Job · chapter 15 · verse 9
Job 15:9 in Kannada
ನಮಗೆ ತಿಳಿಯದೆ ಇರುವದನ್ನು ನೀನು ಏನು ತಿಳುಕೊಂಡಿರುವಿ? ನಮ್ಮಲ್ಲಿ ಇಲ್ಲದ್ದೇನು ಗ್ರಹಿಸಿದಿ?
Namage tiliyade iruvadannu neenu enu tilukondiruvi? Nammalli illaddenu grahisidi?
Job 15:9 in English
- King James Version (KJV)
- What knowest thou, that we know not? [what] understandest thou, which [is] not in us?
- World English Bible (WEB)
- What do you know that we don’t know? What do you understand which is not in us?
- American Standard Version (ASV)
- What knowest thou, that we know not? What understandest thou, which is not in us?
- Bible in Basic English (BBE)
- What knowledge have you which we have not? is there anything in your mind which is not in ours?
- Darby Translation (DBY)
- What knowest thou that we know not? [what] understandest thou which is not in us?
- Webster's Bible (WBS)
- What knowest thou that we know not? [what] understandest thou, which [is] not in us?
- Young's Literal Translation (YLT)
- What hast thou known, and we know not? Understandest thou — and it is not with us?
Read in context
- 7ನೀನು ಮೊದಲನೆಯ ಮನುಷ್ಯನಾಗಿ ಹುಟ್ಟಿ ದ್ದೀಯೋ? ಗುಡ್ಡಗಳಿಗಿಂತ ಮುಂಚೆ ಉಂಟಾದಿಯೋ?
- 8ದೇವರ ಗುಟ್ಟನ್ನು ಕೇಳಿದ್ದೀಯೋ? ಜ್ಞಾನವನ್ನು ನಿನಗೆ ನೀನೇ ಇಟ್ಟುಕೊಂಡಿದ್ದೀಯೋ?
- 9ನಮಗೆ ತಿಳಿಯದೆ ಇರುವದನ್ನು ನೀನು ಏನು ತಿಳುಕೊಂಡಿರುವಿ? ನಮ್ಮಲ್ಲಿ ಇಲ್ಲದ್ದೇನು ಗ್ರಹಿಸಿದಿ?
- 10ನೆರೆಯವರೂ ಬಹಳ ಮುದುಕರೂ ನಿನ್ನ ತಂದೆಗಿಂತ ಬಹಳ ದೊಡ್ಡವರೂ ನಮ್ಮಲ್ಲಿದ್ದಾರೆ.
- 11ದೇವರ ಆದರಣೆಗಳು ನಿನಗೆ ಅಲ್ಪವೋ? ಗುಪ್ತವಾದದ್ದು ನಿನಗೆ ಏನಾದರೂ ಇದೆಯೋ?
Cross references
- Job 13:2 ಯೋಬನು 13:2ನೀವು ತಿಳಿದುಕೊಳ್ಳುವ ಪ್ರಕಾರ ನಾನೂ ತಿಳಿದು ಕೊಂಡಿದ್ದೇನೆ; ನಾನು ನಿಮಗಿಂತ ಕಡಿಮೆಯಾದವನಲ್ಲ.
- 2 Corinthians 11:5 2 ಕೊರಿಂಥದವರಿಗೆ 11:5ಅತಿ ಶ್ರೇಷ್ಠರಾದ ಅಪೊಸ್ತಲರೆನಿಸಿಕೊಳ್ಳು ವವರಿಗಿಂತ ನಾನು ಒಂದರಲ್ಲಾದರೂ ಕಡಿಮೆಯಾದ ವನಲ್ಲವೆಂದು ಭಾವಿಸುತ್ತೇನೆ.
- Job 12:3 ಯೋಬನು 12:3ನಿಮ್ಮ ಹಾಗೆಯೇ ನನಗೂ ಸಹ ತಿಳುವಳಿಕೆ ಉಂಟು; ನಾನು ನಿಮಗಿಂತ ಕಡಿಮೆ ಇಲ್ಲ. ಹೌದು, ಇಂಥಾ ಮಾತುಗಳನ್ನು ತಿಳಿಯದಿರುವವನು ಯಾರು?
- Job 26:3–4 ಯೋಬನು 26:3–4ಜ್ಞಾನವಿಲ್ಲದವನಿಗೆ ಏನು ಆಲೋಚನೆ ಹೇಳಿದಿ? ಇದ್ದಂತೆ ಇರುವದನ್ನು ನೀನು ಬಹಳ ವಾಗಿ ಬೋಧಿಸಿದಿಯಲ್ಲಾ; ಯಾವನ ಸಂಗಡ ಮಾತನಾಡುತ್ತೀ? ಯಾವನ ಶ್ವಾಸವು ನಿನ್ನಿಂದ ಹೊರಡುತ್ತದೆ?
- 2 Corinthians 10:7 2 ಕೊರಿಂಥದವರಿಗೆ 10:7ನೀವು ಹೊರಗಿನ ತೋರಿಕೆಗಳನ್ನೇ ನೋಡು ತ್ತೀರೋ? ಯಾವನಾದರೂ ತನ್ನನ್ನು ಕ್ರಿಸ್ತನವನೆಂದು ನಂಬಿಕೊಂಡರೆ ಅವನು ತಿರಿಗಿ ಆಲೋಚನೆ ಮಾಡಿಕೊಂಡು ತಾನು ಹೇಗೆ ಕ್ರಿಸ್ತನವನೋ ಹಾಗೆ ನಾವೂ ಕ್ರಿಸ್ತನವರೆಂದು ಆಲೋಚಿಸಲಿ.
- 2 Corinthians 11:21–30 2 ಕೊರಿಂಥದವರಿಗೆ 11:21–30ನಾವು ಬಲವಿಲ್ಲದವರೋ ಎಂಬಂತೆ ಅವ ಮಾನದ ವಿಷಯವಾಗಿ ನಾನು ಮಾತನಾಡುತ್ತೇನೆ. ಹೇಗಿದ್ದರೂ ಯಾವನಾದರೂ ಧೈರ್ಯವುಳ್ಳವ ನಾಗಿದ್ದರೆ (ನಾನು ಬುದ್ಧಿಹೀನನಂತೆ ಮಾತ ನಾಡುತ್ತೇನೆ) ನಾನು ಸಹ ಧೈರ್ಯವುಳ್ಳವನಾಗಿದ್ದೇನೆ. ಅವರು ಇಬ್ರಿಯರೋ? ನಾನೂ ಇಬ್ರಿಯನು; ಅವರು ಇಸ್ರಾಯೇಲ್ಯರೊ? ನಾನೂ ಇಸ್ರಾಯೇ ಲ್ಯನು; ಅವರು ಅಬ್ರಹಾಮನ ವಂಶದವರೋ? ನಾನೂ ಅದೇ ವಂಶದವನು; ಅವರು ಕ್ರಿಸ್ತನ ಸೇವಕರೋ? (ನಾನು ಬುದ್ಧಿಹೀನನಂತೆ ಮಾತನಾಡು ತ್ತೇನೆ) ಅವರಿಗಿಂತ ನಾನು ಹೆಚ್ಚಾಗಿ ಸೇವೆ ಮಾಡುವವ ನಾಗಿದ್ದೇನೆ; ಹೆಚ್ಚಾಗಿ ಪ್ರಯಾಸಪಟ್ಟೆನು. ಮಿತಿವಿಾರಿ ಪೆಟ್ಟುಗಳನ್ನು ತಿಂದೆನು; ಹೆಚ್ಚಾಗಿ ಸೆರೆಮನೆಗಳಲ್ಲಿ ಬಿದ್ದೆನು; ಅನೇಕ ಸಾರಿ ಮರಣಗಳಲ್ಲಿ ಸಿಕ್ಕಿಕೊಂಡೆನು. ಐದು ಸಾರಿ ಯೆಹೂದ್ಯರಿಂದ ನನಗೆ ಒಂದು ಕಡಿಮೆ ನಾಲ್ವತ್ತು ಏಟುಗಳು ಬಿದ್ದವು; ನಾನು ಮೂರು ಸಾರಿ ಚಡಿಗಳಿಂದ ಹೊಡಿಸಿಕೊಂಡೆನು. ಒಂದು ಸಾರಿ ನನ್ನ ಮೇಲೆ (ಕೊಲ್ಲುವದಕ್ಕೆ) ಕಲ್ಲೆಸೆದರು; ಮೂರು ಸಾರಿ ನಾನಿದ್ದ ಹಡಗು ಒಡೆದುಹೋಯಿತು; ಒಂದು ರಾತ್ರಿ ಒಂದು ಹಗಲು ಸಮುದ್ರದಲ್ಲಿ ಇದ್ದೆನು. ಎಷ್ಟೋ ಪ್ರಯಾಣಗಳನ್ನು ಮಾಡಿದೆನು; ನೀರಿನ ಅಪಾಯಗಳು ಕಳ್ಳರ ಅಪಾಯಗಳೂ ಸ್ವಂತ ಜನರಿಂದ ಅಪಾಯಗಳೂ ಅನ್ಯಜನರಿಂದ ಅಪಾಯಗಳೂ ಪಟ್ಟಣದಲ್ಲಿ ಅಪಾಯಗಳೂ ಕಾಡಿನಲ್ಲಿ ಅಪಾಯ ಗಳೂ ಸಮುದ್ರದಲ್ಲಿ ಅಪಾಯಗಳೂ ಸುಳ್ಳು ಸಹೋ ದರರೊಳಗೆ ಇರುವಾಗ ಅಪಾಯಗಳೂ ನನಗೆ ಸಂಭವಿಸಿದವು. ಪ್ರಯಾಸ ಪರಿಶ್ರಮಗಳಿಂದ ಆನೇಕ ಸಾರಿ ನಿದ್ದೆಗೆಟ್ಟು ಹಸಿವೆ ಬಾಯಾರಿಕೆಗಳನ್ನ ನುಭವಿಸಿ ಅನೇಕ ಸಾರಿ ಉಪವಾಸವಾಗಿಯೂ ಚಳಿಯಲ್ಲಿಯೂ ವಸ್ತ್ರವಿಲ್ಲದೆಯೂ ಇದ್ದು ಆತನನ್ನು ಸೇವಿಸಿದ್ದೇನೆ. ಇನ್ನೂ ಬೇರೆ ಹೊರಗಿನವುಗಳಲ್ಲದೆ ಎಲ್ಲಾ ಸಭೆಗಳ ವಿಷಯವಾದ ಚಿಂತೆಯನ್ನು ಪ್ರತಿ ದಿನವೂ ನಾನು ಹೊರುತ್ತಿದ್ದೇನೆ. ಯಾರಾದರೂ ಬಲವಿಲ್ಲದವನಾದರೆ ನಾನು ಬಲವಿಲ್ಲದವನಾಗದೆ ಇರುವೆನೋ? ಯಾರಾದರೂ ಮುಗ್ಗರಿಸಿದರೆ ನಾನು ತಾಪಪಡದೆ ಇರುವೆನೋ? ನಾನು ಹೆಚ್ಚಳಪಡಲೇಬೇಕಾದರೆ ನನ್ನ ಬಲ ಹೀನತೆಗಳಲ್ಲಿ ಹೆಚ್ಚಳಪಡುವೆನು.