Job · chapter 16 · verse 17
Job 16:17 in Kannada
ಆದರೂ ನನ್ನ ಕೈಗಳಲ್ಲಿ ಬಲಾತ್ಕಾರವಿಲ್ಲ; ನನ್ನ ಪ್ರಾರ್ಥನೆಯು ನಿರ್ಮಲವಾಗಿದೆ.
Aadaroo nanna kaigalalli balaatkaaravilla; nanna praarthaneyu nirmalavaagide.
Job 16:17 in English
- King James Version (KJV)
- Not for [any] injustice in mine hands: also my prayer [is] pure.
- World English Bible (WEB)
- although there is no violence in my hands, and my prayer is pure.
- American Standard Version (ASV)
- Although there is no violence in my hands, And my prayer is pure.
- Bible in Basic English (BBE)
- Though my hands have done no violent acts, and my prayer is clean.
- Darby Translation (DBY)
- Although there is no violence in my hands, and my prayer is pure.
- Webster's Bible (WBS)
- Not for [any] injustice in my hands: also my prayer [is] pure.
- Young's Literal Translation (YLT)
- Not for violence in my hands, And my prayer [is] pure.
Read in context
- 15ನನ್ನ ಮೈಮೇಲೆ ಗೋಣೀ ತಟ್ಟು ಹೊಲಿದು ಧರಿಸಿದೆನು; ಧೂಳಿನಲ್ಲಿ ನನ್ನ ಕೊಂಬನ್ನು ಅಪವಿತ್ರಮಾಡಿದೆನು.
- 16ನನ್ನ ಮುಖವು ಅಳುವದರಿಂದ ಉಬ್ಬಿ ಕೆಂಪಾಯಿತು; ನನ್ನ ರೆಪ್ಪೆಗಳ ಮೇಲೆ ಮರಣದ ನೆರಳು ಅದೇ;
- 17ಆದರೂ ನನ್ನ ಕೈಗಳಲ್ಲಿ ಬಲಾತ್ಕಾರವಿಲ್ಲ; ನನ್ನ ಪ್ರಾರ್ಥನೆಯು ನಿರ್ಮಲವಾಗಿದೆ.
- 18ಭೂಮಿಯೇ, ನನ್ನ ರಕ್ತವನ್ನು ಮುಚ್ಚಬೇಡ; ನನ್ನ ಕೂಗಿಗೆ ಸ್ಥಳ ಇಲ್ಲದೆ ಇರಲಿ.
- 19ಈಗ ಇಗೋ, ಆಕಾಶದಲ್ಲಿ ನನ್ನ ಸಾಕ್ಷಿ ಉಂಟು; ನನ್ನ ಸಾಕ್ಷಿಯು ಉನ್ನತದಲ್ಲಿ ಅದೆ.
Cross references
- Proverbs 15:8 ಜ್ಞಾನೋಕ್ತಿಗಳು 15:8ದುಷ್ಟರ ಯಜ್ಞವು ಕರ್ತನಿಗೆ ಅಸಹ್ಯ; ಯಥಾರ್ಥವಂತರ ಪ್ರಾರ್ಥನೆಯು ಆತನ ಆನಂದವು.
- Psalm 66:18–19 ಕೀರ್ತನೆಗಳು 66:18–19ನನ್ನ ಹೃದಯದಲ್ಲಿ ಅಪರಾಧವನ್ನು ನಾನು ಆಶಿಸಿದ್ದರೆ ಕರ್ತನು ನನ್ನ ಪ್ರಾರ್ಥನೆಯನ್ನು ಕೇಳುವದಿಲ್ಲ. ಆದರೆ ನಿಜವಾಗಿ ನನ್ನ ಪ್ರಾರ್ಥನೆಯನ್ನು ದೇವರು ಕೇಳಿದ್ದಾನಲ್ಲಾ! ಆತನು ನನ್ನ ಪ್ರಾರ್ಥನೆಯ ಸ್ವರವನ್ನು ಆಲೈಸಿದ್ದಾನಲ್ಲಾ!ನನ್ನ ಪ್ರಾರ್ಥನೆಯನ್ನೂ ನನ್ನ ಬಳಿಯಿಂದ ತನ್ನ ಕರುಣೆಯನ್ನೂ ತೊಲಗಿಸದೆ ಇರುವ ದೇವರಿಗೆ ಸ್ತೋತ್ರವಾಗಲಿ.
- Job 8:5–6 ಯೋಬನು 8:5–6ನೀನೇ ದೇವರನ್ನು ಜಾಗ್ರ ತೆಯಾಗಿ ಹುಡುಕಿ ಸರ್ವಶಕ್ತನಿಗೆ ಬಿನ್ನಹ ಮಾಡಿದರೆ ನೀನು ಶುದ್ಧನೂ ಯಥಾರ್ಥನೂ ಆಗಿದ್ದರೆ ನಿಶ್ಚಯ ವಾಗಿ ಈಗಲೇ ಆತನು ನಿನಗೋಸ್ಕರ ಎಚ್ಚತ್ತು ನಿನ್ನ ನೀತಿಯ ನಿವಾಸವನ್ನು ಅಭಿವೃದ್ಧಿಗೊಳಿಸುವನು.
- Job 27:6–7 ಯೋಬನು 27:6–7ನನ್ನ ನೀತಿಯನ್ನು ದೃಢವಾಗಿ ಹಿಡು ಕೊಂಡಿದ್ದೇನೆ. ಅದನ್ನು ನಾನು ಹೋಗಗೊಡಿಸು ವದಿಲ್ಲ; ನಾನು ಇರುವ ವರೆಗೂ ನನ್ನ ಹೃದಯವು ನನ್ನನ್ನು ನಿಂದಿಸುವದಿಲ್ಲ. ನನ್ನ ಶತ್ರು ದುಷ್ಟನ ಹಾಗಿರಲಿ; ನನಗೆ ವಿರೋಧ ವಾಗಿ ಏಳುವವನು ಅನ್ಯಾಯವಂತನ ಹಾಗಿರಲಿ.
- Job 11:14 ಯೋಬನು 11:14ನಿನ್ನ ಕೈಯಲ್ಲಿರುವ ಅಪರಾಧವನ್ನು ದೂರಮಾಡಿ ದುಷ್ಟತನವನ್ನು ನಿನ್ನ ಗುಡಾರಗಳಲ್ಲಿ ವಾಸಮಾಡಗೊಡಿಸದಿದ್ದರೆ
- Psalm 7:3–5 ಕೀರ್ತನೆಗಳು 7:3–5ನನ್ನ ದೇವರಾದ ಓ ಕರ್ತನೇ, ನಾನು ಇದನ್ನು ಮಾಡಿದರೆ, ಅಂದರೆ ನನ್ನ ಕೈಗಳಲ್ಲಿ ಅಪರಾ ಧವಿದ್ದರೆ, ಹೌದು, ನನ್ನೊಂದಿಗೆ ಸಮಾಧಾನದಿಂದ ಇದ್ದವನಿಗೆ ನಾನು ಕೇಡು ಮಾಡಿದ್ದರೆ, ಯಾವ ಕಾರಣವಿಲ್ಲದೆ ನನಗೆ ವೈರಿಯಾಗಿರುವವನನ್ನು ನಾನು ಶತ್ರುವಿಗೆ ತಪ್ಪಿಸಿಬಿಟ್ಟೆನಲ್ಲಾ, ವೈರಿಯು ನನ್ನ ಪ್ರಾಣ ವನ್ನು ಹಿಡಿದು ಹಿಂಸಿಸಿ ನನ್ನ ಜೀವವನ್ನು ಭೂಮಿಗೆ ತುಳಿದು ನನ್ನ ಗೌರವವನ್ನು ಧೂಳಿನೊಳಗೆ ಹಾಕಿ ಬಿಡಲಿ--ಸೆಲಾ.
- Job 22:5–9 ಯೋಬನು 22:5–9ನಿನ್ನ ಕೆಟ್ಟ ತನವು ಬಹಳವಲ್ಲವೋ? ನಿನ್ನ ಅಕ್ರಮಗಳಿಗೆ ಅಂತ್ಯ ವಿಲ್ಲವಷ್ಟೇ. ಸುಮ್ಮನೆ ನಿನ್ನ ಸಹೋದರನಿಂದ ಈಡು ತೆಗೆದು ಕೊಂಡಿ; ಬೆತ್ತಲೆಯಾಗಿರುವವರ ವಸ್ತ್ರಗಳನ್ನು ನೀನು ಸುಲುಕೊಂಡಿ. ದಣಿದವನಿಗೆ ನೀರನ್ನು ಕುಡಿಯ ಕೊಡಲಿಲ್ಲ; ಹಸಿದವನಿಂದ ರೊಟ್ಟಿಯನ್ನು ಹಿಂದೆ ಗೆದಿದ್ದಿ. ಬಲಿಷ್ಠನಿಗಾದರೋ ದೇಶವು ಅವನದೇ; ಗೌರವದ ಮನುಷ್ಯನು ಅದರಲ್ಲಿ ವಾಸಿಸಿದನು. ವಿಧವೆಯರನ್ನು ಬರಿದಾಗಿ ಕಳುಹಿಸಿದಿ; ದಿಕ್ಕಿಲ್ಲದ ವರ ತೋಳುಗಳನ್ನು ಜಜ್ಜಿದಿ.
- Jonah 3:8 ಯೋನ 3:8ಹೌದು, ಅವರು ತಮ್ಮ ತಮ್ಮ ದುರ್ಮಾರ್ಗ ಗಳನ್ನೂ ತಾವು ನಡಿಸುತ್ತಿರುವ ಹಿಂಸೆಯನ್ನು ಬಿಟ್ಟು ತಿರುಗಲಿ.
- Isaiah 59:6 ಯೆಶಾಯ 59:6ಅವರ ನೂಲು ವಸ್ತ್ರಕ್ಕಾಗದು; ತಮ್ಮ ಕೆಲಸಗಳಿಂದ ತಮ್ಮನ್ನು ಹೊದ್ದು ಕೊಳ್ಳರು; ಅವರ ಕೆಲಸಗಳು ಅಕ್ರಮದ ಕೆಲಸಗಳೇ; ಅವರ ಕೈಗಳಲ್ಲಿ ಹಿಂಸೆಯ ಕ್ರಿಯೆಗಳು ಅವೆ.
- Psalm 44:17–21 ಕೀರ್ತನೆಗಳು 44:17–21ಇದೆಲ್ಲಾ ನಮ್ಮ ಮೇಲೆ ಬಂತು; ಆದರೆ ನಿನ್ನನ್ನು ಮರೆತುಬಿಡಲಿಲ್ಲ; ನಿನ್ನ ಒಡಂಬಡಿಕೆಯಲ್ಲಿ ಸುಳ್ಳಾ ಡಲಿಲ್ಲ. ನಮ್ಮ ಹೃದಯವು ಹಿಂದಿರುಗಲಿಲ್ಲ; ನಮ್ಮ ಹೆಜ್ಜೆಗಳು ನಿನ್ನ ಹಾದಿಯಿಂದ ತೊಲಗಲಿಲ್ಲ. ಆದಾ ಗ್ಯೂ ಮಹಾಘಟಸರ್ಪಗಳ ಸ್ಥಳದಲ್ಲಿ ನಮ್ಮನ್ನು ಜಜ್ಜಿ ಮರಣದ ನೆರಳಿನಿಂದ ನಮ್ಮನ್ನು ಮುಚ್ಚಿಬಿಟ್ಟಿದ್ದೀ. ನಾವು ನಮ್ಮ ದೇವರ ಹೆಸರನ್ನು ಮರೆತು ಅನ್ಯ ದೇವರಿಗೆ ನಮ್ಮ ಕೈಗಳನ್ನು ಚಾಚಿದರೆ ದೇವರು ಅದನ್ನು ವಿಚಾರಿಸನೋ? ಆತನು ಹೃದಯದ ಮರ್ಮ ಗಳನ್ನು ತಿಳಿದಿದ್ದಾನೆ.
- Job 21:27–28 ಯೋಬನು 21:27–28ಇಗೋ, ನಿಮ್ಮ ಆಲೋಚನೆಗಳನ್ನೂ ನೀವು ನನ್ನ ಮೇಲೆ ಬಲಾತ್ಕಾರಿಗಳಾಗಿ ಮಾಡುವ ಯೋಚನೆ ಗಳನ್ನೂ ತಿಳಿದಿದ್ದೇನೆ. ನೀವು ಅನ್ನುತ್ತೀರಿ--ಪ್ರಧಾನಿಯ ಮನೆ ಎಲ್ಲಿ? ದುಷ್ಟರ ನಿವಾಸಗಳ ಗುಡಾ ರವು ಎಲ್ಲಿ?
- Job 15:34 ಯೋಬನು 15:34ಕಪಟಿಗಳ ಸಭೆಯು ಹಾಳಾಗುವದು; ಲಂಚದ ಗುಡಾರಗಳನ್ನು ಬೆಂಕಿಯು ಸುಡುವದು.ಅವರು ಕೇಡಿನಿಂದ ಬಸುರಾಗಿ ವ್ಯರ್ಥತ್ವ ವನ್ನು ಹೆರುವರು; ಅವರ ಗರ್ಭವು ಮೋಸವನ್ನು ಸಿದ್ಧಮಾಡುವದು.