Job · chapter 15 · verse 30
Job 15:30 in Kannada
ಕತ್ತಲೆಯೊಳಗಿಂದ ಅವನು ತೊಲಗುವದಿಲ್ಲ; ಅವನ ಕೊಂಬೆಗಳನ್ನು ಜ್ವಾಲೆಯು ಬಾಡಿಸುವದು; ಅವನ ಬಾಯಿಯ ಶ್ವಾಸ ದಿಂದ ತೊಲಗಿ ಹೋಗುತ್ತಾನೆ.
Kattaleyolaginda avanu tolaguvadilla; avana kombegalannu jvaaleyu baadisuvadu; avana baayiya shvaasa dinda tolagi hoguttaane.
Job 15:30 in English
- King James Version (KJV)
- He shall not depart out of darkness; the flame shall dry up his branches, and by the breath of his mouth shall he go away.
- World English Bible (WEB)
- He will not depart out of darkness. The flame will dry up his branches. He will go away by the breath of God’s mouth.
- American Standard Version (ASV)
- He shall not depart out of darkness; The flame shall dry up his branches, And by the breath of [God’s] mouth shall he go away.
- Bible in Basic English (BBE)
- He does not come out of the dark; his branches are burned by the flame, and the wind takes away his bud.
- Darby Translation (DBY)
- He shall not depart out of darkness; the flame shall dry up his branches; and by the breath of his mouth shall he go away.
- Webster's Bible (WBS)
- He shall not depart out of darkness; the flame shall dry up his branches, and by the breath of his mouth shall he go away.
- Young's Literal Translation (YLT)
- He turneth not aside from darkness, His tender branch doth a flame dry up, And he turneth aside at the breath of His mouth!
Read in context
- 28ಹಾಳಾದ ಪಟ್ಟಣ ಗಳಲ್ಲಿಯೂ ನಿವಾಸಿಗಳು ಇಲ್ಲದಂಥ ದಿಬ್ಬೆಗಳಾ ಗುವದಕ್ಕೆ ಸಿದ್ಧವಾದಂಥ ಮನೆಗಳಲ್ಲಿಯೂ ವಾಸ ಮಾಡುತ್ತಾನೆ.
- 29ಅವನು ಐಶ್ವರ್ಯವಂತನಾಗುವದಿಲ್ಲ; ಅವನ ಆಸ್ತಿ ನಿಲ್ಲುವದಿಲ್ಲ; ಅವನ ಸ್ವಾಸ್ಥ್ಯವು ಭೂಮಿಯ ಮೇಲೆ ವಿಸ್ತಾರವಾಗುವದಿಲ್ಲ.
- 30ಕತ್ತಲೆಯೊಳಗಿಂದ ಅವನು ತೊಲಗುವದಿಲ್ಲ; ಅವನ ಕೊಂಬೆಗಳನ್ನು ಜ್ವಾಲೆಯು ಬಾಡಿಸುವದು; ಅವನ ಬಾಯಿಯ ಶ್ವಾಸ ದಿಂದ ತೊಲಗಿ ಹೋಗುತ್ತಾನೆ.
- 31ಮೋಸ ಹೋದ ವನು ವ್ಯರ್ಥತ್ವವನ್ನು ನಂಬದೇ ಇರಲಿ; ವ್ಯರ್ಥತ್ವವೇ ಅವನ ಪ್ರತಿಫಲವಾಗಿರುವದು.
- 32ಅವನ ಸಮಯಕ್ಕೆ ಮುಂಚೆಯೇ ಅದು ತೀರುವದು; ಅವನ ಕೊಂಬೆಯು ಹಸಿರಾಗುವದಿಲ್ಲ.
Cross references
- Job 4:9 ಯೋಬನು 4:9ದೇವರ ಸಿಡಿತದಿಂದ ಅವರು ನಾಶವಾಗುತ್ತಾರೆ. ಆತನ ಮೂಗಿನ ಉಸಿರಿ ನಿಂದ ಅವರು ಕ್ಷಯಿಸಿಹೋಗುತ್ತಾರೆ,
- Job 15:22 ಯೋಬನು 15:22ಕತ್ತಲೆಯೊಳಗಿಂದ ಹಿಂದಿರುಗು ತ್ತೇನೆಂದು ಅವನು ನಂಬುವದಿಲ್ಲ; ಅವನ ಕತ್ತಿಯು ಅವನಿಗಾಗಿ ಕಾದಿದೆ.
- Job 18:5–6 ಯೋಬನು 18:5–6ಹೌದು, ನಿಶ್ಚಯವಾಗಿ ದುಷ್ಟರ ಬೆಳಕು ಆರಿ ಹೋಗುವದು; ಅವನ ಬೆಂಕಿಯ ಜ್ವಾಲೆಯು ಪ್ರಕಾಶಿ ಸದು. ಬೆಳಕು ಅವನ ಗುಡಾರದಲ್ಲಿ ಕತ್ತಲಾಗುವದು; ಅವನ ದೀಪವು ಅವನ ಕೂಡ ಆರಿ ಹೋಗುವದು
- Matthew 25:41 ಮತ್ತಾಯನು 25:41ಆತನು ಎಡಗಡೆ ಯಲ್ಲಿರುವವರಿಗೆ--ಶಾಪಗ್ರಸ್ತರೇ, ನೀವು ನನ್ನಿಂದ ತೊಲಗಿ ಸೈತಾನನಿಗೂ ಅವನ ದೂತರಿಗೂ ಸಿದ್ಧ ಮಾಡಲ್ಪಟ್ಟ ನಿತ್ಯ ಬೆಂಕಿಯೊಳಗೆ ಹೋಗಿರಿ.
- Job 20:26 ಯೋಬನು 20:26ಎಲ್ಲಾ ಅಂಧಕಾರವು ಅವನ ಗುಪ್ತ ಸ್ಥಳಗಳಲ್ಲಿ ಇಡಲ್ಪಟ್ಟಿದೆ; ಯಾರೂ ಹೊತ್ತಿಸದ ಬೆಂಕಿ ಅವನನ್ನು ತಿನ್ನುವದು; ಅವನ ಗುಡಾರದಲ್ಲಿ ಉಳಿ ದವನು ನಾಶವಾಗುವನು.
- Job 10:21–22 ಯೋಬನು 10:21–22ಆಗ ನಾನು ತಿರುಗಿಕೊಳ್ಳದವನಾಗಿ ಕತ್ತಲೆಯ ದೇಶಕ್ಕೆ, ಮರಣದ ನೆರಳಿಗೆಮರಣದ ನೆರಳಿನ ಅಂಧಕಾರದ ಹಾಗೆ ಮೊಬ್ಬಿರುವ ಕ್ರಮವಿಲ್ಲದ ಪ್ರಕಾಶವೇ ಅಂಧ ಕಾರದ ಹಾಗಿರುವ ದೇಶಕ್ಕೆ ಹೋಗುವದಕ್ಕಿಂತ ಮುಂಚೆ ಸ್ವಲ್ಪ ವಿಶ್ರಮಿಸಿಕೊಳ್ಳುವೆನು. ಮರಣದ ನೆರಳಿನ ಅಂಧಕಾರದ ಹಾಗೆ ಮೊಬ್ಬಿರುವ ಕ್ರಮವಿಲ್ಲದ ಪ್ರಕಾಶವೇ ಅಂಧ ಕಾರದ ಹಾಗಿರುವ ದೇಶಕ್ಕೆ ಹೋಗುವದಕ್ಕಿಂತ ಮುಂಚೆ ಸ್ವಲ್ಪ ವಿಶ್ರಮಿಸಿಕೊಳ್ಳುವೆನು.
- Mark 9:43–49 ಮಾರ್ಕನು 9:43–49ನಿನ್ನ ಕೈ ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದುಹಾಕು; ಯಾಕಂದರೆ ಎರಡು ಕೈಗಳು ಳ್ಳವನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹೋಗುವದಕ್ಕಿಂತ ಅಂಗಹೀನನಾಗಿ ಜೀವದಲ್ಲಿ ಸೇರು ವದು ನಿನಗೆ ಒಳ್ಳೇದು; ಅಲ್ಲಿ ಅವರ ಹುಳವು ಸಾಯುವದಿಲ್ಲ ಮತ್ತು ಬೆಂಕಿಯು ಆರುವದಿಲ್ಲ. ನಿನ್ನ ಕಾಲು ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಡಿದು ಹಾಕು; ಯಾಕಂದರೆ ನೀನು ಎರಡು ಕಾಲುಗಳುಳ್ಳವ ನಾಗಿ ಎಂದಿಗೂ ಆರದ ಬೆಂಕಿಯ ನರಕದೊಳಗೆ ಹಾಕ ಲ್ಪಡುವದಕ್ಕಿಂತ ಕುಂಟನಾಗಿ ಜೀವದಲ್ಲಿ ಸೇರುವದು ನಿನಗೆ ಒಳ್ಳೇದು. ಅಲ್ಲಿ ಅವರ ಹುಳವು ಸಾಯುವ ದಿಲ್ಲ ಮತ್ತು ಬೆಂಕಿಯು ಆರುವದಿಲ್ಲ. ನಿನ್ನ ಕಣ್ಣು ನಿನಗೆ ಅಭ್ಯಂತರ ಮಾಡಿದರೆ ಅದನ್ನು ಕಿತ್ತುಬಿಡು; ಎರಡು ಕಣ್ಣುಗಳುಳ್ಳವನಾಗಿ ನರಕದ ಬೆಂಕಿಯಲ್ಲಿ ಹಾಕ ಲ್ಪಡುವದಕ್ಕಿಂತ ಒಂದು ಕಣ್ಣುಳ್ಳವನಾಗಿ ದೇವರ ರಾಜ್ಯ ದಲ್ಲಿ ಸೇರುವದು ನಿನಗೆ ಒಳ್ಳೇದು. ಅಲ್ಲಿ ಅವರ ಹುಳವು ಸಾಯುವದಿಲ್ಲ ಮತ್ತು ಬೆಂಕಿಯು ಆರುವದಿಲ್ಲ. ಯಾಕಂದರೆ ಪ್ರತಿಯೊಬ್ಬನಿಗೂ ಬೆಂಕಿಯಿಂದ ಸಾರವಾಗಬೇಕು; ಮತ್ತು ಪ್ರತಿಯೊಂದು ಯಜ್ಞಕ್ಕೆ ಉಪ್ಪಿ ನಿಂದ ಸಾರವಾಗಬೇಕು.ಉಪ್ಪು ಒಳ್ಳೆಯದು; ಆದರೆ ಉಪ್ಪು ತನ್ನ ಸಾರವನ್ನು ಕಳೆದುಕೊಂಡರೆ ಇನ್ನಾತರಿಂದ ನೀವು ಅದನ್ನು ರುಚಿಗೊಳಿಸುವಿರಿ? ನಿಮ್ಮೊಳಗೆ ಉಪ್ಪು ಇರಲಿ; ಮತ್ತು ಒಬ್ಬರ ಸಂಗಡಲೊಬ್ಬರು ಸಮಾಧಾನ ವಾಗಿರ್ರಿ ಅಂದನು.
- Matthew 22:13 ಮತ್ತಾಯನು 22:13ತರುವಾಯ ಅರಸನು ಸೇವಕರಿಗೆ--ಅವನ ಕೈ ಕಾಲುಗಳನ್ನು ಕಟ್ಟಿ ತಕ್ಕೊಂಡು ಹೋಗಿ ಹೊರಗೆ ಕತ್ತಲೆಯಲ್ಲಿ ಹಾಕಿರಿ; ಅಲ್ಲಿ ಗೋಳಾಟವೂ ಹಲ್ಲುಕಡಿಯೋಣವೂ ಇರುವವು.
- Isaiah 30:33 ಯೆಶಾಯ 30:33ಪೂರ್ವದಿಂದ (ಪುರಾತನದಿಂದ) ತೋಫೆತ್ ಸಿದ್ಧ ವಾಗಿದೆ; ಹೌದು, ಯಾಕಂದರೆ ಅದು ಆಳವಾಗಿಯೂ ಅಗಲವಾಗಿಯೂ ಅರಸನಿಗೆ ಸಿದ್ಧವಾಗಿದೆ. ಅದರ ಅಗ್ನಿಕುಂಡವು ಬೆಂಕಿಯೂ ಬಹಳ ಕಟ್ಟಿಗೆಯೂ ಉಳ್ಳದ್ದು; ಕರ್ತನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವದು.
- Ezekiel 20:47–48 ಯೆಹೆಜ್ಕೇಲನು 20:47–48ದಕ್ಷಿಣದ ಅರಣ್ಯಕ್ಕೆ ಹೇಳಬೇಕಾದ ದ್ದೇನಂದರೆ--ಕರ್ತನ ವಾಕ್ಯವನ್ನು ಕೇಳು, ದೇವರಾದ ಕರ್ತನು ಹೀಗೆ ಹೇಳುತ್ತಾನೆ--ಇಗೋ, ನಾನು ನಿನ್ನಲ್ಲಿ ಬೆಂಕಿ ಹಚ್ಚುತ್ತೇನೆ; ಅದು ನಿನ್ನಲ್ಲಿರುವ ಎಲ್ಲಾ ಹಸೀ ಮರಗಳನ್ನು ಮತ್ತು ಎಲ್ಲಾ ಒಣಮರಗಳನ್ನು ತಿಂದುಬಿಡುವದು; ಉರಿಯುವ ಉರಿ ಆರಿಹೋಗು ವದಿಲ್ಲ; ದಕ್ಷಿಣ ಮೊದಲುಗೊಂಡು ಉತ್ತರದ ವರೆಗೂ ಎಲ್ಲಾ ಮುಖಗಳು ಅದರಲ್ಲಿ ಸುಟ್ಟು ಹೋಗುವವು. ಕರ್ತನಾದ ನಾನೇ ಅದನ್ನು ಹಚ್ಚಿದೆನೆಂದು ಶರೀರ ದಲ್ಲಿರುವವರೆಲ್ಲರೂ ತಿಳಿದುಕೊಳ್ಳುವರು! ಅದು ಆರಿ ಹೋಗುವ ದಿಲ್ಲ.ಆಗ ನಾನು ಹೇಳಿದ್ದೇನಂದರೆ --ಹಾ, ದೇವರಾದ ಕರ್ತನೇ, ಅವನು ಸಾಮ್ಯಗಳನ್ನು ಹೇಳುವದಿಲ್ಲವೇ ಎಂದು ನನ್ನ ವಿಷಯವಾಗಿ ಹೇಳುತ್ತಾರೆ.
- Job 22:20 ಯೋಬನು 22:20ನಿಶ್ಚಯವಾಗಿ ನಮ್ಮ ಆಸ್ತಿಯು ತೆಗೆ ಯಲ್ಪಡಲಿಲ್ಲ; ಅವರಲ್ಲಿ ಉಳಿದವರನ್ನು ಬೆಂಕಿ ದಹಿಸಿಬಿಡುತ್ತದೆ.
- 2 Peter 2:17 2 ಪೇತ್ರನು 2:17ಇವರು ನೀರಿಲ್ಲದ ಭಾವಿಗಳೂ ಬಿರುಗಾಳಿಯಿಂದ ಬಡಿಸಿಕೊಂಡು ಹಾರಿ ಹೋಗುವ ಮೇಘಗಳೂ ಆಗಿದ್ದಾರೆ. ಇಂಥವರ ಪಾಲಿಗೆ ನಿರಂತರವಾದ ಕಾರ್ಗತ್ತಲು ಇಟ್ಟಿರುವದು.