Job · chapter 15 · verse 32
Job 15:32 in Kannada
ಅವನ ಸಮಯಕ್ಕೆ ಮುಂಚೆಯೇ ಅದು ತೀರುವದು; ಅವನ ಕೊಂಬೆಯು ಹಸಿರಾಗುವದಿಲ್ಲ.
Avana samayakke muncheye adu teeruvadu; avana kombeyu hasiraaguvadilla.
Job 15:32 in English
- King James Version (KJV)
- It shall be accomplished before his time, and his branch shall not be green.
- World English Bible (WEB)
- It will be accomplished before his time. His branch will not be green.
- American Standard Version (ASV)
- It shall be accomplished before his time, And his branch shall not be green.
- Bible in Basic English (BBE)
- His branch is cut off before its time, and his leaf is no longer green.
- Darby Translation (DBY)
- It shall be complete before his day, and his branch shall not be green.
- Webster's Bible (WBS)
- It shall be accomplished before his time, and his branch shall not be green.
- Young's Literal Translation (YLT)
- Not in his day is it completed, And his bending branch is not green.
Read in context
- 30ಕತ್ತಲೆಯೊಳಗಿಂದ ಅವನು ತೊಲಗುವದಿಲ್ಲ; ಅವನ ಕೊಂಬೆಗಳನ್ನು ಜ್ವಾಲೆಯು ಬಾಡಿಸುವದು; ಅವನ ಬಾಯಿಯ ಶ್ವಾಸ ದಿಂದ ತೊಲಗಿ ಹೋಗುತ್ತಾನೆ.
- 31ಮೋಸ ಹೋದ ವನು ವ್ಯರ್ಥತ್ವವನ್ನು ನಂಬದೇ ಇರಲಿ; ವ್ಯರ್ಥತ್ವವೇ ಅವನ ಪ್ರತಿಫಲವಾಗಿರುವದು.
- 32ಅವನ ಸಮಯಕ್ಕೆ ಮುಂಚೆಯೇ ಅದು ತೀರುವದು; ಅವನ ಕೊಂಬೆಯು ಹಸಿರಾಗುವದಿಲ್ಲ.
- 33ಹಣ್ಣಾಗದ ದ್ರಾಕ್ಷೆಯ ಗಿಡದಂತೆ ತನ್ನ ಕಾಯಿ ಉದುರಿಸಿ ಎಣ್ಣೆಯ ಮರದಂತೆ ತನ್ನ ಹೂವನ್ನು ಚದರಿಸುವನು.
- 34ಕಪಟಿಗಳ ಸಭೆಯು ಹಾಳಾಗುವದು; ಲಂಚದ ಗುಡಾರಗಳನ್ನು ಬೆಂಕಿಯು ಸುಡುವದು.ಅವರು ಕೇಡಿನಿಂದ ಬಸುರಾಗಿ ವ್ಯರ್ಥತ್ವ ವನ್ನು ಹೆರುವರು; ಅವರ ಗರ್ಭವು ಮೋಸವನ್ನು ಸಿದ್ಧಮಾಡುವದು.
Cross references
- Ecclesiastes 7:17 ಪ್ರಸಂಗಿ 7:17ನೀನು ಅತಿ ಯಾಗಿ ದುಷ್ಟನಾಗಿರಬೇಡ; ಇಲ್ಲವೆ ಮೂರ್ಖನಾಗಿರ ಬೇಡ; ನಿನ್ನ ಸಮಯಕ್ಕಿಂತ ಮೊದಲು ನೀನು ಯಾಕೆ ಸಾಯುವಿ?
- Psalm 55:23 ಕೀರ್ತನೆಗಳು 55:23ಓ ದೇವರೇ, ನೀನು ಅವರನ್ನು ನಾಶನದ ಕುಣಿಯಲ್ಲಿ ಇಳಿಯ ಮಾಡುವಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಯದ ದಿವಸಗಳಲ್ಲಿ ಅರ್ದದಷ್ಟಾದರೂ ಜೀವಿ ಸುವದಿಲ್ಲ; ನಾನು ನಿನ್ನಲ್ಲಿ ಭರವಸವಿಡುತ್ತೇನೆ.
- Hosea 9:16 ಹೋಶೇಯ 9:16ಎಫ್ರಾಯಾಮ್ಯರು ಹೊಡೆಯಲ್ಪಟ್ಟಿದ್ದಾರೆ, ಅವರ ಬೇರು ಒಣಗಿ ಹೋಗಿದೆ, ಅವರು ಫಲವನ್ನು ಕೊಡುವದಿಲ್ಲ; ಹೌದು, ಅವರು ಹೆತ್ತರೂ ಅವರ ಗರ್ಭದ ಪ್ರಿಯಕರವಾದ ಫಲವನ್ನು ಸಹ ನಾನು ಕೊಲ್ಲುವೆನು.ನನ್ನ ದೇವರು ಅವರನ್ನು ತಳ್ಳಿಬಿಡುವನು; ಅವರು ಆತನಿಗೆ ಕಿವಿಗೊಡಲಿಲ್ಲ; ಅವರು ಜನಾಂಗಗಳಲ್ಲಿ ಅಲೆದಾಡುವವರಾಗಿರುವರು.
- Job 22:16 ಯೋಬನು 22:16ಅವರು ಆ ಕಾಲ ದಲ್ಲಿ ಕಡಿಯಲ್ಪಟ್ಟರು; ಅವರ ಅಸ್ತಿವಾರವು ಪ್ರವಾಹ ದಲ್ಲಿ ಕೊರೆದು ಹೋಯಿತು.
- Job 14:7–9 ಯೋಬನು 14:7–9ಮರಕ್ಕೆ ನಿರೀಕ್ಷೆಯುಂಟು; ಅದು ಕೊಯ್ಯಲ್ಪಟ್ಟರೆ ಮತ್ತೆ ಚಿಗುರುವದು. ಚಿಗುರುವದನ್ನು ನಿಲ್ಲಿಸುವದೇ ಇಲ್ಲ. ಅದರ ಬೇರು ಭೂಮಿಯಲ್ಲಿ ಹಳೆಯದಾದರೂ ನೆಲದಲ್ಲಿ ಅದರ ಬುಡವು ಸತ್ತರೂ ನೀರಿನ ವಾಸನೆಯಿಂದ ಚಿಗುರಿ ಸಸಿಯ ಹಾಗೆ ಕೊಂಬೆ ಗಳನ್ನು ಬಿಡುವದು.
- Ezekiel 17:8–10 ಯೆಹೆಜ್ಕೇಲನು 17:8–10ಅದು ಕೊಂಬೆ ಗಳನ್ನು ಬೆಳೆಸಿ ಫಲಫಲಿಸುವ ಹಾಗೆಯೂ ಒಳ್ಳೇ ದ್ರಾಕ್ಷೇಗಿಡ ಆಗುವ ಹಾಗೆಯೂ ಒಳ್ಳೇ ಭೂಮಿಯಲ್ಲಿ ಹೆಚ್ಚು ನೀರಿನ ಬಳಿಯಲ್ಲಿ ಬೆಳೆಸಲ್ಪಟ್ಟಿತು. ನೀನು ಹೇಳಬೇಕಾದದ್ದೇನಂದರೆ -- ದೇವರಾದ ಕರ್ತನು ಹೀಗೆ ಹೇಳುತ್ತಾನೆ. ಅದು ಸಮೃದ್ಧಿಯಾಗಿ ರುವದೋ? ಆ ಹದ್ದು ಅದರ ಬೇರುಗಳನ್ನು ಕಿತ್ತು ಅದರ ಹಣ್ಣುಗಳನ್ನು ತೆಗೆದುಬಿಟ್ಟರೆ ಅದು ಒಣಗುವದಿಲ್ಲವೇ? ಅದರ ಮೊಳಕೆಯ ಎಲೆಗಳೆಲ್ಲಾ ಒಣಗಿಹೋದಾಗ ಅದನ್ನು ಬೇರು ಸಹಿತ ಕೀಳಬೇಕಾದರೆ ಮಹಾಬಲವಾಗಲೀ ಅಥವಾ ಬಹಳ ಜನರಾಗಲೀ ಇರಬೇಕು. ಹೌದು, ಇಗೋ, ನೆಟ್ಟಿರಲಾಗಿ ಅದು ಸಮೃದ್ಧಿಯಾಗಿರುವದೇ? ಅದಕ್ಕೆ ಮೂಡಣಗಾಳಿ ತಗಲುವಾಗ ಅದು ಸಂಪೂರ್ಣ ವಾಗಿ ಒಣಗುವದಿಲ್ಲವೇ? ಅದು ಮೊಳೆತ ಪಾತಿಗಳ ಲ್ಲಿಯೇ ಒಣಗಿಹೋಗುವದು.
- Hosea 14:5–7 ಹೋಶೇಯ 14:5–7ಇಸ್ರಾಯೇಲಿಗೆ ನಾನು ಮಂಜಿನ ಹಾಗೆ ಇರುವೆನು. ಅವನು ತಾವರೆಯ ಹಾಗೆ ಬೆಳೆಯುವನು; ತನ್ನ ಬೇರುಗಳನ್ನು ಲೆಬನೋನಿನ ಹಾಗೆ ಹರಡುವನು. ಅವನ ಕೊಂಬೆಗಳು ಹರಡಿಕೊಂಡು ಅವನ ಸೌಂದರ್ಯವು ಎಣ್ಣೆಯ ಮರಗಳ ಹಾಗೆಯೂ ಅವನ ಪರಿಮಳವು ಲೆಬನೋನಿನ ಹಾಗೆಯೂ ಇರುವದು. ಆತನ ನೆರಳಿನಲ್ಲಿ ವಾಸಿಸುವವರು ಹಿಂತಿರುಗುವರು; ಧಾನ್ಯದ ಹಾಗೆ ಉಜ್ಜೀವಿಸುವರು; ದ್ರಾಕ್ಷೆಯ ಬಳ್ಳಿಯ ಹಾಗೆ ಬೆಳೆಯು ವರು. ಅವನ ಸುವಾಸನೆಯು ಲೆಬನೋನಿನ ದ್ರಾಕ್ಷಾ ರಸದ ಹಾಗೆ ಇರುವದು.
- Job 18:16–17 ಯೋಬನು 18:16–17ಕೆಳಗಿನಿಂದ ಅವನ ಬೇರುಗಳು ಒಣ ಗುವವು; ಮೇಲಿನಿಂದ ಅವನ ಕೊಂಬೆಯು ಕೊಯ್ಯ ಲ್ಪಡುವದು; ಅವನ ಜ್ಞಾಪಕವು ದೇಶದೊಳಗಿಂದ ನಾಶವಾಗುವದು; ಬೀದಿಗಳಲ್ಲಿ ಅವನಿಗೆ ಹೆಸರು ಇಲ್ಲದೆ ಇರುವದು.
- Job 8:16–19 ಯೋಬನು 8:16–19ಸೂರ್ಯನ ಮುಂದೆ ಅವನು ಹಸುರಾಗಿದ್ದಾನೆ; ಅವನ ಬಳ್ಳಿಯು ಅವನ ತೋಟದಲ್ಲಿ ಹಬ್ಬುವದು. ಅವನ ಬೇರುಗಳು ರಾಶಿಯ ಮೇಲೆ ಸುತ್ತಿ ಕಲ್ಲಿನ ಸ್ಥಳವನ್ನು ಕಾಣುತ್ತವೆ. ಅವನನ್ನು ಅವನ ಸ್ಥಳದಿಂದ ಕಿತ್ತಿದರೆ ಅದು--ನಾನು ನಿನ್ನನ್ನು ನೋಡಲಿಲ್ಲವೆಂದು ಅವನನ್ನು ಬೊಂಕುವದು; ಇಗೋ, ಇದು ಅವನ ಮಾರ್ಗದ ಆನಂದವು. ಆದರೆ ಭೂಮಿಯೊಳಗಿನಿಂದ ಬೇರೆಯವರು ಮೊಳೆಯುವರು.
- Isaiah 27:11 ಯೆಶಾಯ 27:11ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿ ಯಲ್ಪಡುವವು, ಹೆಂಗಸರು ಬಂದು ಅವುಗಳಿಂದ ಬೆಂಕಿ ಹಚ್ಚಿ ಉರಿಸುವರು; ಅದು ವಿವೇಕವುಳ್ಳ ಜನ ವಲ್ಲ. ಆದದರಿಂದ ಅವರನ್ನು ಮಾಡಿದವನು ಅವರಿಗೆ ಕನಿಕರ ತೋರಿಸುವದಿಲ್ಲ. ಅವರನ್ನು ರೂಪಿಸಿದಾತನು ಅವರನ್ನು ಕರುಣಿಸುವದಿಲ್ಲ.
- Psalm 52:5–8 ಕೀರ್ತನೆಗಳು 52:5–8ಆದದರಿಂದ ದೇವರು ಅದೇ ರೀತಿಯಲ್ಲಿ ನಿನ್ನನ್ನು ಸದಾಕಾಲಕ್ಕೂ ನಾಶಮಾಡಿ, ತೆಗೆದುಬಿಡುವನು. ನಿನ್ನ ವಾಸಸ್ಥಳದಿಂದ ಕಿತ್ತುಹಾಕುವನು; ಜೀವಿತರ ದೇಶ ದೊಳಗಿಂದ ನಿನ್ನನ್ನು ಬೇರುಸಹಿತ ಕೀಳುವನು. ಸೆಲಾ. ನೀತಿವಂತರು ಸಹ ಭಯಪಟ್ಟು ಅವನನ್ನು ನೋಡಿ ನಗುವರು. ಇಗೋ, ದೇವರನ್ನು ತನ್ನ ಬಲವಾಗಿ ಆಶ್ರಯಿಸದೆ ತನ್ನ ಅಧಿಕವಾದ ಐಶ್ವರ್ಯದಲ್ಲಿ ಭರವಸವಿಟ್ಟು ತನ್ನ ಕೆಟ್ಟತನದಲ್ಲಿ ಬಲಗೊಂಡ ಮನುಷ್ಯನು ಇವನೇ. ಆದರೆ ನಾನು ದೇವರ ಆಲಯದಲ್ಲಿರುವ ಹಸು ರಾದ ಇಪ್ಪೇ ಮರದಹಾಗೆ ಇದ್ದೇನೆ. ದೇವರ ಕರು ಣೆಯಲ್ಲಿ ಯುಗಯುಗಾಂತರಗಳಲ್ಲಿಯೂ ನಾನು ಭರವಸವಿಟ್ಟಿದ್ದೇನೆ.ನಾನು ಎಂದೆಂದಿಗೂ ನಿನ್ನನ್ನು ಕೊಂಡಾಡುವೆನು; ನೀನು ಅದನ್ನು ಮಾಡಿದಿ; ನಿನ್ನ ಹೆಸರನ್ನು ನಿರೀಕ್ಷಿಸುವೆನು; ನಿನ್ನ ಪರಿಶುದ್ಧರ ಮುಂದೆ ಅದು ಒಳ್ಳೇದಾಗಿದೆ.
- John 15:6 ಯೋಹಾನನು 15:6ಒಬ್ಬನು ನನ್ನಲ್ಲಿ ನೆಲೆಗೊಂಡಿರದಿದ್ದರೆ ಅವನು ಕೊಂಬೆಯಂತೆ ಬಿಸಾಡಲ್ಪಟ್ಟು ಒಣಗಿ ಹೋಗುವದರಿಂದ ಜನರು ಅವುಗಳನ್ನು ಕೂಡಿಸಿ ಬೆಂಕಿಯೊಳಗೆ ಹಾಕುವರು; ಅವು ಸುಡಲ್ಪಡುವವು.