Job · chapter 14 · verse 9
Job 14:9 in Kannada
ನೀರಿನ ವಾಸನೆಯಿಂದ ಚಿಗುರಿ ಸಸಿಯ ಹಾಗೆ ಕೊಂಬೆ ಗಳನ್ನು ಬಿಡುವದು.
Neerina vaasaneyinda chiguri sasiya haage kombe galannu biduvadu.
Job 14:9 in English
- King James Version (KJV)
- [Yet] through the scent of water it will bud, and bring forth boughs like a plant.
- World English Bible (WEB)
- yet through the scent of water it will bud, and sprout boughs like a plant.
- American Standard Version (ASV)
- Yet through the scent of water it will bud, And put forth boughs like a plant.
- Bible in Basic English (BBE)
- Still, at the smell of water, it will make buds, and put out branches like a young plant.
- Darby Translation (DBY)
- Yet through the scent of water it will bud, and put forth boughs like a young plant.
- Webster's Bible (WBS)
- [Yet] through the scent of water it will bud, and bring forth boughs like a plant.
- Young's Literal Translation (YLT)
- From the fragrance of water it doth flourish, And hath made a crop as a plant.
Read in context
- 7ಮರಕ್ಕೆ ನಿರೀಕ್ಷೆಯುಂಟು; ಅದು ಕೊಯ್ಯಲ್ಪಟ್ಟರೆ ಮತ್ತೆ ಚಿಗುರುವದು. ಚಿಗುರುವದನ್ನು ನಿಲ್ಲಿಸುವದೇ ಇಲ್ಲ.
- 8ಅದರ ಬೇರು ಭೂಮಿಯಲ್ಲಿ ಹಳೆಯದಾದರೂ ನೆಲದಲ್ಲಿ ಅದರ ಬುಡವು ಸತ್ತರೂ
- 9ನೀರಿನ ವಾಸನೆಯಿಂದ ಚಿಗುರಿ ಸಸಿಯ ಹಾಗೆ ಕೊಂಬೆ ಗಳನ್ನು ಬಿಡುವದು.
- 10ಆದರೆ ಮನುಷ್ಯನು ಸತ್ತು ಕ್ಷಯಿಸಿ ಹೋಗುತ್ತಾನೆ; ಮನುಷ್ಯನು ಪ್ರಾಣ ಬಿಟ್ಟ ಬಳಿಕ ಅವನೆಲ್ಲಿರುವನು?
- 11ಹೇಗೆ ನೀರು ಸಮುದ್ರ ದಿಂದ ಮುಗಿದು ಹೋಗುತ್ತದೋ ಪ್ರವಾಹವು ಆರಿ ಬತ್ತಿಹೋಗುತ್ತದೆ ಹಾಗೆ ಮನುಷ್ಯನು ಮಲಗುತ್ತಾನೆ,
Cross references
- Romans 11:17–24 ರೋಮಾಪುರದವರಿಗೆ 11:17–24ಆದರೆ ಕೆಲವು ಕೊಂಬೆಗಳು ಮುರಿದು ಹಾಕಲ್ಪಟ್ಟ ದ್ದರಿಂದ ಕಾಡೆಣ್ಣೇ ಮರದಂತಿರುವ ನೀನು ಅವುಗಳ ತಾವಿನಲ್ಲಿ ಕಸಿಕಟ್ಟಿಸಿಕೊಂಡವನಾಗಿ ಊರೆಣ್ಣೇ ಮರದ ರಸವತ್ತಾದ ಬೇರಿನಲ್ಲಿ ಪಾಲು ಹೊಂದಿದವನಾಗಿದ್ದೀ. ಆದರೂ ಆ ಕೊಂಬೆಗಳಿಗೆ ಮೇಲಾಗಿ ನಿನ್ನನ್ನು ಹೆಚ್ಚಿಸಿಕೊಳ್ಳಬೇಡ; ಹೆಚ್ಚಿಸಿಕೊಂಡರೂ ಆ ಬೇರಿಗೆ ನೀನು ಆಧಾರವಲ್ಲ, ಅದು ನಿನಗೆ ಆಧಾರವಾಗಿದೆಯಷ್ಟೆ. ಈ ಮಾತಿಗೆ--ನಾನು ಕಸಿಕಟ್ಟಿಸಿ ಕೊಳ್ಳುವಂತೆ ಕೊಂಬೆಗಳು ಮುರಿದು ಹಾಕಲ್ಪಟ್ಟವಲ್ಲಾ ಎಂದು ನೀನು ಹೇಳುವಿ. ಒಳ್ಳೆಯದು, ಅವರು ನಂಬದೆ ಹೋದದರಿಂದ ಮುರಿದುಹಾಕಲ್ಪಟ್ಟರು, ನೀನು ನಿಂತಿರುವದು ನಂಬಿಕೆಯಿಂದಲೇ, ಗರ್ವ ಪಡಬೇಡ, ಭಯದಿಂದಿರು; ದೇವರು ಹುಟ್ಟು ಕೊಂಬೆಗಳನ್ನು ಉಳಿಸದೆಯಿದ್ದ ಮೇಲೆ ನಿನ್ನನ್ನೂ ಉಳಿಸು ವದಿಲ್ಲ. ಆದದರಿಂದ ದೇವರ ದಯೆಯನ್ನೂ ಕಾಠಿಣ್ಯ ವನ್ನೂ ನೋಡು; ಬಿದ್ದವರ ಕಡೆಗೆ ಕಾಠಿಣ್ಯ; ನೀನು ದೇವರ ದಯೆಯನ್ನು ಆಶ್ರಯಿಸಿಕೊಂಡೇ ಇದ್ದರೆ ನಿನ್ನ ಕಡೆಗೆ ಆತನ ದಯೆ; ಇಲ್ಲವಾದರೆ ನೀನೂ ಕಡಿದು ಹಾಕಲ್ಪಡುವಿ. ಅವರು ಕೂಡ ಇನ್ನು ಅಪ ನಂಬಿಕೆಯಲ್ಲಿ ನಿಲ್ಲದ ಪಕ್ಷಕ್ಕೆ ಕಸಿಕಟ್ಟಲ್ಪಡುವರು; ಯಾಕಂದರೆ ದೇವರು ಅವರನ್ನು ತಿರಿಗಿ ದೇವರು ಕಸಿಕಟ್ಟುವದಕ್ಕೆ ಸಮರ್ಥನಾಗಿದ್ದಾನೆ. ಹುಟ್ಟು ಕಾಡು ಮರದಿಂದ ಕಡಿದು ತೆಗೆಯಲ್ಪಟ್ಟಿರುವ ನೀನು ನಿನಗೆ ಸಂಬಂಧಪಡದ ಊರುಮರದಲ್ಲಿ ಕಸಿಕಟ್ಟಿಸಿಕೊಂಡವ ನಾದ ಮೇಲೆ ಅದರಲ್ಲಿ ಹುಟ್ಟಿದ ಕೊಂಬೆಗಳಾಗಿರುವ ಅವರು ಸ್ವಂತ ಮರದಲ್ಲಿ ಕಸಿಕಟ್ಟಲ್ಪಡುವದು ಎಷ್ಟೋ ಸಹಜವಾಗಿದೆಯಲ್ಲವೇ.
- Ezekiel 19:10 ಯೆಹೆಜ್ಕೇಲನು 19:10ನಿನ್ನ ತಾಯಿ ನಿನ್ನ ರಕ್ತದಲ್ಲಿ ನೀರಿನ ಬಳಿ ನೆಟ್ಟ ದ್ರಾಕ್ಷೆಯ ಗಿಡದ ಹಾಗೆ ಇದ್ದಾಳೆ; ಅದು ನೀರಾವರಿ ಯಿಂದಲೂ ಫಲವುಳ್ಳದ್ದಾಗಿಯೂ ತುಂಬಾ ಕೊಂಬೆ ಗಳುಳ್ಳದ್ದಾಗಿಯೂ ಇದೆ.
- Ezekiel 17:3–10 ಯೆಹೆಜ್ಕೇಲನು 17:3–10ಹೇಳತಕ್ಕದ್ದೇನಂದರೆ--ದೇವರಾದ ಕರ್ತನು ಹೀಗೆ ಹೇಳುತ್ತಾನೆ. ದೊಡ್ಡ ರೆಕ್ಕೆಗಳೂ ಉದ್ದವಾದ ರೆಕ್ಕೆಗಳೂ ಉಳ್ಳಂಥ ವಿಧವಿಧವಾದ ಬಣ್ಣ ಬಣ್ಣದ ಪುಕ್ಕಗಳಿಂದ ತುಂಬಿದ್ದಂಥ ಒಂದು ದೊಡ್ಡ ಹದ್ದು ಲೆಬನೋನಿಗೆ ಬಂದು, ದೇವದಾರಿನ ಮರದ ಮೇಲ್ಗಡೆಯ ಕೊಂಬೆಯನ್ನು ಕಿತ್ತುಹಾಕಿತು. ಅದರ ಚಿಗುರುಗಳ ಕೊನೆಯನ್ನು ಕಿತ್ತು ವ್ಯಾಪಾರದ ದೇಶಕ್ಕೆ ತೆಗೆದುಕೊಂಡು ಹೋಗಿ ವರ್ತಕರಿರುವ ನಗರದಲ್ಲಿ ಇಟ್ಟಿತು. ಅದು ದೇಶದ ಬೀಜವನ್ನೂ ಸಹ ತೆಗೆದು ಕೊಂಡು ಹೋಗಿ ಫಲವುಳ್ಳ ಹೊಲದಲ್ಲಿ ಇರಿಸಿತು; ಅದು ಹೆಚ್ಚು ನೀರಿರುವ ಸ್ಥಳದಲ್ಲಿ ಅದನ್ನು ನೆಟ್ಟು ನೀರವಂಜಿಯ ಮರದ ಹಾಗೆ ಬೆಳೆಯಿಸಿತು. ಅದು ಮೊಳೆತು ತಗ್ಗಾದ ಪ್ರಮಾಣದಲ್ಲಿ ಹಬ್ಬುವ ದ್ರಾಕ್ಷೇ ಗಿಡವಾಯಿತು; ಅದರ ಬಳ್ಳಿಗಳು ಅದರ ಕಡೆಗೆ ತಿರುಗಿ ಕೊಂಡವು, ಅದರ ಬೇರುಗಳು ಅದರ ಕೆಳಗಿದ್ದವು; ಹೀಗೆ ಅದು ದ್ರಾಕ್ಷೇ ಗಿಡವಾಯಿತು, ಕೊಂಬೆಗಳು ಒಡೆದು ಬಳ್ಳಿಗಳು ಹಬ್ಬಿದವು. ದೊಡ್ಡ ರೆಕ್ಕೆಗಳೂ ಬಹಳ ಗರಿಗಳೂ ಇದ್ದ ಇನ್ನೊಂದು ದೊಡ್ಡ ಹದ್ದು ಇತ್ತು; ಆಗ ಇಗೋ, ಆ ದ್ರಾಕ್ಷೇ ಗಿಡವು ತಾನು ನಾಟಿಕೊಂಡಿದ್ದ ಪಾತಿಯೊಳಗಿಂದ ಅದರ ಕಡೆಗೆ ತನ್ನ ಬೇರುಗಳನ್ನು ತಿರುಗಿಸಿ ತನ್ನ ರೆಂಬೆಗಳನ್ನು ಚಾಚಿ ಅದರ ಮೂಲಕ ನೀರನ್ನು ಹಾಯಿಸುತ್ತಿತ್ತು. ಅದು ಕೊಂಬೆ ಗಳನ್ನು ಬೆಳೆಸಿ ಫಲಫಲಿಸುವ ಹಾಗೆಯೂ ಒಳ್ಳೇ ದ್ರಾಕ್ಷೇಗಿಡ ಆಗುವ ಹಾಗೆಯೂ ಒಳ್ಳೇ ಭೂಮಿಯಲ್ಲಿ ಹೆಚ್ಚು ನೀರಿನ ಬಳಿಯಲ್ಲಿ ಬೆಳೆಸಲ್ಪಟ್ಟಿತು. ನೀನು ಹೇಳಬೇಕಾದದ್ದೇನಂದರೆ -- ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅದು ಸಮೃದ್ಧಿಯಾಗಿ ರುವದೋ? ಆ ಹದ್ದು ಅದರ ಬೇರುಗಳನ್ನು ಕಿತ್ತು ಅದರ ಹಣ್ಣುಗಳನ್ನು ತೆಗೆದುಬಿಟ್ಟರೆ ಅದು ಒಣಗುವದಿಲ್ಲವೇ? ಅದರ ಮೊಳಕೆಯ ಎಲೆಗಳೆಲ್ಲಾ ಒಣಗಿಹೋದಾಗ ಅದನ್ನು ಬೇರು ಸಹಿತ ಕೀಳಬೇಕಾದರೆ ಮಹಾಬಲವಾಗಲೀ ಅಥವಾ ಬಹಳ ಜನರಾಗಲೀ ಇರಬೇಕು. ಹೌದು, ಇಗೋ, ನೆಟ್ಟಿರಲಾಗಿ ಅದು ಸಮೃದ್ಧಿಯಾಗಿರುವದೇ? ಅದಕ್ಕೆ ಮೂಡಣಗಾಳಿ ತಗಲುವಾಗ ಅದು ಸಂಪೂರ್ಣ ವಾಗಿ ಒಣಗುವದಿಲ್ಲವೇ? ಅದು ಮೊಳೆತ ಪಾತಿಗಳ ಲ್ಲಿಯೇ ಒಣಗಿಹೋಗುವದು.
- Ezekiel 17:22–24 ಯೆಹೆಜ್ಕೇಲನು 17:22–24ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇದ ಲ್ಲದೆ ನಾನು ಉನ್ನತವಾದ ದೇವದಾರಿನ ಎತ್ತರವಾದ ರೆಂಬೆಗಳನ್ನು ತೆಗೆದುಕೊಂಡು ಅದನ್ನು ನೆಡುವೆನು; ಎಳೆಯದಾದ ಒಂದನ್ನು ಕತ್ತರಿಸಿ ಎತ್ತರವಾದ ಪರ್ವತದ ಮೇಲೆ ನಾಟುವೆನು. ಇಸ್ರಾಯೇಲಿನ ಉನ್ನತ ಪರ್ವತದಲ್ಲಿ ನಾನು ಅದನ್ನು ನೆಡುವೆನು; ಅದರ ಕೊಂಬೆಗಳು ಒಡೆದು ಫಲಫಲಿಸುವದು; ಘನವುಳ್ಳ ದೇವದಾರು ಆಗುವದು; ಪ್ರತಿಯೊಂದು ಪುಕ್ಕಗಳುಳ್ಳ ಪಕ್ಷಿಗಳು ಅದರ ಕೊಂಬೆಗಳ ನೆರಳಿನ ಕೆಳಗೆ ವಾಸ ಮಾಡುವವು; ಅದರಡಿಯಲ್ಲಿ ವಾಸಿಸುವವು.ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ. ಕರ್ತ ನಾದ ನಾನು ಎತ್ತರವಾದ ಮರವನ್ನು ತಗ್ಗಿಸಿ, ತಗ್ಗಾ ದದ್ದನ್ನು ಎತ್ತರಪಡಿಸಿ (ಬೆಳಸಿ) ಹಸುರಾಗಿರುವದನ್ನು ಒಣಗಿಸಿ, ಒಣಗಿದ್ದನ್ನು ಚಿಗುರಿಸಿದ್ದೇನೆ ಎಂದು ಅರ ಣ್ಯದ ಸಕಲ ವೃಕ್ಷಗಳು ತಿಳಿಯುವವೆಂದು ಕರ್ತನಾದ ನಾನೇ ಮಾತನಾಡಿ ಅದನ್ನು ಮಾಡಿದ್ದೇನೆ.