Job · chapter 15 · verse 11
Job 15:11 in Kannada
ದೇವರ ಆದರಣೆಗಳು ನಿನಗೆ ಅಲ್ಪವೋ? ಗುಪ್ತವಾದದ್ದು ನಿನಗೆ ಏನಾದರೂ ಇದೆಯೋ?
Devara aadaranegalu ninage alpavo? Guptavaadaddu ninage enaadaroo ideyo?
Job 15:11 in English
- King James Version (KJV)
- [Are] the consolations of God small with thee? is there any secret thing with thee?
- World English Bible (WEB)
- Are the consolations of God too small for you, even the word that is gentle toward you?
- American Standard Version (ASV)
- Are the consolations of God too small for thee, Even the word that is gentle toward thee?
- Bible in Basic English (BBE)
- Are the comforts of God not enough for you, and the gentle word which was said to you?
- Darby Translation (DBY)
- Are the consolations of God too small for thee? and the word gently spoken to thee?
- Webster's Bible (WBS)
- [Are] the consolations of God small with thee? is there any secret thing with thee?
- Young's Literal Translation (YLT)
- Too few for thee are the comforts of God? And a gentle word [is] with thee,
Read in context
- 9ನಮಗೆ ತಿಳಿಯದೆ ಇರುವದನ್ನು ನೀನು ಏನು ತಿಳುಕೊಂಡಿರುವಿ? ನಮ್ಮಲ್ಲಿ ಇಲ್ಲದ್ದೇನು ಗ್ರಹಿಸಿದಿ?
- 10ನೆರೆಯವರೂ ಬಹಳ ಮುದುಕರೂ ನಿನ್ನ ತಂದೆಗಿಂತ ಬಹಳ ದೊಡ್ಡವರೂ ನಮ್ಮಲ್ಲಿದ್ದಾರೆ.
- 11ದೇವರ ಆದರಣೆಗಳು ನಿನಗೆ ಅಲ್ಪವೋ? ಗುಪ್ತವಾದದ್ದು ನಿನಗೆ ಏನಾದರೂ ಇದೆಯೋ?
- 12ನಿನ್ನ ಹೃದಯವು ನಿನ್ನನ್ನು ಒಯ್ಯುವದು ಯಾಕೆ? ಯಾಕೆ ನಿನ್ನ ಕಣ್ಣುಗಳು ಮಿಟಿಕಿಸುವದು?
- 13ದೇವರಿಗೆ ವಿರೋಧವಾಗಿ ನಿನ್ನ ಆತ್ಮವನ್ನು ತಿರುಗಿಸಿ ನಿನ್ನ ಬಾಯೊಳಗಿಂದ ಮಾತುಗಳನ್ನು ಹೊರಡಿಸುತ್ತೀ ಯಲ್ಲಾ.
Cross references
- Job 13:2 ಯೋಬನು 13:2ನೀವು ತಿಳಿದುಕೊಳ್ಳುವ ಪ್ರಕಾರ ನಾನೂ ತಿಳಿದು ಕೊಂಡಿದ್ದೇನೆ; ನಾನು ನಿಮಗಿಂತ ಕಡಿಮೆಯಾದವನಲ್ಲ.
- 2 Corinthians 1:3–5 2 ಕೊರಿಂಥದವರಿಗೆ 1:3–5ನಮ್ಮ ಕರ್ತನಾದ ಯೇಸು ಕ್ರಿಸ್ತನ ತಂದೆಯಾ ಗಿರುವ ದೇವರೂ ಕನಿಕರವುಳ್ಳ ತಂದೆಯೂ ಸಕಲ ವಿಧವಾಗಿ ಸಂತೈಸುವಾತನೂ ಆಗಿರುವ ದೇವರಿಗೆ ಸ್ತೋತ್ರ. ನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿನಮಗೆ ಸಂಭವಿಸುವ ಎಲ್ಲಾ ಸಂಕಟಗಳಲಿ ಆತನು ನಮ್ಮನ್ನು ಸಂತೈಸುತ್ತಾನೆ; ಹೀಗೆ ದೇವರಿಂದ ನಮಗಾಗುವ ಆದರಣೆಯ ಮೂಲಕ ನಾವು ನಾನಾ ವಿಧವಾದ ಸಂಕಟಗಳಲ್ಲಿ ಇರುವವರನ್ನು ಸಂತೈಸು ವದಕ್ಕೆ ಶಕ್ತರಾಗುತ್ತೇವೆ. ಕ್ರಿಸ್ತನ ನಿಮಿತ್ತ ನಮಗೆ ಬಾಧೆಗಳು ಹೇಗೆ ಹೇರಳವಾಗಿ ಉಂಟಾಗುತ್ತವೆಯೋ ಹಾಗೆಯೇ ಆದರಣೆಯೂ ಕೂಡ ಕ್ರಿಸ್ತನ ಮೂಲಕ ಹೇರಳವಾಗಿ ಉಂಟಾಗುತ್ತದೆ.
- 1 Kings 22:24 1 ಅರಸುಗಳು 22:24ಆಗ ಕೆನಾನನ ಮಗನಾದ ಚಿದ್ಕೀಯನು ಸವಿಾ ಪಕ್ಕೆ ಬಂದು ವಿಾಕಾಯೆಹುವಿನ ಕೆನ್ನೆಯ ಮೇಲೆ ಹೊಡೆದು--ಕರ್ತನ ಆತ್ಮವು ನನ್ನನ್ನು ಬಿಟ್ಟು ನಿನ್ನ ಸಂಗಡ ಮಾತನಾಡಲು ಯಾವ ಮಾರ್ಗವಾಗಿ ಹೋಯಿತು ಅಂದನು.
- 2 Corinthians 7:6 2 ಕೊರಿಂಥದವರಿಗೆ 7:6ಆದಾಗ್ಯೂ ಕುಗ್ಗಿಹೋದ ವರನ್ನು ಸಂತೈಸುವ ದೇವರು ತೀತನ ಬರುವಿಕೆಯಿಂದ ನಮ್ಮನ್ನು ಸಂತೈಸಿದನು.
- Job 36:16 ಯೋಬನು 36:16ನಿನ್ನನ್ನು ಆತನು ಹಾಗೆಯೇ ಇಕ್ಕಟ್ಟಿನೊಳಗಿಂದ ತೆಗೆದು ಇಕ್ಕಟ್ಟಿಲ್ಲದ ವಿಶಾಲವಾದ ಸ್ಥಳಕ್ಕೆ ಬರಮಾಡ ಬಹುದಾಗಿತ್ತು; ನಿನ್ನ ಮೇಜಿನ ಮೇಲೆ ಇಡತಕ್ಕವುಗಳು ಕೊಬ್ಬಿನಿಂದ ತುಂಬಿದವುಗಳಾಗಿರುವವು.
- Job 11:13–19 ಯೋಬನು 11:13–19ನೀನು ನಿನ್ನ ಹೃದಯವನ್ನು ಸಿದ್ಧಮಾಡಿ ನಿನ್ನ ಕೈಗಳನ್ನು ಆತನ ಕಡೆಗೆ ಚಾಚಿದರೆ, ನಿನ್ನ ಕೈಯಲ್ಲಿರುವ ಅಪರಾಧವನ್ನು ದೂರಮಾಡಿ ದುಷ್ಟತನವನ್ನು ನಿನ್ನ ಗುಡಾರಗಳಲ್ಲಿ ವಾಸಮಾಡಗೊಡಿಸದಿದ್ದರೆ ನಿನ್ನ ಮುಖವನ್ನು ದೋಷವಿಲ್ಲದೆ ಎತ್ತುವಿ; ಹೌದು, ಸ್ಥಿರ ವಾಗಿದ್ದು ಹೆದರದೆ ಇರುವಿ. ನೀನು ಕಷ್ಟವನ್ನು ಮರೆತುಬಿಡುವಿ. ಹರಿದು ಹೋದ ನೀರಿನ ಹಾಗೆ ಅದನ್ನು ಜ್ಞಾಪಕಮಾಡಿಕೊಳ್ಳುವಿ. ಮಧ್ಯಾಹ್ನಕ್ಕಿಂತ ನಿನ್ನ ಪ್ರಾಯವು ಸ್ಪಷ್ಟವಾಗಿರುವದು; ನೀನು ಪ್ರಕಾಶಿ ಸುವವನಾಗಿ ಪ್ರಾತಃಕಾಲದ ಹಾಗೆಯೇ ಇರುವಿ. ನಿರೀಕ್ಷೆ ಇದೆ ಎಂದು ಭರವಸದಿಂದಿರುವಿ; ಹೌದು, ನೀನು ನಿನ್ನ ಸುತ್ತಲೂ ಅಗೆದು ಭರವಸದಿಂದ ವಿಶ್ರಾಂತಿ ತಕ್ಕೊಳ್ಳುವಿ. ನೀನು ಮಲಗಿಕೊಂಡಾಗ ಯಾರೂ ನಿನ್ನನ್ನು ಹೆದರಿಸರು; ಹೌದು, ಅನೇಕರು ನಿನಗೆ ವ್ಯಾಜ್ಯವನ್ನು ಒಪ್ಪಿಸುವರು.ಆದರೆ ದುಷ್ಟರ ಕಣ್ಣುಗಳು ಕುಂದುವವು; ಅವರು ತಪ್ಪಿಸಿಕೊಳ್ಳುವದಿಲ್ಲ. ಅವರ ಪ್ರಾಣದ ಕೊನೆಯ ಉಸಿರೇ ಅವರ ನಿರೀಕ್ಷೆಯಾಗಿದೆ.
- Job 15:8 ಯೋಬನು 15:8ದೇವರ ಗುಟ್ಟನ್ನು ಕೇಳಿದ್ದೀಯೋ? ಜ್ಞಾನವನ್ನು ನಿನಗೆ ನೀನೇ ಇಟ್ಟುಕೊಂಡಿದ್ದೀಯೋ?
- Job 5:8–26 ಯೋಬನು 5:8–26ನಾನು ದೇವರನ್ನು ಹುಡುಕುವೆನು; ನನ್ನ ಕಾರ್ಯವನ್ನು ದೇವರ ಮೇಲೆ ಹಾಕುವೆನು. ಆತನು ದೊಡ್ಡ ವುಗಳನ್ನು ಶೋಧಿಸಲಸಾಧ್ಯವಾಗಿ ಮಾಡುತ್ತಾನೆ; ಎಣಿಕೆ ಇಲ್ಲದ ಅದ್ಭುತಗಳನ್ನು ಮಾಡುತ್ತಾನೆ. ಭೂಮಿಯ ಮೇಲೆ ಮಳೆಯನ್ನು ಸುರಿಸುತ್ತಾನೆ; ಹೊಲಗಳ ಮೇಲೆ ನೀರನ್ನು ಕಳುಹಿಸುತ್ತಾನೆ; ಹೀಗೆ ತಗ್ಗಿದವರನ್ನು ಉನ್ನತದಲ್ಲಿಡುತ್ತಾನೆ. ದುಃಖವುಳ್ಳವರು ರಕ್ಷಣೆಗೆ ಎತ್ತ ಲ್ಪಡುತ್ತಾರೆ. ಆತನು ಯುಕ್ತಿವಂತರ ಯೋಚನೆಗಳನ್ನು ಭಂಗಪಡಿಸುತ್ತಾನೆ; ಅವರ ಕೈಗಳು ಪ್ರಯತ್ನವನ್ನು ನಡಿಸುವದಿಲ್ಲ. ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿ ಹಿಡಿಯುತ್ತಾನೆ--ಮೂರ್ಖರ ಆಲೋಚನೆ ಉರುಳಿ ಬೀಳುವದು. ಹಗಲಿನಲ್ಲಿ ಕತ್ತಲೆಯನ್ನು ಸಂಧಿಸು ತ್ತಾರೆ; ರಾತ್ರಿಯಲ್ಲಿ ಇದ್ದ ಹಾಗೆ ಮಧ್ಯಾಹ್ನದಲ್ಲಿ ತಡವಾಡುತ್ತಾರೆ ಆತನು ಕತ್ತಿಯಿಂದಲೂ ಅದರ ಬಾಯಿಂದಲೂ ಬಲಿಷ್ಠನ ಕೈಯೊಳಗಿಂದಲೂ ಬಡವ ನನ್ನು ರಕ್ಷಿಸುತ್ತಾನೆ. ಆದದರಿಂದ ದರಿದ್ರನಿಗೆ ನಿರೀಕ್ಷೆ ಯುಂಟು; ಅಪರಾಧವು ಬಾಯಿ ಮುಚ್ಚುವದು. ಇಗೋ, ದೇವರು ಗದರಿಸುವ ಮನುಷ್ಯನು ಭಾಗ್ಯ ವಂತನು; ಸರ್ವಶಕ್ತನ ಶಿಕ್ಷೆಯನ್ನು ಅಲಕ್ಷ್ಯಮಾಡ ಬೇಡ. ಆತನೇ ನೋಯಿಸುತ್ತಾನೆ, ಕಟ್ಟುವವನು ಆತನೇ; ಆತನು ಗಾಯ ಮಾಡುತ್ತಾನೆ; ಆತನ ಕೈಗಳು ಸ್ವಸ್ಥಮಾಡುತ್ತವೆ. ಆರು ಇಕ್ಕಟ್ಟುಗಳಿಂದ ನಿನ್ನನ್ನು ತಪ್ಪಿಸುವನು; ಹೌದು, ಏಳರಲ್ಲಿಯೂ ಕೇಡು ನಿನ್ನನ್ನು ಮುಟ್ಟದು. ಬರದಲ್ಲಿ ನಿನ್ನನ್ನು ಮರಣದೊಳ ಗಿಂದಲೂ ಯುದ್ಧದಲ್ಲಿ ಕತ್ತಿಯ ಬಲದಿಂದಲೂ ವಿಮೋಚಿಸುವನು. ನಾಲಿಗೆಯೆಂಬ ಬೆತ್ತಕ್ಕೆ ಮರೆ ಯಾಗುವಿ; ಅದು ಬಂದಾಗ ನೀನು ನಾಶಕ್ಕೆ ಭಯ ಪಡುವದಿಲ್ಲ. ನಾಶನಕ್ಕೂ ಕ್ಷಾಮಕ್ಕೂ ನಗುವಿ; ಭೂಮಿಯ ಮೃಗಗಳಿಗೂ ಭಯಪಡುವದಿಲ್ಲ. ಹೊಲದ ಕಲ್ಲುಗಳ ಸಂಗಡ ನಿನಗೆ ಒಡಂಬಡಿಕೆ ಇರುವದು; ಹೊಲದ ಮೃಗಗಳು ನಿನ್ನೊಂದಿಗೆ ಸಮಾ ಧಾನವಾಗಿರುವವು. ನಿನ್ನ ಗುಡಾರವು ಕ್ಷೇಮವಾಗಿದೆ ಎಂದು ತಿಳಿದುಕೊಳ್ಳುವಿ, ನೀನು ನಿನ್ನ ನಿವಾಸ ಸ್ಥಾನ ವನ್ನು ತಿಳಿದುಕೊಳ್ಳುವಿ ಪಾಪಮಾಡುವದಿಲ್ಲ. ನಿನ್ನ ಸಂತತಿಯು ಬಹಳವಾಗಿದೆ ಎಂದೂ ನಿನ್ನ ಸಂತಾನವು ಭೂಮಿಯ ಹುಲ್ಲಿನಂತಿದೆ ಎಂದೂ ತಿಳಿದುಕೊಳ್ಳುವಿ. ಸಿವುಡು ತನ್ನ ಕಾಲದಲ್ಲಿ ಏಳುವಂತೆ ನೀನು ಪೂರ್ಣ ಪ್ರಾಯದವನಾಗಿ ಸಮಾಧಿಗೆ ಸೇರುವಿ.ಇಗೋ, ಇದನ್ನೇ ನಾವು ವಿಚಾರಿಸಿದೆವು; ಅದು ಇದೇ; ಇದನ್ನು ಆಲಿಸು; ನಿನ್ನ ಹಿತಕ್ಕಾಗಿ ಇದನ್ನು ತಿಳುಕೋ.