Job · chapter 11 · verse 18
Job 11:18 in Kannada
ನಿರೀಕ್ಷೆ ಇದೆ ಎಂದು ಭರವಸದಿಂದಿರುವಿ; ಹೌದು, ನೀನು ನಿನ್ನ ಸುತ್ತಲೂ ಅಗೆದು ಭರವಸದಿಂದ ವಿಶ್ರಾಂತಿ ತಕ್ಕೊಳ್ಳುವಿ.
Nireekshe ide endu bharavasadindiruvi; haudu, neenu ninna suttaloo agedu bharavasadinda vishraanti takkolluvi.
Job 11:18 in English
- King James Version (KJV)
- And thou shalt be secure, because there is hope; yea, thou shalt dig [about thee, and] thou shalt take thy rest in safety.
- World English Bible (WEB)
- You will be secure, because there is hope. Yes, you will search, and will take your rest in safety.
- American Standard Version (ASV)
- And thou shalt be secure, because there is hope; Yea, thou shalt search [about thee], and shalt take thy rest in safety.
- Bible in Basic English (BBE)
- And you will be safe because there is hope; after looking round, you will take your rest in quiet;
- Darby Translation (DBY)
- And thou shalt have confidence, because there shall be hope; and having searched about [thee], thou shalt take rest in safety.
- Webster's Bible (WBS)
- And thou shalt be secure, because there is hope; yes, thou shalt dig [about thee] , [and] thou shalt take thy rest in safety.
- Young's Literal Translation (YLT)
- And thou hast trusted because their is hope, And searched — in confidence thou liest down,
Read in context
- 16ನೀನು ಕಷ್ಟವನ್ನು ಮರೆತುಬಿಡುವಿ. ಹರಿದು ಹೋದ ನೀರಿನ ಹಾಗೆ ಅದನ್ನು ಜ್ಞಾಪಕಮಾಡಿಕೊಳ್ಳುವಿ.
- 17ಮಧ್ಯಾಹ್ನಕ್ಕಿಂತ ನಿನ್ನ ಪ್ರಾಯವು ಸ್ಪಷ್ಟವಾಗಿರುವದು; ನೀನು ಪ್ರಕಾಶಿ ಸುವವನಾಗಿ ಪ್ರಾತಃಕಾಲದ ಹಾಗೆಯೇ ಇರುವಿ.
- 18ನಿರೀಕ್ಷೆ ಇದೆ ಎಂದು ಭರವಸದಿಂದಿರುವಿ; ಹೌದು, ನೀನು ನಿನ್ನ ಸುತ್ತಲೂ ಅಗೆದು ಭರವಸದಿಂದ ವಿಶ್ರಾಂತಿ ತಕ್ಕೊಳ್ಳುವಿ.
- 19ನೀನು ಮಲಗಿಕೊಂಡಾಗ ಯಾರೂ ನಿನ್ನನ್ನು ಹೆದರಿಸರು; ಹೌದು, ಅನೇಕರು ನಿನಗೆ ವ್ಯಾಜ್ಯವನ್ನು ಒಪ್ಪಿಸುವರು.ಆದರೆ ದುಷ್ಟರ ಕಣ್ಣುಗಳು ಕುಂದುವವು; ಅವರು ತಪ್ಪಿಸಿಕೊಳ್ಳುವದಿಲ್ಲ. ಅವರ ಪ್ರಾಣದ ಕೊನೆಯ ಉಸಿರೇ ಅವರ ನಿರೀಕ್ಷೆಯಾಗಿದೆ.
- 20ಆದರೆ ದುಷ್ಟರ ಕಣ್ಣುಗಳು ಕುಂದುವವು; ಅವರು ತಪ್ಪಿಸಿಕೊಳ್ಳುವದಿಲ್ಲ. ಅವರ ಪ್ರಾಣದ ಕೊನೆಯ ಉಸಿರೇ ಅವರ ನಿರೀಕ್ಷೆಯಾಗಿದೆ.
Cross references
- Proverbs 3:24–26 ಜ್ಞಾನೋಕ್ತಿಗಳು 3:24–26ನೀನು ಮಲಗುವಾಗ ನಿನಗೆ ಹೆದರಿಕೆ ಇರುವದಿಲ್ಲ, ಹೌದು, ನೀನು ಮಲಗಿಕೊಳ್ಳುವಿ. ನಿನ್ನ ನಿದ್ರೆಯು ಸುಖವಾಗಿರುವದು. ಆಕಸ್ಮತ್ತಾದ ಭಯ ಕ್ಕಾಗಲಿ ಇಲ್ಲವೆ ಅವರ ಮೇಲೆ ಬರುವ ದುಷ್ಟರ ನಾಶನಕ್ಕಾಗಲಿ ನೀನು ಭಯಪಡದಿರು. ಕರ್ತನೇ ನಿನಗೆ ಭರವಸನಾಗಿದ್ದು ನಿನ್ನ ಪಾದವು ತೆಗೆಯಲ್ಪಡ ದಂತೆ ಆತನು ಕಾಪಾಡುವನು.
- Psalm 43:5 ಕೀರ್ತನೆಗಳು 43:5ಓ ನನ್ನ ಪ್ರಾಣವೇ, ಕುಗ್ಗಿಹೋಗಿರುವದೇನು? ಯಾಕೆ ನನ್ನಲ್ಲಿ ವ್ಯಾಕುಲಪಡುತ್ತೀ? ದೇವರನ್ನು ನಿರೀಕ್ಷಿಸು. ನನ್ನ ಮುಖದ ಲಕ್ಷಣವೂ ನನ್ನ ದೇವರೂ ಆಗಿರುವಾತನನ್ನು ಇನ್ನೂ ಕೊಂಡಾಡುವೆನು.
- Psalm 3:5 ಕೀರ್ತನೆಗಳು 3:5ಕರ್ತನೇ ನನ್ನನ್ನು ಕಾಪಾಡಿದ್ದರಿಂದ ನಾನು ಮಲಗಿ ನಿದ್ದೆಗೈದು ಎಚ್ಚತ್ತೆನು.
- Psalm 4:8 ಕೀರ್ತನೆಗಳು 4:8ಸಮಾಧಾನವಾಗಿ ಮಲಗಿ ನಿದ್ರೆ ಸಹ ಮಾಡುವೆನು; ಯಾಕಂದರೆ ಕರ್ತನೇ, ನೀನೋಬ್ಬನೇ ನನ್ನನ್ನು ಸುರ ಕ್ಷಿತವಾಗಿ ವಾಸಿಸುವಂತೆ ಮಾಡುತ್ತೀ.
- Leviticus 26:5–6 ಯಾಜಕಕಾಂಡ 26:5–6ಕಣ ತುಳಿಸುವ ಕೆಲಸವು ದ್ರಾಕ್ಷೇ ಬೆಳೆಯ ವರೆಗೂ ದ್ರಾಕ್ಷೇ ಬೆಳೆಯನ್ನು ಕೂಡಿಸುವ ಕೆಲಸವು ಬಿತ್ತನೆಯ ಕಾಲದ ವರೆಗೂ ನಡೆಯುವವು. ನೀವು ನಿಮ್ಮ ರೊಟ್ಟಿ ಯನ್ನು ತಿಂದು ತೃಪ್ತಿಹೊಂದಿ ಸುರಕ್ಷಿತವಾಗಿ ನಿಮ್ಮ ದೇಶದಲ್ಲಿ ವಾಸಮಾಡುವಿರಿ. ನಾನು ದೇಶದಲ್ಲಿ ಸಮಾಧಾನವನ್ನು ಕೊಡುವೆನು. ಯಾರ ಭಯವೂ ಇಲ್ಲದೆ ನೀವು ಮಲಗಿಕೊಳ್ಳುವಿರಿ; ದೇಶದಲ್ಲಿ ದುಷ್ಟ ಮೃಗಗಳು ಇಲ್ಲದಂತೆ ಮಾಡುವೆನು. ಇಲ್ಲವೆ ಕತ್ತಿ ನಿಮ್ಮ ದೇಶದಲ್ಲಿ ಹಾದುಹೋಗುವದಿಲ್ಲ.
- Romans 5:3–5 ರೋಮಾಪುರದವರಿಗೆ 5:3–5ಇದು ಮಾತ್ರವಲ್ಲದೆ ನಮಗೆ ಉಂಟಾಗುವ ಉಪದ್ರವ ಗಳಲ್ಲಿಯೂ ಹೆಚ್ಚಳ ಪಡುತ್ತೇವೆ; ಉಪದ್ರವದಿಂದ ತಾಳ್ಮೆಯೂ ತಾಳ್ಮೆಯಿಂದ ಅನುಭವವೂ ಅನುಭವ ದಿಂದ ನಿರೀಕ್ಷೆಯೂ ಉಂಟಾಗುತ್ತವೆಂದು ಬಲ್ಲೆವು. ಈ ನಿರೀಕ್ಷೆಯು ನಾಚಿಕೆಪಡಿಸುವದಿಲ್ಲ; ನಮಗೆ ಕೊಡಲ್ಪಟ್ಟಿರುವ ಪವಿತ್ರಾತ್ಮನ ಮೂಲಕವಾಗಿ ದೇವರ ಪ್ರೀತಿಯು ನಮ್ಮ ಹೃದಯಗಳಲ್ಲಿ ಧಾರಾಳವಾಗಿ ಸುರಿದದೆ.
- Job 7:6 ಯೋಬನು 7:6ನನ್ನ ದಿನಗಳು ಮಗ್ಗದ ಲಾಳಿಗಿಂತ ತ್ವರೆಯಾಗಿವೆ; ನಿರೀಕ್ಷೆ ಇಲ್ಲದೆ ಅವು ಮುಗಿಯುತ್ತವೆ.
- Proverbs 14:32 ಜ್ಞಾನೋಕ್ತಿಗಳು 14:32ದುಷ್ಟನು ತನ್ನ ದುಷ್ಟತನದಲ್ಲಿ ನೂಕ ಲ್ಪಡುತ್ತಾನೆ; ಮರಣದಲ್ಲಿ ನೀತಿವಂತನಿಗೆ ನಿರೀಕ್ಷೆ ಇದೆ.
- Job 22:27–29 ಯೋಬನು 22:27–29ನೀನು ಆತನಿಗೆ ವಿಜ್ಞಾಪನೆ ಮಾಡಲು ನಿನ್ನನ್ನು ಕೇಳುವನು; ನಿನ್ನ ಪ್ರಮಾಣಗಳನ್ನು ಸಲ್ಲಿಸುವಿ. ನೀನು ಏನಾದರೂ ನಿರ್ಣಯಿಸಿದರೆ ಅದು ನಿನಗೆ ಸ್ಥಿರವಾಗುವದು ಮತ್ತು ನಿನ್ನ ಮಾರ್ಗಗಳಲ್ಲಿ ಬೆಳಕು ಮೂಡುವದು. ಒಬ್ಬನು ತಗ್ಗುವಲ್ಲಿ ಎತ್ತುವದುಂಟು ಅನ್ನುವಿ; ದೀನ ನನ್ನು ಆತನು ರಕ್ಷಿಸುವನು.ಒಂಟಿಯಾದ ನಿರ ಪರಾಧಿಯನ್ನು ತಪ್ಪಿಸುವನು; ನಿನ್ನ ಕೈಗಳ ಶುದ್ಧತ್ವದಿಂದ ಅವನು ತಪ್ಪಿಸಿಕೊಳ್ಳುವನು.
- Job 6:11 ಯೋಬನು 6:11ನಾನು ನಿರೀಕ್ಷಿಸುವ ಹಾಗೆ ನನ್ನ ಶಕ್ತಿ ಏನು? ನಾನು ನನ್ನ ಆಯುಷ್ಯವನ್ನು ಹೆಚ್ಚಿಸುವ ಹಾಗೆ ನನ್ನ ಅಂತ್ಯವೇನು?
- Colossians 1:27 ಕೊಲೊಸ್ಸೆಯವರಿಗೆ 1:27ಅನ್ಯಜನಗಳಲ್ಲಿ ಈ ಮರ್ಮದ ಮಹಿಮಾತಿಶಯವು ಎಷ್ಟೆಂಬದನ್ನು ದೇವರು ತನ್ನ ಜನರಿಗೆ (ಪರಿಶುದ್ಧರಿಗೆ) ತಿಳಿಸುವದಕ್ಕೆ ಮನಸ್ಸು ಮಾಡಿ ಕೊಂಡನು. ಈ ಮರ್ಮವು ಏನೆಂದರೆ ನಿಮ್ಮಲ್ಲಿರುವ ಕ್ರಿಸ್ತನು ಮಹಿಮೆಯ ನಿರೀಕ್ಷೆಯಾಗಿದ್ದಾನೆ ಎಂಬದೇ.