್ಕಳನ್ನೂ ಮಕ್ಕಳ ಮಕ್ಕಳನ್ನೂ ನಾಲ್ಕನೇ ತಲಾಂತರದ ವರೆಗೆ ನೋಡಿದನು.ಯೋಬನು ಮುದುಕನಾಗಿಯೂ ದಿನ ತುಂಬಿದವನಾಗಿಯೂ ಸತ್ತನು. ಯೋಬನು ಮುದುಕನಾಗಿಯೂ ದಿನ ತುಂಬಿದವನಾಗಿಯೂ ಸತ್ತನು.
- Malachi 4:2 ಮಲಾಕಿಯ 4:2ಆದರೆ ನನ್ನ ಹೆಸರಿಗೆ ಭಯಪಡುವವರಾದ ನಿಮಗೆ ನೀತಿಯ ಸೂರ್ಯನು ತನ್ನ ರೆಕ್ಕೆಗಳಲ್ಲಿ ಸ್ವಸ್ಥತೆಯನ್ನುಂಟು ಮಾಡುವವನಾಗಿ ಉದಯಿಸುವನು; ನೀವು ಹೊರಟು ಕೊಟ್ಟಿಗೆಯಿಂದ ಬಿಟ್ಟ ಕರುಗಳ ಹಾಗೆ ಕುಣಿದಾಡುವಿರಿ.
- Psalm 92:14 ಕೀರ್ತನೆಗಳು 92:14ಮುದಿ ಪ್ರಾಯದಲ್ಲಿಯೂ ಫಲ ಫಲಿಸುವರು. ಅವರು ಪುಷ್ಟಿಯಾಗಿ ವೃದ್ಧಿಯಾಗುವರು.ಕರ್ತನು ಯಥಾರ್ಥನೂ ನನ್ನ ಬಂಡೆಯೂ ಆಗಿದ್ದಾನೆ; ಆತನಲ್ಲಿ ಅನೀತಿ ಇರುವದಿಲ್ಲ.
- Luke 2:26–32 ಲೂಕನು 2:26–32ಕರ್ತನಾಗಿರುವ ಕ್ರಿಸ್ತನನ್ನು ಅವನು ನೋಡುವದಕ್ಕಿಂತ ಮುಂಚೆ ಮರಣ ಹೊಂದುವದಿಲ್ಲವೆಂದು ಪರಿಶುದ್ಧಾತ್ಮನಿಂದ ಅವನಿಗೆ ಪ್ರಕಟವಾಗಿತ್ತು. ಅವನು ಆತ್ಮನಿಂದ ದೇವಾಲಯದೊಳಗೆ ಬಂದನು; ಶಿಶುವಾದ ಯೇಸುವಿನ ತಂದೆತಾಯಿಗಳು ನ್ಯಾಯಪ್ರಮಾಣದ ಪದ್ಧತಿಯ ಪ್ರಕಾರ ಮಾಡುವದಕ್ಕಾಗಿ ಆತನನ್ನು ಒಳಗೆ ತಂದರು. ಆಗ ಅವನು (ಸಿಮೆಯೋನನು) ಆತನನ್ನು ತನ್ನ ಕೈಗಳಲ್ಲಿ ತಕ್ಕೊಂಡು ದೇವರನ್ನು ಕೊಂಡಾಡುತ್ತಾ-- ಕರ್ತನೇ, ಈಗ ನಿನ್ನ ಮಾತಿನ ಪ್ರಕಾರ ನಿನ್ನ ದಾಸನನ್ನು ಸಮಾಧಾನದಲ್ಲಿ ಹೋಗ ಮಾಡುತ್ತೀ; ಯಾಕಂದರೆ ನನ್ನ ಕಣ್ಣುಗಳು ನಿನ್ನ ರಕ್ಷಣೆಯನ್ನು ನೋಡಿದವು. ಅದನ್ನು (ಆ ರಕ್ಷಣೆಯನ್ನು) ನೀನು ಎಲ್ಲಾ ಜನರ ಮುಂದೆ ಸಿದ್ಧ ಪಡಿಸಿದ್ದೀ. ಅದು ಅನ್ಯಜನರನ್ನು ಬೆಳಗಿಸುವ ಬೆಳಕೂ ನಿನ್ನ ಪ್ರಜೆಯಾದ ಇಸ್ರಾಯೇಲ್ಯರ ಮಹಿ ಮೆಯೂ ಆಗಿದೆ ಅಂದನು.