Job · chapter 15 · verse 5
Job 15:5 in Kannada
ನಿನ್ನ ಬಾಯಿ ನಿನ್ನ ಅಕ್ರಮವನ್ನು ಬೋಧಿಸುತ್ತದೆ; ನೀನು ಕುಯುಕ್ತಿಯುಳ್ಳವರ ನಾಲಿಗೆಯನ್ನು ಆದುಕೊಳ್ಳುತ್ತೀ.
Ninna baayi ninna akramavannu bodhisuttade; neenu kuyuktiyullavara naaligeyannu aadukolluttee.
Job 15:5 in English
- King James Version (KJV)
- For thy mouth uttereth thine iniquity, and thou choosest the tongue of the crafty.
- World English Bible (WEB)
- For your iniquity teaches your mouth, and you choose the language of the crafty.
- American Standard Version (ASV)
- For thine iniquity teacheth thy mouth, And thou choosest the tongue of the crafty.
- Bible in Basic English (BBE)
- For your mouth is guided by your sin, and you have taken the tongue of the false for yourself.
- Darby Translation (DBY)
- For thy mouth uttereth thine iniquity, and thou hast chosen the tongue of the crafty.
- Webster's Bible (WBS)
- For thy mouth uttereth thy iniquity, and thou choosest the tongue of the crafty.
- Young's Literal Translation (YLT)
- For thy mouth teacheth thine iniquity, And thou chooseth the tongue of the subtile.
Read in context
- 3ನಿಷ್ಪ್ರಯೋಜನವಾದ ನುಡಿಗಳಿಂದಲೂ ಕೆಲಸಕ್ಕೆ ಬಾರದ ಮಾತುಗಳಿಂದಲೂ ವಾದಿಸುವನೋ?
- 4ಹೌದು, ನೀನು ಭಯವನ್ನು ವಿಸರ್ಜಿಸಿ ದೇವರ ಮುಂದಿನ ಧ್ಯಾನವನ್ನು ಕಡಿಮೆಮಾಡುತ್ತೀ.
- 5ನಿನ್ನ ಬಾಯಿ ನಿನ್ನ ಅಕ್ರಮವನ್ನು ಬೋಧಿಸುತ್ತದೆ; ನೀನು ಕುಯುಕ್ತಿಯುಳ್ಳವರ ನಾಲಿಗೆಯನ್ನು ಆದುಕೊಳ್ಳುತ್ತೀ.
- 6ನಾನಲ್ಲ, ನಿನ್ನ ಬಾಯಿ ಖಂಡಿಸುತ್ತದೆ; ಹೌದು, ನಿನ್ನ ತುಟಿಗಳು ನಿನಗೆ ವಿರೋಧವಾಗಿ ಸಾಕ್ಷಿ ಕೊಡುತ್ತವೆ.
- 7ನೀನು ಮೊದಲನೆಯ ಮನುಷ್ಯನಾಗಿ ಹುಟ್ಟಿ ದ್ದೀಯೋ? ಗುಡ್ಡಗಳಿಗಿಂತ ಮುಂಚೆ ಉಂಟಾದಿಯೋ?
Cross references
- James 1:26 ಯಾಕೋಬನು 1:26ನಿಮ್ಮಲ್ಲಿ ಭಕ್ತನೆಂದೆ ಣಿಸಿಕೊಳ್ಳುವ ಯಾವನಾದರೂ ತನ್ನ ನಾಲಿಗೆಗೆ ಕಡಿವಾಣವನ್ನು ಹಾಕದೆ ತನ್ನ ಹೃದಯವನ್ನು ಮೋಸ ಗೊಳಿಸುವವನಾದರೆ ಅವನ ಭಕ್ತಿ ನಿಷ್ಪ್ರಯೋಜನ ವಾಗಿದೆ.ಸಂಕಟದಲ್ಲಿ ಬಿದ್ದ ದಿಕ್ಕಿಲ್ಲದವರನ್ನೂ ವಿಧವೆ ಯರನ್ನೂ ಪರಾಮರಿಸಿ ತನಗೆ ಪ್ರಪಂಚದ ದೋಷವು ಹತ್ತದಂತೆ ನೋಡಿಕೊಂಡಿರುವದೇ ತಂದೆಯಾದ ದೇವರ ಸನ್ನಿಧಾನದಲ್ಲಿ ಶುದ್ಧವೂ ನಿರ್ಮಲವೂ ಆಗಿರುವ ಭಕ್ತಿ.
- Jeremiah 9:3–5 ಯೆರೆಮೀಯ 9:3–5ಅವರು ತಮ್ಮ ನಾಲಿಗೆಗಳನ್ನು ಬಿಲ್ಲಿನಂತೆ ಸುಳ್ಳುಗಳಿಗಾಗಿ ಬೊಗ್ಗಿಸುತ್ತಾರೆ. ಆದರೆ ಭೂಮಿಯಲ್ಲಿ ಸತ್ಯಕ್ಕಾಗಿ ಬಲಿಷ್ಠರಾಗುವದಿಲ್ಲ; ಅವರು ಕೇಡಿನಿಂದ ಕೇಡಿಗೆ ಹೋಗುತ್ತಾ ನನ್ನನ್ನು ಅರಿಯದೆ ಇದ್ದಾರೆಂದು ಕರ್ತನು ಅನ್ನುತ್ತಾನೆ. ನಿಮ್ಮ ನಿಮ್ಮ ನೆರೆಯವರಿಗೆ ಎಚ್ಚರಿಕೆಯಾಗಿರಿ; ಯಾವ ಸಹೋದರ ನಲ್ಲಾದರೂ ನಂಬಿಕೆ ಇಡಬೇಡಿರಿ; ಸಹೋದರರೆಲ್ಲರೂ ಸಂಪೂರ್ಣವಾಗಿ ಮೋಸಮಾಡುವರು, ನೆರೆಯವ ರೆಲ್ಲರು ಚಾಡಿಹೇಳುತ್ತಾ ತಿರುಗಾಡುವರು. ತಮ್ಮ ತಮ್ಮ ನೆರೆಯವರಿಗೆ ವಂಚನೆಮಾಡಿ ಸತ್ಯವನ್ನು ಮಾತಾ ಡರು; ಸುಳ್ಳುಗಳನ್ನು ಹೇಳುವದಕ್ಕೆ ಅವರು ತಮ್ಮ ನಾಲಿಗೆಗೆ ಬೋಧಿಸಿದ್ದಾರೆ. ಅಕ್ರಮ ಮಾಡುವದಕ್ಕೆ ಪ್ರಯಾಸಪಡುತ್ತಾರೆ. 6
- Jeremiah 9:8 ಯೆರೆಮೀಯ 9:8ಅವರ ನಾಲಿಗೆ ಎಸೆದ ಬಾಣದಂತಿದೆ, ಅದು ಮೋಸವನ್ನಾಡುತ್ತದೆ. ತನ್ನ ಬಾಯಿಂದ ತನ್ನ ನೆರೆಯವರ ಸಂಗಡ ಸಮಾಧಾನವಾಗಿ ಮಾತನಾಡಿ ಹೃದಯದಲ್ಲಿ ಅವನಿಗೆ ಹೊಂಚುಹಾಕುತ್ತಾನೆ.
- Luke 6:45 ಲೂಕನು 6:45ಒಳ್ಳೇಮನುಷ್ಯನು ತನ್ನ ಹೃದಯದ ಒಳ್ಳೇಬೊಕ್ಕಸದಿಂದ ಒಳ್ಳೆಯದನ್ನೇ ಹೊರಗೆ ತರುತ್ತಾನೆ; ಆದರೆ ಕೆಟ್ಟಮನುಷ್ಯನು ತನ್ನ ಹೃದಯದ ಕೆಟ್ಟಬೊಕ್ಕಸದಿಂದ ಕೆಟ್ಟದ್ದನ್ನೇ ಹೊರಗೆ ತರುತ್ತಾನೆ. ಯಾಕಂದರೆ ಹೃದಯದ ಸಮೃದ್ಧಿಯಿಂದ ಅವನ ಬಾಯಿ ಮಾತನಾಡುತ್ತದೆ.
- James 3:5–8 ಯಾಕೋಬನು 3:5–8ಹಾಗೆಯೇ ನಾಲಿಗೆಯು ಕೂಡ ಚಿಕ್ಕ ಅಂಗವಾಗಿದ್ದರೂ ದೊಡ್ಡ ಕಾರ್ಯಗಳನ್ನು ಕೊಚ್ಚಿಕೊಳ್ಳುತ್ತದೆ. ಇಗೋ, ಎಷ್ಟು ಕೊಂಚ ಕಿಚ್ಚು ದೊಡ್ಡ ಕಾಡನ್ನು ಸುಡುತ್ತದೆ ನೋಡಿರಿ. ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ. ಮನುಷ್ಯ ಜಾತಿಯು ಸಕಲ ವಿಧವಾದ ಮೃಗ, ಪಕ್ಷಿ, ಸರ್ಪ, ಜಲಚರಗಳನ್ನು ಹತೋಟಿಗೆ ತರುವದುಂಟು ಮತ್ತು ತಂದದ್ದುಂಟು. ಆದರೆ ನಾಲಿಗೆಯನ್ನು ಯಾವ ಮಾನವನೂ ಹತೋ ಟಿಗೆ ತರಲಾರನು. ಅದು ಸ್ವಾಧೀನವಾಗದ ಕೆಡುಕಾ ಗಿದೆ; ಮರಣಕರವಾದ ವಿಷದಿಂದ ತುಂಬಿ ಇದೆ.
- Psalm 52:2–4 ಕೀರ್ತನೆಗಳು 52:2–4ಮೋಸ ಮಾಡುವ ಹದವಾದ ಕತ್ತಿಯ ಹಾಗೆ ನಿನ್ನ ನಾಲಿಗೆಯು ಕೇಡುಗಳನ್ನು ಕಲ್ಪಿಸುತ್ತದೆ. ಒಳ್ಳೇದಕ್ಕಿಂತ ಕೆಟ್ಟದ್ದನ್ನೂ ನೀತಿಯನ್ನು ಮಾತನಾಡುವದಕ್ಕಿಂತ ಸುಳ್ಳನ್ನೂ ಪ್ರೀತಿ ಮಾಡುತ್ತೀ ಸೆಲಾ. ಓ ಮೋಸದ ನಾಲಿಗೆಯೇ, ನೀನು ನುಂಗಿಬಿಡುವ ಮಾತುಗಳನ್ನೆಲ್ಲಾ ಪ್ರೀತಿ ಮಾಡುತ್ತೀ.
- Psalm 50:19–20 ಕೀರ್ತನೆಗಳು 50:19–20ನೀನು ನಿನ್ನ ಬಾಯನ್ನು ಕೇಡಿಗೆ ಒಪ್ಪಿಸುತ್ತೀ; ನಿನ್ನ ನಾಲಿಗೆಯು ಮೋಸವನ್ನು ಜೋಡಿಸುತ್ತದೆ. ನೀನು ಕೂತು ಕೊಂಡು ನಿನ್ನ ಸಹೋದರನಿಗೆ ವಿರೋಧವಾಗಿ ನುಡಿ ಯುತ್ತೀ; ನಿನ್ನ ಸ್ವಂತ ಒಡಹುಟ್ಟಿದವನ ಮೇಲೆ ಚಾಡಿ ಹೇಳುತ್ತೀ.
- Psalm 120:2–3 ಕೀರ್ತನೆಗಳು 120:2–3ಓ ಕರ್ತನೇ, ನನ್ನ ಪ್ರಾಣವನ್ನು ಸುಳ್ಳು ತುಟಿಯಿಂದಲೂ ಮೋಸದ ನಾಲಿಗೆಯಿಂದಲೂ ಬಿಡಿಸು. ಸುಳ್ಳಿನ ನಾಲಿಗೆಯೇ, ದೇವರು ನಿನಗೇನು ಮಾಡ ಬೇಕು? ಆತನು ನಿನಗೇನು ಕೊಡಬೇಕು?
- Job 9:22–24 ಯೋಬನು 9:22–24ಇದೊಂದು ವಿಷಯ ಆದದರಿಂದ ನಾನು ಅದನ್ನು ಹೇಳಿದ್ದೇನೆ. ಪರಿಪೂರ್ಣರನ್ನೂ ಕೆಟ್ಟ ವರನ್ನೂ ಆತನು ನಾಶಮಾಡುತ್ತಾನೆ. ಕೊರಡೆಯು ಫಕ್ಕನೆ ಕೊಂದರೆ, ನಿರಪರಾಧಿಗಳ ಪರೀಕ್ಷೆಗೆ ಅವನು ಗೇಲಿ ಮಾಡುತ್ತಾನೆ. ಲೋಕವು ಕೆಟ್ಟವನ ಕೈಯಲ್ಲಿ ಕೊಡಲ್ಪಟ್ಟಿದೆ. ಅದರ ನ್ಯಾಯಾಧಿಪತಿಗಳ ಮುಖಗ ಳನ್ನು ಆತನು ಮುಚ್ಚುತ್ತಾನೆ. ಇಲ್ಲವಾದರೆ ಆತನು ಎಲ್ಲಿರುತ್ತಿದ್ದನೋ? ಯಾರಾಗಿರುತ್ತಿದ್ದನೋ?
- Job 5:13 ಯೋಬನು 5:13ಜ್ಞಾನಿಗಳನ್ನು ಅವರ ಯುಕ್ತಿಯಲ್ಲಿ ಹಿಡಿಯುತ್ತಾನೆ--ಮೂರ್ಖರ ಆಲೋಚನೆ ಉರುಳಿ ಬೀಳುವದು.
- Psalm 64:3 ಕೀರ್ತನೆಗಳು 64:3ಅವರು ತಮ್ಮ ನಾಲಿಗೆಯನ್ನು ಕತ್ತಿಯ ಹಾಗೆ ಮಸೆಯುತ್ತಾರೆ. ಕಹಿ ಮಾತುಗಳೆಂಬ ಬಾಣಗಳನ್ನು ಹೂಡುತ್ತಾರೆ.
- Mark 7:21–22 ಮಾರ್ಕನು 7:21–22ಯಾಕಂದರೆ ಮನುಷ್ಯರ ಹೃದಯದೊಳಗಿಂದ ಹೊರಡುವಂಥದ್ದು ಅಂದರೆ ಕೆಟ್ಟಆಲೋಚನೆಗಳು ವ್ಯಭಿಚಾರಗಳು ಹಾದರಗಳು ಕೊಲೆಗಳು ಕಳ್ಳತನಗಳು ದುರಾಶೆ ಕೆಟ್ಟತನ ಮೋಸ ಕಾಮಾಭಿಲಾಷೆ ಕೆಟ್ಟದೃಷಿ ದೇವದೂಷಣೆ ಗರ್ವ ಬುದ್ಧಿಗೇಡಿತನ