Job · chapter 15 · verse 14
Job 15:14 in Kannada
ನಿರ್ಮಲನಾಗುವ ಹಾಗೆ ಮನುಷ್ಯನು ಎಷ್ಟರವನು? ನೀತಿವಂತನಾಗಿರುವ ಹಾಗೆ ಸ್ತ್ರೀಯಿಂದ ಹುಟ್ಟಿದವನು ಯಾರು?
Nirmalanaaguva haage manushyanu eshtaravanu? Neetivantanaagiruva haage streeyinda huttidavanu yaaru?
Job 15:14 in English
- King James Version (KJV)
- What [is] man, that he should be clean? and [he which is] born of a woman, that he should be righteous?
- World English Bible (WEB)
- What is man, that he should be clean? What is he who is born of a woman, that he should be righteous?
- American Standard Version (ASV)
- What is man, that he should be clean? And he that is born of a woman, that he should be righteous?
- Bible in Basic English (BBE)
- What is man, that he may be clean? and how may the son of woman be upright?
- Darby Translation (DBY)
- What is man, that he should be pure? and he that is born of a woman, that he should be righteous?
- Webster's Bible (WBS)
- What [is] man, that he should be clean? and [he who is] born of a woman, that he should be righteous?
- Young's Literal Translation (YLT)
- What [is] man that he is pure, And that he is righteous, one born of woman?
Read in context
- 12ನಿನ್ನ ಹೃದಯವು ನಿನ್ನನ್ನು ಒಯ್ಯುವದು ಯಾಕೆ? ಯಾಕೆ ನಿನ್ನ ಕಣ್ಣುಗಳು ಮಿಟಿಕಿಸುವದು?
- 13ದೇವರಿಗೆ ವಿರೋಧವಾಗಿ ನಿನ್ನ ಆತ್ಮವನ್ನು ತಿರುಗಿಸಿ ನಿನ್ನ ಬಾಯೊಳಗಿಂದ ಮಾತುಗಳನ್ನು ಹೊರಡಿಸುತ್ತೀ ಯಲ್ಲಾ.
- 14ನಿರ್ಮಲನಾಗುವ ಹಾಗೆ ಮನುಷ್ಯನು ಎಷ್ಟರವನು? ನೀತಿವಂತನಾಗಿರುವ ಹಾಗೆ ಸ್ತ್ರೀಯಿಂದ ಹುಟ್ಟಿದವನು ಯಾರು?
- 15ಇಗೋ, ತನ್ನ ಪರಿಶುದ್ಧರಲ್ಲಿ ಆತನು ನಂಬಿಕೆ ಇಡುವದಿಲ್ಲ; ಹೌದು, ಆಕಾಶಗಳು ಆತನ ದೃಷ್ಟಿಯಲ್ಲಿ ನಿರ್ಮಲವಲ್ಲ.
- 16ನೀರಿನಂತೆ ಅನ್ಯಾಯವನ್ನು ಕುಡಿಯುವ ಮನುಷ್ಯನು ಎಷ್ಟು ಹೆಚ್ಚಾಗಿ ಕೆಟ್ಟು ಅಸಹ್ಯವಾಗಿಯೂ ಮಲೀನನಾದವನಾಗಿಯೂ ಇದ್ದಾನಲ್ಲಾ!
Cross references
- Ecclesiastes 7:20 ಪ್ರಸಂಗಿ 7:20ಪಾಪ ಮಾಡದೆ ಒಳ್ಳೇದನ್ನೇ ನಡಿಸುವ ನೀತಿವಂತನು ಭೂಮಿಯ ಮೇಲೆ ಒಬ್ಬನೂ ಇಲ್ಲ.
- Job 14:4 ಯೋಬನು 14:4ಅಪವಿತ್ರವಾದದ್ದರಿಂದ ಶುದ್ಧ ವಾದದ್ದನ್ನು ತರುವವನಾರು? ಒಬ್ಬನೂ ಇಲ್ಲ.
- Proverbs 20:9 ಜ್ಞಾನೋಕ್ತಿಗಳು 20:9ನನ್ನ ಹೃದಯವನ್ನು ಶುದ್ಧಿಮಾಡಿಕೊಂಡಿದ್ದೇನೆ, ನನ್ನ ಪಾಪದಿಂದ ನಾನು ಶುದ್ಧನು ಎಂದು ಯಾರು ಹೇಳಬಲ್ಲರು?
- Romans 7:18 ರೋಮಾಪುರದವರಿಗೆ 7:18ಯಾಕಂದರೆ ನನ್ನಲ್ಲಿ ಅಂದರೆ ನನ್ನ ಶರೀರದಲ್ಲಿ ಒಳ್ಳೆಯದೇನೂ ವಾಸವಾಗಿಲ್ಲವೆಂದು ನನಗೆ ತಿಳಿದದೆ; ಒಳ್ಳೇದನ್ನು ಮಾಡುವದಕ್ಕೆ ನನಗೇನೋ ಮನಸ್ಸುಂಟು; ಆದರೆ ಅದನ್ನು ಮಾಡುವದು ನನ್ನಿಂದಾಗದು.
- Job 25:4–6 ಯೋಬನು 25:4–6ಮನುಷ್ಯನು ದೇವರ ಬಳಿಯಲ್ಲಿ ನೀತಿವಂತನಾಗುವದು ಹೇಗೆ? ಸ್ತ್ರೀಯಿಂದ ಹುಟ್ಟಿದವನು ನಿರ್ಮಲನಾಗಿರುವದು ಹೇಗೆ? ಇಗೋ, ಚಂದ್ರನಾದರೂ ಹೊಳೆಯು ವದಿಲ್ಲ. ನಕ್ಷತ್ರಗಳಾದರೂ ಆತನ ದೃಷ್ಟಿಗೆ ನಿರ್ಮಲವಾ ಗಿರುವದಿಲ್ಲ.ಮನುಷ್ಯನೆಂಬ ಹುಳವೂ ಮನುಷ್ಯನ ಮಗನೆಂಬ ಕ್ರಿಮಿಯೂ ಎಷ್ಟು ಮಾತ್ರದವನು? ಮನುಷ್ಯನೆಂಬ ಹುಳವೂ ಮನುಷ್ಯನ ಮಗನೆಂಬ ಕ್ರಿಮಿಯೂ ಎಷ್ಟು ಮಾತ್ರದವನು?
- 1 John 1:8–10 1 ಯೋಹಾನನು 1:8–10ನಮ್ಮಲ್ಲಿ ಪಾಪವಿಲ್ಲ ವೆಂದು ನಾವು ಹೇಳಿದರೆ ನಮ್ಮನ್ನು ನಾವೇ ಮೋಸ ಪಡಿಸಿಕೊಳ್ಳುತ್ತೇವೆ, ಸತ್ಯವು ನಮ್ಮಲ್ಲಿಲ್ಲ. ನಾವು ನಮ್ಮ ಪಾಪಗಳನ್ನು ಅರಿಕೆ ಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವದರಿಂದ ನಮ್ಮ ಪಾಪಗಳನ್ನು ಕ್ಷಮಿಸಿಬಿಟ್ಟು ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿ ಮಾಡುವನು.ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ. ನಾವು ಪಾಪ ಮಾಡಲಿಲ್ಲವೆಂದು ಹೇಳಿದರೆ ಆತನನ್ನು ಸುಳ್ಳುಗಾರನನ್ನಾಗಿ ಮಾಡುತ್ತೇವೆ, ಮತ್ತು ಆತನ ವಾಕ್ಯವು ನಮ್ಮಲ್ಲಿಲ್ಲ.
- Psalm 14:3 ಕೀರ್ತನೆಗಳು 14:3ಅವರೆಲ್ಲರೂ ತಪ್ಪಿಹೋಗಿದ್ದಾರೆ, ಅವರೆಲ್ಲರೂ ಏಕವಾಗಿ ಹೊಲೆ ಯಾಗಿದ್ದಾರೆ; ಒಳ್ಳೆಯದನ್ನು ಮಾಡುವವನು ಇಲ್ಲ; ಒಬ್ಬನಾದರೂ ಇಲ್ಲ.
- 1 Kings 8:46 1 ಅರಸುಗಳು 8:46ಪಾಪವನ್ನು ಮಾಡದವನು ಯಾವನೂ ಇಲ್ಲದ್ದ ರಿಂದ ಅವರು ನಿನಗೆ ವಿರೋಧವಾಗಿ ಪಾಪ ಮಾಡಲು ನೀನು ಅವರ ಮೇಲೆ ಕೋಪಿಸಿಕೊಂಡು ದೂರವಾ ದರೂ ಸವಿಾಪವಾದರೂ ಶತ್ರುವಿನ ದೇಶಕ್ಕೆ ಅವರು ಸೆರೆಯಾಗಿ ಒಯ್ಯಲ್ಪಡುವ ಹಾಗೆ ನೀನು ಅವರನ್ನು ಶತ್ರುವಿನ ಕೈಯಲ್ಲಿ ಒಪ್ಪಿಸಿದರೆ
- Ecclesiastes 7:29 ಪ್ರಸಂಗಿ 7:29ಇಗೋ, ದೇವರು ಮನುಷ್ಯನನ್ನು ಸತ್ಯವಂತನನ್ನಾಗಿ ಮಾಡಿದನು. ಇದನ್ನು ಮಾತ್ರ ನಾನು ಕಂಡುಕೊಂಡಿದ್ದೇನೆ, ಅವರಾದರೋ ಅನೇಕ ಕಲ್ಪನೆ ಗಳನ್ನು ಹುಡುಕಿದ್ದಾರೆ.
- Ephesians 2:2–3 ಎಫೆಸದವರಿಗೆ 2:2–3ನೀವು ಪೂರ್ವದಲ್ಲಿ ಅಪರಾಧ ಗಳನ್ನೂ ಪಾಪಗಳನ್ನೂ ಮಾಡುವವರಾಗಿದ್ದು ಇಹ ಲೋಕಾಚಾರಕ್ಕೆ ಅನುಸಾರವಾಗಿ ನಡೆದುಕೊಂಡಿರಿ; ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡಿಸುವ ಆತ್ಮನಿಗನುಸಾರವಾಗಿ ನಡೆದುಕೊಂಡಿರಿ; ನಾವೆಲ್ಲರೂ ಪೂರ್ವದಲ್ಲಿ ಶರೀರಭಾವದ ಆಶೆಗಳಿಗೆ ಅಧೀನರಾಗಿ ಶರೀರಕ್ಕೂ ಮನಸ್ಸಿಗೂ ಸಂಬಂಧಪಟ್ಟ ಇಚ್ಛೆಗಳನ್ನು ನೆರವೇರಿಸುತ್ತಾ ನಡೆದು ಮಿಕ್ಕಾದವರಂತೆ ಸ್ವಭಾವ ಸಿದ್ಧವಾಗಿ ದೇವರ ಕೋಪದ ಮಕ್ಕಳಾಗಿದ್ದೆವು.
- Galatians 3:22 ಗಲಾತ್ಯದವರಿಗೆ 3:22ಹಾಗಾದರೆ ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡು ವದರಿಂದ ಉಂಟಾಗುವ ಆ ವಾಗ್ದಾನವು ನಂಬುವ ವರಿಗೇ ಕೊಡಲ್ಪಡುವಂತೆ ಎಲ್ಲರೂ ಪಾಪಕ್ಕೊಳ ಗಾಗಿದ್ದಾರೆಂದು ಬರಹವು ತೀರ್ಮಾನಿಸಿತು.
- John 3:6 ಯೋಹಾನನು 3:6ಶರೀರದಿಂದ ಹುಟ್ಟಿದ್ದು ಶರೀ ರವೇ; ಆತ್ಮನಿಂದ ಹುಟ್ಟಿದ್ದು ಆತ್ಮವೇ.