Job · chapter 15 · verse 31
Job 15:31 in Kannada
ಮೋಸ ಹೋದ ವನು ವ್ಯರ್ಥತ್ವವನ್ನು ನಂಬದೇ ಇರಲಿ; ವ್ಯರ್ಥತ್ವವೇ ಅವನ ಪ್ರತಿಫಲವಾಗಿರುವದು.
Mosa hoda vanu vyarthatvavannu nambade irali; vyarthatvave avana pratiphalavaagiruvadu.
Job 15:31 in English
- King James Version (KJV)
- Let not him that is deceived trust in vanity: for vanity shall be his recompence.
- World English Bible (WEB)
- Let him not trust in emptiness, deceiving himself, for emptiness will be his reward.
- American Standard Version (ASV)
- Let him not trust in vanity, deceiving himself; For vanity shall be his recompense.
- Bible in Basic English (BBE)
- Let him not put his hope in what is false, falling into error: for he will get deceit as his reward.
- Darby Translation (DBY)
- Let him not trust in vanity: he is deceived, for vanity shall be his recompense;
- Webster's Bible (WBS)
- Let not him that is deceived trust in vanity: for vanity shall be his recompense.
- Young's Literal Translation (YLT)
- Let him not put credence in vanity, He hath been deceived, For vanity is his recompence.
Read in context
- 29ಅವನು ಐಶ್ವರ್ಯವಂತನಾಗುವದಿಲ್ಲ; ಅವನ ಆಸ್ತಿ ನಿಲ್ಲುವದಿಲ್ಲ; ಅವನ ಸ್ವಾಸ್ಥ್ಯವು ಭೂಮಿಯ ಮೇಲೆ ವಿಸ್ತಾರವಾಗುವದಿಲ್ಲ.
- 30ಕತ್ತಲೆಯೊಳಗಿಂದ ಅವನು ತೊಲಗುವದಿಲ್ಲ; ಅವನ ಕೊಂಬೆಗಳನ್ನು ಜ್ವಾಲೆಯು ಬಾಡಿಸುವದು; ಅವನ ಬಾಯಿಯ ಶ್ವಾಸ ದಿಂದ ತೊಲಗಿ ಹೋಗುತ್ತಾನೆ.
- 31ಮೋಸ ಹೋದ ವನು ವ್ಯರ್ಥತ್ವವನ್ನು ನಂಬದೇ ಇರಲಿ; ವ್ಯರ್ಥತ್ವವೇ ಅವನ ಪ್ರತಿಫಲವಾಗಿರುವದು.
- 32ಅವನ ಸಮಯಕ್ಕೆ ಮುಂಚೆಯೇ ಅದು ತೀರುವದು; ಅವನ ಕೊಂಬೆಯು ಹಸಿರಾಗುವದಿಲ್ಲ.
- 33ಹಣ್ಣಾಗದ ದ್ರಾಕ್ಷೆಯ ಗಿಡದಂತೆ ತನ್ನ ಕಾಯಿ ಉದುರಿಸಿ ಎಣ್ಣೆಯ ಮರದಂತೆ ತನ್ನ ಹೂವನ್ನು ಚದರಿಸುವನು.
Cross references
- Isaiah 59:4 ಯೆಶಾಯ 59:4ನ್ಯಾಯಕ್ಕೋಸ್ಕರ ಕರೆಯುವವನು ಯಾವನೂ ಇಲ್ಲ; ಇಲ್ಲವೆ ಸತ್ಯಕ್ಕೋಸ್ಕರ ಬೇಡು ವವನು ಒಬ್ಬನೂ ಇಲ್ಲ. ವ್ಯರ್ಥತ್ವದಲ್ಲಿ ವಿಶ್ವಾಸ ಇಡು ತ್ತಾರೆ. ಸುಳ್ಳನ್ನು ಮಾತಾಡುತ್ತಾರೆ; ಕೇಡನ್ನು ಗರ್ಭಧರಿಸಿ ಕೊಳ್ಳುತ್ತಾರೆ ಅಕ್ರಮವನ್ನು ಹೆರುತ್ತಾರೆ.
- Galatians 6:3 ಗಲಾತ್ಯದವರಿಗೆ 6:3ಏನೂ ಅಲ್ಲದವ ನೊಬ್ಬನು ತಾನು ಏನೋ ಆಗಿದ್ದೇನೆಂದು ಭಾವಿಸಿ ಕೊಂಡರೆ ತನ್ನನ್ನು ತಾನೇ ಮೋಸಪಡಿಸಿಕೊಳ್ಳುತ್ತಾನೆ.
- Galatians 6:7–8 ಗಲಾತ್ಯದವರಿಗೆ 6:7–8ಮೋಸ ಹೊಗಬೇಡಿರಿ; ದೇವರು ಪರಿಹಾಸ್ಯ ಮಾಡಲ್ಪಡುವಾತನಲ್ಲ; ಯಾಕಂದರೆ ಮನುಷ್ಯನು ತಾನು ಏನು ಬಿತ್ತುತ್ತಾನೋ ಅದನ್ನೇ ಕೊಯ್ಯಬೇಕು. ತನ್ನ ಶರೀರದಿಂದ ಬಿತ್ತುವವನು ಶರೀರದಿಂದ ನಾಶನವನ್ನು ಕೊಯ್ಯುವನು. ಆದರೆ ಆತ್ಮನಿಂದ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು.
- Psalm 62:10 ಕೀರ್ತನೆಗಳು 62:10ಅನ್ಯಾಯದಲ್ಲಿ ಭರ ವಸವಿಡಬೇಡಿರಿ; ಸುಲಿಗೆಯಲ್ಲಿ ವ್ಯರ್ಥರಾಗಬೇಡಿರಿ; ಆಸ್ತಿಯು ಹೆಚ್ಚಿದರೆ ಅದರ ಮೇಲೆ ಮನಸ್ಸಿಡಬೇಡಿರಿ.
- Hosea 8:7 ಹೋಶೇಯ 8:7ಅವರು ಗಾಳಿಯನ್ನು ಬಿತ್ತಿ ದ್ದಾರೆ; ಬಿರುಗಾಳಿಯನ್ನು ಕೊಯ್ಯುತ್ತಾರೆ. ಅದಕ್ಕೆ ಕಾಂಡ ವಿಲ್ಲ; ಮೊಳಕೆಯು ಆಹಾರವನ್ನು ಕೊಡುವದಿಲ್ಲ. ಒಂದು ವೇಳೆ ಅದು ಕೊಟ್ಟರೂ ಪರಕೀಯರು ಅದನ್ನು ನುಂಗುತ್ತಾರೆ.
- Job 4:8 ಯೋಬನು 4:8ನಾನು ಕಂಡ ಹಾಗೆ ದುಷ್ಟತನವನ್ನು ಉಳುವವರೂ ದುಷ್ಟತನವನ್ನು ಬಿತ್ತುವ ವರೂ ಅದನ್ನೇ ಕೊಯ್ಯುತ್ತಾರೆ.
- Isaiah 44:20 ಯೆಶಾಯ 44:20ಅವನು ತಿನ್ನುವದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿ ತಪ್ಪಿಸಿದ ಕಾರಣ ನನ್ನ ಬಲಗೈಯಲ್ಲಿ ಸುಳ್ಳು ಇದೆಯಲ್ಲಾ ಎಂದು ಅಂದುಕೊಳ್ಳಲೂ ತನ್ನ ಪ್ರಾಣ ವನ್ನು ಕಾಪಾಡಿಕೊಳ್ಳಲೂ ಅವನಿಂದಾಗದು.
- Job 12:16 ಯೋಬನು 12:16ಬಲವೂ ಸುಜ್ಞಾ ನವೂ ಆತನಲ್ಲಿವೆ; ಮೋಸಹೋಗುವವನೂ ಮೋಸ ಗೊಳಿಸುವವನೂ ಆತನವರೇ.
- Proverbs 22:8 ಜ್ಞಾನೋಕ್ತಿಗಳು 22:8ಕೆಟ್ಟತನವನ್ನು ಬಿತ್ತುವವನು ವ್ಯರ್ಥ ವನ್ನು ಕೊಯ್ಯುವನು; ಅವನ ಕೋಪದ ದಂಡವು ಬಿದ್ದುಹೋಗುವದು.
- Jonah 2:8 ಯೋನ 2:8ಸುಳ್ಳಾದ ವ್ಯರ್ಥತ್ವಗಳನ್ನು ಅನುಸರಿಸುವವರು ತಮ್ಮ ಸ್ವಂತ ಕರುಣೆಯನ್ನು ಮರೆತು ಬಿಡುತ್ತಾರೆ.
- Ephesians 5:6 ಎಫೆಸದವರಿಗೆ 5:6ಹುರುಳಿಲ್ಲದ ಮಾತುಗಳಿಂದ ಯಾರೂ ನಿಮ್ಮನ್ನು ಮೋಸಗೊಳಿಸದಿರಲಿ. ಯಾಕಂದರೆ ಇಂಥವುಗಳಿಂದ ದೇವರ ಕೋಪವು ಆತನಿಗೆ ಅವಿಧೇಯರಾದ ಮಕ್ಕಳ ಮೇಲೆ ಬರುತ್ತದೆ.
- Isaiah 17:10–11 ಯೆಶಾಯ 17:10–11ನೀನು ನಿನ್ನ ರಕ್ಷಣೆಯ ದೇವರನ್ನು ಮರೆತು ನಿನ್ನ ಬಲದ ಬಂಡೆ ಯನ್ನು ನೆನಸದೆ ಇದ್ದದರಿಂದ ನೀನು ರಮ್ಯವಾದ ಗಿಡಗಳನ್ನು ಸಸಿಯನ್ನು ನೆಡುವಿ, ಅಪರೂಪವಾದ ಸಸಿಗಳನ್ನು ಹಾಕುವಿ. ಸಸಿಯನ್ನು ಬೆಳೆಸಲು ಬೇಲಿ ಹಾಕಿದ ದಿನದಲ್ಲಿ ಹೊತ್ತಾರೆ ನೀನು ಬಿತ್ತಿದ್ದನ್ನು ಮೊಳೆ ಯುವಂತೆ ಮಾಡುವಿ. ಆದರೆ ಬೆಳೆಯನ್ನು ಕುಪ್ಪೆಯಾಗಿ ಕೂಡಿಸುವ ದಿನವು ವ್ಯಾಧಿಯ ಮತ್ತು ವಿಪರೀತ ವ್ಯಥೆಯ ದಿನವೇ.