Job · chapter 13 · verse 4
Job 13:4 in Kannada
ಆದರೆ ನೀವು ಸುಳ್ಳನ್ನು ಕಲ್ಪಿಸುವವರು; ನೀವೆಲ್ಲರೂ ವ್ಯರ್ಥ ವೈದ್ಯರೇ.
Aadare neevu sullannu kalpisuvavaru; neevellaroo vyartha vaidyare.
Job 13:4 in English
- King James Version (KJV)
- But ye [are] forgers of lies, ye [are] all physicians of no value.
- World English Bible (WEB)
- But you are forgers of lies. You are all physicians of no value.
- American Standard Version (ASV)
- But ye are forgers of lies; Ye are all physicians of no value.
- Bible in Basic English (BBE)
- But you put a false face on things; all your attempts to put things right are of no value.
- Darby Translation (DBY)
- For ye indeed are forgers of lies, ye are all physicians of no value.
- Webster's Bible (WBS)
- But ye [are] forgers of lies, ye [are] all physicians of no value.
- Young's Literal Translation (YLT)
- And yet, ye [are] forgers of falsehood, Physicians of nought — all of you,
Read in context
- 2ನೀವು ತಿಳಿದುಕೊಳ್ಳುವ ಪ್ರಕಾರ ನಾನೂ ತಿಳಿದು ಕೊಂಡಿದ್ದೇನೆ; ನಾನು ನಿಮಗಿಂತ ಕಡಿಮೆಯಾದವನಲ್ಲ.
- 3ನಾನು ಸರ್ವಶಕ್ತನ ಸಂಗಡ ಖಂಡಿತವಾಗಿ ಮಾತ ನಾಡುವೆನು, ದೇವರ ಸಂಗಡ ವಾದಿಸಲು ನನಗೆ ಮನಸ್ಸುಂಟು.
- 4ಆದರೆ ನೀವು ಸುಳ್ಳನ್ನು ಕಲ್ಪಿಸುವವರು; ನೀವೆಲ್ಲರೂ ವ್ಯರ್ಥ ವೈದ್ಯರೇ.
- 5ನೀವು ಮೌನವಾಗಿಯೇ ಇದ್ದರೆ ಎಷ್ಟೋ ಒಳ್ಳೇದು! ಅದು ನಿಮಗೆ ಜ್ಞಾನವಾಗಿರತಕ್ಕದ್ದು.
- 6ನನ್ನ ವಾದವನ್ನು ಕೇಳಿಸಿಕೊಳ್ಳಿರಿ; ನನ್ನ ತುಟಿಗಳ ತರ್ಕಗಳನ್ನು ಆಲೈಸಿರಿ.
Cross references
- Psalm 119:69 ಕೀರ್ತನೆಗಳು 119:69ಅಹಂಕಾರಿ ಗಳು ನನಗೆ ವಿರೋಧವಾಗಿ ಸುಳ್ಳು ಕಲ್ಪಿಸಿದರು; ನಾನು ಪೂರ್ಣಹೃದಯದಿಂದ ನಿನ್ನ ಕಟ್ಟಳೆಗಳನ್ನು ಕೈಕೊಳ್ಳುವೆನು.
- Jeremiah 6:14 ಯೆರೆಮೀಯ 6:14ಸಮಾಧಾನ ವಿಲ್ಲದಿರುವಾಗ--ಸಮಾಧಾನ ಎಂದು ಹೇಳಿ ನನ್ನ ಜನರ ಕುಮಾರ್ತೆಯ ಗಾಯವನ್ನು ಹಗುರವಾಗಿ ಸ್ವಸ್ಥಮಾಡಿದ್ದಾರೆ.
- Mark 5:26 ಮಾರ್ಕನು 5:26ಅನೇಕ ವೈದ್ಯರಿಂದ ಬಹು ಕಷ್ಟಗಳನ್ನು ಅನುಭವಿಸಿ ತನಗಿದ್ದದ್ದನ್ನೆಲ್ಲಾ ವೆಚ್ಚ ಮಾಡಿದ್ದಾಗ್ಯೂ ರೋಗವು ಹೆಚ್ಚಾಯಿತೇ ಹೊರತು ಗುಣವಾಗಲಿಲ್ಲ.
- Jeremiah 8:22 ಯೆರೆಮೀಯ 8:22ಗಿಲ್ಯಾದಿನಲ್ಲಿ ಮುಲಾಮು ಇಲ್ಲವೋ? ಅಲ್ಲಿ ವೈದ್ಯನಿಲ್ಲವೋ? ಹಾಗಾದರೆ ನನ್ನ ಜನರ ಮಗಳಿಗೆ ಯಾಕೆ ಸ್ವಸ್ಥವಾಗಲಿಲ್ಲ?
- Jeremiah 23:32 ಯೆರೆಮೀಯ 23:32ಇಗೋ, ಸುಳ್ಳಿನ ಕನಸುಗಳನ್ನು ಪ್ರವಾದಿಸಿ; ತಮ್ಮ ಸುಳ್ಳುಗಳಿಂದಲೂ ನಿರರ್ಥಕವಾದ ವುಗಳಿಂದಲೂ ನನ್ನ ಜನರು ತಪ್ಪುವಂತೆ ಮಾಡುವವರಿಗೆ ವಿರೋಧವಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಅವರಿಗೆ ಅಪ್ಪಣೆಕೊಡಲಿಲ್ಲ; ಆದದರಿಂದ ಅವರು ಹೇಗೂ ಈ ಜನರಿಗೆ ಪ್ರಯೋಜನವಾಗಿರುವದೇ ಇಲ್ಲವೆಂದು ಕರ್ತನು ಅನ್ನುತ್ತಾನೆ.
- Job 16:2 ಯೋಬನು 16:2ಇವುಗಳ ಹಾಗೆ ಅನೇಕವಾದ ವುಗಳನ್ನು ಕೇಳಿದ್ದೇನೆ. ನೀವೆಲ್ಲರೂ ಕಾಟದ ಆದರಣೆ ಕೊಡುವವರೇ.
- Jeremiah 46:11 ಯೆರೆಮೀಯ 46:11ಐಗುಪ್ತದ ಮಗಳಾದ ಕನ್ಯಾಸ್ತ್ರೀಯೇ, ಗಿಲ್ಯಾದಿಗೆ ಹೋಗಿ ತೈಲವನ್ನು ತಕ್ಕೋ! ನೀನು ಬಹಳ ಮದ್ದು ತಕ್ಕೊಳ್ಳುವದು ವ್ಯರ್ಥವಾಗಿದೆ; ನಿನಗೆ ಗುಣವಾಗು ವದಿಲ್ಲ.
- Hosea 5:13 ಹೋಶೇಯ 5:13ಎಫ್ರಾಯಾಮು ತನ್ನ ರೋಗವನ್ನು ಯೆಹೂದವು ತನ್ನ ಗಾಯವನ್ನು ನೋಡಿದಾಗ ಎಫ್ರಾಯೀಮ್ ಅಶ್ಯೂರಕ್ಕೆ ಹೋಗಿ ಅರಸನಾದ ಯಾರೇಬನ ಬಳಿಗೆ ಕಳುಹಿಸಿತು; ಆದಾಗ್ಯೂ ಅವನು ನಿಮ್ಮನ್ನು ಸ್ವಸ್ಥಮಾಡ ಲಿಲ್ಲ, ಇಲ್ಲವೆ ನಿಮ್ಮ ಗಾಯವನ್ನು ಗುಣಪಡಿಸಲೂ ಇಲ್ಲ.
- Mark 2:17 ಮಾರ್ಕನು 2:17ಯೇಸು ಅದನ್ನು ಕೇಳಿ--ಕ್ಷೇಮದಿಂದಿರುವವರಿಗೆ ಅಲ್ಲ, ಕ್ಷೇಮವಿಲ್ಲದವರಿಗೆ ವೈದ್ಯನುಬೇಕು; ನಾನು ನೀತಿವಂತರನ್ನಲ್ಲ, ಆದರೆ ಪಾಪಿಗಳನ್ನು ಮಾನಸಾಂತರಕ್ಕಾಗಿ ಕರೆಯುವದಕ್ಕೆ ಬಂದೆನು ಎಂದು ಅವರಿಗೆ ಹೇಳಿದನು.
- Jeremiah 30:13 ಯೆರೆಮೀಯ 30:13ಅದನ್ನು ನಿನಗೆ ಕಟ್ಟುವ ಹಾಗೆ ನಿನಗೋ ಸ್ಕರ ವಾದಿಸುವವರು ಯಾರೂ ಇರುವದಿಲ್ಲ. ವಾಸಿ ಮಾಡುವ ಔಷಧಗಳು ನಿನಗೆ ಇಲ್ಲ.
- Ezekiel 34:4 ಯೆಹೆಜ್ಕೇಲನು 34:4ಕ್ಷೀಣವಾದದ್ದನ್ನು ನೀವು ಬಲಪಡಿಸುವ ದಿಲ್ಲ, ಖಾಯಿಲೆಯಾದದ್ದನ್ನು ವಾಸಿ ಮಾಡಿಸುವದಿಲ್ಲ, ಮುರಿದದ್ದನ್ನು ಕಟ್ಟುವದಿಲ್ಲ; ಕಳೆದು ಹೋದದ್ದನ್ನು ಹುಡುಕುವದಿಲ್ಲ, ಓಡಿಸಿದ್ದನ್ನು ನೀವು ಹಿಂದಕ್ಕೆ ತರು ವದಿಲ್ಲ. ಆದರೆ ಬಲಾತ್ಕಾರದಿಂದ ಮತ್ತು ಕ್ರೂರತನ ದಿಂದ ಅವುಗಳ ಮೇಲೆ ದೊರೆತನ ಮಾಡುತ್ತೀರಿ.
- Job 5:1–5 ಯೋಬನು 5:1–5ಈಗ ಕರೆ; ನಿನಗೆ ಉತ್ತರ ಕೊಡುವವನು ಇದ್ದಾನೋ? ಪರಿಶುದ್ಧರಲ್ಲಿ ಯಾರ ಕಡೆಗೆ ತಿರುಗಿಕೊಳ್ಳುವಿ? ಮೂಢನನ್ನು ಕೋಪವು ಕೊಲ್ಲು ವದು; ಬುದ್ಧಿಹೀನನನ್ನು ರೋಷವು ಸಾಯುವಂತೆ ಮಾಡುವದು. ಮೂಢನು ಬೇರೂರುವದನ್ನು ನಾನು ನೋಡಿದೆನು; ಸಂಗಡಲೇ ಅವನ ಸ್ಥಾನವನ್ನು ನಾನು ಶಪಿಸಿದೆನು. ಅವನ ಮಕ್ಕಳು ಭದ್ರತೆಗೆ ದೂರವಾಗಿ ದ್ದಾರೆ; ತಪ್ಪಿಸುವವನಿಲ್ಲದೆ (ಅವರು) ಬಾಗಿಲಲ್ಲಿ ಜಜ್ಜ ಲ್ಪಡುವರು. ಹಸಿದವನು ಅವನ ಪೈರನ್ನು ತಿನ್ನುವನು, ಮುಳ್ಳುಗಳೊಳಗಿಂದಲೂ ಅದನ್ನು ತೆಗೆದುಕೊಳ್ಳು ವನು; ಕೊಳ್ಳೆಗಾರನು ಅವರ ಆಸ್ತಿಯನ್ನು ನುಂಗಿಬಿಡು ವನು.