Job · chapter 12 · verse 14
Job 12:14 in Kannada
ಇಗೋ, ಆತನು ಕೆಡವುತ್ತಾನೆ; ಅದು ತಿರುಗಿ ಕಟ್ಟಲ್ಪಡುವದಿಲ್ಲ. ಆತನು ಮನುಷ್ಯನಿಂದ ಮುಚ್ಚಿಬಿಡುತ್ತಾನೆ; ಅದು ತೆರೆ ಯಲ್ಪಡುವದಿಲ್ಲ.
Igo, aatanu kedavuttaane; adu tirugi kattalpaduvadilla. Aatanu manushyaninda muchchibiduttaane; adu tere yalpaduvadilla.
Job 12:14 in English
- King James Version (KJV)
- Behold, he breaketh down, and it cannot be built again: he shutteth up a man, and there can be no opening.
- World English Bible (WEB)
- Behold, he breaks down, and it can’t be built again. He imprisons a man, and there can be no release.
- American Standard Version (ASV)
- Behold, he breaketh down, and it cannot be built again; He shutteth up a man, and there can be no opening.
- Bible in Basic English (BBE)
- Truly, there is no building up of what is pulled down by him; when a man is shut up by him, no one may let him loose.
- Darby Translation (DBY)
- Behold, he breaketh down, and it is not built again; he shutteth up a man, and there is no opening.
- Webster's Bible (WBS)
- Behold, he breaketh down, and it cannot be built again: he shutteth up a man, and there can be no opening.
- Young's Literal Translation (YLT)
- Lo, He breaketh down, and it is not built up, He shutteth against a man, And it is not opened.
Read in context
- 12ಮುದುಕರಲ್ಲಿ ಜ್ಞಾನವೂ ದಿನಗಳುದ್ದಕ್ಕೂ ಗ್ರಹಿ ಕೆಯೂ ಇವೆ.
- 13ಜ್ಞಾನವೂ ಪರಾಕ್ರಮವೂ ಆತನಲ್ಲಿವೆ; ಆಲೋ ಚನೆಯೂ ಗ್ರಹಿಕೆಯೂ ಆತನವೇ.
- 14ಇಗೋ, ಆತನು ಕೆಡವುತ್ತಾನೆ; ಅದು ತಿರುಗಿ ಕಟ್ಟಲ್ಪಡುವದಿಲ್ಲ. ಆತನು ಮನುಷ್ಯನಿಂದ ಮುಚ್ಚಿಬಿಡುತ್ತಾನೆ; ಅದು ತೆರೆ ಯಲ್ಪಡುವದಿಲ್ಲ.
- 15ಇಗೋ, ಆತನು ಜಲಗಳನ್ನು ಬಿಗಿ ಹಿಡಿಯುತ್ತಾನೆ; ಅವು ಬತ್ತಿಹೋಗುತ್ತವೆ; ಆತನು ಅವುಗಳನ್ನು ಹೊರಗೆ ಕಳುಹಿಸಿದಾಗ ಅವು ಭೂಮಿ ಯನ್ನು ಬುಡಮೇಲು ಮಾಡುತ್ತವೆ.
- 16ಬಲವೂ ಸುಜ್ಞಾ ನವೂ ಆತನಲ್ಲಿವೆ; ಮೋಸಹೋಗುವವನೂ ಮೋಸ ಗೊಳಿಸುವವನೂ ಆತನವರೇ.
Cross references
- Isaiah 22:22 ಯೆಶಾಯ 22:22ದಾವೀದನ ಮನೆಯ ಬೀಗ ದ ಕೈಯನ್ನು ಅವನ ಹೆಗಲ ಮೇಲೆ ನಾನು ಹಾಕುವೆನು; ಅವನು ತೆರೆದರೆ ಯಾರು ಮುಚ್ಚರು ಮುಚ್ಚಿದರೆ ಯಾರು ತೆರೆಯರು.
- Revelation 3:7 ಪ್ರಕಟನೆ 3:7ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ: ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯು ವಾತನೂ ಯಾರು ತೆರೆಯದಂತೆ ಮುಚ್ಚುವಾತನೂ ಆಗಿರುವವನು ಹೇಳುವಂಥವುಗಳೇನಂದರೆ,
- Malachi 1:4 ಮಲಾಕಿಯ 1:4ಎದೋಮು--ನಾವು ಬಡಕಲಾದೆವು, ಆದರೆ ನಾವು ತಿರಿಗಿಕೊಂಡು ಹಾಳಾದ ಸ್ಥಳಗಳನ್ನು ಕಟ್ಟುವೆವೆಂದು ಹೇಳಿದರೂ ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಅವರು ಕಟ್ಟಬಹುದು, ಆದರೆ ನಾನು ಕೆಡವಿಬಿಡುವೆನು; ಅದಕ್ಕ ವರು--ದುಷ್ಟತನದ ಮೇರೆಯೂ ಕರ್ತನ ನಿತ್ಯ ಕೋಪದ ಜನಾಂಗವೆಂದೂ ಕರೆಯುವರು.
- Job 11:10 ಯೋಬನು 11:10ಆತನು ಅದನ್ನು ಕಡಿಯುವದಾದರೆ ಇಲ್ಲವೆ ಮುಚ್ಚುವದಾದರೆ ಅಥವಾ ಒಟ್ಟು ಗೂಡಿಸುವದಾದರೆ ಆತನನ್ನು ತಡೆಯುವವರು ಯಾರಿದ್ದಾರೆ?
- Job 16:11 ಯೋಬನು 16:11ದೇವರು ನನ್ನನ್ನು ಭಕ್ತಿಹೀನರಿಗೆ ಒಪ್ಪಿಸುತ್ತಾನೆ. ದುಷ್ಟರ ಕೈಗೆ ನನ್ನನ್ನು ಕೊಟ್ಟುಬಿಡುತ್ತಾನೆ.
- Job 37:7 ಯೋಬನು 37:7ಆತನ ಕೃತ್ಯವನ್ನು ಜನರೆಲ್ಲರು ತಿಳುಕೊಳ್ಳುವ ಹಾಗೆ ಎಲ್ಲಾ ಮನುಷ್ಯರ ಕೈಯನ್ನು ಮುದ್ರಿಸುತ್ತಾನೆ
- Job 19:10 ಯೋಬನು 19:10ಸುತ್ತಲೂ ನನ್ನನ್ನು ನಾಶ ಪಡಿಸಿದ್ದರಿಂದ ನಾನು ಹೋಗುತ್ತೇನೆ; ಮರವನ್ನು ಕೀಳುವ ಹಾಗೆ ನನ್ನ ನಿರೀಕ್ಷೆಯನ್ನು ಕಿತ್ತುಬಿಟ್ಟನು.
- 1 Samuel 17:46 1 ಸಮುವೇಲನು 17:46ಕರ್ತನು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವನು; ನಾನು ನಿನ್ನನ್ನು ಹೊಡೆದುಬಿಟ್ಟು ನಿನ್ನ ತಲೆಯನ್ನು ತೆಗೆದು ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಅಡವಿಯ ಮೃಗಗಳಿಗೂ ಆಹಾರವಾಗಿ ಕೊಡುವೆನು.
- 1 Samuel 26:8 1 ಸಮುವೇಲನು 26:8ಆಗ ಅಬೀಷೈಯು ದಾವೀ ದನಿಗೆ--ಈ ಹೊತ್ತು ದೇವರು ನಿನ್ನ ಶತ್ರುವನ್ನು ನಿನ್ನ ಕೈಯಲ್ಲಿ ಒಪ್ಪಿಸಿಕೊಟ್ಟಿದ್ದಾನೆ; ಈಗ ನಾನು ಅವನನ್ನು ಈಟಿಯಿಂದ ಒಂದೇ ಪೆಟ್ಟಿನಲ್ಲಿ ನೆಲಕ್ಕೆ ಹತ್ತುವಂತೆ ಹೊಡೆಯಲು ಅಪ್ಪಣೆ ಕೊಡಬೇಕು; ಎರಡು ಸಾರಿ ಹೊಡೆಯುವದಿಲ್ಲ ಅಂದನು.
- Job 9:12–13 ಯೋಬನು 9:12–13ಇಗೋ, ಆತನು ತೆಗೆದುಕೊಂಡು ಹೋಗುತ್ತಾನೆ. ಆತನಿಗೆ ಅಡ್ಡಿಮಾಡುವವರು ಯಾರು? ಆತನನ್ನು--ನೀನು ಏನು ಮಾಡುತ್ತೀ ಎಂದು ಕೇಳುವ ವರಾರು? ದೇವರು ತನ್ನ ಕೋಪವನ್ನು ಹಿಂತೆಗೆಯ ದಿದ್ದರೆ ಸೊಕ್ಕಿನ ಸಹಾಯಕರು ಆತನ ಕೆಳಗೆ ಬೊಗ್ಗಿ ಕೊಳ್ಳುತ್ತಾರೆ.
- Jeremiah 51:58 ಯೆರೆಮೀಯ 51:58ಸೈನ್ಯಗಳ ಕರ್ತನು ಹೀಗೆ ಹೇಳುತ್ತಾನೆ--ಬಾಬೆಲಿನ ಅಗಲವಾದ ಗೋಡೆಗಳು ಸಂಪೂರ್ಣವಾಗಿ ಕೆಡವಲ್ಪ ಡುವವು; ಅವಳ ಎತ್ತರವಾದ ಬಾಗಲುಗಳು ಬೆಂಕಿ ಯಿಂದ ಸುಡಲ್ಪಡುವವು; ಜನರು ವ್ಯರ್ಥಕ್ಕಾಗಿಯೂ ಪ್ರಜೆಗಳು ಬೆಂಕಿಗಾಗಿಯೂ ಕಷ್ಟಪಟ್ಟು ಆಯಾಸ ಪಡುವರು.
- Jeremiah 51:64 ಯೆರೆಮೀಯ 51:64ನಾನು ಅವಳ ಮೇಲೆ ತರುವ ಕೇಡಿನೊಳಗಿಂದ ಏಳದು, ಅವರು ಆಯಾಸ ಪಡುವರು. ಇಲ್ಲಿಯ ತನಕ ಯೆರೆವಿಾಯನ ವಾಕ್ಯಗಳು.